ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ 2025–26ನೇ ಶೈಕ್ಷಣಿಕ ಸಾಲಿನಲ್ಲಿ ದಾಖಲಾತಿ ಪಡೆದ ವಿದ್ಯಾರ್ಥಿಗಳಲ್ಲಿ ಹುದುಗಿರುವ ಪ್ರತಿಭೆಯನ್ನು ಅನಾವರಣಗೊಳಿಸುವ ಉದ್ದೇಶದಿಂದ ಪ್ರತಿಭಾ ಪ್ರದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ತಮ್ಮ ಆಸಕ್ತಿಯ ಚಟುವಟಿಕೆಗಳಾದ ಸಂಗೀತ, ನೃತ್ಯ, ಶ್ಲೋಕ ಪಠಣ, ಕಥೆ ಹೇಳುವಿಕೆ, ಕರಾಟೆ ಮೊದಲಾದ ಪ್ರತಿಭೆಗಳನ್ನು ಪ್ರಾತ್ಯಕ್ಷಿಕೆಯ ಮೂಲಕ ಪ್ರದರ್ಶಿಸಿದರು. ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಹುದುಗಿರುವ ಸುಪ್ತ ಪ್ರತಿಭೆಯನ್ನು ಹೊರತೆಗೆಯುವುದರ ಜೊತೆಗೆ, ವೇದಿಕೆಯ ಭಯ ನಿವಾರಣೆಗಾಗಿಯೂ ಸಹಕಾರಿ ಆಯಿತು. ಮಕ್ಕಳು ಈ ಕಾರ್ಯಕ್ರಮದಲ್ಲಿ ಉತ್ಸಾಹದಿಂದ ಹಾಗೂ ಆತ್ಮವಿಶ್ವಾಸದಿಂದ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯಿನಿ ಸುಜಾತಾ ಸದಾರಾಮ, ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ತೆಕ್ಕಟ್ಟೆಯ ರೋಟರಿ ಕ್ಲಬ್ನ ನೂತನ ಅಧ್ಯಕ್ಷರಾಗಿ ಸುಧೀರ್ ಶೆಟ್ಟಿ ಮಲ್ಯಾಡಿ ಹಾಗೂ ಕಾರ್ಯದರ್ಶಿಯಾಗಿ ಟಿ. ರಾಜೀವ್ ಶೆಟ್ಟಿ ಆಯ್ಕೆಗೊಂಡಿದ್ದಾರೆ. ಪದಗ್ರಹಣ ಕಾರ್ಯಕ್ರಮ ಜುಲೈ 6 ರಂದು ತೆಕ್ಕಟ್ಟೆ ಪ್ರೆಸಿಡೆಂಟ್ ಹಾಲ್ನ ಕ್ರೌನ್ ಆಡಿಟೋರಿಯಂ ನಲ್ಲಿ ನಡೆಯಲಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ವಿದ್ಯಾರ್ಥಿಗಳಿಗೆ ಪಠ್ಯದ ಜೊತೆಗೆ ಕಲೆ ಹಾಗೂ ಸಾಹಿತ್ಯಾಸಕ್ತಿ ಬೆಳೆಸುವ ಉದ್ದೇಶದಿಂದ ಪದವಿ ಪೂರ್ವ ಶಿಕ್ಷಣ ಇಲಾಖೆ ಕೆಂಪೇಗೌಡರ ಜನ್ಮದಿನದ ಪ್ರಯುಕ್ತ ಆರ್ ಎನ್ ಶೆಟ್ಟಿ ಪದವಿಪೂರ್ವ ಕಾಲೇಜಿನಲ್ಲಿ ನಡೆಸಿದ ತಾಲೂಕು ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿ ರಕ್ಷಿತಾ ದ್ವಿತೀಯ ಸ್ಥಾನವನ್ನು, ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಪ್ರತಿಕ್ಷಾ ಸಮಾಧಾನಕರ ಬಹುಮಾನವನ್ನು ಹಾಗೂ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ವರ್ಷಿಣಿ ಸಮಾಧಾನಕರ ಬಹುಮಾನವನ್ನು ಪಡೆಯುವ ಮೂಲಕ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸಾಂಸ್ಕೃತಿಕವಾಗಿ ಸಂಸ್ಥೆಯ ಕೀರ್ತಿಯನ್ನು ಜಿಲ್ಲಾ ಮಟ್ಟಕ್ಕೆ ಕೊಂಡೊಯ್ದ ಅವರನ್ನು ಆಡಳಿತ ಮಂಡಳಿಯವರು ಹಾಗೂ ಪ್ರಾಂಶುಪಾಲರು ಅಭಿನಂದಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಿವವೊಗ್ಗ ಜಿಲ್ಲೆಯ ಮಂಡಗದ್ದೆಯಲ್ಲಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಇಲ್ಲಿನ ತೆಕ್ಕಟ್ಟೆ ಮೂಲದ ಮಹಿಳೆ ಮೃತಪಟ್ಟಿದ್ದಾರೆ. ಆರು ಮಂದಿ ಕುಟುಂಬ ಸದಸ್ಯರು ಪ್ರಯಾಣಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಶಿವವೊಗ್ಗ ಜಿಲ್ಲೆಯ ಮಂಡಗದ್ದೆಯಲ್ಲಿ ಘಟನೆ ಆದಿತ್ಯವಾರದಂದು ಬೆಳಗ್ಗೆ 11ರ ಸುಮಾರಿಗೆ ಸಂಭವಿಸಿದೆ. ತೆಕ್ಕಟ್ಟೆಯ ಮಣಿಕಂಠ ಟ್ರಾನ್ಸ್ಪೋರ್ಟ್ ಮಾಲಕ ದೇವಾಡಿಗ ಶಿವಮೊಗ್ಗದಲ್ಲಿರುವ ಮಗಳ ಮನೆಗೆ ಮಾರುತಿ ಸ್ವಿಫ್ಟ್ ಕಾರಿನಲ್ಲಿ ಕುಟುಂಬ ಸದಸ್ಯರೊಂದಿಗೆ ತೆರಳುತ್ತಿದ್ದರು. ಸುರಿಯುತ್ತಿದ್ದ ಭಾರೀ ಮಳೆ ಹಾಗೂ ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿ ರಸ್ತೆ ಸಮೀಪದ ನದಿಗೆ ಉರುಳಿತು. ಕಾರು ನೀರಿನಲ್ಲಿ ಮುಳುಗುತ್ತಿದಂತೆ ಸ್ಥಳೀಯರು ಧಾವಿಸಿ ಬಂದು ರಕ್ಷಣೆಗಿಳಿದರೂ ಶಂಕರ ದೇವಾಡಿಗ ಅವರ ಪತ್ನಿ ಸವಿತಾ ದೇವಾಡಿಗ (57) ಅಸುನೀಗಿದರು. ಶಂಕರ ದೇವಾಡಿಗ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪುತ್ರರಾದ ಅರುಣ್ ದೇವಾಡಿಗ ಹಾಗೂ ಎಂಜಿನಿಯರ್ ಅಶ್ವತ್ಥ ದೇವಾಡಿಗ, ಪುತ್ರಿ ಅಮೃತಾ, ಅಳಿಯ ಸುರೇಶ್ ದೇವಾಡಿಗ ಹಾಗೂ 2.5 ವರ್ಷದ ಅಭಿಶ್ರೇಯ್ ಅವರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅಖಿಲ ಭಾರತೀಯ ಗಂಧರ್ವ ಮಹಾವಿದ್ಯಾಲಯ ಮಂಡಲ ಮುಂಬೈ ಇದರ 2024-25ರ ಸಾಲಿನ ಭರತನಾಟ್ಯ ಪ್ರಾವೇಶಿಕ ಪೂರ್ಣ ಪರೀಕ್ಷೆಯಲ್ಲಿ ಕುಂದಾಪುರದ ಸಾಧನ ಕಲಾ ಸಂಗಮದ ಭರತನಾಟ್ಯ ವಿದ್ಯಾರ್ಥಿನಿ ಹಾಗೂ ಕುಂದಾಪುರದ ವಿ.ಕೆ.ಆರ್. ಆಂಗ್ಲ ಮಾಧ್ಯಮ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿನಿ ಪ್ರಾಪ್ತಿ ಮಡಪ್ಪಾಡಿ 125ರಲ್ಲಿ 119 ಅಂಕಗಳನ್ನು ಪಡೆದು ಡಿಸ್ಟಿಕ್ಷನ್ ನಲ್ಲಿ ಉತ್ತೀರ್ಣರಾಗಿದ್ದಾರೆ. ಹೊನ್ನಾವರದ ಸೆಂಟರ್ ನಲ್ಲಿ ಪರೀಕ್ಷೆ ಬರೆದಿದ್ದ ಪ್ರಾಪ್ತಿ ಮಡಪ್ಪಾಡಿ, ಪರೀಕ್ಷಾ ಕೇಂದ್ರದಲ್ಲಿ ಅತೀ ಹೆಚ್ಚು ಅಂಕಗಳನ್ನು ಪಡೆದು ಮೊದಲಿಗರಾಗಿದ್ದಾರೆ. ಅವರು ಕುಂದಾಪುರದ ಪತ್ರಕರ್ತ ಜಯಶೇಖರ್ ಮಡಪ್ಪಾಡಿ ಹಾಗೂ ಮಧುಸ್ಮಿತಾ ಜಯಶೇಖರ್ ಅವರ ದಂಪತಿಯ ಪುತ್ರಿ. ಉಡುಪಿಯ ಭರತನಾಟ್ಯ ಗುರು, ವಿದುಷಿ. ಲಕ್ಷ್ಮೀ ಗುರುರಾಜ್ ಅವರ ಶಿಷ್ಯೆ ಅರ್ಪಿತಾ ಹೆಗಡೆ ಅವರ ಶಿಷ್ಯೆ. ಪ್ರಾಪ್ತಿ ಮಡಪ್ಪಾಡಿ ಅವರ ಸಾಧನೆಗೆ ಸಾಧನಾ ಕಲಾ ಸಂಗಮದ ವಿಶ್ವಸ್ಥ ನಾರಾಯಣ ಐತಾಳ್ ಹಾಗೂ ಆಡಳಿತ ಮಂಡಳಿ, ಭರತನಾಟ್ಯ ಗುರು ವಿದುಷಿ ಅರ್ಪಿತಾ ಹೆಗಡೆ ಹಾಗೂ ಕುಂದಾಪುರ ಎಜ್ಯುಕೇಶನ್ ಸೊಸೈಟಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ರಕ್ತದಾನ ಮಹಾದಾನವಾಗಿದ್ದು, ಆಪತ್ತಿನಲ್ಲಿರುವ ಮತ್ತೊಬ್ಬರ ಜೀವ ಉಳಿಸಲು ಸಹಾಯವಾಗುತ್ತದೆ. ಇಂತಹ ಕಾರ್ಯಕ್ಕೆ ಹೆಚ್ಚು ಜನರು ಮುಂದೆ ಬರಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಕರೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾಧಿಕಾರಿಯವರ ಕಚೇರಿ, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ (ರಿ) ಉಡುಪಿ ಜಿಲ್ಲಾ ಶಾಖೆ, ಜಿಲ್ಲಾ ಆಸ್ಪತ್ರೆ ರಕ್ತನಿಧಿ ಕೇಂದ್ರ ಉಡುಪಿ ಹಾಗೂ ರಕ್ತನಿಧಿ ಕೇಂದ್ರ ಕೆ.ಎಂ.ಸಿ ಮಣಿಪಾಲ ಇವರ ಸಹಯೋಗದೊಂದಿಗೆ ನಡೆದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಒಂದು ಬಾರಿ ರಕ್ತದಾನ ಮಾಡುವುದರಿಂದ ಮೂರು ಜನರ ಜೀವಗಳನ್ನು ಉಳಿಸಲು ಸಾಧ್ಯ. ವೈದ್ಯಕೀಯ ಪದ್ಧತಿಯಲ್ಲಿ ಒಂದು ರಕ್ತದಾನವನ್ನು ವಿಭಿನ್ನ ಘಟಕಗಳಾಗಿ ಬೇರ್ಪಡಿಸಬಹುದು. ಪ್ರತಿಯೊಂದು ವಿಶಿಷ್ಟ ಉದ್ದೇಶವನ್ನು ಪೂರೈಸುತ್ತದೆ. ಇಂದು ನಡೆದ ರಕ್ತದಾನ ಶಿಬಿರದಲ್ಲಿಯೂ 100 ಕ್ಕೂ ಹೆಚ್ಚು ಜನ ಉತ್ಸಾಹಕರಾಗಿ ರಕ್ತದಾನ ಮಾಡಿರುವುದು ಅಭಿನಂದನಾರ್ಹ ಕಾರ್ಯ ಎಂದರು. ಒಂದೇ ಸೂರಿನಡಿ ಹೆಚ್ಚು ಕಚೇರಿಗಳು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಆಧುನಿಕ ಕೃಷಿ ಪದ್ದತಿಯ ಅಳವಡಿಕೆಯಿಂದ ಕೃಷಿಯನ್ನು ಲಾಭದಾಯಕವಾಗಿ ಬೆಳೆಸಬಹುವುದಾಗಿದೆ. ಕಾಲದ ಬದಲಾವಣೆಗೆ ಒಗ್ಗಿಕೊಂಡಂತೆ ಕೃಷಿ ಕ್ಷೇತ್ರದಲ್ಲಾಗುವ ಬದಲಾವಣೆಗಳು ರೈತರಿಗೆ ಲಾಭವನ್ನು ಹೆಚ್ಚಿಸುತ್ತದೆ ಎಂದು ಉದ್ಯಮಿ ಜಿ. ಗೋಕುಲ್ ಶೆಟ್ಟಿ ಉಪ್ಪುಂದ ಹೇಳಿದರು. ಅವರು ಯಡ್ತರೆ ಬಂಟರಯಾನೆ ನಾಡವರ ಸಂಕೀರ್ಣದಲ್ಲಿ ಉತ್ಸವ ಸಮಿತಿ ಬೈಂದೂರು, ಸಮಷ್ಠಿ ಪ್ರತಿಷ್ಠಾನ, ರೈತೋತ್ಧಾನ ಬಳಗ ಹಾಗೂ ರೋಟರಿ ಕ್ಲಬ್ ಬೈಂದೂರು ಇವರ ಸಹಯೋಗದಲ್ಲಿ ಶುಕ್ರವಾರ ಆರಂಭಗೊಂಡು ಮೂರು ದಿನಗಳ ಕಾಲ ನಡೆಯುವ ಹಲಸು ಹಾಗೂ ಕೃಷಿ ಮೇಳವನ್ನು ಉದ್ಘಾಟಿಸಿ ಮಾತನಾಡಿದರು. ರೈತರು ಬೆಳೆದ ಬೆಳೆಗಳು ನೇರವಾಗಿ ಗ್ರಾಹಕರಿಗೆ ದೊರೆತಾಗ ಕೃಷಿ ಕ್ಷೇತ್ರ ಇನ್ನಷ್ಟು ಯಶಸ್ವಿಯಾಗಿ ಮುನ್ನೆಡೆಯುತ್ತದೆ. ಇಂತಹ ಮೇಳಗಳ ಮುಖಾಂತರ ಗ್ರಾಮೀಣ ಭಾಗದ ರೈತರಿಗೆ ಹೊಸ ವಿಧಾನಗಳ ಪರಿಚಯವಾಗುತ್ತದೆ. ಈ ಮೇಳವು ಮೂರು ದಿನಗಳ ವರೆಗೆ ನಡೆಯಲಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು. ಸಮೃದ್ದ ಜನಸೇವಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಬಿ. ಎಸ್. ಸುರೇಶ ಶೆಟ್ಟಿ, ಜಿಪಂ ಮಾಜಿ ಅಧ್ಯಕ್ಷ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಕರಾವಳಿ ಕಾವಲು ಪೋಲಿಸ್ ಪಡೆ ಗಂಗೊಳ್ಳಿಯ ಸಬ್ ಇನ್ಸ್ಪೆಕ್ಟರ್ ಮುಕ್ತಾ ಬಾಯಿ ಅವರು ಮಾದಕ ವಸ್ತುಗಳ ಬಳಕೆಯಿಂದ ಉಂಟಾಗುವ ದುಷ್ಪರಿಣಾಮಗಳು ಹಾಗೂ ಪೋಕ್ಸೊ ಕಾಯಿದೆಯ ಬಗ್ಗೆ ತಿಳಿಸಿದರು. ವಿದ್ಯಾರ್ಥಿಗಳು ಕೈಗೊಳ್ಳಬೇಕಾದ ಮುಂಜಾಗ್ರತೆ ಕುರಿತು ನಿದರ್ಶನಗಳ ಮೂಲಕ ಮಾಹಿತಿ ನೀಡಿದರು. ಪೋಲಿಸ್ ಕಾನ್ ಸ್ಟೇಬಲ್ ರಾಘವೇಂದ್ರ ಪ್ರಸಾದ್ ಅವರು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕ ಕೃಷ್ಣ ಅಡಿಗ ಅವರು ಸ್ವಾಗತಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಪಡುವರಿ ಗ್ರಾಮದ ಸೋಮೇಶ್ವರ ಸಮುದ್ರ ತೀರದಲ್ಲಿ ದೇಗುಲದ ಗೋಪುರಕ್ಕೆ ಅಳವಡಿಸುವ ಸುಮಾರು 3 ಕೆ.ಜಿ. ತಾಮ್ರದ ಕಲಶ ಪತ್ತೆಯಾಗಿದೆ. ಗಂಗೊಳ್ಳಿ ಕರಾವಳಿ ಕಾವಲು ಠಾಣೆಯ ಇನ್ಸ್ಪೆಕ್ಟರ್ ವಸಂತ ರಾಮ ಆಚಾರ್, ಉಪನಿರೀಕ್ಷಕ ಸುಬ್ರಹ್ಮಣ್ಯ ಎಚ್, ಗೃಹರಕ್ಷಕ ದಳದ ನಾಗೇಂದ್ರ ಸ್ಥಳಕ್ಕೆ ಭೇಟಿ ನೀಡಿ ಕಲಶವನ್ನು ಪರಿಶೀಲಿಸಿದ್ದಾರೆ. ಇದರ ವಾರಸುದಾರರು ಯಾರಾದರೂ ಇದ್ದರೆ ಗಂಗೊಳ್ಳಿ ಕರಾವಳಿ ಕಾವಲು ಪೊಲೀಸ್ ಠಾಣೆ ಸಂಪರ್ಕಿಸಬಹುದು ಎಂದು ಪೊಲೀಸರು ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹೆಮ್ಮಾಡಿಯ ಜನತಾ ಪದವಿ ಪೂರ್ವ ಕಾಲೇಜಿನಲ್ಲಿ ಮಾದಕ ವ್ಯಸನದ ವಿರುದ್ಧ ಮಾಹಿತಿ ಕಾರ್ಯಕ್ರಮ ನಡೆಯಿತು. ಕಂಡ್ಲೂರು ಪೋಲಿಸ್ ಠಾಣೆಯ ಢಾಣಾಧಿಕಾರಿಗಳಾಗಿರುವ ಭೀಮಾಶಂಕರ್ ಅವರು ಮಾದಕ ವ್ಯಸನದ ವಿರುದ್ಧದ ಕುರಿತಾಗಿ ಮಾಹಿತಿ ನೀಡಿ, ಇಂದಿನ ಈ ಯುಗದಲ್ಲಿ ಆರೋಗ್ಯಕ್ಕೆ ಹಾನಿಯುಂಟುಮಾಡುವ ಮಾದಕ ವ್ಯಸನಗಳು ತುಂಬಾ ಸುಲಭವಾಗಿ ಕೈಗೆ ಸಿಗುತ್ತಿದ್ದು, ಅವೆಲ್ಲವನ್ನೂ ಸ್ವೀಕರಿಸಬೇಡಿ ಆರೋಗ್ಯದ ಕುರಿತಾಗಿ ಜಾಗ್ರತಿ ವಹಿಸಿ ಎಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಠಾಣಾ ಸಿಬ್ಬಂದಿಗಳು, ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು. ಉಪನ್ಯಾಸಕರಾದ ಉದಯ ನಾಯ್ಕ ಕಾರ್ಯಕ್ರಮ ನಿರ್ವಹಿಸಿ ಸ್ವಾಗತಿಸಿ, ಅಭಿಜಿತ್ ವಂದಿಸಿದರು.
