ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಗಂಡು ಮತ್ತು ಹೆಣ್ಣು ಮಕ್ಕಳ ಅನುಪಾತದಲ್ಲಿ ಸಾವಿರ ಗಂಡುಮಕ್ಕಳಿಗೆ 978 ಹೆಣ್ಣು ಮಕ್ಕಳ ಜನನವಿದ್ದು, ಸರಾಸರಿ ಅನುಪಾತದಲ್ಲಿ ಉಡುಪಿ ಜಿಲ್ಲೆಯು ರಾಜ್ಯದಲ್ಲಿ ಪ್ರಥಮ ಸ್ಥಾನದಲ್ಲಿದೆ. ಹೆಣ್ಣು ಮಕ್ಕಳ ಪ್ರಮಾಣ ಇನ್ನೂ ಹೆಚ್ಚಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ತಿಳಿಸಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ಕಾಯಿದೆಯ ಜಿಲ್ಲಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 2023-24 ನೇ ಸಾಲಿನಲ್ಲಿ ಜಿಲ್ಲೆಯಲ್ಲಿ 5845 ಗಂಡು ಮಕ್ಕಳ ಜನನ, 5827 ಹೆಣ್ಣು ಮಕ್ಕಳ ಜನನವಾಗಿ 1000 ಗಂಡು ಮಕ್ಕಳಿಗೆ 968 ಹೆಣ್ಣು ಮಕ್ಕಳ ಜನನವಾಗಿದೆ. 2024-25 ನೇ ಸಾಲಿನಲ್ಲಿ ಈ ಪ್ರಮಾಣವು 978 ಇದ್ದು, ರಾಜ್ಯದಲ್ಲಿಯೇ ಲಿಂಗಾನುಪಾತದಲ್ಲಿ ಉಡುಪಿ ಮೊದಲ ಸ್ಥಾನದಲ್ಲಿದೆ. ದಾವಣಗೆರೆ, ರಾಮನಗರ. ಶಿವಮೊಗ್ಗ ಕ್ರಮವಾಗಿ ನಂತರದ ಸ್ಥಾನದಲ್ಲಿದೆ. ಜಿಲ್ಲೆಯಲ್ಲಿ ಅನುಪಾತವು ಇನ್ನೂ ಸಹ ಸಮಾನುಪಾತ ಆಗಬೇಕು…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಿದ್ದಾಪುರ ಪೇಟೆಯೂ ಸೇರಿದಂತೆ ಮೂರು ದಿನಗಳಿಂದ ಸುತ್ತಾಡುತ್ತಾ ಭಯ ಹುಟ್ಟಿಸಿದ್ದ ಒಂಟಿ ಸಲಗ ಕೊನೆಗೂ ಸೆರೆ ಸಿಕ್ಕಿದೆ. ಆದರೆ ಮೂರು ದಿನಗಳಿಂದ ತಾಲೂಕು ಆಡಳಿತವನ್ನೇ ನಡುಗಿಸಿತ್ತು. ಮುಂಜಾಗ್ರತೆಯಿಂದ ಶಾಲೆಗಳಿಗೂ ರಜೆ ನೀಡಲಾಗಿತ್ತು. ಸಂಜೆ 6.30 ರ ಮುಚ್ಚಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ಆನೆಯನ್ನು ಹಿಡಿಯಲು ಚಿಕ್ಕಮಗಳೂರು ಎಲಿಫೆಂಟ್ ಟಾಸ್ಕ್ ಪೋರ್ಸ್ (ಇಟಿಎಫ್)ನ ತಂಡದೊಂದಿಗೆ ಕುದುರೆಮುಖ ವನ್ಯಜೀವಿ ವಿಭಾಗ, ಕುಂದಾಪುರ ಪ್ರಾದೇಶಿಕ ಅರಣ್ಯ ವಿಭಾಗ, ಸಿದ್ದಾಪುರ, ಅಮಾಸೆಬೈಲು, ನಗರ ವನ್ಯಜೀವಿ ವಿಭಾಗದ ಅರಣ್ಯಾಧಿಕಾರಿಗಳು, ಶಂಕರನಾರಾಯಣ ವಲಯ ಅರಣ್ಯಾಧಿಕಾರಿಗಳ ತಂಡದ ಒಟ್ಟಾರೆ 150 ಮಂದಿ ಅಧಿಕಾರಿಗಳು, ಸಿಬಂದಿ ಹರಸಾಹಸ ಪಟ್ಟರು. ನಿರಂತರ ಕಾರ್ಯಾಚರಣೆ:ಆನೆಯ ಕತ್ತಿಗೆ ಅಳವಡಿಸಿರುವ ರೇಡಿಯೋ ಕಾಲರ್ ಐಡಿಯ ಮೂಲಕ ಚಲನವಲನದ ಬಗ್ಗೆ ನಿಗಾ ಇರಿಸಲಾಗಿದ್ದು, ಅದರಂತೆ ಗುರುವಾರ ಮಧ್ಯಾಹ್ನದಿಂದಲೇ ಅರಣ್ಯ ಇಲಾಖೆಯ ಅಧಿಕಾರಿಗಳು ಕಾರ್ಯಾಚರಣೆ ಆರಂಭಿಸಿದ್ದರು. ಸಂಜೆ 5.30ಕ್ಕೆ ಆನೆಗೆ ಪಶುವೈದ್ಯರಾದ ಸಕ್ರೆಬೈಲಿನ ಡಾ| ಕಲ್ಲಪ್ಪ, ಮಂಗಳೂರಿನ ಡಾ| ಯಶಸ್ವಿ ಹಾಗೂ ನಾಗರಹೊಳೆಯ ಡಾ| ರಮೇಶ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬೈಂದೂರು ಪೊಲೀಸರು ಬಂಧಿಸಿದ್ದಾರೆ. 10 ಜಾನುವಾರುಗಳನ್ನು, ಎರಡು ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. ಭಟ್ಕಳದ ನವಾಯತ್ ಕಾಲನಿಯ ಅಬ್ರಾರುಲ್ ಹಾಕ್ ಮೋಮಿನ್(30), ಗಾಂಧಿನಗರ ಕೋಗ್ತಿಯ ಬಂದರ್ ರೋಡ್ ಎರಡನೇ ಕ್ರಾಸ್ ನಿವಾಸಿ ಮೊಹಮ್ಮದ್ ಮತ್ತು ಭಟ್ಕಳದ ಮೊಹಮ್ಮದ್ ಆರೀಫ್ ಬಂಧಿತ ಆರೋಪಿಗಳು. ಗುರುವಾರ ಬೆಳಗ್ಗಿನ ಜಾವ 3.30 ಗಂಟೆ ವೇಳೆಗೆ ಕೊಲ್ಲೂರು ಕಡೆಯಿಂದ ಭಟ್ಕಳ ಕಡೆಗೆ ಮಹಾರಾಷ್ಟ್ರದ ರಿಜಿಸ್ಟ್ರೇಶನ್ ಹೊಂದಿರುವ ವಾಹನದಲ್ಲಿ 10 ಜಾನುವಾರುಗಳನ್ನು ಅಕ್ರಮವಾಗಿ ಸಾಗಿಸಲಾಗುತ್ತಿದ್ದು, ಅದಕ್ಕೆ ಬೆಂಗಾವಲಾಗಿ ಮಂಗಳೂರಿನ ರಿಜಿಸ್ಟ್ರೇಶನ್ ಹೊಂದಿರುವ ವಾಹನ ಸಾಗುತ್ತಿತ್ತು. ಪೊಲೀಸರು ಈ ಎರಡೂ ವಾಹನಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಬೈಂದೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ತೆಕ್ಕೆಟ್ಟೆಯ ವಿಶ್ವ ವಿನಾಯಕ ಸಿ.ಬಿ.ಎಸ್.ಇ ಸ್ಕೂಲ್ನಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ವಿವಿಧ ಗಿಡಗಳನ್ನು ನೆಡುವುದರ ಮೂಲಕ ಪರಿಸರ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸಿದರು. ಶಾಲಾ ಮೇನೆಂಜಿಂಗ್ ಡೈರೆಕ್ಟರ್ ಎಂ. ಪ್ರಭಾಕರ ಶೆಟ್ಟಿ ಅವರು ಮಾತನಾಡಿ, ಪ್ರತಿಯೊಬ್ಬರೂ ಗಿಡಗಳನ್ನು ನೆಟ್ಟು ಪ್ರಕೃತಿಯನ್ನು ಪೋಷಿಸಿದರೆ ಮಾತ್ರ ಹಸಿರನ್ನು ಉಳಿಸಿ ಜೀವ ಸಂಕುಲದ ರಕ್ಷಣೆ ಸಾಧ್ಯ ಎಂದು ತಿಳಿಸಿದರು. ಶಾ ಲಾ ಪ್ರಾಂಶುಪಾಲರಾದ ನಿತಿನ್ ಡಿʼಆಲ್ಮೇಡಾ ಅವರು ಮಾತನಾಡಿ, ಸಸ್ಯ ಸಂಪತ್ತನ್ನು ಬೆಳೆಸಿ ಪರಿಸರವನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಜವಬ್ದಾರಿಯಾಗಿದೆ ಎಂದು ತಿಳಿಸಿದರು. ವಿದ್ಯಾರ್ಥಿಗಳು ತಂದ ವಿವಿಧ ಗಿಡಗಳನ್ನು ಶಾಲಾ ವಠಾರದಲ್ಲಿ ನೆಡುವುದರ ಮೂಲಕ ಪರಿಸರದ ಕುರಿತು ಜಾಗೃತಿಯನ್ನು ಮೂಡಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಬಾಲಕಾರ್ಮಿಕ ಪದ್ಧತಿಯು ಸಮಾಜದಲ್ಲಿ ಅನಿಷ್ಠ ಪಿಡುಗಾಗಿದೆ. ಜಿಲ್ಲೆಯಲ್ಲಿ ಇದನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವುದರೊಂದಿಗೆ ಮಕ್ಕಳನ್ನು ಶಿಕ್ಷಣವಂತರನ್ನಾಗಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅಧಿಕಾರಿಗಳಿಗೆ ಕರೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಬಾಲಕಾರ್ಮಿಕ ಯೋಜನಾ ಸಂಘದ ಜಿಲ್ಲಾ ಮಟ್ಟದ ಕಾರ್ಯಕಾರಿ ಸಮಿತಿ, ಸಲಹಾ ಸಮಿತಿ ಮತ್ತು ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಕ್ಕಳು ತಮ್ಮ ಬಾಲ್ಯಾವಸ್ಥೆಯಲ್ಲಿಯೇ ದುಡಿಮೆಗೆ ತೊಡಗಿಕೊಂಡಲ್ಲಿ ಅವರುಗಳು ಶಿಕ್ಷಣದಿಂದ ವಂಚಿತರಾಗುವುದರ ಜೊತೆಗೆ ಮಾನಸಿಕ ಹಾಗೂ ದೈಹಿಕ ಶಾರೀರಿಕ ಬೆಳವಣಿಗೆಗೆ ಹಾನಿ ಉಂಟಾಗುವುದರ ಜೊತೆಗೆ ಭವಿಷ್ಯದ ಆಯ್ಕೆಗಳನ್ನು ಸೀಮಿತಗೊಳಿಸುತ್ತದೆ. ಈ ಹಿನ್ನೆಲೆ ಬಾಲಕಾರ್ಮಿಕ ರಕ್ಷಣಾ ಕಾಯಿದೆಯನ್ನು ಜಾರಿಗೆ ತರಲಾಗಿದೆ. ಇದನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಕರ್ತವ್ಯ ಜನಸಾಮಾನ್ಯರು ಹಾಗೂ ಅಧಿಕಾರಿಗಳ ಮೇಲಿದ್ದು, ಇದನ್ನು ಜವಾಬ್ದಾರಿಯುತವಾಗಿ ನಿರ್ವಹಿಸುವುದರೊಂದಿಗೆ ಮಕ್ಕಳು ತಮ್ಮ ಬಾಲ್ಯಾವಸ್ಥೆಯನ್ನು ಸವಿಯುವುದರೊಂದಿಗೆ ಶಿಕ್ಷಣವಂತರನ್ನಾಗಿಸಲು ಪೂರಕ ವಾತಾವರಣವನ್ನು ನಿರ್ಮಿಸಬೇಕು ಎಂದರು. ಜಿಲ್ಲೆಯ ಮಲ್ಪೆ ಮೀನುಗಾರಿಕೆಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಪರಿಸರದ ಅಗತ್ಯದ ಬಗ್ಗೆ ಅರಿತುಕೊಳ್ಳುವುದರ ಜೊತೆಗೆ ಪರಿಸರವನ್ನು ಉಳಿಸುವಲ್ಲಿ ನಾವು ಕಾರ್ಯಪ್ರವೃತ್ತರಾದಾಗಲೇ ವಿಶ್ವ ಪರಿಸರ ದಿನಾಚರಣೆಗೆ ಅರ್ಥ ಬರುತ್ತದೆ. ಇದು ನಿರಂತರ ದಿನಾಚರಣೆಯಾಗಬೇಕು ಎಂದು ಯುವ ಲೇಖಕ ನರೇಂದ್ರ ಎಸ್. ಗಂಗೊಳ್ಳಿ ಅಭಿಪ್ರಾಯ ಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಪರಿಸರ ಸ್ನೇಹಿ ತಂತ್ರಗಳನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಪ್ರತಿಯೊಬ್ಬರು ತಮ್ಮ ಹೆಸರಿನಲ್ಲಿ ಕನಿಷ್ಟ ಒಂದೊಂದು ಗಿಡಗಳನ್ನು ನೆಟ್ಟು ಪೋಷಿಸಬೇಕು ಎಂದರು. ಈ ಸಂದರ್ಭದಲ್ಲಿ ಶಾಲಾ ಆವರಣದಲ್ಲಿ ಗಿಡಗಳನ್ನು ನೆಡಲಾಯಿತು. ಶಾಲೆಯ ಮುಖ್ಯೋಪಾಧ್ಯಾಯರಾದ ದೀಕ್ಷಿತ್ ಮೇಸ್ತ ಸ್ವಾಗತಿಸಿದರು. ಬೋಧಕ ಬಳಗದ ಲಕ್ಷ್ಮೀ ಖಾರ್ವಿ, ರೇಖಾ ಖಾರ್ವಿ, ರೇಣುಕಾ ನಾಯಕ್, ಭೂದೇವಿ, ಮಹಾಬಲ ಆಚಾರ್ಯ ಮತ್ತು ಮಮತಾ ಖಾರ್ವಿ ಉಪಸ್ಥಿತರಿದ್ದರು. ಶಿಕ್ಷಕಿ ಮಾಲಾಶ್ರೀ ಖಾರ್ವಿ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮನುಷ್ಯ ಸೇರಿದಂತೆ ಜಗತ್ತಿನಲ್ಲಿರುವ ಪ್ರತಿಯೊಂದು ಜೀವಸಂಕುಲವೂ ಪರಿಸರವನ್ನು ಅವಲಂಭಿಸಿದೆ. ಮಾನವನ ದುರಾಸೆಯಿಂದ ಗಾಳಿ, ನೀರು ಸೇರಿದಂತೆ ಸೇವಿಸುವ ಆಹಾರವು ಕಲುಷಿತವಾಗುತ್ತಿದೆ. ಪರಿಸರದ ರಕ್ಷಣೆಗೆ ಉತ್ತೇಜಿಸುವುದರೊಂದಿಗೆ ಉತ್ತಮ ಪರಿಸರದ ಮಹತ್ವವನ್ನು ಮುಂದಿನ ಪೀಳಿಗೆಗೆ ತಲುಪಿಸುವುದು ಪ್ರತಿಯೊಬ್ಬ ಪ್ರಜ್ಞಾವಂತ ನಾಗರಿಕರ ಹೊಣೆಯಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಸಾರ್ವಜನಿಕ ಶಿಕ್ಷಣ ಇಲಾಖೆ, ನಗರಸಭೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಕೈಗಾರಿಕೆಗಳು ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮನುಷ್ಯನ ದುರಾಸೆಯಿಂದ ಪರಿಸರದ ಮೇಲಾಗುತ್ತಿರುವ ದುಷ್ಪರಿಣಾಮಗಳನ್ನು ತಡೆಗಟ್ಟಲು ಹಾಗೂ ಪರಿಸರ ಸಂರಕ್ಷಣೆ ಮಾಡುವ ಉದ್ದೇಶದಿಂದ 1972 ರಿಂದ ಪರಿಸರ ದಿನವನ್ನು ಆಚರಣೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕಾಡು ಕಡಿದು ನಾಡು ಮಾಡುವ ತವಕದಲ್ಲಿ ಮನುಕುಲ ತಮ್ಮ ಉಸಿರನ್ನು ಚೆಲ್ಲುತ್ತಿದ್ದಾನೆ ಇದರ ದುಷ್ಪರಿಣಾಮ ಪ್ರಸ್ತುತ ಅನುಭವಿಸುತ್ತಿದ್ದೇವೆ ಇದಕ್ಕಾಗಿ ನಾವುಗಳು ಇಂದಿನಿಂದಲೇ ಪ್ರತಿಯೊಬ್ಬರು ಗಿಡ ನಡುವ ಸಂಕಲ್ಪ ಮಾಡಬೇಕು ಎಂದು ಕೋಡಿ ಗ್ರಾಮಪಂಚಾಯತ್ ಪೂರ್ವಾಧ್ಯಕ್ಷ ಸದಸ್ಯ ಪ್ರಭಾಕರ್ ಮೆಂಡನ್ ನುಡಿದರು. ಅವರು ಕೋಡಿ ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಕೋಟದ ಪಂಚವರ್ಣ ಸಂಘಟನೆ ಇವರ ಸಂಯೋಜನೆಯೊಂದಿಗೆ, ಶಿಶು ಅಭಿವೃದ್ದಿ ಯೋಜನೆ ಬ್ರಹ್ಮಾವರ, ಸಮನ್ವಯ ಸಂಜೀವಿನಿ ಒಕ್ಕೂಟ ಕೋಡಿ ಇವರ ಸಹಕಾರದೊಂದಿಗೆ ಮೂರು ತಿಂಗಳ ಪರಿಸರಸ್ನೇಹಿ ಹಸಿರು ಜೀವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. ಹಸಿರಿದ್ದರೆ ನಾವುಗಳು ಬದುಕಲು ಸಾಧ್ಯ ಆದರೆ ಆ ಹಸಿರು ನಮ್ಮ ಮನೆಮನೆಯಲ್ಲೂ ಸೃಷ್ಠಿಸಬೇಕಿದೆ ಆಗ ಮಾತ್ರ ತಾಪಮಾನ ಕಡಿಮೆಗೊಳಿಸಿ ಆಕ್ಸಿಜನ್ ಪ್ರಮಾಣ ಹೆಚ್ಚಿಸಬಹುದಾಗಿದೆ ಈ ಮೂಲಕ ಪಂಚಾಯತ್ ಒಂದು ಹೆಜ್ಜೆಮುಂದಿರಿಸಿ ಕಾರ್ಯನಿರ್ವಹಿಸುತ್ತಿದೆ ಎಂದರು. ಪಂಚವರ್ಣದ ಪರವಾಗಿ ರವೀಂದ್ರ ಕೋಟ ಹಸಿರು ಜೀವ ಅಭಿಯಾನದ ಕುರಿತು ಸಮಗ್ರ ಮಾಹಿತಿ ನೀಡಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮೇಲ್ ಗಂಗೊಳ್ಳಿ ಮತ್ತು ಇಲ್ಲಿನ ಅಂಗನವಾಡಿ ಕೇಂದ್ರದ ವತಿಯಿಂದ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಗುರುರಾಜ ಆಚಾರ್ಯ ಮತ್ತು ಸಹ ಶಿಕ್ಷಕ ಯೋಗೇಶ್ ಮಕ್ಕಳಿಗೆ ಗಿಡಗಳನ್ನು ವಿತರಿಸಿ ಅವುಗಳ ಪ್ರಾಮುಖ್ಯತೆ ಬಗ್ಗೆ ಮಾಹಿತಿಯನ್ನು ನೀಡಿದರು. ಈ ಸಂದರ್ಭದಲ್ಲಿ ಎಸ್ಡಿಎಂಸಿ ಅಧ್ಯಕ್ಷರು ಮತ್ತು ಸದಸ್ಯರು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಪೋಷಕರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಭದ್ರಾವತಿಯ ಆಭಯಾರಣ್ಯದಿಂದ 15 ದಿನಗಳ ಹಿಂದೆ ದಾರಿ ತಪ್ಪಿ ನಾಡಿಗೆ ಬಂದ ಕಾಡಾನೆಯೊಂದು ಮಂಗಳವಾರ ರಾತ್ರಿ ಬಾಳೆಬರೆ ಘಾಟಿಯ ಮೂಲಕ ಸಿದ್ದಾಪುರಕ್ಕೆ ಬಂದಿದೆ. ಬುಧವಾರ ಬೆಳಗಿನ ಜಾವ ಮತ್ತು ರಾತ್ರಿಯ ವೇಳೆ ಸಿದ್ದಾಪುರ ಪೇಟೆ ಹಾಗೂ ಪರಿಸರದಲ್ಲಿ ಸಂಚರಿಸಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಈ ಕಾಡಾನೆ ಬಾಳೆಬರೆ ಶ್ರೀ ಮಹಾಗಣಪತಿ ದೇವಸ್ಥಾನದ ಬಳಿ ಹೊಸಂಗಡಿ ಗ್ರಾಮಕ್ಕೆ ಪ್ರವೇಶಿಸಿ ಕೆರೆಬೈಲು, ಕೆಪಿಸಿ ಕಾಲನಿ, ಭದ್ರಾಪುರದ ಮೂಲಕ ಹೊಸಂಗಡಿ ಪೇಟೆಗೆ ಬಂದಿದೆ. ಹೆದ್ದಾರಿಯಲ್ಲಿ ಮುಂದೆ ಸಾಗಿ, ಬೆಳಗಿನ ಜಾವ 6 ಗಂಟೆ ವೇಳೆಗೆ ಸಿದ್ದಾಪುರ ಪೇಟೆಗೆ ಬಂದಿತ್ತು. ಅಲ್ಲಿಂದ ಗ್ರಾಮೀಣ ಭಾಗಕ್ಕೆ ತೆರಳಿದೆ. ಈ ವೇಳೆ ಅರಣ್ಯ ಇಲಾಖೆ ಸಿಬಂದಿ ಮತ್ತು ಪೊಲೀಸರು ಪಟಾಕಿ ಸಿಡಿಸಿ ಅದನ್ನು ಹಿಂದಕ್ಕೆ ಕಳುಹಿಸುವ ಪ್ರಯತ್ನ ನಡೆಸಿದರು. ಆರಂಭದಲ್ಲಿ ಇದಕ್ಕೆ ಅಂಜದ ಆನೆ ಬಳಿಕ ಹಿಂದೆ ಸರಿದು ಪ್ರೌಢಶಾಲೆಯ ಹಿಂಬದಿಯ ತೋಟಕ್ಕೆ ನುಗ್ಗಿ ಕಾಡಿಗೆ ತೆರಳಿತು. ಹಗಲು ವಿಶ್ರಾಂತಿ-ರಾತ್ರಿ ಸಂಚಾರ!ಬುಧವಾರ ಹಗಲಿಡೀ ಕಾಡಿನಲ್ಲಿ…
