Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಮಕ್ಕಳ ರಕ್ಷಣಾ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಕ್ಕಳ ಸಹಾಯವಾಣಿ ದಿನವಾದ ಇಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಉಡುಪಿ ಇವರ ಅಧೀನದಲ್ಲಿ ಇಂದ್ರಾಳಿ ರೈಲ್ವೇ ನಿಲ್ದಾಣದಲ್ಲಿ ಪ್ರಾರಂಭಿಸಲಾದ ರೈಲ್ವೇ ಚೈಲ್ಡ್ ಹೆಲ್ಸ್ ಡೆಸ್ಕನ್ನು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿ, ಕೆಲವು ನಿರಾಶ್ರಿತ ಮಕ್ಕಳು ಆಶ್ರಯ ಹಾಗೂ ಜೀವನೋಪಾಯಕ್ಕಾಗಿ ವಿವಿಧ ಭಾಗಗಳಿಗೆ ಪ್ರಯಾಣಿಸಲು ರೈಲ್ವೆ ನಿಲ್ದಾಣವನ್ನು ಹಾಗೂ ರೈಲುಗಳನ್ನು ಬಳಸುತ್ತಾರೆ. ಪ್ಲಾಟ್‌ಫಾರ್ಮ್ಗೆ ಬಂದ ಅವರು ನಿಂದನೆ, ಹಿಂಸೆ, ನಿರ್ಲಕ್ಷ್ಯ ಹಾಗೂ ಶೋಷಣೆಗೆ ಒಳಗಾಗುತ್ತಾರೆ. ಹೆಚ್ಚಿನ ಬೆಂಬಲವಿಲ್ಲದ ಅವರು, ವಿವಿಧ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಾರೆ ಹಾಗೂ ತಮ್ಮ ಬಾಲ್ಯದಿಂದ ವಂಚಿತರಾಗುತ್ತಾರೆ. ಇಂತಹ ಮಕ್ಕಳನ್ನು ರಕ್ಷಿಸಿ, ಅವರುಗಳಿಗೆ ಪುನರ್ವಸತಿ ಕಲ್ಪಿಸಿ, ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಅನುಕೂಲ ಮಾಡಿಕೊಡುವುದು ನಮ್ಮೆಲ್ಲರ ಜವಾಬ್ದಾರಿ ಎಂದರು. ಕುಟುಂಬದಿಂದ ಬೇರ್ಪಟ್ಟು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದಿನ 4 ದಿನಗಳ ಕಾಲ ಅಲ್ಲಲ್ಲಿ ಮಳೆಯಾಗುವ ಮುನ್ಸೂಚನೆ ಇದೆ. ಉಡುಪಿ ಜಿಲ್ಲೆಯಲ್ಲಿ ಶುಕ್ರವಾರ ಸರಾಸರಿ 4.7 ಮೀ.ಮೀ ಮಳೆಯಾಗಿದ್ದು, ಈ ಪೈಕಿ ಕಾರ್ಕಳ ತಾಲೂಕಿನಲ್ಲಿ 5.7, ಕುಂದಾಪುರ ತಾಲೂಕಿನಲ್ಲಿ 2.4, ಉಡುಪಿಯಲ್ಲಿ 11.4, ಬೈಂದೂರು ತಾಲೂಕಿನಲ್ಲಿ 1.0, ಬ್ರಹ್ಮಾವರ ತಾಲೂಕಿನಲ್ಲಿ 7.4, ಕಾಪು ತಾಲೂಕಿನಲ್ಲಿ 8.0, ಹೆಬ್ರಿ ತಾಲೂಕಿನಲ್ಲಿ 3.6 ಮಿ.ಮೀ ಮಳೆಯಾಗಿದೆ. ಹವಾಮಾನ ಇಲಾಖೆ ವರದಿಯಂತೆ ಮೇ.17 ರಿಂದ 21ರತನಕ ಮಳೆ, ಮೇ 20 ರಂದು ಭಾರಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಪದವಿಪೂರ್ವ ಶಿಕ್ಷಣ ಮಂಡಳಿಯವರು ಆಯೋಜಿಸಿದ 2ನೇ ಹಂತದ ದ್ವಿತೀಯ ಪಿ.ಯು.ಸಿ.ಪರೀಕ್ಷೆಯಲ್ಲಿ ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿನ‌ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಶ್ರದ್ಧಾ ಎಸ್. ಮೊಗವೀರ 595 /600 ಅಂಕಗಳನ್ನು ಪಡೆಯುವುದರ ಮೂಲಕ ರಾಜ್ಯ ಮಟ್ಟದಲ್ಲಿ 5ನೇ ರ‍್ಯಾಂಕ್‌ ಪಡೆದು ಶೈಕ್ಷಣಿಕ ಸಾಧನೆ ಮೆರೆದಿರುತ್ತಾಳೆ. ಸಾಧಕ ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ, ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ರಾ.ಹೆ 66ರ ಹಂಗಳೂರು ಮಸೀದಿ ಬಳಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ವಿಭಜಕಕ್ಕೆ ಡಿಕ್ಕಿ ಹೊಡೆದ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸದೆ. ಕೊಲ್ಲೂರು ದೇವರ ದರ್ಶನ ಪಡೆದು ಕುಂದಾಪುರ ಕಡೆಯಿಂದ ಕೇರಳ ಕಾಸರಗೋಡಿಗೆ ಕಾರಿನಲ್ಲಿ ಹಿಂದಿರುಗುತ್ತಿದ್ದ ಕುಟುಂಬವೊಂದು ಕುಂದಾಪುರದ ಹಂಗಳೂರು ಬಳಿ ಚಾಲಕನ ನಿಯಂತ್ರಣ ತಪ್ಪಿದೆ. ಅಪಘಾತದಲ್ಲಿ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ನಿಂತಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ. ಕುಂದಾಪುರ ಸಂಚಾರಿ ಠಾಣಾ ಪೊಲೀಸರು ಸ್ಥಳಕ್ಕಾಗಿಮಿಸಿ ಪರಿಶೀಲಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತಾಲೂಕಿನ ವತ್ತಿನಣೆ ಗ್ರಾಮದ ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದ ವೃಂದಾವನ ಪುನಃ ಪ್ರತಿಷ್ಠೆ- ಶತಕಲಶಸಹಿತ ಬ್ರಹ್ಮಕಲಶೋತ್ಸವವು ಮೇ.25 ರವಿವಾರದಿಂದ ಮೇ.29 ಗುರುವಾರ ತನಕ ಜರುಗಲಿದೆ ಎಂದು ವತ್ತಿನಣೆ ಶ್ರೀ ಗುರು ರಾಘವೇಂದ್ರ ಸ್ವಾಮಿ ವೃಂದಾವನ ಟ್ರಸ್ಟ್ ಉಪಾಧ್ಯಕ್ಷ ಎಸ್‌. ರಾಜು ಪೂಜಾರಿ ಹೇಳಿದರು. ಅವರು ವತ್ತಿನಣೆ ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದ ಕಛೇರಿಯಲ್ಲಿ ನಡೆದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿ ವೃಂದಾವನ ಪುನಃ ಪ್ರತಿಷ್ಠೆ – ಮಹಾಅನ್ನಸಂತರ್ಪಣೆ, ಶ್ರೀ ಆಂಜನೇಯ ಶ್ರೀ ನವಗ್ರಹ ಗುರು ಸಾರ್ವಭೌಮರ ವೃಂದಾವನಕ್ಕೆ ಶತಕಲಶಸಹಿತ ಬ್ರಹ್ಮಕಲಶೋತ್ಸವ-ಮಹಾಅನ್ನಸಂತರ್ಪಣೆ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿದೆ ಎಂದು ಹೇಳಿದರು. ಮೇ.25ರಂದು ವೈಶಾಖ ಕೃಷ್ಣ ತ್ರಯೋದಶೀ ಪೂಜೆ ನಡೆಯಲಿದೆ. ಸಾಯಂಕಾಲ ಗಂಟೆ 5.00 ರಿಂದ ಋತ್ವಿಜರ ಸ್ವಾಗತ, ಶಿಲ್ಪಿ ಪೂಜೆ, ಆಲಯ ಪ್ರತಿಗ್ರಹ, ಮಹಾಪ್ರಾರ್ಥನೆ, ತೋರಣ ಮೂಹೂರ್ತ, ಉಗ್ರಾಣ ಮುಹೂರ್ತ, ಪುಣ್ಯಾಹ, ಗೋಪ್ರವೇಹ, ಪಂಚಗವ್ಯ, ವಾಸ್ತು ಪೂಜೆ, ಭೂಶುದ್ಧಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇನ್‌ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರೀಸ್ ಆಫ್ ಇಂಡಿಯಾ ನಡೆಸುವ ಸಿ.ಎಸ್. ಫೌಂಡೇಶನ್ ಪರೀಕ್ಷೆಯಲ್ಲಿ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಉತ್ಕೃಷ್ಟ್ಟ ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ  ಶ್ರೀಧನ್ಯ, ಅಕ್ಷತಾ, ಕಿಶನ್, ಸೂರಜ್, ಅದ್ವಿತಾ ಹಾಗೂ ಗಣೇಶ್ ಇವರು  ಸಿ.ಎಸ್. ಫೌಂಡೇಶನ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಹಾಗೂ ವೀ ರೀಚ್ ಸಂಸ್ಥೆಯ ಪಠ್ಯ-ಪ್ರವಚನ, ಮಧ್ಯಂತರ ಮಾದರಿ ಪರೀಕ್ಷೆ, ಹಾಗೂ ನುರಿತ ತರಬೇತುದಾರರಿಂದ ತರಬೇತಿ, ಸಲಹೆ ಮತ್ತು ಮಾರ್ಗದರ್ಶನ ಪಡೆದು ವಿದ್ಯಾರ್ಥಿಗಳು ಈ ಸಾಧನೆಗೈದಿದ್ದಾರೆ. ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ-ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ದ್ವಿತೀಯ ಪಿಯುಸಿ ಪರೀಕ್ಷೆ 2 ರಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಹರಿಕೃಪಾ ಎಮ್‌ಎಸ್‌ 597 ಅಂಕ ದಾಖಲಿಸುವುದರ ಮೂಲಕ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನಿಯಾಗಿ, ರಾಜ್ಯ ಮಟ್ಟದಲ್ಲಿ  4 ನೇ ರ್ಯಾಂಕ್‌ ಪಡೆದುಕೊಂಡು ಅದ್ವಿತೀಯ  ಸಾಧನೆ ಮೆರೆದಿದ್ದಾಳೆ. ವಿದ್ಯಾರ್ಥಿನಿಯ ಶೈಕ್ಷಣಿಕ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ- ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ವತಿಯಿಂದ ಪ್ರಸಕ್ತ ಸಾಲಿನ ಡಿ.ಇಎಲ್.ಇಡಿ, ಕೋರ್ಸ್ಗೆ ದಾಖಲಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಇಲಾಖಾ ವೆಬ್‌ಸೈಟ್ www.schooleducation.kar.nic.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 5 ಕೊಬೆಯ ದಿನ. ಹೆಚ್ಚಿನ ಮಾಹಿತಿಗಾಗಿ ಡಯಟ್ ಉಪನ್ಯಾಸಕಿ ಹಾಗೂ ಜಿಲ್ಲಾ ನೋಡಲ್ ಅಧಿಕಾರಿ ಸೋನಿಕ್ ಟಿ ಮೊಬೈಲ್ ಸಂಖ್ಯೆ: 9901236348 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ತೆಕ್ಕಟ್ಟೆಯ ವಿಶ್ವ ವಿನಾಯಕ ಸಿಬಿಎಸ್ಇ ಸ್ಕೂಲ್‌ನಲ್ಲಿ ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ ಏರ್ಪಡಿಸಲಾಗಿತ್ತು. ಸ್ಕಿಲ್ ಡೆವಲಪ್‌ಮೆಂಟ್ ತರಬೇತುದಾರ ಡಾ. ಶಿಜು ಥೊಮಸ್ ಅವರು ‘ಹೊಸ ಶೈಕ್ಷಣಿಕ ಆಯಾಮಗಳುʼ ಹಾಗೂ ‘ಕ್ಲಾಸ್ ರೂಮ್ ಮ್ಯಾನೇಜ್‌ಮೆಂಟ್’ವಿಷಯದ ಕುರಿತು ಶಿಕ್ಷಕರಿಗೆ ತರಬೇತಿ ಯನ್ನು ನೀಡಿ, ಮಾತನಾಡಿ, ತರಗತಿಯಲ್ಲಿ ವಿವಿಧ ಕೌಟುಂಬಿಕ ಹಿನ್ನಲೆಯುಳ್ಳ ಮಕ್ಕಳು, ವಿವಿಧ ಬುದ್ಧಿಮತ್ತೆ ಮಟ್ಟದ ಮಕ್ಕಳು, ವಿವಿಧ ಅಗತ್ಯತೆಗಳನ್ನು ಹೊಂದಿರುವ ಮಕ್ಕಳಿದ್ದು ಪ್ರತೀ ಮಗುವಿನ ಮನಃ ಸ್ಥಿತಿಯನ್ನು ಅರಿತು ಅವರೊಂದಿಗೆ ಬೆರೆತು ಶಿಕ್ಷಕರು ಮಕ್ಕಳ ಕಲಿಕೆಗೆ ಸಹಕಾರವಾಗಬೇಕು ಎಂದು ತಿಳಿಸಿದರು. ವಿವಿಧ ಘಟನಾವಳಿಗಳನ್ನಾಧರಿಸಿ ಶಿಕ್ಷಕ ಹಾಗೂ ವಿದ್ಯಾರ್ಥಿಗಳ ಬಾಂಧ್ಯವ್ಯದ ಕುರಿತು ವಿವರಿಸಿದರು. ಎನ್‌ಇಪಿ ಗೆ ಅನುಗುಣವಾಗಿ ಹೊಸ ಶೈಕ್ಷಣಿಕ ವಿಧಾನಗಳನ್ನು ಅಳವಡಿಸಿ ಬೋಧನಾ ಪದ್ದತಿಯನ್ನು ಸುಧಾರಿಸುವ ಕ್ರಮಗಳನ್ನು ತಿಳಿಸಿದರು. ಶಿಕ್ಷಕರಿಗೆ ವಿವಿಧ ಚಟುವಟಿಕೆಗಳನ್ನು ನೀಡಿ ಪ್ರಾಯೋಗಿಕ ಕಲಿಕೆಯ ಮಹತ್ವವನ್ನು ವಿವರಿಸಿದರು.  ಕಾರ್ಯಕ್ರಮದಲ್ಲಿ ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್ ಎಮ್. ಪ್ರಭಾಕರ ಶೆಟ್ಟಿ, ಪ್ರಾಂಶುಪಾಲರಾದ ನಿತಿನ್ ಡಿ’ಆಲ್ಮೇಡಾ, ಶಿಕ್ಷಕ ವೃಂದದವರು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲೆಯ ಕಾಪು ತಾಲೂಕು ಪಾದೂರು ಗ್ರಾಮದ ಗ್ರಾಮಸಹಾಯಕ ಹುದ್ದೆಗೆ 25 ರಿಂದ 45 ವರ್ಷದೊಳಗಿನ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ನಿಬಂಧನೆಗಳು:ಈ ಮೊದಲು ಗ್ರಾಮಸಹಾಯಕರಾಗಿದ್ದು, ಸೇವೆಯಲ್ಲಿರುವಾಗಲೇ ಮರಣ ಹೊಂದಿದವರ ಕುಟುಂಬದವರಿಗೆ ಅನುಕಂಪದ ಆಧಾರದ ಮೇಲೆ ನಿಯಮಾನುಸಾರ ಗ್ರಾಮ ಸಹಾಯಕರ ಕೆಲಸ ನೀಡಲು ಆದ್ಯತೆ ನೀಡಲಾಗುವುದು. ಅರ್ಜಿದಾರರು ಅದೇ ಗ್ರಾಮದವರಾಗಿರಬೇಕು ಅಥವಾ ಅದೇ ಗ್ರಾಮದವರಿಂದ ಅರ್ಜಿ ಬಾರದಿದ್ದಲ್ಲಿ ನೆರೆಯ ಗ್ರಾಮದಿಂದ ಬಂದ ಅರ್ಜಿಗಳ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಅಭ್ಯರ್ಥಿಯು ಓದು, ಬರಹ ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿರುವುದು ಕಡ್ಡಾಯ. ಈ ಮೊದಲು ಸ್ಥಳೀಯ ಕಚೇರಿಯಲ್ಲಿ ಕೆಲಸ ನಿರ್ವಹಿಸಿದ ಅನುಭವ ಇದ್ದಲ್ಲಿ ಖಾತರಿ ಪಡಿಸಿಕೊಂಡು ಅರ್ಹ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುವುದು. ಅರ್ಜಿ ಸಲ್ಲಿಸುವಾಗ ಎಲ್ಲಾ ಪ್ರಮಾಣಪತ್ರಗಳನ್ನು, ಅಂಕಪಟ್ಟಿಗಳನ್ನು, ವಯೋಮಿತಿ ಹಾಗೂ ವಿಧ್ಯಾಭ್ಯಾಸದ ಕುರಿತು ಶಾಲಾ ಪ್ರಮಾಣ ಪತ್ರವನ್ನು, ಇತ್ತೀಚೆಗೆ ಪಡೆದ ಜಾತಿ, ಆದಾಯ ದೃಢೀಕರಣ ಹಾಗೂ ಪಡಿತರ ಚೀಟಿ ನಕಲು ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಜೂನ್ 7 ಕೊನೆಯ…

Read More