ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸಾಲಿಗ್ರಾಮ ಪಟ್ಟಣ ಪಂಚಾಯತ್ ಘನತ್ಯಾಜ್ಯ ನಿರ್ವಹಣೆಗೆ ಉಳ್ತೂರು ಗ್ರಾಮದಲ್ಲಿ ಖರೀದಿಸಿದ ಸ್ಥಳಕ್ಕೆ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಬುಧವಾರ ಭೇಟಿ ನೀಡಿದರು. ಈ ಸಂರ್ದದಲ್ಲಿ ಸ್ಥಳದಲ್ಲಿ ಸ್ಥಳೀಯ ಗ್ರಾಮಸ್ಥರು ಸ್ಥಳದಲ್ಲಿ ಯಾವುದೇ ಘಟಕ ನಿರ್ಮಾಣ ಮಾಡದಂತೆ ಆಕ್ಷೇಪಣೆ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿ ಅವರು ಸಾರ್ವಜನಿಕರಲ್ಲಿ ಸರಕಾರದ ಯೋಜನೆಯ ಉಪಯೋಗದ ಬಗ್ಗೆ ಈ ಯೋಜನೆಯಿಂದ ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗುವುದಿಲ್ಲವೆಂದು ಇದನ್ನು ಸದುಪಯೋಗಿಸುವಂತೆ ಮನವರಿಕೆ ಮಾಡಿದರು. ಸಾಲಿಗ್ರಾಮ ಪಟ್ಟಣಪಂಚಾಯತ್ ಮುಖ್ಯಾಧಿಕಾರಿ ಅಜಯ್ ಭಂಡಾರ್ಕಾರ್ ಸ್ಥಳೀಯರಲ್ಲಿ ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯತ್ ಕೂಡ ಎನ್ಜಿಟಿ ನಿರ್ದೇಶನವನ್ನು ಪಾಲಿಸಬೇಕಾಗುತ್ತದೆ. ಸುತ್ತಮುತ್ತಲಿನ ಗ್ರಾಮ ಪಂಚಾಯತ್ನ ಬಳಸಿದ ನೀರನ್ನು ಸಹಾ ಈ ಘಟಕದಲ್ಲಿ ವಿಲೇಮಾಡಿದ್ದಲ್ಲಿ ಗ್ರಾಮ ಪಂಚಾಯತ್ಗೂ ಸಹಾ Infrastructure ನ ಮೊತ್ತವನ್ನು ಉಳಿಸಬಹುದಾಗಿರುವುದಾಗಿ ತಿಳಿಸಿದರು. ಈ ಬಗ್ಗೆ ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿರುವುದರಿಂದ ಜಿಲ್ಲಾಧಿಕಾರಿಯವರು ಉಳ್ತೂರು ಗ್ರಾಮದ ಸ್ಥಳೀಯರನ್ನು ಈಗಾಗಲೇ ಉಡುಪಿ ಜಿಲ್ಲೆಯ ಬೈಂದೂರು ಪಟ್ಟಣ ಪಂಚಾಯತ್ ಮತ್ತು ಕಾಪು ಪುರಸಭೆಯಲ್ಲಿನ ಘಟಕವನ್ನು…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಐಎಂಜೆ ಇನ್ಸ್ಟಿಟ್ಯೂಶನ್ ಅಧ್ಯಕ್ಷರಾದ ಸಿದ್ದಾರ್ಥ್ ಜೆ. ಶೆಟ್ಟಿ ಅವರ ದೂರ ದೃಷ್ಟಿ ಹಾಗೂ ಮಾರ್ಗದರ್ಶನದ ಅಡಿಯಲ್ಲಿ, ವಿದ್ಯಾರ್ಥಿಗಳಲ್ಲಿ ಸಂವಹನ ಕೌಶಲ್ಯ, ಸೃಜನಶೀಲತೆ ಹಾಗೂ ಮಾಧ್ಯಮ ಸಂಬಂಧಿತ ಜ್ಞಾನವನ್ನು ಅಭಿವೃದ್ಧಿ ಪಡಿಸುವ ಹಾಗೂ ಹೊಸ ಕೌಶಲ್ಯಗಳ ಬೆಳೆಸುವ ಉದ್ದೇಶದಿಂದ ” ಪ್ರೇಮ್ ಎಕ್ಸ್ (Frame X)” ಹೆಸರಿನ ಮೀಡಿಯಾ ಕ್ಲಬ್ ಅನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮದಲ್ಲಿ ಕುಂದಾಪುರ ತಾಲ್ಲೂಕಿನ ಪತ್ರಕರ್ತರ ಸಂಘದ ಅಧ್ಯಕ್ಷರಾದ ನಾಗರಾಜ್ ರಾಯಪ್ಪನಮಠ ಅವರು ಆಗಮಿಸಿ, ಬ್ಯಾನರ್ ಅನಾವರಣ ಹಾಗೂ ದೀಪ ಪ್ರಜ್ವಲನಗೊಳಿಸುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಮಾಧ್ಯಮದವರ ಪ್ರಯತ್ನ, ಕಷ್ಟ ಹಾಗೂ ವೃತ್ತಿ ಜೀವನದಲ್ಲಿ ಎದುರಿಸುವ ಸವಾಲುಗಳನ್ನು ತಮ್ಮ ಅನುಭವದ ಮೂಲಕ ಹಂಚಿಕೊಂಡರು. ಈ ಕಾಲೇಜು ಆರಂಭವಾದ ದಿನದಿಂದ ತಮಗೆ ಇರುವ ಒಡನಾಟವನ್ನು ನೆನಪಿಸಿಕೊಂಡು, ವಿಧ್ಯಾರ್ಥಿಗಳ ಪ್ರತಿಭೆ ಪ್ರದರ್ಶನಕ್ಕೆ ಈ ಸಂಘ ಒಂದು ಉತ್ತಮ ವೇದಿಕೆಯಾಗಲಿ ಎಂದು ಹೇಳುವುದರ ಜೊತೆಗೆ, ಮೀಡಿಯಾ ಕ್ಲಬ್ ಗೆ ಶುಭಹಾರೈಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಮಕೃಷ್ಣ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮೈಸೂರಿನ ಕೇಂದ್ರೀಯ ಪೆಟ್ರೋಕೆಮಿಕಲ್ಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆ (ಸಿಪೆಟ್) ಕೌಶಲ್ಯ ಮತ್ತು ತಾಂತ್ರಿಕ ತರಬೇತಿ ಕೇಂದ್ರದಲ್ಲಿ 2026-27ನೇ ಸಾಲಿನ ಉದ್ಯೋಗಾಧಾರಿತ ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಟೆಕ್ನಾಲಜಿ (ಡಿ.ಪಿ.ಟಿ) ಹಾಗೂ ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಮೌಲ್ಡ್ ಟೆಕ್ನಾಲಜಿ (ಡಿ.ಪಿ.ಎಂ.ಟಿ) – 3 ವರ್ಷಗಳ ಅವಧಿಯ ಕೋರ್ಸ್ಗಳ ಪ್ರವೇಶಾತಿಗೆ ಆನ್ಲೈನ್ ಹಾಗೂ ಆಫ್ಲೈನ್ ಮೂಲಕ ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದ್ದು, ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಪರೀಕ್ಷೆಯಲ್ಲಿ ತೇರ್ಗಡೆಯಾದವರು ಹಾಗೂ ಹಾಜರಾಗುವವರು ಆನ್ಲೈನ್ https://cipet26.onlineregistrationform.org/CIPET/ ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಇದರೊಂದಿಗೆ ಸಿಪೆಟ್ ಸಂಸ್ಥೆಯು ಉಚಿತ 3 ರಿಂದ 6 ತಿಂಗಳುಗಳ ಕೌಶಲ್ಯ ತರಬೇತಿ ಕಾರ್ಯಕ್ರಮವನ್ನು ಕರ್ನಾಟಕ ಕೌಶಲ್ಯ ಯೋಜನೆ ಮತ್ತು ಪ್ರಧಾನ ಮಂತ್ರಿ ಕೌಶಲ್ ವಿಕಾಸ್ ಯೋಜನೆ ಅಡಿ ಆಯೋಜಿಸಲಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತ ಆಹಾರ ಹಾಗೂ ವಸತಿ ಸೌಲಭ್ಯ ಒದಗಿಸಲಾಗುತ್ತದೆ. ಹೆಚ್ಚಿನ ಮಾಹಿತಿಗೆ ಮೊ.ನಂ: 9480253024, 9791431827 ಅಥವಾ ವೆಬ್ಸೈಟ್ www.cipet.gov.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಮುಖ್ಯಸ್ಥರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬ್ರಹ್ಮಾವರದಲ್ಲಿ ಕೃಷಿ ಕಾಲೇಜು ಪ್ರಾರಂಭಿಸುವ ಬಗ್ಗೆ ಕುಂದಾಪುರ ಕ್ಷೇತ್ರದ ಶಾಸಕ ಎ. ಕಿರಣ್ ಕುಮಾರ್ ಕೊಡ್ಲಿ ಅಧಿವೇಶನದಲ್ಲಿ ಸರ್ಕಾರದ ಗಮನ ಸಳೆದಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಒಟ್ಟು 1,53, 114 ಹೆಕ್ಟರ್ ಕೃಷಿ ಭೂಮಿ ಇದ್ದು ಅದರಲ್ಲಿ ರೈತರು ಭತ್ತ ಮತ್ತು ಕಮರ್ಷಿಯಲ್ ಕ್ರಾಪ್ ಆದ ಅಡಿಕೆ, ತೆಂಗು, ಇತರೆ ಕೃಷಿಯನ್ನ ನಿರ೦ತರ ಮಾಡುತ್ತಾ ಇದ್ದಾರೆ. 2010ರಲ್ಲಿ ಬಿಎಸ್ ಯಡಿಯೂರಪ್ಪನವರು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಆವಾಗ ಕೃಷಿ ಕಾಲೇಜು ಮಂಜೂರಾತಿ ನೀಡಲಾಗಿದೆ. ಆದರೆ 2014ರ ತನಕ ಯಾವುದೇ ಕೆಲಸ ಆಗಿರುವುದಿಲ್ಲ. 2014ರಲ್ಲಿ ಕೃಷಿ ಡಿಪೆ ‘ಮಾ ಕಾಲೇಜು ಪ್ರಾರ೦ಭ ಮಾಡಲಾಗಿರುತ್ತದೆ. ಅದರ ನಂತರ ನಿರಂತರವಾಗಿ ಉಡುಪಿ ಜಿಲ್ಲೆಯಲ್ಲಿ ಕೃಷಿ ಕೃಷಿ ಪದವಿ ಕಾಲೇಜುಗಾಗಿ ಸರಕಾರಕ್ಕೆ ಬೇಡಿಕೆ ಇಟ್ಟಿದ್ದು ಬ್ರಹ್ಮಾವರ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದಲ್ಲಿ 300 ಎಕರೆ ಜಾಗವಿದ್ದು, ಹಾಸ್ಟೆಲ್ ಹಾಗೂ ಕಾಲೇಜ್ ಗೆ ಅಗತ್ಯವಿರುವ ಕಟ್ಟಡ ಮತ್ತು ಲ್ಯಾಬೋರೇಟರಿ ಸೇರಿದಂತೆ ಇತರ ಸಂಪೂರ್ಣ ಮೂಲಭೂತ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಜನತಾ ಸಂಸ್ಥೆಯ ವತಿಯಿಂದ 55ನೇ ರಾಷ್ಟ್ರೀಯ ಸುರಕ್ಷತಾ ವಾರ ಹಾಗೂ ಸಂಸ್ಥೆಯ ನಾಲ್ಕನೇ ವರ್ಷದ ಸುರಕ್ಷತಾ ವಾರ ಜಾಗೃತಿ 2026 ಸಮಾರೋಪ ಸಮಾರಂಭವು ಸಂಸ್ಥೆಯ ಆವರಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಜತನಾ ಸಂಸ್ಥೆಯ ಮುಖ್ಯಸ್ಥರಾದ ಆನಂದ ಸಿ. ಕುಂದರ್ ಉದ್ಘಾಟಿಸಿದರು. ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಮನೋವೈದ್ಯ ಡಾ. ಪ್ರಕಾಶ್ ತೋಳಾರ್ ಅವರು ಸುರಕ್ಷತೆ ಎಂಬುದು ಕೇವಲ ನಿಯಮವಲ್ಲ, ಪ್ರತಿಯೊಬ್ಬರ ಜೀವನದ ಅವಿಭಾಜ್ಯ ಅಂಗವಾಗಿರಬೇಕು ಎಂದು ಹೇಳಿದರು. ಕೆಲಸ ಮಾಡುವ ಸ್ಥಳದಲ್ಲಿ ಎಚ್ಚರಿಕೆ ಮತ್ತು ಜಾಗೃತಿಯಿಂದ ನಡೆದುಕೊಂಡರೆ ಅನೇಕ ಅಪಘಾತಗಳನ್ನು ತಪ್ಪಿಸಬಹುದು ಎಂದು ಅವರು ಸಲಹೆ ನೀಡಿದರು. ಸಂಸ್ಥೆಯ ಎಜಿಎಂ ಶ್ರೀನಿವಾಸ ಕುಂದರ್ ಕಾರ್ಯಕ್ರಮದ ಪ್ರಸ್ತಾವನೆಗೈದು ಸುರಕ್ಷತಾ ವಾರದ ಮಹತ್ವವನ್ನು ವಿವರಿಸಿದರು. ನಂತರ ಸಂಸ್ಥೆಯ ಸಿಬ್ಬಂದಿ ಮಹೇಶ್ ನಾಯರಿ ಪ್ರಾರ್ಥನೆ ನಡೆಸಿದರು. ಸುರಕ್ಷತಾ ವಾರದ ಅಂಗವಾಗಿ ನಡೆದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಅಪಘಾತದಿಂದ ಪಾರಾದ ಸಿಬ್ಬಂದಿಗಳ ಅನುಭವಗಳು, ಅಗ್ನಿ ಅವಘಡದ ಸಂದರ್ಭದಲ್ಲಿನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ತೋಟಗಾರಿಕೆ ಇಲಾಖೆ ವತಿಯಿಂದ ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿ ಕಾರ್ಯಕ್ರಮವನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗುತ್ತಿದ್ದು, ಜಿಲ್ಲೆಗೆ 07 ಅಭ್ಯರ್ಥಿಗಳ ಗುರಿ ನಿಗಧಿಪಡಿಸಿದ್ದು, ಕನಿಷ್ಟ ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರುವ, ಕೃಷಿ ಜಮೀನು ಹೊಂದಿರುವ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಏಪ್ರಿಲ್ 23ರ ಪೂರ್ವಾಹ್ನ ತೋಟಗಾರಿಕೆ ಜಂಟಿ ನಿರ್ದೇಶಕರು (ಜಿಪಂ), ಉಡುಪಿ ರವರ ಕಛೇರಿಯಲ್ಲಿ ಸಂದರ್ಶನ ನಡೆಯಲಿದ್ದು, ಏ. 27 ರಂದು ಆಯ್ಕೆ ಪಟ್ಟಿ ಪ್ರಕಟಿಸಲಾಗುವುದು. ಅರ್ಜಿ ಸಲ್ಲಿಸಲು ಏಪ್ರಿಲ್ 15 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್ಸೈಟ್ https://horticulturedir.karnataka.gov.in ನಲ್ಲಿ ಅಥವಾ ತೋಟಗಾರಿಕೆ ಜಂಟಿ ನಿರ್ದೇಶಕರು (ಜಿಪಂ), ಉಡುಪಿ, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ರಾವ), ಉಡುಪಿ ಅಥವಾ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, (ಜಿಪಂ), ಉಡುಪಿ, ಕುಂದಾಪುರ ಹಾಗೂ ಕಾರ್ಕಳ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಮಹಿಳಾ ಸಬಲೀಕರಣ ಘಟಕ ಹಾಗೂ ಕನ್ನಡ ವಿಭಾಗದ ಜಂಟಿ ಆಶ್ರಯದಲ್ಲಿ ಜೇಸಿಐ ಕುಂದಾಪುರ ಸಿಟಿ ಇವರ ಸಹಯೋಗದೊಂದಿಗೆ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಸಾಧಕ ಮಹಿಳೆಯರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಹೆಮ್ಮಾಡಿಯ ಜಯಶ್ರೀ ವಿನಯ್ ಪೂಜಾರಿ, ಕಾಲೇಜಿನ ಬಹುಮುಖ ಪ್ರತಿಭೆಗಳಾದ ಶ್ರೇಯಾ ಖಾರ್ವಿ, ಬ್ರಾಹ್ಮೀ, ಶೈಕ್ಷಣಿಕ ಪ್ರತಿಭೆಗಳಾದ ಐಶ್ವರ್ಯ ಶೆಟ್ಟಿ, ಗೌತಮಿ, ಕ್ರೀಡಾ ಪ್ರತಿಭೆ ಲಕ್ಷ್ಮಿ ಶೆಟ್ಟಿ, ವಕ್ವಾಡಿ ಗುರುಕುಲ ಪಬ್ಲಿಕ್ ಸ್ಕೂಲ್ನ 9ನೇ ತರಗತಿಯ ವಿದ್ಯಾರ್ಥಿನಿ ಝರಾ ಎಂ. ಇಮ್ರಾನ್ ಅವರನ್ನು ಸನ್ಮಾನಿಸಲಾಯಿತು. ಮಂಗಳೂರಿನ ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ & ಮ್ಯಾನೇಜ್ಮೆಂಟ್ನ ಸಹಾಯಕ ಪ್ರಾಧ್ಯಾಪಕರು & ಅಡ್ಮಿಷನ್ ಆಫೀಸರ್ರಾದ ಪೂಜಾ ಯಶವಂತ್ ರೈ ಕಾರ್ಯಕ್ರಮವನ್ನು ಉದ್ಘಾಟಿಸಿ, ಸಾಧಕಿಯರನ್ನು ಸನ್ಮಾನಿಸಿ, ಶುಭ ಹಾರೈಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಕುಂದಾಪುರ ಸಿಟಿ ಜೇಸಿಐ ಅಧ್ಯಕ್ಷ ಜೇಸಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ರಾಜ್ಯ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ‘ವಚನ ಕಲ್ಯಾಣ’ ಎಂಬ ಅತ್ರಿ (ಒಂಬತ್ತು ಗಂಟೆ) ನಾಟಕವನ್ನು ಸಿದ್ಧಪಡಿಸಿ, ನಾಡಿನಾದ್ಯಂತ ಪ್ರದರ್ಶನ ಮಾಡಲು ಉದ್ದೇಶಿಸಿದ್ದು, ಈ ಸಂಬಂಧ ನುರಿತ ಹಾಗೂ ಆಸಕ್ತ ಯುವಕ ಯುವತಿಯರು, ಅನುಭವಿ ರಂಗ ಕಲಾವಿದರು ಹಾಗೂ ಗಾಯಕರುಗಳಿಂದ ಇಲಾಖೆಯ ವೆಬ್ಸೈಟ್ kannadasiri.karnataka.gov.in ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. 18 ರಿಂದ 40 ವರ್ಷದೊಳಗಿನ ರಂಗಶಿಕ್ಷಣದಲ್ಲಿ ತರಬೇತಿ ಪಡೆದ ಹಾಗೂ ನಾಟಕಗಳಲ್ಲಿ ಅಭಿನಯಿಸಿದ ಕಲಾವಿದರಿಗೆ ಪ್ರಥಮ ಆದ್ಯತೆಯನ್ನು ನೀಡಲಾಗುವುದು. ಭರ್ತಿ ಮಾಡಿದ ಅರ್ಜಿಗಳನ್ನು ಮಾರ್ಚ್ 20ರ ಒಳಗಾಗಿ ಸದಸ್ಯ ಕಾರ್ಯದರ್ಶಿ, ಸಂತ ಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರ, ಕಲಾಗ್ರಾಮ, ಮಲ್ಲತ್ತಹಳ್ಳಿ ಇಲ್ಲಿಗೆ ಮುದ್ದಾಂ ಅಥವಾ ಅಂಚೆಯ ಮೂಲಕ ಅಥವಾ ಇ-ಮೇಲ್ kanakaresearchcentre@gmail.com ಮೂಲಕ ಸಲ್ಲಿಸಬಹುದಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ಮೂರು ತಿಂಗಳ ಕಾಲದ ಅವಧಿಯಲ್ಲಿ ಪೂರ್ಣಕಾಲಿಕವಾಗಿ ತರಬೇತಿ ಪ್ರದರ್ಶನಗಳಲ್ಲಿ ಪಾಲ್ಗೊಳ್ಳುವುದು ಕಡ್ಡಾಯವಾಗಿರುತ್ತದೆ. ಮಾಸಿಕ ಗೌರವಧನ ಮತ್ತು ಊಟ-ವಸತಿ ವ್ಯವಸ್ಥೆಯನ್ನು ನೀಡಲಾಗುವುದು. ಹೆಚ್ಚಿನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೊರಗ ಸಮುದಾಯದ ವ್ಯಕ್ತಿಯೊಬ್ಬರನ್ನು 30 ವರ್ಷಗಳಿಂದ ಮನೆಯಲ್ಲಿ ಜೀತಕ್ಕೆ ಇಟ್ಟು ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿ ಮಹಿಳೆಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಕುಂದಾಪುರದ ಹೆಮ್ಮಾಡಿಯ ಕಬ್ಬೈಲು ನಿವಾಸಿ ಸುಬ್ಬಣ್ಣ ಶೆಟ್ಟಿ ಎಂಬವರು ಸುಮಾರು 30 ವರ್ಷಗಳ ಹಿಂದೆ ಕನ್ಯಾನ ಗ್ರಾಮದ ಕೊರಗ ಸಮುದಾಯದ ನಾಗ (65) ಎಂಬವರನ್ನು ತನ್ನ ಮನೆಗೆ ಕರೆದುಕೊಂಡು ಬಂದು ಕೆಲಸಕ್ಕೆ ಇಟ್ಟುಕೊಂಡಿದ್ದರು. ಸುಬ್ಬಣ್ಣ ಶೆಟ್ಟಿ ಮೃತಪಟ್ಟ ನಂತರ ಅವರ ಮಗಳು ರಜನಿ ಶೆಟ್ಟಿ ಮತ್ತು ಅವರ ಅಳಿಯ ಕರುಣಾಕರ ಶೆಟ್ಟಿ ಎಂಬವರು ನಾಗ ಅವರನ್ನು ಮನೆಯಲ್ಲಿ ದನ ಕಾಯಲು, ತೋಟದ ಕೆಲಸ ಮಾಡಲು ಸೇರಿಸಿ ಕೊಂಡಿದ್ದರು. ಇವರು ನಾಗ ಅವರಿಂದ ದನ, ಎಮ್ಮೆ, ಸೆಗಣಿ ತೆಗೆದು ಗದ್ದೆ ಕೆಲಸ, ಮನೆಯ ಶೌಚಾಲಯ ಸ್ವಚ್ಛತೆ ಮಾಡಿಸುತ್ತಿದ್ದರು. ನಾಗ ಅವರನ್ನು 30 ವರ್ಷಗಳಿಂದ ಬಲವಂತದಿಂದ ಜೀತದಾಳಾಗಿ ಕೆಲಸ ಮಾಡಿಸಿಕೊಂಡಿದ್ದು, ಸರಿಯಾದ ಕೂಲಿ ಕೊಡದೆ ಉಳಿದುಕೊಳ್ಳಲು ಮೂಲಭೂತ ಸೌಕರ್ಯ ಕೊಡದೆ ದನದ ಕೊಟ್ಟಿಗೆಯಲ್ಲಿ ಮಲಗಿಸುತ್ತಿದ್ದರು ಎನ್ನಲಾಗಿದೆ. ದನದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕೊಮೆ ಸಮುದ್ರ ತೀರದಲ್ಲಿರುವ ರೆಸಾರ್ಟಗಳಿಗೆ ಆಗಮಿಸುವ ಪ್ರವಾಸಿಗರಿಂದ ಮಲಿನಗೊಳ್ಳುತ್ತಿರುವ ಹಿನ್ನಲ್ಲೆಯಲ್ಲಿ ತೆಕ್ಕಟ್ಟೆ ಗ್ರಾ.ಪಂ ವ್ಯಾಪ್ತಿಯ ಕೊಮೆ ಭಾಗದ ಗ್ರಾಮಸ್ಥರು ಕೋಟ ಆರಕ್ಷಕ ಠಾಣೆಗೆ ತೆರಳಿ ಆರಕ್ಷಕ ಠಾಣೆಯ ಪಿಎಸ್ಐ ಪ್ರವೀಣ್ ಕುಮಾರ್ ದೂರು ನೀಡಿದರು. ಈ ವೇಳೆ ಗ್ರಾಮಸ್ಥರು ಮಾಧ್ಯಮಕ್ಕೆ ಮಾಹಿತಿ ನೀಡಿ ಸಮುದ್ರ ತೀರದಲ್ಲಿ ಪಾರ್ಟಿಗಳನ್ನು ಮಾಡುವುದರ ಮೂಲಕ ಮದ್ಯದ ಬಾಟಲಿಗಳನ್ನು ಹಾಗೂ ಆಹಾರ ಪದಾರ್ಥಗಳನ್ನು ಸಮುದ್ರ ತೀರದಲ್ಲೆ ಎಸೆದು ಪರಿಸರವನ್ನು ಹಾಳುಗೆಡವುತ್ತಿದ್ದಾರೆ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ ಎಚ್ಚರಿಕೆಯನ್ನು ನೀಡಿದರು. ಈ ಸಂದರ್ಭದಲ್ಲಿ ಪರಿಸರದ ಗ್ರಾಮದ ಗ್ರಾಮಸ್ಥರು ಇದ್ದರು.
