Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇತಿಹಾಸದಲ್ಲೆ ಮೊದಲೆಂಬಂತೆ ವೈಭವದ ಶ್ರೀನಿವಾಸ ಕಲ್ಯಾಣೋತ್ಸವ ಸಾಸ್ತಾನದ ಕಾರ್ತಿಕ್ ಎಸ್ಟೇಟ್ ನಲ್ಲಿ ಸಾಕ್ಷಿಯಾಯಿತು. ಸಾಲಿಗ್ರಾಮದ ಶ್ರೀ ಗುರುನರಸಿಂಹ ದೇಗುಲದಿಂದ ಶ್ರೀನಿವಾಸ ಪದ್ಮಾವತಿ ಒಳಗೊಂಡ ಮೂರ್ತಿ ವರ್ಣರಂಜಿತ ಮೆರವಣಿಗೆ ಮೂಲಕ ರಾಷ್ಟ್ರೀಯ ಹೆದ್ದಾರಿ ಮೂಲಕ ಸಂಚರಿಸಿಕೊಂಡು ಶ್ರೀನಿವಾಸ ಕಲ್ಯಾಣ ನಡೆಯುವ ಸ್ಥಳಕ್ಕೆ ಕರೆ ತರಲಾಯಿತು. ಗಮನ ಸೆಳೆಚ ವರ್ಣರಂಜಿತ ಮೆರೆವಣಿಗೆ ಸಾಲಿಗ್ರಾಮದಿಂದ ಹೊರಟ ಪುರಮೆರವಣಿಗೆಯಲ್ಲಿ ಸುಮಾರು ಹತ್ತಕ್ಕೂ ಅಧಿಕ ಕುಣಿತ ಭಜನಾ ತಂಡಗಳು, ಕೀಲು ಕುದುರೆ, ಕೋಲಾಟ ಭಜನೆ, ಚಂಡೆ ವಾದನ, ಪಂಡಾರಪುರ ಹೊಲುವ ಭಜನಾ ತಂಡ, ಸಾವಿರಾರು ಶ್ರೀನಿವಾಸ ಭಕ್ತರು ಪೂರ್ಣಕುಂಭ ಕಳಶ ಹಿಡಿದು ಮೆರವಣಿಗೆಯೂದ್ದಕ್ಕೂ ಗೋವಿಂದನ ನಾಮ ಸ್ಮರಣೆಗೈಯುವ ದೃಶ್ಯ ವಿಶೇಷವಾಗಿ ಪದ್ಮಾವತಿ ಸಹಿತ ಶ್ರೀನಿವಾಸ ದೇವರ ದಿವ್ಯ ಶೋಭಾಯಾತ್ರೆ ಗಮನ ಸೆಳೆಯಿತು. ಬೆಳಿಗ್ಗೆ 9.00 ರಿಂದ ಸ್ಥಳ ಶುದ್ದಿ, ಪುಣ್ಯಾಹವಾಚನ, ಸಾಮೂಹಿಕ ಸತ್ಯನಾರಾಯಣ ಪೂಜೆ, ಸಾಮೂಹಿಕ ವಿಷ್ಣು ಸಹಸ್ರನಾಮ ಪಾರಾಯಣ, ಮಧ್ಯಾಹ್ನ 12 ರಿಂದ ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನಡೆಯಿತು. ಗೋದುಳಿ ಮುಹೂರ್ತ ನಡೆದ ವಿವಾಹಸಂಜೆ 5ರಿಂದ ಶ್ರೀ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ರೈತರು ತಮ್ಮ ಜಮೀನಿನ ಪಹಣಿಯನ್ನು ಆಧಾರ್‌ಗೆ ಲಿಂಕ್ ಮಾಡುವ ಕಾರ್ಯವು ಪ್ರಗತಿಯಲ್ಲಿದ್ದು, ಜಿಲ್ಲೆಯಲ್ಲಿ ಈವರೆಗೆ ಶೇ. 85 ರಷ್ಟು ಮಾತ್ರ ಪ್ರಗತಿ ಆಗಿರುತ್ತದೆ. ಮುಂದಿನ ಒಂದು ವಾರದೊಳಗೆ ಜಿಲ್ಲೆಯಲ್ಲಿ ಬಾಕಿ ಇರುವ ಭೂಮಾಲೀಕರ ಜಮೀನಿನ ಪಹಣಿಯನ್ನು ಆಧಾರ್‌ಗೆ ಲಿಂಕ್ ಮಾಡುವ ಬಗ್ಗೆ ಸರ್ಕಾರದಿಂದ ನಿರ್ದೇಶನ ನೀಡಲಾಗಿದ್ದು, ಆದರೆ, ಜಿಲ್ಲೆಯಲ್ಲಿ ನಿರೀಕ್ಷಿತ ಪ್ರಗತಿ ಆಗಿರುವುದಿಲ್ಲ. ರೈತರಿಗೆ ನಿಗದಿತ ಸಮಯದಲ್ಲಿ ಸರ್ಕಾರದ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಹಾಗೂ ಅಕ್ರಮ ಖಾತಾ ಬದಲಾವಣೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ ಆಧಾರ್ ಜೋಡಣೆಯು ಅವಶ್ಯಕವಾಗಿದ್ದು, ಜಿಲ್ಲೆಯ ರೈತರು ಮೂರು ದಿನದೊಳಗಾಗಿ ಪಹಣಿ ಆಧಾರ್ ದಾಖಲಾತಿಗಳೊಂದಿಗೆ ಹಾಗೂ ಆಧಾರ್ ಜೋಡಣೆಯಾಗಿರುವ ಮೊಬೈಲ್ ನೊಂದಿಗೆ ಸಂಬಂಧಪಟ್ಟ ಗ್ರಾಮ ಆಡಳಿತ ಅಧಿಕಾರಿಯವರನ್ನು ಸಂಪರ್ಕಿಸಿ ಆಧಾರ್ ಜೋಡಣೆ ಮಾಡಿಸಿಕೊಳ್ಳಬಹುದಾಗಿದೆ. ಜಿಲ್ಲೆಯಲ್ಲಿ ಜಮೀನು ಹೊಂದಿ ಬೇರೆ ರಾಜ್ಯ ಹಾಗೂ ವಿದೇಶದಲ್ಲಿ ವಾಸವಿದ್ದ ಭೂಮಾಲೀಕರು ಸ್ವಗ್ರಾಮಕ್ಕೆ ಬಂದ ಕೂಡಲೇ ಅಥವಾ ಅವರ ಕುಟುಂಬಸ್ಥರು/ಸಂಬಂಧಿಕರು ಜಿಲ್ಲೆಯಲ್ಲಿದ್ದಲ್ಲಿ ಕೂಡಲೇ ಸಂಬಂಧಪಟ್ಟ ಗ್ರಾಮ ಆಡಳಿತ ಅಧಿಕಾರಿಗಳನ್ನು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೊಲ್ಲೂರು: ಗ್ರಾಮದ ಸಲಗೇರಿ ನಿವಾಸಿ ದೇವದತ್ (17) ಎಂಬ ಯುವಕನು ಒಂಬತ್ತನೇ ತರಗತಿ ಅನುತ್ತೀರ್ಣನಾದ ಹಿನ್ನಲೆ ಕಳೆದ ಮೂರು ವರ್ಷಗಳಿಂದ ಊರಿನಲ್ಲಿ ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದು, ವಾರಕ್ಕೆ ಒಂದೆರೆಡು ಬಾರಿ ಮನೆಗೆ ಹೋಗಿಬರುತ್ತಿರುತ್ತಾನೆ. ಮಾರ್ಚ್ 20 ರಂದು ಮನೆಗೆ ಬರುವುದಾಗಿ ಹೇಳಿದವನು ಇದೂವರೆಗೂ ಮನೆಗೂ ಬಾರದೇ ಸಂಬಧಿಕರ ಮನೆಗೂ ಹೋಗದೇ ನಾಪತ್ತೆಯಾಗಿರುತ್ತಾರೆ. 5 ಅಡಿ ಎತ್ತರ, ಉರುಟು ಮುಖ, ಎಣ್ಣೆಕಪ್ಪು ಮೈಬಣ್ಣ, ಸಾಧರಾಣ ಶರೀರ ಹೊಂದಿರುವ ಅವರು ಕನ್ನಡ ಹಾಗೂ ಮಲಯಾಳಂ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕೊಲ್ಲೂರು ಪೊಲೀಸ್ ಠಾಣೆ ದೂ.ಸಂಖ್ಯೆ: 08254-258233, ಮೊ.ನಂ:9480805460, ಬೈಂದೂರು ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 08254-251031, ಮೊ.ನಂ:9480805434 ಹಾಗೂ ಕಂಟ್ರೋಲ್ ರೂಂ 100 (0820-2526444) ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕೊಲ್ಲೂರು ಪೊಲೀಸ್ ಠಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕೋಟ ಮಣೂರು ಪಡುಕರೆ ಶ್ರೀ ಉದ್ಬವಲಿಂಗೇಶ್ವರ ಭಜನಾ ಮಂದಿರ 39ನೇ ವರ್ಷದ ಭಜನಾ ಮಂಗಲೋತ್ಸವ ಕಾರ್ಯಕ್ರಮವು ಉದ್ಭವಲಿಂಗೇಶ್ವರ ವಠಾರದಲ್ಲಿ ಎರಡು ದಿನಗಳ ಕಾಲ ವೈಭವದಿಂದ ಜರಗಿತು. ಮೊದಲ ದಿನ ಭಜನಾ ಮಂಗಲೋತ್ಸವ ಪ್ರಯುಕ್ತ ಭಜನಾ ಕಾರ್ಯಕ್ರಮವನ್ನು ಕೋಟದ ಅಮೃತೇಶ್ವರಿ ದೇಗುಲದ ಅಧ್ಯಕ್ಷ ಆನಂದ ಸಿ. ಕುಂದರ್ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ 6 ಭಜನಾ ತಂಡಗಳು ಭಾಗವಹಿಸಿದ್ದವು. ಈ ಸಂದರ್ಭದಲ್ಲಿ ಭಜನಾ ಮಂದಿರದ ಅಧ್ಯಕ್ಷ ನವೀನ ಕುಮಾರ್, ಗೌರವ ಅಧ್ಯಕ್ಷ ಹರೀಶ್ ಕುಮಾರ, ಕೋಟ ಮೆಸ್ಕಾಂನ ದಿನೇಶ ಪುತ್ರನ್ ವಿಠಲವಾಡಿ, ಭಜನಾ ಮಂದಿರದ ಪ್ರಮುಖರಾದ ಪ್ರಮೋದ್, ವಿಜಯ, ವಿನಯ, ಚೈತ್ರ , ಯೊಗೇಶ ಉಪಸ್ಥಿತರಿದ್ದರು. ಎರಡನೇಯ ದಿನ ಧಾರ್ಮಿಕ ಸಭಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣ್ ಕುಮಾರ ಕೊಡ್ಗಿ ಶುಭ ಹಾರೈಸಿದರು. ಕಾರ್ಯಕ್ರಮವನ್ನು ಮೂಡುಗಿಳಿಯಾರು ಜನಸೇವಾ ಟ್ರಸ್ಟ್ ರಿ. ಪ್ರವರ್ತಕರಾದ ವಸಂತ ಗಿಳಿಯಾರ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿಸಾಧನೆಗೈದ ಸಾಧಕರಾದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಅರಣ್ಯ ಇಲಾಖೆ ಕುಂದಾಪುರ ಪ್ರಾದೇಶಿಕ ವಿಭಾಗದಿಂದ ಸೇವೆಯಿಂದ ನಿವೃತ್ತರಾದ ಕುಂದಾಪುರ ವಿಭಾಗದ ವಲಯ ಅರಣ್ಯಾಧಿಕಾರಿ ಶಿವರಾಮ ಆಚಾರ್ ಅವರಿಗೆ ಬೀಳ್ಕೊಡುಗೆ ಸಮಾರಂಭ ಇಲ್ಲಿನ ರೋಟರಿ ಭವನದಲ್ಲಿ ಜರುಗಿತು. 1986ರಲ್ಲಿ ಮಡಿಕೇರಿ ವಿಭಾಗದ ಕುಶಲನಗರದಲ್ಲಿ ಉಪ ವಲಯ ಅರಣ್ಯಾಧಿಕಾರಿಯಾಗಿ ಸೇವೆ ಆರಂಭಿಸಿದ ಶಿವರಾಮ ಆಚಾರ್ ಅವರು 1996ರಲ್ಲಿ ವಲಯ ಅರಣ್ಯಾಧಿಕಾರಿಯಾಗಿ ಪದೋನ್ನತಿ ಹೊಂದಿದರು. ಬಳಿಕ ವಿವಿಧೆಡೆ ಸೇವೆ ಸಲ್ಲಿಸಿ ನಿವೃತ್ತಿಗೆ ಮೊದಲು ಕುಂದಾಪುರ ವಲಯದಲ್ಲಿ ವಲಯ ಅರಣ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಕುಂದಾಪುರ ವಿಭಾಗದ ಉಪ‌ ಅರಣ್ಯ ಸಂರಕ್ಷಣಾಧಿಕಾರಿ ಗಣಪತಿ ಕೆ. ಬಿಳ್ಕೊಡುಗೆ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪಿ. ಶ್ರೀಧರ್‌, ಮ್ಯಾನೇಜರ್‌ ಉದಯ್‌ ಕುಮಾರ್‌ ಅತಿಥಿಗಳಾಗಿದ್ದರು. ವಲಯ ಅರಣ್ಯಾಧಿಕಾರಿಗಳಾದ ಪ್ರಭಾಕರ ಕುಲಾಲ್‌, ಸಂದೇಶ್ ಕುಮಾರ್‌, ಸಿದ್ದೇಶ್‌ ಸೇರಿದಂತೆ ವಿವಿಧ ವಲಯಗಳ ಅರಣ್ಯಾಧಿಕಾರಿಗಳು, ಗೇರು ಅಭಿವೃದ್ಧಿ ನಿಗಮದ ಸಿಬ್ಬಂದಿಗಳು, ಉಪವಲಯ ಅರಣ್ಯಾಧಿಕಾರಿಗಳ ಸಂಘ, ಅರಣ್ಯ ರಕ್ಷಕ – ವೀಕ್ಷಕ ಸಂಘ, ಸರಕಾರಿ ನೌಕರರ ಸಂಘದ ಪದಾಧಿಕಾರಿಗಳು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಟೀಮ್ ಊರ್ಮನಿ ಮಕ್ಕಳ ಸಮಾಜ ಸೇವಾ ತಂಡ ಕೊರ್ಗಿ 5ನೇ ವರ್ಷದ ಪೂರೈಸಿದ ಅಂಗವಾಗಿ ಬಡ ಇಳಿವಯಸ್ಸಿನ ಹಿರಿಯ ಜೀವಗಳಿಗೆ ನಡಿಗೆಗೊಂದು ಊರುಗೋಲು ಕಾರ್ಯಕ್ರಮದಡಿ  ಅಗತ್ಯವುಳ್ಳ ಫಲಾನುಭವಿಗಳಿಗೆ ಉಚಿತ ವಾಕರ್ ಮತ್ತು ಸ್ಟಿಕ್‌ನ್ನು ಅವರ ಮನೆಗೆ ತೆರಳಿ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಕೊರ್ಗಿ ಮತ್ತು ಕೆದೂರು ಪ್ರಾಥಮಿಕ ಆರೋಗ್ಯ ಕೇಂದ್ರ ವೈಧ್ಯಾಧಿಕಾರಿ ಡಾ. ಅರ್ಪಿತಾ, ಕೊರ್ಗಿ ಆಶಾ ಕಾರ್ಯಕರ್ತೆ ಗಂಗೆ ಕುಲಾಲ್, ಟೀಮ್ ಊರ್ಮನಿ ಮಕ್ಕಳ್ ತಂಡದ ಸದಸ್ಯರಾದ ಸಂತೋಷ ಕೊರ್ಗಿ, ನಾಗೇಶ್ ಗಾವಳಿ, ಕೃಷ್ಣ ಕೊರ್ಗಿ, ನಾಗೇಶ್ ಸಿದ್ದಾಪುರ, ಚಂದ್ರ ಕೊರ್ಗಿ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಮೂಡುಬಿದಿರೆಯ ಸುತ್ತಮುತ್ತಲಿನ ಪರಿಸರದಲ್ಲಿ ಮೊಟ್ಟ ಮೊದಲ ಬಾರಿಗೆ ವೈಯಕ್ತಿಕ ಸೌಂದರ್ಯ ಹಾಗೂ ಆರೈಕೆ ಕ್ಷೇತ್ರಕ್ಕೆ ಸಂಬಂದಿಸಿದ  ಆಳ್ವಾಸ್ ಅಕಾಡೆಮಿ ಆಫ್ ಮೇಕಪ್ ಆರ್ಟಿಸ್ಟ್ರಿ, ಪೋಲಿಶ್- ನೈಲ್ಸ್ ಆಂಡ್ ಬ್ಯೂಟಿ, ಹೆಲ್ದೀ ಸಿಪ್ ಹಾಗೂ ಲ್ಯಾಕ್ಟೇಶನ್ ಕನ್‌ಸಲ್ಟೇನ್ಸಿ ಸರ್ವೀಸಸ್ ಅನ್ನು ಮೂಡುಬಿದಿರೆಯ ಆಳ್ವಾಸ್ ಆಸ್ಥೇಟಿಕ್ ರಿಜುವನೇಶನ್ ಸೆಂಟರ್ ಆವರಣದಲ್ಲಿ ಯುಗಾದಿಯ ಶುಭ ಸಂದರ್ಭದಂದು ಉದ್ಘಾಟನೆಗೊಳಿಸಲಾಯಿತು.  ಮಂಗಳೂರಿನ ಕಾಸ್ಮೆಟಿಕ್ ಸ್ತ್ರೀರೋಗ ತಜ್ಞೆ ಹಾಗೂ ಮಿಸೆಸ್ ಇಂಡಿಯಾ ಇಂಡಿಪೆಂಡೆಂಟ್ ಇಂಟರ್ನ್ಯಾಷನಲ್ ಖ್ಯಾತಿಯ ಡಾ. ನಿಶಿತಾ ಶೆಟ್ಟಿಯಾನ್ ಫೆನಾಂಡಿಸ್ ಲೋಕಾರ್ಪಣೆಗೊಳಿಸಿದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಡಾ. ನಿಶಿತಾ ಶೆಟ್ಟಿಯಾನ್ ಫೆನಾಂಡಿಸ್, ನಿಮ್ಮ ಕನಸ್ಸನ್ನು ನನಸಾಗಿಸಲು ಸದಾ ಕಾರ್ಯಪ್ರವೃತ್ತರಾಗಿರಿ. ಎಂದೂ ಹಿಂಜರಿಕೆ ಬೇಡ. ನಿಮ್ಮ ಗುರಿಗಳನ್ನು ಸಾಧಿಸಲು ನಿಮಗೆ ಉತ್ಸಾಹವಿದ್ದರೆ ಖಂಡಿತ ಸಮಯ ಲಭಿಸುತ್ತದೆ ಎಂದರು. ಮೇಕಪ್ ಕಲೆ ಸಾಮಾನ್ಯವಾಗಿ ಮಹಿಳೆಯರಿಗೆ ಮಾತ್ರ ಎಂಬ ತಪ್ಪು ಕಲ್ಪನೆ ಇದೆ. ಆದರೆ, ಈ ಕಲೆಯು ಲಿಂಗಭೇದವನ್ನು ಮೀರಿ ಎಲ್ಲರಿಗೂ …

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲಾ ರೆಡ್‌ಕ್ರಾಸ್ ಘಟಕದ ಸಭಾಪತಿಗಳಾಗಿದ್ದ ಬಸ್ರೂರು ರಾಜೀವ್ ಶೆಟ್ಟಿ ಅವರು ಕರ್ನಾಟಕ ರಾಜ್ಯ ರೆಡ್‌ಕ್ರಾಸ್ ಸಂಸ್ಥೆಯ ಸಭಾಪತಿಗಳಾಗಿ ಆಯ್ಕೆಯಾಗಿರುತ್ತಾರೆ.   ಬೆಂಗಳೂರಿನ ಕೇಂದ್ರ ಕಛೇರಿಯಲ್ಲಿ ನಡೆದ ಆಡಳಿತ ಮಂಡಳಿಯ ಸಭೆಯಲ್ಲಿ ಚುನಾವಣೆ ನಡೆದಿದ್ದು, ರಾಜ್ಯ ಕರ್ನಾಟಕ ಸರಕಾರದ ಹಣಕಾಸು ಕಾರ್ಯದರ್ಶಿಗಳಾದ ಡಾ. ವಿಶಾಲ್ ಆರ್. ಅವರನ್ನು ರೆಡ್‌ಕ್ರಾಸ್ ಸಂಸ್ಥೆಯ ಅಧ್ಯಕ್ಷರಾದ ಕರ್ನಾಟಕದ ರಾಜ್ಯಪಾಲರು ಚುನಾವಣಾಧಿಕಾರಿಯಾಗಿ ನೇಮಕ ಮಾಡಿದ್ದರು. ಚುನಾವಣೆಯಲ್ಲಿ 30 ಜಿಲ್ಲೆಗಳನ್ನು ಪ್ರತಿನಿಧಿಸುವ ಪ್ರತಿನಿಧಿಗಳು ಭಾಗವಹಿಸಿದ್ದು, ಅಂತಿಮವಾಗಿ ಬಸ್ರೂರು ರಾಜೀವ್ ಶೆಟ್ಟಿ ಅವರು ರಾಜ್ಯ ರೆಡ್‌ಕ್ರಾಸ್ ಸಂಸ್ಥೆಯ ಸಭಾಪತಿಗಳಾಗಿ ಆಯ್ಕೆಯಾದರು. ಚುನಾವಣಾಧಿಕಾರಿ ಡಾ. ವಿಶಾಲ್ ಅವರು ರಾಜೀವ್ ಶೆಟ್ಟಿ ಅವರಿಗೆ ಪ್ರಮಾಣ ಪತ್ರ ನೀಡಿದರು. ಇದೇ ಸಂದರ್ಭದಲ್ಲಿ ಕೊಪ್ಪಳ ಘಟಕದ ಡಾ. ಶ್ರೀನಿವಾಸ ಹ್ಯಾಟಿ ಅವರನ್ನು ಉಪಸಭಾಪತಿಗಳಾಗಿ ಆಯ್ಕೆ ಮಾಡಲಾಯಿತು. ರಾಜೀವ್ ಶೆಟ್ಟಿ ಅವರು ಈ ಹಿಂದೆ ಎರಡು ಬಾರಿ ರಾಜ್ಯ ಸಭಾಪತಿಯಾಗಿ ಕಾರ್ಯ ನಿರ್ವಹಿಸಿದ್ದರು. ಲಯನ್ಸ್ ಜಿಲ್ಲಾ ಗವರ್ನರ್‌ರಾಗಿ, ಕೇಂದ್ರ ಸರಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಇಂದ್ರಾಳಿ ರೈಲ್ವೇ ಮೇಲ್ಸೇತುವೆ ನಿರ್ಮಾಣದ ಅಂತಿಮ ಘಟ್ಟದ ಕಾಮಗಾರಿಗಳನ್ನು ಕೈಗೊಳ್ಳಲು ಎಲ್ಲಾ ರೀತಿಯ ಅಗತ್ಯ ಸಿದ್ಥತೆಗಳನ್ನು ಮಾಡಿಕೊಳ್ಳುವುದರೊಂದಿಗೆ ಶೀಘ್ರವಾಗಿ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಅಂದು ರಾಷ್ಟ್ರೀಯ ಹೆದ್ದಾರಿ 169 ಎ ರ ಉಡುಪಿ ನಗರ ಹಾಗೂ ಮಣಿಪಾಲ್ ರಸ್ತೆಯ ಇಂದ್ರಾಳಿ ಸಮೀಪದ ರೈಲ್ವೇ ಮೇಲ್ಸೇತುವೆ ಅಭಿವೃದ್ಧಿ ಕಾಮಗಾರಿಯ ಪ್ರಗತಿಯನ್ನು ವೀಕ್ಷಿಸಿ ಮಾತನಾಡುತ್ತಿದ್ದರು. ರೈಲ್ವೇ ಮೇಲ್ಸೇತುವೆಯಾಗಿ ಕಬ್ಬಿಣದ ಗರ್ಡರ್ ನಿರ್ಮಾಣದ ವೆಲ್ಡಿಂಗ್ ಕಾಮಗಾರಿಯು ಈಗಾಗಲೇ ಪೂರ್ಣಗೊಂಡಿದ್ದು, ರೈಲ್ವೆ ಇಲಾಖೆಯ ವತಿಯಿಂದ ವೆಲ್ಡಿಂಗ್ ಕಾರ್ಯದ ಗುಣಮಟ್ಟವನ್ನು ಸ್ಥಳೀಯವಾಗಿ ಇನ್ಸ್ಪೆಕ್ಷನ್ ನಡೆಸಲಾಗಿದೆ. ಅಂತಿಮವಾಗಿ ರೈಲ್ವೇ ಡಿಸೈನ್ ಮತ್ತು ಸೇಫ್ಟಿ ಆರ್ಗನೈಸೇಷನ್ ಲಕ್ನೋ ಅವರಿಂದ ತ್ವರಿತವಾಗಿ ಕೈಗೊಳ್ಳಬೇಕು ಎಂದರು. ರೈಲ್ವೇ ಮೇಲ್ಸೇತುವೆಯಾಗಿ ಕಬ್ಬಿಣದ ಗರ್ಡರ್ ಅನ್ನು ಅಳವಡಿಸಲು ಅಗತ್ಯವಿರುವ ಎಲ್ಲಾ ರೀತಿಯ ಪೂರ್ವ ಸಿದ್ಧತೆಯನ್ನು ಮಾಡಿಕೊಳ್ಳುವುದರೊಂದಿಗೆ ರೈಲ್ವೇ ಇಲಾಖೆಯ ವತಿಯಿಂದ ನಿಗಧಿಪಡಿಸುವ ದಿನಾಂಕದಂದು ರೈಲ್ವೇ ಸಂಚಾರವನ್ನು ಸ್ಥಗಿತಗೊಳಿಸಿ, ಅಳವಡಿಸುವ ಕಾರ್ಯವನ್ನು ಕೈಗೊಳ್ಳಬೇಕು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಗಳು ತಮ್ಮ ಬದುಕನ್ನು ತಾವೇ ರೂಪಿಸಿಕೊಳ್ಳಬೇಕು ಹಾಗೆಯೇ ಜೀವನದಲ್ಲಿ ನಾವು ಎಂದೂ ಹಿಂದೇಟನ್ನು ಹಾಕದೇ ಧೈರ್ಯಶಾಲಿಗಳಾಗಿ ಬದುಕಬೇಕು. ವಿದ್ಯಾರ್ಥಿಗಳಲ್ಲಿನ ಸುಪ್ತ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಶಿಕ್ಷಕರ ಹಾಗೂ ಪೋಷಕರ ಜವಾಬ್ದಾರಿಯಾಗಿದೆ ಎಂದು ಬಸ್ರೂರು ಶ್ರೀ ಶಾರದ ಕಾಲೇಜಿನ ಉಪನ್ಯಾಸಕರಾದ ಅಕ್ಷಯ ಹೆಗ್ಡೆ ಮೊಳಹಳ್ಳಿ ತಿಳಿಸಿದರು. ಅವರು ಇಲ್ಲಿನ ತೆಕ್ಕಟ್ಟೆಯ ವಿಶ್ವ ವಿನಾಯಕ ಸಿ.ಬಿ.ಎಸ್‌ಇ ಸ್ಕೂಲ್‌ನಲ್ಲಿ ಯು.ಕೆ.ಜಿ. ಮಕ್ಕಳ ಗ್ರಾಜ್ಯುಯೇಶನ್ ಡೇ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಉದ್ಘಾಟಿಸಿ ಮಾತನಾಡಿದರು. ಮಕ್ಕಳ ಪ್ರಾರಂಭಿಕ ಬೆಳವಣಿಗೆ ಹಾಗೂ ಕಲಿಕೆಯಲ್ಲಿ ಹೆತ್ತವರ ಪಾತ್ರ ಮಹತ್ತರವಾಗಿರುತ್ತದೆ. ಮಕ್ಕಳ ಸೂಕ್ಷ್ಮ ಮನಸ್ಸಿನ ಬೆಳವಣಿಗೆಗೆ ಉತ್ತಮ ವಾತಾವರಣ ಕಲ್ಪಿಸಿ ಕೊಡುವುದು ಪೋಷಕರ ಕರ್ತವ್ಯವಾಗಿದೆ ಎಂದು ತಿಳಿಸಿದರು. ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್ ಎಮ್. ಪ್ರಭಾಕರ ಶೆಟ್ಟಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪದವಿ ಸ್ವೀಕರಿಸಿದ ವಿದ್ಯಾರ್ಥಿಗಳಿಗೆ ಶುಭ ಕೋರಿ ಪೋಷಕರ ಸಹಕಾರವನ್ನು ಸ್ಮರಿಸಿದರು ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು ಹಾಗೂ ಶಾಲಾ ಸಿಬಂದ್ದಿಯವರು ಉಪಸ್ಥಿತರಿದ್ದರು. ಸೆಲ್ಫಿ…

Read More