ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡುವ ಮುಖಾಂತರ ವಿದ್ಯಾರ್ಥಿ ಜೀವನವನ್ನು ಸಾರ್ಥಕಗೊಳಿಸಿ ಎಂದು ಉದ್ಯಮಿ ದಿನೇಶ್ ಹೆಗ್ಡೆ ಮೊಳಹಳ್ಳಿ ಕರೆ ನೀಡಿದರು. ಅವರು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ʼಟೀಂ ಯುವಶಕ್ತಿ ಟ್ರಸ್ಟ್ʼ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಇಂದಿನ ಆಧುನಿಕ ತಂತ್ರಜ್ಞಾನ ಮತ್ತು ಮೊಬೈಲ್ ಯುಗದಲ್ಲಿ ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗುತ್ತಿರುವುದೇ ಹೆಚ್ಚು. ಆದರೆ ಭಂಡಾರ್ಕಾರ್ಸ್ ಕಾಲೇಜಿನ ವಿದ್ಯಾರ್ಥಿಗಳಿಂದ ಆರಂಭವಾದ “ಟೀಂ ಯುವಶಕ್ತಿ ಟ್ರಸ್ಟ್ ” ತುಂಬಾ ವಿಶೇಷವಾದ ಸಮಾಜಮುಖಿ ಚಿಂತನೆಯನ್ನು ಕಂಡುಕೊಂಡು ಸಾಮಾಜಿಕ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಅವರು ಈ ಕಾರ್ಯ ನಿಜಕ್ಕೂ ಅಭಿನಂದನೀಯ. ಅವರುಗಳು ಈ ಕಾರ್ಯ ವಿದ್ಯಾರ್ಥಿಗಳಿಗೆ ಪ್ರೇರಣಾ ಶಕ್ತಿಯಾಗಲಿ ಎಂದು ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಭಂಡಾರ್ಕಾರ್ಸ್ ಕಾಲೇಜಿನ ಪ್ರಾಂಶುಪಾಲ ಡಾ. ಶುಭಕರಾಚಾರಿ ಮಾತನಾಡಿ, ವಿದ್ಯಾರ್ಥಿಗಳ ಈ ಕೆಲಸ ಕಾಲೇಜಿನ ಹೆಮ್ಮೆ. ಇನ್ನಷ್ಟು ವಿದ್ಯಾರ್ಥಿಗಳು ಇಂತಹ ಒಳ್ಳೆಯ ಕೆಲಸದಲ್ಲಿ ತೊಡಗಿಕೊಳ್ಳಿ. ವಿದ್ಯಾರ್ಥಿಗಳು ಈ ಮೂಲಕ ಸಮಾಜಕ್ಕೆ ಉತ್ತಮ ಸಂದೇಶವನ್ನು ನೀಡಿದ್ದಾರೆ ಎಂದು ಹೇಳಿದರು.…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ನಾಗಮಂಗಲೋತ್ಸವದ ಯಶಸ್ಸು ಶ್ರೀ ದೇವರ ಇಚ್ಛೆಯಂತೆ ನೆರವೇರಿದೆ ಎಂದು ಕೋಟದ ಅಮೃತೇಶ್ವರೀ ದೇಗುಲದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಆನಂದ್ ಸಿ. ಕುಂದರ್ ಹೇಳಿದರು. ಅವರು ಕೋಟ ಅಮೃತೇಶ್ವರೀ ಸಭಾಂಗಣದಲ್ಲಿ ಹಮ್ಮಿಕೊಂಡ ಕೃತಜ್ಞತಾ ಸಭೆಯಲ್ಲಿ ಮಾತನಾಡಿದರು. ನಾಗಮಂಡಲದಲ್ಲಿ ಸ್ವಯಂಸೇವಕರ ಹಾಗೂ ಹದಿನಾಲ್ಕು ಗ್ರಾಮದ ಗ್ರಾಮಸ್ಥರ ಪಾತ್ರದ ಕುರಿತು ಸಭೆಯಲ್ಲಿ ಪ್ರಸ್ತಾಪಿಸಿದ ಅವರು ದೇಗುಲದ ಆಡಳಿತ ಮಂಡಳಿ ಅವಿರತವಾಗಿ ಶ್ರಮಿಸಿದನ್ನು ಸ್ಮರಿಸಿದರು. ಈ ಹಿನ್ನಲ್ಲೆಯಲ್ಲಿ ಮಿತ್ರ ಭೋಜನಕೂಟವನ್ನು ಹಮ್ಮಿಕೊಂಡಿದ್ದು ಯಶಸ್ಸಿಗೆ ಶ್ರಮಿಸಿದ ಸಂಘಸಂಸ್ಥೆ, ಗಣ್ಯರಿಗೆ ಕೃತಜ್ಞತೆ ಸಲ್ಲಿಸಿದರಲ್ಲದೆ ಈ ಹಿನ್ನಲ್ಲೆಯಲ್ಲಿ ಆಗಮಿಸಿದ ಪ್ರತಿಯೊರ್ವರಿಗೂ ತಮ್ಮ ಗೀತಾನಂದ ಫೌಂಡೇಶನ್ ವತಿಯಿಂದ ಹಸಿರು ಗಿಡಗಳಾದ ಮಾವು, ಹಲಸು, ಹೂವಿನ 3000 ಅಧಿಕ ಗಿಡಗಳನ್ನು ನೀಡಿದರು. ಸಭೆಯಲ್ಲಿ ದೇಗುಲದ ಟ್ರಸ್ಟಿಗಳಾದ ರತನ್ ಐತಾಳ್, ಶಿವ ಪೂಜಾರಿ, ಗಣೇಶ್ ನೆಲ್ಲಿಬೆಟ್ಟು, ಸುಧಾ ಎ. ಪೂಜಾರಿ, ಸುಭಾಷ್ ಶೆಟ್ಟಿ ಗಿಳಿಯಾರು, ಸುಬ್ರಾಯ ಜೋಗಿ, ಜ್ಯೋತಿ ಡಿ. ಕಾಂಚನ್ ಉಪಸ್ಥಿತರಿದ್ದರು. ಟ್ರಸ್ಟಿ ಚಂದ್ರ ಆಚಾರ್ ಸ್ವಾಗತಿಸಿ, ಪ್ರಾಸ್ತಾವನೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದೇಶದ ಅತ್ಯುನ್ನತ ತಾಂತ್ರಿಕ ಶಿಕ್ಷಣ ಸಂಸ್ಥೆಯಾದ ಐಐಟಿ ಮುಂಬೈ , ಐಐಟಿ ದೆಹಲಿ, ಐಐಟಿ ಗುವಾಹಟಿ, ಐಐಟಿ ಹೈದರಾಬಾದ್, ಐಐಟಿ ರೂರ್ಕಿ ಮತ್ತು ಐಐಟಿ ಜಬಲಪುರ್ ಸಂಸ್ಥೆಗಳಿಗೆ ಬ್ಯಾಚುಲರ್ ಆಫ್ ಡಿಸೈನ್ ಕೋರ್ಸ್‌ಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ 2026 ಜನವರಿ 18ರಂದು ನಡೆದ ಯು.ಸಿ.ಇ.ಇ.ಡಿ (UCEED)ಪ್ರವೇಶ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸೂರಜ್ ಸುರೇಶ್ ರಾಷ್ಟ್ರಮಟ್ಟದಲ್ಲಿ ಜನರಲ್ ವಿಭಾಗದಲ್ಲಿ 518 ರ‍್ಯಾಂಕ್ ಪಡೆದುಕೊಂಡಿದ್ದಾರೆ. ವಿದ್ಯಾರ್ಥಿಗಳಾದ ಭೂಮಿಕಾ ವೈ OBC- NCL ವಿಭಾಗದಲ್ಲಿ 1378 ನೇ ರ‍್ಯಾಂಕ್, ಸಂಕೀರ್ತ್ ರಾಜ್ ಕೆ. ಜಿ. 1381ನೇ ರ‍್ಯಾಂಕ್ , ಚಿರಂತ್ ಕೆ.ಎನ್.OBC-NCL ವಿಭಾಗದಲ್ಲಿ 1507ನೇ ರ‍್ಯಾಂಕ್ ಪಡೆದುಕೊಂಡು ಮುಂದಿನ ಹಂತದ ಕೌನ್ಸೆಲಿಂಗ್ ಪ್ರಕ್ರಿಯೆಗೆ ಅರ್ಹತೆಯನ್ನು ಪಡೆದುಕೊಂಡಿದ್ದಾರೆ. ಸಾಧಕ ವಿದ್ಯಾರ್ಥಿಗಳನ್ನು ಸಂಸ್ಥೆಯ ಪ್ರಾಂಶುಪಾಲರು, ಆಡಳಿತ ಮಂಡಳಿ, ಪರೀಕ್ಷಾ ಸಂಯೋಜಕರಾದ ಸುಮಂತ್ ದಾಮ್ಲೆ, ಉಪನ್ಯಾಸಕ ವರ್ಗದವರು ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಕ್ಷಮ ಮಹಿಳಾ ಸಂಘದ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಆಳ್ವಾಸ್‌ನ ಮಹಿಳಾ ಸಿಬ್ಬಂದಿಗಳಿಗಾಗಿ “ಖೇಲ್ ಕೂದ್ ಮಹೋತ್ಸವ” ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಳೆದ ಒಂದು ವರ್ಷದ ಅವಧಿಯಲ್ಲಿ ಪ್ರತೀ ಶನಿವಾರ ಮಧ್ಯಾಹ್ನ ಶಿಕ್ಷಕ ಹಾಗೂ ಶಿಕ್ಷಕೇತರ ಮಹಿಳಾ ಸಿಬ್ಬಂದಿಗಳಿಗಾಗಿ ಕ್ರೀಡಾ ಚಟುವಟಿಕೆಗಳನ್ನು ನಿಯಮಿತವಾಗಿ ನಡೆಸಲಾಗುತ್ತಿದ್ದು, ಅದರ ಸಮಾರೋಪವಾಗಿ ಈ ಖೇಲ್ಕೂದ್ ಮಹೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಕಬಡ್ಡಿ ವಿಶ್ವಕಪ್‌ನ ಚಿನ್ನದ ಪದಕ ವಿಜೇತೆ ಹಾಗೂ ಭಾರತವನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಿಧಿಸಿದ ಧನಲಕ್ಷ್ಮಿ ಉದ್ಘಾಟಿಸಿದರು. ಸಕ್ಷಮಾ ವತಿಯಿಂದ ಅವರನ್ನು ಸನ್ಮಾನಿಸಲಾಯಿತು. ನೋವೊ ಟ್ರೀ ಮೈಂಡ್ಸ್ ಸಂಸ್ಥೆಯ ಸಹನಾ ನಾಗರಾಜ್ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿ, ಮಹಿಳೆಯರು ಪರಸ್ಪರ ಒಬ್ಬರನ್ನೊಬ್ಬರು ಬೆಂಬಲಿಸಿ ಕಾರ್ಯನಿರ್ವಹಿಸಿದರೆ ನಿಜವಾದ ಸಬಲೀಕರಣ ಸಾಧ್ಯ ಎಂದು ಅಭಿಪ್ರಾಯಪಟ್ಟರು. ಸಕ್ಷಮಾ ಸಂಚಾಲಕಿ ಡಾ. ಗ್ರೀಷ್ಮಾ ಆಳ್ವ ಕಾರ್ಯಕ್ರಮದ ಯಶಸ್ವಿ ಆಯೋಜನೆಗೆ ಶ್ರಮಿಸಿದ ತಂಡದ ಪರಿಶ್ರಮವನ್ನು ಪ್ರಶಂಸಿಸಿ, ಮುಂದಿನ ದಿನಗಳಲ್ಲಿ ಮಹಿಳೆಯರಿಗಾಗಿ ಇನ್ನಷ್ಟು ಅರ್ಥಪೂರ್ಣ ಹಾಗೂ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕಿರಿಮಂಜೇಶ್ವರದ ಜನತಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಮತ್ತು ಮಾತೃವಂದನ ಕಾರ್ಯಕ್ರಮವು ಅತ್ಯಂತ ಅರ್ಥಪೂರ್ಣವಾಗಿ ಇತ್ತೀಚಿಗೆ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಖ್ಯಾತ ವಾಗ್ಮಿ ದಾಮೋದರ ಶರ್ಮ ಅವರು ದೀಪವನ್ನು ಬೆಳಗುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿ, “ಸಮುದ್ರಕ್ಕೆ ಹೋದ ನಾವಿಕ, ಯುದ್ಧಕ್ಕೆ ಹೋದ ಸೈನಿಕ, ಹೆರಿಗೆಗೆ ಹೋದ ತಾಯಿ ಮರಳಿ ಬರುವರೆನ್ನುವ ಖಾತ್ರಿ ಇರುವುದಿಲ್ಲ. ಅವರು ತಮ್ಮ ಪ್ರಾಣವನ್ನು ಪಣಕ್ಕಿಟ್ಟು ಹೋರಾಟವನ್ನು ಮಾಡಿರುತ್ತಾರೆ. ವಿದ್ಯಾರ್ಥಿಗಳು ಸಾಧನೆಯನ್ನು ಮಾಡಿದಾಗ ಅವರನ್ನು ಅಭಿನಂದಿಸಬೇಕೆಂದರು. ಹಾಗೆಯೇ ತಂದೆ-ತಾಯಿಯ ತ್ಯಾಗಕ್ಕೆ ಗೌರವವನ್ನು ನೀಡುವ ಸಲುವಾಗಿ ಮಾತೃವಂದನೆಯನ್ನು ವಿಧಿವತ್ತಾಗಿ ಮಾಡಿಸಿದರು. ಜನತಾ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಣ ಮಾರ್ಗದರ್ಶಕರಾಗಿರುವ ಅಭಿಲಾಷ್ ಕ್ಷತ್ರಿಯ ಅವರು ತಮ್ಮ ಪ್ರಾಸ್ತಾವಿಕ ಮಾತುಗಳಲ್ಲಿ “ತಂದೆ ತಾಯಿ ಮಕ್ಕಳಿಗೆ ಮೊದಲು ಗುರುವಾಗಿದ್ದು,ಮಕ್ಕಳ ಯಶಸ್ಸಿನಲ್ಲಿ ಹೆತ್ತವರ ತ್ಯಾಗ, ಪ್ರೀತಿ ಇದ್ದಿರುತ್ತದೆ. ಅಂತಹ ದೈವೀಸ್ವರೂಪರಾದ ತಂದೆ ತಾಯಿಯನ್ನು ಗೌರವಿಸುವುದು ಪ್ರತಿ ಮಗುವಿನ ಆದ್ಯ ಕರ್ತವ್ಯ ಎಂದರು. ಸಮರ್ಪಣ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲ್ಲೂಕಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಬಸ್ರೂರು ಶ್ರೀ ಶಾರದಾ ಪ್ರಥಮ ದರ್ಜೆ ಕಾಲೇಜಿನ ಆಡಳಿತ ಮಂಡಳಿಯ ನೂತನ ಸಂಚಾಲಕರನ್ನಾಗಿ ಅನುಪಮಾ ಎಸ್ ಶೆಟ್ಟಿ ಅವರನ್ನು ಆಯ್ಕೆ ಮಾಡಲಾಗಿದೆ. ಫೆ.11 ರಂದು ನಡೆದ ಶ್ರೀಶಾರದಾ ಕಾಲೇಜು ಟ್ರಸ್ಟ್ ರಿ. ಇದರ ಸಭೆಯಲ್ಲಿ ಹಿಂದಿನ ಆಡಳಿತ ಮಂಡಳಿಯ ಸಂಚಾಲಕರಾಗಿದ್ದ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ನೂತನ ಸಂಚಾಲಕರ ಆಯ್ಕೆ ನಡೆಸಲಾಗಿದೆ. ಆಡಳಿತ ಮಂಡಳಿಯ ನೂತನ ಸಂಚಾಲಕರಾಗಿ ಆಯ್ಕೆಯಾಗಿರುವ ಅನುಪಮಾ ಎಸ್ ಶೆಟ್ಟಿ ಅವರು, ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾಗಿ ಕಾಲೇಜಿನ ಅಭಿವೃಧ್ಧಿಗೆ ಗಣನೀಯ ಸೇವೆ ಸಲ್ಲಿಸಿದ್ದರು. ಅವರು ಪ್ರತಿಷ್ಠಿತ ಬಾಂಡ್ಯ ಎಜುಕೇಶನಲ್ ಟ್ರಸ್ಟ್‌ನ ಅಧೀನದಲ್ಲಿ ವಕ್ವಾಡಿಯ ಗುರುಕುಲ ಸಮೂಹ ಶಿಕ್ಷಣ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿದ್ದು, ಅನುಪಮ ಅವರು ಜಂಟಿ ಕಾರ್ಯನಿರ್ವಾಹಕ ಟ್ರಸ್ಟಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಬಾಂಡ್ಯ ಎಜುಕೇಶನಲ್ ಟ್ರಸ್ಟ್ ದತ್ತು ಸ್ವೀಕಾರ ಮಾಡಿರುವ ಕೊಡ್ಲಾಡಿ-ಬಾಂಡ್ಯ ಸರ್ಕಾರಿ ಪ್ರಾಥಮಿಕ ಶಾಲೆಯ ಅಭಿವೃದ್ಧಿಯಲ್ಲಿಯೂ ¸ÁPÀµÀÄÖÖ ಅವರು ಕೊಡುಗೆ ನೀಡಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕೋಟ ಶ್ರೀ ವಿರಾಡ್ವಿಶ್ವಬ್ರಾಹ್ಮಣ ಸಮಾಜೋದ್ಧಾರಕ ಸಂಘ ಸಾಲಿಗ್ರಾಮ ಇವರ ಆಶ್ರಯದಲ್ಲಿ ವಿಶ್ವಜ್ಯೋತಿ ಮಹಿಳಾ ಬಳಗ ಸಾಲಿಗ್ರಾಮ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ವಿಶ್ವಕರ್ಮ ಸಾಂಸ್ಕೃತಿಕ ಸಭಾಭವನದಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ವಾರಿಜಾ ರಾಘವೇಂದ್ರ ಆಚಾರ್ಯ, ಶ್ರೀರಂಗ ಸಾಹೇಬರಕಟ್ಟೆ ಇವರನ್ನು ಗುರುತಿಸಿ ಸನ್ಮಾನಿಸಲಾಯಿತು. ಇದೇ ವೇಳೆ ಸದಸ್ಯರಿಗೆ ಆಟೋಟ ಸ್ಪರ್ಧೆಗಳನ್ನು ನಡೆಸಿ ಬಹುಮಾನ ನೀಡಲಾಯಿತು. ವೇದಿಕೆಯಲ್ಲಿ ಮಹಿಳಾ ಬಳಗದ ಅಧ್ಯಕ್ಷ ರಮ್ಯಾ ರಮೇಶ್ ಆಚಾರ್, ಗೌರವಾಧ್ಯಕ್ಷರಾದ ಸವಿತಾ ಚಂದ್ರಶೇಖರ್ ಆಚಾರ್, ಉಪಾಧ್ಯಕ್ಷರಾದ ಸರಿತಾ ಚಂದ್ರ ಆಚಾರ್ ಉಪಸ್ಥಿತರಿದ್ದರು. ಸಭೆಯಲ್ಲಿ ಗೌರವ ಸಲಹೆಗಾರರು, ಕಾರ್ಯಕಾರಿ ಮಂಡಳಿಯ ಸದಸ್ಯರು, ಹಾಗೂ ಸರ್ವ ಸದಸ್ಯರು ಭಾಗಿಯಾದರು.ಮಹಿಳಾ ಬಳಗದ ಕಾರ್ಯದರ್ಶಿ ಸಹನಾ ರಾಘವೇಂದ್ರ ಆಚಾರ್ಯ ಸ್ವಾಗತಿಸಿ, ನಿರೂಪಿಸಿದರು. ಕೋಶಾಧಿಕಾರಿ ಸುಶೀಲಾ ಸತೀಶ್ ಆಚಾರ್ಯ ವಂದನಾರ್ಪಣೆಗೈದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಉಡುಪಿ ಜಿಲ್ಲೆಯ ಸಾಮಾಜಿಕ ಕಳಕಳಿ ಹಾಗೂ ರಕ್ತದಾನದಂತಹ ಕಾರ್ಯಕ್ರಮಗಳಿಂದ ಮನೆಮಾತಾದ ಸಂಸ್ಥೆ ಕುಂದಾಪುರದ ಜೈ ಕುಂದಾಪುರ ಸೇವಾ ಟ್ರಸ್ಟ್ ಇದೇ ಮೊದಲ ಬಾರಿಗೆ ರಾಜ್ಯ ಮಟ್ಟದ ಕಾರ್ಯಕ್ರಮಕ್ಕೆ ಮುನ್ನುಡಿ ಬರೆಯುತ್ತಿದ್ದು ಇದೇ ಬರುವ ಎಪ್ರಿಲ್ 12 ರಂದು ಕೋಟ ಆರಕ್ಷಕ ಠಾಣೆಯ ಮುಂಭಾಗ ಜೈ ಕುಂದಾಪುರ ಸಂಭ್ರಮ-2026 ಎಂಬ ಶೀರ್ಷಿಕೆಯಡಿ ಸಾಮಾಜಿಕ ಕಾಳಜಿಯ ಕಾರ್ಯಕ್ರಮ ಆಯೋಜಿಸಿದೆ. ಈ ವೇದಿಕೆಯಲ್ಲಿ ಕೋಟದ ಕ್ರಿಯಾಶೀಲ ಸಂಘಟನೆಯಾದ ಪಂಚವರ್ಣ ಸಂಘಟನೆಗೆ ಜೈ ಕುಂದಾಪುರ ಸೇವಾ ಪುರಸ್ಕಾರ ನೀಡಿ ಗೌರವಿಸಲಿದೆ ಅಲ್ಲದೆ ಸಾಮಾಜಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡ ಸಮಾಜಸೇವಕ ಕೋಟ ಶ್ರೀಕಾಂತ್ ಶೆಣೈ,ಪ್ರಗತಿಪರ ಕೃಷಿಕ ಪಾರಂಪಳ್ಳಿ ರವೀಂದ್ರ ಐತಾಳ್, ಧಾರ್ಮಿಕ ಮುಖಂಡ ಕೆ.ಭಾಸ್ಕರ್ ಸ್ವಾಮಿ ಇವರುಗಳಿಗೆ ವಿಶೇಷ ಅಭಿನಂದನೆ ಹಾಗೂ ಅಶಕ್ತರಿಗೆ ನೆರವು, ವಿಶೇಷ ಚೇತನರಿಗೆ ಕಿಟ್ ವಿತರಣೆ, ಸಾಂಸ್ಕೃತಿಕ ಕಾರ್ಯಕ್ರಮ, ತ್ರಿನೇತ್ರ ಕಲಾವಿದರು ಕುಡ್ಲ ಇವರಿಂದ ನಾಟಕ ಬ್ರಹ್ಮ ರಕ್ಕಸೆ ಪ್ರದರ್ಶನಗೊಳ್ಳಲಿದೆ ಎಂದು ಸಂಸ್ಥೆಯ ಪ್ರಮುಖರಾದ ಪುಂಡಲಿಕ ಮೊಗವೀರ,ಜಯರಾಜ್ ಸಾಲಿಯಾನ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ದೇಶ ಮಹಿಳೆಯರಿಂದ ಸುಭದ್ರವಾಗಿ ಅಭಿವೃದ್ಧಿ ಹೊಂದುತ್ತಿದೆ ಇದಕ್ಕೆ ಇತ್ತೀಚಿಗಿನ ಕೆಲ ಹುದ್ದೆಗಳನ್ನು ಅಲಂಕೃರಿಸಿದ ಮಹಿಳಾ ಮಣಿಗಳ ಕಾರ್ಯವೈಕರಿಯೇ ಸಾಕ್ಷಿ ಎಂದು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಶ್ರೀಲತಾ ಸುರೇಶ್ ಶೆಟ್ಟಿ ಹೇಳಿದರು. ಸೋಮವಾರ ಕೋಟದ ಸಮುದ್ಯತಾ ಬ್ಯಾಂಕೇಟ್ ಹಾಲ್‌ನಲ್ಲಿ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಮಾತೃಸಂಸ್ಥೆ ಪಂಚವರ್ಣ ಯುವಕ ಮಂಡಲ ಇವರ ಮಾರ್ಗದರ್ಶನದಲ್ಲಿ ಸ್ನೇಹಕೂಟ ಮಣೂರು ಇವರ ಸಹಯೋಗದೊಂದಿಗೆ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಶುಭಾಶಂಸನೆಗೈದು ಮಾತನಾಡಿ ದೇಶದ ಒಟ್ಟು ವ್ಯವಸ್ಥೆಯಲ್ಲಿ ಮಹಿಳೆ ಮುಂಚೂಣಿಯಲ್ಲಿದ್ದಾಳೆ ಅದರೆ ದೇಶದ ಮೊದಲ ಮುಖ್ಯ ನ್ಯಾಯಧೀಶ ಮಹಿಳೆಯಾಗಬೇಕು ಅದೊಂದು ಶ್ರೀಘ್ರದಲ್ಲಿ ನೆರವೆರಲಿ ಎಂದರಲ್ಲದೆ ಸಾಧಕರನ್ನು ಗುರುತಿಸುವ ಕಾಯಕ ಶ್ರೇಷ್ಠವಾದದ್ದು ಅದರಲ್ಲೂ ಪಂಚವರ್ಣ ಎಂಬ ಸಂಸ್ಥೆಯ ಗೌರವ ದೊರಕಿರುವುದು ಯಾವುದೇ ಸಾಧಕರು ಹೆಮ್ಮೆ ಪಡುವ ಗೌರವವಾಗಿದೆ ಎಂದರು. ಅಭಿನಂದನಾ ನುಡಿಗಳನ್ನಾಡಿದ ಸಾಲಿಗ್ರಾಮ ಪಟ್ಟಣಪಂಚಾಯತ್ ಮಾಜಿ ಅಧ್ಯಕ್ಷೆ ಸುಲತಾ ಎಸ್ ಹೆಗ್ಡೆ ಮಹಿಳೆ ಇಂದು ಬಹು ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿದ್ದಾಳೆ,ಸಮಾಜಿಕ ಕಾರ್ಯದಲ್ಲಿ ಪುರುಷರಂತೆ ಮಹಿಳೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಬೀದಿ ನಾಯಿಗಳ ಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ ಮಾನ್ಯ ಸರ್ವೋಚ್ಚ ನ್ಯಾಯಾಲಯವು ಹೊರಡಿಸಿರುವ ಆದೇಶದಲ್ಲಿರುವ ಮಾರ್ಗಸೂಚಿಗಳನ್ನು ಮಾನವೀಯ ಹಾಗೂ ವೈಜ್ಞಾನಿಕ ದೃಷ್ಟಿಕೋನದಿಂದ ಅನುಷ್ಠಾನ ಮಾಡಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಬೀದಿ ನಾಯಿಗಳ ಹಾವಳಿ ತಡೆಗಟ್ಟುವ ಕುರಿತ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜನಸಾಮಾನ್ಯರಿಗೆ ಬೀದಿ ನಾಯಿಗಳಿಂದ ಉಂಟಾಗುವ ಉಪಟಳಗಳನ್ನು ತಪ್ಪಿಸುವ ಉದ್ದೇಶದಿಂದ ಮಾನ್ಯ ಸರ್ವೋಚ್ಚ ನ್ಯಾಯಾಲಯವು ಕೆಲವೊಂದು ಮಾರ್ಗದರ್ಶನಗಳನ್ನು ಸೂಚಿಸಿದೆ. ಇವುಗಳನ್ನು ಜಿಲ್ಲಾ ವ್ಯಾಪ್ತಿಯಲ್ಲಿ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವುದರೊಂದಿಗೆ ಬೀದಿ ನಾಯಿಗಳಿಂದ ಉಂಟಾಗುವ ತೊಂದರೆಗಳನ್ನು ನಿಯಂತ್ರಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಮಾನ್ಯ ಸರ್ವೋಚ್ಛ ನ್ಯಾಯಾಲಯದ ಆದೇಶದನ್ವಯ ಸಂಬಂಧಪಟ್ಟ ಇಲಾಖೆಗಳು ಹಾಗೂ ಸ್ಥಳೀಯ ಸಂಸ್ಥೆಗಳು ಬೀದಿ ನಾಯಿಗಳ ಹಾವಳಿ ನಿಯಂತ್ರಣಕ್ಕೆ ಅವುಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸಲು, ಎ.ಬಿ.ಸಿ ಕಾರ್ಯಕ್ರಮಗಳನ್ನು ತೀವ್ರಗೊಳಿಸಲು, ರೇಬೀಸ್ ಹರಡದಂತೆ ತಡೆಗಟ್ಟಲು ಲಸಿಕಾ ಕಾರ್ಯಕ್ರಮ…
