Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಕೇಂದ್ರದ ಲೋಕಸೇವಾ ಆಯೋಗದ ಮೂಲಕ ನಡೆಯುವ ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಹಾಗೂ ನೇವಲ್ ಅಕಾಡೆಮಿ ಪರೀಕ್ಷೆಯಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜಿನ 24 ವಿದ್ಯಾರ್ಥಿಗಳು ಉತ್ತೀರ್ಣರಾಗಿ ರಾಷ್ಟ್ರದ ಗಮನ ಸೆಳೆದಿದ್ದಾರೆ.   ಭಾರತೀಯ ಸೇನೆ, ನೌಕಾಪಡೆ ಹಾಗೂ ವಾಯುಪಡೆಯ ಅಧಿಕಾರಿಗಳಾಗಲು ಎನ್ಡಿಎ ಪ್ರಮುಖ ಘಟ್ಟವಾಗಿದ್ದು, ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳನ್ನು ಸಮರ್ಥವಾಗಿ ಸಿದ್ಧಗೊಳಿಸುವ ಕಾರ್ಯವನ್ನು ಆಳ್ವಾಸ್ ಪದವಿಪೂರ್ವ ಕಾಲೇಜು ಅತ್ಯಂತ ಪರಿಣಾಮಕಾರಿಯಾಗಿ ನಿರ್ವಹಿಸುತ್ತಿದೆ. ವಿದ್ಯಾರ್ಥಿಗಳಾದ ವಿವೇಕ್ ಎ, ಅದ್ವೆತ್ ವಿಕ್ರಾಂತ್ ಶೆಂಡೆ, ಅಮೋಘ್ ನಾಗರಾಜ್ ಬಿಲ್ಲೂರ್, ಮೊಹಮ್ಮದ್ ಯೂಸುಫ್ ನಿಸಾರ್ ಶೇಖ್, ಸಾಯೀಶ್ ಪ್ರಶಾಂತ್ ತಾಳೇಕರ್, ಪ್ರಹ್ಲಾದ್ ದತ್ತ ದೇಸಾಯಿ, ಸಂಹಿತ್ ವಿ ರಾವ್, ಹರ್ಷ ಎಂ, ಕೃತಿಕ್ ಬಿ, ಪ್ರಣವ್ ಎನ್ ಪಂಡಿತ್, ವಿಜಯಕುಮಾರ್ ಸಂಗಯ್ಯ ಚಿಕ್ಕಮಠ, ಪಿಯೂಷ್ ಎಚ್, ಶ್ರೇಯಸ್ ಸಿ ಕಬ್ಬಿನಕಂತಿಮಠ, ಭರತೇಶ್ ನಾಗೇಶ್ ಮೊಗೇರ್, ಚಿನ್ಮಯ್ ಎಸ್., ಸಂಕೇತ್ ಭಟ್, ಸುಮಿತ್ ವಿಕೆ, ಹರ್ಷ ರೆಡ್ಡಿ, ಮೋಹಿತ್ ಕುಮಾರ್ ಜೆ., ಅಕ್ಷಯ್ ಭಾರದ್ವಾಜ್, ಅನುಷ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ನಾಡ ಗ್ರಾಮದ ಕೊಡಗುಂಜಿ ಸೇತುವೆ ಬಳಿ ಇಸ್ಪೀಟು ಜುಗಾರಿ ಆಡುತ್ತಿದ್ದ ಐವರನ್ನು ಗಂಗೊಳ್ಳಿ ಪೊಲೀಸರು ಬಂಧಿಸಿದ್ದಾರೆ.  ಕಳುವಿನ ಬಾಗಿಲುವಿನ ರತ್ನಾಕರ ಕಾಂಚನ್ (55), ಒಕ್ಕೇರಿಯ ಸಂತೋಷ್ ಪೂಜಾರಿ (46), ಪಡುಕೋಣೆಯ ರಾಘವೇಂದ್ರ (28), ರಾಜೇಶ್ ಪೂಜಾರಿ (42), ಬಾಬು ಮೊಗವೀರ (50) ಬಂಧಿತ ಆರೋಪಿಗಳು. ಇವರಿಂದ 13,020ರೂ. ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೊಲ್ಲೂರು: ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಕೇರಳ ರಾಜ್ಯದ ಭಕ್ತರೊಬ್ಬರು ಕಳೆದುಕೊಂಡ 2ಚಿನ್ನದ ಸರ ಹಾಗೂ ಹಣವನ್ನು ಒಳಗೊಂಡ ಪರ್ಸ್‌ನ್ನು ಪೊಲೀಸರು ಕೇವಲ ಎರಡು ಗಂಟೆಗಳಲ್ಲಿ ಪತ್ತೆ ಹಚ್ಚಿ ಅವುಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ್ದಾರೆ. ಮೂಕಾಂಬಿಕಾ ದೇವಸ್ಥಾನದಲ್ಲಿ ಈ ಬೆಲೆಬಾಳುವ ಸೊತ್ತುಗಳು ಕಳವಾಗಿದ್ದು, ಅಲ್ಲಿನ ಸಿಸಿ ಟಿವಿ ಮುಖೇನ ಪೊಲೀಸರು ಅದನ್ನು ಎರಡು ಗಂಟೆಗಳಲ್ಲಿ ಪತ್ತೆ ಹಚ್ಚಿದ್ದು ಅವುಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ್ದಾರೆ. ಬುಧವಾರ ಕೊಲ್ಲೂರು ದೇವಸ್ಥಾನದಲ್ಲಿ ಈ ಘಟನೆ ನಡೆದಿದ್ದು ಪಿಎಸ್ಐ ಭೀಮಾಶಂಕರ್ ನೇತೃತ್ವದಲ್ಲಿ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಯಡ್ತರೆ ಗ್ರಾಮದ ಎಸ್ಬಿಐ ಬ್ಯಾಂಕ್ ಹಿಂಭಾಗದ ಬಾಡಿಗೆ ಮನೆಯೊಂದರಲ್ಲಿ ನಡೆದಿದ್ದ ಬೃಹತ್ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಬೈಂದೂರು ಪೊಲೀಸರು ಯಶಸ್ವಿಯಾಗಿದ್ದಾರೆ.  ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನ ಮೂಲದ ಯುವಕನನ್ನು ಬಂಧಿಸಿರುವ ಪೊಲೀಸರು, ಆತನಿಂದ ಕಳವು ಮಾಡಲಾಗಿದ್ದ 6 ಲಕ್ಷ ರೂಪಾಯಿ ನಗದನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ರಾಜಸ್ಥಾನ ಮೂಲದ ಮಹೇಂದ್ರ ಸೈನ್ (23) ಎಂದು ಗುರುತಿಸಲಾಗಿದೆ. ಕಳೆದ ಏಪ್ರಿಲ್ 23ರಂದು ಮಧ್ಯಾಹ್ನ 3:00 ರಿಂದ ರಾತ್ರಿ 10:00 ಗಂಟೆಯ ಅವಧಿಯಲ್ಲಿ, ಯಡ್ತರೆ ಗ್ರಾಮದ ಎಸ್ಬಿಐ ಬ್ಯಾಂಕ್ ಹಿಂಭಾಗ ವಾಸವಿದ್ದ ರಾಜಸ್ಥಾನ ಮೂಲದ ರಾವಲ್ ಸಿಂಗ್ ಎಂಬುವವರ ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿ ಕಳ್ಳತನ ನಡೆದಿತ್ತು. ಮನೆಯ ಮುಂಭಾಗದ ಬಾಗಿಲಿನ ಬೀಗ ಮುರಿದು ಒಳನುಗ್ಗಿದ್ದ ಕಳ್ಳರು, ಗೋಡೇಜ್ನಲ್ಲಿದ್ದ 6 ಲಕ್ಷ ರೂ. ನಗದು ಹಣವನ್ನು ದೋಚಿ ಪರಾರಿಯಾಗಿದ್ದರು. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಮಾರ್ಗದರ್ಶನದಲ್ಲಿ, ಬೈಂದೂರು ವೃತ್ತ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅರಣ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಗಸ್ತು ಅರಣ್ಯ ಪಾಲಕರೊಬ್ಬರಿಗೆ ಹಣದ ಬೇಡಿಕೆ ಇಟ್ಟು ಜೀವ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಅರಣ್ಯ ಇಲಾಖೆಯಲ್ಲಿ ಅರಣ್ಯ ಗಸ್ತು ಪಾಲಕನಾಗಿರುವ ಆನಂದ ಬಳೆಗಾರ್ ಕರ್ತವ್ಯದಲ್ಲಿರುವಾಗ ಕುಂದಾಪುರ ಸಂಗಂ ಜಂಕ್ಷನ್ ಸಮೀಪ ಸದಾಶಿವ ಕೋಟೆಕಾರ್ ಎಂಬವರು ಬೆದರಿಸಿ, ಹಣಕ್ಕೆ ಬೆದರಿಕೆ ಹಾಕಿರುವುದಾಗಿ ಆನಂದ ಬಳೆಗಾರ್ ದೂರು ನೀಡಿದ್ದಾರೆ. ಆರೋಪಿ ಸದಾಶಿವನನ್ನು ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಮೇ.1ರಂದು ಆರೋಪಿಯು ತನ್ನ ಇಲಾಖಾ ಸಮವಸ್ತ್ರಕ್ಕೆ ಕೈ ಹಾಕಿ, ನಿಂದಿಸಿ, 25 ಸಾವಿರ ರೂ. ಕೊಡಬೇಕು. ಇಲ್ಲದಿದ್ದರೆ ಎಲ್ಲ ವಿಚಾರ ಪ್ರಚಾರ ಮಾಡುತ್ತೇನೆಂದು ಬೆದರಿಸಿದ್ದಾನೆ. ಮೇ 6ರಂದು ಅಡ್ಡಹಾಕಿ 25 ಸಾವಿರ ರೂ. ಕೊಡದಿದ್ದರೆ ನಿನ್ನ ಎಲ್ಲ ವ್ಯವಹಾರ ಮಾಹಿತಿ ಹಕ್ಕಿನಲ್ಲಿ ಪಡೆದು, ಬಹಿರಂಗ ಪಡಿಸುವುದಾಗಿ ಬೆದರಿಕೆ ಹಾಕಿರುವುದಾಗಿ ಆನಂದ್ ದೂರಿನಲ್ಲಿ ತಿಳಿಸಿದ್ದಾರೆ. ಕುಂದಾಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಆರೋಪಿ ಸದಾಶಿವ ಕೋಟೆಕಾರ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯ ಸಾರ್ವಜನಿಕರು ಕೆಲಸದ ನಿಮಿತ್ತ ಅಥವಾ ಪ್ರವಾಸಕ್ಕಾಗಿ ತಮ್ಮ ಮನೆಯನ್ನು ಲಾಕ್ ಮಾಡಿ ಹೊರಗೆ ಹೋದಾಗ, ಅಂತಹ ಮನೆಗಳ ಮೇಲೆ ನಿಗಾ ಇಡಲು ಉಡುಪಿ ಜಿಲ್ಲಾ ಪೊಲೀಸ್ ವತಿಯಿಂದ ಲಾಕ್ಡ್ ಹೌಸ್ ಬೀಟ್ ಸಿಸ್ಟಮ್ʼ (LHBS) ಎನ್ನುವ ವಿನೂತನ ಕಾರ್ಯಕ್ರಮವನ್ನು ಆರಂಭಿಸಲಾಗಿದೆ.  ಇಂತಹ ಲಾಕ್ ಆಗಿರುವ ಮನೆಗಳ ಮೇಲೆ ಪೊಲೀಸರು ವಿಶೇಷ ನಿಗಾ ಇರಿಸುತ್ತಾರೆ. ಸದರಿ ಮನೆ ಇರುವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆಯಾ ಠಾಣಾ ಬೀಟ್ ಸಿಬ್ಬಂದಿಯು ಆ ಮನೆಗೆ ಭೇಟಿ ನೀಡಿ ರಾತ್ರಿ ಮತ್ತು ಹಗಲು ವೇಳೆ ಆ ಮನೆಯ ಸೂಕ್ತ ಭದ್ರತೆ ಮತ್ತು ಸುರಕ್ಷತೆಯನ್ನು ಖಚಿತಪಡಿಸುತ್ತಾರೆ. ಉಡುಪಿ ಜಿಲ್ಲೆಯ ಯಾವುದೇ ಸಾರ್ವಜನಿಕರು ತಾವು ಮನೆಯಿಂದ ಪ್ರವಾಸ ಮತ್ತು ಇತರೇ ಕಾರ್ಯಕ್ರಮಗಳಿಗಾಗಿ ಮನೆಯನ್ನು ಲಾಕ್ ಮಾಡಿ ಹೊರಡುವಾಗ ಉಡುಪಿ ಜಿಲ್ಲಾ ನಿಯಂತ್ರಣ ಕೊಠಡಿಯಲ್ಲಿ ಈ ಬಗ್ಗೆ ನೀಡಲಾದ ವಿಶೇಷ ದೂರವಾಣಿ ಸಂಖ್ಯೆ 0820-2526709 ಕರೆ ಮಾಡಿ ಮಾಹಿತಿಯನ್ನು ನೀಡಬೇಕು. ನಿಯಂತ್ರಣ ಕೊಠಡಿಯಿಂದ ನೀಡುವ ವಾಟ್ಸಾಪ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ಎನ್. ಟಿ. ಎ.) ವತಿಯಿಂದ ನಡೆಸಲಾದ ಜೆಇಇ  ಬಿ.ಆರ್ಕ್ ಮತ್ತು ಬಿ.ಪ್ಲಾನಿಂಗ್ ನ ಎರಡನೆಯ ಆವೃತ್ತಿಯ ಫಲಿತಾಂಶ ಪ್ರಕಟಗೊಂಡಿದ್ದು ಕ್ರಿಯೇಟಿವ್ ಸಂಸ್ಥೆ ಅತ್ಯುತ್ತಮ ಫಲಿತಾಂಶವನ್ನು ಪಡೆದು  ಮತ್ತೊಮ್ಮೆ ರಾಷ್ಟ್ರಮಟ್ಟದಲ್ಲಿ ತನ್ನನ್ನು ಗುರುತಿಸಿಕೊಂಡಿದೆ. ನಾಗದೇವ್ ಎಂ.ಜಿ. ಬಿ.ಪ್ಲಾನಿಂಗ್ ನಲ್ಲಿ ಜನರಲ್ ಇಡಬ್ಲ್ಯೂಎಸ್‌ ವಿಭಾಗದಲ್ಲಿ ದೇಶಕ್ಕೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಬಿ. ಪ್ಲಾನಿಂಗ್ ವಿಭಾಗದಲ್ಲಿ:ನಾಗದೇವ್ ಎಂ.ಜಿ.99.9762662, ಸುಕ್ಷಿತ್  ಗಿರೀಶ್ ಗೌಡ 99.7769023, ನಮಿತ್ ಕೃಷ್ಣಮೂರ್ತಿ ಹೆಗಡೆ 99.4570078, ವಿಶ್ವೇಶ್ ಎನ್.ಹೆಚ್.99.3484094, ನಿಶಾಂತ್ ಹೊನ್ನಾವರ್ 99.3164686, ಅನಿರುಧ್ ಉಪಾಧ್ಯಾಯ 98.8948512, ಅಭಿರಾಮ್ ಭಟ್ ಜಿ.ಪಿ.98.3718612, ಉಲ್ಲಾಸ್ ವೈ ಪಾಟೀಲ್ 98.2560368, ದಿಶಾಂತ್ ಎಂ.98.2152181, ವೃಷಬ್ ಮಂಜುನಾಥ್ ಬೆನ್ನಿ 98.1666028, ಸಂವಿತ್ ಅಮಿತ್ ಗೋಕರ್ಣ 98.1107894, ನಿನಾದ್ ರಾಜೇಶ್ ನಾಯಕ್ 98.0490815 ಪರ್ಸೆಂಟೈಲ್ ಪಡೆದುಕೊಂಡಿದ್ದಾರೆ. 99 ಪರ್ಸೆಂಟೈಲ್ ಗಿಂತ ಅಧಿಕ 05 ಮಂದಿ, 98 ಪರ್ಸೆಂಟೈಲ್ ಗಿಂತ ಅಧಿಕ 12ಮಂದಿ, 97 ಪರ್ಸೆಂಟೈಲ್ ಗಿಂತ ಅಧಿಕ 16 ಮಂದಿ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬೈಕ್‌ಗೆ ಲಾರಿ ಢಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟ ಘಟನೆ ಉಡುಪಿ –ಕುಂದಾಪುರ ರಾ.ಹೆ  ಬೀಜಾಡಿ ಜಂಕ್ಷನ್ನಲ್ಲಿ ಸಂಭವಿಸಿದೆ. ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಹೆಸರೂರು ಗ್ರಾಮದ ಪರಸಪ್ಪ ಚಂದಪ್ಪ ಲಮಾಣಿ (57) ಮೃತಪಟ್ಟ ವ್ಯಕ್ತಿ. ಉಡುಪಿ ಕಡೆಯಿಂದ ಕುಂದಾಪುರದತ್ತ ಲಾರಿ ಚಲಾಯಿಸುತ್ತಿದ್ದ ಸಿಪಾಯಿ ಶಭೀರ ಹುಸೇನ್ ಹಾಜಿ ಇಬ್ರಾಹಿಂ ಅವರ ವಾಹನವನ್ನು ಬೈಕ್ ಸವಾರ ಬಲಗಡೆಯಿಂದ ಓವರ್ಟೇಕ್ ಮಾಡಲು ಯತ್ನಿಸಿದ ವೇಳೆ ಅಪಘಾತ ಸಂಭವಿಸಿದೆ. ಅಪಘಾತದಿಂದಾಗಿ ತೀವ್ರ ಗಾಯಗೊಂಡು ಮಾತನಾಡುವ ಸ್ಥಿತಿಯಲ್ಲಿರದ ಲಮಾಣಿ ಅವರನ್ನು ಸ್ಥಳೀಯರು ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದು, ಪರೀಕ್ಷಿಸಿದ ವೈದ್ಯರು, ಅವರು ಅದಾಗಲೇ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಆನಂದ್ ಸಿ. ಕುಂದರ್ ಎಂದರೆ ಅದೊಂದು ಶಕ್ತಿ. ಜಿಲ್ಲೆಯಲ್ಲೆ ಸಾಂಸ್ಕೃತಿಕ ಕಾಶಿಯನ್ನಾಗಿಸಿದ ಕೀರ್ತಿ ಆನಂದ್ ಸಿ. ಕುಂದರ್ ಅವರಿಗೆ ಲಭಿಸುತ್ತದೆ. ಇಂತಹ ವ್ಯಕ್ತಿಗೆ ಪಂಚವರ್ಣ ಸಂಘಟನೆ 300ನೇ ವಾರದ ಪರಿಸರಸ್ನೇಹಿ ಅಭಿಯಾನ ಸಮರ್ಪಿಸಿದ್ದು ಅರ್ಥಪೂರ್ಣ ಎಂದು ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಅಭಿಪ್ರಾಯಪಟ್ಟರು. ಅವರು ಭಾನುವಾರ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ಜಿಲ್ಲಾಡಳಿತ, ಸ್ಥಳೀಯಾಡಳಿತ, ಗೀತಾನಂದ ಫೌಂಡೇಶನ್ ಮಣೂರು, ಕೋಡಿ ಪಂಚಾಯತ್ ನೇತೃತ್ವದಲ್ಲಿ ಕೋಡಿ ಗ್ರಾ.ಪಂನಿಂದ ಕೋಟ ಪಂಚಾಯತ್ ವರೆಗಿನ 5ವರೆ ಕಿ.ಮೀ ಬೃಹತ್ ಬೀಚ್ ಸ್ವಚ್ಛತಾ ಅಭಿಯಾನದ ಮಣೂರು ಪಡುಕರೆಯಲ್ಲಿ ಸಮಾರೋಪ ಕಾರ್ಯಕ್ರಮದಲ್ಲಿ ಆನಂದ್ ಸಿ. ಕುಂದರ್ ಅವರನ್ನು ಸನ್ಮಾನಿಸಿ ಮಾತನಾಡಿದರು. ಸಮಾಜಕ್ಕಾಗಿ ತನ್ನನ್ನು ಸಮರ್ಪಿಸಿಕೊಂಡ ಆನಂದ್ ಸಿ. ಕುಂದರ್ ವ್ಯಕ್ತಿತ್ವ ಇಡೀ ಸಮಾಜಕ್ಕೆ ಮಾದರಿಯಾಗಿದೆ. ಪಂಚವರ್ಣ ಸಂಘಟನೆ ಇಡೀ ರಾಜ್ಯಕ್ಕೆ ದೇಶಕ್ಕೆ ಮಾದರಿಯಾಗುವ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬೀಚ್ ಕ್ಲಿನಿಂಗ್ನಲ್ಲಿ ಹೊಸ ಅಧ್ಯಾಯ ಸೃಷ್ಠಿಸಿದೆ ಎಂದರು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಉಡುಪಿ: ಆತ್ಯಾಧುನಿಕ ಸೌಲಭ್ಯಗಳನ್ನು ಹೊಂದಿರುವ ರಾಜ್ಯ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಧೀನದ ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿ.ಟಿ.ಟಿ.ಸಿ), ಉಡುಪಿ ಸಂಸ್ಥೆಯಲ್ಲಿ ಡಿಪ್ಲೋಮಾ ಇನ್ ಮೆಕಾಟ್ರಾನಿಕ್ಸ್, ಡಿಪ್ಲೋಮಾ ಇನ್ ಟೂಲ್ ಅಂಡ್ ಡೈ ಮೇಕಿಂಗ್ ಹಾಗೂ ಡಿಪ್ಲೋಮಾ ಇನ್ ಪ್ರಿಸಿಷನ್ ಮ್ಯಾನುಫ್ಯಾಕ್ಚರಿಂಗ್ನಲ್ಲಿ ಸೀಟುಗಳ ಹಂಚಿಕೆ ಆನ್ಲೈನ್ ಅರ್ಜಿ ಸಲ್ಲಿಕೆ ಮೂಲಕ ನಡೆಯುತ್ತಿದೆ. ಮೊದಲನೇ ಸುತ್ತಿನ ಆನ್ಲೈನ್ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಮೇ. 10 ಕೊನೆಯ ದಿನವಾಗಿದೆ. ಮೇ.15 ರಿಂದ 20ರ ವರೆಗೆ ಮೊದಲನೇ ಸುತ್ತಿನ ಸೀಟು ಹಂಚಿಕೆ ಮತ್ತು ಪ್ರವೇಶಾತಿ ಪ್ರಕ್ರೀಯೆ ನಡೆಯಲಿದೆ. ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅಥವಾ ಜಿ.ಟಿ.ಟಿ.ಸಿ ಸಂಸ್ಥೆಯಲ್ಲಿ ದಾಖಲಾತಿಗಳನ್ನು ಸಲ್ಲಿಸಿದಲ್ಲಿ ವಿದ್ಯಾರ್ಥಿಗಳ ಪರವಾಗಿ ಆನ್ಲೈನ್ ಅರ್ಜಿ ಸಲ್ಲಿಸಲಾಗುವುದು. ಐ.ಟಿ.ಐ ಮತ್ತು ಪಿ.ಯು.ಸಿ ವಿಜ್ಞಾನ ವಿಭಾಗದಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳು ನೇರವಾಗಿ ಎರಡನೇ ವರ್ಷದ ಡಿಪ್ಲೋಮಾ ಕೋರ್ಸ್‌ಗೆ ಪ್ರವೇಶ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸರಕಾರಿ ಉಪಕರಣಾಗಾರ ಮತ್ತು ತರಬೇತಿ…

Read More