ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ರೈತ ಕಾಯಕವಿದ್ದರೆ ಮಾತ್ರ ಮನುಕುಲ ಉಳಿಯಲು ಸಾಧ್ಯ ಇಲ್ಲವಾದಲ್ಲಿ ಕ್ಲಿಷ್ಟಕರ ದಿನಗಳನ್ನು ಕಾಣಬೇಕಾದಿತು ಎಂದು ಬ್ರಹ್ಮಾವರ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷೆ ಜ್ಯೋತಿ ಉದಯ್ ಕುಮಾರ್ ಹೇಳಿದರು. ಅವರು ಶನಿವಾರ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್, ರೈತಧ್ವನಿ ಸಂಘ ಕೋಟ, ಗೆಳೆಯರ ಬಳಗ ಕಾರ್ಕಡ, ಸ್ನೇಹಕೂಟ ಮಣೂರು,ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಇವರ ಸಹಯೋಗದೊಂದಿಗೆ ರೈತರೆಡೆಗೆ ನಮ್ಮ ನಡಿಗೆ 46ನೇ ಮಾಲಿಕೆ ಐರೋಡಿ ರಘುರಾಮ ಮಡಿವಾಳ ಇವರನ್ನು ಗೌರವಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ರೈತ ಬೆಳೆದರೆ ದೇಶ ಅಥವಾ ಮನುಷ್ಯ ಜೀವಿಸಲು ಸಾಧ್ಯ ಈ ನಿಟ್ಟಿನಲ್ಲಿ ಕೃಷಿ ಕಾಯಕದಿಂದ ವಿಮುಖರಾಗದಂತೆ ಪ್ರತಿಯೊಬ್ಬರು ಯೋಚಿಸಬೇಕಿದೆ, ಅದರಲ್ಲೂ ಪಂಚವರ್ಣ ಸಂಘಟನೆ ರೈತರೆಡೆಗೆ ಕಾರ್ಯಕ್ರಮ ಮನೆ ಮನಮುಟ್ಟಯವಂತ್ತಾಗಿದೆ ಸಮಾಜಿಕ ಬದ್ದತೆಯಲ್ಲಿ ಪಂಚವರ್ಣ ಇತಿಹಾಸ ಸೃಷ್ಟಿಸಲು ಸಜ್ಜಾಗಿರುವುದು ಶ್ಲಾಘನೀಯ, ಯುವ ಸಮೂಹ ಹೆಚ್ಚು ಹೆಚ್ಚು ಕೃಷಿ ಕಾರ್ಯದಲ್ಲಿ ತೊಡಗಿಕೊಳ್ಳುವಂತಾಗಬೇಕೇಂದು ಕರೆ ನೀಡಿದರು.…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಹೆಂಡತಿ ಮೃತಪಟ್ಟ ನಾಲ್ಕು ಗಂಟೆಗಳ ಬಳಿಕ ಪತಿಯೂ ಸಾವನ್ನಪ್ಪಿದ್ದಾರೆ. ಈ ಘಟನೆ ಕುಂದಾಪುರದ ಸಾಸ್ತಾನ ಬಳಿಯ ಗುಂಡ್ಮಿಯಲ್ಲಿ ನಡೆದಿದೆ. ನಿವೃತ್ತ ಹಿರಿಯ ಆರೋಗ್ಯ ನಿರೀಕ್ಷಕ ಜೆ ರತ್ನಾಕರಾಯ ಮತ್ತು ಪತ್ನಿ ಸರೋಜಮ್ಮ ಸಾವಿನಲ್ಲೂ ಒಂದಾದ ಜೋಡಿ. ಸರೋಜಮ್ಮ ಬೆಳಿಗ್ಗೆ ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಈ ವೇಳೆ ಜೊತೆಯಲ್ಲೇ ಇದ್ದ ರತ್ನಾಕರಾಯ ಅವರ ಆರೋಗ್ಯದಲ್ಲೂ ಏರುಪೇರಾಗಿದ್ದು ಕೂಡಲೇ ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಿಕ್ಷಣ ನಿಂತ ನೀರಲ್ಲ. ಪ್ರತೀ ದಿನವೂ ಹೊಸ ಹೊಸ ಬದಲಾವಣೆಯೊಂದಿಗೆ ನವೀನ ಚಿಂತನೆಗಳೊಂದಿಗೆ ಸಾಗುತ್ತಿದೆ. ಒಂದು ಸುಭದ್ರವಾದ ದೇಶದ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಪ್ರಮುಖವಾದುದು ಎಂದು ಸುಜ್ಞಾನ್ ಎಜುಕೇಷನಲ್ ಟ್ರಸ್ಟ್ನ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ ಹೇಳಿದರು. ಅವರು ಇಲ್ಲಿನ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮೂರು ದಿನಗಳು ನಡೆದ ಶಿಕ್ಷಕರ ತರಬೇತಿ ಕಾರ್ಯಾಗಾರದಲ್ಲಿ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಉತ್ತಮವಾದ ಶಿಕ್ಷಕ ಮಾತ್ರ ಅತ್ಯುತ್ತಮವಾದ ವಿದ್ಯಾರ್ಥಿಗಳನ್ನು ಸೃಷ್ಟಿಸಲು ಸಾಧ್ಯವಾದ್ದರಿಂದ ಈ ಸಮಾಜವು ಯಾವಾಗಲೂ ಸಮರ್ಥವಾದ ಶಿಕ್ಷಕ ವರ್ಗವನ್ನು ಸದಾ ನಿರೀಕ್ಷಿಸುತ್ತದೆ. ಹಾಗಾಗಿ ಶಿಕ್ಷಕರಿಗೆ ಕಾಲ ಕಾಲಕ್ಕೆ ಅಗತ್ಯವಾದ ತರಬೇತಿಗಳನ್ನು ನೀಡಿದಾಗ ಶಿಕ್ಷಕರು ಬೋಧನೆಗೆ ಸಂಬಂಧಿಸಿದ ಹಲವಾರು ಕೌಶಲಗಳನ್ನು ಪಡೆದು ಉತ್ತಮ ಗುಣಮಟ್ಟದ ಬೋಧನೆ ಮಾಡಲು ಸಾಧ್ಯವಾಗಿ ಮಕ್ಕಳು ಕಲಿಕೆಯಲ್ಲಿ ಸರ್ವಾಂಗೀಣ ಪ್ರಗತಿ ಹೊಂದಲು ಸಾಧ್ಯವಾಗುತ್ತದೆ ಎಂದರು. ಮೇ 26,27 ಮತ್ತು 28ರಂದು ನಡೆದ ಮೂರು ದಿನಗಳ ತರಬೇತಿ ಕಾರ್ಯಾಗಾರದಲ್ಲಿ ಶಿಕ್ಷಕರಿಗೆ ಬೋಧನೆಗೆ ಅಗತ್ಯವಾದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿರುವ ಕೇಂದ್ರೋದ್ಯಮಗಳು, ಬ್ಯಾಂಕ್‌ಗಳು, ಕೇಂದ್ರ ಸರ್ಕಾರಿ ಕಚೇರಿಗಳು ಹಾಗೂ ವಸತಿ ಸಮುಚ್ಚಯಗಳಲ್ಲಿರುವ ಕನ್ನಡೇತರರು, ಅನ್ಯಭಾಷಿಕರಿಗೆ ಕನ್ನಡ ಕಲಿಸುವ ತರಬೇತಿ ನೀಡಲಾಗುತ್ತಿದ್ದು, ಆಸಕ್ತರು ಅರ್ಜಿ ಸಲ್ಲಿಸಿ ನೋಂದಾಯಿಸಿಕೊಳ್ಳಬಹುದಾಗಿದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ಕನ್ನಡೇತರರಿಗೆ ಕನ್ನಡ ಕಲಿಸುವ ಪ್ರಯತ್ನವನ್ನು ಹಲವು ವರ್ಷಗಳಿಂದ ನಿರಂತರವಾಗಿ ಕೈಗೊಳ್ಳುತ್ತಿದ್ದು, ಪ್ರಸಕ್ತ ಸಾಲಿನಲ್ಲಿ ಇನ್ನಷ್ಟು ವ್ಯಾಪಕಗೊಳಿಸಲು ಪ್ರಾಧಿಕಾರವು ವೈಜ್ಞಾನಿಕ ಪಠ್ಯಕ್ರಮವನ್ನು ರೂಪಿಸಿ, ತರಬೇತಿ ಹೊಂದಿದ ಶಿಕ್ಷಕರನ್ನು ಆಯೋಜಿಸುವ ಮೂಲಕ ವೃತ್ತಿಪರತೆಯನ್ನು ಒದಗಿಸಲಿದೆ. ಕನ್ನಡ ಕಲಿಸುವ ತರಬೇತಿಯನ್ನು 3 ತಿಂಗಳ ಅವಧಿಯಲ್ಲಿ ವಾರಕ್ಕೆ 3 ದಿನದಂತೆ ಪ್ರತಿದಿನ 01 ಗಂಟೆ ತರಬೇತಿಯನ್ನು ನೀಡಲಾಗುವುದು. ಆಸಕ್ತ ಕನ್ನಡೇತರರು ತಮ್ಮ ಸ್ವ-ವಿವರದೊಂದಿಗೆ ಜೂನ್ 7 ರ ಒಳಗಾಗಿ ಅರ್ಜಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಹಾಯಕ ನಿರ್ದೇಶಕರ ಕಛೇರಿ, ಡಾ.ಶಿವರಾಮ ಕಾರಂತ ಕಲಾಗ್ರಾಮ, ಪ್ರಗತಿ ನಗರ, ಅಲೆವೂರು ಗ್ರಾಮ, ಮಣಿಪಾಲ, ಉಡುಪಿ ಇಲ್ಲಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂ.ಸಂಖ್ಯೆ: 0820-2986168, ಮೊ.ನಂ:7026506627 ಅನ್ನು ಸಂಪರ್ಕಿಸಬಹುದಾಗಿದೆ ಎಂದು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ), ಸಿದ್ದಾರ್ಥನಗರ, ಮೈಸೂರು ಸಂಸ್ಥೆಯಲ್ಲಿ ಪ್ರಸಕ್ತ ಸಾಲಿನ ದೃಶ್ಯಕಲೆಯಲ್ಲಿ ಪ್ರಥಮ ಬಿ.ವಿ.ಎ (ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್) ಪದವಿ ಪ್ರವೇಶಾತಿಗಾಗಿ, ದ್ವಿತೀಯ ಪಿ.ಯು.ಸಿ. ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳಿಂದ ವೆಬ್‌ಸೈಟ್ https://uucms.karnataka.gov.in ಅಥವಾ https://www.cavamysore.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ. ಸದರಿ ಪದವಿಯಲ್ಲಿ 3 ನೇ ಸೆಮಿಸ್ಟರ್‌ನಿಂದ ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್ ಕಲೆ (ಅಚ್ಚುಕಲೆ), ಅನ್ವಯಕಲೆ, ಕಲಾ ಇತಿಹಾಸ ಹಾಗೂ ಛಾಯಾಚಿತ್ರ ಮತ್ತು ಛಾಯಾಚಿತ್ರ ಪತ್ರಿಕೋದ್ಯಮ ವಿಭಾಗಗಳಲ್ಲಿ ವಿಶೇಷ ಅಧ್ಯಯನದ ಸ್ನಾತಕ ಪದವಿಯಾಗಿರುತ್ತದೆ. ಅರ್ಜಿ ಸಲ್ಲಿಸಲು ಜೂನ್ 10 ಕೊನೆಯ ದಿನ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪ್ರವೇಶಾತಿಗಾಗಿ ಅರ್ಹತಾ ಪರೀಕ್ಷೆಯ ದಿನಾಂಕ ಮತ್ತು ಇತರೆ ಮಾಹಿತಿಯನ್ನು ಪ್ರತ್ಯೇಕವಾಗಿ ತಿಳಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 0821-2438931 ಅನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಡೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಕ್ಕಳನ್ನು ಕೇವಲ ಪಠ್ಯಪುಸ್ತಕಗಳಿಗೆ ಮಾತ್ರ ಸೀಮಿತವಾಗಿರಿಸದೆ, ಮಕ್ಕಳು ಎಲ್ಲಾ ವಿಧದ ಜ್ಞಾನಗಳನ್ನು ಪಡೆಯುವ ಅವಕಾಶವನ್ನು ಕಲ್ಪಿಸಿಕೊಡಬೇಕು ಎಂದು ಹೆಸ್ಕುತೂರು ಶಾಲೆಯ ಮುಖ್ಯ ಶಿಕ್ಷಕ ಅಬ್ದುಲ್ ರವೂಫ್ ಹೇಳಿದರು. ಅವರು ಇಲ್ಲಿನ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಯೋಜಿಸಿದ ಮೂರು ದಿನಗಳ ಶಿಕ್ಷಕರ ತರಬೇತಿ ಕಾರ್ಯಗಾರ ಒರಿಯೆಂಟೇಷನ್ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಶಿಕ್ಷಣದ ನಿಜವಾದ ಕಲ್ಪನೆಯು ಮಕ್ಕಳಲ್ಲಿ ಅಡಕವಾಗಿರುವ ಎಲ್ಲಾ ಪ್ರತಿಭೆಯನ್ನು ಹೊರ ಜಗತ್ತಿಗೆ ಪರಿಚಯಿಸುವುದಾಗಿದೆ. ಹೆಚ್ಚು ಹೆಚ್ಚು ಚಟುವಟಿಕೆಗಳನ್ನು ಪಠ್ಯದ ಜೊತೆಯಲ್ಲಿ ಅಳವಡಿಸಿಕೊಂಡಾಗ ಮಕ್ಕಳು ಆಸಕ್ತಿದಾಯಕ ಕಲಿಕೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತದೆ. ಶಿಕ್ಷಕರು ಹೆಚ್ಚು ತರಬೇತಿಗಳಲ್ಲಿ,ಕಾರ್ಯಗಾರಗಳಲ್ಲಿ ಪಾಲ್ಗೊಂಡು ಹೆಚ್ಚಿನ ಜ್ಞಾನವನ್ನು ಪಡೆದಾಗ ಮಕ್ಕಳು ಹೆಚ್ಚು ಕ್ರಿಯಾಶೀಲತೆಯಿಂದ ಕಲಿಕೆಯಲ್ಲಿ ಪಾಲ್ಗೊಳ್ಳುವಂತೆ ಮಾಡಲು ಸಾಧ್ಯವಾಗುತ್ತದೆ ಎಂದರು. ಮಕ್ಕಳ ಜ್ಞಾನವನ್ನು, ಬುದ್ಧಿ ಮಟ್ಟವನ್ನು ಅಳೆಯಲು ಪಠ್ಯದ ಅಂಕಗಳಿಕೆಯೊಂದೇ ಮೂಲ ಆಧಾರವಾಗಲಾರದು. ಮಕ್ಕಳು ಎಲ್ಲಾ ಜ್ಞಾನವನ್ನು ಪಡೆದು ಸರ್ವಾಂಗೀಣ ಪ್ರಗತಿ ಹೊಂದಿದಾಗ ಪಡೆದ ಶಿಕ್ಷಣ ಸಾರ್ಥಕವಾಗುತ್ತದೆ. ಇದಕ್ಕೆ ಶಿಕ್ಷಕರ ತರಬೇತಿ ಕಾರ್ಯಗಾರಗಳು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಮತ್ತು ನಂತರದ (ಪಿ.ಯು.ಸಿ, ಐ.ಟಿ.ಐ ಮತ್ತು ಡಿಪ್ಲೋಮಾ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ) ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ವೆಬ್‌ಸೈಟ್ https://shp.karnataka.gov.in/bcwd ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯ ಪ್ರವೇಶಾತಿಗೆ ಜೂನ್ 16 ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಜೂನ್ 20 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‌ಸೈಟ್ https://bcwd.karnataka.gov.in/ ಅಥವಾ ಸಹಾಯವಾಣಿ ಸಂಖ್ಯೆ: 8050770004 ಮತ್ತು 8050770005 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಗಳಲ್ಲಿ ಸುಪ್ತವಾಗಿರುವ ಸಾಮರ್ಥ್ಯದ ಹೆಚ್ಚಳಕ್ಕೆ ಉತ್ತಮ ವಾತಾವರಣ, ಸಂಸ್ಕಾರ ಬೇಕು. ಕಲಿಕೆಯ ವಿಷಯವು ಬರಿಯ ತಿಳಿವಳಿಕೆ ಮಾತ್ರವಲ್ಲ, ವಿಷಯವನ್ನು ಅರ್ಥಪೂರ್ಣ ಮಾಡಬಲ್ಲ ವ್ಯಕ್ತಿತ್ವದ ಅವಶ್ಯಕತೆ ಇರುತ್ತದೆ. ವಿದ್ಯಾರ್ಥಿಯು ಅನ್ಯಥಾ ಯೋಚಿಸದೆ ಪ್ರಸ್ತುತ ಕಲಿಕೆಯಲ್ಲಿ ಗಮನ ಕೇಂದ್ರೀಕರಿಸಿದರೆ ಶ್ರದ್ಧೆ ಮತ್ತು ಆತ್ಮವಿಶ್ವಾಸ ಉಂಟಾಗಿ ಕಲಿಕೆಯಲ್ಲಿ ಪುಸ್ತಕ ಪಾಂಡಿತ್ಯಕ್ಕಿಂತ ಅನುಭವ ಪಾಂಡಿತ್ಯ ವೃದ್ಧಿಯಾಗುತ್ತದೆ. ತನ್ಮೂಲಕ ಭವಿಷ್ಯ ಉಜ್ವಲವಾಗುತ್ತದೆಂದು ಇಂಡಿಯನ್ ರೆಡ್‌ಕ್ರಾಸ್ ಕುಂದಾಪುರ ಘಟಕದ ಅಧ್ಯಕ್ಷ ಜಯಕರ ಶೆಟ್ಟಿ ಹೇಳಿದರು. ಅವರು ಇಲ್ಲಿನ ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ ಇಲ್ಲಿನ 18ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಒಂದು ಲಕ್ಷ ರೂಪಾಯಿ ವಿದ್ಯಾರ್ಥಿ ಪ್ರೋತ್ಸಾಹ ಧನವನ್ನು ಅರ್ಹ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿತರಿಸಿ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ಧ ಕಾಲೇಜಿನ ಪ್ರಾಂಶುಪಾಲ ರಾಮರಾಯ ಆಚಾರ್ಯ ನಮ್ಮ ಬಗ್ಗೆ ನಾವು ಆಲೋಚಿಸುವುದಕ್ಕಿಂತ ಇನ್ನೊಬ್ಬರು ಹೆಚ್ಚು ಆಲೋಚಿಸಿರುತ್ತಾರೆ ಜೊತೆಗೆ ಅವರು ನಿಮಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜನಪದ ಸಾಹಿತ್ಯ ಮತ್ತು ಕಲೆಗಳು ಜನಮನದ ಜೀವನಾಡಿ. ಇವುಗಳನ್ನು ಬೆಳೆಸುವುದು ನಮ್ಮೆಲ್ಲರ ಕರ್ತವ್ಯ. ಈ ನಿಟ್ಟಿನಲ್ಲಿ ಡಾ| ಶಿವರಾಮ ಕಾರಂತರು ಕರಾವಳಿಯ ಕಲೆಯಾದ ಯಕ್ಷಗಾನವನ್ನು ಆ ಕಾಲಘಟ್ಟಕ್ಕೆ ಅಂತರಾಷ್ಟ್ರೀಯ ಮಟ್ಟದಲ್ಲಿ ಮನ್ನಣೆ ಪಡೆಯುವಂತೆ ಮಾಡಿದರು ಎಂದು ಕನ್ನಡ ಜಾನಪದ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ| ಬಾಲಾಜಿ ಎಸ್. ಹೇಳಿದರು. ಅವರು ಡಾ| ಶಿವರಾಮ ಕಾರಂತ ಟ್ರಸ್ಟ್, ಉಡುಪಿ ಜಿಲ್ಲೆ ಇವರ ಸಹಯೋಗದೊಂದಿಗೆ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಆಶ್ರಯದಲ್ಲಿ ನಡೆದ ಅರಿವಿನ ಬೆಳಕು ಉಪನ್ಯಾಸ ಮಾಲೆ-5 ಮತ್ತು ಜಲಜಾನಪದ ಪುಸ್ತಕ ಬಿಡುಗಡೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದು, ಜಾನಪದ ವಿದ್ವಾಂಸ ಕನರಾಡಿ ವಾದಿರಾಜ ಭಟ್ ಜಲಜಾನಪದ ಪುಸ್ತಕ ಬಿಡುಗಡೆಗೊಳಿಸಿದರು. ಡಾ| ಶಿವರಾಮ ಕಾರಂತ ಟ್ರಸ್ಟ್ ಅಧ್ಯಕ್ಷ ಡಾ| ಗಣನಾಥ ಶೆಟ್ಟಿ ಎಕ್ಕಾರು ಆಶಯ ನುಡಿಗಳನ್ನಾಡಿ ಪುಸ್ತಕ ಪರಿಚಯಿಸಿದರು. ಡಾ|…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ 15 ಮೆಟ್ರಿಕ್ ಪೂರ್ವ ಹಾಗೂ 8 ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗಾಗಿ ಹೊಸದಾಗಿ ಪ್ರವೇಶ ಬಯಸುವ ಅರ್ಹ ವಿದ್ಯಾರ್ಥಿಗಳಿಂದ ಹೆಚ್.ಎಂ.ಐ.ಎಸ್ ತಂತ್ರಾಂಶದ ವೆಬ್‌ಸೈಟ್ https://swdhmis.karnataka.gov.in/ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಉಡುಪಿ ದೂ.ಸಂಖ್ಯೆ: 0820-2528884, ಮೊ.ನಂ: 9480843209, ಕುಂದಾಪುರ ದೂ.ಸಂಖ್ಯೆ: 08254-230609, 298089, ಮೊ.ನಂ: 9480843208 ಹಾಗೂ ಕಾರ್ಕಳ ದೂರವಾಣಿ ಸಂಖ್ಯೆ: 08258-298134, 232133, ಮೊ.ನಂಬರ್ 9480843207 ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
