Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ನಾವು ವಾಸಿಸುವ ವ್ಯಾಪ್ತಿಯಲ್ಲಿ ಹೆಚ್ಚು ಹೆಚ್ಚು ಗಿಡಗಳನ್ನು ನೆಟ್ಟು ಪೋಷಿಸುವ ಕಾರ್ಯ ನಡೆಯಬೇಕು ಆಗ ಪರಿಸರದ ಸಮತೋಲನ ಸಾಧ್ಯ ಎಂದು ಕೋಟದ ವಿವೇಕ ವಿದ್ಯಾಸಂಸ್ಥೆಯ ಪ್ರಾಂಶುಪಾಲ ಪರಿಸರಪ್ರೇಮಿ ಕೆ. ಜಗದೀಶ ನಾವಡ ಅಭಿಪ್ರಾಯಪಟ್ಟರು. ಅವರು ಭಾನುವಾರ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಅನ್ನಪೂರ್ಣ ನರ್ಸರಿ ಪೇತ್ರಿ, ಸುವರ್ಣ ಎಂಟರ್‌ಪ್ರೈಸೆಸ್ ಬ್ರಹ್ಮಾವರ, ಸಮುದ್ಯತಾ ಗ್ರೂಪ್ಸ್ ಕೋಟ, ಮಣೂರು ಫ್ರೆಂಡ್ಸ್, ಸ್ನೇಹಕೂಟ ಮಣೂರು, ಹಂದಟ್ಟು ಮಹಿಳಾ ಬಳಗ ಕೋಟ ಇವರ ಸಹಯೋಗದೊಂದಿಗೆ ಹಂದಟ್ಟು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಸಂಯೋಜನೆಯೊಂದಿಗೆ 257ನೇ ವಾರದ ಪರಿಸರಸ್ನೇಹಿ ಹಸಿರು ಜೀವ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು. ಕಳೆದ ಸಾಕಷ್ಟು ವರ್ಷಗಳಿಂದ ವಾತಾರಣದಲ್ಲಿ ವ್ಯತ್ಯಾಸಗಳನ್ನು ಕಾಣುತ್ತಿದ್ದೇವೆ. ಇದಕ್ಕೆ ಕಾರಣ ಪರಿಸರಸಲ್ಲಿರುವ ಮರಗಳ ಮಾರಣಹೋಮ ಈ ದಿಸೆಯಲ್ಲಿ ಪರ್ಯಾಯವಾಗಿ ಮೂರು ಪಟ್ಟು ಹೆಚ್ಚು ಗಿಡಗಳನ್ನು ನೆಟ್ಟು ಪೋಷಿಸುವ ಕಾರ್ಯ ನಡೆದರೆ ನಮ್ಮಗೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮಂತ್ರಾಲಯ ಕೇಂದ್ರ ಸರ್ಕಾರದ ವತಿಯಿಂದ ಪ್ರಸಕ್ತ ಸಾಲಿನ ರಾಷ್ಟ್ರೀಯ ಪ್ರಧಾನಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿಗಾಗಿ ಜಿಲ್ಲೆಯಲ್ಲಿ ಧೈರ್ಯ ಮತ್ತು ಸಾಹಸದಿಂದ ಇತರರನ್ನು ರಕ್ಷಿಸಿದ ಹಾಗೂ ಕ್ರೀಡೆ, ಸಮಾಜ ಸೇವೆ, ತಂತ್ರಜ್ಞಾನ, ಪರಿಸರ ಸಂರಕ್ಷಣೆ, ಕಲೆ ಮತ್ತು ಸಂಸ್ಕೃತಿ ಮತ್ತು ನೂತನ ಅವಿಷ್ಕಾರಗಳನ್ನು ಮಾಡಿ ಉತ್ತಮ ಸಾಧನೆ ಮಾಡಿದ 18 ವರ್ಷದೊಳಗಿನ ಮಕ್ಕಳಿಂದ ವೆಬ್‌ಸೈಟ್: https://awards.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜನಸಾಮಾನ್ಯರಿಂದ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಏಕ ವಿನ್ಯಾಸ ನಕ್ಷೆಯ ಸಮಸ್ಯೆಗಳ ಬಗ್ಗೆ ದಿನೇ ದಿನೇ ದೂರುಗಳು ಕೇಳಿ ಬರುತ್ತಿದ್ದು, ಇದರಿಂದಾಗಿ ಗೃಹ ನಿರ್ಮಾಣ ಮತ್ತು ಕಟ್ಟಡಗಳನ್ನು ಕಟ್ಟಲು ತೊಂದರೆಯಾಗುತ್ತಿದೆ. ಇದನ್ನು ಹದಿನೈದು ದಿನಗಳ ಒಳಗಾಗಿ ಬಗೆಹರಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಏಕನಿವೇಶನ ನಕ್ಷೆ ಹಾಗೂ ನಮೂನೆ 9/11 ರಲ್ಲಿ ಎದುರಾಗುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಲು ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗ್ರಾಮ ಪಂಚಾಯತ್‌ನಲ್ಲಿ ವಿತರಿಸುತ್ತಿದ್ದ 9/11 ಪ್ರಾಧಿಕಾರಕ್ಕೆ ಪ್ರತ್ಯಾಯೋಜಿಸಿದ ನಂತರ ಕಾರಣವಿಲ್ಲದೆ ವಿಳಂಬ ನೀತಿಯನ್ನು ಅನುಸರಿಸುತ್ತಿದ್ದು, ಅರ್ಜಿದಾರರು ಬೇಸತ್ತು ಹೋಗಿದ್ದಾರೆ. ರಸ್ತೆ ಅಂಚಿನ 6 ಮೀಟರ್ ಬಿಟ್ಟು ಏಕ ವಿನ್ಯಾಸ ನಕ್ಷೆಗೆ ಅನುಮೋದನೆ ನೀಡುವಂತೆ ಸರ್ಕಾರದ ಸುತ್ತೋಲೆ ಇದ್ದರೂ ಸಹ ಪ್ರಾಧಿಕಾರದ ನಿರ್ಲಕ್ಷತನದಿಂದಾಗಿ ಸಾವಿರಾರು ಕಡತಗಳು ವಿಲೇವಾರಿಯಾಗದೇ ಬಾಕಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ರೈತ ಕಾಯಕವಿದ್ದರೆ ಮಾತ್ರ ಮನುಕುಲ ಉಳಿಯಲು ಸಾಧ್ಯ ಇಲ್ಲವಾದಲ್ಲಿ ಕ್ಲಿಷ್ಟಕರ ದಿನಗಳನ್ನು ಕಾಣಬೇಕಾದಿತು ಎಂದು ಬ್ರಹ್ಮಾವರ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷೆ ಜ್ಯೋತಿ ಉದಯ್ ಕುಮಾರ್ ಹೇಳಿದರು. ಅವರು ಶನಿವಾರ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್, ರೈತಧ್ವನಿ ಸಂಘ ಕೋಟ, ಗೆಳೆಯರ ಬಳಗ ಕಾರ್ಕಡ, ಸ್ನೇಹಕೂಟ ಮಣೂರು,ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಇವರ ಸಹಯೋಗದೊಂದಿಗೆ ರೈತರೆಡೆಗೆ ನಮ್ಮ ನಡಿಗೆ 46ನೇ ಮಾಲಿಕೆ ಐರೋಡಿ ರಘುರಾಮ ಮಡಿವಾಳ ಇವರನ್ನು ಗೌರವಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ರೈತ ಬೆಳೆದರೆ ದೇಶ ಅಥವಾ ಮನುಷ್ಯ ಜೀವಿಸಲು ಸಾಧ್ಯ ಈ ನಿಟ್ಟಿನಲ್ಲಿ ಕೃಷಿ ಕಾಯಕದಿಂದ ವಿಮುಖರಾಗದಂತೆ ಪ್ರತಿಯೊಬ್ಬರು ಯೋಚಿಸಬೇಕಿದೆ, ಅದರಲ್ಲೂ ಪಂಚವರ್ಣ ಸಂಘಟನೆ ರೈತರೆಡೆಗೆ ಕಾರ್ಯಕ್ರಮ ಮನೆ ಮನಮುಟ್ಟಯವಂತ್ತಾಗಿದೆ ಸಮಾಜಿಕ ಬದ್ದತೆಯಲ್ಲಿ ಪಂಚವರ್ಣ ಇತಿಹಾಸ ಸೃಷ್ಟಿಸಲು ಸಜ್ಜಾಗಿರುವುದು ಶ್ಲಾಘನೀಯ, ಯುವ ಸಮೂಹ ಹೆಚ್ಚು ಹೆಚ್ಚು ಕೃಷಿ ಕಾರ್ಯದಲ್ಲಿ ತೊಡಗಿಕೊಳ್ಳುವಂತಾಗಬೇಕೇಂದು ಕರೆ ನೀಡಿದರು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಹೆಂಡತಿ ಮೃತಪಟ್ಟ ನಾಲ್ಕು ಗಂಟೆಗಳ ಬಳಿಕ ಪತಿಯೂ ಸಾವನ್ನಪ್ಪಿದ್ದಾರೆ‌. ಈ ಘಟನೆ ಕುಂದಾಪುರದ ಸಾಸ್ತಾನ ಬಳಿಯ ಗುಂಡ್ಮಿಯಲ್ಲಿ ನಡೆದಿದೆ. ನಿವೃತ್ತ ಹಿರಿಯ ಆರೋಗ್ಯ ನಿರೀಕ್ಷಕ ಜೆ ರತ್ನಾಕರಾಯ ಮತ್ತು ಪತ್ನಿ ಸರೋಜಮ್ಮ ಸಾವಿನಲ್ಲೂ ಒಂದಾದ ಜೋಡಿ. ಸರೋಜಮ್ಮ ಬೆಳಿಗ್ಗೆ ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಈ ವೇಳೆ ಜೊತೆಯಲ್ಲೇ ಇದ್ದ ರತ್ನಾಕರಾಯ ಅವರ ಆರೋಗ್ಯದಲ್ಲೂ ಏರುಪೇರಾಗಿದ್ದು ಕೂಡಲೇ ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ‌.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಿಕ್ಷಣ ನಿಂತ ನೀರಲ್ಲ. ಪ್ರತೀ ದಿನವೂ ಹೊಸ ಹೊಸ ಬದಲಾವಣೆಯೊಂದಿಗೆ  ನವೀನ ಚಿಂತನೆಗಳೊಂದಿಗೆ ಸಾಗುತ್ತಿದೆ. ಒಂದು ಸುಭದ್ರವಾದ ದೇಶದ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಪ್ರಮುಖವಾದುದು ಎಂದು ಸುಜ್ಞಾನ್ ಎಜುಕೇಷನಲ್ ಟ್ರಸ್ಟ್ನ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ ಹೇಳಿದರು. ಅವರು ಇಲ್ಲಿನ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮೂರು ದಿನಗಳು ನಡೆದ ಶಿಕ್ಷಕರ ತರಬೇತಿ ಕಾರ್ಯಾಗಾರದಲ್ಲಿ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಉತ್ತಮವಾದ ಶಿಕ್ಷಕ ಮಾತ್ರ ಅತ್ಯುತ್ತಮವಾದ ವಿದ್ಯಾರ್ಥಿಗಳನ್ನು ಸೃಷ್ಟಿಸಲು ಸಾಧ್ಯವಾದ್ದರಿಂದ ಈ ಸಮಾಜವು ಯಾವಾಗಲೂ ಸಮರ್ಥವಾದ ಶಿಕ್ಷಕ ವರ್ಗವನ್ನು ಸದಾ ನಿರೀಕ್ಷಿಸುತ್ತದೆ. ಹಾಗಾಗಿ ಶಿಕ್ಷಕರಿಗೆ ಕಾಲ ಕಾಲಕ್ಕೆ ಅಗತ್ಯವಾದ ತರಬೇತಿಗಳನ್ನು ನೀಡಿದಾಗ ಶಿಕ್ಷಕರು ಬೋಧನೆಗೆ ಸಂಬಂಧಿಸಿದ ಹಲವಾರು ಕೌಶಲಗಳನ್ನು ಪಡೆದು ಉತ್ತಮ ಗುಣಮಟ್ಟದ ಬೋಧನೆ ಮಾಡಲು ಸಾಧ್ಯವಾಗಿ ಮಕ್ಕಳು ಕಲಿಕೆಯಲ್ಲಿ ಸರ್ವಾಂಗೀಣ ಪ್ರಗತಿ ಹೊಂದಲು ಸಾಧ್ಯವಾಗುತ್ತದೆ ಎಂದರು. ಮೇ 26,27 ಮತ್ತು 28ರಂದು ನಡೆದ ಮೂರು ದಿನಗಳ ತರಬೇತಿ ಕಾರ್ಯಾಗಾರದಲ್ಲಿ ಶಿಕ್ಷಕರಿಗೆ ಬೋಧನೆಗೆ ಅಗತ್ಯವಾದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿರುವ ಕೇಂದ್ರೋದ್ಯಮಗಳು, ಬ್ಯಾಂಕ್‌ಗಳು, ಕೇಂದ್ರ ಸರ್ಕಾರಿ ಕಚೇರಿಗಳು ಹಾಗೂ ವಸತಿ ಸಮುಚ್ಚಯಗಳಲ್ಲಿರುವ ಕನ್ನಡೇತರರು, ಅನ್ಯಭಾಷಿಕರಿಗೆ ಕನ್ನಡ ಕಲಿಸುವ ತರಬೇತಿ ನೀಡಲಾಗುತ್ತಿದ್ದು, ಆಸಕ್ತರು ಅರ್ಜಿ ಸಲ್ಲಿಸಿ ನೋಂದಾಯಿಸಿಕೊಳ್ಳಬಹುದಾಗಿದೆ.  ಕನ್ನಡ ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ಕನ್ನಡೇತರರಿಗೆ ಕನ್ನಡ ಕಲಿಸುವ ಪ್ರಯತ್ನವನ್ನು ಹಲವು ವರ್ಷಗಳಿಂದ ನಿರಂತರವಾಗಿ ಕೈಗೊಳ್ಳುತ್ತಿದ್ದು, ಪ್ರಸಕ್ತ ಸಾಲಿನಲ್ಲಿ ಇನ್ನಷ್ಟು ವ್ಯಾಪಕಗೊಳಿಸಲು ಪ್ರಾಧಿಕಾರವು ವೈಜ್ಞಾನಿಕ ಪಠ್ಯಕ್ರಮವನ್ನು ರೂಪಿಸಿ, ತರಬೇತಿ ಹೊಂದಿದ ಶಿಕ್ಷಕರನ್ನು ಆಯೋಜಿಸುವ ಮೂಲಕ ವೃತ್ತಿಪರತೆಯನ್ನು ಒದಗಿಸಲಿದೆ. ಕನ್ನಡ ಕಲಿಸುವ ತರಬೇತಿಯನ್ನು 3 ತಿಂಗಳ ಅವಧಿಯಲ್ಲಿ ವಾರಕ್ಕೆ 3 ದಿನದಂತೆ ಪ್ರತಿದಿನ 01 ಗಂಟೆ ತರಬೇತಿಯನ್ನು ನೀಡಲಾಗುವುದು. ಆಸಕ್ತ ಕನ್ನಡೇತರರು ತಮ್ಮ ಸ್ವ-ವಿವರದೊಂದಿಗೆ ಜೂನ್ 7 ರ ಒಳಗಾಗಿ ಅರ್ಜಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಹಾಯಕ ನಿರ್ದೇಶಕರ ಕಛೇರಿ, ಡಾ.ಶಿವರಾಮ ಕಾರಂತ ಕಲಾಗ್ರಾಮ, ಪ್ರಗತಿ ನಗರ, ಅಲೆವೂರು ಗ್ರಾಮ, ಮಣಿಪಾಲ, ಉಡುಪಿ ಇಲ್ಲಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂ.ಸಂಖ್ಯೆ: 0820-2986168, ಮೊ.ನಂ:7026506627 ಅನ್ನು ಸಂಪರ್ಕಿಸಬಹುದಾಗಿದೆ ಎಂದು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ), ಸಿದ್ದಾರ್ಥನಗರ, ಮೈಸೂರು ಸಂಸ್ಥೆಯಲ್ಲಿ ಪ್ರಸಕ್ತ ಸಾಲಿನ ದೃಶ್ಯಕಲೆಯಲ್ಲಿ ಪ್ರಥಮ ಬಿ.ವಿ.ಎ (ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್) ಪದವಿ ಪ್ರವೇಶಾತಿಗಾಗಿ, ದ್ವಿತೀಯ ಪಿ.ಯು.ಸಿ. ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳಿಂದ ವೆಬ್‌ಸೈಟ್  https://uucms.karnataka.gov.in ಅಥವಾ https://www.cavamysore.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ. ಸದರಿ ಪದವಿಯಲ್ಲಿ 3 ನೇ ಸೆಮಿಸ್ಟರ್‌ನಿಂದ ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್ ಕಲೆ (ಅಚ್ಚುಕಲೆ), ಅನ್ವಯಕಲೆ, ಕಲಾ ಇತಿಹಾಸ ಹಾಗೂ ಛಾಯಾಚಿತ್ರ ಮತ್ತು ಛಾಯಾಚಿತ್ರ ಪತ್ರಿಕೋದ್ಯಮ ವಿಭಾಗಗಳಲ್ಲಿ ವಿಶೇಷ ಅಧ್ಯಯನದ ಸ್ನಾತಕ ಪದವಿಯಾಗಿರುತ್ತದೆ. ಅರ್ಜಿ ಸಲ್ಲಿಸಲು ಜೂನ್ 10 ಕೊನೆಯ ದಿನ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪ್ರವೇಶಾತಿಗಾಗಿ ಅರ್ಹತಾ ಪರೀಕ್ಷೆಯ ದಿನಾಂಕ ಮತ್ತು ಇತರೆ ಮಾಹಿತಿಯನ್ನು ಪ್ರತ್ಯೇಕವಾಗಿ ತಿಳಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 0821-2438931 ಅನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಡೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮಕ್ಕಳನ್ನು ಕೇವಲ ಪಠ್ಯಪುಸ್ತಕಗಳಿಗೆ ಮಾತ್ರ ಸೀಮಿತವಾಗಿರಿಸದೆ, ಮಕ್ಕಳು ಎಲ್ಲಾ ವಿಧದ ಜ್ಞಾನಗಳನ್ನು ಪಡೆಯುವ ಅವಕಾಶವನ್ನು ಕಲ್ಪಿಸಿಕೊಡಬೇಕು ಎಂದು ಹೆಸ್ಕುತೂರು  ಶಾಲೆಯ ಮುಖ್ಯ ಶಿಕ್ಷಕ ಅಬ್ದುಲ್ ರವೂಫ್ ಹೇಳಿದರು. ಅವರು ಇಲ್ಲಿನ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಯೋಜಿಸಿದ ಮೂರು ದಿನಗಳ ಶಿಕ್ಷಕರ ತರಬೇತಿ ಕಾರ್ಯಗಾರ ಒರಿಯೆಂಟೇಷನ್ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಶಿಕ್ಷಣದ ನಿಜವಾದ ಕಲ್ಪನೆಯು ಮಕ್ಕಳಲ್ಲಿ ಅಡಕವಾಗಿರುವ ಎಲ್ಲಾ ಪ್ರತಿಭೆಯನ್ನು ಹೊರ ಜಗತ್ತಿಗೆ ಪರಿಚಯಿಸುವುದಾಗಿದೆ. ಹೆಚ್ಚು ಹೆಚ್ಚು ಚಟುವಟಿಕೆಗಳನ್ನು ಪಠ್ಯದ ಜೊತೆಯಲ್ಲಿ ಅಳವಡಿಸಿಕೊಂಡಾಗ ಮಕ್ಕಳು ಆಸಕ್ತಿದಾಯಕ ಕಲಿಕೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತದೆ. ಶಿಕ್ಷಕರು ಹೆಚ್ಚು ತರಬೇತಿಗಳಲ್ಲಿ,ಕಾರ್ಯಗಾರಗಳಲ್ಲಿ ಪಾಲ್ಗೊಂಡು ಹೆಚ್ಚಿನ ಜ್ಞಾನವನ್ನು ಪಡೆದಾಗ ಮಕ್ಕಳು ಹೆಚ್ಚು ಕ್ರಿಯಾಶೀಲತೆಯಿಂದ ಕಲಿಕೆಯಲ್ಲಿ ಪಾಲ್ಗೊಳ್ಳುವಂತೆ ಮಾಡಲು ಸಾಧ್ಯವಾಗುತ್ತದೆ ಎಂದರು. ಮಕ್ಕಳ ಜ್ಞಾನವನ್ನು, ಬುದ್ಧಿ ಮಟ್ಟವನ್ನು ಅಳೆಯಲು ಪಠ್ಯದ ಅಂಕಗಳಿಕೆಯೊಂದೇ ಮೂಲ ಆಧಾರವಾಗಲಾರದು. ಮಕ್ಕಳು ಎಲ್ಲಾ ಜ್ಞಾನವನ್ನು ಪಡೆದು ಸರ್ವಾಂಗೀಣ ಪ್ರಗತಿ ಹೊಂದಿದಾಗ ಪಡೆದ ಶಿಕ್ಷಣ ಸಾರ್ಥಕವಾಗುತ್ತದೆ. ಇದಕ್ಕೆ ಶಿಕ್ಷಕರ ತರಬೇತಿ ಕಾರ್ಯಗಾರಗಳು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಮತ್ತು ನಂತರದ (ಪಿ.ಯು.ಸಿ, ಐ.ಟಿ.ಐ ಮತ್ತು ಡಿಪ್ಲೋಮಾ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ) ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ವೆಬ್‌ಸೈಟ್ https://shp.karnataka.gov.in/bcwd ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯ ಪ್ರವೇಶಾತಿಗೆ ಜೂನ್ 16 ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಜೂನ್ 20 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‌ಸೈಟ್ https://bcwd.karnataka.gov.in/ ಅಥವಾ ಸಹಾಯವಾಣಿ ಸಂಖ್ಯೆ: 8050770004 ಮತ್ತು 8050770005 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Read More