ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹಳ್ಳಾಡು ಗ್ರಾಮದ ನಿವಾಸಿ ಸುರೇಶ್ (43) ಅವರು ಹಳದಿ ಕಾಯಿಲೆಗೊಳಗಾಗಿ ಇತ್ತೀಚಿಗೆ ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ 26 ವರ್ಷಗಳಿಂದ ಕ್ಯಾಟರಿಂಗ್ ಮಾಡಿತ್ತಿದ್ದ ಸುರೇಶ್ ಅವರು ಆರೋಗ್ಯ ಸಮಸ್ಯೆಯಿಂದ ಊರಿಗೆ ಬಂದಿದ್ದರು. ಮಾ.22ರ ಸಂಜೆ ತಲೆ ತಿರುಗಿ ಬಿದ್ದಿದ್ದು, ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದು, ರಾತ್ರಿ ಸಾವನ್ನಪ್ಪಿದ್ದಾರೆ. ಅವರು ಅವಿವಾಗಿತರಾಗಿದ್ದರು. ತಂದೆ ಮಹಾಬಲ ನೀಡಿದ ದೂರಿನಂತೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಭಾರತವು ಅಭಿವೃದ್ಧಿಯ ಕನಸನ್ನು ಸಾಕಾರಗೊಳಿಸುವತ್ತ ಸಾಗುತ್ತಿದೆ. ಈ ದಿಸೆಯಲ್ಲಿ ನಮ್ಮ ಪ್ರಯತ್ನವಿದೆ. ಈಗ ಉದ್ಯೋಗ ಪಡೆಯಲು 21ನೇ ಶತಮಾನ ಬಯಸುವ ಶಿಕ್ಷಣ ಅಂದರೆ ಕೌಶಲ್ಯ ಆಧಾರಿತ ಶಿಕ್ಷಣದ ಅಗತ್ಯವಿದೆ ಎಂದು ಬೆಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿ ಡಾ. ಎಮ್.ಎಸ್. ಜಯಕರ್ ಶೆಟ್ಟಿ ಹೇಳಿದರು. ಅವರು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ದಿನಗಳ ಕಾಲ ನಡೆಯುತ್ತಿರುವ ಕಾಲೇಜು ವಾರ್ಷಿಕೋತ್ಸವ ಸಮಾರಂಭದ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ನಮ್ಮ ದೇಶದಲ್ಲಿ ಕೌಶಲ್ಯ ಆಧಾರಿತ ಶಿಕ್ಷಣದ ಬೆಳವಣಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಾಕಷ್ಟು ಸಹಾಯ ನೀಡುತ್ತಿದೆ. ಉದ್ಯೋಗ ಮತ್ತು ಬದುಕಲ್ಲಿ ಯಶಸ್ಸು ಪಡೆಯಬೇಕಾದರೆ ಉತ್ತಮ ಸಂವಹನ ಕಲೆ , ವಿವಿಧ ಭಾಷಾ ಜ್ಞಾನ, ಕಂಪ್ಯೂಟರ್ ಜ್ಞಾನ, ಸಮಸ್ಯೆ ಪರಿಹಾರ, ಸಹಯೋಗದ ಭಾಗವಹಿಸುವಿಕೆ ಮುಖ್ಯವಾಗಿದೆ. ಭಾರತೀಯ ಶಿಕ್ಷಣ ವ್ಯವಸ್ಥೆಯ ಉನ್ನತ ಶಿಕ್ಷಣವನ್ನು ವಿಶ್ವದ ವಿವಿಧ ದೇಶಗಳು ಅಳವಡಿಸಿಕೊಳ್ಳುತ್ತಿದ್ದು ಮಾದರಿ ವ್ಯವಸ್ಥೆಯಾಗಿ ರೂಪುಗೊಂಡಿದೆ. ಮಣಿಪಾಲ ಶಿಕ್ಷಣ ಸಂಸ್ಥೆಗಳು ವಿಶ್ವದ ಎಲ್ಲಾ ರಾಷ್ಟ್ರಗಳ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುತ್ತಿದೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಎಜುಕೇಶನ್ ಡೆಸ್ಕಟಾಪ್-ಆಸ್-ಎ-ಸರ್ವೀಸ್ ಮೂಲಕ ಸಂಸ್ಥೆಯಲ್ಲಿನ ದತ್ತಾಂಶಗಳ ವ್ಯವಸ್ಥಿತ ನಿರ್ವಹಣೆಗಾಗಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ಮಾಹಿತಿ ತಂತ್ರಜ್ಞಾನದ ಮೂಲಸೌಕರ್ಯಗಳನ್ನು ಒದಗಿಸುವ ಕಾಂಪ್ ಕ್ಲೌಡ್ ಐಟಿ ಸರ್ವಿಸಸ್ನ ಜೊತೆಗೆ ಮುಂದಿನ 5 ವರ್ಷಗಳಿಗೆ ಒಡಂಬಡಿಕೆ ಮಾಡಿಕೊಂಡಿದೆ. ಈ ವ್ಯವಸ್ಥೆಯ ನೆರವಿನಿಂದ ಆಳ್ವಾಸ್ ಶಿಕ್ಷಣ ಪ್ರತಿ?ನವು ತನ್ನ ಸಂಸ್ಥೆಗಳಲ್ಲಿ ವರ್ಚುವಲ್ ಡೆಸ್ಕ್ ಟಾಪ್ ಸೌಕರ್ಯವನ್ನು ಪ್ರತಿ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳಿಗೆ ಪ್ರತ್ಯೇಕವಾಗಿ ಒದಗಿಸಿದ್ದು, ಈ ಮೂಲಕ ಸಾಫ್ಟ್ವೇರ್ ಡಿಫೈನ್ಡ್ ನೆಟ್ವರ್ಕ್ ಜತೆಗೆ ಕೇಂದ್ರೀಕೃತ ಗಣಕ ನಿರ್ವಹಣಾ ವ್ಯವಸ್ಥೆಯನ್ನು ಮಾಡಲಾಗಿದೆ. ಸಾಂಪ್ರದಾಯಿಕ ಡೆಸ್ಕಟಾಪ್ಗಳಿಗೆ ಹೋಲಿಸಿದರೆ, ಎಜುಕೇಶನ್ ಡೆಸ್ಕಟಾಪ್-ಆಸ್-ಎ-ಸರ್ವೀಸ್ ವ್ಯವಸ್ಥೆಯ ಮೂಲಕ 80% ವಿದ್ಯುತ್ ಉಳಿತಾಯವಾಗಲಿದೆ. ಸ್ಕಾಟ್ಲೆಂಡ್ನಲ್ಲಿ ನೆಲೆಸಿರುವ ಕಾಂಪ್ ಕ್ಲೌಡ್ ಐಟಿ ಸರ್ವಿಸಸ್ನ ವ್ಯವಸ್ಥಾಪಕ ನಿರ್ದೇಶಕ ಪ್ರದೀಪ್ ಪೈ, ಆ ದೇಶದಲ್ಲಿನ ಶಿಕ್ಷಣ ಕ್ಷೇತ್ರದಲ್ಲಿನ ಅತ್ಯಾಧುನಿಕ ಗುಣಮಟ್ಟದ ಮಾಹಿತಿ ತಂತ್ರಜ್ಞಾನದ ಸೇವೆಯನ್ನು ಈ ವ್ಯವಸ್ಥೆಯ ಮೂಲಕ ನೀಡಲಿದ್ದಾರೆ. ಒಡಂಬಡಿಕೆಯ ಕುರಿತು ಮಾತನಾಡಿದ ಸಂಸ್ಥೆಯ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗ ಆಯೋಜಿಸಿರುವ ವಿ-ಗ್ರೋ ಬಿಸಿನೆಸ್ ಡೇ ಬ್ಯುಸಿನೆಸ್ ಫೆಸ್ಟ್ ಮೂರು ಹಂತಗಳಲ್ಲಿ ಆಯೋಜನೆಗೊಂಡು ಮೊದಲನೇ ಹಂತದಲ್ಲಿ ವ್ಯವಹಾರ ಯೋಜನೆಯ ಪ್ರಸ್ತುತಿ, ಎರಡನೇ ಹಂತದಲ್ಲಿ ತಾವೇ ತಯಾರಿಸಿದ ಉತ್ಪನ್ನಗಳೊಂದಿಗೆ ಇತರ ವಸ್ತುಗಳ ಮಾರಾಟ ಹಾಗೂ ಮೂರನೇ ಹಂತದಲ್ಲಿ ಹಣಕಾಸಿನ ಆಯ-ವ್ಯಯ ಪಟ್ಟಿಗಳನ್ನು ಪ್ರಸ್ತುತಪಡಿಸುವ ನಿಟ್ಟಿನಲ್ಲಿ ತನ್ಮೂಲಕ ವ್ಯವಹಾರ ಕೌಶಲ್ಯ ವೃದ್ಧಿಸುವ ಉದ್ದೇಶದಿಂದ, ಅಂತಿಮ ಹಾಗೂ ದ್ವಿತೀಯ ಬಿಕಾಂ ವಿದ್ಯಾರ್ಥಿಗಳಿಗೆ ಅಂತರ ತರಗತಿವಾರು ಸ್ಪರ್ಧೆ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರಾದ ಜುಡಿತ್ ಮೆಂಡೋನಾ ಅವರು ಬಿ.ಕಾಂ. ಪದವೀಧರರಿಗೆ ನವ ಉದ್ಯಮಗಳನ್ನು ಕೈಗೊಳ್ಳಲು ವ್ಯವಹಾರ ಕೌಶಲ್ಯಗಳು ಅಗತ್ಯವಾಗಿದೆ ಎಂದು ಹೇಳಿದರು. ಇನ್ನೋರ್ವ ಮುಖ್ಯ ಅತಿಥಿಗಳಾದ ಸಿ.ಎ. ಅನ್ವೇಶ್ ಶೆಟ್ಟಿ ಅವರು ವಿದ್ಯಾರ್ಥಿಗಳಿಗೆ ಲೋಕಜ್ಞಾನದೊಂದಿಗೆ ಆವಿಷ್ಕಾರ ಭರಿತ ವ್ಯವಹಾರ ಜ್ಞಾನವು ಅಗತ್ಯ ಎಂದರು. ಕಾಲೇಜಿನ ಪ್ರಾಂಶುಪಾಲ ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಆಕ್ಷರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಮಕ್ಕಳಿಗೆ ಬಾಲ್ಯದ ದೇಶ, ಧರ್ಮ, ಸಂಸ್ಕೃತಿ, ಸಂಸ್ಕಾರದ ಬಗ್ಗೆ ಅರಿವು ಮೂಡಿಸಿದರೆ ಅವರು ಸತ್ಪ್ರಜೆಗಳಾಗಿ ದೇಶಕ್ಕೆ ಬಲು ದೊಡ್ಡ ಕೊಡುಗೆಯನ್ನು ನೀಡುವ ಸಾಮರ್ಥ್ಯ ಹೊಂದುತ್ತಾರೆ. ಶಿಶು ಮಂದಿರದಲ್ಲಿ ಮಕ್ಕಳಿಗೆ ಇಂತಹ ವಿಷಯಗಳಿಗೆ ಪೂರಕವಾದ ಶಿಕ್ಷಣವನ್ನು ನೀಡುವ ಮೂಲಕ ಮಕ್ಕಳ ಬೆಳವಣಿಗೆಗೆ ಸಹಕರಿಸುತ್ತಿವೆ ಎಂದು ಗಂಗೊಳ್ಳಿ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದ ಪ್ರಧಾನ ಅರ್ಚಕ ಎಸ್. ವೆಂಕಟರಮಣ ಆಚಾರ್ಯ ಹೇಳಿದರು. ಸೇವಾ ಸಂಗಮ ನಿವೇದಿತಾ ಶಿಶು ಮಂದಿರದ ನಗರ ಜಯವಂತ ನಾಯಕ್ ಸಭಾಭವನದಲ್ಲಿ ಜರಗಿದ ಶಿಶು ಮಂದಿರದ ಮಕ್ಕಳ ಶುಭ ವಿದಾಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ಶಿಶು ಮಂದಿರದಲ್ಲಿ ತಮ್ಮ ಮಕ್ಕಳಂತೆ ಅವರ ಲಾಲನೆ ಪಾಲನೆ ಮಾಡಿ ಶಿಕ್ಷಣ ನೀಡುತ್ತಿರುವ ಮಾತಾಜಿಯವರ ಶ್ರಮ ಶ್ಲಾಘನೀಯ. ಮಕ್ಕಳಿಂದ ಪೋಷಕರೂ ದೇಶ, ಧರ್ಮ, ಸಂಸ್ಕೃತಿ, ಸಂಸ್ಕಾರದ ಬಗ್ಗೆ ತಿಳಿದು ಕೊಳ್ಳುವಂತಾಗಿದ್ದು, ಇಂತಹ ಬದಲಾವಣೆಗೆ ಕಾರಣವಾಗಿರುವ ಶಿಶು ಮಂದಿರದ ಶಿಕ್ಷಣ ಸ್ತುತ್ಯಾರ್ಹವಾದುದು ಎಂದು ಹೇಳಿದರು. ಎನ್.ಪ್ರಕಾಶ್ ನಾಯಕ್ ಗಂಗೊಳ್ಳಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಮಗೆ ನಾವೇ ಸಾಧಕರು, ನಮಗೆ ನಾವೇ ಬೋಧಕರೂ ಆಗಬೇಕು. ಸಾಧನೆಗೆ ಇಂತಿಷ್ಟೇ ಅವಧಿ ಎಂಬುದಿಲ್ಲ. ಅದು ನಿರಂತರವಾಗಿ ನಡೆಯಬೇಕಾದ ನಿಜದ ಅನ್ವೇಷಣೆ. ಪ್ರಯತ್ನವು ಬದುಕನ್ನು ಬೆಳಕಿನ ದಾರಿಯಲ್ಲಿ ಕೊಂಡೊಯ್ಯುವ ನಂದಾದೀಪ. ಪದವಿ ಶಿಕ್ಷಣದಲ್ಲಿ ವಿದ್ಯೆ ಮತ್ತು ಕೌಶಲ್ಯದೊಂದಿಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಪೂರ್ವಸಿದ್ಧತೆ ಮಾಡಿಕೊಂಡು ಸತತ ಪ್ರಯತ್ನದಲ್ಲಿ ನಂಬಿಕೆ ಇಟ್ಟರೆ ಭವಿಷ್ಯ ಉಜ್ವಲವಾಗುತ್ತದೆಂದು ತೆಂಕನಿಡಿಯೂರು ಸ.ಪ್ರ.ದ. ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರಶಾಂತ ನೀಲಾವರ ನುಡಿದರು. ಅವರು ಇಲ್ಲಿನ ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ, ಅಂಚೆ ಕೋಟೇಶ್ವರ ಇಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಸಂದರ್ಶನವನ್ನು ಎದುರಿಸುವ ಕಲೆ ಎಂಬ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿದರು. ಇನ್ನೋರ್ವ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಮಾಹೆ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕರಾದ ಡಾ. ಪ್ರವೀಣ ಶೆಟ್ಟಿ ಸಂದರ್ಶನವನ್ನು ಎದುರಿಸುವ ಕಲೆ ಎಂಬ ವಿಷಯದ ಕುರಿತು ಮಾತನಾಡುತ್ತ ಜ್ಞಾನ, ಕೌಶಲ್ಯ ಸಂಪಾದನೆಯೊಂದಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಶಿಕ್ಷಣ ವ್ಯವಸ್ಥೆಯ ಆರಂಭದಲ್ಲೆ, ಒಬ್ಬ ವ್ಯಕ್ತಿಯಾಗಿ ತನ್ನ ಜೀವನದ ಉದ್ದೇಶವೇನೆಂಬುದನ್ನು ಅರಿಯಬೇಕು. ಜೀವನದಲ್ಲಿ ಗುರಿಯನ್ನು ಆರಂಭದಲ್ಲೆ ಅರಿಯುವುದು ಉತ್ತಮ. ಪ್ರತಿ ಕೆಲಸದಿಂದ ಬರುವ ಅನುಭವದಿಂದ ಬದುಕನ್ನು ಶ್ರೇಷ್ಠತೆಯೆಡೆಗೆ ಒಯ್ಯುವ ಕೆಲಸವಾಗಬೇಕಿದೆ ಎಂದು ಕೋಟೇಶ್ವರದ ರಾಜಾರಾಮ್ ಪೋಲಿಮರ್ಸ್ ಸಂಸ್ಥೆಯ ಸ್ಥಾಪಕ ಸುರೇಶ್ ಕಾಮತ್ ಹೇಳಿದರು. ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಮ್ಯಾನೇಜ್ಮೆಂಟ್ ವಿಭಾಗದ ವತಿಯಿಂದ ಹಮ್ಮಿಕೊಂಡ ಎಂತುಝಿಯಾ ಕೋರ್ಪೊ ಕನೆಕ್ಟ್ ಫೆಸ್ಟ್ ನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮುಖ್ಯ ಅತಿಥಿ ನೆಲೆಯಲ್ಲಿ ಮಾತನಾಡಿದ ಯುವ ಪ್ರತಿನಿಧಿ ಮಿಥುನ್ ರೈ, ವೃತ್ತಿಪರ ಜೀವನವನ್ನು ಅತ್ಯುತ್ತಮ ರೀತಿಯಲ್ಲಿ ರೂಪಿಸಿಕೊಳ್ಳಲು ಮ್ಯಾನಜ್ಮೆಂಟ್ ಪದವಿ ಸೂಕ್ತ ಆಯ್ಕೆ. ಎಲ್ಲವನ್ನು ಪರಿಶ್ರಮದಿಂದ ಕಲಿಯಬೇಕು. ಸವಾಲುಗಳನ್ನು ಎದುರಿಸಿ ಮುನ್ನಡೆಯುವವ ನಿಜವಾದ ನಾಯಕನೆನಿಸಿಕೊಳ್ಳಬಲ್ಲ. ಪ್ರತಿಯೊಬ್ಬರಲ್ಲೂ ಪ್ರತಿಭೆ ಇದೆ ಅದನ್ನು ತಾವೇ ಗುರುತಿಸಿಕೊಳ್ಳಬೇಕು ಹಾಗೂ ಉಪನ್ಯಾಸಕರು ಸರಿಯಾದ ಮಾರ್ಗದರ್ಶನ ನೀಡಬೇಕು ಎಂದರು. ದಶಕಗಳ ಹಿಂದೆ ತಾನು ಪದವಿ ವಿದ್ಯಾರ್ಥಿಯಾಗಿದ್ದಾಗ ಆಯೋಜಿಸಿದ ಅಂತರಾಷ್ಟ್ರೀಯ ಸಮ್ಮೇಳನ ಯಶಸ್ಸನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು. ಏಷ್ಯಾ ಖಂಡದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಗಳು ದೊರೆಯುವ ಅವಕಾಶಗಳನ್ನು ಸಮರ್ಥವಾಗಿ ಬಳಸಿಕೊಳ್ಳಬೇಕು. ತನ್ಮೂಲಕ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಭಂಡಾರ್ಕಾರ್ಸ್ ಕಾಲೇಜಿನ ವಿಶ್ವಸ್ಥ ಮಂಡಳಿಯ ಹಿರಿಯ ಸದಸ್ಯರಾದ ಕೆ. ಶಾಂತಾರಾಮ್ ಪ್ರಭು ಹೇಳಿದರು. ಅವರು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಮೂರು ದಿನಗಳ ಕಾಲ ನಡೆಯುತ್ತಿರುವ ವಾರ್ಷಿಕೋತ್ಸವ ಸಮಾರಂಭದ ಮೊದಲ ದಿನ ಅಂತರ್ ತರಗತಿ ಪ್ರತಿಭಾ ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕಾರ್ಕಳದ ಭುವನೇಂದ್ರ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಬಿ. ಪದ್ಮನಾಭ ಗೌಡ ಅವರು ಮಾತನಾಡಿ, ಸಂಸ್ಥೆ ಕೇವಲ ಭೌತಿಕ ವಸ್ತುವಲ್ಲ. ವಿದ್ಯಾರ್ಥಿಗಳ ಭವಿಷ್ಯ ನಿರ್ಮಿಸುವುದು. ಅಭೂತಪೂರ್ವ ವೇದಿಕೆಯನ್ನು ವಿದ್ಯಾರ್ಥಿಗಳಿಗೆ ನೀಡಲಾಗಿದೆ. ಪ್ರತಿಭೆ ಎಲ್ಲರಲ್ಲೂ ಇದೆ. ಆದರೆ ನಿಮ್ಮಲ್ಲಿ ಅಡಗಿರುವ ಪ್ರತಿಭೆಯನ್ನು ಪೋಷಕರು, ಶಿಕ್ಷಕರು ಗುರುತಿಸಬೇಕು. ಉತ್ತಮ ಶಿಕ್ಷಣವು ಪ್ರತಿಭೆಯಾಗಿದೆ. ಇಂತಹ ವೇದಿಕೆಗಳು ನಿಮ್ಮ ಪ್ರತಿಭೆಗೆ ಪ್ರೇರಣೆಯಾಗಲಿ. ಅಲ್ಲದೆ ಕರ್ನಾಟಕದ ಜಾನಪದ ಲೋಕ ಶ್ರೀಮಂತವಾಗಿದೆ. ಯುವಕರು ಇಂತಹ ಜನಪದ ಲೋಕವನ್ನು ಉಳಿಸಿ ಬೆಳೆಸಬೇಕು ಎಂದು ಹೇಳಿದರು. ಕಾರ್ಯಕ್ರಮದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬ್ರಹ್ಮಾವರ: ತಾಲೂಕಿನ ಯಡ್ತಾಡಿ ನಿವಾಸಿ ಸೀತಾ ಬಾಯಿ ಅವರು ಪಕ್ಕದ ಮನೆಯ ಕಾರ್ಯಕ್ರಮಕ್ಕೆಂದು ರಸ್ತೆಯಲ್ಲಿ ನಡೆದುಕೊಂಡು ತೆರಳುತ್ತಿದ್ದ ವೇಳೆ ಅಲ್ತಾರು ಪಡುಮನೆ ಸಮೀಪ ಬೈಕ್ನಲ್ಲಿ ಬಂದ ಆರೋಪಿ 28 ಗ್ರಾಂ ತೂಕದ ಚಿನ್ನದ ಕರಿಮಣಿ ಸರವನ್ನು ಕಿತ್ತುಕೊಂಡು ಮಂದಾರ್ತಿ ಕಡೆಗೆ ಪರಾರಿಯಾಗಿದ್ದ ಘಟನೆ ಮಾ. 20ರಂದು ನಡೆದಿತ್ತು.ಪ್ರಕರಣದ ತನಿಖೆ ನಡೆಸಿದ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಮಾ. 21ರಂದು ಆರೋಪಿಯನ್ನು ವಶಪಡಿಸಿಕೊಂಡಿದ್ದಾರೆ. ಸಾಲಿಗ್ರಾಮ ಕಾರ್ಕಳ ಭಟ್ರಕಟ್ಟೆ ನಿವಾಸಿ ಮಂಜುನಾಥ ಮಯ್ಯ ಪೊಲೀಸರು ವಶಪಡಿಸಿಕೊಂಡ ಆರೋಪಿ. ಕಳವು ನಡೆದ ಕೂಡಲೇ ಸ್ಥಳೀಯರು ಬ್ರಹ್ಮಾವರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ. ಸುಮಾರು 20 ಕಿ.ಮೀ. ವ್ಯಾಪ್ತಿಯ ವಿವಿಧ ಕಡೆಗಳ ಸಿ.ಸಿ. ಕೆಮರಾಗಳನ್ನು ಪೊಲೀಸರು ಪರಿಶೀಲನೆ ನಡೆಸಿದ್ದು, ಆಗ ಬೈಕ್ ಬಗ್ಗೆ ಮಾಹಿತಿ ದೊರೆತಿದೆ. ಅದರ ಆಧಾರದಲ್ಲಿ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆರೋಪಿಯು ಈ ಹಿಂದೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಕಂಬದಕೋಣೆ ಸರಕಾರಿ ಪದವಿ ಪೂರ್ವ ಕಾಲೇಜಿನ ಎಸೆಸೆಲ್ಸಿ ಪರೀಕ್ಷಾ ಕೇಂದ್ರದ ಕೋಣೆಯ ಬಾಗಿಲಿನ ಬೀಗ ಒಡೆದು, ಸಿಸಿ ಕೆಮರಾಗಳನ್ನು ಒಡೆದು ಹಾಕಿರುವ ಘಟನೆ ಗುರುವಾರದಂದು ನಡೆದಿದೆ. ಮಾ. 21ರಂದು ನಡೆಯುವ ಪರೀಕ್ಷೆಗೆ ತರಗತಿಯ ಕೋಣೆಗಳನ್ನು ಸಿದ್ಧಗೊಳಿಸಲಾಗಿತ್ತು. ಈ ಬಾರಿ ನಕಲು ತಡೆಗಟ್ಟಲು ಕಾಲೇಜು ವಠಾರ ಹಾಗೂ ಕೋಣೆಗಳಿಗೆ ಸಿಸಿ ಕೆಮರಾ ಅಳವಡಿಸಲಾಗಿತ್ತು. ಮಾ.20ರಂದು ರಾತ್ರಿ ಸುಮಾರು 9.30 ರಿಂದ 10 ಗಂಟೆ ಹೊತ್ತಿಗೆ ಮುಸುಕುಧಾರಿಗಳು ಕಾಲೇಜಿನ ಆವರಣ ಪ್ರವೇಶಿಸಿ, ಅಲ್ಲಿ ಅಳವಡಿಸಿದ್ದ ಕೆಮರಾ ಕಿತ್ತೆಸೆದು ವಿದ್ಯುತ್ ಮೈನ್ ಸ್ವಿಚ್ ಆಫ್ ಮಾಡಿದ್ದಾರೆ. ಅನಂತರ ಪರೀಕ್ಷಾ ಕೇಂದ್ರದ ಕೋಣೆಯ ಬಾಗಿಲಿನ ಬೀಗ ಒಡೆದು, ಒಳಗೆ ನುಗ್ಗಿದ್ದಾರೆ. 4 ಕೋಣೆಗಳಿಗೆ ಹೋಗಿ 5 ಕೆಮರಾಗಳನ್ನು ಧ್ವಂಸ ಮಾಡಿದ್ದಾರೆ.ಜಾಕೆಟ್ ಧರಿಸಿದ್ದ ಮೂವರು ಮುಸುಕು ಧರಿಸಿ ಆವರಣ ಪ್ರವೇಶಿಸಿ ಈ ಕೃತ್ಯ ಎಸಗಿದ್ದಾರೆ. ಪರೀಕ್ಷಾ ಕೇಂದ್ರದಲ್ಲಿ 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು 15 ಪರೀಕ್ಷಾ ಕೊಠಡಿಗಳಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ…
