Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕುಂಭಾಸಿ ಆನೆಗುಡ್ಡೆ ಶ್ರೀವಿನಾಯಕ ದೇವಸ್ಥಾನದಲ್ಲಿ ಜ.6 ಮಂಗಳವಾರದಂದು ಅಂಗಾರಕ ಸಂಕಷ್ಟಹರ ಚತುರ್ಥಿ ಪ್ರಯುಕ್ತ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಈ ಪ್ರಯುಕ್ತ ದೇವಳದಲ್ಲಿ ಲೋಕಕಲ್ಯಾಣಾರ್ಥ ಸಹಸ್ರ ನಾರಿಕೇಳ ಗಣಯಾಗ ನಡೆಯಲಿದ್ದು ಮಹಾ ಅನ್ನಸಂತರ್ಪಣೆ ಹಾಗೂ ರಾತ್ರಿ 8ಕ್ಕೆ ರಜತ ರಥೋತ್ಸವ ನಡೆಯಲಿದೆ. ಅಂಗಾರಕ ಸಂಕಷ್ಟಹರ ಚತುರ್ಥಿ ಪ್ರಯುಕ್ತ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸಂಜೆ 4.30ರಿಂದ 6ರತನಕ ಕುಂಭಾಸಿ ಶ್ರೀವಿಶ್ವೇಶ್ವರ ಮಹಿಳಾ ಭಜನಾ ಮಂಡಳಿ ಆನೆಗುಡ್ಡೆ ಕುಂಭಾಸಿ ಅವರಿಂದ ಭಜನಾ ಕಾರ್ಯಕ್ರಮ, ಉಡುಪಿ ನಾಗರಾಜ ಶೇಟ್ ಹಾಗೂ ಬಳಗದವರಿಂದ ಭಕ್ತಿ ಸಂಗೀತ ಕಾರ್ಯಕ್ರಮ ಜರುಗಲಿದೆ ಎಂದು ದೇವಳದ ಆಡಳಿತ ಅನುವಂಶಿಕ ಧರ್ಮದರ್ಶಿ ಕೆ. ಶ್ರೀರಮಣ ಉಪಧ್ಯಾಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮಕ್ಕಳಿಗೆ ಬಾಲ್ಯದಿಂದಲೇ ನಮ್ಮ ಕೌಟುಂಬಿಕ ವ್ಯವಸ್ಥೆಗಳು, ಸಂಸ್ಕೃತಿ, ಸಂಸ್ಕಾರಗಳ ಬಗ್ಗೆ ತಿಳಿಸಬೇಕು. ದೇಶದಲ್ಲಿನ ಪದ್ಧತಿ, ಅನ್ಯೋನ್ಯತೆ ಉಳಿದರೆ ಮಾತ್ರ ದೇಶ ಉಳಿಯುತ್ತದೆ. ದೇಶದ, ಸಮಾಜದ ಬೆಳವಣಿಗೆಗೆ ಪ್ರತಿಯೊಂದು ಸಮಾಜದ ಕೊಡುಗೆ ಇದೆ. ಜಾತಿ ಮನೆಯ ಹಾಗೂ ಸಮಾಜದ ಸಾಮರಸ್ಯ, ಸ್ವಾಸ್ಥ್ಯವನ್ನು ಗಟ್ಟಿ ಮಾಡಬೇಕೇ ಹೊರತು ಅದರ ಹೆಸರಿನಲ್ಲಿ ಬೇಧ ಮಾಡಬಾರದು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮಂಗಳೂರು ವಿಭಾಗ ಸಹ ಕಾರ್ಯವಾಹ ಹರಿಕೃಷ್ಣ ಹೇಳಿದರು. ಅವರು ಸೇವಾ ಸಂಗಮ ಟ್ರಸ್ಟ್ ಕುಂದಾಪುರ ಇವರ ಆಶ್ರಯದಲ್ಲಿ ಕುಂದಾಪುರ ರೋಟರಿ ಲಕ್ಷ್ಮೀ ನರಸಿಂಹ ಕಲಾ ಮಂದಿರದಲ್ಲಿ ಭಾನುವಾರ ನಡೆದ ಬಾಲಸಂಗಮ- ಮಾತೃಸಂಗಮ 2026 ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ವಕ್ತಾರರಾಗಿ ಮಾತನಾಡಿದರು. ಪ್ರಕೃತಿ ಉಳಿಸುವ ಜವಾಬ್ದಾರಿ ಎಲ್ಲರದ್ದಾಗಬೇಕು. ಸ್ವದೇಶಿ ವಸ್ತುಗಳನ್ನು ಉಪಯೋಗಿಸಿದರೆ ದೇಶದ ಏಳಿಗೆ, ಪ್ರಗತಿ ಸಾಧ್ಯವಿದೆ. ನಮ್ಮ ದೇಶದಲ್ಲಿ ಹೆಣ್ಣು ಮಕ್ಕಳನ್ನು ಮತ್ತು ತಾಯಂದಿರನ್ನು ಗೌರವಿಸಿ ಪೂಜೆ ಮಾಡುತ್ತೇವೆ. ಮಕ್ಕಳ ಮುಂದಿನ ಭವಿಷ್ಯ ರೂಪಿಸುವಲ್ಲಿ ತಾಯಂದಿರ ಪಾತ್ರ ಮಹತ್ವದ್ದಾಗಿದೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಸಲ್ಲ ಬದಲಾಗಿ ಜಾಗೃತರಾಗಿ ಕಾಪಾಡಿಕೊಳ್ಳಿ ಎಂದು ಕೋಟ ವಿವೇಕ ವಿದ್ಯಾಸಂಸ್ಥೆಯ ನಿವೃತ್ತ ಪ್ರಾಂಶುಪಾಲರಾದ ಚಿತ್ರಾ ಕಾರಂತ ಹೇಳಿದರು. ಅವರು ಭಾನುವಾರ ಪ್ರಾಥಮಿಕ ಆರೋಗ್ಯ ಕೇಂದ್ರ, ಕಾರ್ಕಡ ಸಾಲಿಗ್ರಾಮ ಇಲ್ಲಿ ಯೆನೆಪೋ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಗೆಳೆಯರ ಬಳಗ ಕಾರ್ಕಡ, ಸಾಲಿಗ್ರಾಮ  ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ, ಕಾರ್ಕಡ – ಸಾಲಿಗ್ರಾಮ ಇವರ ಸಂಯುಕ್ತ ಆಶ್ರಯದಲ್ಲಿ ಡಾ. ಕೋಟ ಶಿವರಾಮ ಕಾರಂತರ ಸ್ಮರಣಾರ್ಥ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಕಾರಂತರ ಬಗ್ಗೆ ಗೆಳೆಯರ ಬಳಗಕ್ಕೆ ಅಗಾಧ ಅಭಿಮಾನದ ಹಿನ್ನಲ್ಲೆಯಲ್ಲಿ ಕಳೆದ ಸಾಕಷ್ಟು ವರ್ಷಗಳಿಂದ ಇಂತಹ ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜಿಸುತ್ತಾ ಬಂದಿದ್ದಾರೆ ಇದು ಶ್ಲಾಘನಾರ್ಹ ಕಾರ್ಯ ಎಂದರು. ಸಭೆಯ ಅಧ್ಯಕ್ಷತೆಯನ್ನು ಗೆಳೆಯರ ಬಳಗ ಕಾರ್ಕಡ ಅಧ್ಯಕ್ಷ ಕೆ. ತಾರಾನಾಥ ಹೊಳ್ಳ ವಹಿಸಿ ಸ್ವಾಗತಿಸಿದರು. ಸಾಲಿಗ್ರಾಮ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಜಯಶೀಲಾ ಆಚಾರ್ಯ ಶುಭಾಶಂಸನೆಗೈದರು ಮುಖ್ಯ ಅತಿಥಿಗಳಾಗಿ ಯೆನೆಪೋಯ ವೈದ್ಯಕೀಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಹೆಬ್ರಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯ ಪ್ರಾಥಮಿಕ ವಿಭಾಗದ ಕೊಂಕಣಿ ಕಂಠಪಾಠ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ 6ನೇ ತರಗತಿಯ ವಿದ್ಯಾರ್ಥಿನಿ ಸನ್ನಿಧಿ ಖಾರ್ವಿ  ದ್ವಿತೀಯ ಸ್ಥಾನ ಪಡೆದಿರುತ್ತಾಳೆ. ಈಕೆ ಅರುಣ್ ಖಾರ್ವಿ ಹಾಗೂ ಭವಾನಿ ಖಾರ್ವಿ ದಂಪತಿಯ ಪುತ್ರಿ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಅಕ್ಕಪಡೆ ಯೋಜನೆಯನ್ನು ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲಾಗಿದ್ದು, ಇದು ಸಂಕಷ್ಟದಲ್ಲಿರುವ ಮಕ್ಕಳು ಮತ್ತು ಮಹಿಳೆಯರಿಗೆ ನೆರವಾಗುವುದರೊಂದಿಗೆ ರಕ್ಷಣೆ ನೀಡಿ, ಭಯಮುಕ್ತ ವಾತಾವರಣ ಕಲ್ಪಿಸಲಿದೆ ಎಂದು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಹೇಳಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಅಕ್ಕ ಪಡೆ ಯೋಜನೆಯ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದರು. ಪೊಲೀಸ್ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಭಾಗಿತ್ವದಲ್ಲಿ ಅಕ್ಕಪಡೆ ಕಾರ್ಯನಿರ್ವಹಿಸಲಿದ್ದು, ಹೆಣ್ಣು ಮಕ್ಕಳನ್ನು ದೌರ್ಜನ್ಯಕ್ಕೊಳಗಾಗದಂತೆ ಅವರುಗಳಿಗೆ ಸುರಕ್ಷತಾ ಭಾವನೆ ಮೂಡಿಸಿ, ಸ್ವತಂತ್ರ್ಯವಾಗಿ ಬದುಕಲು ಧೈರ್ಯ ತುಂಬಿಸುವ ಕೆಲಸ ಅಕ್ಕಪಡೆ ಮಾಡಲಿದೆ. ಮಹಿಳೆಯರ ಮತ್ತು ಮಕ್ಕಳ ಸಮಗ್ರ ಅಭಿವೃದ್ಧಿಗೆ ಹಾಗೂ ಸುರಕ್ಷತೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಅಕ್ಕಪಡೆ ಕಾರ್ಯನಿರ್ವಹಿಸಲಿದೆ ಎಂದರು. ವಾಹನದಲ್ಲಿ 4 ಜನ ಗೃಹ ರಕ್ಷಕಿಯರು ಮತ್ತು ಪೊಲೀಸ್ ಇಲಾಖೆಯ ಒಬ್ಬರು ಡ್ರೈವರ್ ಅನ್ನು ನಿಯೋಜಿಸಲಾಗಿದ್ದು, ಎರಡು ಪಾಳಿಯಲ್ಲಿ ಕರ್ತವ್ಯ ನಿರ್ವಹಿಸಲಿದ್ದಾರೆ ಎಂದ ಅವರು, ತರಬೇತಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲಾ ಪಂಚಾಯತ್ ನ ವಿಎಸ್ ಆಚಾರ್ಯ ಸಭಾಂಗಣದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರ ಅಧ್ಯಕ್ಷತೆಯಲ್ಲಿ ಸಂಜೀವಿನಿ ಯೋಜನೆಯ ಪ್ರಗತಿ ಸಭೆ ನೆಡೆಯಿತು. ನಂತರ ಅವರು ಮಾತನಾಡಿ, ಗ್ರಾಮೀಣ ಮಹಿಳೆಯರ ಸಾಮಾಜಿಕ ಸಬಲೀಕರಣಕ್ಕಾಗಿ ಸಂಜೀವಿನಿ ಸ್ವ ಸಹಾಯ ಗುಂಪುಗಳನ್ನು ರಚಿಸಲಾಗಿದೆ. ಈಗಾಗಲೇ ಮಹಿಳೆಯರು ಸಮುದಾಯ ಬಂಡವಾಳ ನಿಧಿ, ಬ್ಯಾಂಕ್ ಸಾಲ, ಇಲಾಖೆಗಳ ಸಾಲ ಸೌಲಭ್ಯ ಪಡೆದು ಸ್ವ ಉದ್ಯೋಗ ಚಟುವಟಿಕೆ ನೆಡೆಸುತ್ತಿದ್ದಾರೆ. ಈ ಮಹಿಳೆಯರನ್ನು ಮಾದರಿಯಾಗಿಸಿ ಪ್ರತಿ ಗ್ರಾಮದ ಸಂಜೀವಿನಿ ಮಹಿಳೆಯರು ಸ್ಥಳೀಯ ಸಂಪನ್ಮೂಲಗಳನ್ನು ಬಳಸಿಕೊಂಡು ಉದ್ಯಮಿಗಳನ್ನಾಗಿಸಲು ಸಿಬ್ಬಂದಿಗಳು ಕ್ರಮ ಕೈಗೊಳ್ಳಬೇಕು. ಕೃಷಿ, ಕೃಷಿಯೇತರ, ಪ್ರವಾಸೋದ್ಯಮ ಹಾಗೂ ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆಯರು ಪ್ರತಿನಿಧಿಸಬೇಕು. ಇಂದು ಗ್ರಾಮೀಣ ಜನರು ನಿರುದ್ಯೋಗದ ಸಮಸ್ಯೆಯಿಂದ ಬೇರೆ ಕಡೆಗೆ ವಲಸೆ ಹೋಗುತ್ತಿದ್ದಾರೆ. ಸ್ಥಳೀಯವಾಗಿ ಮಹಿಳೆಯರಿಗೆ ಉದ್ಯೋಗ ಕಲ್ಪಿಸುವ ವ್ಯವಸ್ಥೆ ನಿರ್ಮಾಣವಾಗಬೇಕು ಎಂದು ತಿಳಿಸಿದರು. ಪ್ರತಿ ಗ್ರಾಮ ಪಂಚಾಯತ್ ನಲ್ಲಿ ಗ್ರಾಮೋತ್ಸವ ನಡೆಸಲಾಗುತ್ತಿದ್ದು ಸಂಜೀವಿನಿ ಸ್ವ ಸಹಾಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಸಾಲಿಗ್ರಾಮದ ಚಿತ್ರಪಾಡಿಯ ಪಿ.ಎಂ ಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎರಡುದಿನಗಳ ಕಾಲ ನಡೆಯುವ ಶತಮಾನೋತ್ಸವ ಸಂಭ್ರಮದ ಕಾರ್ಯಕ್ರಮ ಶನಿವಾರ ಶಾಲಾ ವಠಾರದಲ್ಲಿ ಪ್ರಾರಂಭಗೊಂಡಿತು. ಶತಮಾನೋತ್ಸವ ಸಭಾ ಕಾರ್ಯಕ್ರಮವನ್ನು ಬೆಂಗಳೂರಿನ ಉದ್ಯಮಿ ರವೀಂದ್ರ ನಾಯಕ್ ಸಾಲಿಗ್ರಾಮ ಉದ್ಘಾಟಿಸಿ ಮಾತನಾಡಿ, ನಾವು ಉದ್ಯಮರಂಗದಲ್ಲಿ  ಗುರುತಿಸಿಕೊಳ್ಳಲು ಅಥವಾ ಈ ಹಂತದಲ್ಲಿ ಬೆಳೆಯಲು ಶಿಕ್ಷಕರ ಪಾತ್ರ ಗಣನೀಯವಾದದ್ದು, ಆದರೆ ಪ್ರಸ್ತುತ ವಿದ್ಯಾಮಾನದಲ್ಲಿ ಮಕ್ಕಳು ಆಧುನಿಕತೆಯಲ್ಲೆ ಮುಳುಗಿ ಅವರ ಸ್ಥಿತಿಗತಿ ಶೋಚನೀಯವಾಗಿದೆ. ಇದಕ್ಕೆ ಪೋಷಕರ ಹೊಣೆಗಾರಿ ಬಹುಪಾಲಾಗಿದೆ ಈ ನಿಟ್ಟಿನಲ್ಲಿ ಮಕ್ಕಳ ಭವಿಷ್ಯವನ್ನು ಪೋಷಕರೇ ಜಾಗೃತರಾಗಿ ಕ್ರಮಿಸುವಾಗೆ ನೋಡಿಕೊಳ್ಳಿ ಎಂದು ಕರೆಕೊಟ್ಟರು. ಸಭೆಯ ಅಧ್ಯಕ್ಷತೆಯನ್ನು ಕೋಟ ಸಹಕಾರಿ ಸಂಘದ ಅಧ್ಯಕ್ಷ ಡಾ. ಕೃಷ್ಣಕಾಂಚನ್ ವಹಿಸಿದ್ದರು. ಮುಖ್ಯ ಅಭ್ಯಾಗತರಾಗಿ ಉಡುಪಿ ಇಂಡಸ್ಟ್ರಿಯಲ್ ಕೋ. ಅಪರೇಟಿವ್ ಸೊಸೈಟಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜೇಶ್ ಹೆಗ್ಡೆ, ಬ್ರಹ್ಮಾವರ ಪತ್ರಕರ್ತಸಂಘದ ಅಧ್ಯಕ್ಷ ರಾಜೇಶ್ ಗಾಣಿಗ, ಸಾಲಿಗ್ರಾಮ ಪಟ್ಟಣ ಪಂಚಾಯತ್ ಮಾಜಿ ಅಧ್ಯಕ್ಷೆ ಸುಕನ್ಯಾ ಜೆ. ಶೆಟ್ಟಿ, ಪಟ್ಟಣಪಂಚಾಯತ್ ಮುಖ್ಯಾಧಿಕಾರಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಗಣರಾಜ್ಯೋತ್ಸವದ ದಿನಾಚರಣೆಯ ಅಂಗವಾಗಿ 2026ರ ಜನವರಿ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ. 50ರ ರಿಯಾಯಿತಿ ದರಗಳಲ್ಲಿ  ಮಾರಾಟ ಮಾಡಲಾಗುವುದು. ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ (ಸಂಪರ್ಕ ಸಂಖ್ಯೆ:080-22107705), ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ, ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದ ಆನ್‌ಲೈನ್ https://kpp.karnataka.gov.in ನಲ್ಲಿ ರಿಯಾಯಿತಿ ಸೌಲಭ್ಯ ಲಭ್ಯವಿದ್ದು, ಪುಸ್ತಕ ಪ್ರಿಯರು ಈ ಅವಕಾಶ ಬಳಸಿಕೊಳ್ಳಬಹುದಾಗಿದೆ. ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ, ಎಲ್ಲಾ ಪ್ರಕಾರದ ಸಾಹಿತ್ಯ ಕೃತಿಗಳನ್ನು ಈವರೆಗೆ ಪ್ರಕಟಿಸುತ್ತಾ ಬಂದಿದ್ದು, ಇವುಗಳಲ್ಲಿ ವ್ಯಕ್ತಿ ಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ, ಪರಿಸರ, ಕೃಷಿ ಹೀಗೆ ಹಲವು ಹತ್ತು ಪ್ರಕಾರಗಳಲ್ಲಿ ಸಾಹಿತ್ಯ ಕೃತಿಗಳನ್ನು ಇದುವರೆಗೆ ಸುಮಾರು 700ಕ್ಕೂ ಹೆಚ್ಚಿನ ಶೀರ್ಷಿಕೆಗಳನ್ನು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೆಜ್‌ಮೆಂಟ್, ಮೂಡುಬಿದಿರೆ ಇವರ ವತಿಯಿಂದ ಜನವರಿ ಮಾಹೆಯಿಂದ ಪ್ರಾರಂಭವಾಗುವ 6 ತಿಂಗಳ ಅವಧಿಯ ರೆಗ್ಯೂಲರ್ ಮತ್ತು ದೂರಶಿಕ್ಷಣ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ಕೋರ್ಸ್ ತರಬೇತಿಗೆ ಉಡುಪಿ ಜಿಲ್ಲೆಯ ಸಾಮಾನ್ಯ ಹಾಗೂ ಪ.ಜಾತಿ/ಪ.ಪಂಗಡದ ಅಭ್ಯರ್ಥಿಗಳಿಂದ ಮತ್ತು ಎಲ್ಲಾ ವಿವಿಧ ಸಹಕಾರ ಸಂಘ/ಬ್ಯಾಂಕ್‌ಗಳ ಉದ್ಯೋಗಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜನವರಿ 15 ಕೊನೆಯ ದಿನ. ಕನಿಷ್ಠ ವಿದ್ಯಾರ್ಹತೆ ಎಸ್.ಎಸ್.ಎಲ್.ಸಿಯಾಗಿದ್ದು, ಪ್ರವೇಶ ಪಡೆದ ಪ.ಜಾತಿ ಹಾಗೂ ಪ.ಪಂಗಡದ ಅಭ್ಯರ್ಥಿಗಳಿಗೆ ಮಾಸಿಕ ರೂ.600 ಹಾಗೂ ಇತರೆ ಎಲ್ಲಾ ಅಭ್ಯರ್ಥಿಗಳಿಗೆ ರೂ.500 ಶಿಷ್ಯ ವೇತನ ನೀಡಲಾಗುವುದು. ಸಹಕಾರ, ಸಹಕಾರ ಪತ್ತು ಮತ್ತು ಬ್ಯಾಂಕಿಂಗ್, ಸಹಕಾರ ಸಂಘಗಳ ನಿರ್ವಹಣೆ, ಸಹಕಾರ ಸಂಘಗಳ ಕಾಯಿದೆ ಅಂಶಗಳು, ಸಹಕಾರ ಲೆಕ್ಕಪತ್ರಗಳು ಮತ್ತು ಲೆಕ್ಕಪರಿಶೋಧನೆ ಹಾಗೂ ಕಂಪ್ಯೂಟರ್ ಅಪರೇಷನ್ ಬಗ್ಗೆ ಪಠ್ಯಕ್ರಮವಿದ್ದು, ಸಹಕಾರ ಡಿಪ್ಲೊಮಾ ಕೋರ್ಸ್ ಪಡೆದ ಅಭ್ಯರ್ಥಿಗಳಿಗೆ ಡಿಸಿಸಿ ಬ್ಯಾಂಕ್, ಅಪೆಕ್ಸ್ ಬ್ಯಾಂಕ್, ಜಿಲ್ಲಾ ಸಹಕಾರಿ ಹಾಲು ಒಕ್ಕೂಟ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಸಹಕಾರಿ ಸಂಘಗಳು ಗ್ರಾಮ ಕೇಂದ್ರಿಕೃತವಾಗಿದ್ದು, ಗ್ರಾಮದ ಜನರು ಇದನ್ನು ಸಮರ್ಪಕವಾಗಿ ಸದುಪಯೋಗಿಸಿಕೊಂಡಾಗ ಗ್ರಾಮದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ. ಇಂತಹ ಸಹಕಾರಿ ರಂಗವನ್ನು ಬಲಪಡಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಇಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳು ಹಾಗೂ ಆಡಳಿತ ಮಂಡಳಿ ಜ್ಞಾನ, ಕೌಶಲ್ಯ ಹಾಗೂ ಮಾನವೀಯತೆ ದೃಷ್ಟಿಕೋನವನ್ನು ಅಳವಡಿಸಿಕೊಂಡಾಗ ಯಶಸ್ಸನ್ನು ಕಾಣಲು ಸಾಧ್ಯವಾಗುತ್ತದೆ ಎಂದ ಡಾ. ಶಿವರಾಮ ಕಾರಂತ್ ಟ್ರಸ್ಟ್ ಅಧ್ಯಕ್ಷ ಡಾ. ಗಣಮಾಥ ಎಕ್ಕಾರ್ ಹೇಳಿದರು. ಅವರು ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟೀವ್ ಸೊಸೈಟಿಯ ಗೋಳಿಹೊಳೆ ಶಾಖೆಯಲ್ಲಿ ಗುರುವಾರ ನಡೆದ ಸೌಹಾರ್ದ ಸಹಕಾರಿ ದಿನಾಚರಣೆ ಹಾಗೂ ಗ್ರಾಹಕರ ಸಭೆ ಉದ್ಘಾಟಿಸಿ ಮಾತನಾಡಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಹಕಾರಿ ರಂಗಕ್ಕೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ಇಂದು ಸಹಕಾರಿ ಸಂಘಗಳಿಗೆ ಹೆಚ್ಚಿನ ಮಹತ್ವವಿದೆ. ಪ್ರಜಾಪ್ರಭುತ್ವದ ನಾಲ್ಕು ತತ್ವಗಳಾದ ಸಮಾನತೆ, ಸ್ವಾತಂತ್ರ್ಯ, ಭಾತೃತ್ವ ಹಾಗೂ ಸಾಮಾಜಿಕ ನ್ಯಾಯ ಎನ್ನುವುದನ್ನು ಕೇವಲ ಸಹಕಾರಿ ರಂಗದಲ್ಲಿ ಮಾತ್ರ ಕಾಣಲು ಸಾಧ್ಯವಿದೆ ಎಂದರು. ಸಂಘದ…

Read More