Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಅತಿಯಾದ ಭಾವನಾತ್ಮಕತೆ ಅಥವಾ ಅತಿಯಾದ ಪ್ರಾಯೋಗಿಕ ಮನೋಭಾವ ಇವೆರಡೂ ಸಾಧನೆಗೆ ಅಡ್ಡಿಯಾಗಬಹುದು. ಭಾವನೆ ಮತ್ತು ಪ್ರಾಯೋಗಿಕತೆಯನ್ನು ಸಮತೋಲನದಲ್ಲಿ ಅಳವಡಿಸಿಕೊಂಡು, ವಿಭಿನ್ನವಾಗಿ ಹಾಗೂ ಸೃಜನಾತ್ಮಕವಾಗಿ ಯೋಚಿಸುವ ಮನೋಭಾವ ಬೆಳೆಸಿಕೊಂಡಾಗ ಮಾತ್ರ ನಿಜವಾದ ಸಾಧನೆ ಸಾಧ್ಯ ಎಂದು ಮಂಗಳೂರು ಶಾಖೆಯ ಎಮ್‌ಎಸ್‌ಎಮ್‌ಇ ಅಭಿವೃದ್ಧಿ ಘಟಕದ ಸಹಾಯಕ ನಿರ್ದೇಶಕ ಸುಂದರ್ ಎಸ್. ಮಾಳ ನುಡಿದರು. ಅವರು ಆಳ್ವಾಸ್ ಆಯುರ್ವೇದ ಕಾಲೇಜಿನ ಆತ್ಮ ಸಂಶೋಧನಾ ಕೇಂದ್ರದ ಸಹಯೋಗದಲ್ಲಿ ರಾಷ್ಟ್ರೀಯ ವಿಜ್ಞಾನ ದಿನದ ಅಂಗವಾಗಿ ಒಂದು ದಿನದ ವಿಚಾರ ಸಂಕಿರಣವನ್ನು ಕಾಲೇಜಿನ ವಿಎಸ್ ಆಚಾರ್ಯ ಸಭಾಂಗಣದಲ್ಲಿ ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ಕೇರಳ ರಾಜ್ಯದ ಇಡುಕ್ಕಿಯ ನಾಗಾರ್ಜುನ ಹರ್ಬಲ್ ಕನ್ಸಂಟ್ರೇಟ್ಸ್ ಲಿಮಿಟೆಡ್ ಸಂಸ್ಥೆಯ ಉತ್ಪನ್ನ ವಿಭಾಗದ ಸಹಾಯಕ ವ್ಯವಸ್ಥಾಪಕ ಡಾ. ಅಶ್ವಿನ್‌ ಎ.ಎಸ್. ಮಾತನಾಡಿ, ಸಂಶೋಧನಾ ಕ್ಷೇತ್ರದಲ್ಲಿ ಗುಣಮಟ್ಟದ ಮಹತ್ವವನ್ನು ಒತ್ತಿಹೇಳಿದ ಅವರು, ಔಷಧ ಉತ್ಪನ್ನಗಳಲ್ಲಿ ರೋಗಿಗಳ ಸುರಕ್ಷತೆ, ಉನ್ನತ ಗುಣಮಟ್ಟ ಹಾಗೂ ವಿಶ್ವಾಸಾರ್ಹತೆ  ಅತ್ಯಂತ ಪ್ರಮುಖ ಅಂಶಗಳಾಗಿವೆ. ಮಾರ್ಕೆಟಿಂಗ್ ಕ್ಷೇತ್ರದಲ್ಲಿ ಆಧುನಿಕ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆಯ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ (IMJISC) ಐಟಿ ಮತ್ತು ಕೋಡಿಂಗ್ ಕ್ಲಬ್ ನ ಅಡಿಯಲ್ಲಿ “ಚಿಂತನೆಗಳನ್ನು ಸಂಶೋಧನಾತ್ಮಕ ಪ್ರಕಟಣೆಗಳಾಗಿ ಪರಿವರ್ತಿಸುವುದು – ಸಂಶೋಧನಾ ಬರವಣಿಗೆಗೆ ಆರಂಭಿಕ ಮಾರ್ಗದರ್ಶಿ” ಎಂಬ ಶೀರ್ಷಿಕೆಯ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಎಂಐಟಿಕೆ ಯ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್‌ನ ಪ್ರೊಫೆಸರ್ ಮತ್ತು ಮುಖ್ಯಸ್ಥರಾದ ಡಾ. ಮಂಜುನಾಥ ರಾಮಣ್ಣ ಲಮಾಣಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದರು. ಅವರು ವಿದ್ಯಾರ್ಥಿಗಳಿಗೆ ಸಂಶೋಧನಾ ಬರವಣಿಗೆಯ ಮೂಲಭೂತ ಅಂಶಗಳು, ವಿಷಯಗಳ ಆಯ್ಕೆ, ಪ್ರಬಂಧ ರಚನೆ ಮತ್ತು ಪ್ರತಿಷ್ಠಿತ ನಿಯತಕಾಲಿಕೆಗಳಲ್ಲಿ ಪ್ರಕಟಣೆಯ ಪ್ರಾಮುಖ್ಯತೆಯನ್ನು ವಿವರಿಸಿದರು. ಅವರು ವಿದ್ಯಾರ್ಥಿಗಳಿಗೆ  ವಿಚಾರಗಳನ್ನು ಸಂಶೋಧನಾತ್ಮಕ ಪ್ರಕಟಣೆಗಳಾಗಿ ಪರಿವರ್ತಿಸಲು ಪ್ರೋತ್ಸಾಹಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರತಿಭಾ ಎಂ. ಪಟೇಲ್ ವಹಿಸಿದ್ದರು. ಬಿಸಿಎ ವಿಭಾಗದ ಮುಖ್ಯಸ್ಥರಾದ ಸ್ವರ್ಣ ರಾಣಿ ಮತ್ತು ಉದ್ಯೋಗ ಮತ್ತು ತರಬೇತಿ ಅಧಿಕಾರಿ ನಾಫಿಯಾ ಅಕ್ತರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ತೃತೀಯ ಬಿಸಿಎ ವಿದ್ಯಾರ್ಥಿನಿಯರಾದ ಸಿಂಚನಾ ಕಾರ್ಯಕ್ರಮವನ್ನು ನಿರೂಪಿಸಿ, ವಫಾ ನಾಜ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಕವ್ವಾಲಿ ಕೇವಲ ಸಂಗೀತವಲ್ಲ; ಅದು ಆಧ್ಯಾತ್ಮಿಕ ಅನುಭವ. ಮನಸ್ಸಿಗೆ ಶಾಂತಿ, ಸಮಾಜಕ್ಕೆ ಏಕತೆ ಮತ್ತು ಸಂಸ್ಕೃತಿಗೆ ಶ್ರೀಮಂತಿಕೆ ನೀಡುವ ಪರಂಪರೆ ಎಂದು ಆಳ್ವಾಸ್ ಮಹಿಳಾ ಘಟಕ ‘ಸಕ್ಷಮ’ದ ಸಂಚಾಲಕಿ ಹಾಗೂ ಆಳ್ವಾ ಫಾರ್ಮಸಿಯ ನಿರ್ದೇಶಕಿ ಡಾ. ಗ್ರೀಷ್ಮ ವಿವೇಕ್ ಆಳ್ವ ಅಭಿಪ್ರಾಯಪಟ್ಟರು. ಅವರು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮಹಿಳಾ ಘಟಕ ‘ಸಕ್ಷಮ’ದ ವತಿಯಿಂದ ಆಯೋಜಿಸಲಾದ ‘ಮೆಹಫಿಲ್-ಎ-ಕವ್ವಾಲಿ’ ವಿಚಾರ ಮಂಥನ ಕಾರ್ಯಕ್ರಮದಲ್ಲಿ ಮಾತನಾಡಿದರು. ಯಾವುದೇ ಕಲೆಯು ಕಾಲಚಕ್ರದ ಪ್ರಭಾವಕ್ಕೆ ಒಳಗಾಗಿ ಬದಲಾವಣೆಗಳನ್ನು ಅನುಭವಿಸುವುದು ಸಹಜ; ಕವ್ವಾಲಿಯಲ್ಲಿಯೂ ಇಂತಹ ಪರಿವರ್ತನೆಗಳು ಸಂಭವಿಸಿವೆ. ಕವ್ವಾಲಿಗೆ ಮನಸ್ಸನ್ನು ಧ್ಯಾನಸ್ಥ ಸ್ಥಿತಿಗೆ ಕೊಂಡೊಯ್ಯುವ ಅಪೂರ್ವ ಶಕ್ತಿ ಇದೆ. ನಾವು ಕಲಾವಿದರು, ಕಲಾಪೋಷಕರು ಅಥವಾ ಕಲಾಸಕ್ತರು ಇವುಗಳಲ್ಲಿ ಯಾವುದಾದರೂ ಒಂದು ವರ್ಗಕ್ಕೆ ಸೇರಿದವರಾಗಬೇಕು ಎಂದು ತಿಳಿಸಿದರು. ಕವ್ವಾಲಿಯು ಮನಸ್ಸನ್ನು ಶಾಂತಗೊಳಿಸಿ ಭಾವನಾತ್ಮಕ ಶುದ್ಧೀಕರಣಕ್ಕೆ ಕಾರಣವಾಗುತ್ತದೆ. ಜೊತೆಗೆ ಪ್ರೀತಿ, ಸಹಾನುಭೂತಿ ಮತ್ತು ಸಹೋದರತ್ವದ ಸಂದೇಶವನ್ನು ಸಮಾಜಕ್ಕೆ ಸಾರುವ ಸಾಮರ್ಥ್ಯ ಕವ್ವಾಲಿಗಿದೆ ಎಂದು ಅವರು ವಿವರಿಸಿದರು. ಕಾರ್ಯಕ್ರಮದಲ್ಲಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಭಾರತೀಯ ಸಂವಿಧಾನ ಬದುಕಿನ ಕೈಪಿಡಿಯಾಗಬೇಕು. ವಿದ್ಯಾರ್ಥಿಗಳು ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳ ಬಗ್ಗೆ ಮಾಹಿತಿ= ಪಡೆದುಕೊಳ್ಳಬೇಕು. ದಿನನಿತ್ಯದ ಬದುಕಿನಲ್ಲಿ ಕಾನೂನಿನ ಅರಿವು ಅತ್ಯಂತ ಅಗತ್ಯ ಎಂದು ಕುಂದಾಪುರದ ನ್ಯಾಯವಾದಿ ಸಂದೇಶ್ ಶೆಟ್ಟಿ ಹೇಳಿದರು. ಅವರು ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ಶ್ರೀ ವಿನಾಯಕ ಸಭಾಭವನದಲ್ಲಿ ನಡೆದ ವಾರ್ಷಿಕ ವಿಶೇಷ ಶಿಬಿರದಲ್ಲಿ ಕಾನೂನು ಅರಿವು ಎಂಬ ವಿಷಯದ ಕುರಿತು ಉಪನ್ಯಾಸ ನೀಡಿ ಮಾತನಾಡಿದರು. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕೊಯ್ಕಾಡಿಯ ಬಜಾಜ್ ಎಲಿಯನ್ಸ್ ಡೆವಲಪ್ಮೆಂಟ್ ಆಫೀಸರ್ ಸುದರ್ಶನ್ ಶೆಟ್ಟಿ, ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್‌ನ ನಿವೃತ್ತ ಮ್ಯಾನೇಜರ್ ರಮೇಶ್ ಮೊಗವೀರ ಗುಡ್ಡೆಯಂಗಡಿ, ಶಾರದೋತ್ಸವ ಸಮಿತಿಯ ಸದಸ್ಯ ಸುರೇಶ್ ಪೂಜಾರಿ ಹುಣ್ಸೆಮಕ್ಕಿ, ಸ.ಹಿ.ಪ್ರಾ. ಶಾಲೆ, ಯಡಾಡಿ-ಮತ್ಯಾಡಿಯ ಎಸ್.ಡಿ.ಎಮ್.ಸಿ. ಸದಸ್ಯರಾದ ಪವಿತ್ರ ಹಾಗೂ ಶಾಂತ, ದಿನೇಶ್ ಪೂಜಾರಿ ಹಳ್ನಿರು, ಶರತ್ ಕುಲಾಲ್ ಯಡಾಡಿ ಹಾಗೂ ರಿಕ್ಷಾ ಚಾಲಕರ ಸಂಘದ ಅಧ್ಯಕ್ಷರಾದ ಶಿವರಾಮ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬ್ರಹ್ಮಾವರ: ತಾಲೂಕಿನ ಹಿರಿಯ ಪತ್ರಕರ್ತ ಹಾಗೂ ಖಾಸಗಿ ಕಾಲೇಜಿನ ಉಪಪ್ರಾಂಶುಪಾಲ ಶೇಷಗಿರಿ ಭಟ್ (45) ಅವರು ಶನಿವಾರ ಬೆಳಿಗ್ಗೆ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಬ್ರಹ್ಮಾವರ ಕ್ರಾಸ್‌ಲ್ಯಾಂಡ್ ಕಾಲೇಜಿನ ಉಪಪ್ರಾಂಶುಪಾಲರಾಗಿದ್ದ ಶೇಷಗಿರಿ ಭಟ್ ಅವರು ಆರೂರು ಪ್ರದೇಶದಲ್ಲಿರುವ ತಮ್ಮ ನಿವಾಸದಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಕೆಲವು ದಿನಗಳಿಂದ ಅವರು ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗುತ್ತಿದ್ದರೂ, ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆ ಕುರಿತು ಬ್ರಹ್ಮಾವರ ಠಾಣೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಮೃತರು ಹೆಂಡತಿ, ಓರ್ವ ಪುತ್ರ ಹಾಗೂ ತಂದೆ – ತಾಯಿ ಮತ್ತು ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಎರಡು ದಿನಗಳ ವಿದ್ಯಾರ್ಥಿ ನಾಯಕತ್ವ ತರಬೇತಿ ಕಾರ್ಯಾಗಾರವನ್ನು ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆ ಮೂಡ್ಲಕಟ್ಟೆಯಲ್ಲಿ ಎಫ್‌ಎಸ್‌ಎಲ್ ಇಂಡಿಯಾ ಸಂಸ್ಥೆಯು ಕಮ್ಯುನಿಟಿ ಸರ್ವಿಸ್ ಮತ್ತು ಕಾಮರ್ಸ್ ಅಸೋಸಿಯೇಷನ್ ಸಹಯೋಗದೊಂದಿಗೆ ಮೊದಲ ಮತ್ತು ಎರಡನೇ ವರ್ಷದ ಬಿಬಿಎ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿತ್ತು. ರಾಕೇಶ್ ಸೋನ್ಸ್ ಮತ್ತು ರಕ್ಷಾ ವಿ. ಶೆಣೈ ಅವರು ನಡೆಸಿಕೊಟ್ಟರು. ಈ ಕಾರ್ಯಾಗಾರವು ನಾಯಕತ್ವ ಕೌಶಲ್ಯಗಳು, ತಂಡದ ಕೆಲಸ, ಸಂವಹನ ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವುದರ ಮೇಲೆ ಕೇಂದ್ರೀಕರಿಸಿತ್ತು. ವಿದ್ಯಾರ್ಥಿಗಳು ತಂಡದ ನಿರ್ಮಾಣ ಕಾರ್ಯಗಳು, ಮೂಲ ಕಾರಣ ವಿಶ್ಲೇಷಣೆ ಮತ್ತು ಮೈಕ್ರೋ-ಪ್ರಾಜೆಕ್ಟ್ ಪ್ರಸ್ತುತಿಗಳಲ್ಲಿ ಭಾಗವಹಿಸಿ, ನಾಯಕತ್ವದ ಪಾತ್ರಗಳಿಗೆ ಪ್ರಾಯೋಗಿಕವಾಗಿ ತೊಡಗಿಸಿಕೊಳ್ಳುವ ಮೂಲಕ ಅನುಭವ ಪಡೆದುಕೊಂಡರು. ಸಮಾರೋಪ ಸಮಾರಂಭದೊಂದಿಗೆ ತರಬೇತಿಯು ಯಶಸ್ವಿಯಾಗಿ ಮುಕ್ತಾಯಗೊಂಡಿತು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಸನ್ನಿಧಾನದಲ್ಲಿ ಪರಿಮಳ ಪ್ರಶಸ್ತಿ ಕಾರ್ಯಕ್ರಮದ ವೇದಿಕೆಯಲ್ಲಿ ಸಾಲಿಗ್ರಾಮದ ಲಕ್ಷ್ಮೀಕೃಷ್ಣಮೂರ್ತಿ ಮರಕಾಲ ಇವರ ಪುತ್ರಿ ಬಹುಮುಖ ಪ್ರತಿಭೆ ಸುಶ್ಮಿತಾ ಇವರ ಭರತನಾಟ್ಯ ಹಾಗೂ ಕರಾವಳಿಯ ಗಂಡುಕಲೆ ಯಕ್ಷಗಾನ ನೃತ್ಯ ಕಾರ್ಯಕ್ರಮ ನೆರವೇರಿತು. ಈ ಸಂದರ್ಭದಲ್ಲಿಮಂತ್ರಾಲಯ ಶ್ರೀ ಮತ್ಸುಬುಧೇಂದ್ರತೀರ್ಥ ಶ್ರೀಪಾದಂಗಳವರಿಗೆ ಸುಶ್ಮಿತಾ ಸಾಲಿಗ್ರಾಮ ತನ್ನ ಕೈಚಳಕದಿಂದ ಶ್ರೀ ರಾಘುವೇಂದ್ರಸ್ವಾಮಿಯವರ ಹಾಗೂ ಶ್ರೀ ಸುಭುದೇಂದ್ರಸ್ವಾಮಿಗಳ ನೂಲಿನ ಕಲಾ ಕಸೂತಿಯ ಚಿತ್ರವನ್ನು ರಚಿಸಿ ಸಮರ್ಪಿಸಿದರು. ವೇದಿಕೆಯಲ್ಲಿ ತನ್ನ ಎಲ್ಲಾ ಕಲಾಪ್ರತಿಭೆಗಳನ್ನು ಪ್ರದರ್ಶಿಸಿ ಗುರುಗಳ ಮೆಚ್ಚುಗೆ ಪಾತ್ರರಾದ ಸುಶ್ಮಿತಾವರಿಗೆ ಮಂತ್ರಾಕ್ಷತೆಯ ಆಶೀವದಿಸಿ ಶ್ಲಾಘಿಸಿದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ವಿಧಾನಪರಿಷತ್ ಸಭಾಧ್ಯಕ್ಷ ಬಸವರಾಜ ಹೊರಟ್ಟಿ, ವಿಧಾನಸಭಾ ಸದಸ್ಯ ಬಸವನಗೌಡ ಪಾಟೀಲ್ ಯತ್ನಳ್ , ಹರೀಶ ಪ್ರಾಂಜ, ಡಾ ಶಾಲಿನಿ ರಜನೀಶ್, ಡಾ.ಸಿ.ಎನ್ ಅಶ್ವತನಾರಾಯಣ ಅನೇಕ ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಪ್ರವಾಸೋದ್ಯಮ ಇಲಾಖೆ ವತಿಯಿಂದ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ. ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು Entrepreneurship ವಿಷಯದ ಬಗ್ಗೆ ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿ ನೀಡಿ ಮೊಬೈಲ್ ಕ್ಯಾಂಟೀನ್ ವಾಹನ ಖರೀದಿಸಲು ಶೇ. 70% ಮೊತ್ತ ಅಥವಾ ಗರಿಷ್ಠ ರೂ. 5.00 ಲಕ್ಷಗಳ ಸಹಾಯಧನ ನೀಡಲಾಗುತ್ತಿದ್ದು ಸದರಿ ತರಬೇತಿ ಹಾಗೂ ಸಹಾಯಧನಕ್ಕಾಗಿ ಪರಿಶಿಷ್ಟ ಜಾತಿಗೆ ಸೇರಿದ 04 ಅಭ್ಯರ್ಥಿಗಳು ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 03 ಅಭ್ಯರ್ಥಿಗಳು ಸೇರಿದಂತೆ ಒಟ್ಟು 07 ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ತರಬೇತಿ ಕಾರ್ಯಕ್ರಮಕ್ಕೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 10 ನೇ ತರಗತಿ ಉತ್ತೀರ್ಣರಾಗಿದ್ದು, 20 ರಿಂದ 55 ವರ್ಷ ವಯೋಮಿತಿಯಲ್ಲಿರಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 13. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಛೇರಿ, ಪ್ರವಾಸೋದ್ಯಮ ಇಲಾಖೆ, ಉಡುಪಿ ಜಿಲ್ಲೆ, ಜಿಲ್ಲಾಧಿಕಾರಿಗಳ ಕಛೇರಿ ಸಂಕೀರ್ಣ, ಎ ಬ್ಲಾಕ್, 2 ನೇ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ಅಮೃತೇಶ್ವರಿ ದೇವಸ್ಥಾನದ ವತಿಯಿಂದ ಮಾ.1ರಂದು ನಡೆಯುವ ಏಕ ಪವಿತ್ರ ನಾಗಮಂಡಲೋತ್ಸವದ ಪೂರ್ವಬಾವಿಯಾಗಿ ಹೊರೆಕಾಣಿಕೆ ಸಮರ್ಪಣೆಯ ಸಂಭ್ರಮದ ಸತತ ಮೂರು ದಿನಗಳಿಂದ ಸಾವಿರಾರು ಮಂದಿ ಭಕ್ತರು ಆಗಮಿಸಿ ಹೊರೆಕಾಣಿಕೆ ಸಮರ್ಪಿಸಿದರು. ಕೋಟ 14 ಗ್ರಾಮಗಳ ವತಿಯಿಂದ 3 ದಿನಗಳ ಕಾಲ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ ಸಲ್ಲಿಸುವ ಪ್ರಯಕ್ತ ಬುಧವಾರ, ಗುರುವಾರ, ಶುಕ್ರವಾರ ಬೆಳಗ್ಗೆಯಿಂದ ಸಂಜೆಯವರೆಗೆ ಕೋಟ ಹದಿನಾಲ್ಕು ಗ್ರಾಮಗಳ ಹಾಡಿಕೆರೆ, ಅಚ್ಲಾಡಿ, ಬನ್ನಾಡಿ, ಹಿರೇದೇವಸ್ಥಾನಬೆಟ್ಟು, ಕೋಟತಟ್ಟು ಬಾರಿಕೆರೆ, ಅರ್ಚಕ ಯುವ ಸಂಘ ಕೋಟ,ತೆಕ್ಕಟ್ಟೆ ಗ್ರಾಮಸ್ಥರು, ಮಣೂರು ಪಡುಕರೆ, ಮೂಡುಗಿಳಿಯಾರು, ಹಂದಟ್ಟು, ಕೋಟ ಹೊಸಬೆಟ್ಟು, ಕಾಸನಗುಂದು, ಕೋಟತಟ್ಟು ಪಡುಕರೆ, ಸಾಲಿಗ್ರಾಮ ಕಾರ್ಕಡ,ಪಾರಂಪಳ್ಳಿ, ಕೋಡಿ ಗ್ರಾ.ಪಂ ವ್ಯಾಪ್ತಿ,ಕೋಟ ಪಡುಹರ್ತಟ್ಟು ಮೂಡುಹಡು, ಪಾಂಡೇಶ್ವರ, ಗೋಳಿಗರಡಿ, ಕೋಟತಟ್ಟು ಪಡುಕರೆ, ಐರೋಡಿ ಬಾಳೆಕುದ್ರು, ಮಣೂರು ಮಳಲುತಾಯಿ, ಬೆಟ್ಲಕ್ಕಿ ಚಿತ್ರಪಾಡಿ, ಕಾರ್ಕಡ, ಪಾರಂಪಳ್ಳಿ, ಕೋಟ ಅಮೃತೇಶ್ವರೀ ಮಹಿಳಾ ಮೀನುಗಾರರ ಸಹಕಾರಿ ಸಂಘ,ಆನೆಗುಡ್ಡೆ ಶ್ರೀವಿನಾಯಕ ದೇಗುಲ,ಮಣೂರು ಮಹಾಲಿಂಗೇಶ್ವರ ದೇಗುಲ ಹೀಗೆ ಅನೇಕ ಭಾಗಗಳಿಂದ ಹೊರೆ ಕಾಣಿಕೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರ ಬೆಂಗಳೂರು ಇವರು ಅಯೋಜಿಸಿದ ಅಖಿಲ ಭಾರತ ಸಾಮಾನ್ಯ ಜ್ಞಾನ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಇಶಾನಿ ಪಿ. (2ನೇ ಸ್ಥಾನ), ಶ್ರೀಶುಭಂ ಶ್ರೀಕಾಂತ್ ಶೆಟ್ಟಿ  (9ನೇ ಸ್ಥಾನ) ಹಾಗೂ ಶ್ರಾವಣಿ ಮಂಜುನಾಥ್ ನಾಯಕ್ (13ನೇ ಸ್ಥಾನ)ವನ್ನು ಪಡೆದಿರುತ್ತಾರೆ. ಅವರಿಗೆ ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.

Read More