ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕುಡಿತದ ಚಟವಿದ್ದ ವ್ಯಕ್ತಿ ತೀವ್ರ ಅಸ್ವಸ್ಥಗೊಂಡು ಮೃತಪಟ್ಟ ಘಟನೆ ಉಪ್ಪುಂದ ರಥಬೀದಿಯಲ್ಲಿ ಸಂಭವಿಸಿದೆ. ಉಪ್ಪುಂದ ರಥಬೀದಿಯ ನಿವಾಸಿ ಗಣೇಶ್ (44) ಮೃತಪಟ್ಟ ವ್ಯಕ್ತಿ. ಅವರು ಮೇ.25ರಂದು ಬೆಳಗ್ಗೆ ವಾಂತಿ ಮಾಡಿ ತೀವ್ರ ಅಸ್ವಸ್ಥಗೊಂಡಿದ್ದು ಕೂಡಲೇ ಅವರನ್ನು ಬೈಂದೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ತಂದಾಗ ಬರುವ ದಾರಿಯ ಮಧ್ಯದಲ್ಲಿ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದರು. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕು ಕಚೇರಿ ಪ್ರಜಾ ಸೌಧದ ಸಭಾಂಗಣದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಬೈಂದೂರು ಕ್ಷೇತ್ರದ ಮೀನುಗಾರರಿಗೆ ಲೈಫ್ ಜಾಕೆಟ್ ವಿತರಿಸಿದರು. ಬಳಿಕ ಮಾತನಾಡಿದ ಶಾಸಕರು ಮಾನವನ ಜೀವ ಅತ್ಯಮೂಲ್ಯವಾದದ್ದು, ಇಂದಿನ ದಿನಗಳಲ್ಲಿ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಹೊಟ್ಟೆಪಾಡಿಗಾಗಿ ಮೀನುಗಾರಿಕೆಯಲ್ಲಿ ತೊಡಗಿರುವ ಸಮಯ ದುರ್ಘಟನೆಗಳಾಗಿ ಜೀವ ಕಳೆದುಕೊಳ್ಳುವ ಸಂದರ್ಭಗಳನ್ನು ಕಾಣುತ್ತಿದ್ದೇವೆ. ಇದು ಅತ್ಯಂತ ದುರಾದೃಷ್ಟಕರ ಸಂಗತಿ. ಹಾಗಾಗಿ ಈ ಸಾಲಿನ ಸಮುದ್ರ ಮೀನುಗಾರಿಕೆ ನಿಷೇಧಿತ ಅವಧಿಯಲ್ಲಿ ಸಂಪ್ರದಾಯಿಕ ಮೀನುಗಾರಿಕೆಯಲ್ಲಿ ಹಾಗೂ ನದಿ ಪಾತ್ರಗಳಲ್ಲಿ ಇನ್ನಿತರ ಕೆಲಸಗಳಲ್ಲಿ ತೊಡಗಿಕೊಳ್ಳುವ ಮೀನುಗಾರ ಬಾಂಧವರು ಅತ್ಯಂತ ಜಾಗರೂಕರಾಗಿದ್ದುಕೊಂಡು ಎಲ್ಲಾ ಸುರಕ್ಷತಾ ಕ್ರಮ ಅನುಸರಿಸಿ ಮೀನುಗಾರಿಕೆಯಲ್ಲಿ ತೊಡಗಿಸಿಕೊಳ್ಳಲು ಮನವಿ ಮಾಡಿದರು. ಲೈಫ್ ಜಾಕೆಟ್ ಸಾಕಷ್ಟು ಸಂಖ್ಯೆಯಲ್ಲಿ ವಿತರಣೆ ಆಗಿದ್ದು, ಅದನ್ನು ಪಡೆದುಕೊಂಡವರು ಅದರ ಸದ್ಭಬಳಕೆ ಮಾಡಲು ಕರೆ ನೀಡಿದರು ಮೀನುಗಾರರಿಗೆ ಲೈಫ್ ಬಾಯ್ ಒದಗಿಸಲು ಅಧಿಕಾರಿಗಳಿಗೆ ಸೂಚನೆ:ಪ್ರಸ್ತುತ ಕ್ಷೇತ್ರ ವ್ಯಾಪ್ತಿಯಲ್ಲಿ ಅರ್ಜಿ ಸಲ್ಲಿಸಿದ ಎಲ್ಲರಿಗೂ ಲೈಫ್ ಜಾಕೆಟ್ ವಿತರಿಸಲಾಗಿದೆ. ಕೆಲವು ಕಡೆ ಮೀನುಗಾರರಿಂದ ಲೈಫ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಸೈಂಟ್ ಥಾಮಸ್ ಶಾಲೆಯು ಬೈಂದೂರಿನಲ್ಲಿ ಸೋಮವಾರ- ಮಂಗಳವಾರದಂದು ಸಿಬಿಎಸ್ಇ ವತಿಯಿಂದ ಆಯೋಜಿಸಲಾದ “ಸಾಮರ್ಥ್ಯಭಿವೃದ್ಧಿ (ಕೌಶ ಲ್ಯಾಭಿವೃದ್ಧಿ) ಕಾರ್ಯಕ್ರಮ (CBP)” ಯಶಸ್ವಿಯಾಗಿ ನಡೆಯಿತು. “ಸಾಮರ್ಥ್ಯಾಧಾರಿತ ಕಲಿಕೆ ಮತ್ತು ಬಹು ಆಯ್ಕೆಯಪ್ರಶ್ನೆಗಳು”ವಿಷಯಾಧಾರಿತ ಈ ಎರಡು ದಿನಗಳ ತರಬೇತಿ ಕಾರ್ಯಾಗಾರದಲ್ಲಿ ವಿವಿಧ ಶಾಲೆಗಳ ಶಿಕ್ಷಕರು ಉತ್ಸಾಹಭರಿತವಾಗಿ ಭಾಗವಹಿಸಿದರು. ಕಾರ್ಯಕ್ರಮದ ಆರಂಭದಲ್ಲಿ ಶಾಲೆಯ ಪ್ರಾಂಶುಪಾಲರಾದ ವಂದನೀಯ ಫಾದರ್ ಫಿಲಿಪ್ ನೆಲ್ಲಿವಿಳಾ ಅವರು ಎಲ್ಲರನ್ನು ಆತ್ಮೀಯವಾಗಿ ಸ್ವಾಗತಿಸಿ, ಮಾತನಾಡಿ, ಇಂದಿನ ಶಿಕ್ಷಣ ವ್ಯವಸ್ಥೆಯಲ್ಲಿ ಕೌಶಲ್ಯಾಧಾರಿತ ಅಧ್ಯಯನದ ಮಹತ್ವವನ್ನು ಅವರು ತಮ್ಮ ಪ್ರಾಸ್ತಾವಿಕ ನುಡಿಯಲ್ಲಿ ವಿವರಿಸಿದರು. ವಿದ್ಯಾರ್ಥಿಗಳಲ್ಲಿ ಸೃಜನಾತ್ಮಕ ಚಿಂತನೆ, ಸಮಸ್ಯೆ ಪರಿಹಾರ ಸಾಮರ್ಥ್ಯ ಮತ್ತು ವಿಶ್ಲೇಷಣಾತ್ಮಕ ಮನೋಭಾವ ಬೆಳೆಸುವಲ್ಲಿ ಸಾಮರ್ಥ್ಯಾಧಾರಿತ ಕಲಿಕೆ ಅತ್ಯಂತ ಪರಿಣಾಮಕಾರಿ ಎಂದರು. ಕಾರ್ಯಾಗಾರಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಶ್ರೀಧರ ಬಿ ಹಾಗೂ ಡಾ. ಮೋನಿಕಾ ಡಿಸೋಜ ಅವರು ಶಿಕ್ಷಕರಿಗೆ ಸಮಗ್ರ ಮಾಹಿತಿ ನೀಡಿದರು. ಸಾಮರ್ಥ್ಯಾಧಾರಿತ, (ಕೌಶಲ್ಯ) ಪ್ರಶ್ನೆಗಳನ್ನು ರೂಪಿಸುವ ವಿಧಾನ, ವಿದ್ಯಾರ್ಥಿಗಳ ಕಲಿಕಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮಹಿಳೆಯರು ಕೆಲಸ ನಿರ್ವಹಿಸುತ್ತಿರುವ ಸಂಸ್ಥೆ, ಕಚೇರಿಗಳಲ್ಲಿ ಲೈಂಗಿಕ ದೌರ್ಜನ್ಯ ಕ್ಕೆ ಒಳಗಾದಲ್ಲಿ ದೂರು ಸಲ್ಲಿಸಲು ಅನುಕೂಲವಾಗುವಂತೆ ಆಂತರಿಕ ದೂರು ಸಮಿತಿಯನ್ನು ರಚಿಸಿ, ದೂರುಗಳು ಬಂದಾಗ ಸಕ್ರಿಯವಾಗಿ ಕಾರ್ಯನಿರ್ವಹಿಸಿ, ಮಹಿಳೆಯರಿಗೆ ನ್ಯಾಯ ಒದಗಿಸಿ ಕೊಡಬೇಕೆಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮಹಿಳಾ ಆಯೋಗ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರಕ್ಷಕ ಇಲಾಖೆ ಹಾಗೂ ಮಹಿಳಾ ಮತ್ತು ಅಭಿವೃದ್ಧಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಮಹಿಳಾ ಸ್ಪಂದನಾ ಮತ್ತು ಮಹಿಳಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಉದ್ಯೋಗಸ್ಥ ಮಹಿಳೆಯರು ತಮ್ಮ ಕಾರ್ಯ ನಿರ್ವಹಿಸುತ್ತಿರುವ ಜಾಗದಲ್ಲಿ ಲೈಂಗಿಕ ಕಿರುಕುಳಕ್ಕೆ ಒಳಗಾದಲ್ಲಿ ದೂರುಗಳನ್ನು ನೀಡಲು ಅನುಕೂಲವಾಗುವಂತೆ, ಸರಕಾರದ ಆದೇಶದಂತೆ 10 ಕ್ಕಿಂತ ಹೆಚ್ಚು ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿರುವ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕು ಕಚೇರಿ ಪ್ರಜಾಸೌಧದ ಕೋರ್ಟ್‌ಹಾಲ್‌ನಲ್ಲಿ ಬೈಂದೂರು ಹೋಬಳಿಗೆ ಸಂಬಂಧಿಸಿದಂತೆ 94ಸಿ ಹಾಗೂ 94ಸಿಸಿ ಫಲಾನುಭವಿಗಳಿಗೆ ಹಕ್ಕು ಪತ್ರವನ್ನು ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ವಿತರಿಸಿದರು. ಬಳಿಕ ಮಾತನಾಡಿದ ಶಾಸಕರು ಕ್ಷೇತ್ರದಲ್ಲಿ ಹಕ್ಕು ಪತ್ರ ವಂಚಿತರಿಗೆ ಕಾನೂನು ತೊಡಕುಗಳನ್ನು ನಿವಾರಿಸಿ ಕೊಂಡು ಅರ್ಹರಿಗೆ ಭೂಮಿ ಹಕ್ಕು ನೀಡುವ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತಿದೆ. ಕಳೆದ ವಾರ ವಂಡ್ಸೆ ಹೋಬಳಿಯಲ್ಲಿ 50 ಕ್ಕೂ ಮಿಕ್ಕಿದ ಅರ್ಹ ಫಲಾನುಭವಿಗಳಿಗೆ 94ಸಿ ಹಕ್ಕು ಪತ್ರ ವಿತರಿಸಲಾಗಿದೆ. ಪ್ರಸ್ತುತ ಕ್ಷೇತ್ರದ ಅರ್ಹ 24 ಕುಟುಂಬಕ್ಕೆ 94 ಸಿ ಹಾಗೂ 94 ಸಿಸಿ ಅಡಿ ಹಕ್ಕು ಪತ್ರ ವಿತರಿಸಲಾಗಿದೆ.ಬಡ ಜನರಿಗೆ ಹಕ್ಕು ಪತ್ರ ಒದಗಿಸುವುದೇ ಪ್ರಮುಖ ಆದ್ಯತೆಯನ್ನಾಗಿ ಇಟ್ಟು ಕೊಳ್ಳಲಾಗಿದೆ ಎಂದರು. 24 ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸಿದ ಶಾಸಕರು:ಬೈಂದೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಬೈಂದೂರು, ತಗ್ಗರ್ಸೆ ಹಾಗೂ ಯಡ್ತರೆ ಗ್ರಾಮಗಳ 09 ಫಲಾನುಭವಿಗಳಿಗೆ 94 ಸಿಸಿ ಹಾಗೂ ಗೋಳಿಹೊಳೆ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬಂಟರಯಾನೆ ನಾಡವರ ಮಾತೃ ಸಂಘ ರಿ. ಮಂಗಳೂರು ಇದರ ಕುಂದಾಪುರ ತಾಲೂಕು ಸಮಿತಿಯ ಸಹ ಸಂಚಾಲಕರಾಗಿ ಮಿಲಾಗ್ರಿಸ್ ಕಾಲೇಜುನ ಸಹಾಯಕ ಪ್ರಾಧ್ಯಾಪಕ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. ಅವರು ಕುಂದಾಪುರ ತಾಲೂಕು ಯುವ ಬಂಟರ ಸಂಘದ ಸ್ಥಾಪಕಾಧ್ಯಕ್ಷರಾಗಿ, ದಶಮ ಸಂಭ್ರಮದ ಅಧ್ಯಕ್ಷರಾಗಿ, ಪ್ರತಿಷ್ಠಿತ ರಾಮಕೃಷ್ಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಸಲಹಾ ಸಮಿತಿಯ ಸದಸ್ಯರಾಗಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟ ರಿ. ಮಂಗಳೂರು ಇದರ ಗವರ್ನಿಂಗ್ ಕೌನ್ಸಿಲ್ ಸದಸ್ಯರಾಗಿ, ಕರ್ನಾಟಕ ಜಾನಪದ ಪರಿಷತ್ತು ಉಡುಪಿ ಜಿಲ್ಲಾ ಘಟಕದ ನಿಕಟ ಪೂರ್ವ ಜಿಲ್ಲಾಧ್ಯಕ್ಷರಾಗಿ, ಪ್ರಸ್ತುತ ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ನ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿಗಳಾದ ರಾಜೇಂದ್ರ ಬಾದಾಮಿಕರ್ ಅವರು ಇತ್ತೀಚೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಸಮಾರಂಭದಲ್ಲಿ ವಾಸ್ತುತಜ್ಞ ಡಾ. ಬಸವರಾಜ್ ಶೆಟ್ಟಿಗಾರ ಅವರಿಗೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಡಾ. ಎಚ್. ಎಲ್. ಏನ್. ರಾವ್ ಅವರು ವಹಿಸಿದ್ದರು. ಪ್ರಶಸ್ತಿ ಪ್ರದಾನ ಸಮಾರಂಭವನ್ನು ವಿದ್ಯಾ ವಾಚಸ್ಪತಿ ಅಂತರಾಷ್ಟ್ರೀಯ ಖ್ಯಾತಿಯ ವಿದ್ವಾಂಸರಾದ ಡಾ. ಅರಳು ಮಲ್ಲಿಗೆ ಪಾರ್ಥಸಾರಥಿ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ದೂರದರ್ಶನದ ವಿಶ್ರಾಂತ ಹೆಚ್ಚುವರಿ ಮಹಾ ನಿರ್ದೇಶಕರಾದ ನಾಡೋಜ ಡಾಟ ಮಹೇಶ್ ಜೋಶಿ ಆಗಮಿಸಿ ಶುಭ ಹಾರೈಸಿದರು. ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ರಾಜೇಂದ್ರ ಬಾದಾಮಿಕರ್ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿಯನ್ನು ಪಡೆಯುವುದು ಸಾಧಕರಿಗೆ ಹಿಂದೆಂದೂ ಪಡೆಯದೇ ಇರುವ ವಿಶೇಷ ಪ್ರಶಸ್ತಿಯೊಂದಿಗೆ ಗೌರವ ಸಹ ಹೆಚ್ಚಾದಂತೆ, ಅಲ್ಲದೆ ಇಂತಹ ಬಹುಮುಖ ಪ್ರತಿಭೆಗಳನ್ನು ಗುರುತಿಸಿ ಗೌರವಿಸುವುದರಿಂದ ಪ್ರತಿಷ್ಠಿತ ಸಂಸ್ಥೆಯ ಪ್ರತಿಷ್ಠೆಯು ಸಹ ಹೆಚ್ಚಾಗುತ್ತದೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೂರ್ವ ಪ್ರಾಥಮಿಕ ಹಾಗೂ ಪ್ರಾಥಮಿಕ ವಿಭಾಗದ ಶಿಕ್ಷಕರಿಗೆ ಆಂಗ್ಲ ಭಾಷಾ ಪ್ರಾವಿಣ್ಯತೆಯೊಂದಿಗೆ ಸಂವಹನ ಕೌಶಲ್ಯಗಳು ಎಂಬ ಶೀರ್ಷಿಕೆಯಡಿ ಒಂದು ದಿನದ ಕಾರ್ಯಗಾರವನ್ನು ಆಯೋಜಿಸಲಾಯಿತು. ಸಂಪನ್ಮೂಲ ವ್ಯಕ್ತಿ ಅರುಣ ಎಸ್. ಶಿಕ್ಷಣ ಸಮಾಲೋಚಕಿ ಹಾಗೂ ಮೃದು ಕೌಶಲ್ಯಗಳ ತರಬೇತುಗಾರ್ತಿ ಕಾರ್ಯಗಾರದಲ್ಲಿ ಆತ್ಮವಿಶ್ವಾಸ, ಧನಾತ್ಮಕ ಆಲೋಚನೆ ಹಾಗೂ ಸಮಯ ನಿರ್ವಹಣೆಯ ಮೂಲಕ ಮಕ್ಕಳ ಮನದಿಂಗಿತವನ್ನು ಅರಿತು ಜ್ಞಾನವನ್ನು ಬಿತ್ತರಿಸಿದ್ದಲ್ಲಿ ಒಬ್ಬ ಶಿಕ್ಷಕ ಯಶಸ್ಸಿನ ಮೆಟ್ಟಿಲೆರುತ್ತಾನೆ. ಹಾಗೆಯೇ ಸಮಯಕ್ಕೆ ತಕ್ಕಂತೆ ಸಮಾಜವನ್ನು ಎದುರಿಸಲು ಮಗುವನ್ನು ತಯಾರಿಸುವುದರೊಂದಿಗೆ ತಾನು ಕೌಶಲ್ಯಗಳನ್ನು ಅಭಿವೃದ್ಧಿ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು. ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಕೃಷ್ಣ ಅಡಿಗರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಪ್ರಮೀಳಾ ಡಿಸೋಜಾ ಅವರು ಮುಖ್ಯ ಅತಿಥಿಗಳನ್ನು ಸಭೆಗೆ ಪರಿಚಯಿಸಿದರು. ಸಹಾಯಕ ಶಿಕ್ಷಕಿ ಪದ್ಮಾವತಿ ಅವರು ಎಲ್ಲರನ್ನು ಸ್ವಾಗತಿಸಿದರು. ಸಹಾಯಕ ಶಿಕ್ಷಕಿ ಅಶ್ವಿನಿ ಕಾರ್ಯಕ್ರಮವನ್ನು ನಿರೂಪಿಸಿದರು. ಪ್ರಾಥಮಿಕ ವಿಭಾಗದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕಾಮರ್ಸ್ ಮ್ಯಾನೇಜ್ಮೆಂಟ್ ಮತ್ತು ಐಟಿ ಅಸೋಸಿಯೇಷನ್ ವತಿಯಿಂದ ಸೋಮವಾರ “ಕ್ಯಾಂಪಸ್ ಟು ಕಾರ್ಪೊರೇಟ್ – ಕೆರಿಯರ್ ರೆಡಿನೆಸ್”ಕಾರ್ಯಕ್ರಮ ಕಾಲೇಜಿನ ಎ.ವಿ. ಹಾಲ್‌ನಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ರಜತ್ ಬಂಗೇರ ಅವರು ವಿದ್ಯಾರ್ಥಿಗಳಿಗೆ ಉದ್ಯೋಗ ಕ್ಷೇತ್ರದ ಕೌಶಲ್ಯಗಳು, ಸಂದರ್ಶನ ಸಿದ್ಧತೆ ಹಾಗೂ ಕಾರ್ಪೊರೇಟ್ ಕ್ಷೇತ್ರಕ್ಕೆ ತಯಾರಾಗುವ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದ ಸಂಯೋಜಕರಾದ ಪ್ರೀತಿ ಹೆಗ್ಡೆ ಸ್ವಾಗತಿಸಿದರು. ಮೇಘಾ ವಂದಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಕಾಮರ್ಸ್ ಮ್ಯಾನೇಜ್ಮೆಂಟ್ ಹಾಗೂ ಐಟಿ ಅಸೋಸಿಯೇಷನ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ ಪ್ರತಿಭೆ ನಿಮ್ಮದು, ವೇದಿಕೆ ನಮ್ಮದು ವಿನೂತನ ಕಾರ್ಯಕ್ರಮ ಸರಣಿಯಡಿ ಸಂಸ್ಕೃತಿ, ಸಂಸ್ಕಾರ, ಸಂಪ್ರದಾಯ ಉಳಿಸಿ ಬೆಳೆಸುವಲ್ಲಿ ವಿಶೇಷ ಪ್ರಯತ್ನ ಸತತ 119ನೇ ತಿಂಗಳ ಕಾರ್ಯಕ್ರಮ ಇತ್ತೀಚೆಗೆ ಜರುಗಿತು. ಟಿ.ಎನ್.ಪ್ರಭು, ತಲ್ಲೂರು ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಪ್ರಾಂಶುಪಾಲ ಎಮ್. ರತ್ನಾಕರ್ ಪೈ, ಬ್ಯಾನರ್ ಕಲಾವಿದ ಕೆ.ಕೆ. ರಾಮನ್, ರಜನಿ ಎನ್. ಪ್ರಭು, ವಿಶ್ವನಾಥ್ ಶ್ಯಾನುಭಾಗ್, ಆಶಾಕಾರ್ಯಕರ್ತೆ ಜ್ಯೋತಿ ಪೂಜಾರಿ ಹಾಗೂ ಅಕಾಡೆಮಿ ಅಧ್ಯಕ್ಷ ಭಾಸ್ಕರ್ ಕೊಗ್ಗ ಕಾಮತ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಖ್ಯಾತ ಬ್ಯಾನರ್ ಕಲಾವಿದ ಕೆ.ಕೆ.ರಾಮನ್, ಕುಂದಾಪುರ ಮತ್ತು ಶಾಲಿನಿ, ಉಪ್ಪಿನಕುದ್ರು ಅವರನ್ನು ಅಕಾಡೆಮಿಯ ವತಿಯಿಂದ ಸಮ್ಮಾನಿಸಲಾಯಿತು. ತದನಂತರ ಯಕ್ಷೇಶ್ವರಿ ತಂಡ ಉಪ್ಪಿನಕುದ್ರು ಇವರಿಂದ ಕುಣಿತ ಭಜನೆ ಜರುಗಿತು. ರಾಜೇಂದ್ರ ಪೈ ಅವರು ನಿರೂಪಿಸಿದರು.
