ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಬೇರೆ ಬೇರೆ ಭಾಷೆಗಳಲ್ಲಿರುವ ಸಾಹಿತ್ಯಗಳ ನಡುವೆ ವಿನಿಮಯಗಳು ನಡೆಯುವ ಮೂಲಕವಷ್ಟೇ ಯಾವುದೇ ಸಾಹಿತ್ಯ ಬೆಳವಣಿಗೆ ಸಾಧಿಸಲು ಸಾಧ್ಯ. ಎರಡು ಭಾಷೆಗಳ ಮೇಲೆ ಪ್ರಭುತ್ವ ಸಾಧಿಸಿದ ಭಾಷಾಂತರಕಾರರಿಲ್ಲದೆ ಆ ರೀತಿಯ ವಿನಿಮಯ ಸಾಧ್ಯವಿಲ್ಲ ಎಂದು ಕನ್ನಡದ ಹಿರಿಯ ಲೇಖಕಿ ವೈದೇಹಿ ಹೇಳಿದರು. ಅವರು ಮಣಿಪಾಲದ ಅವರ ಮನೆ ‘ಇರುವಂತಿಗೆ’ಯಲ್ಲಿ ನಡೆದ ಪುಸ್ತಕ ಬಿಡುಗಡೆಯ ಸರಳ ಸಮಾರಂಭದಲ್ಲಿ ಪಾರ್ವತಿ ಜಿ. ಐತಾಳರ ‘ಮಲೆಯಾಳ ಸಾಹಿತ್ಯದಲ್ಲಿ ಮಹಿಳಾ ಧ್ವನಿಗಳು’ ಎಂಬ ಕೃತಿಯನ್ನು ಬಿಡುಗಡೆಗೊಳಿಸಿ ಮಾತನಾಡಿದರು. ಮಾಹೆ ವಿಶ್ವವಿದ್ಯಾನಿಲಯದ ಗಾಂಧಿ ಅಧ್ಯಯನ ಕೇಂದ್ರದ ಮುಖ್ಯಸ್ಥ ಡಾ.ವರದೇಶ್ ಹಿರೇಗಂಗೆ, ಕೃತಿಕಾರ್ತಿ ಪಾರ್ವತಿ ಐತಾಳ್, ಸಾಂಸ್ಕೃತಿಕ ಸಂಘಟಕರಾದ ಶ್ರೀನಿವಾಸ ಮೂರ್ತಿ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಬಸ್ರೂರು ಶಾರದಾ ಕಾಲೇಜಿನ ಕನ್ನಡ ಉಪನ್ಯಾಸಕ ಕುಮಾರ್ ಸ್ವಾಗತಿಸಿದರು. ಗಾಂಧಿ ಅಧ್ಯಯನ ಕೇಂದ್ರದ ಸಂಶೋಧಕಿ ಕೌಸ್ತುಭ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಸಾಲಿಗ್ರಾಮದ ತರಕಾರಿ ವ್ಯಾಪಾರಿ ವಿಠ್ಠಲ ಪೈ (57) ಅವರು ಸೋಮವಾರದಂದು ವಿಧಿವಶರಾದರು. ಸಾಲಿಗ್ರಾಮ ಪರಿಸರದಲ್ಲಿ ಭಜನಾ ಪ್ರವೀಣರಾಗಿ ಹೆಸರಾಂತರಾಗಿದ್ದ ಅವರು ರಾಮನ ಅನನ್ಯ ಭಕ್ತರಾಗಿದ್ದರು. ಆಗಿಂದಾಗ್ಗೆ ನಮ್ಮ ಶ್ರೀ ಗುರು ನರಸಿಂಹ ದೇವಳಕ್ಕೆ ತರಕಾರಿಯನ್ನು ಸೇವಾ ರೂಪದಲ್ಲಿ ತಂದು ಒಪ್ಪಿಸುತ್ತಿದ್ದರು. ಪೈ ಅವರಿಗೆ ಅದೆಷ್ಟು ಬಾರಿ ಶ್ರೀ ದೇವರ ಪ್ರಸಾದವನ್ನು ನೀಡಿ ಶುಭವನ್ನು ಹಾರೈಸಿದ್ದೇವೋ ಅದರ ಲೆಕ್ಕವೇ ಸಿಗುತ್ತಿಲ್ಲ. ತೆಕ್ಕಟ್ಟೆ ಕೊಮೆಯಲ್ಲಿ ಪೈ ಮತ್ತು ಸಮಾನ ಮನಸ್ಕ ರಾಮಭಕ್ತರ ತನು ಮನ ಧನ ಸೇವೆಯಿಂದ ಅಲ್ಲಿನ ಶ್ರೀ ರಾಮ ಮಂದಿರವು ನಿತ್ಯ ಪೂಜಾಯುಕ್ತ ಶ್ರದ್ಧಾಕೇಂದ್ರವಾಗಿ ರೂಪುಗೊಂಡಿದೆ. ಮೃತರು ಪತ್ನಿ ಹಾಗೂ ಮೂವರು ಪುತ್ರಿಯವರನ್ನು ಅಗಲಿದ್ದಾರೆ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಜೂ.16: ತಾಲೂಕಿನ ಕುಂದಾಪುರ ರೈಲ್ವೆ ನಿಲ್ದಾಣದ ಸಮೀಪದ ಕಳಂಜೆ ಎಂಬಲ್ಲಿ ಬೆಳಿಗ್ಗೆ 8:30ರ ಸುಮಾರಿಗೆ ಕೊಂಕಣ್ ರೈಲ್ವೆ ಮಾರ್ಗದ ಹಳಿಗಳ ಮೇಲೆ ಮರ ಬಿದ್ದು ವಿದ್ಯುತ್ ತಂತಿಗಳು ತುಂಡಾಗಿದ್ದರಿಂದ ಎಲ್ಲಾ ರೈಲುಗಳು 4 ಗಂಟೆಗೂ ಹೆಚ್ಚು ಕಾಲ ವಿಳಂಬ ಸಂಚಾರ ಮಾಡಿದ ಘಟನೆ ಸೋಮವಾರ ನಡೆದಿದೆ. ಕಳಂಜೆ ಬಳಿ ಮರ ಬಿದ್ದು ರೈಲ್ವೆ ವಿದ್ಯುತ್ ತಂತಿಗಳು ತುಂಡಾಗಿದ್ದವು. ಇಲಾಖೆಯಿಂದ ಮರವನ್ನು ತೆರವುಗೊಳಿಸುವ ಕಾರ್ಯ ಕೈಗೊಳ್ಳಲಾಯಿತಾದರೂ ಮಳೆಯ ನಡುವೆ ವಿದ್ಯುತ್ ತಂತಿಗಳನ್ನು ಜೋಡಿಸುವ ಕಾರ್ಯ ವಿಳಂಬವಾಗಿತ್ತು. ಈ ನಡುವೆ ಮಧ್ಯಾಹ್ನ 12:30ರ ವೇಳೆಗೆ ರೈಲ್ವೆ ಹಳಿಗಳು ಕ್ಲೀಯರ್ ಮಾಡಿದ್ದರಿಂದ ಡಿಸೆಲ್ ಇಂಜಿನ್ ಬಳಸಿ ಬೈಂದೂರು ಕಡೆಯಿಂದ ಬಂದ ರೈಲನ್ನು ಕುಂದಾಪುರ ಕಡೆಗೂ, ಕುಂದಾಪುರ ಕಡೆಯಿಂದ ಬಂದ ರೈಲನ್ನು ಸೇನಾಪುರದ ತನಕ ಎಳೆದೊಯ್ಯಲಾಯಿತು. ಅಲ್ಲಿಂದ ಮುಂದೆ ವಿದ್ಯುತ್ ಇಂಜಿನ್ ಮೂಲಕ ರೈಲನ್ನು ಮುನ್ನಡೆಸಲಾಯಿತು. ಅಷ್ಟರಲ್ಲಾಗಲೇ ಎಲ್ಲಾ ರೈಲುಗಳನ್ನು ನಾಲ್ಕು ಗಂಟೆಗೂ ಹೆಚ್ಚು ಕಾಲ ವಿಳಂಬವಾಗಿದ್ದವು. ಸಂಜೆ ವೇಳೆಗೆ ತುಂಡಾಗಿದ್ದ ವಿದ್ಯುತ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಜೂ.16: ಉಡುಪಿ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜೂನ್ 17ರಂದು ಅಂಗನವಾಡಿ, ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆ, ಪಿಯುಸಿ ಹಾಗೂ ಐಟಿಐ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಅವರು ರಜೆ ಘೋಷಿಸಿ ಆದೇಶಿಸಿದ್ದಾರೆ. ಉಳಿದಂತೆ ಪದವಿಪೂರ್ವ, ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್ ಕಾಲೇಜುಗಳಿಗೆ ರಜೆ ಘೋಷಿಸಲಾಗಿಲ್ಲ. ಆದರೆ ವಿದ್ಯಾರ್ಥಿಗಳ ಹಾಜರಾತಿಯನ್ನು ಕಡ್ಡಾಯ ಮಾಡುವಂತಿಲ್ಲ ಮತ್ತು ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು ಸೂಕ್ತ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಕಳೆದ ಆರು ದಿನಗಳಿಂದ ರೆಡ್ ಅಲರ್ಟ್ ಇದ್ದುದರಿಂದ ಗುರುವಾರ ಹಾಗೂ ಶುಕ್ರವಾರ ಶಾಲೆಗಳಿಗೆ ರಜೆ ನೀಡಲಾಗಿತ್ತು. ಶನಿವಾರ ಮಳೆ ಕಡಿಮೆಯಿದ್ದುದರಿಂದ ಎಂದಿನಂತೆ ತರಗತಿಗಳು ನಡೆದಿದ್ದವು. ಸೋಮವಾರ ಆರೆಂಜ್ ಅಲರ್ಟ್ ಇದ್ದುದರಿಂದ ಜಿಲ್ಲಾಡಳಿತ ನೇರವಾಗಿ ರಜೆ ಘೋಷಿಸದೇ ಸ್ಥಳೀಯ ಪರಿಸ್ಥಿತಿಗೆ ಅನುಗುಣವಾಗಿ ರಜೆ ಘೋಷಿಸುವ ನಿರ್ಧಾರವನ್ನು ಶಾಲಾಡಳಿತಕ್ಕೆ ಬಿಟ್ಟಿದ್ದು, ಕೆಲವು ಶಾಲೆಗಳು ಅದಾಗಲೇ ರಜೆಯನ್ನೂ ಘೋಷಿಸಿಕೊಂಡಿದ್ದವು. ಆದರೆ ಅಂತಿಮವಾಗಿ ಜಿಲ್ಲಾಡಳಿತವೇ ರಜೆ ನೀಡಿತ್ತು. ಮಂಗಳವಾರವೂ ಅಧಿಕ ಮಳೆ ಮುನ್ಸೂಚನೆ ಇರುವುದರಿಂದ ರಜೆ ಘೋಷಿಸಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಜೂ.16: ತಾಲೂಕಿನ ಹೆಮ್ಮಾಡಿ – ಕೊಲ್ಲೂರು ಮಾರ್ಗದಲ್ಲಿ ಬಸ್ಸಿಗೆ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ನಡೆದಿದೆ. ಅಪಘಾತದ ಸಂದರ್ಭ ಬೈಕಿಗೆ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಹೋಗಿದೆ. ಮೃತ ಬೈಕ್ ಸವಾರನನ್ನು ಸಿಗಂದೂರಿನ ಶರತ್ (25) ಎಂದು ಗುರುತಿಸಲಾಗಿದೆ. ಸಿಗಂದೂರಿನಿಂದ ಕುಂದಾಪುರಕ್ಕೆ ಸಂಬಂಧಿಕರ ಮನೆಗೆ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಕೆಂಚನೂರು ಮಲ್ಲಾರಿ ರಸ್ತೆಯ ತಿರುವಿನಲ್ಲಿ ಸವಾರ ನಿಯಂತ್ರಣ ತಪ್ಪಿ ಹೆಮ್ಮಾಡಿ ಕಡೆಯಿಂದ ಬರುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಶರತ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್ ಸಂಪೂರ್ಣ ಬೆಂಕಿಯಿಂದಾಗಿ ಸುಟ್ಟು ಕರಕಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕಳೆದ ಐದು ದಿನಗಳ ಹಿಂದಷ್ಟೇ ಅನಿರೀಕ್ಷಿತ ಬೆಳವಣಿಗೆಯೊಂದರಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರನ್ನು ಏಕಾಏಕಿ ಬದಲಾವಣೆ ಮಾಡಲಾಗಿದ್ದು, ನೂತನ ಅಧ್ಯಕ್ಷರಿಗೆ ಪಟ್ಟ ಕಟ್ಟಲಾಗಿದೆ. ಸೋಮವಾರ ಉಡುಪಿಯಲ್ಲಿ ಜರುಗಿದ ಅಧಿಕಾರ ಹಸ್ತಾಂತರ ಕಾರ್ಯಕ್ರಮದಲ್ಲಿ ಬಿಜೆಪಿ ಪಕ್ಷದ ಈ ನಡೆದ ಬಗ್ಗೆ ನಿರ್ಗಮಿತ ಅಧ್ಯಕ್ಷ ಬಿ. ಕಿಶೋರ್ ಕುಮಾರ್ ಕುಂದಾಪುರ ಅವರು ಬಹಿರಂಗವಾಗಿಯೇ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. 2024ರ ಜನವರಿಯಲ್ಲಿ ಕಿಶೋರ್ ಕುಮಾರ್ ಅವರನ್ನು ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು. ಆದರೆ ಏಕಾಏಕಿ ಅಧ್ಯಕ್ಷ ಅವಧಿಗೆ ಪೂರ್ವದಲ್ಲೇ ನಿರ್ದಿಷ್ಟ ಕಾರಣ ನೀಡದೇ ಅವರಿಂದ ಅಧ್ಯಕ್ಷ ಸ್ಥಾನವನ್ನು ಕಸಿದುಕೊಳ್ಳಲಾಗಿದೆ. ಈ ಮೂಲಕ ಬಿಜೆಪಿಯ ಬಣ ರಾಜಕೀಯದ ಬಣ ಮತ್ತೊಮ್ಮೆ ಬಯಲಾಗಿದೆ ಎಂಬ ಮಾತುಗಳು ಕೇಳಿಬರುತ್ತಿದೆ. ಅಧಿಕಾರ ಹಸ್ತಾಂತರ ಕಾರ್ಯಕ್ರಮದಲ್ಲಿ ಮಾತನಾಡಿದ ಕಿಶೋರ್ ಕುಮಾರ್ ಅವರು ಮೊದಲಿನಿಂದಲೂ ನನಗೆ ಕಾರ್ಯಕರ್ತರ ಜೊತೆಗೆ ಹೆಚ್ಚಿನ ಒಡನಾಟವಿದ್ದು, ಜಿಲ್ಲಾಧ್ಯಕ್ಷನಾದ ಬಳಿಕವೂ ಅದನ್ನೇ ಮುಂದುವರಿಸಿದ್ದೆ. ನಾಯಕ ಹಿಂದೆ ತಿರುಗುವು ಕೆಲಸ ಮಾಡಿಲ್ಲ. ಜಿಲ್ಲಾಧ್ಯಕ್ಷನಾದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ಬೈಂದೂರು ತಾಲೂಕಿನಾದ್ಯಂತ ಕಳೆದ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿದ್ದು ನದಿಗಳು ಉಕ್ಕಿ ಹರಿದು ಸೋಮವಾರ ಹಲವೆಡೆ ನೆರೆ ಕಾಣಿಸಿಕೊಂಡಿದೆ. ಪರಿಣಾಮ ಕುಂದಾಪುರ ತಾಲೂಕಿನ ಕಮಲಶಿಲೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕುಬ್ಜಾ ನದಿ ನೀರು ಹಾಗೂ ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಸುತ್ತ ಬ್ರಹ್ಮಕುಂಡ ನದಿ ನೀರು ಉಕ್ಕಿ ಹರಿದು ಸುತ್ತುವರಿದಿದೆ. ನದಿ ಪಾತ್ರದ ಊರುಗಳು, ತಗ್ಗು ಪ್ರದೇಶಗಳು ನೀರಿನಿಂದ ಆವೃತಗೊಂಡಿದೆ. ಪಶ್ಚಿಮ ಘಟ್ಟ ಪ್ರದೇಶದಲ್ಲಿ ರಾತ್ರಿಯಿಡೀ ಭಾರೀ ಮಳೆಯಿಂದಾಗಿ ಸೌಪರ್ಣಿಕಾ ನದಿ ಪಾತ್ರದ ನಾವುಂದ ಗ್ರಾಮದ ಸಾಲ್ಬುಡ, ಅರೆಹೊಳೆ, ನಾಡ ಗ್ರಾಮದ ಚಿಕ್ಕಳ್ಳಿ, ಪಡುಕೋಣೆ ಸೇರಿದಂತೆ ಹಲವು ಭಾಗಗಳಲ್ಲಿ ನೆರೆ ಬಂದಿದ್ದು ಪರಿಣಾಮ ಮರವಂತೆ – ಪಡುಕೋಣೆ ರಸ್ತೆ ಜಲಾವೃತಗೊಂಡಿದೆ. ಹೆರಂಜಾಲು, ಶಿರೂರು ಗ್ರಾಮಗಳಲ್ಲಿಯೂ ನೆರೆ ಕಾಣಿಸಿಕೊಂಡಿದೆ. ಎಡಮಾವಿನ ಹೊಳೆ ಪಾತ್ರದ ಹೆರಂಜಾಲು, ಹಳಗೇರಿಯಲ್ಲಿ ಕೃಷಿ ಭೂಮಿಗಳು ಜಲಾವೃತಗೊಂಡಿದೆ. ಸುಮನಾವತಿ ನದಿ ಪಾತ್ರದ ಬಿಜೂರು, ಯಡ್ತರೆ, ತಗ್ಗರ್ಸೆಯ ಹಲವೆಡೆ ಜಲಾವೃತಗೊಂಡು ಮನೆಗಳಿಗೂ ನೆರೆ ನೀರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದೇಶದ ಪ್ರತಿಷ್ಠಿತ ವೈದ್ಯಕೀಯ ವಿಶ್ವವಿದ್ಯಾನಿಲಯಗಳಿಗೆ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ನಡೆಸಿದ ನೀಟ್ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಹೆಮ್ಮಾಡಿಯ ಜನತಾ ಕಾಲೇಜಿನ ವಿದ್ಯಾರ್ಥಿಗಳು ಅತ್ಯುನ್ನತ ಅಂಕಗಳಿಸುವ ಮೂಲಕ ಅದ್ಭುತ ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ ಆಕಾಶ್ ಹೆಬ್ಬಾರ್ 525, ಸುಬ್ರಹ್ಮಣ್ಯ ಜಿ.515 ಅಂಕಗಳನ್ನು ಪಡೆದು ಅರ್ಹತೆ ಪಡೆದಿರುತ್ತಾರೆ. ಗುಣಮಟ್ಟದ ಶಿಕ್ಷಣಕ್ಕೆ ಹೆಸರಾದ ಜನತಾ ವಿದ್ಯಾಸಂಸ್ಥೆ ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ರೀತಿಯಲ್ಲಿ ತರಬೇತುಗೊಳಿಸಿ ಕಾಲೇಜು ಪ್ರಾರಂಭದ ತೃತೀಯ ವರ್ಷವೂ ಅತ್ತ್ಯುತ್ತಮ ಫಲಿತಾಂಶವನ್ನು ದಾಖಲಿಸಿದೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ,ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಳಗಾವಿ: ಯಾವುದೇ ಭೇದ ಭಾವವಿಲ್ಲದೆ ಆತಿಥ್ಯ ನೀಡುವುದರಲ್ಲಿ ಬಂಟರ ಸಮುದಾಯ ಹೆಸರುವಾಸಿ. ಈ ಸಮುದಾಯದವರು ಅತ್ಯಂತ ಶ್ರಮಜೀವಿಗಳು, ಅತಿಥಿ ದೇವೋಭವ ಎನ್ನುವ ಹಾಗೆ ಅತಿಥಿಗಳನ್ನು ದೇವರ ರೀತಿ ಭಾವಿಸುತ್ತಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೆಳಗಾವಿಯ ಬಂಟರ ಯಾನೆ ನಾಡವರ ಸಂಘದ ವತಿಯಿಂದ ರಾಷ್ಟ್ರೀಯ ಹೆದ್ದಾರಿ 4 ರ ನ್ಯೂ ಗಾಂಧಿ ನಗರದಲ್ಲಿ ನವೀಕೃತಗೊಂಡಿರುವ ಬಂಟರ ಭವನದ ಉದ್ಘಾಟನಾ ಸಮಾರಂಭ ಹಾಗೂ ಮಾಣಿಕ್ಯ ಸಂಭ್ರಮದಲ್ಲಿ ಮಾತನಾಡಿದ ಸಚಿವರು, ಚಿಕ್ಕ ವಯಸ್ಸಿನಲ್ಲೇ ಮನೆಬಿಟ್ಟು ಹೋಗಿ ಸ್ವಂತ ಕಾಲಮೇಲೆ ನಿಲ್ಲುವ ಸ್ವಾಭಿಮಾನಿಗಳು. ದೇಶದ ವಿವಿಧೆಡೆ ಸ್ವಾವಲಂಬಿ ಬದುಕನ್ನು ಕಟ್ಟಿಕೊಂಡಿದ್ದಾರೆ ಎಂದು ಹೇಳಿದರು. ಸಂಸ್ಕೃತಿ, ಕಲೆಯಲ್ಲಿ ನಿಮ್ಮ ಸಮಾಜಕ್ಕೆ ಇರುವ ಆಸಕ್ತಿ ನೋಡಿ ಮಂತ್ರಮುಗ್ಧಳಾಗಿದ್ದೇನೆ. ಈ ಸಮುದಾಯದವರು ನಿಸ್ವಾರ್ಥಗಳು, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆಯಾಗಿರುವುದು ನನ್ನ ಪೂರ್ವ ಜನ್ಮದ ಪುಣ್ಯ. ಉಡುಪಿ ಶ್ರೀ ಕೃಷ್ಣ, ಕಟೀಲು ದುರ್ಗಾಪರಮೇಶ್ವರಿ, ಕಾಪು ಮಾರಿಗುಡಿ ದೇವರ ದರ್ಶನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಜೂ.15: ಉಡುಪಿ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜೂನ್ 16ರಂದು ಅಂಗನವಾಡಿ, ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಗಳಿಗೆ ಜಿಲ್ಲಾಧಿಕಾರಿ ಅವರು ರಜೆ ಘೋಷಿಸಿ ಆದೇಶಿಸಿದ್ದಾರೆ. ದ್ವಿತೀಯ ಪಿಯುಸಿ – 3 ಪರೀಕ್ಷೆಗಳು ಎಂದಿನಂತೆ ನಡೆಯಲಿದೆ. ಉಳಿದಂತೆ ಪದವಿಪೂರ್ವ, ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್ ಹಾಗೂ ಐಟಿಐ ಕಾಲೇಜುಗಳಿಗೆ ರಜೆ ಘೋಷಿಸಲಾಗಿಲ್ಲ. ಆದರೆ ವಿದ್ಯಾರ್ಥಿಗಳ ಹಾಜರಾತಿಯನ್ನು ಕಡ್ಡಾಯ ಮಾಡುವಂತಿಲ್ಲ ಮತ್ತು ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು ಸೂಕ್ತ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ರಜೆ ಘೋಷಿಸುವ ಪೂರ್ವದಲ್ಲಿ ಸೋಮವಾರ ಶಾಲೆಗಳಿಗೆ ಜಿಲ್ಲಾಡಳಿತದಿಂದ ರಜೆ ಘೋಷಿಸಿರಲಿಲ್ಲ. ಆದರೆ ಆಯಾ ಊರಿನ ಪರಿಸ್ಥಿತಿಗೆ ಅನುಗುಣವಾಗಿ ಮುಖ್ಯ ಶಿಕ್ಷಕರು ಮತ್ತು ಎಸ್.ಡಿ.ಎಂ.ಸಿ ಸಮಿತಿ ಚರ್ಚಿಸಿ ಶಾಲೆಗೆ ರಜೆಯನ್ನು ಘೋಷಿಸಬಹುದಾಗಿದೆ ಎಂದು ಜಿಲ್ಲಾಡಳಿತ ಸೂಚನೆ ನೀಡಿತ್ತು. ಭಾನುವಾರ ರಾತ್ರಿ 9 ಗಂಟೆಯ ಬಳಿಕ ಮಳೆ ಪರಿಸ್ಥಿತಿ ಅವಲೋಕಿಸಿ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಕಳೆದ ನಾಲ್ಕುದು ದಿನಗಳಿಂದ ರೆಡ್ ಅಲರ್ಟ್ ಇದ್ದುದರಿಂದ ಗುರುವಾರ ಹಾಗೂ ಶುಕ್ರವಾರ…
