ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಪಂಚ ಗ್ಯಾರಂಟಿಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ, ಜಿಲ್ಲೆಯ ಪ್ರತಿಯೊಬ್ಬ ಅರ್ಹರಿಗೂ ಇದರ ಲಾಭ ಪಡೆಯುವಂತೆ ನೋಡಿಕೊಳ್ಳಬೇಕು ಎಂದು ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ಅಶೋಕ್ ಕೊಡವೂರು ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪಂಚ ಗ್ಯಾರಂಟಿ ಯೋಜನೆಗಳು ಜಿಲ್ಲೆಯಲ್ಲಿ ಬಹುತೇಕ ಅರ್ಹ ಫಲಾನುಭವಿಗಳು ಲಾಭ ಪಡೆಯುತ್ತಿದ್ದಾರೆ. ಯೋಜನೆಗೆ ಅರ್ಜಿ ಸಲ್ಲಿಸಿದ ಕೆಲವೇ ಜನರಿಗೆ ಕೆಲವು ತಾಂತ್ರಿಕ ಕಾರಣಗಳಿಂದಾಗಿ ಲಾಭ ಪಡೆಯಲು ಸಮಸ್ಯೆಗಳು ಉಂಟಾಗಿವೆ. ಇವುಗಳನ್ನು ಆದ್ಯತೆಯ ಮೇಲೆ ಅರ್ಹರಿದ್ದಲ್ಲಿ ಫಲಾನುಭವಿಗಳನ್ನಾಗಿಸಬೇಕು. ಪ್ರತಿಯೊಂದು ಇಲಾಖೆಗಳಲ್ಲಿಯೂ ಯೋಜನೆಯ ಸಮಸ್ಯೆಗಳು ಬಗೆಹರಿಸಲು ಅಧಿಕಾರಿಗಳನ್ನು ನೇಮಕಮಾಡುವುದು ಸೂಕ್ತ ಎಂದರು. ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಯಾದ ಕುಟುಂಬದ ಯಜಮಾನಿ ಮರಣ ಹೊಂದಿದ್ದಲ್ಲಿ ಯಜಮಾನಿ ಬದಲಾವಣೆಗೆ, ಹೊಸ ಮನೆ ನಿರ್ಮಾಣವಾದಾಗ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಇಲ್ಲಿನ ‘ಫೀಡರ್ ವ್ಯಾಪ್ತಿ ಪ್ರದೇಶಕ್ಕೆ ಒಳಪಟ್ಟಿರುವ ಗಂಗೊಳ್ಳಿ, ತ್ರಾಸಿ, ಗುಜ್ಜಾಡಿ, ಮುಳ್ಳಿಕಟ್ಟೆ ಹೊಸಾಡು, ಮೊವಾಡಿ, ಅರಾಟೆ, ನಾಯಕವಾಡಿ, ಕಂಚುಗೋಡು ಭಾಗದಲ್ಲಿ ಕಳೆದ ಒಂದು ವಾರದಿಂದ ಅನಿಯಮಿತವಾಗಿ ವಿದ್ಯುತ್ ಕಡಿತ ಮಾಡುತ್ತಿದ್ದ ಕುರಿತು ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ. ಸಾರ್ವಜನಿಕರಿಗೆ ಯಾವುದೇ ರೀತಿ ಮಾಹಿತಿ ನೀಡದೆ ಬಿರು ಬೇಸಿಗೆ ಸಮಯದಲ್ಲಿ ಅನಿಮಿತವಾಗಿ ವಿದ್ಯುತ್ ಕಡಿತಗೊಳಿಸುತ್ತಿದ್ದರಿಂದ ತಾಪಮಾನದ ಬಿಸಿ ತಾಳಲಾರದೆ ಮಕ್ಕಳು, ಬಾಣಂತಿ ಮತ್ತು ಗರ್ಭಿಣಿ ಮಹಿಳೆಯರು, ಹಿರಿಯ ನಾಗರಿಕರು ಸಂಕಷ್ಟ ಪಡುವಂತಹ ಸ್ಥಿತಿ ನಿರ್ಮಾಣವಾಗಿದೆ. ವಿದ್ಯುತ್ ಕಡಿತದಿಂದ ವ್ಯಾಪರಸ್ಥರು ಹೈರಾಣಾಗಿ ಹೋಗಿದ್ದಾರೆ. ಸಾರ್ವಜನಿಕರ ಹಿತ ದೃಷ್ಟಿಯಿಂದ ಲೋಡ್ ಶೆಡ್ಡಿಂಗ್ ಸಹಿತ ಅನಿಯಮಿತ ವಿದ್ಯುತ್ ನಿಲುಗಡೆಯನ್ನು ಕೈ ಬೀಡಬೇಕೆಂದು ಮಾಜಿ ಜಿ.ಪಂ ಸದಸ್ಯ ಅನಂತ ಮೊವಾಡಿ ಆಗ್ರಹಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜಿಲ್ಲೆಯ ಬಿಜೆಪಿ ಶಾಸಕರುಗಳು ಕಾಂಗ್ರೆಸ್ ಪಕ್ಷದ ಪಂಚ ಗ್ಯಾರಂಟಿಗಳನ್ನು ಟೀಕಿಸುತ್ತಾ, ಸರ್ಕಾರ ದಿವಾಳಿಯಾಗಿದೆ, ಕ್ಷೇತ್ರಕ್ಕೆ ಅನುದಾನ ಬರುತ್ತಿಲ್ಲಾ ಎನ್ನುವ ಅನಗತ್ಯ ಟೀಕೆಗಳನ್ನು ಮಾಡುತ್ತಿದ್ದರೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಹೇಳಿದ್ದಾರೆ. ಕುಂದಾಪುರ ವಿಧಾನ ಸಭಾ ಕ್ಷೇತ್ರದಲ್ಲಿ ಪಂಚ ಗ್ಯಾರಂಟಿಗಳ ಯಶಸ್ವಿ ಅನುಷ್ಠಾನದ ಜೊತೆ ರಾಜ್ಯ ಹೆದ್ದಾರಿಗಳಿಗೆ, ಜಿಲ್ಲಾ ಮುಖ್ಯ ರಸ್ತೆಗಳಿಗೆ ಮರು ಡಾಂಬರಿಕರಣ ಮಾಡಿ ರಸ್ತೆ ಅಗಲಗೋಳಿಸುತ್ತಿರುವ, ಕುಂದಾಪುರ ರಿಂಗ್ ರಸ್ತೆಗೆ ಕಾಂಕ್ರೀಟಿಕರಣ ಮಾಡುತ್ತಿರುವ, ಕುಂದಾಪುರದಲ್ಲಿ ನೂತನ ಪ್ರವಾಸಿ ಮಂದಿರ ನಿರ್ಮಾಣ ಮಾಡುತ್ತಿರುವ, ಲೋಕೋಪಯೋಗಿ ಇಲಾಖೆಯ ಮೂಲಕ ಹಲವಾರು ರಸ್ತೆ ಹಾಗೂ ಸೇತುವೆಗಳನ್ನು ನಿರ್ಮಾಣ ಮಾಡುತ್ತಿರುವ, ಸಣ್ಣ ನೀರಾವರಿ, ಬೃಹತ್ ನೀರಾವರಿ, ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಗಳ ಅನುದಾನದ ಮೂಲಕ ಹಲವಾರು ಕಾಮಗಾರಿಗಳನ್ನು ನಿರ್ವಹಿಸುತ್ತಿರುವ, ಕೃಷಿ, ತೋಟಗಾರಿಕೆ ಇಲಾಖೆಗಳ ಮೂಲಕ ಕೃಷಿಕರಿಗೆ ಸವಲತ್ತು ನೀಡುತ್ತಿರುವ, ಎಸ್ಸಿಪಿ, ಟಿಎಸ್ಪಿ ಅನುದಾನದಡಿ ಹಲವಾರು ಕಾಮಗಾರಿಗಳನ್ನು ನಿರ್ವಹಿಸುತ್ತಿರುವ ಹಾಗೂ ಅರ್ಹ ಫಲಾನುಭವಿಗಳಿಗೆ ಸವಲತ್ತುಗಳನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ) ನಡೆಸುವ ಎನ್ಡಿಎ ಮತ್ತು ಎನ್ಎ ಅರ್ಹತಾ ಪರೀಕ್ಷೆಯಲ್ಲಿ ಕ್ರಿಯೇಟಿವ್ ಸಂಸ್ಥೆಯ ಒಂಬತ್ತು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ವಿದ್ಯಾರ್ಥಿಗಳಾದ ಟಿ. ಪ್ರದೀಪ್, ಸಾಚಿ ಶಿವಕುಮಾರ್ ಕಡಿ., ಸಮೃದ್ದ್ ಕೆ., ಚೇತನ್ ಗೌಡ ಎನ್. ಎಸ್., ತ್ರಿಶ್ಲಾ ಗಾಂಧಿ, ತನಿಷಾ, ಸಂಗೀತಾ ಬಿ. ಎಮ್., ಮೊನಿಷಾ ಡಿ. ಮತ್ತು ಅಭಿಷೇಕ್ ಜೊಯಲ್ ಜಿ. ಯು. ಎಪ್ರಿಲ್ 13ರಂದು ನಡೆದ ಎನ್ಡಿಎ ಲಿಖಿತ ಪರೀಕ್ಷೆಯಲ್ಲಿ ತೇರ್ಗಡೆಯಾಗುವ ಮೂಲಕ ಮುಂದಿನ ಹಂತದಲ್ಲಿ ನಡೆಯುವ ಸರ್ವಿಸ್ ಸೆಲೆಕ್ಷನ್ ಬೋರ್ಡ್(ಎಸ್ಎಸ್ಬಿ) ಸುತ್ತಿಗೆ ಅರ್ಹತೆ ಪಡೆದಿದ್ದಾರೆ. ಪುಣೆಯ ಖಡಕ್ ವಾಸ್ಲಾದಲ್ಲಿರುವ ಎನ್ಡಿಎ ಮತ್ತು ಎನ್ಎ ತರಬೇತಿ ಸಂಸ್ಥೆಯಲ್ಲಿ ಬಿ.ಟೆಕ್ ಅಥವಾ ಬಿ.ಎಸ್ಸಿ ಪದವಿಗೆ ಸೇರ ಬಯಸುವ ವಿದ್ಯಾರ್ಥಿಗಳಿಗಾಗಿ ನಡೆಯುವ ಎನ್ಡಿಎ ಮತ್ತು ಎನ್ಎ ಪರೀಕ್ಷೆ ಬಲು ಕಠಿಣ ಪರೀಕ್ಷೆಯಾಗಿದ್ದು ಪರೀಕ್ಷೆಗೆ ಕುಳಿತ 6 ಲಕ್ಷ ವಿದ್ಯಾರ್ಥಿಗಳಲ್ಲಿ 7800 ವಿದ್ಯಾರ್ಥಿ ಎಸ್. ಎಸ್. ಬಿ ಸುತ್ತಿಗೆ ತೇರ್ಗಡೆಯಾಗಿದ್ದಾರೆ. 900 ಅಂಕಗಳಿಗೆ ನಡೆಯುವ ಈ ಪರೀಕ್ಷೆಯಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪ್ರತಿಯೊಂದು ಮಗುವು ಪ್ರತಿಭೆಯ ಕಣಜದಂತೆ. ಮಕ್ಕಳ ಪ್ರತಿಭೆಯನ್ನು ಬಾಲ್ಯದಲ್ಲಿಯೇ ಗುರುತಿಸಿ ಪ್ರೋತ್ಸಾಹಿಸಿದರೆ ಆ ಪ್ರತಿಭೆ ಬೆಳಕನ್ನು ಕಂಡು ಸಾಧನೆಯನ್ನು ಮಾಡಲು ಸಾಧ್ಯವಾಗುತ್ತದೆ ಎಂದು ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ ಹೇಳಿದರು. ಅವರು ಸುಜ್ಞಾನ ಎಜುಕೇಶನಲ್ ಟ್ರಸ್ಟ್ ನ ವತಿಯಿಂದ ಯಡಾಡಿ ಮತ್ಯಾಡಿಯ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಮತ್ತು ಸುಜ್ಞಾನ್ ಪಿ. ಯು. ಕಾಲೇಜಿನ ವಿದ್ಯಾರಣ್ಯ ಕ್ಯಾಂಪಸ್ ನಲ್ಲಿ ನಡೆದ ಮಂಥನ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಕ್ಕಳು ಪಠ್ಯದ ಜೊತೆಗೆ ಪಠ್ಯೇತರ ವಿಷಯಗಳಲ್ಲಿ ಆಸಕ್ತಿಯನ್ನು ಹೊಂದಿದ್ದರೆ ಸರ್ವತೋಮುಖ ಪ್ರಗತಿ ಸಾಧ್ಯವಾಗುತ್ತದೆ. ಪಠ್ಯೇತರ ಚಟುವಟಿಕೆಗಳಲ್ಲಿ ತಮ್ಮ ಆಸಕ್ತಿಯ ವಿಷಯವನ್ನು ಆಯ್ಕೆ ಮಾಡಿಕೊಂಡು ನಿರಂತರ ಅಭ್ಯಾಸ ಮತ್ತು ಪರಿಶ್ರಮದಿಂದ ಸಾಧನೆಯನ್ನು ಮಾಡಲು ಸಾಧ್ಯವಾಗುತ್ತದೆ. ಇಂದು ಯಕ್ಷಗಾನ ಮುಂತಾದ ಕಲೆಯಲ್ಲಿ ಆಸಕ್ತಿಯನ್ನು ಹೊಂದಿರುವವರು ಸಾಕಷ್ಟು ಸಾಧನೆ ಮಾಡಿ ಯಶಸ್ಸನ್ನು ಆರ್ಥಿಕ ಸದೃಢತೆಯನ್ನು ಹೊಂದುತ್ತಿದ್ದಾರೆ. ಹಾಗಾಗಿ ಕಲಾ ಪ್ರಕಾರಗಳು ಕೂಡ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಮಲೆನಾಡಿನ ಸಮಸ್ತ ಜೈನ ಬಾಂಧವರ ಸಹಯೋಗದೊಂದಿಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಭಗವಾನ್ ಶ್ರೀ ಮಹಾವೀರ ಸ್ವಾಮಿ ಜನ್ಮ ಕಲ್ಯಾಣ ಮಹೋತ್ಸವವನ್ನು ವಿದ್ಯಾಗಿರಿಯ ಕೃಷಿಸಿರಿ ವೇದಿಕೆಯಲ್ಲಿ ಆದಿತ್ಯವಾರ ಹಮ್ಮಿಕೊಳ್ಳಲಾಯಿತು. ಸಂಜೆ 4ಕ್ಕೆ ಆರಂಭಗೊಂಡ ಕಾರ್ಯಕ್ರಮದಲ್ಲಿ ಮೊದಲಿಗೆ ಆಳ್ವಾಸ್ ವಿದ್ಯಾರ್ಥಿಗಳಿಂದ ಜಿನಭಜನೆ ನಡೆಯಿತು. ಕೊಂಬು ವಾದ್ಯ, ನಾದಸ್ವರ, ಪೂರ್ಣಕುಂಭದೊಂದಿಗೆ ಮಹಾವೀರ ಸ್ವಾಮಿ ಜಿನಬಿಂಬದ ಮೆರವಣಿಗೆ, ತೋರಣ ಮುಹೂರ್ತ, ದ್ರವ್ಯಾಭಿಷೇಕ, ಅಷ್ಟವಿಧಾರ್ಚನೆ ಪೂಜೆ, ಮಹಾಮಂಗಳಾರತಿ ಹಮ್ಮಿಕೊಳ್ಳಲಾಯಿತು. ಹೊರನಾಡಿನ ಜಯಶ್ರೀ ಧರಣೇಂದ್ರ ಜೈನ್ ಮತ್ತು ಬಳಗದವರಿಂದ ಜಿನಭಕ್ತಿ ಗಾಯನ ನಡೆಯಿತು. ನಂತರ ನಡೆದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ಗೈದ ಮೂಡುಬಿದಿರೆ ಜೈನ ಮಠದ ಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ, ಕರಾವಳಿಯ ಜೈನರನ್ನು ಆಹ್ವಾನಿಸಿ ಅಭೂತಪೂರ್ವ ಮಹೋತ್ಸವ ಹಮ್ಮಿಕೊಂಡ ಡಾ. ಎಂ. ಮೋಹನ್ ಆಳ್ವ ಓರ್ವ ಧರ್ಮಸಹಿಷ್ಣುತೆ ಹೊಂದಿರುವ ವ್ಯಕ್ತಿ ಎಂದು ಸಂತಸ ವ್ಯಕ್ತ ಪಡಿಸಿದರು. ಸ್ವಾಭಾವಿಕ ವಿಚಾರಗಳನ್ನು ಮಾತ್ರವೇ ಮಹಾವೀರ ಸ್ವಾಮಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸಮೃದ್ಧ ಬೈಂದೂರು ಪರಿಕಲ್ಪನೆಯ ಸೇವಾ ಸೇತು ಯೋಜನೆಯಡಿಯಲ್ಲಿ ಸೇವಾ ಭಾರತಿ ರಿ. ಕನ್ಯಾಡಿ ಇವರ ಸಹಯೋಗದೊಂದಿಗೆ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ನೂತನ ಪುನಶ್ಚೇತನ ಕೇಂದ್ರ ಸೇವಾಧಾಮ ಇದರ ಭೂಮಿ ಪೂಜೆ ಕಾರ್ಯಕ್ರಮವು ಇಲ್ಲಿನ ಪಡುವರಿ ಗ್ರಾಮದ ಹೇನಬೇರ್ ನಲ್ಲಿ ಜರುಗಿತು. ಬೈಂದೂರಿನ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಭೂಮಿ ಪೂಜೆಯನ್ನು ನೆರವೇರಿಸಿದರು. ಸೇವಾ ಭಾರತಿ ರಿ. ಕನ್ಯಾಡಿ ಇದರ ಸಂಸ್ಥಾಪಕರಾದ ವಿನಾಯಕ ರಾವ್ ಕನ್ಯಾಡಿ ತಮ್ಮ ಪ್ರಾಸ್ತಾವಿಕ ನುಡಿಯಲ್ಲಿ ಬೈಂದೂರಿನಲ್ಲಿ ಆರಂಭಗೊಳ್ಳಲಿರುವ ಸೇವಾಧಾಮ ಬೆನ್ನುಹುರಿ ಅಪಘಾತಕ್ಕೆ ಒಳಗಾದ ದಿವ್ಯಾಂಗರ ಪಾಲಿಗೆ ಆಶಾಕಿರಣವಾಗಲಿದೆ ಎಂದು ಅಭಿಪ್ರಾಯಪಟ್ಟರು. ಸಭೆಯ ಅಧ್ಯಕ್ಷತೆಯನ್ನು ವಹಿಸಿಕೊಂಡ ಬೈಂದೂರಿನ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಉಡುಪಿ ಜಿಲ್ಲೆಯಲ್ಲಿ ಪ್ರಪ್ರಥಮವಾಗಿ ಬೈಂದೂರಿನಲ್ಲಿ ಬೆನ್ನುಹುರಿ ಅಪಘಾತಕ್ಕೆ ಒಳಗಾದ ದಿವ್ಯಾಂಗರಿಗೆ ನೂತನ ಪುನಶ್ಚೇತನ ಕೇಂದ್ರ ಕಾರ್ಯ ಆರಂಭಗೊಳ್ಳಲಿದ್ದು, ಸಹೃದಯಿ ದಾನಿಗಳ ನೆರವಿನಿಂದ ಆದಷ್ಟು ಶೀಘ್ರ ಉದ್ಘಾಟನೆಯಾಗುವಂತೆ ಆಶಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸಮೃದ್ಧ ಜನಸೇವಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಬಿ.ಎಸ್.…
ಕುಂದಾಪುರ: ಉಡುಪಿ ರಾಜಾಂಗಣದಲ್ಲಿ ಜರುಗಲಿರುವ ಉಡುಪಿ ಜಿಲ್ಲಾ ಹದಿನೇಳನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಂಘ ಸಂಸ್ಥೆ ವಿಭಾಗದ ಗೌರವಕ್ಕೆ ಜಿಲ್ಲೆಯ ಅಗ್ರಮಾನ್ಯ ಸುದ್ದಿಸಂಸ್ಥೆ ‘ಕುಂದಾಪ್ರ ಡಾಟ್ ಕಾಂ’ ಪಾತ್ರವಾಗಿದೆ. 2012ರಲ್ಲಿ ಕುಂದಾಪುರ ತಾಲೂಕಿನ ಮೊದಲ ಪೂರ್ಣಪ್ರಮಾಣದ ಪೋರ್ಟೆಲ್ ಆಗಿ ಆರಂಭಗೊಂಡ ಕುಂದಾಪ್ರ ಡಾಟ್ ಕಾಂ, ಕಳೆದ ಹದಿಮೂರು ವರ್ಷಗಳಿಂದ ಸ್ಥಳೀಯ ಸುದ್ದಿ-ಮಾಹಿತಿ, ವಿಚಾರ ವೈಶಿಷ್ಟತೆಗಳನ್ನು ನಿರಂತರವಾಗಿ ಪ್ರಕಟಿಸುತ್ತಾ, ಕುಂದಾಪುರ – ಬೈಂದೂರು ತಾಲೂಕು ಹಾಗೂ ಜಿಲ್ಲೆಯಲ್ಲಿ ವಿವಿಧ ಕಾರ್ಯಗಳ ಮೂಲಕ ಗಮನ ಸೆಳೆದಿದೆ. ಗ್ರಾಮೀಣ ಭಾಗದ ಸಮಸ್ಯೆಗಳು, ಪ್ರಾದೇಶಿಕ ವೈಶಿಷ್ಟ್ಯತೆಗಳನ್ನು ನಿರಂತವಾಗಿ ಪಸರಿಸುವ ಜೊತೆಗೆ ಕುಂದಾಪ್ರ ಕನ್ನಡ ಲೇಖನ, ಅಂಕಣ ಬರಹಗಳು ಹಾಗೂ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಜನಮಾಸನದಲ್ಲಿ ನೆಲೆಗೊಂಡಿದೆ. ಈ ನಿರಂತರ ಸೇವೆಯನ್ನು ಗುರುತಿಸಿ ಉಡುಪಿ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಮೇ.01ರಂದು ನಡೆಯುವ ಉಡುಪಿ ಜಿಲ್ಲಾ ಹದಿನೇಳನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಕುಂದಾಪ್ರ ಡಾಟ್ ಕಾಂ ಸಂಸ್ಥೆಯನ್ನು ಗೌರವಿಸಲಾಗುತ್ತದೆ. ಸಂಸ್ಥೆಯ ಪರವಾಗಿ ಸಂಪಾದಕ ಸುನಿಲ್ ಬೈಂದೂರು ಅವರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪರಿಶಿಷ್ಟ ಜಾತಿಯ ಒಳಮೀಸಲಾತಿ ಸಮೀಕ್ಷಾ ಕಾರ್ಯವನ್ನು ಗಣತಿದಾರರು ವೈಜ್ಞಾನಿಕ ಹಾಗೂ ಸಮರ್ಪಕವಾಗಿ ನಿರ್ವಹಿಸುವುದರೊಂದಿಗೆ ಯಾರೊಬ್ಬರೂ ಕೂಡ ಸಮೀಕ್ಷೆಯಿಂದ ಬಿಟ್ಟುಹೋಗದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಉಡುಪಿ ಇವರ ಸಹಯೋಗದಲ್ಲಿ ಪರಿಶಿಷ್ಟ ಜಾತಿ/ಉಪಜಾತಿ ಸಮಗ್ರ ಸಮೀಕ್ಷೆಗೆ ಸಂಬಂಧಿಸಿದಂತೆ ತಾಲೂಕು ಮಟ್ಟದ ಮಾಸ್ಟರ್ ಟ್ರೈನರ್ಗಳಿಗೆ ಆಯೋಜಿಸಲಾದ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿ, ಮಾತನಾಡಿದರು. ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ ಕುರಿತಂತೆ ನ್ಯಾಯಮೂರ್ತಿ ಹೆಚ್.ಎನ್, ನಾಗಮೋಹನದಾಸ್ ಏಕಸದಸ್ಯ ವಿಚಾರಣಾ ಆಯೋಗದಿಂದ ಪರಿಶಿಷ್ಟ ಜಾತಿಗಳ ವಿವಿಧ ಅಂಶಗಳ ಬಗ್ಗೆ ದತ್ತಾಂಶಗಳನ್ನು ಸಮೀಕ್ಷೆ ನಡೆಸುವ ಸಂಬಂಧ ಮೊಬೈಲ್ ಆಪ್ ಮೂಲಕ ಜಿಲ್ಲೆಯಲ್ಲಿ ಮೂರು ಹಂತಗಳಲ್ಲಿ ಸಮೀಕ್ಷಾ ಕಾರ್ಯವನ್ನು ಕೈಗೊಳ್ಳಲಾಗುತ್ತಿದ್ದು, ಇದಕ್ಕಾಗಿ ತಾಲೂಕು ಮಟ್ಟದ ಮಾಸ್ಟರ್ ಟ್ರೈನರ್ಗಳಾದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರುಗಳಿಗೆ ತರಬೇತಿ ಹಮ್ಮಿಕೊಳ್ಳಲಾಗಿದೆ. ತರಬೇತಿ ಪಡೆದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿರುವ ಕೈಗಾರಿಕೆಗಳಲ್ಲಿ ಸ್ಥಳೀಯ ಸಾರ್ವಜನಿಕರಿಗೆ ಅರ್ಹತಾ ಆಧಾರದ ಮೇಲೆ ಉದ್ಯೋಗಗಳನ್ನು ಕಲ್ಪಿಸಬೇಕು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ನ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲೆಯಲ್ಲಿರುವ ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಉದ್ಯೋಗಾವಕಾಶ ಕಲ್ಪಿಸಿರುವ ಕುರಿತು ಕೈಗಾರಿಕೋದ್ಯಮಿಗಳೊಂದಿಗೆ ನಡೆದ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಡಾ. ಸರೋಜಿನಿ ಮಹಷಿ ವರದಿಯಂತೆ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೈಗಾರಿಗಳಲ್ಲಿ ಎ.ಬಿ ಮತ್ತು ಸಿ ವರ್ಗದ ಹುದ್ದೆಗಳಿಗೆ ಅರ್ಹತೆಯನ್ನು ಆಧರಿಸಿ, ಜಿಲ್ಲೆಯ ಸ್ಥಳೀಯ ಜನರಿಗೆ ಪ್ರಥಮ ಆದ್ಯತೆಯ ಮೇಲೆ ಶೇ. 65 ಕ್ಕಿಂತ ಹೆಚ್ಚು ಹುದ್ದೆಗಳನ್ನು ಕಲ್ಪಿಸಬೇಕು ಎಂದರು. ಕೈಗಾರಿಕೆಗಳಲ್ಲಿ ಡಾ. ಸರೋಜಿನಿ ಮಹಷಿ ವರದಿ ಅನ್ವಯ ಡಿ ಗ್ರೂಪ್ ಹುದ್ದೆಗಳಿಗೆ ಶೇ. 100 ರಷ್ಟು ಸ್ಥಳೀಯರಿಗೆ ಉದ್ಯೋಗ ಅವಕಾಶ ಕಲ್ಪಿಸಬೇಕು. ಕೆಲವು ಕೈಗಾರಿಕೆಗಳಲ್ಲಿ ಹೊರರಾಜ್ಯದ ಕಾರ್ಮಿಕರುಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಈ ಹುದ್ದೆಗಳಿಗೆ ಸ್ಥಳೀಯರು ಸೇರಲು ಮುಂದೆ ಬರುತ್ತಿಲ್ಲ…
