Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಗೆ ಸಂಬಂಧಿಸಿ ಆ.5ರಂದು ಕರಡು ಪಟ್ಟಿಯನ್ನು ಪ್ರಕಟಿಸಲಾಗುವುದು. ಇದರಲ್ಲಿ ಹೆಸರು ಬಿಟ್ಟು ಹೋಗಿದ್ದರೆ ಮಾತ್ರ ಸಂಬಂಧಪಟ್ಟ 11 ದಾಖಲೆಗಳಲ್ಲಿ ಒಂದನ್ನು ಸಲ್ಲಿಸಬೇಕೆ ಹೊರತು ಹೆಸರು ಇದ್ದವರು ಯಾವುದೇ ದಾಖಲೆಗಳನ್ನು ಸಲ್ಲಿಸಬೇಕಾದ ಅಗತ್ಯ ಇರುವುದಿಲ್ಲ ಎಂದು ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ತಿಳಿಸಿದ್ದಾರೆ. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ಉಡುಪಿ ಪತ್ರಿಕಾ ಭವನದಲ್ಲಿ ಶುಕ್ರವಾರ ಆಯೋಜಿಸಲಾದ ಎಸ್‌ಐಆರ್ (ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ) ಕುರಿತು ತಿಂಗಳ ಅಂಗಳ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮನೆಮನೆಗೆ ಭೇಟಿ ನೀಡಿ ಫಾರ್ಮ್ ನೀಡಲು ಮತ್ತು ಸಂಗ್ರಹಿಸುವಂತೆ ಬಿಎಲ್‌ಓಗಳಿಗೆ ಹಲವು ಬಾರಿ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ನಿಧನಗತಿಯಲ್ಲಿ ಕಾರ್ಯನಿರ್ವಹಿಸಿದ ಬಿಎಲ್‌ಓಗಳಿಗೆ ಈಗಾಗಲೇ ನೋಟೀಸ್ ಜಾರಿ ಮಾಡಲಾಗಿದೆ. ಸರಿಯಾಗಿ ಕರ್ತವ್ಯ ನಿರ್ವಹಿಸದ ಬಿಎಲ್‌ಓಗಳ ಬಗ್ಗೆ ಗಮನಕ್ಕೆ ತಂದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು. ಫಾರ್ಮ್ ಸಲ್ಲಿಸಿಯೂ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲೆಯ ಹೆಬ್ರಿಯ ಚಾರಾದಲ್ಲಿರುವ ಜವಾಹರ ನವೋದಯ ವಿದ್ಯಾಲಯದಲ್ಲಿ 2027-28 ನೇ ಶೈಕ್ಷಣಿಕ ಸಾಲಿಗೆ 6 ನೇ ತರಗತಿಯ ಪ್ರವೇಶಾತಿಗಾಗಿ, 5 ನೇ ತರಗತಿಯಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಹಾಗೂ ಸಮೀಪದ ಜವಾಹರ್ ನವೋದಯ ವಿದ್ಯಾಲಯಕ್ಕೆ ಭೇಟಿ ನೀಡಿಯೂ ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ವಿದ್ಯಾರ್ಥಿಗಳು ತಾವು ಓದುತ್ತಿರುವ ಶಾಲೆಯ ಮುಖ್ಯೋಪಾಧ್ಯಾಯರಿಂದ ಅವಶ್ಯಕ ದಾಖಲೆಗಳನ್ನು ಪಡೆದು ಜುಲೈ 31 ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ನವೆಂಬರ್ 28ರಂದು ಪ್ರವೇಶ ಪರೀಕ್ಷೆಯು ನಡೆಯಲಿದೆ. ನೋಂದಣಿ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ https://navodaya.gov.in ಅಥವಾ ಕಚೇರಿಯ ದೂ.ಸಂಖ್ಯೆ: 08253-251260 ಅನ್ನು ಸಂಪರ್ಕಿಸಬಹುದಾಗಿದೆ ಎಂದು ವಿದ್ಯಾಲಯದ ಪ್ರಾಂಶುಪಾಲರ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ವಿಶೇಷಚೇತನರು ಇಂದು ಸಮಾಜದ ಮುಖ್ಯವಾಹಿನಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಅಂತರಾಷ್ಟ್ರೀಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ಹಲವು ಪ್ರತಿಭೆಗಳಿವೆ ಅವರಿಗೆ ಸ್ವಾಭಿಮಾನದ ಬದುಕನ್ನು ಕಲ್ಪಿಸುವ ಕೆಲಸವನ್ನು ಸಮಾಜ ಮತ್ತು ಸರಕಾರ ಮಾಡಬೇಕಾಗಿದೆ ಎಂದು ಕುಂದಾಪುರ ರೆಡ್‌ಕ್ರಾಸ್ ಸಭಾಪತಿ ಜಯಕರ ಶೆಟ್ಟಿ ಎಸ್. ಹೇಳಿದರು. ಅವರು ಕುಂದಾಪುರ ತಾಲೂಕು ಪಂಚಾಯತ್ ಸಭಾಭವನದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಕುಂದಾಪುರ ತಾಲೂಕು, ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ ಉಡುಪಿ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕ ಇವರ ಸಹಯೋಗದಲ್ಲಿ ಕುಂದಾಪುರ ಮತ್ತು ಬೈಂದೂರು ತಾಲೂಕು ಮಟ್ಟದ ವಿಕಲಚೇತನರ ಪುನರ್ವಸತಿ ಕಾರ್ಯಕರ್ತರಿಗೆ ನಡೆದ ಒಂದು ದಿನದ ಮಾಹಿತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ರಾಜ್ಯ ರೆಡ್‌ಕ್ರಾಸ್ ಸಭಾಪತಿ ಬಸ್ರೂರು ರಾಜೀವ ಶೆಟ್ಟಿ, ವಿಕಲಚೇತನರ ಸಬಲೀಕರಣ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಉದ್ಯಮದಲ್ಲಿ ಯಶಸ್ಸು ಸಾಧಿಸಲು ಕೇವಲ ಹೊಸ ಕಲ್ಪನೆಗಳನ್ನು ಹೊಂದಿರುವುದಷ್ಟೇ ಸಾಲದು; ಅವುಗಳನ್ನು ಕಾರ್ಯ ರೂಪಕ್ಕೆ ತರುವ ಸಮರ್ಥ ತಂತ್ರ, ದೃಢ ಪ್ರಕ್ರಿಯೆ, ನಿರಂತರ ಪ್ರಯತ್ನ ಮತ್ತು ಶಿಸ್ತು ಅಗತ್ಯ ಎಂದು ಖ್ಯಾತ ಮ್ಯಾನೇಜ್‌ಮೆಂಟ್ ಕನ್ಸಲ್ಟೆಂಟ್ ಹಾಗೂ ಮಾಸ್ಟರ್‌ಚೆಫ್ ಇಂಡಿಯಾ ಸೆಮಿಫೈನಲಿಸ್ಟ್ ವೇಣು ಶರ್ಮಾ ಅಭಿಪ್ರಾಯಪಟ್ಟರು. ಅವರು ಆಳ್ವಾಸ್ ತಾಂತ್ರಿಕ ಮಹಾವಿದ್ಯಾಲಯದ ಎಂಬಿಎ ವಿಭಾಗ ಆಯೋಜಿಸಿದ್ದ ‘ಪರಿಣಾಮಕಾರಿ ಕಾರ್ಯತಂತ್ರ ರೂಪಿಸುವುವ ಬಗೆ’ ವಿಶೇಷ  ತರಬೇತಿ ಕಾರ್ಯಗಾರದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ಸು ಸಾಧಿಸಲು ಹೊಸ ಕಲ್ಪನೆಗಳಿಗಿಂತ ಅವುಗಳನ್ನು ಸರಿಯಾದ ತಂತ್ರದ ಮೂಲಕ ಅನುಷ್ಠಾನಗೊಳಿಸುವ ಸಾಮರ್ಥ್ಯವೇ ಪ್ರಮುಖವಾಗಿದೆ. ಉತ್ತಮ ಯೋಜನೆ, ನಿರಂತರ ಸುಧಾರಣೆ ಹಾಗೂ ಶಿಸ್ತಿನ ಕಾರ್ಯಪದ್ಧತಿ ಯಾವುದೇ ಸಂಸ್ಥೆಯ ಬೆಳವಣಿಗೆಗೆ ಬಲವಾದ ಅಡಿಪಾಯವಾಗುತ್ತದೆ ಎಂದು ಹೇಳಿದರು. ಕೃತಕ ಬುದ್ಧಿಮತ್ತೆ ಕುರಿತು ವ್ಯಕ್ತವಾಗುತ್ತಿರುವ ಆತಂಕಗಳನ್ನು ಉಲ್ಲೇಖಿಸಿದ ಅವರು, ಎಐ ಭಾರತಕ್ಕೆ ಬಂದರೆ ಉದ್ಯೋಗಗಳು ಕಡಿಮೆಯಾಗುತ್ತವೆ ಎಂಬ ಭಯ ಬೇಡ. ಭಾರತವು ಅಪಾರ ಜನಸಂಖ್ಯೆ ಹಾಗೂ ವೈವಿಧ್ಯಮಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ನಮ್ಮಲ್ಲಿರುವ ಸಂಪತ್ತಿನ ಒಂದು ಅಂಶವನ್ನು ಶಾಲೆಗೆ ಕೊಡುಗೆಯಾಗಿ ನೀಡುವುದರಿಂದ ಸಂತೃಪ್ತಿಯ ಜೊತೆಗೆ ಸೇವೆಯ ಸಾರ್ಥಕತೆ ದೊರೆಯುತ್ತದೆ. ನಮಗೆ ಸಾಮರ್ಥ್ಯ ಇರುವಾಗ ಒಂದಿಷ್ಟು ಕೊಡುಗೆಗಳನ್ನು ಸಮಾಜಕ್ಕೆ ನೀಡಿದಾಗ ಸಂತೃಪ್ತಿ ಮೂಡುತ್ತದೆ ಎಂದು ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಹೇಳಿದರು. ಅವರು ಶುಕ್ರವಾರ ಮೈಕ್ರೋಸಾಪ್ಟ್ ಕಾರ್ಪೊರೇಶನ್ ಇಂಡಿಯಾ ಪ್ರೈ.ಲಿ ಹಾಗೂ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ರಿ. ಉಪ್ಪುಂದ ಇದರ ಜಂಟಿ ಆಶ್ರಯದಲ್ಲಿ ಬಿಜೂರಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಂಪ್ಯೂಟರ್ ಲ್ಯಾಬ್ ಉದ್ಘಾಟಿಸಿ ಮಾತನಾಡಿದರು. ಬೈಂದೂರು ವ್ಯಾಪ್ತಿಯಲ್ಲಿ ಟ್ರಸ್ಟ್ ಹಾಗೂ ಗೋವಿಂದ ಬಾಬು ಪೂಜಾರಿ ಅವರ ವೈಯಕ್ತಿಕ ನೆಲೆಯಲ್ಲಿ ಅನೇಕ ಶಾಲೆಗಳಿಗೆ ಕೊಡುಗೆಗಳನ್ನು ನೀಡುತ್ತಿದ್ದು ಸರಕಾರಿ ಶಾಲೆಗಳು ಇನ್ನಷ್ಟು ಅಭಿವೃದ್ಧಿಯಾಗಲಿದೆ ಎಂದರು. ಉದ್ಯಮಿ ಹಾಗೂ ಹಾಗೂ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ರಿ. ಉಪ್ಪುಂದ ಮ್ಯಾನೆಜಿಂಗ್‌ ಟ್ರಸ್ಟಿ ಡಾ. ಗೋವಿಂದ ಬಾಬು ಪೂಜಾರಿ ಅವರು ಮಾತನಾಡಿ, ದೇವರು ಅವಕಾಶ ನೀಡಿದಾಗ ಕೈಲಾದಷ್ಟು ಶಾಲೆಗಳಿಗೆ ಕೊಡುಗೆಯಾಗಿ ನೀಡುತ್ತಿರುವುದು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತಾಲೂಕಿನ ಉಪ್ಪುಂದದ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಪ್ರಧಾನ ಕಛೇರಿಗೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ತ್ಯಾಗಟೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರು, ನಿರ್ದೇಶಕರು, ಸಿ.ಇ.ಓ ಮತ್ತು ಸಿಬ್ಬಂದಿ ವರ್ಗದವರು ಸಹಿತ ನಿಯೋಗವು ಸಂಘಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಅವರು ಉಪಸ್ಥಿತರಿದ್ದು ನಿಯೋಗವನ್ನು ಬರಮಾಡಿಕೊಂಡರು ಮತ್ತು ಸಂಘದ ಕಾರ್ಯ ವೈಕರಿ ಹಾಗೂ ಅಭಿವೃದ್ಧಿಯ ಬಗ್ಗೆ ಪರಿಚಯಿಸಿದರು. ಸಂಘವು ವರದಿ ವರ್ಷದಲ್ಲಿ ರೂ. 1500 ಕೋಟಿಗೂ ಮಿಕ್ಕಿ ವಾರ್ಷಿಕ ವ್ಯವಹಾರ ನಡೆಸುವುದರೊಂದಿಗೆ ರೂ. 7 ಕೋಟಿಗೂ ಮಿಕ್ಕಿ ವಾರ್ಷಿಕ ಲಾಭ ಗಳಿಸಲು ಸಹಕರಿಸಿದ ಸದಸ್ಯರಿಗೆ ಅಭಿನಂದನೆ ಸಲ್ಲಿಸಿದರು. ಸಂಘವು ಈಗಾಗಲೇ ಕೈಗೊಂಡಿರುವ ರೈತ ಸಿರಿ ಅಗ್ರಿಮಾಲ್ ಇದರ ಕಟ್ಟಡ ಕಾಮಗಾರಿಯು ಮುಕ್ತಾಯ ಹಂತದಲ್ಲಿದ್ದು ಮುಂದಿನ ವ್ಯವಹಾರ ಅಭಿವೃದ್ಧಿಯ ಬಗ್ಗೆ ಹಾಗೂ ಒಳ ವಿನ್ಯಾಸ ಇತ್ಯಾದಿ ಕಾಮಗಾರಿ ಶೀಘ್ರದಲ್ಲಿ ಕೈಗೊಂಡು ಸದಸ್ಯರಿಗೆ ಸೇವೆಯನ್ನು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಕೇರಳ ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರು ಶನಿವಾರ ಭೇಟಿ ನೀಡಿ, ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಶುಕ್ರವಾರ ರಾತ್ರಿಯೇ ಆಗಮಿಸಿದ್ದ ‌ ಅವರು ಶನಿವಾರ ಬೆಳಗಿನ ಜಾವವೇ ಗಣಹೋಮದಲ್ಲಿ ಭಾಗಿಯಾದರು. ಮುಖ್ಯಮಂತ್ರಿ ಆದ ಬಳಿಕ ಮೊದಲ ಬಾರಿಗೆ ಕೊಲ್ಲೂರು ಶ್ರೀ ಮೂಕಾಂಬಿಕಾ ಕ್ಷೇತ್ರಕ್ಕೆ ಭೇಟಿ ನೀಡಿರುವುದು ವಿಶೇಷವಾಗಿದೆ. ಮುಖ್ಯಮಂತ್ರಿ ಆಗಮನದ ಹಿನ್ನೆಲೆಯಲ್ಲಿ ದೇವಸ್ಥಾನದಲ್ಲಿ Z-ಪ್ಲಸ್ ಭದ್ರತೆ ಕಲ್ಪಿಸಲಾಗಿತ್ತು, ಕ್ಷೇತ್ರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಯಾವುದೇ ರೀತಿಯಲ್ಲಿ ಭಕ್ತರಿಗೆ ಅಡ್ಡಿಪಡಿಸಲಾಗಿಲ್ಲ. ಪೂಜೆ ಬಳಿಕ ‌ದೇವಾಲಯದ ಆಡಳಿತ ‌ ಮಂಡಳಿ ‌ ವತಿಯಿಂದ ಮುಖ್ಯಮಂತ್ರಿ ಸತೀಶನ್ ‌ ಅವರಿಗೆ, ಸಮ್ಮಾನಿಸಿ ಗೌರವ ಸಲ್ಲಿಸಲಾಯಿತು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ರೋಟರಿ ಕ್ಲಬ್‌ ಕುಂದಾಪುರ ಮಿಡ್‌ಟೌನ್ ಇದರ 2026-27ನೇ ಸಾಲಿನ ನೂತನ ಅಧ್ಯಕ್ಷರಾಗಿ ಸಚಿನ್ ಕುಮಾರ್ ಶೆಟ್ಟಿ ಹುಂಚನಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನೂತನ ಕಾರ್ಯದರ್ಶಿಯಾಗಿ ಪ್ರವೀಣ್‌ ಶೆಟ್ಟಿ ಅಂಪಾರು ಆಯ್ಕೆಯಾಗಿದ್ದು, ನೂತನ ಕೋಶಾಧಿಕಾರಿಯಾಗಿ ಪ್ರಕಾಶ್ ಶೆಟ್ಟಿ ಶಾನಾಡಿ ಆಯ್ಕೆಗೊಂಡಿದ್ದಾರೆ. ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಕೋಟೇಶ್ವರ ಅಂಕದಕಟ್ಟೆಯ ಸಹನಾ ಕನ್ವೆನ್ಸನ್ ಹಾಲ್‌ನಲ್ಲಿ ಜು. 11ರಂದು ಸಂಜೆ 7.00ರಿಂದ ಜರುಗಲಿದ್ದು, ವಲಯ-1ರ ಅಸಿಸ್ಟೆಂಟ್ ಗವರ್ನರ್ ಪಿಹೆಚ್‌ಎಫ್ ಜೆ. ಶ್ರೀನಾಥ್ ರಾವ್ ಪದಗ್ರಹಣ ನೆರವೇರಿಸಲಿದ್ದಾರೆ. ಸಮಾರಂಭದ ಮುಖ್ಯ ಅತಿಥಿಯಾಗಿ ಕಾರ್ಕಳದ ಅಜೆಕಾರು ಪದ್ಮಗೋಪಾಲ ಎಜುಕೇಶನ್ ಟ್ರಸ್ಟ್‌ನ ಅಧ್ಯಕ್ಷ ಡಾ. ಸುಧಾಕರ್ ಶೆಟ್ಟಿ ಉಪಸ್ಥಿತರಿರಲಿದ್ದಾರೆ ಎಂದು ರೋಟರಿ ಕ್ಲಬ್‌ನ ಸುದ್ದಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಐಎಂಜೆ ಸಂಸ್ಥೆಗಳ ವತಿಯಿಂದ “ಭಾರತದ ವೈಜ್ಞಾನಿಕ ಪರಂಪರೆ” (Scientific Heritage of India) ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಐಐಟಿ ಕಾನ್ಪುರದಿಂದ ಪಿಎಚ್.ಡಿ. ಪದವಿ ಪಡೆದ ಹಿರಿಯ ಶಿಕ್ಷಣತಜ್ಞರು ಹಾಗೂ ಭಾರತೀಯ ಇತಿಹಾಸ, ತತ್ವಶಾಸ್ತ್ರ ಮತ್ತು ವೈಜ್ಞಾನಿಕ ಪರಂಪರೆಯ ಅಧ್ಯಯನಕಾರರಾಗಿದ್ದ ಡಾ. ಪಿ. ಸುಬ್ಬಣ್ಣ ಭಟ್ ಅವರು ಈ ವಿಷಯದ ಕುರಿತು ಅತ್ಯಂತ ಮನೋಜ್ಞ ಉಪನ್ಯಾಸ ನೀಡಿದರು. ತಮ್ಮ ಉಪನ್ಯಾಸದಲ್ಲಿ ಭಾರತವೇ ಜಗತ್ತಿಗೆ ಸಂಖ್ಯಾ ಪದ್ಧತಿಯನ್ನು ನೀಡಿದ ಏಕೈಕ ದೇಶ ಎಂಬ ಐತಿಹಾಸಿಕ ಸತ್ಯವನ್ನು ಅವರು ಒತ್ತಿ ಹೇಳಿದರು. ಪ್ರಾಚೀನ ಭಾರತೀಯ ಗಣಿತಜ್ಞರಾದ ಆರ್ಯಭಟ ಮತ್ತು ಭಾಸ್ಕರಾಚಾರ್ಯರು ಸಾವಿರಾರು ವರ್ಷಗಳ ಹಿಂದೆಯೇ ಸಂಕೀರ್ಣ ಗಣಿತ ಸಮಸ್ಯೆಗಳಿಗೆ ಅತ್ಯಂತ ನಿಖರವಾದ ಪರಿಹಾರಗಳನ್ನು ಕಂಡುಹಿಡಿದಿದ್ದರು ಎಂದು ವಿವರಿಸಿದರು.ಖಗೋಳ ವಿಜ್ಞಾನದ ಕ್ಷೇತ್ರದಲ್ಲಿಯೂ ಪ್ರಾಚೀನ ಭಾರತೀಯರ ಸಾಧನೆಗಳನ್ನು ಉದಾಹರಣೆಗಳೊಂದಿಗೆ ವಿವರಿಸಿದ ಅವರು, ಆಧುನಿಕ ವಿಜ್ಞಾನ ಉದಯಿಸುವುದಕ್ಕೂ ಮುನ್ನವೇ ಭಾರತೀಯರು ಗ್ರಹಗಳ ಚಲನೆ, ಗ್ರಹಣಗಳ ಲೆಕ್ಕಾಚಾರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಲಯನ್ಸ್ ಕ್ಲಬ್ ಬನ್ನಾಡಿ-ವಡ್ಡರ್ಸೆಯ ವತಿಯಿಂದ ವೈದ್ಯರ ದಿನಾಚರಣೆಯನ್ನು ಲಯನ್ಸ್ ಕ್ಲಬ್ ಅಧ್ಯಕ್ಷರಾದ ಎಮ್.ಜೆ.ಎಫ್ ಲಯನ್ ಬನ್ನಾಡಿ ಪ್ರಭಾಕರ ಶೆಟ್ಟಿ ಅವರ ನೇತೃತ್ವದಲ್ಲಿ ಲಯನ್ಸ್ ಕ್ಲಬ್ ಸ್ಥಾಪಕಾಧ್ಯಕ್ಷರಾದ ಲಯನ್ ಬನ್ನಾಡಿ ಸೋಮನಾಥ್ ಹೆಗ್ಡೆ ಅವರ ನಿವಾಸದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಕೋಟೇಶ್ವರದ “ಸ್ವಾತಿ” ಕ್ಲಿನಿಕ್ ನ ಖ್ಯಾತ ವೈದ್ಯರಾದ ಡಾ| ಕಾವಡಿ ಶ್ರೀಪಾದ್ ಹೆಗ್ಡೆ ಅವರನ್ನು ಲಯನ್ಸ್ ಕ್ಲಬ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಗೌರವವನ್ನು ಸ್ವೀಕರಿಸಿದ ಮಾತನಾಡಿದ ಅವರು ಲಯನ್ಸ್  ಕ್ಲಬ್ ಬನ್ನಾಡಿ-ವಡ್ಡರ್ಸೆಯ ಸದಸ್ಯರಿಗೆ ಕೃತಜ್ಞತೆಗಳನ್ನು ಅರ್ಪಿಸಿದರು. ಲಯನ್ಸ್  ಕ್ಲಬ್ ಬನ್ನಾಡಿ-ವಡ್ಡರ್ಸೆಯ ಸ್ಥಾಪಕ ಕಾರ್ಯದರ್ಶಿ ಲಯನ್ ಕಲ್ಕಟ್ಟೆ ಚಂದ್ರ ಶೇಖರ್ ಶೆಟ್ಟಿ ವೈದ್ಯರ ದಿನಾಚರಣೆಯ ಮಹತ್ವದ ಕುರಿತು ಮಾತನಾಡಿದರು. ಲಯನ್ಸ್  ಕ್ಲಬ್ ಬನ್ನಾಡಿ-ವಡ್ಡರ್ಸೆಯ ಮಾಜಿ ಅಧ್ಯಕ್ಷರಾದ ಲಯನ್ ಕೊತ್ತಾಡಿ ಉದಯ್ ಕುಮಾರ್ ಶೆಟ್ಟಿ ವೈದ್ಯರಾದ ಡಾ| ಕಾವಡಿ ಶ್ರೀಪಾದ್ ಹೆಗ್ಡೆ ಯವರ ಪರಿಚಯ ಮಾಡಿದರು. ಲಯನ್ಸ್ ಜಿಲ್ಲೆ-317 ಸಿ, ಪ್ರಾಂತ್ಯ…

Read More