ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಡೆಸುವ ರಾಷ್ಟ್ರೀಯ ರಕ್ಷಣಾ ಅಕಾಡೆಮಿ (ಎನ್‌ಡಿಎ) ಮತ್ತು ನೌಕಾ ಅಕಾಡೆಮಿ (ಎನ್‌ಎ) ಪ್ರವೇಶ ಪರೀಕ್ಷೆಯಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜಿನ 10 ವಿದ್ಯಾರ್ಥಿಗಳು ಅರ್ಹತೆ ಪಡೆದುಕೊಂಡಿದ್ದಾರೆ. ವಿದ್ಯಾರ್ಥಿಗಳಾದ ಪ್ರಣವ್ ಜಜ್ಜು, ವಿನಯ್ ಟಿ., ಓಂಕಾರ್ ರಾಜೇಶ್, ಅದ್ವೈತ್ ವಿಕ್ರಾಂತ್ ಶಿಂಧೆ, ವಿವೇಕ್ ಎ., ಅಮೋಘ್ ಎನ್. ಬಿ., ಎಂ. ಯೂಸುಫ್ ಎನ್. ಎಸ್., ಸಾಯೀಶ್ ಪಿ. ಟಿ., ಪ್ರಹ್ಲಾದ್ ಡಿ. ಡಿ. ಹಾಗೂ ಸಂಹಿತ್ ವಿ. ಆರ್. ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿಗಳಿಗೆ ಎನ್‌ಡಿಎ ಪರೀಕ್ಷೆಯ ಸಿದ್ಧತೆಗಾಗಿ ಕಾಲೇಜಿನ ವತಿಯಿಂದ ವಿಶೇಷ ತರಬೇತಿ, ಅಣಕು ಪರೀಕ್ಷೆಗಳು ಹಾಗೂ ಮಾರ್ಗದರ್ಶನ ಕಾರ್ಯಾಗಾರಗಳನ್ನು ನಿರಂತರವಾಗಿ ಆಯೋಜಿಸಲಾಗುತ್ತಿದೆ. ಈ ಪರೀಕ್ಷೆಯ ಮೂಲಕ ಭಾರತೀಯ ಸೇನೆ, ನೌಕಾಪಡೆ ಮತ್ತು ವಾಯುಪಡೆಗಳಲ್ಲಿ ಅಧಿಕಾರಿಗಳಾಗಿ ಸೇವೆ ಸಲ್ಲಿಸಲು ಅವಕಾಶ ದೊರೆಯುತ್ತದೆ. ವಿದ್ಯಾರ್ಥಿಗಳ ಸಾಧನೆಯನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಅಭಿನಂದಿಸಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಒಂದು ಗ್ರಾಮ ಅಭಿವೃದ್ಧಿ ಹೊಂದಬೇಕಾದರೆ ಅಲ್ಲಿನ ಸುತ್ತಮುತ್ತಲಿನ ಪರಿಸರದಲ್ಲಿನ ಸೌಲಭ್ಯಗಳ ವ್ಯವಸ್ಥೆಯ ಮೇಲೆ ಅವಲಂಬಿತಗೊಳ್ಳುತ್ತದೆ ಆದರೆ ಮಣೂರು ಪಡುಕರೆ ಹಿಂದೆ ಇದ್ದ ಸ್ಥಿತಿಗಿಂತ ಪ್ರಸ್ತುತ ಅಭಿವೃದ್ಧಿ ಹೊಂದುತ್ತಿರುವ ಕೇಂದ್ರವಾಗಿ ಮೂಡಿ ಬಂದಿದೆ ಇದಕ್ಕೆ ಇಲ್ಲಿನ ದಾನಿಗಳಾದ ಆನಂದ್ ಸಿ ಕುಂದರ್ ಎಂಬ ಶಕ್ತಿ ಕಾರಣ ಎಂದು ರಾಷ್ಟ್ರೀಯ ಮಾನವ ಹಕ್ಕು ರಾಜ್ಯ ಸಮಿತಿ ಪ್ರಧಾನಕಾರ್ಯದರ್ಶಿ ದಿನೇಶ್ ಗಾಣಿಗ ಹೇಳಿದರು ಅವರು ಭಾನುವಾರ ಮಣೂರು ಪಡುಕರೆಯಲ್ಲಿ ಗೀತಾನಂದ ಫೌಂಡೇಶನ್ ವತಿಯಿಂದ ನಿರ್ಮಾಣಗೊಂಡ ನೂತನ ರಿಕ್ಷಾ ನಿಲ್ದಾಣದ ಲೋಕಾರ್ಪಣಾ ಸಮಾರಂಭದಲ್ಲಿ ಮಾತನಾಡಿದರು. ಕುಂದರ್ ಗ್ರಾಮೀಣ ಭಾಗದಲ್ಲಿ ಶೈಕ್ಷಣಿಕ, ಧಾರ್ಮಿಕ, ಸಾಮಾಜಿಕ ಕಾರ್ಯಗಳಿಗೆ ಅನುದಾನ ಒದಗಿಸಿ ಪರಿಸರದ ಅದೆಷ್ಟೋ ಕುಟುಂಬಗಳಿಗೆ ಆಸರೆಯಾಗಿದ್ದಾರೆ,ಇದೀಗ ಮಣೂರು ಪಡುಕರೆ ಸರ್ಕಲ್ ಸುಂದರ ನಗರ ಪಟ್ಟಣ ವ್ಯಾಪ್ತಿಯ ರೀತಿಯಲ್ಲಿ ಅಭಿವೃದ್ಧಿಗೊಳಿಸಿದ್ದಾರೆ ಇಂತಹ ಮಹಾದಾನಿ ಬಲುಅಪರೂಪ ಎಂದರು. ಕಾರ್ಯಕ್ರಮದಲ್ಲಿ ಆಟೋ ನಿಲ್ದಾಣದ ರೂವಾರಿ ಆನಂದ್ ಸಿ. ಕುಂದರ್ ಹಾಗೂ ಅರ್ಚಕ ನರಸಿಂಹಯ್ಯ ಅವರನ್ನು ಸನ್ಮಾನಿಸಲಾಯಿತು ಸಭಾಧ್ಯಕ್ಷತೆಯನ್ನು ರಿಕ್ಷಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮೊಬೈಲ್ ಸಂದೇಶಗಳ ಭರಾಟೆಯಲ್ಲಿ ಪತ್ರದ ಮಧುರತೆಯನ್ನು ಮರೆತಿರುವ ಇಂದಿನ ಕಾಲಘಟ್ಟದಲ್ಲಿ, ಕ್ರಿಯೇಟಿವ್ ಗ್ಲೋಬಲ್ ಶಾಲೆಯ ವಿದ್ಯಾರ್ಥಿಗಳು ಅಂಚೆ ದಿನಾಚರಣೆಯನ್ನು ವಿಶೇಷವಾಗಿ ಆಚರಿಸಿದರು. ವಿದ್ಯಾರ್ಥಿಗಳು ತಮ್ಮ ಕೈಬರಹದಲ್ಲಿ ಅಪ್ಪ-ಅಮ್ಮನಿಗೆ ಹಬ್ಬದ ಶುಭಾಶಯಗಳನ್ನು ಕೋರಿ, ಪ್ರೀತಿ ಮತ್ತು ಭಾವನೆಗಳನ್ನು ತುಂಬಿದ ಪತ್ರಗಳನ್ನು ಬರೆದರು. ಬಳಿಕ ಅಂಚೆ ಕಚೇರಿಗೆ ಭೇಟಿ ನೀಡಿ, ಅಂಚೆ ವ್ಯವಸ್ಥೆಯ ಕಾರ್ಯವೈಖರಿ, ಪತ್ರಗಳ ವಿಂಗಡಣೆ ಮತ್ತು ಅವುಗಳನ್ನು ಮನೆಮನೆಗೆ ತಲುಪಿಸುವ ಪ್ರಕ್ರಿಯೆಯ ಕುರಿತು ಮಾಹಿತಿ ಪಡೆದರು. ತಾವೇ ಬರೆದ ಪತ್ರಗಳನ್ನು ಅಂಚೆ ಪೆಟ್ಟಿಗೆಯಲ್ಲಿ ಹಾಕುವ ಮೂಲಕ ತಮ್ಮ ಪ್ರೀತಿಯ ಸಂದೇಶಗಳು ಮನೆಯವರನ್ನು ತಲುಪುವಂತೆ ಮಾಡಿದರು. ಮಕ್ಕಳಿಗೆ ಇದೊಂದು ಹೊಸ ಅನುಭವ, ಕುತೂಹಲಕಾರಿ ಕಲಿಕೆ ಮತ್ತು ಮರೆಯಲಾಗದ ಸಂಭ್ರಮವಾಯಿತು. ಮನೆಗೆ ಪತ್ರ ತಲುಪಿದಾಗ ಅನೇಕ ಪೋಷಕರು ವ್ಯಕ್ತಪಡಿಸಿದ ಸಂತೋಷ ಮತ್ತು ಭಾವನಾತ್ಮಕ ಪ್ರತಿಕ್ರಿಯೆಗಳು ಈ ಪ್ರಯತ್ನದ ಸಾರ್ಥಕತೆಯನ್ನು ಸಾರಿದವು. ಮೊಬೈಲ್ ಸಂದೇಶಗಳು ಕ್ಷಣಾರ್ಧದಲ್ಲಿ ತಲುಪುವ ಈ ಡಿಜಿಟಲ್ ಯುಗದಲ್ಲಿ, ಮಕ್ಕಳ ಮುಗ್ಧ ಮನಸ್ಸಿನ ಪ್ರೀತಿ, ತಮ್ಮ ಕೈಬರಹದ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಹೆಬ್ರಿಯ ನಮ ತುಳುವೆರ್ ಕಲಾ ಸಂಘಟನೆ(ರಿ.) ಕೊಡಮಾಡಲ್ಪಡುವ 2026-27 ನೇ ಸಾಲಿನ ಕರ್ಣಾಟನಾಡ ಪೋಷಕ ಪ್ರಶಸ್ತಿ ಕಂಟೆಂಟ್ ಕ್ರಿಯೇಟರ್, ಹೆಗ್ಗದ್ದೆ ಸಮೂಹ ಸಂಸ್ಥೆಗಳ ಮಾಲೀಕ ಸಂದೀಪ್ ಶೆಟ್ಟಿ ಹೆಗ್ಗದ್ದೆಗೆ ಲಭಿಸಿದೆ. 26ನೇ ವರ್ಷದ ನವರಂಗೋತ್ಸವದಲ್ಲಿ ನಾಟ್ಕ ಮುದ್ರಾಡಿಯ 41ನೇ ವರ್ಷದ ಸಂಭ್ರಮದಲ್ಲಿ ಈ ಪ್ರಶಸ್ತಿಯನ್ನು ಪ್ರದಾನಿಸಲಾಯಿತು. ಮಾಧ್ಯಮ ವಿಭಾಗದಲ್ಲಿ, ಡಿಜಿಟಲ್ ಲೋಕದಲ್ಲಿ ಸರಿಸುಮಾರು ವರ್ಷದಿಂದ ವೃತ್ತಿಯಲ್ಲಿರುವ, 8000 ಕ್ಕೂ ಅಧಿಕ ಕಾರ್ಯಕ್ರಮಗಳ ಮೂಲಕ ಜನ ಮನದಲ್ಲಿ ಮಿಲಿಯನ್ ಗಟ್ಟಲೇ ಜನರ ಪ್ರೀತಿ ಸಂಪಾದಿಸಿರುವ ಸಂದೀಪ್ ಶೆಟ್ಟಿ ಹೆಗ್ಗದ್ದೆಯವರ ಕಾರ್ಯವೈಖರಿಯನ್ನ ಗಮನಿಸಿ ಈ ಪ್ರಶಸ್ತಿ ನೀಡಲಾಗಿದೆ. ಇವರ ಕೆಲಸ ಕಾರ್ಯ ಇನ್ನೂ ಹೆಚ್ಚಿನ ಮಟ್ಟದಲ್ಲಿ ಪ್ರಭೆ ಬೀರಲಿ ಎಂದು ಮುದ್ರಾಡಿಯ ಅಭಯಹಸ್ತೆ ಆದಿಶಕ್ತಿ ಸನ್ನಿಧಾನದ ಮೊಕ್ತೇಸರರು, ನಾಟ್ಕ ಮುದ್ರಾಡಿಯ ಅಧ್ಯಕ್ಷರು ಸನ್ಮಾನಿಸಿ ಹಾರೈಸಿದರು. ಪ್ರಶಸ್ತಿಯನ್ನ ಸ್ವೀಕರಿಸಿದ ಸಂದೀಪ್ ಶೆಟ್ಟಿ ಹೆಗ್ಗದ್ದೆ ಮಾತನಾಡಿ ಪ್ರಶಸ್ತಿ ಪಡೆಯುವಾಗ ನಮ್ಮ ಜವಾಬ್ಧಾರಿಗಳು ಜಾಸ್ತಿಯಾಗುತ್ತವೆ. ನಮ್ಮ ಹಿರಿಮೆ ಗರಿಮೆಯ ಜೊತೆಗೆ ಇನ್ನೂ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕೋಟ ಶ್ರೀ ಅಮೃತೇಶ್ವರೀ ಹಲವು ಮಕ್ಕಳ ತಾಯಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಅ.11ರ ಭಾನುವಾರದಿಂದ 21ರ ಬುಧವಾರ (ವಿಜಯದಶಮಿ) ವರೆಗೆ ಜರಗಲಿದ್ದು ಭಾನುವಾರ ಬಾಲಕೃಷ್ಣ ಶೆಟ್ಟಿ ಕುಟುಂಬಸ್ಥರಿಂದ ದುರ್ಗಾಹೋಮ, ವಿಶೇಷ ಮಹಾಪೂಜಾ ಕಾರ್ಯಕ್ರಮಗಳು ಜರಗಿತು. ವೇ.ಮೂ ಮಧುಸೂದನ್ ಬಾಯರಿ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ಜರಗಿದವು. ದೇಗುಲದ ಅಧ್ಯಕ್ಷ ಆನಂದ್ ಸಿ. ಕುಂದರ್ ಸೇವಾರ್ತಿಗಳಿಗೆ ಶಾಲು ಹೊದಿಸಿ ಪ್ರಸಾದ ವಿತರಿಸಿ ಗೌರವಿಸಿದರು. ದೇಗುಲದ ಟ್ರಸ್ಟಿಗಳಾದ ಶಿವ ಪೂಜಾರಿ,ಸುಭಾಷ್ ಶೆಟ್ಟಿ,ಗಣೇಶ ನೆಲ್ಲಿಬೆಟ್ಟು, ಸುಧಾ ಎ. ಪೂಜಾರಿ, ಜ್ಯೋತಿ ಡಿ. ಕಾಂಚನ್, ಚಂದ್ರಶೇಖರ್ ಆಚಾರ್, ಸುಬ್ರಾಯ ಜೋಗಿ, ಮಾಜಿ ಟ್ರಸ್ಟಿಗಳಾದ ಚಂದ್ರ ಪೂಜಾರಿ, ಕೋಟ ಪಂಚಾಯತ್ ಮಾಜಿ ಸದಸ್ಯ ಭುಜಂಗ ಗುರಿಕಾರ, ದೇಗುಲದ ಅರ್ಚಕರಾದ ಸಂದೇಶ್ ಜೋಗಿ, ದೇಗುಲದ ವ್ಯವಸ್ಥಾಪಕ ಗಣೇಶ್ ಹೊಳ್ಳ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಸಾಂಸ್ಕೃತಿಕ ಕಾರ್ಯಕ್ರಮಗಳ ಭಾಗವಾಗಿ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು, ಭಜನಾ ಕಾರ್ಯಕ್ರಮಗಳು ಜರುಗಿದವು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಅಖಿಲ ಕರ್ನಾಟಕ ಕೋಟೆಗಾರ ಸಂಘ ರಿ. ಪ್ರಾಯೋಜಕತ್ವದ ಉಡುಪಿ ಜಿಲ್ಲಾ ರಾಮಕ್ಷತ್ರಿಯ ಒಕ್ಕೂಟವು ಬೈಂದೂರಿನ ಯಡ್ತರೆ ಜೆಎನ್‍ಆರ್ ಕಲಾ ಮಂದಿರದಲ್ಲಿ ಅದ್ಧೂರಿಯಾಗಿ ಉದ್ಘಾಟನೆಗೊಂಡಿತು. ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್ ಅವರು ಒಕ್ಕೂಟವನ್ನು ಉದ್ಘಾಟಿಸಿ, ಸಮುದಾಯ ಒಗ್ಗಟ್ಟಿನ ಮಹತ್ವವನ್ನು ಒತ್ತಿ ಹೇಳಿದರು. ಯುವ ಪೀಳಿಗೆಯನ್ನು ಅಭಿವೃದ್ಧಿ ಮತ್ತು ಕಲ್ಯಾಣದತ್ತ ಕೊಂಡೊಯ್ಯಲು ವೈಚಾರಿಕ ಬದಲಾವಣೆ ಅಗತ್ಯ ಎಂದು ಅವರು ಕರೆ ನೀಡಿದರು. ಸಮಾರಂಭದ ಅಧ್ಯಕ್ಷತೆಯನ್ನು ನಾಡೋಜ ಡಾ. ಕೂಡ್ಲು ಕೃಷ್ಣಪ್ರಸಾದ್, ವೈದ್ಯಕೀಯ ನಿರ್ದೇಶಕರು, ಪ್ರಸಾದ್ ನೇತ್ರಾಲಯ ವಹಿಸಿದ್ದರು. ಕೋಟೆಗಾರ ಎಂದರೆ ಸತ್ಯ, ಪ್ರಾಮಾಣಿಕತೆ ಮತ್ತು ನಿಷ್ಠೆಗೆ ಇನ್ನೊಂದು ಹೆಸರು ಎಂದು ಅವರು ಬಣ್ಣಿಸಿದರು. ಯುವಕರು ಸಮುದಾಯದ ಸಂಸ್ಕೃತಿ, ಸಂಪ್ರದಾಯಗಳನ್ನು ಅರಿತು ಸಮಾಜದ ಉನ್ನತಿಗೆ ಶ್ರಮಿಸಬೇಕು ಎಂದು ಅವರು ಹೇಳಿದರು. ನೂತನ ಅಧ್ಯಕ್ಷ ಕೊತ್ತಾಲ್ ಪದ್ಮನಾಭ ಶೇರುಗಾರ್ ಗಂಗೊಳ್ಳಿ ಅವರು ಸ್ವೀಕಾರ ಭಾಷಣದಲ್ಲಿ, ಜನರ ಅಗತ್ಯಗಳಿಗೆ ಸ್ಪಂದಿಸುವ ಕಾರ್ಯತಂತ್ರದ ಯೋಜನೆಗಳನ್ನು ತಂಡವಾಗಿ ರೂಪಿಸುವುದಾಗಿ ತಿಳಿಸಿದರು. ಕಾರ್ಯಾಧ್ಯಕ್ಷ ಶ್ರೀನಿವಾಸ್ ಶೇರೇಗಾರ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕು ಕಚೇರಿ ಮುಂಭಾಗದಲ್ಲಿ ಕೃಷಿ ಇಲಾಖೆಯ ಕೇಂದ್ರ ಹಾಗೂ ರಾಜ್ಯ ಪುರಸ್ಕೃತ ಯೋಜನೆಯಡಿ ತಾಲೂಕಿನ ಅರ್ಹ ರೈತರಿಗೆ ವಿವಿಧ ಕೃಷಿ ಯಂತ್ರೋಪಕರಣಗಳನ್ನು ಬೈಂದೂರು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ವಿತರಣೆ ಮಾಡಿದರು. ಬಳಿಕ ಮಾತನಾಡಿದ ಶಾಸಕರು, ರೈತರು ಶ್ರಮ ಜೀವಿಗಳು, ಪ್ರತಿಕೂಲ ಪರಿಸ್ಥಿತಿಗಳ ನಡುವೆಯೂ ಈಗಲೂ ಕೃಷಿಯನ್ನೇ ನೆಚ್ಚಿಕೊಂಡ ಹಲವಾರು ಕುಟುಂಬಗಳು ತಾಲೂಕಿನಲ್ಲಿ ಇದ್ದು, ತಾಲೂಕಿನ ಈ ವರ್ಷ ಮಳೆ ಕೊರತೆ, ಬರ ಪರಿಸ್ಥಿತಿಯ ಹಿನ್ನಲೆಯಲ್ಲಿ ರೈತಾಪಿ ವರ್ಗದ ಕಾಳಜಿಯನ್ನು ಕೃಷಿ ಅಧಿಕಾರಿಗಳು ಮಾಡಬೇಕು ಎಂದರು.ಕೇಂದ್ರ ಸರಕಾರದ ಸನ್ಮಾನ್ಯ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಕೃಷಿ ಉತ್ತೇಜನಕ್ಕೆ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು ರೈತರು ಇದರ ಪ್ರಯೋಜನ ಪಡೆಯಲು ಹಾಗೂ ಯೋಜನೆಗಳ ಬಗ್ಗೆ ಗ್ರಾಮೀಣ ರೈತರುಗಳಿಗೆ ಸಮರ್ಪಕ ಮಾಹಿತಿ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬೈಂದೂರು ತಾಲೂಕಿನ 3 ಮಂದಿ ರೈತರಿಗೆ ನಾಟಿ ಯಂತ್ರ, 3 ಮಂದಿ ರೈತರಿಗೆ ಪವರ್ ಟಿಲ್ಲರ್, 3 ಮಂದಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾಷ್ಟ್ರೀಯ ರಕ್ಷಣಾ ಪಡೆ ಮತ್ತು ನೇವಲ್ ಅಕಾಡೆಮಿಗೆ ಸೇರ ಬಯಸುವವರಿಗೆ ಕೇಂದ್ರ ಲೋಕಸೇವಾ ಆಯೋಗದವರು ನಡೆಸುವ 2026ರ ಎನ್ ಡಿ ಎ-2 ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳು ದೈಹಿಕ ಸಾಮರ್ಥ್ಯ ಪರೀಕ್ಷೆಗೆ ಆಯ್ಕೆಗೊಂಡಿದ್ದಾರೆ. ವಿದ್ಯಾರ್ಥಿಗಳಾದ ನಂದನ್ ಆರ್., ರಾಹುಲ್ ಜಿ.ಎನ್., ರಿಷಿ ಎಸ್. ಶೆಟ್ಟಿ, ಸುಮಿತ್ ಎಸ್. ಪ್ರಭು, ಚಿಂತನ್ ಎಮ್. ಹೆಗ್ಡೆ , ಪ್ರಣಮ್ ಹೆಚ್.ಡಿ., ಮಿಹಿರ್ ಹೆಗ್ಡೆ, ಯು. ಶ್ರೀಶ ಮೈಪಾಡಿ, ಯಶಸ್ ಆರ್. ತೇರ್ಗಡೆಗೊಂಡು ಮುಂದಿನ ದೈಹಿಕ ಸಾಮರ್ಥ್ಯ ಪರೀಕ್ಷೆಗೆ ಆಯ್ಕೆಯಾಗಿದ್ದಾರೆ. ರಾಷ್ಟ್ರ ವ್ಯಾಪಿ ನಡೆದ ಈ ಪರೀಕ್ಷೆಯಲ್ಲಿ ಒಟ್ಟಾರೆ 7406 ಮಂದಿ ವಿದ್ಯಾರ್ಥಿಗಳು ತೇರ್ಗಡೆಯನ್ನು ಹೊಂದಿದ್ದು ಅದರಲ್ಲಿ 9 ಮಂದಿ ವಿದ್ಯಾರ್ಥಿಗಳು ಕ್ರಿಯೇಟಿವ್ ಸಂಸ್ಥೆಯಿಂದ ಆಯ್ಕೆಗೊಂಡಿರುವುದು ಅತೀವ ಸಂತೋಷವನ್ನುಂಟು ಮಾಡಿದೆ. ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಪ್ರಾಂಶುಪಾಲರು, ಆಡಳಿತ ಮಂಡಳಿ,ಉಪನ್ಯಾಸಕ ವರ್ಗದವರು, ಬೋಧಕೇತರ ಸಿಬ್ಬಂದಿಗಳು ಹಾಗೂ ಪರೀಕ್ಷಾ ಸಂಯೋಜಕರಾದ ಸುಮಂತ್ ದಾಮ್ಲೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾಜ್ಯದಲ್ಲಿ ಕಳೆದ ಹತ್ತು ವರ್ಷಗಳಿಂದ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ 10 ಪೊಲೀಸ್ ಠಾಣೆಗಳ ಪೈಕಿ ಗಂಗೊಳ್ಳಿ ಪೊಲೀಸ್ ಠಾಣೆಯು 7ನೇ ಸ್ಥಾನ ಪಡೆದುಕೊಂಡಿದೆ. ಕರ್ನಾಟಕ ರಾಜ್ಯ ಪೊಲೀಸ್ ನಡೆಸಿರುವ ಈ ಆಂತರಿಕ ಸರ್ವೆಯಲ್ಲಿ ವಿವಿಧ ಮಾನದಂಡಗಳ ಆಧಾರದ ಮೇಲೆ ಅಂಕಗಳನ್ನು ನೀಡಲಾಗಿದೆ. ಅಪಘಾತಕ್ಕೆ ಕಡಿವಾಣ, ಸಾರ್ವಜನಿಕರೊಂದಿಗೆ ಉತ್ತಮ ಸ್ಪಂದನೆ, ದಾಖಲೆಗಳ ನಿರ್ವಹಣೆ ಮತ್ತು ತ್ವರಿತ ದೂರು ವಿಲೇವಾರಿ ಮೊದಲಾದ ಅಂಶಗಳನ್ನು ಪರಿಗಣಿಸಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇತ್ತೀಚೆಗೆ ಕಲ್ಲಬೆಟ್ಟುವಿನ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ 14 ವರ್ಷದ ವಯೋಮಿತಿಯ ಬಾಲಕರ ಕ್ರಿಕೆಟ್ ಪಂದ್ಯಾಟದಲ್ಲಿ ಉಡುಪಿ ಜಿಲ್ಲೆಯು ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದೆ. ಈ ಸಾಧನೆಯಲ್ಲಿ ಕುಂದಾಪುರದ ವಿದ್ಯಾರಣ್ಯ ಇಂಗ್ಲಿಷ್ ಮೀಡಿಯಂ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಗಳಾದ ಸಾಯಿಶ್ ಜಿ. ಹೆಗ್ಡೆ ಹಾಗೂ ಆತ್ಮಯ್ ಎಂ. ಅವರು ಅತ್ಯುತ್ತಮ ಪ್ರತಿಭೆ ಮೆರೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಗೊಂಡಿರುತ್ತಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ ಹಾಗೂ ವಿದ್ಯಾರಣ್ಯ ಆಂಗ್ಲಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಪ್ರದೀಪ್ ಕುಮಾರ್ ಅವರು ವಿಜೇತ ವಿದ್ಯಾರ್ಥಿಗಳನ್ನು ಹಾಗೂ ಅವರಿಗೆ ತರಬೇತಿ ಹಾಗೂ ಮಾರ್ಗದರ್ಶನ ನೀಡಿದ ದೈಹಿಕ ಶಿಕ್ಷಣ ಶಿಕ್ಷಕರನ್ನು ಅಭಿನಂದಿಸಿದ್ದಾರೆ.
