ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಪ್ರಸಕ್ತ ಸಾಲಿನಲ್ಲಿ ಸಮಗ್ರ ಶಿಕ್ಷಣ ಯೋಜನೆಯಡಿ ಸಮನ್ವಯ ಶಿಕ್ಷಣ ಮಧ್ಯವರ್ತನ ಚಟುವಟಿಕೆಗಳನ್ನು ಅನುಷ್ಠಾನಗೊಳಿಸಲು ತಾತ್ಕಾಲಿಕವಾಗಿ ನೇರ ಗುತ್ತಿಗೆ ಅಡಿಯಲ್ಲಿ ವಿಶೇಷ ಶಿಕ್ಷಕರ ಸೇವೆಯನ್ನು ಪಡೆಯುವ ಸಲುವಾಗಿ ಜಿಲ್ಲೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಹಂತದ ಖಾಲಿ ಇರುವ ಬಿ.ಐ.ಇ.ಆರ್.ಟಿ (ವಿಶೇಷ ಶಿಕ್ಷಕರ) ಹುದ್ದೆಗಳನ್ನು ನೇರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ನಿಗಧಿತ ವಿದ್ಯಾರ್ಹತೆ ಹೊಂದಿರುವ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 18 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗ ಇವರ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅಫಿಲಿಯೇಟೆಡ್ ಖಾಸಗಿ ಕೃಷಿ ವಿಜ್ಞಾನಗಳ ಕಾಲೇಜುಗಳನ್ನು ಪ್ರಾರಂಭಿಸಲು ಆಸಕ್ತಿ ಹೊಂದಿರುವ ಹಾಗೂ ಕರ್ನಾಟಕದ ಸೊಸೈಟಿ ನೊಂದಣಿ ಕಾಯ್ದೆಯಡಿಯಲ್ಲಿ ನೊಂದಾಯಿಸಲಾದ ಮಂಡಳಿಗಳು, ಸೊಸೈಟಿಗಳು ಹಾಗೂ ಟ್ರಸ್ಟ್ಗಳಿಂದ ಅರ್ಜಿ ಅಹ್ವಾನಿಸಿದೆ. ಆಸಕ್ತ ಸಂಸ್ಥೆಗಳು ಬಿ.ಎಸ್ಸಿ. (ಹಾನರ್ಸ್) ಕೃಷಿ, ಬಿ.ಟೆಕ್ ಕೃಷಿ ಇಂಜಿನಿಯರಿಂಗ್, ಬಿ.ಟೆಕ್. ಕೃಷಿ ಬಯೋಟೆಕ್ನಾಲಜಿ, ಬಿ.ಟೆಕ್. ಫುಡ್ ಟೆಕ್ನಾಲಜಿ, ಬಿ.ಎಸ್ಸಿ. (ಹಾನರ್ಸ್) ಅರಣ್ಯ, ಬಿ.ಎಸ್ಸಿ. (ಹಾನರ್ಸ್) ಕಮ್ಯೂನಿಟಿ ವಿಜ್ಞಾನ, ಬಿ.ಎಸ್ಸಿ. (ಹಾನರ್ಸ್) ಫುಡ್ ನ್ಯೂಟ್ರೀಶನ್ ಮತ್ತು ಡೈಯಟಿಕ್ಸ್, ಬಿ.ಎಸ್ಸಿ. (ಹಾನರ್ಸ್) ತೋಟಗಾರಿಕೆ ಮತ್ತು ಬಿ.ಎಸ್ಸಿ. (ಹಾನರ್ಸ್) ರೇಷ್ಮೆ ಕೃಷಿ ಪದವಿ ಪ್ರಾರಂಭಿಸಲು ಅರ್ಜಿ ಸಲ್ಲಿಸಬಹುದಾಗಿದೆ. ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಅಫಿಲಿಯೇಶನ್ಗಾಗಿ ಕನಿಷ್ಟ ಮಾನದಂಡಗಳನ್ನು, ಹೆಚ್ಚಿನ ವಿವರ, ನಿಬಂಧನೆಗಳು ಮತ್ತು ಅರ್ಜಿಗಾಗಿ ವೆಬ್ಸೈಟ್ www.uahs.edu.in ಅನ್ನು ಸಂಪರ್ಕಿಸಬಹುದಾಗಿದೆ. ಅಫಿಲಿಯೇಶನ್ಗಾಗಿ ಅರ್ಜಿ ಸಲ್ಲಿಸಲು ಜುಲೈ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಗ್ರಾಮೀಣ ಭಾಗದ ಜನರಿಗೆ ನಿರಂತರ ಶುದ್ಧ ಕುಡಿಯುವ ನೀರು ಒದಗಿಸುವ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ನಿಗಧಿತ ಕಾಲಾವಧಿಯ ಒಳಗೆ ಅದ್ಯತೆಯ ಮೇಲೆ ಕೈಗೊಂಡು ಶುದ್ಧ ನೀರನ್ನು ಒದಗಿಸಲು ಮುಂದಾಗಬೇಕು ಎಂದು ಅಧಿಕಾರಿಗಳಿಗೆ ಕೇಂದ್ರ ಜಲ ಜೀವನ್ ಮಿಷನ್ ಯೋಜನೆಯ ನೋಡೆಲ್ ಅಧಿಕಾರಿ ಆಶೀಶ್ ಕುಂದಾಲ್ ಅವರು ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ನೀರು ಸರಬರಾಜು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ಗ್ರಾಮೀಣ ಭಾಗದ ಜನರಿಗೆ ನಿರಂತರ ಶುದ್ಧ ಕುಡಿಯುವ ನೀರು ಒದಗಿಸುವ ಜಲ್ ಜೀವನ್ ನಳ ನೀರನ್ನು ಒದಗಿಸುವ ಕಾಮಗಾರಿ ಗಳನ್ನು ಆದ್ಯತೆಯ ಮೇಲೆ ಕೈಗೊಳ್ಳಬೇಕು. ವಾರಾಹಿ ನದಿ ನೀರಿನ ಮೂಲದಿಂದ ಕಾರ್ಕಳ, ಹೆಬ್ರಿ ಹಾಗೂ ಕಾಪು ತಾಲೂಕಿನ 69 ಗ್ರಾಮಗಳ 1904 ವಾಸಸ್ಥಾನಗಳಿಗೆ ಕುಡಿಯುವ ನೀರನ್ನು ಒದಗಿಸುವ ಯೋಜನೆಯ ಕಾಮಗಾರಿಗಳನ್ನು ಮುಂಬರುವ ಡಿಸೆಂಬರ್ ಒಳಗೆ ಪೂರ್ಣಗೊಳಿಸಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಜೂ.13: ರಾಷ್ಟ್ರೀಯ ಹೆದ್ದಾರಿ 169 ಎ ತೀರ್ಥಹಳ್ಳಿ-ಮಲ್ಪೆ ರಸ್ತೆಯ ಆಗುಂಬೆ ಘಾಟಿಯಲ್ಲಿ ಜೂನ್ 15 ರಿಂದ ಸೆಪ್ಟಂಬರ್ 30ರ ವರೆಗೆ ಭಾರಿ ವಾಹನ ಸಂಚಾರವನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಭಾರಿ ಮಳೆಯಿಂದಾಗಿ ಮತ್ತು ಭಾರಿ ವಾಹನಗಳ ಓಡಾಟದಿಂದ ಅಲ್ಲಲ್ಲಿ ರಸ್ತೆ ಬದಿಯಲ್ಲಿ ಭೂಕುಸಿತ ಆಗುವ ಸಂಭವ ಇರುವ ಹಿನ್ನೆಲೆ, ಸಾರ್ವಜನಿಕ ಹಿತದೃಷ್ಠಿಯಿಂದ ಕೇಂದ್ರ ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮಾವಳಿಗಳು 1989 ರ ಕಲಂ 221 (ಎ) (2) ಮತ್ತು (5) ರನ್ವಯ, ರಾಷ್ಟ್ರೀಯ ಹೆದ್ದಾರಿ 169 ಎ ಆಗುಂಬೆ ಘಾಟಿಯ ಮೂಲಕ ಜೂನ್ 15 ರಿಂದ ಸೆಪ್ಟಂಬರ್ 30 ರ ವರೆಗೆ ಲಘು ವಾಹನ ಸಂಚಾರಕ್ಕೆ ಮಾತ್ರ ಅನುವು ಮಾಡಿ, ಭಾರಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಉಡುಪಿಯಿಂದ ತೀರ್ಥಹಳ್ಳಿಗೆ ಸಂಚರಿಸುವ ಭಾರಿ ವಾಹನಗಳು ಬದಲಿ ಮಾರ್ಗವಾಗಿ ಉಡುಪಿ – ಕುಂದಾಪುರ – ಸಿದ್ಧಾಪುರ – ಮಾಸ್ತಿಕಟ್ಟೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ಕುಂದಾಪುರ ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ರಿ. ಅಭಿಯೋಗ ಇಲಾಖೆ, ತಾಲೂಕು ಆಡಳಿತ ಹಾಗೂ ಕಾರ್ಮಿಕ ಇಲಾಖೆ ಕುಂದಾಪುರ, ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಜರುಗಿತು. ಕುಂದಾಪುರದ ಹೆಚ್ಚುವರಿ ಸಿವಿಲ್ ನ್ಯಾಯಧೀಶರು ಮತ್ತು ನ್ಯಾಯಿಕ ದಂಡಾಧಿಕಾರಿಗಳಾದ ಶ್ರುತಿ ಶ್ರೀ. ಎಸ್. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ನೀವು ವಾಸಿಸುಸುತ್ತಿರುವ ಸುತ್ತ ಮುತ್ತಲಿನ ಪ್ರದೇಶದಲ್ಲಿ ಯಾವುದೇ ಬಾಲ ಕಾರ್ಮಿಕರು ಕಂಡು ಬಂದಲ್ಲಿ ಪೋಷಕರಿಗೆ ಮತ್ತು ಮಾಲೀಕರಿಗೆ ತಿಳಿವಳಿಕೆಯನ್ನು ನೀಡಿ ವಿದ್ಯಾರ್ಥಿಗಳನ್ನು ಶಾಲೆಗೆ ಸೇರಿಸುವಂತೆ ಪ್ರೇರೇಪಿಸಿ ಹಾಗೂ ಬಾಲ ಕಾರ್ಮಿಕ ಪದ್ಧತಿಯ ನಿರ್ಮೂಲನೆ ಕುರಿತು ಸಂಪೂರ್ಣ ವಾಗಿ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಶ್ರೀ ವೆಂಕಟರಮಣ ದೇವ್ ಎಜುಕೇಶನಲ್ & ಕಲ್ಚರಲ್ ಟ್ರಸ್ಟ್ನ ಕಾರ್ಯದರ್ಶಿಗಳಾದ ಕೆ. ರಾಧಾಕೃಷ್ಣ ಶೆಣೈ ವಹಿಸಿದ್ದರು. ವೇದಿಕೆಯಲ್ಲಿ ಕುಂದಾಪುರದ ಉಪ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಪುರಸಭಾ ವ್ಯಾಪ್ತಿಯ ಭಗತ್ ಸಿಂಗ್ ರಸ್ತೆಯಲ್ಲಿನ ಮಠದ ಬೆಟ್ಟುವಿನಲ್ಲಿ ಶುಕ್ರವಾರ ನಸುಕಿನ ಜಾವ ಸುರಿದ ಭಾರೀ ಗಾಳಿ-ಮಳೆಗೆ ಬೃಹತ್ ಅರಳಿ ಮರ ಮನೆಯೊಂದರ ಮೇಲೆ ಬಿದ್ದು ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಇಲ್ಲಿನ ನಿವಾಸಿ ವಸಂತಿ ದೇವಾಡಿಗ ಮನೆ ಮೇಲೆ ಮರ ಬಿದ್ದಿದ್ದು, ಮನೆಯ ಸ್ಲ್ಯಾಬ್ ಗೆ ಹಾನಿಯಾಗಿದೆ. ಪಕ್ಕದಲ್ಲೇ ಯಕ್ಷೇಶ್ವರಿ ದೇವಸ್ಥಾನವಿದ್ದು, ದೇವಸ್ಥಾನಕ್ಕೆ ತಾಗಿಕೊಂಡೆ ಮರ ಬಿದ್ದಿದೆ. ಟೇರಿಸ್ ಮನೆಯಾಗಿದ್ದರಿಂದ ಮಲಗಿದ್ದವರಿಗೆ ಯಾವುದೇ ಅಪಾಯ ಆಗಿಲ್ಲ. ಆದರೆ ಮನೆ ಎದುರು ಅಳವಡಿಸಲಾಗಿದ್ದ ಶೀಟ್ ನ ಮೇಲ್ಛಾವಣಿ ಸಂಪೂರ್ಣ ಹಾನಿಯಾಗಿದ್ದು, ಅದರ ಅಡಿ ನಿಲ್ಲಿಸಿದ್ದ ಎರಡು ಬೈಕ್ಗಳು ಹಾಗೂ ಕಾರಿಗೆ ಹಾನಿಯಾಗಿದೆ. ಮರ ವಿದ್ಯುತ್ ತಂತಿಯ ಮೇಲೆ ಬಿದ್ದಿದ್ದರಿಂದ ಮೂರ್ನಾಲ್ಕು ವಿದ್ಯುತ್ ಕಂಬಗಳು ತುಂಡಾಗಿ ಧರೆಗುರುಳಿವೆ. ಮನೆ ಹಾನಿಯಿಂದಾಗಿ ಅಂದಾಜು 2,00,000 ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಕುಂದಾಪುರ ಪುರಸಭೆಯ ಅಧಿಕಾರಿಗಳು, ಸಿಬ್ಬಂದಿಗಳು ಭೇಟಿ ನೀಡಿ ಮರ ತೆರವುಗೊಳಿಸಲು ಸಹಕರಿಸಿದ್ದಾರೆ. ವಿವಿದಡೆ ಹಾನಿ:ಕೋಟೇಶ್ವರ ಗ್ರಾಮದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಯಣ: ಸಿದ್ದಾಪುರ ಗ್ರಾಮದಲ್ಲಿ ಹಣವನ್ನು ಪಣವಾಗಿರಿಸಿ ಅಂದರ್ ಬಾಹರ್ ಇಸ್ಪೀಟ್ ಜೂಜಾಟ ಆಟ ಅಡುತ್ತಿದ್ದ ಜನರನ್ನು ಶಂಕರನಾರಾಯಣ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಶಂಭುಲಿಂಗಯ್ಯ ಎಮ್.ಇ ಅವರು ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿ ಬಂಧಿಸಿದ್ದಾರೆ. ಸಿದ್ದಾಪುರದ ಮಂಜುನಾಥ ಕಾಂಪ್ಲೆಕ್ಸ್ ಕಟ್ಟಡದ ಪಕ್ಕದ ಸಾರ್ವಜನಿಕ ಸ್ಥಳದಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜಾಟ ಆಟ ಅಡುತ್ತಿದ್ದ ಬಗ್ಗೆ ಮಾಹಿತಿ ಮೇರೆಗೆ ಶಂಕರನಾರಾಯಣ ಪೊಲೀಸರು ಆರೋಪಿಗಳಾದ ಸುಬ್ರಹ್ಮಣ್, ಅಶ್ರಫ್, ಸುನೀಲ್, ಧೀರಜ್, ಶಂಕರ, ಸುಧೀರ್ ಕುಮಾರ, ಮಧುಕರ, ಮನೋಹರ, ಗಣೇಶ ಹಾಗೂ ರಾಮ ಎಂಬುವರನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಅಂದರ್ – ಬಾಹರ್ ಜುಗಾರಿ ಆಟಕ್ಕೆ ಬಳಸಿದ ನಗದು ಹಣ 8,810/-ರೂಪಾಯಿ, 10 ಮೊಬೈಲ್ ಪೋನ್ ಗಳು, ಇಸ್ಪೀಟ್ ಜೂಜಾಟ ಆಡಲು ಬಂದಿದ್ದ ಬೈಕ್ಗಳು, ಇಸ್ಪೀಟ್ ಎಲೆಗಳು, ಪ್ಲಾಸ್ಟೀಕ್ ಕುರ್ಚಿಗಳು, ಒಂದು ಪ್ಲಾಸ್ಟೀಕ್ ಟೇಬಲ್, ಕಪ್ಪು ಮತ್ತು ಕೇಸರಿ ಬಣ್ಣ ಮಿಶ್ರಿತ ಬಟ್ಟೆ ಹಾಗೂ ಒಂದು ಮೇಣದ ಬತ್ತಿಯನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. ಈ ಬಗ್ಗೆ ಶಂಕರನಾರಾಯಣ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸೇವೆ ಉತ್ತಮ ಆಡಳಿತ ಮತ್ತು ಬಡವರ ಕಲ್ಯಾಣದ ಮೋದಿ ಸರ್ಕಾರದ 11ನೇ ವರ್ಷ ಆಚರಣೆಯ ಅಂಗವಾಗಿ ಕುಂದಾಪುರದ ಬಿಜೆಪಿ ಕಾರ್ಯಾಲಯದಲ್ಲಿ ಕುಂದಾಪುರ ಕ್ಷೇತ್ರ ಮಟ್ಟದ ಕಾರ್ಯಗಾರ ನಡೆಯಿತು. ಕಾರ್ಯಗಾರ ಆರಂಭಕ್ಕೂ ಮುನ್ನ ಗುಜರಾತ್ ಅಹಮದಾಬಾದ್ ನಲ್ಲಿ ನಡೆದ ವಿಮಾನ ದುರಂತದಲ್ಲಿ ಮೃತಪಟ್ಟವರನ್ನು ಒಂದು ನಿಮಿಷಗಳ ಕಾಲ ಮೌನ ಆಚರಣೆ ನಡೆಸಿದರು. ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ್ ಪೂಜಾರಿ ಅವರು ಮಾತನಾಡಿ, ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ತನ್ನ 11 ವರ್ಷ ಆಡಳಿತವನ್ನು ಪೂರ್ಣಗೊಳಿಸಿದ್ದು, ದೇಶಾದ್ಯಂತ ವಿಶೇಷ ಕಾರ್ಯಕ್ರಮಗಳು ಕೂಡ ನಡೆಯುತ್ತಿದ್ದು ಈ ಯೋಜನೆ ಕೇಂದ್ರ ಸರ್ಕಾರದ ಸಾಧನೆಗಳು ಮತ್ತು ಯೋಜನೆಗಳ ಬಗ್ಗೆ ಜನರಿಗೆ ತಿಳಿಸುವ ಉದ್ದೇಶ ಈ ಕಾರ್ಯಗಾರ ಎಂದು ಕೇಂದ್ರ ಸರಕಾರದ ಜನಪರ ಯೋಜನೆಗಳ ಬಗ್ಗೆ ಮನೆ ಮನೆಗಳಿಗೆ ಮಾಹಿತಿ ನೀಡಿ, ಸಮರ್ಪಕವಾಗಿ ಯೋಜನೆ ತಲುಪುವಂತಾಗಬೇಕು ಎಂದು ಕಾರ್ಯಕರ್ತರಿಗೆ ತಿಳಿಸಿದ್ದರು. ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧೀನದಲ್ಲಿರುವ ನಗರದ ನಿಟ್ಟೂರಿನ ಸರ್ಕಾರಿ ಬಾಲಕಿಯರ ಬಾಲಮಂದಿರ ಹಾಗೂ ಕುಂಜಿಬೆಟ್ಟುವಿನ ಸರ್ಕಾರಿ ಬಾಲಕರ ಬಾಲಮಂದಿರ ಸಂಸ್ಥೆಯಲ್ಲಿ ಗೌರವಧನ ಆಧಾರದಲ್ಲಿ 8, 9 ಹಾಗೂ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಇಂಗ್ಲಿಷ್ ಗಣಿತ ಮತ್ತು ವಿಜ್ಞಾನ ಟ್ಯೂಷನ್ ಪಾಠ ಮಾಡುವ ಮತ್ತು ಸಂಗೀತ ಮತ್ತು ಕ್ರಾಫ್ಟ್ ಕಲಿಸುವ ಅರೆಕಾಲಿಕ ಶಿಕ್ಷಕರ ನೇಮಕಾತಿಗಾಗಿ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 18 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಬಿ ಬ್ಲಾಕ್, ಒಂದನೇ ಮಹಡಿ, ಜಿಲ್ಲಾಧಿಕಾರಿಗಳ ಕಛೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ಅಥವಾ ದೂರವಾಣಿ ಸಂಖ್ಯೆ: 0820-2574946 ಅನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ. ಸ್ಥಳೀಯರಿಗೆ ಪ್ರಥಮ ಆದ್ಯತೆ ನೀಡಲಾಗುವುದು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಗರದ ಅಂಕದಕಟ್ಟೆಯಲ್ಲಿ ತಡರಾತ್ರಿ ಚಿರತೆ ಓಡಾಟ ಸಿಸಿಟಿವಿ ಕೆಮರಾದಲ್ಲಿ ಸೆರೆಯಾಗಿದ್ದು ಜನರು ಆತಂಕಕ್ಕೆ ಒಳಗಾಗಿದ್ದಾರೆ. ಅಂಕದಕಟ್ಟೆಯ ರಾಷ್ಟ್ರೀಯ ಹೆದ್ದಾರಿ ಸಮೀಪದಲ್ಲೇ ಜನವಸತಿ ಪ್ರದೇಶದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಇಲ್ಲಿನ ನಿವಾಸಿ ಡಾ| ಜಾನ್ಸನ್ ಅವರ ಮನೆ ಹಿಂಭಾಗದಲ್ಲಿ ಬುಧವಾರ ರಾತ್ರಿ 12.56ರ ವೇಳೆಗೆ ಚಿರತೆ ನಡೆದಾಡಿದೆ. ಚಿರತೆ ಓಡಾಟದ ದೃಶ್ಯ ಸ್ಥಳೀಯ ಸೈನ್ ಇನ್ ಸೆಕ್ಯೂರಿಟಿ ಸಂಸ್ಥೆಯ ಲೈವ್ ಮಾನಿಟರಿಂಗ್ ಸಿಸಿಟಿವಿ ಕೆಮರಾದಲ್ಲಿ ಸೆರೆಯಾಗುತ್ತಿತ್ತು. ಇದನ್ನು ಗಮನಿಸಿದ ಸಂಸ್ಥೆಯ ಸಿಬಂದಿ ತತ್ಕ್ಷಣ ಮನೆಯವರಿಗೆ ಮನೆಯಿಂದ ಹೊರಗೆ ಬರದಂತೆ ಸೂಚಿಸಿದರು. ಬಳಿಕ ಚಿರತೆ ಮರೆಯಾಗಿದೆ. ಎಲ್ಲಿ ಹೋಗಿದೆ ಎನ್ನುವುದು ಗೊತ್ತಾಗಿಲ್ಲ. ಈವರೆಗೆ ಕುಂದಾಪುರದ ಗ್ರಾಮಾಂತರ ಭಾಗಗಳಾದ ತೆಕ್ಕಟ್ಟೆ, ಮೊಳಹಳ್ಳಿ, ಬಡಾಕೆರೆ, ಕೋಟೇಶ್ವರದ ಮಾರ್ಕೋಡು, ಹೊಂಬಾಡಿ ಮಂಡಾಡಿ, ಕಾಳಾವರ, ಹಾರ್ದಳ್ಳಿ ಮಂಡಳ್ಳಿ, ಅಮಾಸೆಬೈಲು, ಕೊರ್ಗಿ, ಜಪ್ತಿ, ಕೊಡ್ಲಾಡಿ, ಆಲೂರು, ಕನ್ನಡಕುದ್ರು ಮೊದಲಾದೆಡೆ ಚಿರತೆ ಕಾಣಿಸಿಕೊಂಡಿತ್ತು. ಎರಡು ಮೂರು ವರ್ಷಗಳಿಂದ ಚಿರತೆ ಓಡಾಟ ಸುದ್ದಿ ಹೆಚ್ಚಾಗುತ್ತಿದ್ದು ಅರಣ್ಯ ಇಲಾಖೆ ನಡೆಸಿದ ಕಾರ್ಯಾಚರಣೆಯಲ್ಲಿ…
