ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಯುವಬ್ರಿಗೇಡ್ ವತಿಯಿಂದ ಕುಂದಾಪುರದಲ್ಲಿ ಆಯೋಜಿಸಲಾಗಿರುವ ಭಾಷಣಕಾರ ಚಕ್ರವರ್ತಿ ಸೂಲಿಬೆಲೆ ಅವರ ಭಾಷಣಕ್ಕೆ ಅವಕಾಶ ನೀಡದಂತೆ ಕುಂದಾಪುರ ಯುವ ಕಾಂಗ್ರೆಸ್ ಹಾಗೂ ಎನ್ಎಸ್ಯುಐ ವತಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. “ಯುವಬ್ರಿಗೇಡ್”ಎಂಬ ಸಂಸ್ಥೆಯ ವತಿಯಿಂದ ಇದೇ ತಿಂಗಳ ಜೂ. 20, 21 ಮತ್ತು 22 ಒಟ್ಟು ಮೂರು ದಿನಗಳ ಕಾಲ “ಇನ್ನೀಗ ಅಖಂಡ ಭಾರತ ನಿರ್ಮಿಸಿಯೇ ವಿಶ್ರಾಂತಿ” ಎಂಬ ವಿಚಾರದಲ್ಲಿ ಉಪನ್ಯಾಸ ಕಾರ್ಯಕ್ರಮವನ್ನು ಕುಂದಾಪುರದ ಚಿಕ್ಕನ್ಸಾಲ್ ರಸ್ತೆಯ ಮೊಗವೀರ ಭವನದಲ್ಲಿ ಏರ್ಪಡಿಸಿದೆ. ಈ ಕಾರ್ಯಕ್ರಮದಲ್ಲಿ ಕೋಮುವಾದಿ ಭಾಷಣಕಾರ ಚಕ್ರವರ್ತಿ ಸೂಲಿಬೆಲೆ ಎಂಬ ವ್ಯಕ್ತಿಯು ಉಪನ್ಯಾಸ ನೀಡಲಿದ್ದಾರೆ ಎಂಬ ಪೋಸ್ಟರ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ಮತ್ತು ಈ ಕುರಿತಾಗಿ ಪ್ಲೆಕ್ಸ್ಗಳು ಕುಂದಾಪುರ ಪೇಟೆಯಾದ್ಯಂತ ಅಲ್ಲಲ್ಲಿ ಅಳವಡಿಸಲಾಗಿದೆ. ಈ ಚಕ್ರವರ್ತಿ ಸೂಲಿಬೆಲೆ ಎಂಬ ವ್ಯಕ್ತಿಯ ಮೇಲೆ “ದ್ವೇಷ ಭಾಷಣ ಮಾಡಿ ಹಿಂದೂ ಮುಸಲ್ಮಾನರ ನಡುವಿನ ಸೌಹಾರ್ಧತೆಯನ್ನು ಕೆಡಿಸಿದ”ಕುರಿತು ರಾಜ್ಯದ ವಿವಿಧ ಪೋಲಿಸ್ ಠಾಣೆಗಳಲ್ಲಿ ದೂರು ದಾಖಲಾಗಿದ್ದು ಅವರ ಮೇಲೆ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಜೂ.18: ಉಡುಪಿ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ.ಕೆ ರವರು ಅಪರಾಹ್ನ ನಿಕಟಪೂರ್ವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅವರಿಂದ ಅಧಿಕಾರ ಸ್ವೀಕರಿಸಿದರು. ಅವರು ಈ ಹಿಂದೆ ಬೆಂಗಳೂರಿನ ಆರ್. ಡಿ. ಪಿ. ಆರ್ ಇ -ಗವರ್ನೆನ್ಸ್ ನಿರ್ದೇಶಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಟೈಕ್ಸ್ಟೈಲ್ ಇಂಜಿನಿಯರಿಂಗ್ನಲ್ಲಿ ಐಐಟಿ ದಿಲ್ಲಿಯಿಂದ ಎಂಟೆಕ್ ಪದವಿ ಪಡೆದಿರುವ ಸ್ವರೂಪ ಅವರು 2025ರ ಫೆಬ್ರವರಿಯಿಂದ ಆರ್ಡಿಪಿಆರ್ ಇಲಾಖೆಯಲ್ಲಿ ಇ-ಗವರ್ನೆನ್ಸ್ನ ನಿರ್ದೇಶಕಿಯಾಗಿ ಕಾರ್ಯ ನಿರ್ವಹಿಸುತಿದ್ದಾರೆ. ಅದಕ್ಕೆ ಮುನ್ನ ಅವರು ಧಾರವಾಡ ಜಿಲ್ಲಾ ಪಂಚಾಯತ್ನಲ್ಲಿ ಸಿಇಓ ಹಾಗೂ ನೇಶನಲ್ ರೂರಲ್ ಲೈಲ್ಲಿಹುಡ್ ಮಿಷನ್ನ ಸಿಓಓ ಹಾಗೂ ಸಹಾಯಕ ನಿರ್ದೇಶಕಿಯಾಗಿ ಕಾರ್ಯನಿರ್ವಹಿಸಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಡಿಜಿಟಲ್ ಸೊಲ್ಯೂಶನ್ ಸಂಸ್ಥೆಯಾದ ಫೋರ್ತ್ಫೋಕಸ್ ಅನ್ನು ಬಿಸಿನೆಸ್ ಔಟ್ಲೈನ್ ಆಯೋಜಿಸಿದ ಬಿಸಿನೆಸ್ ಎಲೈಟ್ ಅವಾರ್ಡ್ ಕಾರ್ಯಕ್ರಮದಲ್ಲಿ “2025ರಲ್ಲಿ ಗಮನಹರಿಸಬಹುದಾದ ಅತ್ಯುತ್ತಮ ಸಂಸ್ಥೆ” ಎಂಬ ಪ್ರಶಸ್ತಿಯಿಂದ ಗೌರವಿಸಲಾಗಿದೆ. ಈ ಪ್ರಶಸ್ತಿಯು ಭಾರತದಾದ್ಯಂತ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ, ನವೀನತೆಗೆ ಪ್ರೋತ್ಸಾಹ ನೀಡುವ ಮತ್ತು ಬೆಳವಣಿಗೆಯಲ್ಲಿ ಮಹತ್ವದ ಪಾತ್ರವಹಿಸಿದ ಸಂಸ್ಥೆಗಳನ್ನ ಪ್ರತಿವರ್ಷ ಗುರುತಿಸುತ್ತದೆ. ಆಯ್ಕೆ ಪ್ರಕ್ರಿಯೆಯಲ್ಲಿ ಉದ್ಯಮದ ಮೇಲಿನ ಪರಿಣಾಮ, ನಾಯಕತ್ವದ ಗುಣ, ಮತ್ತು ಬೆಳವಣಿಗೆ ಸಾಮರ್ಥ್ಯಗಳನ್ನು ಆಧಾರವಾಗಿ ಪರಿಗಣಿಸಲಾಗುತ್ತದೆ. ಫೋರ್ತ್ಫೋಕಸ್ ಅನ್ನು ಈ ವರ್ಷದ ಅವಾರ್ಡ್ನ ಭಾಗವಾಗಿ ಆಯ್ಕೆ ಮಾಡಲಾಗಿದ್ದು, ಸಂಸ್ಥೆಯ ಸ್ಥಿರ ಸೇವಾ ದಕ್ಷತೆ ಮತ್ತು ಜಾಗತಿಕ ಕ್ಲೈಂಟ್ ನೆಟ್ವರ್ಕ್ಗೆ ಆದ ಆದರಣೆಯನ್ನು ಈ ಗೌರವ ಪ್ರತಿಬಿಂಬಿಸುತ್ತದೆ. 2015ರಲ್ಲಿ ಒಂದು ವ್ಯಕ್ತಿಯ ಫ್ರೀಲಾನ್ಸ್ ಪ್ರಾರಂಭವಾಗಿ ಬೆಳೆಯುತ್ತಿದ್ದ ಫೋರ್ತ್ಫೋಕಸ್, ಇಂದು 8+ ದೇಶಗಳಲ್ಲಿ 350ಕ್ಕೂ ಹೆಚ್ಚು ಗ್ರಾಹಕರಿಗೆ ಸೇವೆ ನೀಡುವ ಸಂಪೂರ್ಣ ಡಿಜಿಟಲ್ ಏಜೆನ್ಸಿಯಾಗಿ ಬೆಳೆದಿದೆ. “ನಾವು ಸೃಜನಾತ್ಮಕತೆ ಮತ್ತು ತಂತ್ರಜ್ಞಾನವನ್ನು ಸಮನುಯಾಯವಾಗಿ ಬಳಸಿ ವ್ಯವಹಾರ ವೃದ್ಧಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪಶ್ಚಿಮ ವಲಯದ 12 ಪಿಎಸೈಗಳನ್ನು ವರ್ಗಾವಣೆ ಮಾಡಿ ಪಶ್ಚಿಮ ವಲಯದ ಪೊಲೀಸ್ ಮಹಾನಿರೀಕ್ಷಕ ಅಮಿತ್ ಸಿಂಗ್ ಅವರು ಆದೇಶ ಹೊರಡಿಸಿದ್ದಾರೆ. ಉಡುಪಿ ಸೆನ್ ಠಾಣೆಯಲ್ಲಿ ಪಿಎಸೈ ಆಗಿ ಕರ್ತವ್ಯದಲ್ಲಿದ್ದ ಪವನ್ ನಾಯಕ್ ಅವರನ್ನು ಗಂಗೊಳ್ಳಿ ಪೊಲೀಸ್ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ಪಿಎಸೈ ಆಗಿಯೂ, ಗಂಗೊಳ್ಳಿ ಠಾಣೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಪಿಎಸೈ ಆಗಿದ್ದ ಹರೀಶ್ ಆರ್. ಅವರನ್ನು ಉಡುಪಿ ಸೆನ್ ಠಾಣೆಯ ಪಿಎಸೈ ಆಗಿಯೂ ಪರಸ್ಪರ ವರ್ಗಾವಣೆಗೊಳಿಸಲಾಗಿದೆ. ಇನ್ನು ಉಡುಪಿ ಜಿಲ್ಲೆಯಲ್ಲಿ ಮಲ್ಪೆ ಠಾಣೆಗೆ ಅನಿಲ್ ಕುಮಾರ್ ಡಿ., ಅಜೆಕಾರು ಠಾಣೆಗೆ ಮಹೇಶ್ ಟಿ.ಎಂ ಅವನ್ನು ಹೆಬ್ರಿ ಠಾಣೆಗೆ ರವಿ ಬಸಪ್ಪ ಕಾರಗಿ ಅವರನ್ನು ಕಾರ್ಕಳ ಠಾಣೆಗೆ ಮುರಳಿಧರ ನಾಯ್ಕ್ ಅವರನ್ನು ವರ್ಗಾವಣೆಗೊಳಿಸಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪ್ರೌಢ ಶಿಕ್ಷಣ ವಿದ್ಯಾರ್ಥಿಗಳ ಜೀವನದ ಬಹು ಮುಖ್ಯ ಘಟ್ಟ ಸರಕಾರಿ ಅಥವಾ ಖಾಸಗಿ ವ್ಯವಸ್ಥೆಯಲ್ಲಿರುವ ಶಿಕ್ಷಣ ಸಂಸ್ಥೆಗಳು. ಪ್ರತಿಯೊಂದು ವಿದ್ಯಾರ್ಥಿಗಳ ಕಾಳಜಿ ವಹಿಸುವುದರ ಜೊತೆಗೆ ಆಯಾ ಸಂಸ್ಥೆಗಳಲ್ಲಿ ಶಿಕ್ಷಣದ ಪ್ರಾರಂಭದಿಂದ ಹಿಡಿದು ಅಂತ್ಯದವರೆಗೂ ವಿದ್ಯಾರ್ಥಿಗಳಿಗೆ ಭೌದ್ದಿಕ ಸಾಮರ್ಥ್ಯ ತುಂಬಿ ಅವರುಗಳ ಶೈಕ್ಷಣಿಕ ಗುರಿಯ ದಡ ತಲುಪಿಸುವ ನೈತಿಕತೆಯನ್ನು ಪ್ರದರ್ಶಿಸಲಿ ಎಂದು ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಕರೆ ನೀಡಿದರು. ಅವರು ತಾಲೂಕಿನ ಪಂಚಾಯತ್ ಸಭಾಂಗಣದಲ್ಲಿ ನಡೆದ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರೌಢ ಶಾಲೆಗಳ ಮುಖ್ಯೋಪಾಧ್ಯಾಯರು ಹಾಗೂ ಶಾಲಾಭಿವೃದ್ಧಿ ಸಮಿತಿ ಸದಸ್ಯರೊಂದಿಗೆ ನಡೆದ ಪ್ರೌಢ ಶಾಲೆಗಳ ಶಾಲಾ ದಾಖಲಾತಿ ಬಗೆಗಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದರು. ಕ್ಷೇತ್ರದ ಕೆಲವೊಂದು ಶಿಕ್ಷಣ ಸಂಸ್ಥೆಗಳು ಪ್ರೌಢ ಶಾಲೆಗೆ ದಾಖಲು ಮಾಡಿಕೊಂಡ ವಿದ್ಯಾರ್ಥಿಗಳನ್ನು ಕಲಿಕೆಯಲ್ಲಿ ಹಿಂದುಳಿದಿರುವ ಕಾರಣ ಮುಂದಿಟ್ಟು ಹಾಗೂ ಎಸ್ಎಸ್ಎಲ್ಸಿ ಯಲ್ಲಿ ಶೇಕಡಾ ನೂರು ಫಲಿತಾಂಶ ದಾಖಲಿಸುವ ದೂರಾಲೋಚನೆಯನ್ನಿಟ್ಟುಕೊಂಡು ಅಂತಹ ವಿದ್ಯಾರ್ಥಿಗಳನ್ನು ಹತ್ತನೇ ತರಗತಿಗೆ ಬೇರೆ ಖಾಸಗಿ ಶಾಲೆಗಳಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಐಎಂಜೆ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಮತ್ತು ಮೂಡ್ಲಕಟ್ಟೆ ಇನ್ಸ್ಟಿಟ್ಯೂಟ್ ಆಫ್ ಪ್ಯಾರಾಮೆಡಿಕಲ್ ಸೈನ್ಸಸ್ ನಲ್ಲಿ ಒಂದು ದಿನದ ಶೈಕ್ಷಣಿಕ ಮತ್ತು ವ್ಯಕ್ತಿತ್ವ ವಿಕಸನ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಉದ್ಘಾಟನಾ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಡೀನ್ ರಾದ ಡಾ. ಪದ್ಮಚರಣ ಸ್ವೈನ್ ಅವರು ಕಾರ್ಯಾಗಾರದ ಪ್ರಾಮುಖ್ಯತೆಯನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. ವೇದಿಕೆಯಲ್ಲಿ ಐಎಂಜೆ ಇನ್ಸ್ಟಿಟ್ಯೂಷನ್ಸ್ ಬ್ರಾಂಡ್ ಬಿಲ್ಡಿಂಗ್ ನಿರ್ದೇಶಕರಾದ ಡಾ. ರಾಮಕೃಷ್ಣ ಹೆಗ್ಡೆ, ಉಪ ಪ್ರಾಂಶುಪಾಲರಾದ ಸೌಜನ್ಯ, ಆಡಳಿತಾಧಿಕಾರಿಯಾದ ಪಾರ್ಥಸಾರಥಿ ಇದ್ದರು. ಕಾರ್ಯಕ್ರಮವು ವಿದ್ಯಾರ್ಥಿನಿ ಮಿಸ್ಬಾ ಕೌಸರ್ ಅವರ ಸ್ವಾಗತಿಸಿದರು. ಮುಜ್ಞಾನವರು ವಂದನಾರ್ಪಣೆಗೈದರು. ಸಿಂಧು ಅವರು ಕಾರ್ಯಕ್ರಮವನ್ನು ನಿರ್ವಹಿಸಿದರು. ಸಭಾ ಕಾರ್ಯಕ್ರಮದ ನಂತರ ಡಾ. ರಾಮಕೃಷ್ಣ ಹೆಗಡೆ ಅವರು ಅತ್ಯಂತ ಕ್ರಿಯಾಶೀಲವಾಗಿ ಯಶಸ್ವೀ ಕಾರ್ಯಗಾರವನ್ನು ನಡೆಸಿಕೊಟ್ಟರು. ಬಹಳ ಚಟುವಟಿಕೆಯಿಂದ ಕೂಡಿದ ಈ ಕಾರ್ಯಗಾರದಲ್ಲಿ ವಿದ್ಯಾರ್ಥಿಗಳು ತುಂಬಾ ಆಸಕ್ತಿಯಿಂದ ಭಾಗವಹಿಸಿದ್ದರು. ಸುಷ್ಮಾ ಉಪಾಧ್ಯಯ ಮತ್ತು ಪವಿತ್ರಾ ಅವರು ಈ ಕಾರ್ಯಕ್ರಮ ಸಂಯೋಜಿಸಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ವತಿಯಿಂದ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಯಡಿ ಸಾಲ ಮತ್ತು ಸಹಾಯಧನ ಸೌಲಭ್ಯ ಪಡೆಯಲು ವೀರಶೈವ-ಲಿಂಗಾಯತ ಜಾತಿ ಹಾಗೂ ಉಪಜಾತಿಗೆ ಸೇರಿದ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಶೈಕ್ಷಣಿಕ ಸಾಲ ಯೋಜನೆ, ಜೀವ ಜಲ ಯೋಜನೆ, ಕಾಯಕ ಕಿರಣ ಯೋಜನೆ, ಭೋಜನಾಲಯ ಕೇಂದ್ರ, ವಿಭೂತಿ ನಿರ್ಮಾಣ ಘಟಕ, ಸ್ವಾವಲಂಭಿ ಸಾರಥಿ ಯೋಜನೆ ಹಾಗೂ ಸ್ವ-ಸಹಾಯ ಸಂಘಗಳಿಗೆ ಉತ್ತೇಜನ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಸೇವಾಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಹಾಗೂ ಸ್ವಾತಂತ್ರö್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆಯ ಸೌಲಭ್ಯ ಪಡೆಯಲು ವೆಬ್ಸೈಟ್ https://www.kaushalkar.com/ ನಲ್ಲಿ ಆನ್ಲೈನ್ ಮೂಲಕ ಜೂನ್ 30 ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ಸೈಟ್ https://kvldcl.karnataka.gov.in ಅಥವಾ ನಿಗಮದ ದೂರವಾಣಿ ಸಂಖ್ಯೆ: 080-22865522, 9900012351 ಅಥವಾ ಜಿಲ್ಲಾ ವ್ಯವಸ್ಥಾಪಕರು, ಡಿ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಮಹಿಳೆ ಸ್ವಾವಲಂಬಿಯಾಗಿ ಜೀವನ ನಡೆಸುವಂತಾಗಬೇಕೆಂಬ. ಉದ್ದೇಶದಿಂದ ಆದಾಯಯುಕ್ತ ಚಟುವಟಿಕೆಗಳನ್ನು ನಡೆಸಲು ತರಬೇತಿ, ಸಹಾಯಧನ ಒದಗಿಸಿ ಸ್ವ ಉದ್ಯೋಗ ಮಾಡಲು ಸರಕಾರ ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ ಖಾರ್ವಿ ಹೇಳಿದರು. ಅವರು ಗಂಗೊಳ್ಳಿ ಗ್ರಾಮ ಪಂಚಾಯತ್ನ ಗಂಗೋತ್ರಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಮಹಿಳೆಯರು ಸರಕಾರದ ಯೋಜನೆಗಳ ಸದ್ಭಳಕೆ ಮಾಡಿಕೊಳ್ಳಬೇಕು, ಸ್ವ ಉದ್ಯೋಗಕ್ಕೆ ದೊರಕಿದ ಸಹಾಯಧನವನ್ನು ನ್ಯಾಯವಾಗಿ ಬಳಸಿಕೊಂಡು ಕುಟುಂಬದ ಆದಾಯವನ್ನು ಹೆಚ್ಚಿಸಿಕೊಳ್ಳಬೇಕು ಒಕ್ಕೂಟದ ಅಧ್ಯಕ್ಷೆ ಕಮಲ ಖಾರ್ವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗ್ರಾಪಂ ಪಿಡಿಒ ಶೋಭಾ ಎಸ್., ಕಾರ್ಯದರ್ಶಿ ಅನೂಪ್ ಶೇಟ್, ಚಿತ್ತಾರ ಸಂಜೀವಿನಿ ತಾಲೂಕು ಒಕ್ಕೂಟದ ಕಾರ್ಯದರ್ಶಿ ನಾಗರತ್ನ ಶುಭ ಹಾರೈಸಿದರು. ಸಂಪನ್ಮೂಲ ವ್ಯಕ್ತಿಗಳಾದ ಪಶು ವೈದ್ಯಾಧಿಕಾರಿ ಡಾ. ಅರುಣ್ ಕೆ.ಪಿ., ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಎಚ್ಒ ನಯನಾ ತಾಂಡೇಲ, ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷೆ ಚಂದ್ರಕಲಾ ತಾಂಡೇಲ, ರುಡ್ಸೆಟ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಆರೋಗ್ಯ ಇಲಾಖೆಯ ಕಭೀ ಕಾರ್ಯಕ್ರಮದಡಿಯಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 23 ರ ಕೊನೆಯ ದಿನ. ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ Udupi.nic.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಕಾಲೇಜು (ಸ್ವಾಯತ್ತ) ವತಿಯಿಂದ 2025-26 ನೇ ಸಾಲಿನ ಪದವಿ ತರಗತಿಗಳ ಪ್ರಾರಂಭೋತ್ಸವ ಕಾರ್ಯಕ್ರಮ ’ಅಂಕುರ’ ಆಳ್ವಾಸ್ ನ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ, ಶಿಕ್ಷಣ ಸಂಸ್ಥೆಗಳು ಬಹುಮಹಡಿ ಕಟ್ಟಡಗಳಿದ್ದ ಮಾತ್ರಕ್ಕೇ ಶ್ರೇಷ್ಠವೆನಿಸಿಕೊಳ್ಳಲಾರವು. ಆ ಕಟ್ಟಡಗಳಿಗೆ ಜೀವಕಳೆ ವಿದ್ಯಾರ್ಥಿಗಳಿಂದ ಮಾತ್ರ ತುಂಬಲು ಸಾಧ್ಯ. ಅಂತಹ ವಿದ್ಯಾರ್ಥಿ ಸಮೂಹ ನೀವಾಗಬೇಕು. ಆಳ್ವಾಸ್ ನ ವಿದ್ಯಾರ್ಥಿಗಳೇ ’ಆಳ್ವಾಸ್ ಬ್ರ್ಯಾಂಡ್ʼ ಎಂದರು. ವಿದ್ಯಾರ್ಥಿಗಳು ಪದವಿ ಕಾಲೇಜಿಗೆ ಸೇರುವ ಮೂಲ ಉದ್ದೇಶವನ್ನು ಅರಿಯಬೇಕು. ಆಳ್ವಾಸ್ ಶಿಕ್ಷಣ ಸಂಸ್ಥೆ ತನ್ನ ಸಮಕಾಲೀನ ಶಿಕ್ಷಣದ ಮೂಲಕ ವಿದ್ಯಾರ್ಥಿಗಳಿಗೆ ಪ್ರಪಂಚದ ಆಧುನಿಕ ಅಗತ್ಯಗಳಿಗೆ ತಕ್ಕಂತಹ ಜ್ಞಾನ ಮತ್ತು ಕೌಶಲಗಳನ್ನು ಸದಾ ನೀಡುತ್ತಿದೆ. ಸ್ವಾಯತ್ತ ಕಾಲೇಜಿನ ನೆಲೆಯಲ್ಲಿ ನಿತ್ಯ ಬದಲಾಗುತ್ತಿರುವ ಉದ್ಯೋಗ ಮಾರುಕಟ್ಟೆ, ತಂತ್ರಜ್ಞಾನ, ಸಾಮಾಜಿಕ ಬದಲಾವಣೆಗಳಿಗೆ ತಕ್ಕಂತೆ ಪಠ್ಯ ಕ್ರಮವನ್ನು ರೂಪಿಸಲಾಗುತ್ತಿದೆ. ಇವು ವಿದ್ಯಾರ್ಥಿಗಳಲ್ಲಿ ವಾಸ್ತವಿಕ ಜ್ಞಾನ, ತಂತ್ರಜ್ಞಾನಾಧಾರಿತ ಕೌಶಲಗಳು, ಸೃಜನಾತ್ಮಕತೆ ಮತ್ತು…
