ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೆಶ್ವರ ದೇಗುಲದ ಪ್ರಧಾನ ಅರ್ಚಕರಾದ ಚಂದ್ರಶೇಖರ ಮಂಜ (78) ಅವರು ಇತ್ತೀಚಿಗೆ ನಿಧನ ಹೊಂದಿದರು. ಹಿರಿಯ ಅರ್ಚಕರಾಗಿ ಹಲವು ವರ್ಷ ಕಾಲ ಸೇವೆ ಸಲ್ಲಿಸಿದ್ದ ಅವರು ಕ್ಷೇತ್ರದ ಭಕ್ತರ ಗೌರವಕ್ಕೆ ಪಾತ್ರರಾಗಿದ್ದರು. ದೇಗುಲದ ಆನುವಂಶೀಯ ಮೊಕೇಸರ ಸಿ. ಸದಾಶಿವ ಶೆಟ್ಟಿ, ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ, ಮಾಜಿ ಶಾಸಕರಾದ ಕೆ. ಗೋಪಾಲ ಪೂಜಾರಿ, ಬಿ.ಎಂ. ಸುಕುಮಾರ ಶೆಟ್ಟಿ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಗರದ ವಿವಾಹಿತ ಮಹಿಳೆಯೋರ್ವರು ನಾಪತ್ತೆಯಾದ ಬಗ್ಗೆ ಕುಂದಾಪುರ ಠಾಣೆಯಲ್ಲಿ ದೂರು ದಾಖಲಾಗಿದೆ. ಇಲ್ಲಿನ ವಿಠಲವಾಡಿ ಮೂಲದ ಹೀನಾ ಕೌಷರ್ (33) ನಾಪತ್ತೆಯಾದ ಮಹಿಳೆ. ಹೀನಾ ಪತಿ ವಿದೇಶದಲ್ಲಿದ್ದು ಎರಡು ಮಕ್ಕಳು ಹಾಗೂ ತಾಯಿಯೊಂದಿಗೆ ಕುಂದಾಪುರ ವಿಠಲವಾಡಿಯಲ್ಲಿ ವಾಸಿಸುತ್ತಿದ್ದರು. ಸೋಮವಾರ ಬೆಳಿಗ್ಗೆ 04-00 ಗಂಟೆ ಸುಮಾರಿಗೆ ಕುಂದಾಪುರ ಚರ್ಚ್ ರಸ್ತೆಯಿಂದ ಕೋಡಿಗೆ ಹೋಗುವ ಸೇತುವೆ ಬಳಿ ಮಹಿಳೆಯ ಸ್ಕೂಟರ್ ಹಾಗೂ ಚಪ್ಪಲಿ ಪತ್ತೆಯಾಗಿದೆ. ಪೊಲೀಸರು, ಅಗ್ನಿ ಶಾಮಕದಳ ಹಾಗೂ ಸ್ಥಳೀಯರು ಸೇರಿ ನದಿಯಲ್ಲಿ ಹುಡುಕಾಟ ನಡೆಸಿದ್ದು ಎಲ್ಲಿಯೂ ಪತ್ತೆ ಆಗಿರುವುದಿಲ್ಲ. ಮೊಬೈಲ್ ಸ್ವಿಚ್ ಆಫ್ ಆಗಿರುತ್ತದೆ. ಇದರಿಂದಾಗಿ ಆತ್ಮಹತ್ಯೆಯೋ ಅಥವಾ ನಾಪತ್ತೆಯೋ ಎನ್ನುವ ಅನುಮಾನ ವ್ಯಕ್ತವಾಗಿದೆ. ಕುಂದಾಪುರ ಪೊಲೀಸರು ನಾಪತ್ತೆ ಪ್ರಕರಣ ದಾಖಲಿಸಿ ಕೊಂಡಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಬಿಲ್ಲವ ಯುವ ವೇದಿಕೆ ಪಾಂಡೇಶ್ವರ ಮೂಡಹಡು ಇವರ ನೇತೃತ್ವದಲ್ಲಿ ಕಲ್ಪತರು ಮಹಿಳಾ ಸ್ವ ಸಹಾಯ ಗುಂಪಿನ ಸದಸ್ಯರ ಮಕ್ಕಳಿಗೆ 10ನೇ ವರ್ಷದ ಪ್ರತಿಭಾ ಪುರಸ್ಕಾರ ಹಾಗೂ ನೋಟ್ ಪುಸ್ತಕ ವಿತರಣೆ ಕಾರ್ಯಕ್ರಮವು ಪಾಂಡೇಶ್ವರ ಶಾಲೆಯಲ್ಲಿ ಜರುಗಿತು. ಈ ವರ್ಷ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಅನ್ನಪೂರ್ಣ ಹಾಗೂ ಪೂರ್ವಿ ಇವರನ್ನು ಸಂಘದ ಪರವಾಗಿ ಗೌರವಿಸಲಾಯಿತು. 205 ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಣೆ ಮಾಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವ ವೇದಿಕೆಯ ಅಧ್ಯಕ್ಷ ರವಿಕಿರಣ್ ಪೂಜಾರಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬ್ರಹ್ಮ ಬೈದರ್ಕಳ ಬಿಲ್ಲವ ಸೇವಾ ಸಂಘ ಸಾಸ್ತಾನ ಇದರ ಅಧ್ಯಕ್ಷ ಎಂ. ಸಿ. ಚಂದ್ರಶೇಖರ ಪೂಜಾರಿ, ಬ್ರಹ್ಮ ಬೈದರ್ಕಳ ಬಿಲ್ಲವ ಸೇವಾ ಸಂಘ ಸಾಸ್ತಾನ ಇದರ ಪ್ರಧಾನ ಕಾರ್ಯದರ್ಶಿ ಐರೋಡಿ ವಿಠ್ಠಲ್ ಪೂಜಾರಿ, ಉದ್ಯಮಿಗಳಾದ ದಯಾನಂದ ಪೂಜಾರಿ ಮೂಡಹಡು ಹಾಗೂ ಗೋಪಾಲ ಪೂಜಾರಿ ಮಠತೋಟ, ಪಾಂಡೇಶ್ವರ ಗ್ರಾಮ ಪಂಚಾಯತ್ ಸದಸ್ಯರಾದ ಸುಜಾತಾ ವೆಂಕಟೇಶ್ ಪೂಜಾರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಒಂದು ಸಂಘಟನೆ ಹೇಗಿರಬೇಕೆಂಬುವದನ್ನು ಪಂಚವರ್ಣ ಸಂಘಟನೆ ರಾಜ್ಯಕ್ಕೆ ಮಾದರಿಯಾಗಿ ತೋರಿಸಿಕೊಟ್ಟಿದೆ ಎಂದು ಕೋಟ ಸಹಕಾರಿ ವ್ಯವಸಾಯಕ ಸಂಘದ ಅಧ್ಯಕ್ಷ ಡಾ. ಕೆ. ಕೃಷ್ಣ ಕಾಂಚನ್ ಅಭಿಪ್ರಾಯಪಟ್ಟರು. ಅವರು ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ಡಾ. ಪುನೀತ್ ರಾಜ್ ಕುಮಾರ್ ವಿದ್ಯಾನಿಧಿ ಯೋಜನೆಯಡಿ ದತ್ತು ಸ್ವೀಕರಿಸಿದ ವಿದ್ಯಾರ್ಧಿಗಳಿಗೆ 6ನೇ ವರ್ಷದ ಪರಿಕರ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಂಘಟನೆಗಳು ವಾರ್ಷಿಕೋತ್ಸವ ಕಾರ್ಯಕ್ರಮಗಳನ್ನು ಆಯೋಜಿಸುವುದನ್ನು ಕಾಣುತ್ತೇವೆ. ಆದರೆ ಪಂಚವರ್ಣ ಸಂಘಟನೆ ಅತ್ಯದ್ಭುತವಾಗಿ ಇಡೀ ರಾಜ್ಯಕ್ಕೆ ವಿಭಿನ್ನ ಕಾರ್ಯಕ್ರಮಗಳ ಮೂಲಕ ಮನೆ ಮಾತಾಗಿ ಬೆಳೆದು ನಿಂತಿದೆ. ವಿದ್ಯಾರ್ಥಿಗಳನ್ನು ದತ್ತು ಸ್ವೀಕರಿಸುವುದು ಸುಲಭದ ಮಾತಲ್ಲ, ಬದಲಾಗಿ ಅದನ್ನು ನಿರಂತವಾಗಿ ಕೊಂಡ್ಯೋಯುವುದು ಸವಾಲಿನ ಕಾರ್ಯ. ಈ ದಿಸೆಯಲ್ಲಿ ವಿದ್ಯಾರ್ಥಿಗಳು ಇದರ ಸದ್ಭಳಕೆ ಮಾಡಿಕೊಂಡು ಸಮಾಜದ ಮುಖ್ಯವಾಹಿಯಲ್ಲಿ ನಿಲ್ಲಬೇಕು ಹಾಗೂ ಇನೊರ್ವರಿಗೂ ಸಹಾಯಹಸ್ತ ಚಾಚುವ ಮನಸ್ಥಿತಿ ಸೃಷ್ಠಿಸಿಕೊಳ್ಳಿ ಎಂದು ಕರೆ ನೀಡಿದರು. ಇದೇ ವೇಳೆ ಸುಮಾರು 60 ಸಾವಿರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಪ್ರವಾಸೋದ್ಯಮ/ಆತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಫುಡ್ ಕ್ರಾಫ್ಟ್ ಇನ್ಸಿಟ್ಯೂಟ್ (ಈಅI) ಮೈಸೂರು ಹಾಗೂ ಇನ್ಸಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್‌ಮೆಂಟ್ (Iಊಒ) ಬೆಂಗಳೂರು ಇವರ ಮೂಲಕ ರಾಜ್ಯಾದ್ಯಂತ ಪರಿಶಿಷ್ಟ ಜಾತಿಗೆ ಸೇರಿದ 292 ಅಭ್ಯರ್ಥಿಗಳಿಗೆ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 162 ಅಭ್ಯರ್ಥಿಗಳಿಗೆ ವಸತಿ ಸಹಿತ ಕಾರ್ಯಕ್ರಮವನ್ನು ಜಾರಿಗೊಳಿಸಲು ಅನುಮೋದನೆ ನೀಡಲಾಗಿದೆ. ಅದರಂತೆ ತರಬೇತಿವಾರು ಉಳಿದಿರುವ ಗುರಿಯನ್ನು ಜಿಲ್ಲಾವಾರು ಹಂಚಿಕೆ ಮಾಡಲಾಗಿದ್ದು, ಸದರಿ ತರಬೇತಿಗಳು ಜೂನ್ 30 ರಿಂದ ಪ್ರಾರಂಭವಾಗಲಿದ್ದು, ತರಬೇತಿಗೆ ಸಂಬಂಧಿಸಿದಂತೆ ಈಗಾಗಲೇ ತರಬೇತಿ ಪಡೆಯುತ್ತಿರುವ ಅಭ್ಯರ್ಥಿಗಳಿಗೆ ರಾಜ್ಯದ ವಿವಿಧ ಪಂಚತಾರಾ ಹಾಗೂ ಇತರೆ ಹೋಟೆಲ್‌ಗಳಲ್ಲಿ ಕೆಲಸ ಖಾತರಿಯಾಗಿರುವುದು. ತರಬೇತಿ ಪಡೆಯುವ ವೇಳೆ ಮಾಸಿಕ 2,000 ರೂ. ಗಳ ಸ್ಟೈಫಂಡ್ ನೀಡಲಾಗುವುದು. ತರಬೇತಿಗೆ ಹಾಜರಾಗುವವರಿಗೆ ವಸತಿ, ಊಟೋಪಚಾರ ಹಾಗೂ ಯೂನಿಫಾರ್ಮ್ ನೀಡಲಾಗುವುದು. ತರಗತಿಯ ತರಬೇತಿ ಜೊತೆಗೆ ರಾಜ್ಯದ ವಿವಿಧ ಪಂಚತಾರಾ ಹಾಗೂ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಸ್ಟೇಟ್ ಅಮೆಚೂರ್ ಯೋಗ ಸ್ಪೋರ್ಟ್ಸ್ ಅಸೋಸಿಯೇಶನ್ ವತಿಯಿಂದ ಸಾಗರದಲ್ಲಿ ನಡೆದ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ತಾಲೂಕು ಸಂಚಾರ ಪೊಲೀಸ್ ಠಾಣಾ ಸಿಬ್ಬಂದಿ ಗುರುದಾಸ್ ಜಿ. ಅವರು ತೃತೀಯ ಸ್ಥಾನ ಪಡೆದು ರಾಷ್ಟ್ರ ಮಟ್ಟದ ಯೋಗಾಸನ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಇಲ್ಲಿನ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚಿಗೆ ಹೊಸದಾಗಿ ಸೇರ್ಪಡೆಗೊಂಡ ಮಕ್ಕಳಿಗೆ ಜಿ. ಎಸ್.ವಿ.ಎಸ್ ಅಸೋಸಿಯೇಷನ್ ವತಿಯಿಂದ ಉಚಿತ ಸಮವಸ್ತ್ರ ಮತ್ತು ಬೆಲ್ಟ್ ಗಳನ್ನು ವಿತರಿಸಲಾಯಿತು. ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ನರೇಂದ್ರ ಎಸ್. ಗಂಗೊಳ್ಳಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರಾದ ದೀಕ್ಷಿತ್ ಮೇಸ್ತ, ಬೋಧಕ ಬಳಗದ ಲಕ್ಷ್ಮೀ ಖಾರ್ವಿ, ಮಾಲಾಶ್ರೀ ಖಾರ್ವಿ, ರೇಖಾ ಖಾರ್ವಿ, ರೇಣುಕಾ ನಾಯಕ್, ಭೂದೇವಿ, ಮಹಾಬಲ ಆಚಾರ್ಯ ಮತ್ತು ಮಮತಾ ಖಾರ್ವಿ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಶಿಕ್ಷಕ ವೃಂದದವರಿಗೆ ಶಿಕ್ಷಕರು ಬಳಸಬೇಕಾದ ವಿವಿಧ ಕೌಶಲ್ಯಗಳ ಬಗ್ಗೆ ತರಬೇತಿ ಕಾರ್ಯಕ್ರಮವನ್ನು ನಡೆಸಲಾಯಿತು. ಕಾರ್ಯಾಗಾರದಲ್ಲಿ ಅಂಕುರಮ್ ಎಜುಕೇಶಲ್ ಟ್ರಸ್ಟ್ನ ಶೈಕ್ಷಣಿಕ ತಂತ್ರಜ್ಞರಾದ ಅಕ್ಷಯ ಕೆ. ಪಣಿಕರ್ ಅವರು ಮಾತನಾಡಿ, ಮಕ್ಕಳ ಮನಸ್ಸನ್ನು ಅರಿಯದೇ ಪಾಠದಲ್ಲಿ ತೊಡಗಿದರೆ ವಿದ್ಯಾರ್ಥಿಗಳಿಗೆ ಪರಿಣಾಮಕಾರಿಯಾಗದು. ಆದ್ದರಿಂದ ಮಕ್ಕಳ ಮನಸ್ಸನ್ನು ನಮ್ಮೆಡೆಗೆ ಸೆಳೆದು ಪಾಠದಲ್ಲಿ ತೊಡಗಲು ಅಧ್ಯಾಪಕರು ಸದಾ ಪ್ರಯತ್ನಿಸಬೇಕು ಎಂದು ನೆನಪಿಸುತ್ತಾ ಮಕ್ಕಳ ಸ್ಥಿತಿಗತಿಗಳನ್ನು ಗಮನಿಸಿ ಅವರ ಸಮಸ್ಯೆಯನ್ನು ಅರಿಯುವ ಮಾರ್ಗಗಳನ್ನು ಶಿಕ್ಷಕರಿಗೆ ಪರಿಚಯಿಸಿದರು. ದೋಷಪೂರಿತ ಸ್ಥಿತಿಯಲ್ಲಿರುವಾಗ ಮಕ್ಕಳನ್ನು ಹೇಗೆ ನಿಯಂತ್ರಿಸಬೇಕೆಂಬ ವಿಚಾರಗಳಲ್ಲಿ ಮಾಹಿತಿಯನ್ನು ಹಂಚಿಕೊಂಡರು. ಬೇಸ್ ಸಂಸ್ಥೆಯು ನಿರ್ದೇಶಕರಾದ ರಾಮಪ್ರಸಾದ್ ಎಚ್. ಎಸ್. ಇಂಗ್ಲೀಷ್ ಭಾಷೆಯನ್ನು ತಪ್ಪಿಲ್ಲದೇ ಸಮರ್ಥವಾಗಿ ಬಳಸಿಕೊಂಡು ಮುಂದುವರಿಯಲು ಬೇಕಾದ ವೈಯಾಕರಣೀಯ ವಿಚಾರಗಳನ್ನು ತಿಳಿಸಿಕೊಟ್ಟರು. ಸುಮಾರು 60 ಜನ ಅಧ್ಯಾಪಕರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಉತ್ತಮ ಮಾರ್ಗದರ್ಶನವನ್ನು ಪಡೆದುಕೊಂಡರು. ಈ ಸಮಯದಲ್ಲಿ ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ನಗರಸಭಾ ನಿಧಿಯ ಶೇ. 5 ರ ವಿಕಲಚೇತನರ ಕಲ್ಯಾಣ ಕಾರ್ಯಕ್ರಮ ಯೋಜನೆಯಡಿ ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದ ಕ್ರೀಡೆ, ಕಲೆ, ಸಾಂಸ್ಕೃತಿಕ ಹಾಗೂ ಇತರೆ ವ್ಯಾಸಂಗೇತರ ಚಟುವಟಿಕೆಗಳಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ, ವಸತಿ, ಶಿಕ್ಷಣ, ಸರ್ಕಾರಿ ಕಛೇರಿಗಳು, ಸಮುದಾಯ ಭವನ ಕಟ್ಟಡಗಳಿಗೆ ಜಾರುಹಾದಿ ಹಾಗೂ ವಿಕಲಚೇತನ ಸ್ನೇಹಿ ಶೌಚಾಲಯಗಳನ್ನು ನಿರ್ಮಿಸಲು ಇಚ್ಚಿಸುವ ಆಸಕ್ತರು/ಸಂಸ್ಥೆಗಳು ನಿಗದಿತ ಅರ್ಜಿಯೊಂದಿಗೆ ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಪ್ರಸಕ್ತ ಸಾಲಿನ ತೆರಿಗೆ ಪಾವತಿ ಚಲನ್ ಪ್ರತಿ, ಆಧಾರ್ ಕಾರ್ಡ್ ಪ್ರತಿ, ಪಡಿತರ ಚೀಟಿ ಪ್ರತಿ, ಅಂಗವಿಕಲತೆಯ ಬಗ್ಗೆ ಜಿಲ್ಲಾ ಸರ್ಜನ್‌ರಿಂದ ಪಡೆದುಕೊಂಡ ಪ್ರಮಾಣ ಪತ್ರ ಮತ್ತು ಕ್ರೀಡೆ, ಕಲೆ, ಸಾಂಸ್ಕೃತಿಕ ಹಾಗೂ ಇತರೆ ವ್ಯಾಸಂಗೇತರ ಚಟುವಟಿಕೆಗಳ ಪ್ರಮಾಣ ಪತ್ರ ಇತ್ಯಾದಿ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಪೌರಾಯುಕ್ತರು, ನಗರಸಭೆ ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ದಲಿತ ಸಂಘಟನೆ ಇಂದು ನಿನ್ನೆಯ ಇತಿಹಾಸವಲ್ಲ ತನ್ನ ಚಳುವಳಿಯ ಮೂಲಕ ಸಮುದಾಯದ ಏಳುಬೀಳಿಗೆ ಸದಾ ಶ್ರಮಿಸಿ ಮುಂಚೂಣಿಗೆ ತಂದಿರಿಸಿದೆ ಎಂದು ದಸಂಸ ರಾಜ್ಯ ಸಂಘಟನಾ ಸಂಚಾಲಕ ಸುಂದರ್ ಮಾಸ್ತರ್ ಹೇಳಿದರು. ಅವರು ಭಾನುವಾರ ಕೋಟ ಸಿಎ ಬ್ಯಾಂಕ್ ಬಿ.ಸಿ ಹೊಳ್ಳ ಸಭಾಂಗಣದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಕೋಟ ಹೋಬಳಿ ಆಶ್ರಯದಲ್ಲಿ 26ನೇ ವರ್ಷದ ಉಚಿತ ನೋಟ್ ಪುಸ್ತಕ ವಿತರಣೆ, ಪ್ರತಿಭಾ ಪುರಸ್ಕಾರ ಅಕ್ಷರದಕ್ಕರೆ -2025 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ದಲಿತ ಸಮುದಾಯ ಯಾವುದೇ ಕ್ಷೇತ್ರದಲ್ಲೂ ಹಿಂದೆ ಬಿದ್ದಿಲ, ಸಾಕಷ್ಟು ಹೋರಾಟದ ಮೂಲಕ ಸಮುದಾಯ ಜನರಿಗೆ ನ್ಯಾಯ ಒದಗಿಸಿದೆ, ಶಿಕ್ಷಣದಿಂದ ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಳ್ಳವ ಯೋಜನೆ ಕರಾರುವಾಕ್ಕಾಗಿ ದಲಿತ ಸಮುದಾಯ ಆದ್ಯತೆ ನೀಡಿ, ಶೈಕ್ಷಣಿಕ ಕ್ರಾಂತಿ ಪಸರಿಸಿ ಇಂದು ಬಹು ಕ್ಷೇತ್ರದಲ್ಲಿ ಸಮುದಾಯ ಬಾಂದವರು ಗುರುತಿಸಿಕೊಂಡಿದ್ದಾರೆ. ಇದು ಸಮುದಾಯ ಅಭಿವೃದ್ಧಿಯ ಸಂಕೇತ ಎಂದು ಬಣ್ಣಿಸಿದರು. ಸಭೆಯ ಅಧ್ಯಕ್ಷತೆಯನ್ನು ದಸಂಸ ಕೋಟ ಹೋಬಳಿ ಸಂಚಾಲಕ…
