Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಉಡುಪಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಡಾ.ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗಾಗಿ ಹೊಸದಾಗಿ ಪ್ರವೇಶ ಬಯಸುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಪ್ರವರ್ಗ-2ಎ, 2ಬಿ, 3ಎ, 3ಬಿ ಮತ್ತು ಇತರೆ ಜನಾಂಗಗಳಿಗೆ ಸೇರಿದ  ಅರ್ಹ ವಿದ್ಯಾರ್ಥಿಗಳಿಂದ ಹೆಚ್.ಎಂ.ಐ.ಎಸ್ ತಂತ್ರಾಂಶದ ಮೂಲಕ ವೆಬ್‌ಸೈಟ್ www.sw.kar.nic.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿನಿಲಯದ ವಿವರ: ಉಡುಪಿ ತಾಲೂಕಿನ ಕುಂಜಿಬೆಟ್ಟು, ಕಾಪು ತಾಲೂಕಿನ ಪಡುಬಿದ್ರಿ, ಬ್ರಹ್ಮಾವರ ತಾಲೂಕಿನ ಯಡ್ತಾಡಿ ಹಾಗೂ ಕೂರಾಡಿ ಡಾ.ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ, ಉಡುಪಿ ತಾಲೂಕು ಬನ್ನಂಜೆ, ಕಾಪು ಮತ್ತು ಬ್ರಹ್ಮಾವರ ತಾಲೂಕಿನ ಯಡ್ತಾಡಿ ಹಾಗೂ ಕೂರಾಡಿ ಡಾ.ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯ, ಉಡುಪಿ ತಾಲೂಕು 76 ಬಡಗಬೆಟ್ಟು ಹಾಗೂ ಉಡುಪಿ ಟೌನ್ ಡಾ.ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ:   ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕಾಗಿ ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಜನತಾ ಪದವಿಪೂರ್ವ ಕಾಲೇಜಿನ ಪರೀಕ್ಷೆ ಬರೆದ 85 ವಿದ್ಯಾರ್ಥಿಗಳಲ್ಲಿ, 25 ವಿದ್ಯಾರ್ಥಿಗಳು ಹತ್ತು ಸಾವಿರದ ಒಳಗೆ  ರ‍್ಯಾಂಕ್‌ಗಳನ್ನು ಪಡೆದು ಸಾಧನೆ ಮೆರೆದಿರುತ್ತಾರೆ. ವಿದ್ಯಾರ್ಥಿ ಆಕಾಶ್ ಹೆಬ್ಬಾರ್ ವೆಟರ್ನರಿ ಸೈನ್ಸ್‌- 999, ನ್ಯಾಚುರೋಪತಿ & ಸೈನ್ಸ್- 932, ನರ್ಸಿಂಗ್- 1009ಬಿ ಫಾರ್ಮ್-1382, ಬಿ.ಎಸ್ಸಿ ಅಗ್ರಿ- 1382 ರ‍್ಯಾಂಕ್‌ ಗಳನ್ನು ಪಡೆದು ಅದ್ವಿತೀಯ ಸಾಧನೆ ಮಾಡಿರುತ್ತಾನೆ. ವಿದ್ಯಾರ್ಥಿಗಳಾd ಕ್ರಮವಾಗಿ ನಿಶ್ಚಿತ್ ಇಂಜಿನಿಯರಿಂಗ್ -1638 ನೇ ರ‍್ಯಾಂಕ್‌, ಶೋಭಿತ್-ಬಿ.ಎಸ್ಸಿ ಅಗ್ರಿ 2006 ನೇ ರ‍್ಯಾಂಕ್‌, ಗಿರೀಶ್ ಪೈ ಇಂಜಿನಿಯರಿಂಗ್-2159 ನೇ ರ‍್ಯಾಂಕ್‌ ಚಿರಂತನ್ ಇಂಜಿನಿಯರಿಂಗ್-2219 ನೇ ರ‍್ಯಾಂಕ್‌, ಶಶಾಂಕ್ ಇಂಜಿನಿಯರಿಂಗ್-2219 ನೇ ರ‍್ಯಾಂಕ್‌ ಪಡೆಯುವುದರ ಮೂಲಕ ಅದ್ವಿತೀಯ ಸಾಧನೆ ಮಾಡಿ ರಾಜ್ಯದ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಪ್ರವೇಶಾತಿಯನ್ನು ಪಡೆಯಲು ಅರ್ಹರಾಗಿರುತ್ತಾರೆ. ಗುಣಮಟ್ಟದ ಶಿಕ್ಷಣಕ್ಕೆ ಹೆಸರಾದ ಜನತಾ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಪ್ರಚಾರಕ್ಕಾಗಲೀ ವ್ಯವಹಾರದ ದೃಷ್ಠಿಯಿಂದಾಗಲೀ ಅಥವಾ ಇತರರು ಗುರುತಿಸಿ ಗೌರವಿಸಬೇಕೆಂಬ ಉದ್ದೇಶವಿಟ್ಟು ಮತ್ತು ಅಪಾತ್ರರಿಗೆ ಮಾಡಿದ ದಾನ ಶ್ರೇಷ್ಠವೆನಿಸದು. ಇದು ಕೇವಲ ಕಾಟಾಚಾರಕ್ಕಾಗಿ ಮಾತ್ರ ಸೀಮಿತವಾಗಿದ್ದು, ಏನೂ ಲಾಭವಾಗದು ಎಂದು ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀ ವಿದ್ಯಾಧೀಶ ಶ್ರೀಪಾದ ವಡೇರ ಸ್ವಾಮೀಜಿ ಹೇಳಿದರು. ಅವರು ಉಪ್ಪುಂದ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದಲ್ಲಿ ಶನಿವಾರ ಸಂಜೆ ನಡೆದ ಧಾರ್ಮಿಕ ಸಮಾರಂಭದಲ್ಲಿ ನೂತನ ಶ್ರೀ ವಿದ್ಯಾಧಿರಾಜ ಸಭಾಗೃಹ ಹಾಗೂ ಇತರೇ ಕಟ್ಟಡ ನಿರ್ಮಾಣಕ್ಕೆ ಆರ್ಥಿ ಸಹಕಾರ ನೀಡಿದ ದಾನಿಗಳನ್ನು ಅಭಿನಂದಿಸಿ ಮಾತನಾಡಿದರು. ಹಿಂದು ಪರಂಪರೆಯಲ್ಲಿ ದಾನ, ಧರ್ಮಗಳ ಮೂಲಕ ಸತ್ಕರ್ಮಗಳನ್ನು ಮಾಡಬೇಕು ಎಂಬ ನಿಯಮವಿದೆ. ಅದು ಶಾರೀರಿಕವಾಗಿ, ಮಾನಸಿಕವಾಗಿ ಮತ್ತು ಆರ್ಥಿಕವಾಗಿಯೂ ಕೂಡ ಮಾಡಬಹುದಾಗಿದೆ. ಇಂದಿನ ಕಾಲಘಟ್ಟದಲ್ಲಿ ಈ ರೀತಿ ಗುಪ್ತವಾಗಿ ದಾನ ಮಾಡುವವರ ಸಂಖ್ಯೆ ಬಹಳ ವಿರಳ. ದೇವರಿಗೆ ಯಾವುದೇ ಅಪೇಕ್ಷೆ ಇಲ್ಲದಿದ್ದರೂ ಭಕ್ತರು ನಿಸ್ವಾರ್ಥ ಹಾಗೂ ಪ್ರತಿಫಲಾಪೇಕ್ಷೆ ಇಲ್ಲದೇ ಮಾಡುವ ಸತ್ಕಾರ್ಯಗಳಿಗೆ ದೇವರ ಕೃಪೆಯಿರುತ್ತದೆ.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ದೇಶವನ್ನೆ ಸ್ವಚ್ಛವಾಗಿಡಲು ಪ್ರಧಾನಮಂತ್ರಿಗಳು ಸ್ವಚ್ಛ ಭಾರತ ಪರಿಕಲ್ಪನೆಯನ್ನು ತಂದರು ಆದರೆ ಜನಸಾಮಾನ್ಯರು ಸ್ವಚ್ಛತೆಯ ಬಗ್ಗೆ ಇನ್ನಷ್ಟು ಜಾಗೃತರಾಗಿ ಪ್ರಧಾನಮಂತ್ರಿಗಳ ಕನಸು ಸಾಕಾರಗೊಳಿಸೋಣ ಎಂದು ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್ ಕುಂದರ್ ಬಾರಿಕೆರೆ ನುಡಿದರು. ಅವರು ಭಾನುವಾರ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಇದರ ನೇತೃತ್ವದಲ್ಲಿ ಹಂದಟ್ಟು ಮಹಿಳಾ ಬಳಗ ಕೋಟ, ಮಣೂರು ಫ್ರೆಂಡ್ಸ್, ಜೆಸಿಐ ಕೋಟ ಸಿನಿಯರ್ ಲಿಜನ್ ಸಹಯೋಗದೊಂದಿಗೆ ಕೋಟತಟ್ಟು ಗ್ರಾಮಪಂಚಾಯತ್, ಬಾರಿಕೆರೆ ಯುವಕ ಮಂಡಲದ ಸಂಯೋಜನೆಯೊಂದಿಗೆ 256ನೇ ಪರಿಸರಸ್ನೇಹಿ ಅಭಿಯಾನದ ಪ್ರಯುಕ್ತ ಕೋಟತಟ್ಟು ಕೊರಗ ಕಾಲೋನಿ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು. ಪರಿಸರದ ಬಗ್ಗೆ ಪಂಚವರ್ಣ ಸಂಘಟನೆ ಸಾಕಷ್ಟು ಶ್ರಮಿಸುತ್ತಿದೆ ಅದೇ ಮನೋಭಾವನೆ ಪ್ರತಿಯೊಂದು ಮನೆ ಮನದಲ್ಲಿ ಮೊಳಗಬೇಕು, ಪಂಚಾಯತ್ ವ್ಯಾಪ್ತಿಯಲ್ಲಿ ತ್ಯಾಜ್ಯ ಎಸೆಯುವ ಬ್ಲ್ಯಾಕ್ ಸ್ಪಾಟ್ ಪ್ರದೇಶಗಳಲ್ಲಿ ಸಿಸಿ ಕ್ಯಾಮರ ಕಣ್ಗಾವಲು ಇರಿಸಲಾಗುವುದು ಎಂದರು. ಕೋಟತಟ್ಟು ಗ್ರಾಮಪಂಚಾಯತ್ ಸದಸ್ಯರಾದ ಪ್ರಮೋದ್ ಹಂದೆ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ‌ಬದುಕಿನಲ್ಲಿ ಬರುವ ಸವಾಲುಗಳನ್ನು ಛಲದಿಂದ ಸ್ವೀಕರಿಸಿ. ಜೀವನದಲ್ಲಿ ಎದುರಿಸುವ ಅವಮಾನ  ಕೀಳರಿಮೆ ಸೋಲುಗಳನ್ನು  ಗೆಲುವಿನ ಸಾಧನೆಗೆ ಸೋಪಾನ ಮಾಡಿಕೊಳ್ಳಬೇಕು. ಈ ಜೀವನ ನನ್ನ ಸೌಭಾಗ್ಯ ವಾಗಿದೆ. ದೇವರು ನನಗೆ ಕೊಟ್ಟ ವರವಾಗಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಕೆ. ಎಸ್. ರಾಜಣ್ಣ ಹೇಳಿದರು. ಅವರು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸೋಮವಾರದಂದು ನಡೆದ “ಪ್ರೇರಣಾ ಉಪನ್ಯಾಸ” ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು. ಪ್ರಪಂಚ ಹೇಗೆ ನೋಡಲಿ ನಮ್ಮ ಸಾಧನೆಯ ಗುರಿ ನಿಚ್ಚಳವಾಗಿರಬೇಕು. ಕೇವಲ ಗುರಿಯನ್ನು ಮಾತ್ರ ನೋಡುತ್ತಿರಬೇಕು. ಹಾಗಿದ್ದಾಗ ಏನೆ ನೋವುಗಳನ್ನು ಇದ್ದರೂ ಸಾಧನೆಗಳು ಅವುಗಳನ್ನು ಮರೆಸುತ್ತವೆ ಎನ್ನುವುದಕ್ಕೆ ನಾನೆ ಸಾಕ್ಷಿ. ಸಮಾಜದ ಹಲವು ಕ್ಷೇತ್ರಗಳಲ್ಲಿ ಸೇವೆ ಮಾಡುವ ಅವಕಾಶ ನನಗೆ ದೊರೆತಿದೆ ಹಾಗೆ ನಿಮ್ಮಲ್ಲಿಯು ಸಾಧನೆಯ ಶಕ್ತಿ ಯುಕ್ತಿ, ಮನೋಸ್ಥೈರ್ಯ ಮತ್ತು ಜ್ಞಾನವಿದೆ. ಅದನ್ನು  ನಿಮ್ಮ ಯಶಸ್ವಿ ಬದುಕಿಗಾಗಿ ಉಪಯೋಗಿಸಿಕೊಳ್ಳಿ. ವಿದ್ಯಾರ್ಥಿಗಳು ಸಾಧನೆಯು ಶಿಖರವಾಗಿರಿ. ಸಾಧನೆಗೆ ಪ್ರೇರಣಯಾಗಿರುವ ತಂದೆ ತಾಯಿಗಳು, ಗುರುಗಳು, ಸಂಸ್ಥೆಗೆ ಮತ್ತು ಸಮಾಜಕ್ಕೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಸಮಾಜ ಸೇವಕ ಬೈಲುಮನೆ ಆನಂದ ಬಿಲ್ಲವ ಇವರ ವತಿಯಿಂದ ಗಂಗೊಳ್ಳಿಯ ಶ್ರೀ ಶಿರಸಿ ಅಮ್ಮನವರ  ಸನ್ನಿಧಾನದಲ್ಲಿ ಅರ್ಹ ವಿದ್ಯಾರ್ಥಿಗಳಿಗೆ ಪುಸ್ತಕ ಮತ್ತು ಕಲಿಕಾ ಸಾಮಗ್ರಿಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಆನಂದ ಬಿಲ್ಲವ ಅವರು ದೇವರಲ್ಲಿನ ನಂಬಿಕೆ ನಿಮ್ಮ ಆತ್ಮವಿಶ್ವಾಸವನ್ನು ವೃದ್ಧಿಸುತ್ತದೆ. ನಿಮ್ಮ ಕಲಿಕೆ ಉಳಿದವರಿಗೆ ಪ್ರೇರಣೆಯಾಗುವಂತಿರಲಿ ಎಂದು ಶುಭ ಹಾರೈಸಿದರು. ವೇದಿಕೆಯಲ್ಲಿ ಅಧ್ಯಕ್ಷ ಜಿ. ಗೋಪಾಲ ಪೂಜಾರಿ, ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ನರೇಂದ್ರ ಎಸ್. ಗಂಗೊಳ್ಳಿ, ಮಾಜಿ ಪಂಚಾಯತ್ ಸದಸ್ಯ ನಾಗರಾಜ ಖಾರ್ವಿ, ಶ್ರೀ ಮಹಂಕಾಳಿ ಕುಣಿತ ಭಜನಾ ಮಂಡಳಿ ತಂಡದ ಮುಖ್ಯಸ್ಥೆ ಜ್ಯೋತಿ ಖಾರ್ವಿ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿ ಶಿಕ್ಷಣ ಕೋರ್ಸ್ ಗಳ ಪ್ರವೇಶಕ್ಕಾಗಿ  ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ್ದ 2025 ನೇ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ದಾಖಲಿಸಿದ್ದಾರೆ. ವಿದ್ಯಾರ್ಥಿನಿ ಅಮೂಲ್ಯ ಸಿ. ಶೆಟ್ಟಿ (ಎಂಜಿನಿಯರಿಂಗ್ ) ವಿಭಾಗದಲ್ಲಿ ರಾಜ್ಯ ಮಟ್ಟದಲ್ಲಿ 209 ನೇ ರ‍್ಯಾಂಕ್‌, ಎನ್ ಶ್ರೇಯಸ್  ಎಂಜಿನಿಯರಿಂಗ್ (1242) ಬಿಎಸ್ಸಿ ಅಗ್ರಿಕಲ್ಚರ್ (486), ಅನುಷ್ ನಾಯಕ್ ಎಂಜಿನಿಯರಿಂಗ್ (1795) ಬಿಎಸ್ಸಿ ಅಗ್ರಿಕಲ್ಚರ್ (1054), ಚೈತ್ರಾ ಇಂಜಿನಿಯರಿಂಗ್ (2103) ಬಿಎಸ್ಸಿ ಅಗ್ರಿಕಲ್ಚರ್ (571), ಸಾತ್ವಿಕ್ ಕೆ. ಆರ್ ಇಂಜಿನಿಯರಿಂಗ್ (2894), ಅನನ್ಯ ಇಂಜಿನಿಯರಿಂಗ್(3066), ಬಿಎಸ್ಸಿ ಅಗ್ರಿಕಲ್ಚರ್ (2348), ಸಂಜನಾ ಶ್ಯಾನು ಭಾಗ್(3603), ಕೀರ್ತನಾ  ಇಂಜಿನಿಯರಿಂಗ್ (3746) ಬಿಎಸ್ಸಿ ಅಗ್ರಿಕಲ್ಚರ್ (2069), ಬಿ. ನಾಗೇಂದ್ರ ಭಟ್ ಇಂಜಿನಿಯರಿಂಗ್ (3952), ರಂಜಿತಾ ಇಂಜಿನಿಯರಿಂಗ್(4119) ಬಿಎಸ್ಸಿ ಅಗ್ರಿಕಲ್ಚರ್ (2574), ಭೂಮಿಕಾ ಇಂಜಿನಿಯರಿಂಗ್(4481), ಸುಮಿತ್ರಾ ಭಟ್ ಇಂಜಿನಿಯರಿಂಗ್ (5066), ಅಪೂರ್ವ ಎಸ್. ಇಂಜಿನಿಯರಿಂಗ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತನ್ನ ಮನೆಯಲ್ಲಿ  ಸಾಕಿ ಬೆಳಸಿದ ನಾಯಿಯನ್ನು  ಬೈಕಿಗೆ ಸರಪಳಿಯಿಂದ ಕಟ್ಟಿ ಎಳೆದೊಯ್ಯುತ್ತಿದ್ದ ಆರೋಪಿಯ ವಿರುದ್ಧ ಬೈಂದೂರು ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ. ಯಡ್ತರೆ ಗ್ರಾಮದ ರಾ.ಹೆ 66ರ ಬೈಂದೂರು – ಕುಂದಾಪುರ ಏಕಮುಖ ರಸ್ತೆಯ ಸರ್ವೀಸ್‌ ರಸ್ತೆಯಲ್ಲಿ ರಾವುತನಕಟ್ಟೆಯಿಂದ ನಾಕಟ್ಟೆ ಸೇತುವೆಯವರೆಗೆ ಪಡುವರಿ ಗ್ರಾಮದ ನಿವಾಸಿಯೊಬ್ಬ ತನ್ನ ಮನೆಯ ಸಾಕು ನಾಯಿಯೊಂದನ್ನು ಆತನ ಬೈಕಿಗೆ ಸರಪಳಿಯಿಂದ ಕಟ್ಟಿ ಚಲಾಯಿಸಿಕೊಂಡು ಹೋಗುತ್ತಿರುವ ವಿಡಿಯೋ ಶನಿವಾರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ವಿಡಿಯೋವನ್ನು ಪೊಲೀಸರು ಗಮನಿಸಿ, ಪರಿಶೀಲಿಸಿದಾಗ ವ್ಯಕ್ತಿಯ ಬೈಂದೂರು ಪಡುವರಿ‌ ಗ್ರಾಮದ ಸುಬ್ರಹ್ಮಣ್ಯ ಎಂಬುದಾಗಿ ತಿಳಿದು ಬಂದಿದೆ. ಮೂಕಪ್ರಾಣಿಯನ್ನು ಈ ರೀತಿಯಾಗಿ ಹಿಂಸಾತ್ಮಕ ರೀತಿಯಲ್ಲಿ ಎಳೆದಾಡಿಕೊಂಡು ಹೋಗಿರುವುದರಿಂದ ನಾಯಿಯು ಗಾಯಗೊಂಡಿರುವುದು ವಿಡಿಯೋದಲ್ಲಿ ಕಂಡು ಬಂದಿದೆ. ಅದರಂತೆ ಆರೋಪಿ ವಿರುದ್ಧ ಬೈಂದೂರು ಪೊಲೀಸರು ಸುಮೋಟೋ ಪ್ರಕರಣ ದಾಖಲಿಸಿದ್ದು, ತನಿಖೆ ಮುಂದುವರೆದಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಮೂಡುಬಿದಿರೆಯ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ-2025ರಲ್ಲಿ ಮತ್ತೊಮ್ಮೆ ಶ್ರೇಷ್ಠ ಸಾಧನೆಯನ್ನು ಮೆರೆದಿದ್ದಾರೆ. ಅಕ್ಷಯ್ ಎಂ. ಹೆಗ್ಡೆ ಕೆಸಿಇಟಿ-ಕೃಷಿ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್‌ ಗಳಿಸಿ ಸಾಧನೆ ಮೆರೆದಿದ್ದಾರೆ. ಈ ಅಸಾಧಾರಣ ಸಾಧನೆಯ ಜೊತೆಗೆ ಆಳ್ವಾಸ್‌ನ ಇತರ ವಿದ್ಯಾರ್ಥಿಗಳು ಸಹ ಉನ್ನತ ರ‍್ಯಾಂಕ್‌ಗಳನ್ನು ಪಡೆದಿದ್ದು, ವರ್ಷದಿಂದ ವರ್ಷಕ್ಕೆ ಅತ್ಯುತ್ತಮ ಸಿಇಟಿ ಫಲಿತಾಂಶವನ್ನು ಮುಂದುವರಿಸಿದ್ದಾರೆ. ರಾಜ್ಯದ ಮೊದಲ 10 ರ‍್ಯಾಂಕ್‌ಗಳಲ್ಲಿ 02 ರ‍್ಯಾಂಕ್‌, ಮೊದಲ 50 ರ‍್ಯಾಂಕ್‌ಗಳಲ್ಲಿ 12 ರ‍್ಯಾಂಕ್‌, ಮೊದಲ 100 ರ‍್ಯಾಂಕ್‌ಗಳಲ್ಲಿ 24 ರ‍್ಯಾಂಕ್‌, ಮೊದಲ 200 ರ‍್ಯಾಂಕ್‌ಗಳಲ್ಲಿ 52 ರ‍್ಯಾಂಕ್‌, ಮೊದಲ 500 ರ‍್ಯಾಂಕ್‌ಗಳಲ್ಲಿ 172 ರ‍್ಯಾಂಕ್‌, ಮೊದಲ 1,000 ರ‍್ಯಾಂಕ್‌ಗಳಲ್ಲಿ 506 ರ‍್ಯಾಂಕ್‌ಗಳನ್ನು ಪಡೆದುಕೊಂಡಿರುತ್ತಾರೆ. ಪಿಸಿಬಿಯಲ್ಲಿ 3 ವಿದ್ಯಾರ್ಥಿಗಳು 180ರಲ್ಲಿ 170ಕ್ಕೂ ಅಧಿಕ ಅಂಕ, 49 ವಿದ್ಯಾರ್ಥಿಗಳು 160ಕ್ಕೂ ಅಧಿಕ, 146 ವಿದ್ಯಾರ್ಥಿಗಳು 150ಕ್ಕೂ ಅಧಿಕ, 851 ವಿದ್ಯಾರ್ಥಿಗಳು 121ಕ್ಕೂ ಅಧಿಕ, 1359 ವಿದ್ಯಾರ್ಥಿಗಳು 100ಕ್ಕೂ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ, ಮೇ.26: ಇಲ್ಲಿನ ಖಾರ್ವಿಕೇರಿ ನಿವಾಸಿ, ಶ್ರೀ ಮಹಾಕಾಳಿ ದೇವಸ್ಥಾನದ ನಿಕಟಪೂರ್ವ ಅಧ್ಯಕ್ಷ ಜಯಾನಂದ ಖಾರ್ವಿ (64) ಇಂದು ಬೆಳಿಗ್ಗೆ ಹೃದಯಾಘಾತದಿಂದ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ವೃತ್ತಿಯಲ್ಲಿ ಗುತ್ತಿಗೆದಾರರಾಗಿದ್ದ ಜಯಾನಂದ ಖಾರ್ವಿ ಅವರು ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಕೊಂಕಣಿ ಖಾರ್ವಿ ಸಮಾಜದ ಪ್ರತಿಷ್ಠಿತ ಶ್ರೀ ಮಹಾಕಾಳಿ ದೇವಸ್ಥಾನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ 10 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಧಾರ್ಮಿಕ ಸೇವೆಯಲ್ಲಿ ಮುಂಚೂಣಿಯಲ್ಲಿದ್ದು ಕುಂದೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಸದಸ್ಯರಾಗಿ, ನಂದಿಕೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಸದಸ್ಯರಾಗಿ ಕೋಟೇಶ್ವರ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದರು. ಕುಂದಾಪುರ ಕೊಂಕಣಿ ಖಾರ್ವಿ ಸಮಾಜದ ಹೋಳಿ ಹಬ್ಬದ ಸಂದರ್ಭದಲ್ಲಿ ಶ್ರೀ ಮಹಾಕಾಳಿ ಮಾತೆಯ ಬಣ್ಣದ ಪೂಜೆಯನ್ನು ವಿಶಿಷ್ಟ ರೀತಿಯಲ್ಲಿ ಆಚರಿಸುವ ವಿಧಾನವನ್ನು ಆಳವಡಿಸಿ ಇತರೆ ಸಮಾಜಕ್ಕೆ ಖಾರ್ವಿ ಸಮುದಾಯದ ಸಂಸ್ಕೃತಿಯನ್ನು ಪರಿಚಯಿಸಿದ ಜಯಾನಂದ ಖಾರ್ವಿ ಕೊಂಕಣಿ ಖಾರ್ವಿ ಸಮಾಜದ ಆಗುಹೋಗುಗಳಿಗೆ ಜೊತೆಯಾಗಿದ್ದರು. ಕುಂದಾಪುರ ಭಂಡಾರಕಾರ್ಸ್…

Read More