Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.   ಉಡುಪಿ: ಸರಕಾರ ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗದವರ ಶ್ರೇಯೋಭಿವೃದ್ಧಿಗಾಗಿ ಸರಕಾರ ಜಾರಿಗೆ ತಂದಿರುವ ಯೋಜನೆಗಳು, ಕಾರ್ಯಕ್ರಮಗಳು ಹಾಗೂ ಸೌಲಭ್ಯಗಳ ಕುರಿತು ಅವರುಗಳಿಗೆ ಮಾಹಿತಿ ನೀಡುವುದರೊಂದಿಗೆ ಅವರುಗಳನ್ನು ಫಲಾನುಭವಿಗಳನ್ನಾಗಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಹೇಳಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಅಲೆಮಾರಿ/ ಅರೆ ಅಲೆಮಾರಿ ಜನಾಂಗದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ 535 ಕ್ಕೂ ಹೆಚ್ಚು ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗದ ಕುಟುಂಬದವರಿದ್ದು, 2600 ಕ್ಕೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದಾರೆ. ಇವರುಗಳು ಈ ಹಿಂದೆ ಇತರೆ ಪ್ರದೇಶಗಳಿಂದ ಜಿಲ್ಲೆಗೆ ಬಂದವರಾಗಿದ್ದು ಜೋಗಿ, ಗೊಲ್ಲ, ದೊಂಬಿದಾಸ ಹಾಗೂ ದರ್ವೇಶ್ ಜಾತಿಗೆ ಸೇರಿದವರಾಗಿದ್ದಾರೆ. ಇವರುಗಳನ್ನು ಸಮಾಜದ ಮುಖ್ಯ ವಾಹಿನಿಗೆ ತರುವ ಕಾರ್ಯಗಳನ್ನು ಮಾಡಬೇಕಿದೆ ಎಂದರು. ಇತ್ತೀಚಿನ ದಿನಗಳಲ್ಲಿ ಈ ಸಮುದಾಯದವರು ಶಿಕ್ಷಣವಂತರಾಗುತ್ತಿದ್ದಾರೆ. ಒಂದೆಡೆ ನೆಲೆಸಿ, ಕೃಷಿ ಚಟುವಟಿಕೆ, ಸ್ವಯಂ ಉದ್ಯೋಗ ಮತ್ತಿತರ ಕಾರ್ಯಗಳಲ್ಲಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಸಂಗೀತ ಕ್ಷೇತ್ರದಲ್ಲಿ ಛಾಯಾ ತರಂಗಿಣಿ ಸಾಕಷ್ಟು ಶಿಷ್ಯ ವೃಂದ ಹೊಂದಿದ್ದು ತನ್ನದೆ ಆದ ಅಸ್ತಿತ್ವ ಹೊಂದಿ ಹಲವಾರು ಕಡೆಗಳಲ್ಲಿ ಶಿಷ್ಯ ವೃಂದವನ್ನು ಸೃಷ್ಟಿಸಿ ಕೊಂಡಿದ್ದಾರೆ ಎಂದು ಕುಂದಾಪುರದ ಶಾಸಕ ಕಿರಣ್ ಕುಮಾರ್ ಕೊಡ್ಗಿ ನುಡಿದರು. ಇತ್ತೀಚಿಗೆ ಕಾರಂತ ಥೀಂ ಪಾರ್ಕನಲ್ಲಿ ಛಾಯಾ ತರಂಗಿಣಿ ಸಂಗೀತ ಶಾಲೆ ಕೋಟ ಹರ್ತಟ್ಟು ಇದರ ದಶಮಾನೋತ್ಸವ ಸಂಭ್ರಮ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸಂಗೀತದ ಮೂಲಕ ಹೊರಜಗತ್ತಿಗೆ ನಮ್ಮನ್ನು ಪರಿಚಯಿಸುವುದರ ಜತೆಗೆ ಪ್ರಸಿದ್ಧಿ ಪಡೆಯಲು ಸಾಧ್ಯ ಈ ನಿಟ್ಟಿನಲ್ಲಿ ಇಲ್ಲಿನ ಸಂಗೀತ ಗುರುಗಳು ಹಾಗೂ ಆ ಸಂಸ್ಥೆ ಮತ್ತಷ್ಟು ಶಿಷ್ಯವೃಂದವನ್ನು ಪಸರಿಸಿಕೊಳ್ಳಲಿ ಎಂದು ಹಾರೈಸಿದರು. ಗುರುವಂದನಾ ಕಾರ್ಯಕ್ರಮದ ಅಂಗವಾಗಿ ವಿದ್ವಾನ್ ಮಧೂರು ಪಿ. ಬಾಲಸುಬ್ರಹ್ಮಣ್ಯಂ ಅವರನ್ನು ಗುರವಂದನಾ ಗೌರವ ಸಲ್ಲಿಸಲಾಯಿತು. 2023-24ನೇ ಸಾಲಿನ ಕರ್ನಾಟ ಶಾಸ್ತ್ರೀಯ ಸಂಗೀತದ ಜೂನಿಯರ್ ವಿಭಾಗದಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾದ ತನ್ಮಯ್ ಬಿಜೂರು ಇವರನ್ನು ಗುರುತಿಸಲಾಯಿತು. ಅಧ್ಯಕ್ಷತೆಯನ್ನು ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ. ಕುಂದರ್ ವಹಿಸಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಪರಸ್ಪರ ಸಹಕಾರ ತತ್ವವನ್ನು ಕಾರ್ಯರೂಪಕ್ಕೆ ಇಳಿಸುವುದರ ಮೂಲಕ ಸಂಸ್ಥೆಗಳನ್ನು ಬಲಪಡಿಸಬೇಕು. ಆ ಮೂಲಕ ಸಮುದಾಯದ ಅಭಿವೃದ್ಧಿಯನ್ನು ಕಂಡುಕೊಳ್ಳಲು ಸಾಧ್ಯವಾಗುತ್ತದೆ ಎಂದು ಚಕ್ರಮ್ಮ ದೇವಸ್ಥಾನ ಟ್ರಸ್ಟ್ ಕೋಡಿಯ ಅಧ್ಯಕ್ಷರಾದ ಕೋಡಿ ಗೋಪಾಲ ಪೂಜಾರಿ ಅಭಿಪ್ರಾಯಪಟ್ಟರು.   ಅವರು ಗಂಗೊಳ್ಳಿಯ ಬಿಲ್ಲವರ ಹಿತರಕ್ಷಣಾ ವೇದಿಕೆಯ ವತಿಯಿಂದ ಇಲ್ಲಿನ ಸರಸ್ವತಿ ವಿದ್ಯಾಲಯದ ರೋಟರಿ ಸಭಾಂಗಣದಲ್ಲಿ ನಡೆದ ಪುಸ್ತಕ ವಿತರಣೆ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ  ಮಾತನಾಡಿದರು. ಗಂಗೊಳ್ಳಿಯ ಸೀತಾಳಿ ನವದುರ್ಗೆ ದೇವಸ್ಥಾನದ ಪಾತ್ರಿಗಳಾದ ರಘುನಾಥ ಪೂಜಾರಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಉದ್ಯಮಿ  ಪ್ರವೀಣ್ ಪೂಜಾರಿ ಶುಭ ಹಾರೈಸಿದರು. ಉದ್ಯಮಿ ಶಶಿಕಾಂತ್ ಗಂಗೊಳ್ಳಿ,  ಬಿಲ್ಲವರ ಸಮಾಜ ಸೇವಾ ಸಂಘದ ಅಧ್ಯಕ್ಷ ಗೋಪಾಲ ಬಿಲ್ಲವ, ಜಿ. ಎ. ಆರ್ ಲಕ್ಷ್ಮಣ ಪೂಜಾರಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಹುತಾತ್ಮರಾದ ಸೈನಿಕರಿಗೆ ನಮನಗಳನ್ನು ಸಲ್ಲಿಸಲಾಯಿತು. ಕಳೆದ ಬಾರಿಯ ದ್ವಿತೀಯ ಪಿಯುಸಿ ಮತ್ತು ಎಸ್ಎಸ್ಎಲ್‌ಸಿ ಯಲ್ಲಿ ಉತ್ತಮ ಸಾಧನೆ ಮಾಡಿದ ಬಿಲ್ಲವ ಸಮುದಾಯದ  ಅಪೇಕ್ಷಾ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮೂಡ್ಲಕಟ್ಟೆ ತಾಂತ್ರಿಕ ಮಹಾವಿದ್ಯಾಲಯ ಮತ್ತು ಮ್ಯಾನೇಜ್ಮೆಂಟ್ ಕಾಲೇಜಿನ ಗ್ರಂಥಾಲಯ ವಿಭಾಗದಿಂದ ಈಬಿಸ್‌ಸಿಒ ಇಂಜಿನಿಯರಿಂಗ್ ಸೂಟ್ ಎಎಂಎ ಮೈಕ್ರೋ ಕೋರ್ಸುಗಳು ಮತ್ತು ಐಇಇಇ ಮೇಲೆ ಕೇಂದ್ರೀಕರಿಸಿ ವಿಟಿಯು ಕನ್ಸೋರ್ಟಿಯಮ್ ತರಬೇತಿ ಕಾರ್ಯಗಾರ ನಡೆಯಿತು. 6ನೇ ಸೆಮಿಸ್ಟರ್ ವಿದ್ಯಾರ್ಥಿಗಳು ಹಾಗೂ ಪ್ರಾಧ್ಯಾಪಕರಿಗೆ ಸಂಶೋಧನಾ ಕೌಶಲ್ಯ ಮತ್ತು ವೃತ್ತಿಪರ ಅಭಿವೃದ್ಧಿಯನ್ನು ವೃದ್ಧಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜಿ ಸಲಾಯಿತು. ಈಬಿಸ್‌ಸಿಒ – ಐಇಇಇ ದಕ್ಷಿಣ ಭಾರತದ ತರಬೇತಿ ವ್ಯವಸ್ಥಾಪಕ ಎಂ. ಎಸ್ ಶ್ರೀನಿವಾಸ ನೇತೃತ್ವ ವಹಿಸಿದ್ದರು. ತರಬೇತಿ ಕಾರ್ಯಾಗಾರದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಅಬ್ದುಲ್ ಕರೀಮ್ ಅವರು ವಹಿಸಿ, ಕಾರ್ಯಗಾರವನ್ನು ಉದ್ಘಾಟಿಸಿದರು. ಐಇಇಇ ನ ಸದಸ್ಯರಾಗಿರುವ ಅವರು ವಿ. ಟಿ. ಯು ಕನ್ಸೋರ್ಟಿಯಂ ವತಿಯಿಂದ ಲಭ್ಯವಿರುವ ಎಲ್ಲ ಸೌಲಭ್ಯವನ್ನು ಬಳಸಿಕೊಳ್ಳುವಂತೆ ಮಾರ್ಗದರ್ಶನ ನೀಡಿದರು. ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ. ಮೆಲ್ವಿನ್ ಡಿಸೋಜಾ ಹಾಗೂ ಗ್ರಂಥಾಪಾಲರಾದ ಶ್ಯಾಮ್ ನಾಯ್ಕ ಉಪಸ್ಥಿತರಿದ್ದರು. ಪ್ರಾಧ್ಯಾಪಕಿ ಶ್ರೀನಿಧಿ ರಾವ್ ಅವರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕುಂದಾಪುರದ ಗಿಳಿಯಾರು ಕುಶಲ ಹೆಗ್ಡೆ ಮೆಮೋರಿಯಲ್ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಎಸ್. ಎಸ್. ಎಲ್. ಸಿ. ಹಾಗೂ ದ್ವಿತೀಯ ಪಿ. ಯು. ಸಿ. ಪರೀಕ್ಷೆಯಲ್ಲಿ ಶೇಕಡಾ 95 ಕ್ಕಿಂತ ಅಧಿಕ ಅಂಕ ಪಡೆದ ಅರ್ಹ ವಿದ್ಯಾರ್ಥಿಗಳಿಗೆ ಮುಂದಿನ ಶಿಕ್ಷಣಕ್ಕಾಗಿ ಸಹಾಯಧನ ನೀಡಲಾಗುತ್ತದೆ. ಕುಂದಾಪುರ ತಾಲೂಕಿನ ವಿದ್ಯಾರ್ಥಿಗಳು ಕುಂದಾಪುರದ ವೆಸ್ಟ್ ಬ್ಲಾಕ್ ರಸ್ತೆಯ ನಾರಾಯಣಗುರು ಕಾಂಪ್ಲೆಕ್ಸ್‌ನಲ್ಲಿರುವ ’ಕುಂದಪ್ರಭ’ಕಛೇರಿಯಿಂದ ಅರ್ಜಿ ಮೇ 21 ರಿಂದ ಪಡೆದು ಅಂಕಪಟ್ಟಿಯೊಂದಿಗೆ, ಕಾಲೇಜು ಸೇರ್ಪಡೆಗೊಂಡ ದಾಖಲಾತಿ ಅಥವಾ ಶುಲ್ಕ ಪಾವತಿ ಪತ್ರದೊಂದಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸ್ವೀಕರಿಸುವ ಕೊನೆಯ ದಿನಾಂಕ 31-05-025. ಎಸ್. ಎಸ್. ಎಲ್. ಸಿ. ಹಾಗೂ ಪಿಯಸಿಯಲ್ಲಿ ರಾಜ್ಯಮಟ್ಟದಲ್ಲಿ ಪ್ರಥಮ, ದ್ವಿತೀಯ, ತೃತೀಯ ರ್ಯಾಂಕ್‌ ಪಡೆದ ವಿದ್ಯಾರ್ಥಿಗಳು ಪ್ರಾಂಶುಪಾಲರ ಪತ್ರದೊಂದಿಗೆ ದಾಖಲೆ ಒದಗಿಸಿದ್ದಲ್ಲಿ ಅವರನ್ನು ಗೌರವಿಸಲಾಗುತ್ತದೆ. ಮಂಗಳೂರು ವಿ. ವಿ. ಯಿಂದ ಪದವಿ ಪರೀಕ್ಷೆಯಲ್ಲಿ ರ್ಯಾಂಕ್‌ ಪಡೆದವರೂ ಮಾಹಿತಿ ನೀಡಬಹುದು ಎಂದು ಗಿಳಿಯಾರು ಕುಶಲ ಹೆಗ್ಡೆ ಟ್ರಸ್ಟ್‌ನ ಕಾರ್ಯದರ್ಶಿ ಯು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಮ್ಮ ಜೀವವನ್ನೇ ಪಣಕ್ಕಿಟ್ಟು ಸಮುದ್ರವನ್ನೇ ನಂಬಿ ಜೀವನ ನಡೆಸುತ್ತಿರುವ ಮೀನುಗಾರರ ಮಕ್ಕಳು ಮೀನುಗಾರರಾಗದೆ, ಉನ್ನತ ಶಿಕ್ಷಣ ಪಡೆದು ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕಿದೆ. ಈ ದಿಸೆಯಲ್ಲಿ ಮೀನುಗಾರರ ಮಕ್ಕಳು ಶಿಕ್ಷಣ ವಂಚಿತರಾಗದೆ, ಶಿಕ್ಷಣ ಪಡೆಯಲು ಯಾವುದೇ ತೊಂದರೆಯಾಗಬಾರದೆಂಬ ದೃಷ್ಟಿಯಿಂದ ಮರವಂತೆ ಪರಿಸರದ ದುಡಿಯುವ ಮೀನುಗಾರ ಮಕ್ಕಳಿಗೆ ಉಚಿತವಾಗಿ ಪ್ರತಿವರ್ಷ ಪುಸ್ತಕಗಳನ್ನು ವಿತರಿಸಲಾಗುತ್ತಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡು ವಿದ್ಯಾವಂತರಾಗಿ ಸಮಾಜಕ್ಕೆ ಕೊಡುಗೆಗಳಾಗಬೇಕು ಎಂದು ಮರವಂತೆ ಶ್ರೀ ರಾಮ ಮಂದಿರ ಮೀನುಗಾರರ ಸೇವಾ ಸಮಿತಿ ಅಧ್ಯಕ್ಷ ಸುರೇಶ ಖಾರ್ವಿ ಹೇಳಿದರು. ಅವರು ಮರವಂತೆ ಶ್ರೀ ರಾಮ ಮಂದಿರ ಮೀನುಗಾರರ ಸೇವಾ ಸಮಿತಿ ವತಿಯಿಂದ ಮರವಂತೆ ಶ್ರೀ ರಾಮ ಮಂದಿರದಲ್ಲಿ ಭಾನುವಾರ ಜರಗಿದ 11ನೇ ವರ್ಷದ ಪುಸ್ತಕ ವಿತರಣಾ ಕಾರ್ಯಕ್ರಮದಲ್ಲಿ ಮರವಂತೆ ಭಾಗದ ಮೀನುಗಾರ ಮಕ್ಕಳಿಗೆ ಪುಸ್ತಕಗಳನ್ನು ವಿತರಿಸಿ ಮಾತನಾಡಿದರು. ಮೀನುಗಾರರ ಮಾರ್ಕೇಟಿಂಗ್ ಸಮಿತಿ ಅಧ್ಯಕ್ಷ ವೆಂಕಟರಮಣ ಖಾರ್ವಿ, ಸೇವಾ ಸಮಿತಿ ಕಾರ್ಯದರ್ಶಿ ಶೇಖರ ಖಾರ್ವಿ, ಮಾಜಿ ಅಧ್ಯಕ್ಷ ಚಂದ್ರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಮಳೆಗಾಲ ಆರಂಭವಾಗುತ್ತಿದ್ದು, ಈ ಸಮಯದಲ್ಲಿ ಸಾರ್ವಜನಿಕರು ಸಾಮಾನ್ಯವಾಗಿ ಬಾಧಿಸುವ ಸಾಂಕ್ರಮಿಕ ರೋಗಗಳ ಬಗ್ಗೆ ಎಚ್ಚರವಹಿಸಿ, ರೋಗಗಳು ಹರಡದಂತೆ ಮುಂಜಾಗೃತಾ ಕ್ರಮ ಕೈಗೊಳ್ಳಬೇಕು. ಆರೋಗ್ಯ ಹಿತದೃಷ್ಟಿಯಿಂದ ಗೃಹೋಪಯೋಗಕ್ಕೆಂದು ನೀರನ್ನು ಶೇಖರಿಸಿಡುವ ಸಿಮೆಂಟ್ ತೊಟ್ಟಿ, ಕಲ್ಲು ಚಪ್ಪಡಿಯಿಂದ ನಿರ್ಮಿಸಿದ ತೊಟ್ಟಿಗಳು, ಡ್ರಂಗಳು, ಬ್ಯಾರಲ್, ಮಡಕೆ ಮುಂತಾದ ಮೂಲಗಳಲ್ಲಿ ನೀರಿನ ಶೇಖರಣೆ ವೇಳೆ ಅವುಗಳನ್ನು ಆಗಿಂದಾಗ್ಗೆ ಶುದ್ಧಿ ಮಾಡಿ, ನಂತರ ನೀರನ್ನು ಸಂಗ್ರಹಿಸಬೇಕು. ನೀರು ಸಂಗ್ರಹವಾಗುವ ಓವರ್ ಹೆಡ್ ಟ್ಯಾಂಕ್‌ಗಳನ್ನು ವಾರಕ್ಕೊಮ್ಮೆ ಪೂರ್ತಿ ನೀರು ಖಾಲಿ ಮಾಡಿ ಸ್ವಚ್ಛಗೊಳಿಸಬೇಕು. ಮನೆ ಸುತ್ತಮುತ್ತ, ಅಂಗಡಿ ಮುಂಗಟ್ಟು, ಮನೆ ಪರಿಸರದಲ್ಲಿ ಸುತ್ತಮುತ್ತ ಇರುವ ಅನುಪಯುಕ್ತ ಟಯರ್, ಎಳನೀರು ಚಿಪ್ಪು, ಒಡೆದ ಬಾಟಲಿ ಮುಂತಾದವುಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು ಹಾಗೂ ಸ್ವಯಂ ರಕ್ಷಣಾ ವಿಧಾನಗಳಿಂದ ಸೊಳ್ಳೆ ನಿರೋಧಕಗಳನ್ನು ಹಾಗೂ ಸೊಳ್ಳೆ ಪರದೆಗಳನ್ನು ಉಪಯೋಗಿಸಬೇಕು. ಸಾರ್ವಜನಿಕರು ಜ್ವರ ಸೇರಿದಂತೆ ಯಾವುದೇ ಆರೋಗ್ಯ ಸಮಸ್ಯೆಗಳಿದ್ದಲ್ಲಿ ಕೂಡಲೇ ಸಮೀಪದ ವೈದ್ಯರನ್ನು ಭೇಟಿ ಮಾಡಿ, ಸೂಕ್ತ ಚಿಕಿತ್ಸೆ ಪಡೆದುಕೊಳ್ಳುವಂತೆ ನಗರಸಭೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಶತಮಾನೋತ್ಸವ ಕಂಡ ಗುಜ್ಜಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಪ್ರತಿವರ್ಷ ಹಳೆ ವಿದ್ಯಾರ್ಥಿಗಳ ಕೊಡುಗೆ ಒಂದಕ್ಕಿಂತ ಒಂದು ಹೆಚ್ಚು, ಶಿಕ್ಷಣಕ್ಕೆ ಆದ್ಯತೆ ನೀಡಿ ನಾವು ಓದಿದ ಶಾಲೆ ಎಂಬ ಪ್ರೀತಿಯಿಂದ ಹಳೆ ವಿದ್ಯಾರ್ಥಿಗಳು ಶಾಲೆಯ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಸಹಕರಿಸುತ್ತಿರುವುದು ಶ್ಲಾಘನೀಯ ಎಂದು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು. ಅವರು ಇಲ್ಲಿನ ಗುಜ್ಜಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ರಜತ ಮಹೋತ್ಸವದ ನೆನಪಿಗಾಗಿ ನಿರ್ಮಿಸಲಾಗಿರುವ ಎರಡು ನೂತನ ತರಗತಿ ಕೊಠಡಿಗಳನ್ನು ಉದ್ಘಾಟಿಸಿ ಮಾತನಾಡಿದರು. ಶಾಲೆಯನ್ನು ಹೇಗೆ ಮಾಡಿ ತೋರಿಸಬಹುದು ಎಂಬುದಕ್ಕೆ ಗುಜ್ಜಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಿದರ್ಶನ. ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ 50ಕ್ಕಿಂತ ಕಡಿಮೆ ಮಕ್ಕಳಿರುವ ಶಾಲೆಗಳು ಸುಮಾರು 50 ಇದ್ದರೆ, 6-7 ಮಕ್ಕಳಿರುವ ಶಾಲೆಗಳಿವೆ. ಇಂತಹ ಸಂದರ್ಭದಲ್ಲಿ ಬೈಂದೂರು ವಲಯದಲ್ಲಿ ಅತೀ ಹೆಚ್ಚು ಮಕ್ಕಳ ದಾಖಲಾತಿ ಹೊಂದಿರುವ ಗುಜ್ಜಾಡಿ ಶಾಲೆ ಬೇರೆ ಶಾಲೆಗಳಿಗೆ ಮಾದರಿಯಾಗಿದೆ ಎಂದರು. ಕಳೆದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ 35,000 ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆಯಲಾಗುತ್ತಿದ್ದು, ಬಿತ್ತನೆಗೆ ಪೂರ್ವಸಿದ್ಧತಾ ಕ್ಷೇತ್ರ ಮಟ್ಟದಲ್ಲಿ ಪ್ರಗತಿಯಲ್ಲಿರುತ್ತದೆ. ಕೃಷಿ ಇಲಾಖೆಯಿಂದ ರೈತರಿಗೆ ಅವಶ್ಯವಿರುವ ಎಂ.ಓ-4 ತಳಿಯ ಬಿತ್ತನೆ ಬೀಜವನ್ನು ಜಿಲ್ಲೆಯ 9 ರೈತ ಸಂಪರ್ಕ ಕೇಂದ್ರಗಳಲ್ಲಿ ದಾಸ್ತಾನೀಕರಿಸಲಾಗಿದ್ದು, ಸಹಾಯಧನದಲ್ಲಿ ರೈತರು ಪಡೆದುಕೊಳ್ಳಬಹುದಾಗಿದೆ. ಜಿಲ್ಲೆಗೆ ಮುಂಗಾರು ಹಂಗಾಮಿಗೆ ಅಂದಾಜು 2,500 ಕ್ವಿಂಟಾಲ್‌ನಷ್ಟು ಬಿತ್ತನೆ ಬೀಜದ ಅವಶ್ಯಕತೆಯಿದ್ದು, ಈಗಾಗಲೇ 2,800 ಕ್ವಿಂಟಾಲ್ ಎಂ.ಓ-4 ಬಿತ್ತನೆ ಬೀಜ ಸರಬರಾಜಿಗೆ ಕರ್ನಾಟಕ ರಾಜ್ಯ ಬೀಜ ನಿಗಮಕ್ಕೆ ಬೇಡಿಕೆ ಸಲ್ಲಿಸಲಾಗಿದ್ದು, 1,696 ಕ್ವಿಂಟಾಲ್ ಎಂ.ಓ-4 ಬಿತ್ತನೆ ಬೀಜವನ್ನು ರೈತ ಸಂರ್ಪಕ ಕೇಂದ್ರಗಳಲ್ಲಿ ದಾಸ್ತಾನೀಕರಿಸಲಾಗಿದೆ. ಬಿತ್ತನೆ ಬೀಜವನ್ನು ಸಾಮಾನ್ಯ ವರ್ಗದ ರೈತರಿಗೆ ಪ್ರತಿ ಕೆ.ಜಿಗೆ ರೂ. 8 ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಪ್ರತಿ ಕೆ.ಜಿಗೆ ರೂ. 12 ರ ಸಹಾಯಧನದಲ್ಲಿ ಒದಗಿಸಲಾಗುತ್ತಿದೆ. ಪ್ರಸ್ತುತ 1058 ಮಂದಿ ರೈತರಿಗೆ 475 ಕ್ವಿಂಟಾಲ್ ಬಿತ್ತನೆ ಬೀಜವನ್ನು ವಿತರಿಸಲಾಗಿದ್ದು, ಅವಶ್ಯಕತೆಗೆ ಅನುಗುಣವಾಗಿ ಹಂತಹಂತವಾಗಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕಸ ಎಸೆಯುವ ಕೈಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಆಗ ಮಾತ್ರ ಎಸೆಯುವ ಮನಸ್ಥಿತಿ ಕ್ಷೀಣಿಸುತ್ತದೆ ಎಂದು ಕೋಟತಟ್ಟು ಗ್ರಾಮಪಂಚಾಯತ್ ಸದಸ್ಯ ಪ್ರಕಾಶ್ ಹಂದಟ್ಟು ಹೇಳಿದರು. ಅವರು ಭಾನುವಾರ ಕೋಟತಟ್ಟುವಿನ ಹಂದಟ್ಟಿನ ಸೀತಾನದಿ ತಟದಲ್ಲಿ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಮಣೂರು ಫ್ರೆಂಡ್ಸ್, ಹಂದಟ್ಟು ಮಹಿಳಾ ಬಳಗ ಕೋಟ, ಜೆಸಿಐ ಸಿನಿಯರ್ ಲಿಜನ್ ಕೋಟ, ಕೋಟತಟ್ಟು ಗ್ರಾಮಪಂಚಾಯತ್, ಗೆಳೆಯರ ಬಳಗ ಹಂದಟ್ಟು ಸಹಯೋಗದೊಂದಿಗೆ 255ನೇ ಭಾನುವಾರದ ಸ್ವಚ್ಛತಾ ಅಭಿಯಾನದಲ್ಲಿ ಮಾತನಾಡಿದರು. ತ್ಯಾಜ್ಯದ ಕೊಂಪೆ ದಿನದಿಂದ ದಿನಕ್ಕೆ ವಿಸ್ತರಿಸಿಕೊಳ್ಳುತ್ತದೆ ಒಂದಿಷ್ಟು ಪಂಚವರ್ಣದಂತಹ ಸಂಸ್ಥೆಗಳು ಪರಿಸರ ಕಾಳಜಿ ಕಾರ್ಯಕ್ರಮಗಳು ನಿತ್ಯ ನಿರಂತರವಾಗಿಸಿಕೊಳ್ಳುತ್ತಿವೆ ಆದರೆ ಎಸೆಯುವ ಕೊಳಕು ಮನಸ್ಥಿತಿ ಅಂತ್ಯವಾಗಿಲ್ಲ ಈ ಬಗ್ಗೆ ಸ್ಥಳೀಯಾಡಳಿತ ಬ್ಲಾಂಕ್‌ ಸ್ಪಾಟ್ ಪ್ರದೇಶಗಳಲ್ಲಿ ಸಿಸಿ ಕ್ಯಾಮರ ಅಳವಡಿಸಲಿದೆ. ಸ್ವಚ್ಛ ಪರಿಸರದ ಕಲ್ಪನೆ ಮನೆ ಮನೆಯಲ್ಲಿ ಮೊಳಗಬೇಕು ಆಗ ಮಾತ್ರ ಪರಿಸರಕ್ಕೆ ಬಹುದೊಡ್ಡ ಕೊಡುಗೆಯನ್ನು ನೀಡಿದಂತೆ ಎಂದು ಪಂಚವರ್ಣದ…

Read More