ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಉಡುಪಿ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಂಗನವಾಡಿ ಕೇಂದ್ರಗಳಲ್ಲಿ ತೆರವಾಗಿರುವ ಒಟ್ಟು 16 ಅಂಗನವಾಡಿ ಕಾರ್ಯಕರ್ತೆ ಹಾಗೂ 131 ಅಂಗನವಾಡಿ ಸಹಾಯಕಿಯರ ಹುದ್ದೆಗೆ ಆನ್ಲೈನ್ ನಲ್ಲಿ ಅರ್ಜಿ ಆಹ್ವಾನಿಸಲಾಗಿದ್ದು ಇದುವರೆಗೆ 392 ಅಪೂರ್ಣ ಅರ್ಜಿಗಳು ಸ್ವೀಕೃತವಾಗಿರುವುದರಿಂದ ಅವುಗಳು ಪರಿಶೀಲನೆಗೆ ಅಲಭ್ಯವಾಗಿದ್ದು ಅರ್ಜಿ ಸಲ್ಲಿಕೆಯನ್ನು ಅ.20 ರವರೆಗೆ ವಿಸ್ತರಿಸಲಾಗಿದೆ. ಈಗಾಗಲೇ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಅರ್ಜಿ ಸಂಖ್ಯೆಯನ್ನು ಇಲಾಖೆಯ ವೆಬ್ಸೈಟ್ https://karnemakaone.kar.nic.in/abcd ನಲ್ಲಿ ನಮೂದಿಸಿ ಮೊದಲಿಗೆ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ, ಎರಡನೇ ಹಂತದಲ್ಲಿ ಸಹಿ ಹಾಗೂ ಭಾವಚಿತ್ರವನ್ನು ಅಪ್ ಲೋಡ್ ಮಾಡಿ ಕಡ್ಡಾಯವಾಗಿ ಇ-ಸೈನ್ ಹಾಕಿದ ಬಳಿಕ ಮೂರನೇ ಹಂತದಲ್ಲಿ ಸಂಬಂಧಪಟ್ಟ ಎಲ್ಲಾ ದಾಖಲೆಗಳನ್ನು ಅಪ್ ಲೋಡ್ ಮಾಡಿ, ನಾಲ್ಕನೇ ಹಂತದಲ್ಲಿ ಅರ್ಜಿಗಳನ್ನು ಮುದ್ರಿಸಬಹುದಾಗಿದ್ದು, ಅಪೂರ್ಣ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಸ್ವಾತಂತ್ರ್ಯ ಪೂರ್ವದಲ್ಲಿ ಕನ್ನಡ ಸಾಹಿತ್ಯ ಕೃಷಿ ಆರಂಭಿಸಿದ ಡಾ. ಶಿವರಾಮ ಕಾರಂತರು ಈ ನೆಲದ ಸಂಸ್ಕೃತಿಯನ್ನು ತಮ್ಮ ಕೃತಿಗಳಲ್ಲಿ ಅಭಿವ್ಯಕ್ತಗೊಳಿಸಿದ್ದಾರೆ. ಇಂದಿನ ಯುವಜನಾಂಗ ಅಧ್ಯಯನ ಮಾಡಿದಲ್ಲಿ ಅವರಿಗೆ ಸೃಜನಶೀಲ ಬರವಣಿಗೆಗೆ ಪ್ರೇರಣೆಯಾಗಬಹುದು ಎಂದು ಮಾಹೆಯ ಗಾಂಧಿ ಅಧ್ಯಯನ ಕೇಂದ್ರ ನಿರ್ದೇಶಕ ಡಾ. ವರದೇಶ್ ಹಿರೇಗಂಗೆ ಹೇಳಿದರು. ಅವರು ಕನ್ನಡ ಸಂಸ್ಕೃತಿ ಇಲಾಖೆಯ ಡಾ. ಶಿವರಾಮ ಕಾರಂತ ಟ್ರಸ್ಟ್ ನ ಯುವ ಬರಹಗಾರರ ಸಮಾವೇಶ ಮತ್ತು ಕಾರಂತ ಅಧ್ಯಯನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮಣಿಪಾಲ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಆಡಳಿತ ಅಧಿಕಾರಿಯಾದ ಡಾ. ಕೆ. ಶ್ರೀಧರ್ ಪೈ ಅವರು ಮಾತನಾಡಿ, ಕಾರಂತರ ಬಹುಮುಖ ಪ್ರತಿಭೆ ಇಂದಿನ ವಿದ್ಯಾರ್ಥಿಗಳಿಗೆ ಪರಿಚಯವಾಗಲು ಈ ಶಿಬಿರ ಪೂರಕವಾಗಿದೆ ಎಂದು ಶುಭ ಹಾರೈಸಿದರು. ಎಂ.ಜಿ.ಎಂಸಂಧ್ಯಾಕಾಲೇಜಿನ ಪ್ರಾಂಶುಪಾಲರಾದ ಡಾ. ದೇವಿದಾಸ್ ಎಸ್. ನಾಯಕ್ ಅವರು ಅಧ್ಯಕ್ಷತೆ ವಹಿಸಿದ್ದರು. ಡಾ. ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷರಾದ ಡಾ. ಗಣನಾಥ ಎಕ್ಕಾರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಗರ್ಭಿಣಿಯರು ಸೇರಿದಂತೆ ಮಕ್ಕಳ ಪೌಷ್ಟಿಕಾಹಾರ ಸಮತೋಲನಕ್ಕಾಗಿ ಪ್ರಧಾನಮಂತ್ರಿಗಳು ಪೋಷಣ್ ಅಭಿಯಾನವನ್ನು ಅನುಷ್ಠಾನಗೊಳಿಸಿ ನಿರಂತರವಾಗಿ ಜನರಿಗೆ ತಲುಪಿದಾಗ ಯಶಸ್ಸು ಕಾಣಲು ಸಾಧ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಇಲಾಖೆ ಉಡುಪಿ ಜಿಲ್ಲಾ ನಿರೂಪಣಾಧಿಕಾರಿ ಅನುರಾಧ ಹಾದಿಮನಿ ಹೇಳಿದರು. ಅವರು ಗುರುವಾರ ಸಾಲಿಗ್ರಾಮ ಪಟ್ಟಣಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ಜಿಲ್ಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಡುಪಿ ಜಿಲ್ಲೆ ನರು ಅಭಿವೃದ್ಧಿ ಯೋಜನೆ ಬ್ರಹ್ಮಾವರ, ಸಾಲಿಗ್ರಾಮಪ್ರಾಥಮಿಕ ಆರೋಗ್ಯ ಕೇಂದ್ರ, ಸಾಲಿಗ್ರಾಮ ಪಟ್ಟಣ ಪಂಚಾಯತ್ ಇವರ ಸಹಯೋಗದೊಂದಿಗೆ ಪೋಷಣ್ ಅಭಿಯಾನ, ಪೋಷಣ್ ಮಾಸಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಪರಿಸರಕ್ಕೆ ಪೂರಕವಾದ ವಾತಾವರಣ ಸೃಷ್ಠಿಸಲು ಸಲುವಾಗಿ ತಾಯಿ ಹೆಸರಿನಲ್ಲಿ ಗಿಡ ನಡುವ ಸಂಕಲ್ಪಕ್ಕೆ ಕರೆ ನೀಡಿ ಗ್ರಾಮಗ್ರಾಮದಲ್ಲಿ ಪೋಷಣ್ ಯೋಜನೆ ಪರಿಣಾಮಕಾರಿಯಾಗಿ ಕಾರ್ಯಾಚರಿಸುತ್ತಿದೆ ಇದರ ಪ್ರಯೋಜನ ಪಡೆಯುವಂತೆ ತಾಯಂದಿರರಿಗೆ ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಾಲಿಗ್ರಾಮ ಪಟ್ಟಣಪಂಚಾಯತ್ ಅಧ್ಯಕ್ಷೆ ಸುಕನ್ಯಾ ಜೆ. ಶೆಟ್ಟಿ ವಹಿಸಿದ್ದರು. ಮುಖ್ಯ ಅಭ್ಯಾಗತರಾಗಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ರಾಷ್ಟ್ರೀಯ ಸೇವಾ ಯೋಜನೆ ಪ್ರಯುಕ್ತ ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ವತಿಯಿಂದ ನಡೆದ ‘ನಶಾ ಮುಕ್ತ ಭಾರತ ಅಭಿಯಾನ’ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭವು ಕಾರ್ಕಳದ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಇತ್ತೀಚಿಗೆ ಜರುಗಿತು. ಉಡುಪಿ ಜಿಲ್ಲೆಯ ಉಪನಿರ್ದೇಶಕರಾದ ಮಾರುತಿ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ‘ವಿದ್ಯಾರ್ಥಿ ಜೀವನದಲ್ಲಿ ಇಂತಹ ಶಿಬಿರಗಳು ನೈಜ ಜೀವನದ ಪಾಠ ಕಲಿಸುವ ಪಾಠಶಾಲೆಯಂತಿವೆ. ಸಮಾಜ ಸೇವೆ ಎಂದರೆ ಕೇವಲ ಒಂದು ದಿನದ ಕಾರ್ಯಕ್ರಮವಲ್ಲ. ಅದು ಜೀವನಪೂರ್ತಿ ಅಳವಡಿಸಿಕೊಳ್ಳಬೇಕಾದ ಮನೋಭಾವ’ ಎಂದು ಕರೆ ನೀಡಿದರು. ಸಂಸ್ಥೆಯ ಸಹ ಸಂಸ್ಥಾಪಕರಾದ ಅಶ್ವತ್ ಎಸ್.ಎಲ್ ಅವರು ತಮ್ಮ ಪ್ರಾಸ್ತಾವಿಕ ನುಡಿಯಲ್ಲಿ ‘ಸಮಾಜಕ್ಕೆ ಕೊಡುಗೆ ನೀಡುವ ಮನೋಭಾವ ಬೆಳೆಸಿದರೆ, ಶಿಕ್ಷಣದ ಗುರಿ ಸಾರ್ಥಕವಾಗುತ್ತದೆ’ ಎಂದು ಹೇಳಿದರು. ಮುಖ್ಯ ಅತಿಥಿ ಮುನಿಯಾಲು ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಹಾಗೂ ಬಂಟ್ಸ್ ಕೋ ಆಪರೇಟಿವ್ ಸೊಸೈಟಿಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕೋಟ ಹದಿನಾಲ್ಕು ಗ್ರಾಮ ಹಾಗೂ ವಡ್ಡರ್ಸೆ, ಬನ್ನಾಡಿ ಗ್ರಾಮಗಳ ವ್ಯಾಪ್ತಿಯನ್ನು ಹೊಂದಿರುವ ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ ಇದರ ಅಧ್ಯಕ್ಷರಾಗಿ ಜಿ. ಪಟ್ಟಾಭಿರಾಮ ಸೋಮಯಾಜಿ ಗುಂಡ್ಮಿ ಅವರು ಮುಂದಿನ ಮೂರು ವರ್ಷ ಅವಧಿಗೆ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿ ಕೆ. ರಾಜಾರಾಮ ಐತಾಳ ಕೋಟತಟ್ಟು ಪಡುಕರೆ, ಜೊತೆ ಕಾರ್ಯದರ್ಶಿ ಪಿ.ಕೃಷ್ಣ ಪ್ರಸಾದ ಹೇಳೆ೯ ಪಾರಂಪಳ್ಳಿ, ಕೋಶಾಧಿಕಾರಿ ಕೆ. ನಾಗರಾಜ ಉಪಾಧ್ಯಾ ಕಾಕ೯ಡ, ಉಪಾಧ್ಯಕ್ಷರುಗಳಾಗಿ ಸಿ.ಸುಬ್ರಾಯ ಉರಾಳ ಚಿತ್ರಪಾಡಿ ಪಿ. ಚಂದ್ರಶೇಖರ ಹೊಳ್ಳ ಪಾಂಡೇಶ್ವರ, ಗೌರವ ಸಲಹೆಗಾರರಾದ ಯಂ. ಶಿವರಾಮ ಉಡುಪ ಇವರ ಅಧ್ಯಕ್ಷತೆಯಲ್ಲಿ ನಡೆದ ಗ್ರಾಮ ಪ್ರತಿನಿಧಿಗಳ ಸಭೆಯಲ್ಲಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಹಿಂದಿನ ಸಾಲಿನ ಎಲ್ಲಾ ಗ್ರಾಮ ಪ್ರತಿನಿಧಿಗಳನ್ನು ಮುಂದಿನ ಮೂರು ವರ್ಷಕ್ಕೆ ಮುಂದುವರಿಸಲಾಯಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ವಶಪಡಿಸಿಕೊಂಡ ಸುಮಾರು 9 ಕೆಜಿ 937 ಗ್ರಾಂ 209 ಮಿಲಿಗ್ರಾಂ ತೂಕದ ಅಂದಾಜು ಮೌಲ್ಯ ರೂಪಾಯಿ 7,12,963 ಬೆಲೆಯ ಗಾಂಜಾ, 345 ಗ್ರಾಂ 596 ಮಿಲಿಗ್ರಾಂ ಎಂ.ಡಿ.ಎಂ.ಎ. ಅಂದಾಜು ಮೌಲ್ಯ ರೂಪಾಯಿ 8,08,464 ಹಾಗೂ ಮೌಲ್ಯರಹಿತ 61 ಗ್ರಾಂ 430 ಮಿಲಿಗ್ರಾಂ ಬಿಳಿ ಪೌಡರ್ನ್ನು ಪಡುಬಿದ್ರಿ ಠಾಣಾ ಸರಹದ್ದಿನ ಮೆ. ಆಯುಷ್ ಎನ್ವಿರೋಟೆಕ್ ಪ್ರೈ. ಲಿ., ಪಡುಬಿದ್ರಿ ಎಂಬಲ್ಲಿ ನಾಶಪಡಿಸಲಾಯಿತು. ನಾಶಪಡಿಸಿದ ಮಾದಕ ದ್ರವ್ಯದ ಒಟ್ಟು ಅಂದಾಜು ಮೌಲ್ಯ ರೂಪಾಯಿ 15,21,427 ಆಗಿರುತ್ತದೆ ಎಂದು ಉಡುಪಿ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲಾ ಡ್ರಗ್ ಡಿಸ್ಪೋಸಲ್ ಕಮಿಟಿಯ ಅಧ್ಯಕ್ಷರಾದ ಹರಿರಾಮ್ ಶಂಕರ್ ತಿಳಿಸಿದ್ದಾರೆ. ಉಡುಪಿ ನಗರ ಠಾಣೆಯ 03 ಪ್ರಕರಣ, ಸೆನ್ ಠಾಣೆಯ 2 ಪ್ರಕರಣ ಹಾಗೂ ಮಲ್ಪೆ, ಪಡುಬಿದ್ರಿ, ಶಿರ್ವಾ, ಕಾರ್ಕಳ ನಗರ ಹಾಗೂ ಮಣಿಪಾಲ ಠಾಣೆಯ ತಲಾ 01 ಪ್ರಕರಣ ಸೇರಿ ಒಟ್ಟು 10 ಪ್ರಕರಣಗಳಲ್ಲಿ ವಶಪಡಿಸಿಕೊಂಡ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಗಂಗೊಳ್ಳಿಯಲ್ಲಿ ನಡೆದ ದೋಣಿ ದುರಂತದಲ್ಲಿ ಮೃತರಾದ ದಿ. ಸುರೇಶ್ ಖಾರ್ವಿ ಅವರ ಮಗಳಾದ ಶ್ರೀಯಾ ಜನತಾ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿ.ಯು.ಸಿ.ವಿಜ್ಞಾನ ವಿಭಾಗದಲ್ಲಿ ವ್ಯಾಸಾಂಗ ಮಾಡುತ್ತಿದ್ದು, ಈ ವಿದ್ಯಾರ್ಥಿನಿಯ ತಂದೆ ಮೃತರಾದ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರು ವಿದ್ಯಾರ್ಥಿನಿಯ ಮನೆಗೆ ಭೇಟಿ ನೀಡಿ ಎರಡು ವರ್ಷದ ಸಂಪೂರ್ಣ ಕಾಲೇಜಿನ ಶುಲ್ಕವನ್ನು( ಕಾಲೇಜು ಶುಲ್ಕ, ಸಮವಸ್ತ್ರ, ಮಧ್ಯಾಹ್ನ ಊಟ, ವಾಹನ ಶುಲ್ಕ) ಭರಿಸುವುದಾಗಿ ಆಶ್ವಾಸನೆ ಕೊಟ್ಟಿದ್ದರು. ಅಂತೆಯೇ ಈ ದಿನ ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿಯ ಕಛೇರಿಯಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಪ್ರಾಂಶುಪಾಲರಾದ ಗಣೇಶ ಮೊಗವೀರ ಅವರು ಚೆಕ್ ಹಸ್ತಾಂತರಿಸುವ ಮೂಲಕ ನುಡಿದಂತೆ ನಡೆದು, ಎರಡು ವರ್ಷಗಳ ಪದವಿಪೂರ್ವ ಶಿಕ್ಷಣದ ಸಂಪೂರ್ಣ ಜವಬ್ದಾರಿಯನ್ನು ವಹಿಸಿಕೊಂಡು ಮಾನವೀಯತೆ ಮೆರೆದಿದ್ದಾರೆ. ಈ ಸಂದರ್ಭದಲ್ಲಿ ಕಾಲೇಜಿನ ಉಪ ಪ್ರಾಂಶುಪಾಲರು, ಬೋಧಕ, ಬೋಧಕೇತರ ವೃಂದದವರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು:ಗ್ರಾಮ ಪಂಚಾಯತ್ ಉಪ್ಪುಂದ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕುಂದಾಪುರ ಹಾಗೂ ಉಪ್ಪುಂದ ಗ್ರಾಮ ಪಂಚಾಯತ್ ವ್ಯಾಪ್ತಿಯ 9 ಅಂಗನವಾಡಿ ಕೇಂದ್ರಗಳ ಸಹಯೋಗದೊಂದಿಗೆ ಪೋಷಣ್ ಅಭಿಯಾನ ಸೀಮಂತ ಕಾರ್ಯಕ್ರಮ ಮತ್ತು ಅನ್ನಪ್ರಾಶನ ಕಾರ್ಯಕ್ರಮವನ್ನು ಇತ್ತೀಚಿಗೆ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮೋಹನ್ ಚಂದ್ರ ಅವರು ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರು, ಸೀಮಂತ ಕಾರ್ಯಕ್ರಮಕ್ಕೆ ಬಂದಿರುವ ಗರ್ಭಿಣಿಯಾದ ಪೂರ್ಣಿಮಾ, ಅನ್ನ ಪ್ರಾಶನ ಕಾರ್ಯಕ್ರಮಕ್ಕೆ ಬಂದಿರುವ ಮಗು ನವಮಿ ಹಾಗೂ ಮಗುವಿನ ತಾಯಿ ಹಾಗೂ ವೇದಿಕೆ ಮೇಲಿರುವ ಎಲ್ಲಾ ಗಣ್ಯರು ಸೇರಿ ನೆರವೇರಿಸಿದರು. ನಂತರ 4 ಮಕ್ಕಳಾದ ಶಬರೀಶ್ ಎಂ., ನವಮಿ, ಆದಿತ್ಯ ಎನ್. ನಾಯಕ್, ಚತುರ್ವಿ ಮಕ್ಕಳಿಗೆ ಅನ್ನ ಪ್ರಾಶನ ಕಾರ್ಯಕ್ರಮವನ್ನು ವೇದಿಕೆಯಲ್ಲಿರುವ ಎಲ್ಲಾ ಗಣ್ಯರು ಮತ್ತು ಅಂಗನವಾಡಿ ಕಾರ್ಯಕರ್ತೆಯರು ಸೇರಿ ನೆರವೇರಿಸಲಾಯಿತು. ಅನ್ನ ಪ್ರಾಶನ ಮಾಡಲ್ಪಟ್ಟ ಮಕ್ಕಳಿಗೆ ಬೌಲ್ ಮತ್ತು ಸ್ಪೂನ್ ಅನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮೋಹನ್ ಚಂದ್ರ ಅವರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಪ್ರತಿಭೆ ಇರುವವರನ್ನು ಸ್ಮರಿಸಿದರೆ ಯುವ ಜನಾಂಗಕ್ಕೆ ಪ್ರೇರಣೆಯಾಗಲಿದೆ. ದಾನಿಗಳ ಸಹಕಾರ, ಪ್ರೇಕಕ ಅಭಿಮಾನಿಗಳಿಂದ ಯಕ್ಷಗಾನ ಕಲೆ ಬೆಳೆಯಬೇಕು ಎಂದು ಕುಂದಾಪುರದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಹೇಳಿದರು. ಅವರು ಗುಂಡ್ಮಿಯ ಸದಾನಂದ ರಂಗ ಮಂಟಪದಲ್ಲಿ ಹಂಗಾರಕಟ್ಟೆ ಐರೋಡಿಯ ಯಕ್ಷಗಾನ ಕಲಾಕೇಂದ್ರದ ವತಿಯಿಂದ ನಡೆಯುತ್ತಿರುವ ನಾಲ್ಕನೇ ವರ್ಷದ ಯಕ್ಷಗಾನ ಸಪ್ತೋತ್ಸವದ ನಮ್ಮ ಕಾಳಿಂಗ ನಾವಡ ಸಂಸ್ಮರಣಾ ಕಾರ್ಯಕ್ರಮದಲ್ಲಿ ಮಾತನಾಡಿ, ಯಕ್ಷಗಾನ ಕಲಾ ಕೇಂದ್ರ ಅನೇಕ ಕಲಾವಿದರನ್ನು ಯಕ್ಷಗಾನಕ್ಕೆ ಕೊಡುಗೆಯಾಗಿ ನೀಡಿದೆ. ಕಾಳಿಂಗ ನಾವುಡರು ನಮ್ಮನ್ನು ಅಗಲಿ 30 ವರ್ಷ ಸಂದರೂ ಅವರು ಇಂದಿಗೂ ಅಮರರಾಗಿದ್ದಾರೆ ಎಂದರು. ಕಾಳಿಂಗ ನಾವಡ ಸಂಸ್ಮರಣೆಯನ್ನು ಭಾಗವತ ಹಾಲಾಡಿ ರಾಘವೇಂದ್ರ ಮಯ್ಯ ಗೈದರು. ಪತ್ರಕರ್ತ ಚಿತ್ತೂರು ಪ್ರಭಾಕರ ಆಚಾರ್ ಅಭಿನಂದನಾ ನುಡಿಗಳನ್ನಾಡಿದರು. ಸಭೆಯ ಅಧ್ಯಕ್ಷತೆಯನ್ನು ನಮ್ಮ ಕಾಳಿಂಗ ನಾವಡ ಪ್ರಶಸ್ತಿ ಸಮಿತಿ ಅಧ್ಯಕ್ಷ ಕಾರ್ಕಡ ರಾಜು ಪೂಜಾರಿ ವಹಿಸಿದ್ದರು. ಇದೇ ವೇಳೆ ನಮ್ಮ ಕಾಳಿಂಗ ನಾವಡ ಪ್ರಶಸ್ತಿಯನ್ನು ಯಕ್ಷಗಾನ ಕ್ಷೇತ್ರದ ಸಾಧಕ ಬಿದ್ಕಲ್ಕಟ್ಟೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದಲ್ಲಿ ಎಂ.ಬಿ.ಎ ವಿಭಾಗದ ವಿದ್ಯಾರ್ಥಿಗಳಿಗೆ ಒಂದು ದಿನದ ಇಂಡಸ್ಟ್ರಿಯಲ್ ವಿಸಿಟ್ ಹಮ್ಮಿಕೊಳ್ಳಲಾಯಿತು. ಪಡುಬಿದ್ರೆಯಲ್ಲಿರುವ ಪಿಪಿ ವುವನ್ ಮತ್ತು ಎಫ್ಐಬಿಸಿ ಬ್ಯಾಗ್ಸ್ ತಯಾರಿಕಾ ಕೈಗಾರಿಕೆಯಾದ ಬ್ರೈಟ್ ಫ್ಲೆಕ್ಸಿ ಇಂಟರ್ನ್ಯಾಷನಲ್ ಪ್ರೈವೇಟ್ ಲಿಮಿಟೆಡ್ ಇಲ್ಲಿಗೆ ದ್ವಿತೀಯ ವರ್ಷದ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗಲಾಯಿತು. ಕೈಗಾರಿಕೆಯಲ್ಲಿ ಬ್ಯಾಗ್ ಗಳನ್ನು ಹೇಗೆ ತಯಾರಿಸುತ್ತಾರೆ ಎಂಬುದನ್ನು ನೇರವಾಗಿ ತೋರಿಸುವುದರ ಮೂಲಕ ಚೆನ್ನಾಗಿ ವಿದ್ಯಾರ್ಥಿಗಳಿಗೆ ವಿವರಿಸಲಾಯಿತು. ವಿದ್ಯಾರ್ಥಿಗಳು ಕೇವಲ ಪಠ್ಯಪುಸ್ತಕದ ಜ್ಞಾನವಲ್ಲದೆ ಪ್ರಾಯೋಗಿಕವಾಗಿ ಕಾರ್ಯನಿರ್ವಹಿಸುವ ಬಗೆಯನ್ನು ಅರಿತರು. ಈ ಕೈಗಾರಿಕಾ ಭೇಟಿಯ ಉಸ್ತುವಾರಿಯನ್ನು ಎಂ.ಬಿ.ಎ ವಿಭಾಗದ ಮುಖ್ಯಸ್ಥೆ ಡಾ. ಸುಚಿತ್ರ ಪೂಜಾರಿ ಮತ್ತು ಇತರೆ ಉಪನ್ಯಾಸಕರು ವಹಿಸಿದ್ದರು.
