Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಕಂಬದಕೋಣೆಯ ಹಳಗೇರಿ ಗ್ರಾಮದ ಶ್ರೀ ಬೊಬ್ಬರ್ಯ ಮತ್ತು ಉಮ್ಮಲ್ತಿ ಹಾಗೂ ಸಪರಿವಾರ ದೈವಸ್ಥಾನದ 4ನೇ ವರ್ಷದ ವರ್ಧಂತ್ಯೋತ್ಸವ ಮೇ.14 ಬುಧವಾರದಂದು ನಡೆಯಲಿದೆ. ಅಂದು ಬೆಳಿಗ್ಗೆ ಗಂಟೆ 8.00ರಿಂದ ನಾಗದೇವರಿಗೆ ಶುದ್ಧಕಲಶಾಭಿಷೇಕ, ಸಂಜೆ ಗಂಟೆ 4.00ರಿಂದ ಶ್ರೀ ಬೊಬ್ಬರ್ಯ ಮತ್ತು ಉಮ್ಮಲ್ತಿ ಹಾಗೂ ಸಪರಿವಾರ ದೈವಗಳ ಕಲಾಭಿವೃದ್ಧಿಹೋಮ ನಡೆಯಲಿರುವುದು ಹಾಗೂ ರಾತ್ರಿ ಗಂಟೆ 8.00 ರಿಂದ ಅನ್ನಸಂತರ್ಪಣೆ ಜರುಗಲಿರುವುದು. ಸಾಂಸ್ಕೃತಿಕ ಕಾರ್ಯಕ್ರಮವಾಗಿ ರಾತ್ರಿ ಗಂಟೆ 8.00 ರಿಂದ 9.30 ರವರೆಗೆ ಮನು ಹಂದಾಡಿ ಮತ್ತು ಬಳಗದವರಿಂದ ಹಾಸ್ಯ ನಗೆಸಂಜೆ ಕಾರ್ಯಕ್ರಮ ಜರುಗಲಿರುವುದು. ಬಳಿಕ 9.30ರಿಂದ 10.30ರವರೆಗೆ ಸಂಗೀತ ರಸಮಂಜರಿ ಕಾರ್ಯಕ್ರಮ ಜರುಗಲಿರುವುದು. ರಾತ್ರಿ ಗಂಟೆ 10.30ರಿಂದ 12.00ರ ವರೆಗೆ ಸ್ಥಳೀಯ ನೃತ್ಯ ವೈಭವ ಕಾರ್ಯಕ್ರಮ ಜರುಗಲಿರುವುದು ಎಂದು ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ದೇಶದ ಯೋಧರ ಯಶಸ್ವಿಯ ಕಾರ್ಯಾಚರಣೆಗಾಗಿ ಹಾಗೂ ಸೇನೆಯ ಶಕ್ತಿ ಇನ್ನಷ್ಟು ಹೆಚ್ಚಲಿ ಎಂದು ಸಮಸ್ತ ವೀರ ಯೋಧರಿಗಾಗಿ ವಿಶೇಷ ಪೂಜಾ ಕಾರ್ಯಕ್ರಮ ಇಂದು ಭಾರತೀಯ ಜನತಾ ಪಾರ್ಟಿ ಕುಂದಾಪುರ ಮಂಡಲದ ನೇತೃತ್ವದಲ್ಲಿ ಪೆಹೆಲ್ಗಾಂ ಅಮಾಯಕರ ಹತ್ಯೆಮಾಡಿದ ಪಾಕಿಸ್ಥಾನದ ಪಾಪಿಗಳ ಮೇಲೆ ಪ್ರತಿಕಾರ ಮಾಡಿದ ಭಾರತೀಯ ಸೇನೆ ಹಾಗೂ ಕೇಂದ್ರ ಸರ್ಕಾರದ ಕಾರ್ಯದ ಅಂಗವಾಗಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಆನೆಗುಡ್ಡೆ ಕುಂಬಾಶಿಯಲ್ಲಿ ಭಾರತೀಯ ಯೋಧರ ಯಶಸ್ವಿಗಾಗಿ ಪೂಜಾಕಾರ್ಯ ನೆರವೇರಿತು. ಕಾರ್ಯಕ್ರಮದಲ್ಲಿ ಭಾರತೀಯ ಜನತಾ ಪಾರ್ಟಿ ಕುಂದಾಪುರ ಮಂಡಲದ ಅಧ್ಯಕ್ಷರಾದ ಸುರೇಶ್ ಶೆಟ್ಟಿ ಗೋಪಾಡಿ,, ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುಧೀರ್.ಕೆ.ಎಸ್., ಮಂಡಲ ಉಪಾಧ್ಯಕ್ಷರಾದ ಪ್ರಕಾಶ್ ಜಿ. ಪೂಜಾರಿ, ಸುನಿಲ್ ಶೆಟ್ಟಿ ಹೇರಿಕುದ್ರು, ಜಿಲ್ಲಾ ಕಾರ್ಯದರ್ಶಿ ಸದಾನಂದ ಬಳ್ಕೂರ್, ಅನಿತಾ ಶ್ರೀಧರ್, ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಪ್ರಸಾದ್ ಬಿಲ್ಲವ, ಮಂಡಲ ಕಾರ್ಯದರ್ಶಿ ರಾಜೇಶ್ ಶೆಟ್ಟಿ, ನೇತ್ರಾವತಿ ಮಡಿವಾಳ,, ಮನೀಶ್ ಬೀಜಾಡಿ,, ಓಬಿಸಿ ಮೋರ್ಚಾ ಅಧ್ಯಕ್ಷ ಸುರೇಂದ್ರ ಕಾಂಚನ್ ಸಂಗಮ್,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಪ್ರಸ್ತುತ ಕಾಲೇಜು ಜೀವನದಲ್ಲಿ ವಿದ್ಯಾರ್ಥಿಗಳು ಗುರು ಮುಖೇನ ಸರಿಯಾದ ಜ್ಞಾನಾರ್ಜನೆಯೊಂದಿಗೆ ಲಭ್ಯ ಅವಕಾಶಗಳ ಸದ್ಬಳಕೆಯಿಂದ ತಮ್ಮ ಕೌಶಲ್ಯ, ಪ್ರತಿಭೆಯನ್ನು ಪರಿಶ್ರಮ, ನಿಷ್ಠೆಯಿಂದ ಉದ್ದೀಪನಗೊಳಿಸಿಕೊಂಡರೆ ತಾವುಗಳಿಸಿದ ವಿದ್ಯೆಯ ವರ್ಚಸ್ಸು ಅಧಿಕವಾಗುತ್ತದೆ ಎಂದು ಉಡುಪಿ ಆಕಾಶ್ ಇನ್‌ಸ್ಟಿಟ್ಯೂಟ್ ಹಿರಿಯ ಉಪನ್ಯಾಸಕ ಹಾಗೂ ಖ್ಯಾತ ಯಕ್ಷಗಾನ ಕಲಾವಿದರಾದ ಡಾ. ಪ್ರದೀಪ ವಿ. ಸಾಮಗ ನುಡಿದರು ಅವರು ಇಲ್ಲಿನ ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ, ಅಂಚೆ ಕೋಟೇಶ್ವರ ಇಲ್ಲಿ ಪ್ರತಿಭಾ ದಿನಾಚರಣೆ ಸಿಂಚನ ಅಂತರ್ ತರಗತಿ ಪ್ರತಿಭಾ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ಶಿಸ್ತು ಬದ್ಧರಾಗಿ ಉತ್ಸಾಹದಿಂದ ಆಲಿಸುವ ಮನೋಭಾವ ಹಾಗೂ ಸುಸಂಸ್ಕೃತ ನಡವಳಿಕೆ ಹೊಂದುವ ಮೂಲಕ ಭಾರತೀಯ ಸಂಸ್ಕೃತಿಯನ್ನು ಎತ್ತಿಹಿಡಿಯಬೇಕು. ಪಠ್ಯದೊಂದಿಗೆ ಪಠ್ಯ ಪೂರಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಉತ್ಕೃಷ್ಠ ಜೀವನ ಮೌಲ್ಯಗಳನ್ನು ರೂಢಿಸಿಕೊಂಡರೆ ಉಜ್ವಲ ಭವಿಷ್ಯ ಸಾಧ್ಯ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪಾಲಿಟೆಕ್ನಿಕ್‌ಗಳಲ್ಲಿ ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶಾತಿಗಾಗಿ, ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಒಟ್ಟಾರೆ ಶೇ. 35 ರಷ್ಟು ಅಂಕ ಪಡೆದಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಉಡುಪಿಯ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶ ಬಯಸುವ ಅಭ್ಯರ್ಥಿಗಳು ಸಂಸ್ಥೆಯಲ್ಲಿ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮೇ 27 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರು, ಸರ್ಕಾರಿ ಪಾಲಿಟೆಕ್ನಿಕ್, ಉಡುಪಿ ಸಂಸ್ಥೆ ದೂ.ಸಂಖ್ಯೆ: 0820-2570244 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಶಿಕ್ಷಕರಾಗಿ ಸ್ಕೌಟ್ಸ್ ಮತ್ತು ಗೈಡ್ಸ್ ನಂತಹ ಸಂಸ್ಥೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವುದರಿಂದ ನಿಮ್ಮ ವ್ಯಕ್ತಿತ್ವ ವಿಕಸನಗೊಂಡು ವಿದ್ಯಾರ್ಥಿಗಳಿಗೂ ನೀವು ಮಾದರಿಯಾಗಬಲ್ಲಿರಿ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟೀ ವಿವೇಕ್ ಆಳ್ವ ಹೇಳಿದರು. ಅವರು ಕುವೆಂಪು ಸಭಾಂಗಣದಲ್ಲಿ ನಡೆದ ರಾಜ್ಯದ ಮೊದಲ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕದ ಆಳ್ವಾಸ್ ಶಿಕ್ಷಣ ಮಹಾವಿದ್ಯಾಲಯದ ರೇಂಜರ್ಸ್ ಘಟಕದ ಉದ್ಘಾಟನಾ ಸಮಾರಂಭದ ಉದ್ಘಾಟಕರಾಗಿ ಮಾತನಾಡಿದರು. ವಿದ್ಯಾರ್ಥಿಗಳು ತಮ್ಮ ಶಿಕ್ಷಕರನ್ನು ಅನುಕರಿಸುವುದು ಸರ್ವೇ ಸಾಮಾನ್ಯ. ಹಾಗಾಗಿ ರೇಂಜರ್ಸ್ ಘಟಕದಲ್ಲಿ ಸೇವಾ ಮನೋಭಾವವದಿಂದ ತೊಡಗಿಸಿಕೊಂಡು, ಮುಂದಿನ ಪೀಳಿಗೆಗೂ ಕೂಡಾ ಪ್ರೇರಣೆಯಾಗಿ ಎಂದರು. ಸ್ಕೌಟ್ಸ್ ಮತ್ತು ಗೈಡ್ಸ್‌ನಲ್ಲಿ ಸಿಗುವ ಹತ್ತು ಹಲವು ಚಟುವಟಿಕೆಗಳು ವ್ಯಕ್ತಿತ್ವ ನಿರ್ಮಾಣಕ್ಕೆ ಸಹಕಾರಿ. ಪ್ರತಿ ಶಾಲಾ ಕಾಲೇಜುಗಳಲ್ಲಿ ಕೂಡಾ ಸ್ಕೌಟ್ಸ್ ಮತ್ತು ಗೈಡ್ಸ್, ರೇಂಜರ್ಸ್ ರೋವರ್ಸ್, ಕಬ್ಸ್- ಬುಲ್‌ಬುಲ್ಸ್ ಘಟಕಗಳನ್ನು ಪ್ರಾರಂಭಿಸಬೇಕು ಎಂದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಹಾಯಕ ಸಂಘಟನಾ ಆಯುಕ್ತರಾದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಗ್ರಾಮ ಪಂಚಾಯತ್ ಉಪ ಚುನಾವಣೆ -2025 ಕ್ಕೆ ಸಂಬಂಧಿಸಿದಂತೆ, 1993 ರ ಕರ್ನಾಟಕ ಪಂಚಾಯತ್ ರಾಜ್ ಅಧಿನಿಯಮದ ಉಪಬಂಧಗಳ ಮೇರೆಗೆ ವಿವಿಧ ಕಾರಣಗಳಿಂದ ಆಕಸ್ಮಿಕವಾಗಿ ತೆರವಾಗಿರುವ ಜಿಲ್ಲೆಯಲ್ಲಿನ ಉಡುಪಿ ತಾಲೂಕಿನ ಉದ್ಯಾವರ ಗ್ರಾಮ ಪಂಚಾಯತಿಯ -1 (ಮೀಸಲಾತಿ-ಸಾಮಾನ್ಯ), ಕಾಪು ತಾಲೂಕಿನ ಬೆಳ್ಳೆ ಗ್ರಾಮ ಪಂಚಾಯತಿಯ ಕಟ್ಟಿಂಗೇರಿ -1 (ಮೀಸಲಾತಿ-ಹಿಂದುಳಿದ ವರ್ಗ ಅ (ಮಹಿಳೆ) ಹಾಗೂ ಪಡುಬಿದ್ರೆ ಗ್ರಾಮ ಪಂಚಾಯತಿಯ ಪಾದಬೆಟ್ಟು-1 (ಮೀಸಲಾತಿ-ಅನುಸೂಚಿತ ಜಾತಿ) ಸದಸ್ಯ ಸ್ಥಾನಗಳು ಸೇರಿದಂತೆ ಒಟ್ಟು 3 ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಯಲಿದೆ. ಚುನಾವಣೆಯ ವೇಳಾಪಟ್ಟಿಯನ್ನು ನಿಗಧಿಪಡಿಸಿ, ರಾಜ್ಯ ಚುನಾವಣಾ ಆಯೋಗವು ಅಧಿಸೂಚಿಸಿದ್ದು, ಕರ್ನಾಟಕ ಪಂಚಾಯತ್ ರಾಜ್ (ಚುನಾವಣೆಗಳನ್ನು ನಡೆಸುವ) ನಿಯಮಗಳು 1993 ರ ನಿಯಮ 12 ರ ಅನ್ವಯ ಉಪ ಚುನಾವಣೆಯ ವೇಳಾಪಟ್ಟಿಯನ್ನು ಈ ಕೆಳಗಿನಂತೆ ನಿಗಧಿಪಡಿಸಲಾಗಿರುತ್ತದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ತಿಳಿಸಿರುತ್ತಾರೆ. ಮೇ 8 ರಿಂದ ನಾಮಪತ್ರಗಳನ್ನು ಸ್ವೀಕರಿಸುವ ಪ್ರಾರಂಭದ ದಿನವಾಗಿದ್ದು,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೇಂದ್ರ ಪ್ರವಾಸೋದ್ಯಮ ಮತ್ತು ಸಾಂಸ್ಕೃತಿಕ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್ ಅವರು ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮರವಂತೆ, ಬೈಂದೂರು ಹಾಗೂ ಕೊಲ್ಲೂರಿಗೆ ಗುರುವಾರ ಸಂಜೆ ಭೇಟಿ ನೀಡಿದರು. ಈ ವೇಳೆ ಅವರು ಮಾತನಾಡಿ, ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮರವಂತೆ ಸಮುದ್ರ ದಡದಲ್ಲಿ ಒಂದೆಡೆ ಸಮುದ್ರ ಮತ್ತೊಂದೆಡೆ ನದಿ ನಡುವೆ ರಸ್ತೆ ಹಾದು ಹೋಗಿದ್ದು ಇದೊಂದು ಅದ್ಭುತ ಪ್ರದೇಶವಾಗಿದೆ. ಸೋಮೇಶ್ವರವೂ ಸುಂದರ ಪ್ರದೇಶವಾಗಿದೆ. ಇಲ್ಲಿನ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರಕಾರ ಯೋಜನೆ‌ ಸಿದ್ಧಪಡಿಸಿ ನೀಡಿದಲ್ಲಿ ಅಗತ್ಯ ಕ್ರಮ ವಹಿಸಲಾಗುವುದು. ಸಂಸದ ರಾಘವೇಂದ್ರ ಅವರ ಕ್ಷೇತ್ರದ ಪ್ರವಾಸೋದ್ಯಮದ ಸಮಗ್ರ ಅಭಿವೃದ್ಧಿಯ ದೂರದೃಷ್ಟಿಯ ವಿಶೇಷ ಕಾಳಜಿಯ ಮೇರೆಗೆ ಮಾಡಿಕೊಂಡಿದ್ದ ಮನವಿಯ ಹಿನ್ನೆಲೆಯಲ್ಲಿ ಭೇಟಿ ನೀಡಿರುವುದಾಗಿ ತಿಳಿಸಿದರು. ಸಂಸದ ಬಿ.ವೈ. ರಾಘವೇಂದ್ರ ಮಾತನಾಡಿ, ಬೈಂದೂರು ಕ್ಷೇತ್ರದ ಕೊಲ್ಲೂರು ಕ್ಷೇತ್ರದ ಅಭಿವೃದ್ಧಿಯ ಕುರಿತು ಕಳೆದ ಅಧಿವೇಶನದ ಸಮಯದಲ್ಲಿ ಸ್ಥಳೀಯ ಶಾಸಕರು ಹಾಗೂ ಮುಖಂಡರ ಜೊತೆಗೆ ಕೇಂದ್ರ ಪ್ರವಾಸೋಧ್ಯಮ ಸಚಿವರನ್ನು ಭೇಟಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಉಡುಪಿ ಮತ್ತು  ಬೈಂದೂರು ತಾಲೂಕು ಗ್ಯಾರಂಟಿ ಅನುಷ್ಟಾನ ಸಮಿತಿ ವತಿಯಿಂದ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಯುವನಿಧಿಯ ಕುರಿತು ಪ್ರಚಾರ ಮತ್ತು ನೋಂದಣಿ ಅಭಿಯಾನ ನಡೆಯಿತು. ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಅಧ್ಯಕ್ಷರಾದ ಮೋಹನ್‌ ಪೂಜಾರಿ ಉಪ್ಪುಂದ ಅವರು ಸರ್ಕಾರದ ಈ ಯೋಜನೆ ನಿರುದ್ಯೋಗಿ ಯುವ ಪೀಳಿಗೆಗೆ ತುಂಬಾ ಅನುಕೂಲಕರವಾಗಿದೆ. ಪದವಿ ಮುಗಿದು ಉದ್ಯೋಗ ಸಿಗದ ಅರ್ಹ ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕರೆ ನೀಡಿದರು.   ಉದ್ಯೋಗ ವಿನಿಮಯ ಕಛೇರಿಯ ಸಿಬ್ಬಂದಿ ಲತಾ ಅವರು ವಿದ್ಯಾರ್ಥಿಗಳಿಗೆ ಯುವನಿಧಿ ಯೋಜನೆ ಪಡೆದುಕೊಳ್ಳುವ ಬಗ್ಗೆ ಮತ್ತು ಮಾನದಂಡಗಳ ಕುರಿತು ಪೂರ್ಣ ಮಾಹಿತಿ ನೀಡಿದರು. ಪ್ರಾಶುಪಾಲರಾದ ನಾಗರಾಜ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ  ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಸದಸ್ಯರಾದ ಬಾಬು ದೇವಾಡಿಗ, ಅನಿಶ್ ಕುಮಾರ್, ಸೂರ್ಯಕಾಂತಿ, ಮಾಲತಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಉಡುಪಿ ಕೊಳಲಗಿರಿಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿ.ಟಿ.ಟಿ.ಸಿ) ದಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನ ತಾಂತ್ರಿಕ ಡಿಪ್ಲೋಮಾ ಕೋರ್ಸ್‌ಗಳ ಪ್ರವೇಶಾತಿಗಾಗಿ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಜಿ.ಟಿ.ಟಿ.ಸಿ ಕೇಂದ್ರದಲ್ಲಿ 3+1 ವರ್ಷದ ಡಿಪ್ಲೋಮಾ ಇನ್ ಟೂಲ್ ಡೈ ಮೇಕಿಂಗ್, ಡಿಪ್ಲೋಮಾ ಇನ್ ಮೆಕಾಟ್ರಾನಿಕ್ಸ್ ಮತ್ತು ಡಿಪ್ಲೋಮಾ ಇನ್ ಪ್ರಿಸಿಶನ್ ಮ್ಯಾನುಪ್ಯಾಕ್ಚರಿಂಗ್ ಕೋರ್ಸ್ಗಳು ಲಭ್ಯವಿದ್ದು, ಐ.ಟಿ.ಐ ಮತ್ತು ಪಿ.ಯು.ಸಿ ವಿಜ್ಞಾನ ವಿಭಾಗದಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ನೇರವಾಗಿ ಎರಡನೇ ವರ್ಷದ ಡಿಪ್ಲೋಮಾ ಕೋರ್ಸ್‌ಗೆ ಪ್ರವೇಶ ಪಡೆಯಬಹುದಾಗಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮೇ 20 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಕೊಳಲಗಿರಿ, ಉಡುಪಿ ಮೊಬೈಲ್ ಸಂಖ್ಯೆ 9880510585 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಪ್ರಾಂಶುಪಾಲರ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವದ ಪ್ರಯುಕ್ತ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಕಾಲೇಜಿನ ಬಿ.ಎಮ್.ಎಸ್. ಕ್ರೀಡಾಂಗಣದ ಬಯಲು ಸಭಾಂಗಣದಲ್ಲಿ ನಡೆಯಿತು. ಕಾಲೇಜಿನಲ್ಲಿ 2024-25ನೇ ಶೈಕ್ಷಣಿಕ ಸಾಲಿನಲ್ಲಿ ಹಮ್ಮಿಕೊಂಡ ವಿವಿಧ ಶೈಕ್ಷಣಿಕ, ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ವಿಜೇತರಿಗೆ ಹಾಗೂ ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು. ಈ ಸಂದರ್ಭ ಯಕ್ಷಗಾನ ಕಲಾರಂಗ ಉಡುಪಿಯ ಕಾರ್ಯದರ್ಶಿ ಮುರಳಿ ಕಡೇಕಾರ್ ಮಾತನಾಡಿ, ಪಠ್ಯದೊಂದಿಗಿನ ಪಠ್ಯಪೂರಕ ಚಟುವಟಿಕೆಗಳು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಸಹಕಾರಿ ಎಂದರು. ಇನ್ನೋರ್ವ ಮುಖ್ಯ ಅತಿಥಿಗಳಾದ ಮಂಗಳೂರಿನ ಕೆನರಾ ಕಾಲೇಜಿನ ವ್ಯವಹಾರ ನಿರ್ವಹಣಾ ವಿಭಾಗದ ಮುಖ್ಯಸ್ಥೆ ಸೀಮಾ ಎಸ್. ಪ್ರಭು ಮಾತನಾಡಿ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ವಿದ್ಯಾರ್ಥಿಗಳನ್ನು ಕ್ರಿಯಾಶೀಲವಾಗಿಡುವುದಲ್ಲದೆ ಶಿಸ್ತು ಬದ್ಧವಾದ ಶೈಕ್ಷಣಿಕ ವಾತಾವರಣವನ್ನು ಸೃಷ್ಟಿಸುತ್ತದೆ ಎಂದರು. ಮೋಹನೇಶ್ ಚಂಗಪ್ಪ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಅಭಿನಂದಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ…

Read More