Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗೋಕರ್ಣ: ಔಷಧಿಯ ಅಂಗಡಿಯಲ್ಲಿ ಎಲ್ಲಾ ಔಷಧಗಳನ್ನೂ ಎಲ್ಲರಿಗೂ ಕೊಡುವುದಿಲ್ಲ. ಕೆಲವು ಔಷಧಗಳನ್ನು ವೈದ್ಯರಿಂದ ಸೂಕ್ತ ಚೀಟಿಯನ್ನು ಹೊಂದಿದವರಿಗಷ್ಟೇ ನೀಡಲಾಗುತ್ತದೆ. ಹಾಗೆಯೇ ಕೆಲವು ಔಷಧಗಳಿಗೆ ಅದನ್ನು ಮಕ್ಕಳಿಗೆ ನೀಡುವಂತಿಲ್ಲ ಎಂಬ ನಿಯಮಗಳಿರುತ್ತದೆ. ಹಾಗೆಯೇ ಎಲ್ಲಾ ಯೋಗ – ಪ್ರಾಣಾಯಾಮಗಳನ್ನು ಎಲ್ಲರೂ ಮಾಡಬಾರದು. ಪ್ರತಿಯೊಂದಕ್ಕೂ ಅದರದ್ದೇ ಆದ ನಿಯಮಗಳಿವೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಅವರು ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಧರ್ಮಸಭೆಯಲ್ಲಿ ಸೋಮವಾರದಂದು ‘ಅನ್ನಂ ಬ್ರಹ್ಮ’ ಮಾಲಿಕೆಯಲ್ಲಿ ಅಮೃತಾಹಾರವೆಂಬ ಯೋಗ ಸೂಕ್ಷ್ಮದ ಕುರಿತಾಗಿ ಪ್ರವಚನವನ್ನು ಅನುಗ್ರಹಿಸುತ್ತಾ, ಯೋಗ ಸೂಕ್ಷ್ಮವಾದ ಅಮೃತಪಾನವನ್ನು ಸಿದ್ಧಿಸಿಕೊಂಡವನಿಗೆ ತಕ್ಷಕ ಸರ್ಪದ ಮಹಾವಿಷದಿಂದಲೂ ಕೂಡ ಏನೂ ಆಗದು. ಒಮ್ಮೆ ಈ ಅಮೃತವನ್ನು ಆಸ್ವಾದಿಸಲು ಕಲಿತ ಯೋಗಿಯು ಮತ್ತೆ ಮತ್ತೆ ಅದನ್ನು ಬಯಸುತ್ತಾನೆ. ಈ ಅಮೃತದ ಆಸ್ವಾದನೆಗೆ ಸಮಾನವಾದದ್ದು ಯಾವುದೂ ಇಲ್ಲ ಎಂದ ಶ್ರೀಗಳು, ಜಾಲಂಧರ ಬಂಧ, ಮೂಲಬಂಧ, ಖೇಚರಿ, ವಿಪರೀತ ಕರಣಿ ಮುಂತಾದವುಗಳ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಗಳು ತಮ್ಮ ಕೌಶಲ್ಯ ಮತ್ತು ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು ಎಂದು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭಕರಾಚಾರಿ  ಹೇಳಿದರು. ಅವರು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟ ಮತ್ತು ಭರವಸೆ ಕೋಶ , ವೃತ್ತಿ ಮಾರ್ಗದರ್ಶನ ಮತ್ತು ಪ್ಲೇಸ್ ಮೆಂಟ್ ಕೋಶ ಮತ್ತು ಬೆಂಗಳೂರಿನ ಮ್ಯಾಜಿಕ್ ಬಸ್ ಇವರ ಸಹಯೋಗದಲ್ಲಿ ನಡೆದ 4ದಿನಗಳ ಸಾಫ್ಟ್ ಸ್ಕಿಲ್ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಈ ಸ್ಪರ್ಧಾತ್ಮಕ ಯುಗದಲ್ಲಿ ವಿವಿಧ ಕೌಶಲಗಳಲ್ಲಿ ತರಬೇತಿ ಪಡೆದಾಗ ಉದ್ಯೋಗ ಪಡೆಯುವಲ್ಲಿ ಹೆಚ್ಚಿನ ಅವಕಾಶಗಳು ನಿಮಗಾಗಿ ಸೃಷ್ಟಿಯಾಗುತ್ತದೆ. ಇಂತಹ ತರಬೇತಿ ಕಾರ್ಯಕ್ರಮಗಳು ನಿಮ್ಮ ಕೌಶಲ್ಯ ಹೆಚ್ಚಿಸಲು ಅನುಕೂಲವಾಗುತ್ತವೆ ಎಂದು ಹೇಳಿದರು. ಮ್ಯಾಜಿಕ್ ಬಸ್ ಇದರ ಮಾಹಿತಿ ತಂತ್ರಜ್ಞಾನ ತರಬೇತುದಾರರಾದ ಶಕ್ತಿ ಅವರು ಮಾತನಾಡಿ ಮೊದಲು ನಿಮ್ಮಲ್ಲಿ ಇರುವಂತಹ ವೈಶಿಷ್ಟ್ಯಪೂರ್ಣ ಕೌಶಲ್ಯ ಮತ್ತು ಪ್ರತಿಭೆ ಅರಿತು ಅದಕ್ಕೆ ಪೂರಕವಾಗಿ ತರಬೇತಿ ಪಡೆದುಕೊಳ್ಳಿ ಎಂದು ಸಲಹೆ ನೀಡಿದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಮ್ಯಾಜಿಕ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಜೆಸಿಐ ಸಂಸ್ಥೆ ವತಿಯಿಂದ ಸಮಾಜಮುಖಿ ಹಾಗೂ ಸಾಧನಾ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದವರಿಗೆ ನೀಡಲಾಗುವ ಪ್ರತಿಷ್ಠಿತ ‘ಸಾಧನಾಶ್ರೀ’ ಪ್ರಶಸ್ತಿಗೆ ಜೇಸಿಐ ಬೈಂದೂರು ಸಿಟಿ ಘಟಕದ ನಿಕಟ ಪೂರ್ವ ಅಧ್ಯಕ್ಷರಾದ ಜೆಸಿ ರಾಜು ಮೊಗವೀರ ಭಾಜನರಾಗಿದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭವು ಮಡಂತ್ಯಾರಿನಲ್ಲಿ ಅದ್ದೂರಿಯಾಗಿ ಜರುಗಿತು. ​ಕಾರ್ಯಕ್ರಮದಲ್ಲಿ ಜೆಸಿಐ ಭಾರತ ವಲಯ 15ರ ವಲಯಾಧ್ಯಕ್ಷರಾದ ಜೆಎಪ್ಎಸ್. ಸಂತೋಷ್ ಶೆಟ್ಟಿ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಸಮಾರಂಭದಲ್ಲಿ ವಲಯ ಉಪಾಧ್ಯಕ್ಷರಾದ ಜೆಎಪ್ಎಂ. ಪ್ರದೀಪ್ ಶೆಟ್ಟಿ ಇನ್ನಾ, ಪಿಆರ್ ಮತ್ತು ಮಾರ್ಕೆಟಿಂಗ್ ವಿಭಾಗದ ನಿರ್ದೇಶಕರಾದ ಜೆಸಿ ಸ್ವರಾಜ್ ಶೆಟ್ಟಿ, ವ್ಯವಹಾರ ವಿಭಾಗದ ನಿರ್ದೇಶಕರಾದ ಜೆಸಿ ವಿಕೇಶ್ ಮಾನ್ಯ, ಬೈಂದೂರು ಸಿಟಿ ಜೆಸಿಐ  ಅಧ್ಯಕ್ಷರಾದ ಜೆಸಿ ಚೈತ್ರ ಸತೀಶ್,  ಸೇರಿದಂತೆ ಪ್ರಮುಖ ಪದಾಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು. ​ಇವರ ಸಾಮಾಜಿಕ ಸೇವೆ, ರಕ್ತದಾನ ಸೇವೆ ಹಾಗೂ ಅವರ ಸಾಧನೆಯನ್ನು ಗುರುತಿಸಿ. ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ ಉಡುಪಿ ಜಿಲ್ಲೆಯಲ್ಲಿ ನಡೆದ ವಿಶ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಇಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಇದರ ಮೊದಲಿದ್ದ (16.06.26ಕ್ಕೆ ಮೊದಲು) ಒಟ್ಟು 10,63,876 ಮತದಾರರ ಪೈಕಿ 10,00,545 ಮಂದಿ ಸ್ಥಾನ ಉಳಿಸಿಕೊ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ತಿಳಿಸಿದ್ದಾರೆ. ಅವರು ಮಣಿಪಾಲ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು ವಿವಿಧ ಕಾರಣಗಳಿಗಾಗಿ ಗೈರು, ಸ್ಥಳಾಂತರ, ಮೃತರು, ನಕಲಿ, ಇತರ (ಎಎಸ್‌ಡಿಡಿಒ) – ಪಟ್ಟಿಯಲ್ಲಿದ್ದ ಒಟ್ಟು 63,331 ಮಂದಿ ಹೆಸರು ಇದರಲ್ಲಿ ಸೇರ್ಪಡೆಗೊಂಡಿಲ್ಲ ಎಂದು ಅವರು ವಿವರಿಸಿದರು. ಕರಡು ಮತದಾರರ ಪಟ್ಟಿಯಲ್ಲಿ ಸ್ಥಾನ ಪಡೆದಿರುವವರ ಪೈಕಿ ಒಟ್ಟು 97,706 ಮಂದಿಗೆ ನೋಟೀಸುಗಳನ್ನು ನೀಡಲಾಗುತ್ತಿದೆ. ಇವರಲ್ಲಿ ಹಿಂದಿನ ಮತದಾರರ ಪಟ್ಟಿಯೊಂದಿಗೆ ಲಿಂಕೇಜ್ ಆಗದಿರುವ – ನೋ ಮ್ಯಾಪಿಂಗ್- 31,903 ಮಂದಿ ಹಾಗೂ ‘ಲಾಜಿಕಲ್‌ ಡಿಸ್ಕ್ರಿಪೆನ್ಸಿ’ (ತಾರ್ಕಿಕ ವ್ಯತ್ಯಾಸ) ಅಡಿಯಲ್ಲಿ ಗುರುತಿಸಲಾದ 65,803 ಮಂದಿ ಸೇರಿದ್ದಾರೆ ಎಂದು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಆಶ್ರಯದಲ್ಲಿ ನಡೆದ ಅಂತರ್ ತರಗತಿ ಐಟಿ ಫೆಸ್ಟ್ “ಟೆಕ್ ಮಂಥನ್ 6.0” ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ತಂತ್ರಜ್ಞಾನಕ್ಕೆ ಸಂಬಂಧಪಟ್ಟ ನಡೆದ 13 ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಮಣಿಪಾಲ ಬ್ಲಾಕ್ ಪ್ರಾಗ್ ನ ಉಪಾಧ್ಯಕ್ಷರಾದ ಅಭಿಜಿತ್ ಅಡಿಗ ಅವರು ಮಾತನಾಡಿ, ಎಐ ಟೆಕ್ನಾಲಜಿಯು ನಮ್ಮ ಜ್ಞಾನಕ್ಕೆ ಶಕ್ತಿ ಮದ್ದಿನಂತೆ ಕೆಲಸಮಾಡುತ್ತಿದ್ದು ನಾವೆಲ್ಲರೂ ಅದನ್ನು ಸದುಪಯೋಗಪಡಿಸಿಕೊಂಡು ಜ್ಞಾನವನ್ನು ವೃದ್ಧಿಸಿಕೊಂಡು ಕಾರ್ಯ ನಿರ್ವಹಿಸಿದರೆ ಮಾತ್ರ ಈ ಸ್ಪರ್ಧಾತ್ಮಕ ಯುಗದಲ್ಲಿ ಬದುಕಲು ಸಾಧ್ಯ ಎಂದರು. ಇನ್ನೋರ್ವ ಮುಖ್ಯ ಅತಿಥಿ ಉಡುಪಿಯ ಜ್ಞಾನಸುಧಾ ಪದವಿ-ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಶ್ರೀನಿಧಿ ಭಾಗವತ್ ರವರು ಮಾತನಾಡಿ, ವರ್ತಮಾನ ಕಾಲಘಟ್ಟದಲ್ಲಿ ವಿದ್ಯಾರ್ಥಿಗಳು ತಂತ್ರಜ್ಞಾನದ ಜೊತೆಗೆ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕಾದ ಅನಿವಾರ್ಯತೆ ಹೆಚ್ಚಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಗಂಗೊಳ್ಳಿ: ಇಂದಿನ ಸ್ಪರ್ಧಾತ್ಮಕ ಮತ್ತು ಬದಲಾಗುತ್ತಿರುವ ಯುಗದಲ್ಲಿ ಉದ್ಯೋಗವನ್ನು ಪಡೆಯಲು ನಮ್ಮ ಜ್ಞಾನವನ್ನು ಸರಿಯಾದ ರೀತಿಯಲ್ಲಿ ಹೊಸ ರೀತಿಯ ಕೌಶಲ್ಯದೊಂದಿಗೆ ಬಳಸಿಕೊಳ್ಳುವ ಕಲೆಯನ್ನು ನಾವು ಸಿದ್ದಿಸಿಕೊಳ್ಳಬೇಕು. ಆಗ ಮಾತ್ರ ಯಶಸ್ಸನ್ನು ಕಂಡುಕೊಳ್ಳಲು ಸಾಧ್ಯ  ಎಂದು ಮಂಗಳೂರಿನ ಶ್ರೀನಿವಾಸ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಅಸಿಸ್ಟೆಂಟ್ ಪ್ರೊಫೆಸರ್ ಅರ್ಚನಾ ದೇವಾಡಿಗ ಅಭಿಪ್ರಾಯಪಟ್ಟರು.  ಅವರು ಇತ್ತೀಚಿಗೆ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ಆರಂಭಗೊಂಡ ಸೈನ್ಸ್ ಕ್ಲಬ್‌ನ್ನು ಉದ್ಘಾಟಿಸಿ ಮಾತನಾಡಿದರು.  ಪ್ರಾಂಶುಪಾಲೆ ಕವಿತಾ ಎಂಸಿ ಅಧ್ಯಕ್ಷತೆ ವಹಿಸಿದ್ದರು. ಜಿ.ಎಸ್‌.ವಿ.ಎಸ್ ಅಸೋಸಿಯನ್ ಅಧ್ಯಕ್ಷ ಡಾ. ಕಾಶಿನಾಥ ಪಿ. ಪೈ ಶುಭ ಹಾರೈಸಿದರು. ಪೂರ್ವಿಕ ಎಂ. ಜಿ. ಪ್ರಾಸ್ತಾವಿಕ ಮಾತುಗಳನ್ನಾಡಿದರು. ಉಪನ್ಯಾಸಕಿ ಪವಿತ್ರಾ ಮತ್ತು ವಿದ್ಯಾರ್ಥಿ ಪ್ರತಿನಿಧಿ ಚೇತನ್ ಉಪಸ್ಥಿತರಿದ್ದರು. ಶರಣ್ಯ ತನಿಷಾ ಮತ್ತು ಅಂಕಿತ ಪ್ರಾರ್ಥಿಸಿದರು. ತ್ರಿಷಾ ಅತಿಥಿಗಳನ್ನು ಪರಿಚಯಿಸಿದರು. ಅಂಕುಶ್ ಸ್ವಾಗತಿಸಿದರು. ಮನಿಷಾ ನಿರೂಪಿಸಿದರು. ದೀಪಿಕಾ ಧನ್ಯವಾದ ಅರ್ಪಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ನಿಷ್ಠಾವಂತ ಸದಸ್ಯರ ಸಹಕಾರ, ನಿಸ್ವಾರ್ಥ ನಿರ್ದೇಶಕ ಮಂಡಲ ಹಾಗೂ ನಗು ಮೊಗದ ಸೇವೆ ನೀಡುವ ಸಿಬ್ಬಂದಿಗಳ ಸಹಾಯದಿಂದ ನಮ್ಮ ಸಹಕಾರಿ ಸಂಸ್ಥೆ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಲು ಸಾಧ್ಯವಾಗಿದೆ ಎಂದು ಉಪ್ಪುಂದ ಶ್ರೀ ವರಲಕ್ಷ್ಮೀ ಸೌಹಾರ್ದ ಕ್ರೆಡಿಟ್ ಕೋ-ಅಪರೇಟೀವ್ ಅಧ್ಯಕ್ಷ ಡಾ. ಗೋವಿಂದ ಬಾಬು ಪೂಜಾರಿ ಹೇಳಿದರು. ಅವರು ಉಪ್ಪುಂದ ದೇವಕಿ ಸಭಾಭವನದಲ್ಲಿ ನಡೆದ ಶ್ರೀ ವರಲಕ್ಷ್ಮೀ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್‌ ನಿ. ಸೊಸೈಟಿ 2025 – 26ನೇ ಸಾಲಿನ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಂಘವು ವರದಿ ವರ್ಷದಲ್ಲಿ ರೂ.26 ಕೋಟಿ ವ್ಯವಹಾರ ನಡೆಸಿ ರೂ.29.5ಲಕ್ಷ ಲಾಭಗಳಿಸಿದೆ. ಈ ನೆಲೆಯಲ್ಲಿ ಸಂಘದ ಸದಸ್ಯರಿಗೆ ಶೇ.10.5 ಡಿವಿಡೆಂಡ್‌ ನೀಡಲಾಗುವುದು ಎಂದು ಘೋಷಿಸಿದರು. ರಾಜ್ಯಮಟ್ಟದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಾದ ಕೌಸ್ತುಭ, ಸುಶನ್ ನಾರಾಯಣ ಪೂಜಾರಿ, ಪ್ರಜ್ಞಾ ಎಸ್. ಪೂಜಾರಿ ಅವರನ್ನು ಸನ್ಮಾನಿಸಲಾಯಿತು ಹಾಗೂ ಎಸ್‌.ಎಸ್‌.ಎಲ್‌. ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ 95% ಅಂಕಗಳಿಸಿರುವ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಛೇರಿ (ಆಡಳಿತ) ಮಂಗಳೂರು ಹಾಗೂ ಬ್ಯಾರೀಸ್ ಪಬ್ಲಿಕ್ ಸ್ಕೂಲ್ ಲೇಡಿಹಿಲ್ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ 14 ವರ್ಷ ಹಾಗೂ 17 ವರ್ಷ ವಯೋಮಿತಿಯ ಬಾಲಕ ಬಾಲಕಿಯರ ಈಜು ಸ್ಪರ್ಧೆಯಲ್ಲಿ ಆಳ್ವಾಸ್ ಶಾಲೆಯ ವಿದ್ಯಾರ್ಥಿಗಳು 03 ಚಿನ್ನ, 06 ಬೆಳ್ಳಿ ಹಾಗೂ 03 ಕಂಚು ಒಟ್ಟು 12 ಪದಕಗಳನ್ನು ಪಡೆದುಕೊಂಡು 04 ವಿದ್ಯಾರ್ಥಿಗಳು ಬೆಂಗಳೂರಿನ ಬಸವನಗುಡಿ ಈಜುಕೊಳದಲ್ಲಿ ನಡೆಯುವ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಫಲಿತಾಂಶ:14 ವರ್ಷ ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ: ಪ್ರೀತಿ 400ಮೀ ಫ್ರೀಸ್ಟೈಲ್ (ಪ್ರಥಮ), 200ಮೀ ಐಎಂ (ದ್ವಿತೀಯ), 50ಮೀ ಫ್ರೀಸ್ಟೈಲ್ (ದ್ವಿತೀಯ)17 ವರ್ಷ ವಯೋಮಿತಿಯ ಬಾಲಕರ ವಿಭಾಗದಲ್ಲಿ: ಅಭಿಷೇಕ್ 200ಮೀ ಫ್ರೀಸ್ಟೈಲ್ (ಪ್ರಥಮ), 50ಮೀ ಬಟರ್‌ಫ್ಲೈ (ದ್ವಿತೀಯ), 400ಮೀ ಐಎಂ (ಪ್ರಥಮ), ದುರ್ಗೇಶ್ 50ಮೀ ಬ್ರೆಸ್ಟ್‌ಸ್ಟ್ರೋಕ್ (ತೃತೀಯ), 200ಮೀ ಐಎಂ (ದ್ವಿತೀಯ), 50ಮೀ ಫ್ರೀಸ್ಟೈಲ್ (ತೃತೀಯ), ರಿತ್ವಿಜ್ 100ಮೀ ಫ್ರೀಸ್ಟೈಲ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಆಶ್ರಯದಲ್ಲಿ ಅಂತರ್ ತರಗತಿ ಐಟಿ ಫೆಸ್ಟ್ “ಟೆಕ್ ಮಂಥನ್ 6.0” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಸಭಾ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಅವರು ವಿದ್ಯಾರ್ಥಿಗಳೇ ತಯಾರಿಸಿದ ಸಾಫ್ಟ್ವೇರ್ ಅಪ್ಲಿಕೇಶನ್ ಮೂಲಕ ಕಾರ್ಯಕ್ರಮವನ್ನು ವಿನೂತನವಾಗಿ ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಎಂಐಟಿಯ ಕ್ವಾಲಿಟಿ ಎಸೂರೆನ್ಸ್ ನ ಸಹಾಯಕ ನಿರ್ದೇಶಕರಾದ ಡಾ. ಶ್ವೇತಾ ವಿನ್ಸೆಂಟ್ ಅವರು ಮಾತನಾಡಿ “ತಂತ್ರಜ್ಞಾನದೊಂದಿಗೆ ಬುದ್ದಿಯನ್ನು ಮಂಥನ ಮಾಡಿದಾಗ ಮಾತ್ರ ಹೊಸ ಹೊಸ ಆಲೋಚನೆಗಳಿಂದಾಗಿ ಇನ್ನಷ್ಟು ಹೊಸ ಬಗೆಯ ತಂತ್ರಜ್ಞಾನಗಳನ್ನು ಕಂಡುಹಿಡಿಯಲು ಸಾಧ್ಯ” ಎಂದರು. ಇನ್ನೋರ್ವ ಮುಖ್ಯ ಅತಿಥಿ ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನ ಗಣಕಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರಭಾವತಿ ಅವರು ಮಾತನಾಡಿ, “ವಿದ್ಯಾರ್ಥಿಗಳು ಕ್ರಿಯಾಶೀಲತೆಯನ್ನು ಬೆಳೆಸಿಕೊಂಡು ಹೊಸ ಸಾಫ್ಟ್ವೇರ್ ಗಳನ್ನು ಅಭಿವೃದ್ಧಿಗೊಳಿಸಿದಾಗ ಭವಿಷ್ಯದಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯ” ಎಂದರು. ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ದೇಶದ ಸುಭಿಕ್ಷೆಗೆ ಕೃಷಿ ಮತ್ತು ಹೈನುಗಾರಿಕೆ ಮೂಲಕ ಕಾರಣವಾಗಿದೆ ಎಂದು ಕೆ.ಎಂ.ಎಫ್ ವಿಸ್ತರ್ಣಾಧಿಕಾರಿ ಉಮೇಶ್ ಕುಂದರ್ ಹೇಳಿದರು. ಅವರು ಸೋಮವಾರ ಪಾಂಡೇಶ್ವರ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ ಇದರ ವಾರ್ಷಿಕ ಸಾಮಾನ್ಯ ಸಭೆಯನ್ನುದ್ದೇಶಿಸಿ ಮಾತನಾಡಿದರು. ಪ್ರಸ್ತುತ ದಿನಗಳಲ್ಲಿ ಹೈನುಗಾರಿಕೆಯಲ್ಲಿ ಯುವ ಸಮೂಹ ಹೈನುಗಾರಿಕೆಯಲ್ಲಿ ಮುನ್ನುಗ್ಗುತ್ತಿರುವುದು ಆವಾಸಸ್ಥಾನ ಬೆಳವಣಿಗೆಯಾಗಿದೆ, ಹೈನುಗಾರಿಕೆ ಲಾಭದಾಯ ಉದ್ಯಮವಾಗಿರಿಸಿಕೊಂಡು ಕುಟುಂಬ ನಿರ್ವಹಣೆ ಸಾಧ್ಯ ಎಂದರು. ನಮ್ಮ ಹಿರಿಯರು ತೋರಿಸಿಕೊಟ್ಟಿದ್ದಾರೆ,ಹೈನುಗಾರಿಕೆ ವಿಧಾನವನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ ಹೆಚ್ಚು ಹೆಚ್ಚು ಗುಣಮಟ್ಟದ ಹಾಲನ್ನು ಸಂಘಕ್ಕೆ ನೀಡಲು ಸಲಹೆ ನೀಡಿದರ ಅವರು ಈ ಮೂಲಕ ತಾವು ಅಭಿವೃದ್ಧಿಗೊಂಡು ತಮ್ಮ ಸಂಘದ ಹಿತಕಾಯಲು ಕರೆಕೊಟ್ಟರಲ್ಲದೆ ಎಐ ತಂತ್ರಜ್ಞಾನದ ಬಲದಿಂದ ಅದೆಷ್ಟೊ ಯುವ ಸಮೂಹ ಗ್ರಾಮೀಣ ಚಟುವಟಿಕೆಗಳಾದ ಕೃಷಿ ಹೈನೋದ್ಯಮದಲ್ಲಿ ತೊಡಗಿಕೊಳ್ಳುತ್ತಿರುವುದು ಇತ್ತೀಚಿಗಿನ ದಿನಗಳಲ್ಲಿ ಬೆಳಕಿಗೆ ಬಂದಿದೆ,ಕೆ.ಎಂಎಫ್ ಹೈನುಗಾರರ ಹಿತ ಕಾಯಲು ಬದ್ಧವಾಗಿದ್ದು ಸಾಕಷ್ಟು ಯೋಜನೆಗಳನ್ನು ಹೊರತಂದಿದ್ದು ಅದರ ಪ್ರಯೋಜನ ಪಡೆಯಲು ಸಲಹೆ ನೀಡಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷೆ…

Read More