ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ದಾನಗಳಲ್ಲೇ ಅತ್ಯಂತ ಶ್ರೇಷ್ಠ ದಾನ ರಕ್ತದಾನ. ಒಬ್ಬ ವ್ಯಕ್ತಿಯು ನೀಡುವ ರಕ್ತದಾನದಿಂದ ಕನಿಷ್ಠ ಮೂರು ಜೀವಗಳನ್ನು ಉಳಿಸಬಹುದು. ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಕಾರ್ಯಗಳಲ್ಲಿ ಕೈಜೋಡಿಸಿ ಜನರ ಜೀವ ಉಳಿಸಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಹೇಳಿದರು. ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ರಕ್ತನಿಧಿ ಕೇಂದ್ರ, ಯೂತ್ ರೆಡ್ ಕ್ರಾಸ್, ರಾಷ್ಟ್ರೀಯ ಸೇವಾ ಯೋಜನೆ, ಪೂರ್ಣ ಪ್ರಜ್ಞ (ಸ್ವಾಯತ್ತ) ಕಾಲೇಜು, ಪೂರ್ಣ ಪ್ರಜ್ಞ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಮತ್ತು ಪೂರ್ಣ ಪ್ರಜ್ಞ ಗ್ರೂಪ್ ಆಫ್ ಇನ್ಸ್ಟಿಟ್ಯೂಟ್ ಇವರ ಸಂಯುಕ್ತ ಆಶ್ರಯದಲ್ಲಿ ಪೂರ್ಣ ಪ್ರಜ್ಞ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ನ ಪ್ರಜ್ಞ ಸಭಾಂಗಣದಲ್ಲಿ ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ-2025 ಹಾಗೂ ರಕ್ತದಾನಿಗಳ ಸನ್ಮಾನ ಕಾರ್ಯಕ್ರವನ್ನು ಉದ್ಘಾಟಿಸಿ ಮಾತನಾಡಿದರು. ಉಡುಪಿ ಜಿಲ್ಲೆಯಲ್ಲಿ ಅತಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಯಕ್ಷಗಾನ ಕ್ಷೇತ್ರಕ್ಕೆ ಸುಬ್ರಹ್ಮಣ್ಯ ಧಾರೇಶ್ವರರ ಕೊಡುಗೆ ಅಪಾರವಾದ್ದು ಅಂತಹ ಮಹಾನ್ ಚೇತನರ ಹೆಸರನ್ನು ಚಿರಸ್ಥಾಯಿಯಾಗಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಯಕ್ಷಪ್ರೋತ್ಸಾಹ ಪಾರಂಪಳ್ಳಿ ರವೀಂದ್ರ ಐತಾಳ್ ನುಡಿದರು. ಅವರು ಗುಂಡ್ಮಿ ಯಕ್ಷಗಾನ ಕಲಾಕೇಂದ್ರ ಐರೋಡಿ ಹಂಗಾರಕಟ್ಟೆಯಲ್ಲಿ ಒಂದು ವಾರಗಳ ಕಾಲ ನಡೆಯುತ್ತಿರುವ ಯಕ್ಷಸಪ್ತೋತ್ಸವ ಆರನೇ ದಿನದ ಭಾಗವತ ದಿ. ಸುಬ್ರಹ್ಮಣ್ಯ ಧಾರೇಶ್ವರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಂಸ್ಮರಣಾ ನುಡಿಗಳನ್ನಾಡಿದರು. ಧಾರೇಶ್ವರರಂತಹ ಮಹಾನ್ ಕಲಾವಿದರು ಬಡಗುತಿಟ್ಟನ್ನು ಶ್ರೀಮಂತವಾಗಿಸಿದ್ದಾರೆ, ಕಲಾವಿದರಿಗೆ ಚೈತನ್ಯ ತುಂಬುವುದರ ಜತೆಗೆ ಯಕ್ಷಗಾನದ ಪಾರಂಪರಿಕ ಸೊಗಡನ್ನು ಶ್ರೇಷ್ಠವಾಗಿಸಿದ್ದಾರೆ. ಇಂತಹ ಮಹಾನ್ ಯಕ್ಷಕಲಾವಿದರ ಹೆಸರನ್ನು ಕಲಾಕೇಂದ್ರದ ಮೂಲಕ ಉಳಿಸಿ ಬೆಳೆಸವಂತೆ ಮಾಡಿದ್ದಾರೆ ಎಂದರು. ಇದೇ ವೇಳೆ ತೆಂಕು ತಿಟ್ಟಿನ ಭಾಗವತ ಪೆರ್ಲ ಸತ್ಯನಾರಾಯಣ ಪುಣೆಂಚಿತ್ತಾಯ ಅವರಿಗೆ ಸುಬ್ರಹ್ಮಣ್ಯ ಧಾರೇಶ್ವರ ಪ್ರಶಸ್ತಿ ಪ್ರದಾನಿಸಲಾಯಿತು. ಪತ್ರಕರ್ತ ರವೀಂದ್ರ ಕೋಟ ಅಭಿನಂದನಾ ನುಡಿಗಳನ್ನಾಡಿದರು. ಸಭೆಯ ಅಧ್ಯಕ್ಷತೆಯನ್ನು ಕಲಾಕೇಂದ್ರದ ಯಕ್ಷಗುರು ಸದಾನಂದ ಐತಾಳ್ ವಹಿಸಿದ್ದರು. ಮುಖ್ಯ ಅಭ್ಯಾಗತರಾಗಿ ಅಜಪುರ ಕರ್ನಾಟಕ ಯಕ್ಷಗಾನ ಸಂಘದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾಜ್ಯದ ಹೆಸರಾಂತ ಸಾಂಸ್ಕೃತಿಕ ಸಂಸ್ಥೆಯಾದ ಸುರಭಿ ರಿ. ಬೈಂದೂರು ತನ್ನ 25ನೇ ವರ್ಷದ ರಜತಯಾನದ ಪ್ರಯುಕ್ತ ಡಿಸೆಂಬರ್ ತಿಂಗಳ 3ನೇ ವಾರದಲ್ಲಿ ರಾಜ್ಯ ಮಟ್ಟದ ಕನ್ನಡ ನಾಟಕ ಸ್ಪರ್ಧೆಯನ್ನು ಆಯೋಜಿಸಿದೆ. ನಾಟಕ ಸ್ಪರ್ಧೆಯಲ್ಲಿ ರಾಜ್ಯದ ಯಾವುದೇ ಜಿಲ್ಲೆಯ (ಕಾಸರಗೋಡು ಸಹಿತ) ಹವ್ಯಾಸಿ ನಾಟಕ ತಂಡಗಳು ಭಾಗವಹಿಸಲು ಮುಕ್ತ ಅವಕಾಶವಿದೆ. ಸ್ಪರ್ಧಾ ವಿವರಗಳು: ಯಾವುದೇ ಪ್ರದೇಶದ ಹವ್ಯಾಸಿ ನಾಟಕ ತಂಡಕ್ಕೆ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶವಿದೆ. ಕನಿಷ್ಠ 01 ಘಂಟೆ 30ನಿಮಿಷದ ಹಾಗೂ ಗರಿಷ್ಠ 02 ಘಂಟೆ 15 ನಿಮಿಷ ಅವಧಿಯ ಸಾಮಾಜಿಕ, ಐತಿಹಾಸಿಕ, ಪೌರಾಣಿಕ, ಜಾನಪದ ಅಥವಾ ಯಾವುದೇ ಪ್ರಕಾರದ ನಾಟಕ ಪ್ರದರ್ಶನ ಮಾಡಬಹುದು. ಸ್ಫರ್ಧೆಗೆ ಗರಿಷ್ಠ 8 ತಂಡಗಳನ್ನು ಆಯ್ಕೆ ಮಾಡಲಾಗುತ್ತದೆ. ವಿಜೇತ ತಂಡಗಳಿಗೆ ಪ್ರಥಮ, ದ್ವಿತೀಯ, ತೃತೀಯ ಬಹುಮಾನಗಳೊಂದಿಗೆ ಅನುಕ್ರಮವಾಗಿ ರೂ 40,000/-ರೂ 30,000/- ರೂ 20,000/- ದ ನಗದು ಬಹುಮಾನಗಳನ್ನು ಹಾಗೂ ಶಾಶ್ವತ ಫಲಕಗಳನ್ನು ನೀಡಲಾಗುವುದು. ಅಲ್ಲದೇ ಶ್ರೇಷ್ಠ ನಿರ್ದೇಶನ, ನಟ, ನಟಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಡುಪಿ ಮತ್ತು ರಾಜೇಶ್ವರಿ ನ್ಯಾಷನಲ್ ಸ್ಕೂಲ್ ಸಾಣೂರು, ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ನಡೆದ ಮೈಸೂರು ವಿಭಾಗ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಲಾಸ್ಯ ಮಧ್ಯಸ್ಥ ಪ್ರಥಮ ಸ್ಥಾನಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. 17ರ ವಯೋಮಾನದ ಬಾಲಕಿಯರ ವಿಭಾಗದ ಸಾಂಪ್ರದಾಯಿಕ (ಟ್ರಡೀಷನಲ್) ಯೋಗಾಸನ ಸ್ಪರ್ಧೆಯಲ್ಲಿ ವಿಜೇತಳಾಗಿರುವ ವಿದ್ಯಾರ್ಥಿನಿಯು ಅರುಣ ಮಧ್ಯಸ್ಥ ಮತ್ತು ಲತಾ ಮಧ್ಯಸ್ಥ ದಂಪತಿಯ ಪುತ್ರಿ. ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ, ಸಂಸ್ಥೆಯ ಮುಖ್ಯೋಪಾಧ್ಯಾಯರಾದ ಪ್ರದೀಪ್. ಕೆ ವಿಜೇತ ವಿದ್ಯಾರ್ಥಿನಿಯನ್ನು ಅಭಿನಂದಿಸಿದ್ದಾರೆ. ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ಸತೀಶ್ ಕುಮಾರ್ ವಿದ್ಯಾರ್ಥಿನಿಗೆ ಮಾರ್ಗದರ್ಶನ ನೀಡಿದ್ದರು. ಸುಜ್ಞಾನ ಪದವಿ ಪೂರ್ವ ಕಾಲೇಜು ಮತ್ತು ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಬೋಧಕ ಬೋಧಕೇತರ ವರ್ಗದವರು ಸಂತಸ ವ್ಯಕ್ತಪಡಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಉಡುಪಿ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಂಗನವಾಡಿ ಕೇಂದ್ರಗಳಲ್ಲಿ ತೆರವಾಗಿರುವ ಒಟ್ಟು 16 ಅಂಗನವಾಡಿ ಕಾರ್ಯಕರ್ತೆ ಹಾಗೂ 131 ಅಂಗನವಾಡಿ ಸಹಾಯಕಿಯರ ಹುದ್ದೆಗೆ ಆನ್ಲೈನ್ ನಲ್ಲಿ ಅರ್ಜಿ ಆಹ್ವಾನಿಸಲಾಗಿದ್ದು ಇದುವರೆಗೆ 392 ಅಪೂರ್ಣ ಅರ್ಜಿಗಳು ಸ್ವೀಕೃತವಾಗಿರುವುದರಿಂದ ಅವುಗಳು ಪರಿಶೀಲನೆಗೆ ಅಲಭ್ಯವಾಗಿದ್ದು ಅರ್ಜಿ ಸಲ್ಲಿಕೆಯನ್ನು ಅ.20 ರವರೆಗೆ ವಿಸ್ತರಿಸಲಾಗಿದೆ. ಈಗಾಗಲೇ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಅರ್ಜಿ ಸಂಖ್ಯೆಯನ್ನು ಇಲಾಖೆಯ ವೆಬ್ಸೈಟ್ https://karnemakaone.kar.nic.in/abcd ನಲ್ಲಿ ನಮೂದಿಸಿ ಮೊದಲಿಗೆ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ, ಎರಡನೇ ಹಂತದಲ್ಲಿ ಸಹಿ ಹಾಗೂ ಭಾವಚಿತ್ರವನ್ನು ಅಪ್ ಲೋಡ್ ಮಾಡಿ ಕಡ್ಡಾಯವಾಗಿ ಇ-ಸೈನ್ ಹಾಕಿದ ಬಳಿಕ ಮೂರನೇ ಹಂತದಲ್ಲಿ ಸಂಬಂಧಪಟ್ಟ ಎಲ್ಲಾ ದಾಖಲೆಗಳನ್ನು ಅಪ್ ಲೋಡ್ ಮಾಡಿ, ನಾಲ್ಕನೇ ಹಂತದಲ್ಲಿ ಅರ್ಜಿಗಳನ್ನು ಮುದ್ರಿಸಬಹುದಾಗಿದ್ದು, ಅಪೂರ್ಣ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಸ್ವಾತಂತ್ರ್ಯ ಪೂರ್ವದಲ್ಲಿ ಕನ್ನಡ ಸಾಹಿತ್ಯ ಕೃಷಿ ಆರಂಭಿಸಿದ ಡಾ. ಶಿವರಾಮ ಕಾರಂತರು ಈ ನೆಲದ ಸಂಸ್ಕೃತಿಯನ್ನು ತಮ್ಮ ಕೃತಿಗಳಲ್ಲಿ ಅಭಿವ್ಯಕ್ತಗೊಳಿಸಿದ್ದಾರೆ. ಇಂದಿನ ಯುವಜನಾಂಗ ಅಧ್ಯಯನ ಮಾಡಿದಲ್ಲಿ ಅವರಿಗೆ ಸೃಜನಶೀಲ ಬರವಣಿಗೆಗೆ ಪ್ರೇರಣೆಯಾಗಬಹುದು ಎಂದು ಮಾಹೆಯ ಗಾಂಧಿ ಅಧ್ಯಯನ ಕೇಂದ್ರ ನಿರ್ದೇಶಕ ಡಾ. ವರದೇಶ್ ಹಿರೇಗಂಗೆ ಹೇಳಿದರು. ಅವರು ಕನ್ನಡ ಸಂಸ್ಕೃತಿ ಇಲಾಖೆಯ ಡಾ. ಶಿವರಾಮ ಕಾರಂತ ಟ್ರಸ್ಟ್ ನ ಯುವ ಬರಹಗಾರರ ಸಮಾವೇಶ ಮತ್ತು ಕಾರಂತ ಅಧ್ಯಯನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮಣಿಪಾಲ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಆಡಳಿತ ಅಧಿಕಾರಿಯಾದ ಡಾ. ಕೆ. ಶ್ರೀಧರ್ ಪೈ ಅವರು ಮಾತನಾಡಿ, ಕಾರಂತರ ಬಹುಮುಖ ಪ್ರತಿಭೆ ಇಂದಿನ ವಿದ್ಯಾರ್ಥಿಗಳಿಗೆ ಪರಿಚಯವಾಗಲು ಈ ಶಿಬಿರ ಪೂರಕವಾಗಿದೆ ಎಂದು ಶುಭ ಹಾರೈಸಿದರು. ಎಂ.ಜಿ.ಎಂಸಂಧ್ಯಾಕಾಲೇಜಿನ ಪ್ರಾಂಶುಪಾಲರಾದ ಡಾ. ದೇವಿದಾಸ್ ಎಸ್. ನಾಯಕ್ ಅವರು ಅಧ್ಯಕ್ಷತೆ ವಹಿಸಿದ್ದರು. ಡಾ. ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷರಾದ ಡಾ. ಗಣನಾಥ ಎಕ್ಕಾರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಗರ್ಭಿಣಿಯರು ಸೇರಿದಂತೆ ಮಕ್ಕಳ ಪೌಷ್ಟಿಕಾಹಾರ ಸಮತೋಲನಕ್ಕಾಗಿ ಪ್ರಧಾನಮಂತ್ರಿಗಳು ಪೋಷಣ್ ಅಭಿಯಾನವನ್ನು ಅನುಷ್ಠಾನಗೊಳಿಸಿ ನಿರಂತರವಾಗಿ ಜನರಿಗೆ ತಲುಪಿದಾಗ ಯಶಸ್ಸು ಕಾಣಲು ಸಾಧ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಇಲಾಖೆ ಉಡುಪಿ ಜಿಲ್ಲಾ ನಿರೂಪಣಾಧಿಕಾರಿ ಅನುರಾಧ ಹಾದಿಮನಿ ಹೇಳಿದರು. ಅವರು ಗುರುವಾರ ಸಾಲಿಗ್ರಾಮ ಪಟ್ಟಣಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ಜಿಲ್ಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಡುಪಿ ಜಿಲ್ಲೆ ನರು ಅಭಿವೃದ್ಧಿ ಯೋಜನೆ ಬ್ರಹ್ಮಾವರ, ಸಾಲಿಗ್ರಾಮಪ್ರಾಥಮಿಕ ಆರೋಗ್ಯ ಕೇಂದ್ರ, ಸಾಲಿಗ್ರಾಮ ಪಟ್ಟಣ ಪಂಚಾಯತ್ ಇವರ ಸಹಯೋಗದೊಂದಿಗೆ ಪೋಷಣ್ ಅಭಿಯಾನ, ಪೋಷಣ್ ಮಾಸಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಪರಿಸರಕ್ಕೆ ಪೂರಕವಾದ ವಾತಾವರಣ ಸೃಷ್ಠಿಸಲು ಸಲುವಾಗಿ ತಾಯಿ ಹೆಸರಿನಲ್ಲಿ ಗಿಡ ನಡುವ ಸಂಕಲ್ಪಕ್ಕೆ ಕರೆ ನೀಡಿ ಗ್ರಾಮಗ್ರಾಮದಲ್ಲಿ ಪೋಷಣ್ ಯೋಜನೆ ಪರಿಣಾಮಕಾರಿಯಾಗಿ ಕಾರ್ಯಾಚರಿಸುತ್ತಿದೆ ಇದರ ಪ್ರಯೋಜನ ಪಡೆಯುವಂತೆ ತಾಯಂದಿರರಿಗೆ ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಾಲಿಗ್ರಾಮ ಪಟ್ಟಣಪಂಚಾಯತ್ ಅಧ್ಯಕ್ಷೆ ಸುಕನ್ಯಾ ಜೆ. ಶೆಟ್ಟಿ ವಹಿಸಿದ್ದರು. ಮುಖ್ಯ ಅಭ್ಯಾಗತರಾಗಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ರಾಷ್ಟ್ರೀಯ ಸೇವಾ ಯೋಜನೆ ಪ್ರಯುಕ್ತ ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ವತಿಯಿಂದ ನಡೆದ ‘ನಶಾ ಮುಕ್ತ ಭಾರತ ಅಭಿಯಾನ’ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭವು ಕಾರ್ಕಳದ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಇತ್ತೀಚಿಗೆ ಜರುಗಿತು. ಉಡುಪಿ ಜಿಲ್ಲೆಯ ಉಪನಿರ್ದೇಶಕರಾದ ಮಾರುತಿ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ‘ವಿದ್ಯಾರ್ಥಿ ಜೀವನದಲ್ಲಿ ಇಂತಹ ಶಿಬಿರಗಳು ನೈಜ ಜೀವನದ ಪಾಠ ಕಲಿಸುವ ಪಾಠಶಾಲೆಯಂತಿವೆ. ಸಮಾಜ ಸೇವೆ ಎಂದರೆ ಕೇವಲ ಒಂದು ದಿನದ ಕಾರ್ಯಕ್ರಮವಲ್ಲ. ಅದು ಜೀವನಪೂರ್ತಿ ಅಳವಡಿಸಿಕೊಳ್ಳಬೇಕಾದ ಮನೋಭಾವ’ ಎಂದು ಕರೆ ನೀಡಿದರು. ಸಂಸ್ಥೆಯ ಸಹ ಸಂಸ್ಥಾಪಕರಾದ ಅಶ್ವತ್ ಎಸ್.ಎಲ್ ಅವರು ತಮ್ಮ ಪ್ರಾಸ್ತಾವಿಕ ನುಡಿಯಲ್ಲಿ ‘ಸಮಾಜಕ್ಕೆ ಕೊಡುಗೆ ನೀಡುವ ಮನೋಭಾವ ಬೆಳೆಸಿದರೆ, ಶಿಕ್ಷಣದ ಗುರಿ ಸಾರ್ಥಕವಾಗುತ್ತದೆ’ ಎಂದು ಹೇಳಿದರು. ಮುಖ್ಯ ಅತಿಥಿ ಮುನಿಯಾಲು ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಹಾಗೂ ಬಂಟ್ಸ್ ಕೋ ಆಪರೇಟಿವ್ ಸೊಸೈಟಿಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕೋಟ ಹದಿನಾಲ್ಕು ಗ್ರಾಮ ಹಾಗೂ ವಡ್ಡರ್ಸೆ, ಬನ್ನಾಡಿ ಗ್ರಾಮಗಳ ವ್ಯಾಪ್ತಿಯನ್ನು ಹೊಂದಿರುವ ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ ಇದರ ಅಧ್ಯಕ್ಷರಾಗಿ ಜಿ. ಪಟ್ಟಾಭಿರಾಮ ಸೋಮಯಾಜಿ ಗುಂಡ್ಮಿ ಅವರು ಮುಂದಿನ ಮೂರು ವರ್ಷ ಅವಧಿಗೆ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿ ಕೆ. ರಾಜಾರಾಮ ಐತಾಳ ಕೋಟತಟ್ಟು ಪಡುಕರೆ, ಜೊತೆ ಕಾರ್ಯದರ್ಶಿ ಪಿ.ಕೃಷ್ಣ ಪ್ರಸಾದ ಹೇಳೆ೯ ಪಾರಂಪಳ್ಳಿ, ಕೋಶಾಧಿಕಾರಿ ಕೆ. ನಾಗರಾಜ ಉಪಾಧ್ಯಾ ಕಾಕ೯ಡ, ಉಪಾಧ್ಯಕ್ಷರುಗಳಾಗಿ ಸಿ.ಸುಬ್ರಾಯ ಉರಾಳ ಚಿತ್ರಪಾಡಿ ಪಿ. ಚಂದ್ರಶೇಖರ ಹೊಳ್ಳ ಪಾಂಡೇಶ್ವರ, ಗೌರವ ಸಲಹೆಗಾರರಾದ ಯಂ. ಶಿವರಾಮ ಉಡುಪ ಇವರ ಅಧ್ಯಕ್ಷತೆಯಲ್ಲಿ ನಡೆದ ಗ್ರಾಮ ಪ್ರತಿನಿಧಿಗಳ ಸಭೆಯಲ್ಲಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಹಿಂದಿನ ಸಾಲಿನ ಎಲ್ಲಾ ಗ್ರಾಮ ಪ್ರತಿನಿಧಿಗಳನ್ನು ಮುಂದಿನ ಮೂರು ವರ್ಷಕ್ಕೆ ಮುಂದುವರಿಸಲಾಯಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ವಶಪಡಿಸಿಕೊಂಡ ಸುಮಾರು 9 ಕೆಜಿ 937 ಗ್ರಾಂ 209 ಮಿಲಿಗ್ರಾಂ ತೂಕದ ಅಂದಾಜು ಮೌಲ್ಯ ರೂಪಾಯಿ 7,12,963 ಬೆಲೆಯ ಗಾಂಜಾ, 345 ಗ್ರಾಂ 596 ಮಿಲಿಗ್ರಾಂ ಎಂ.ಡಿ.ಎಂ.ಎ. ಅಂದಾಜು ಮೌಲ್ಯ ರೂಪಾಯಿ 8,08,464 ಹಾಗೂ ಮೌಲ್ಯರಹಿತ 61 ಗ್ರಾಂ 430 ಮಿಲಿಗ್ರಾಂ ಬಿಳಿ ಪೌಡರ್ನ್ನು ಪಡುಬಿದ್ರಿ ಠಾಣಾ ಸರಹದ್ದಿನ ಮೆ. ಆಯುಷ್ ಎನ್ವಿರೋಟೆಕ್ ಪ್ರೈ. ಲಿ., ಪಡುಬಿದ್ರಿ ಎಂಬಲ್ಲಿ ನಾಶಪಡಿಸಲಾಯಿತು. ನಾಶಪಡಿಸಿದ ಮಾದಕ ದ್ರವ್ಯದ ಒಟ್ಟು ಅಂದಾಜು ಮೌಲ್ಯ ರೂಪಾಯಿ 15,21,427 ಆಗಿರುತ್ತದೆ ಎಂದು ಉಡುಪಿ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲಾ ಡ್ರಗ್ ಡಿಸ್ಪೋಸಲ್ ಕಮಿಟಿಯ ಅಧ್ಯಕ್ಷರಾದ ಹರಿರಾಮ್ ಶಂಕರ್ ತಿಳಿಸಿದ್ದಾರೆ. ಉಡುಪಿ ನಗರ ಠಾಣೆಯ 03 ಪ್ರಕರಣ, ಸೆನ್ ಠಾಣೆಯ 2 ಪ್ರಕರಣ ಹಾಗೂ ಮಲ್ಪೆ, ಪಡುಬಿದ್ರಿ, ಶಿರ್ವಾ, ಕಾರ್ಕಳ ನಗರ ಹಾಗೂ ಮಣಿಪಾಲ ಠಾಣೆಯ ತಲಾ 01 ಪ್ರಕರಣ ಸೇರಿ ಒಟ್ಟು 10 ಪ್ರಕರಣಗಳಲ್ಲಿ ವಶಪಡಿಸಿಕೊಂಡ…
