Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ಕಾಳವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ 1 ಮತ್ತು 2 ರ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ ಸೌಕೂರಿನ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನ ಸಭಾಂಗಣದಲ್ಲಿ ನೆರವೇರಿತು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಪಿ. ಕಿಶನ್ ಹೆಗ್ಡೆ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿ, ಶಿಬಿರದಲ್ಲಿ ವಿದ್ಯಾರ್ಥಿಗಳು ಕೈಗೊಂಡ ಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು ಕಲಿತ ಮೌಲ್ಯಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡಾಗ ಮಾತ್ರ ಬದುಕು ಸಾರ್ಥಕ. ವಿದ್ಯಾರ್ಥಿ ಜೀವನದ ಸಂದರ್ಭದಲ್ಲಿ ಮೌಲ್ಯಗಳನ್ನು ಕಲಿಯುವ ಮತ್ತು ಕೌಶಲ್ಯಗಳನ್ನು ಕರಗತ ಮಾಡಿಕೊಳ್ಳುವ ವಿಷಯ ಪ್ರಮುಖವಾದವು. ವಿವಿಧ ಕ್ಷೇತ್ರಗಳಲ್ಲಿ ಲಭ್ಯ ಇರುವ ಅವಕಾಶಗಳನ್ನು ತಮ್ಮ ಆಸಕ್ತಿ ಮತ್ತು ಅಭಿರುಚಿಗೆ ಅನುಗುಣವಾಗಿ ಬಳಸಿಕೊಳ್ಳುವ ಕುರಿತು ವಿದ್ಯಾರ್ಥಿಗಳು ಸದಾ ಕ್ರಿಯಾಶೀಲರಾಗಿ ಇರಬೇಕು ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಪ್ರಭಾಕರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಬೈಂದೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಯಡ್ತರೆ ಪ್ರಧಾನ ಕಛೇರಿಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆಯನ್ನು ಸಂಘದ ಅಧ್ಯಕ್ಷರಾದ ಟಿ. ನಾರಾಯಣ ಹೆಗ್ಡೆ ಅವರು ನೆರವೇರಿಸಿದರು. ಅರ್ಚಕರಾದ ಕೇಂಜ ಶ್ರೀಧರ ತಂತ್ರಿಗಳು ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಕೆ. ಗೋಪಾಲ ಪೂಜಾರಿ, ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಕೆ. ಬಾಬು ಶೆಟ್ಟಿ, ಜಿ.ಪಂ. ಮಾಜಿ ಅಧ್ಯಕ್ಷ ಎಸ್. ರಾಜು ಪೂಜಾರಿ, ನಿರ್ದೇಶಕರಾದ ಅರುಣ ಕುಮಾರ್‌, ಎಮ್.ಎಚ್. ಗುರುದತ್ತ, ಡಿ. ಸದಾಶಿವ ಶೇರುಗಾರ್, ಹೆರಿಯ ದೇವಾಡಿಗ, ವಸಂತ ಕುಮಾ‌ರ್ ಶೆಟ್ಟಿ, ಚಿಕ್ಕು ಪೂಜಾರಿ, ನಾಗರಾಜ ಶೆಟ್ಟಿ, ಸತೀಶ್ ಯಡ್ತರೆ, ಶಂಕರ ನಾಯ್ಕ, ಜ್ಯೋತಿ ಪೂಜಾರಿ, ಎಚ್.ವಿಜಯಾ ಶೇರುಗಾರ್, ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರತಾಪಚಂದ್ರ ಶೆಟ್ಟಿ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇಗುಲದಲ್ಲಿ ಮಾ.15 ರಿಂದ ಮಾ. 24ರವರೆಗೆ ನಡೆಯಲಿರುವ ರಥೋತ್ಸವದ ಆಮಂತ್ರಣ ಪತ್ರ ಬಿಡುಗಡೆ ಮಾ.9 ರಂದು ದೇಗುಲದ ಕಚೇರಿಯಲ್ಲಿ ನಡೆಯಿತು. ಮಾ. 22ರಂದು ಬೆಳಗ್ಗೆ 11.15ಕ್ಕೆ ರಥಾರೋಹಣ ನಡೆಯಲಿದೆ. ಸಂಜೆ 5ಗಂಟೆಗೆ ಮಹಾರಥೋತ್ಸವ ನಡೆಯಲಿದೆ. ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೆ. ಬಾಬು ಶೆಟ್ಟಿ, ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಶೆಟ್ಟಿ ಅವರು ವಿವಿಧ ಯೋಜನೆ ಬಗ್ಗೆ ಮಾಹಿತಿ ನೀಡಿದರಲ್ಲದೇ ಕೊಲ್ಲೂರು ಜಾತ್ರೆಗೆ ಇಲಾಖೆಗಳ ಸಹಕಾರ ಕೋರಿದರು. ದೇಗುಲದ ಸಮಿತಿ ಸದಸ್ಯರಾದ ರಘುರಾಮ್ ದೇವಾಡಿಗ, ಸುರೇಂದ್ರ ಶೆಟ್ಟಿ ಮಹಾಲಿಂಗ ನಾಯ್ಕ, ಸುಧಾ ಕೆ., ಧನಾಕ್ಷೀ ದೇಗುಲದ ಸಂತೋಷ್ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 2024-25ನೇ ಸಾಲಿನ ಹತ್ತನೇ ತರಗತಿಯ ಮಕ್ಕಳಿಗೆ ಶುಭಾಶಂಸನಾ ಕಾರ್ಯಕ್ರಮವು ಸಂಸ್ಥೆಯ ಕಾರ್ಯದರ್ಶಿಯವರಾದ ಕೆ. ರಾಧಾಕೃಷ್ಣ ಶೆಣೈ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಮಾರಂಭದಲ್ಲಿ ನಮ್ಮ ಸಂಸ್ಥೆಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ ಗಾಣಿಗ ಅವರು ಮಕ್ಕಳಿಗೆ ಮುಂಬರುವ ಪರೀಕ್ಷೆಗೆ ಶುಭ ಹಾರೈಸಿದರು. ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿ – ವಿದ್ಯಾರ್ಥಿನಿಯರು ತಮ್ಮ ಶಾಲಾ ಜೀವನದ ಅನುಭವಗಳನ್ನು ಹಂಚಿಕೊಂಡರು. ಮುಖ್ಯೋಪಾಧ್ಯಾಯರಾದ ಕೃಷ್ಣ ಅಡಿಗರು ಸರ್ವರನ್ನು ಸ್ವಾಗತಿಸಿದರು. ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ರೇಷ್ಮಾ ಡಿಸೋಜಾ, ನರ್ಸರಿ ವಿಭಾಗದ ಮುಖ್ಯೋಪಾಧ್ಯಾಯಿನಿ ಪ್ರಮೀಳಾ ಡಿಸೋಜಾ ಅವರು ಹಾಗೂ ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲರಾದ ಸುಜಯ್ ಕೋಟೆಗಾರ್ ಅವರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ಸಂಗೀತ ಶಿಕ್ಷಕಿ ರಮಣಿ ಪ್ರಾರ್ಥನೆಗೈದರು. ಪ್ರೌಢಶಾಲಾ ಸಹಶಿಕ್ಷಕಿ ಪ್ರತಿಭಾ ಪೈ ನಿರೂಪಿಸಿ, ಪ್ರೌಢಶಾಲಾ ಸಹಶಿಕ್ಷಕಿ ಆಶಾ ಬಾಯಿ ಧನ್ಯವಾದ ಸಮರ್ಪಣೆ ಗೈದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ 2024 -25 ಇತ್ತೀಚಿಗೆ ನಡೆಯಿತು. ಮುಖ್ಯ ಅತಿಥಿಯಾಗಿದ್ದ ಉದ್ಯಮಿ ಸತೀಶ್ ಎನ್. ಶೇರೆಗಾರ್ ಮಾತನಾಡಿ,  ವಿದ್ಯಾರ್ಥಿಗಳನ್ನು ಉದ್ದೇಶಿಸಿ ಶಿಸ್ತುಬದ್ಧ ಜೀವನ ಶೈಲಿ, ಒಳ್ಳೆಯ ಆಹಾರ ಕ್ರಮ ಮತ್ತು ಸದಾ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಆರೋಗ್ಯದಿಂದಿರಬಹುದು ಎಂದು ತಿಳಿಸಿದರು. ಭಂಡಾರ್ಕಾರ್ಸ್ ಕಾಲೇಜು ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ಅಧ್ಯಕ್ಷತೆ ವಹಿಸಿದ್ದರು. ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ಜಿ.ಎಮ್.ಗೊಂಡ ಮತ್ತು ವಿಧ್ಯಾರ್ಥಿ ಕ್ಷೇಮಪಾಲನಾಧಿಕಾರಿ ಸತ್ಯನಾರಾಯಣ ಉಪಸ್ಥಿತರಿದ್ದರು. ಕಾಲೇಜಿನ ಕ್ರೀಡಾ ಸಾಧಕರು ಕ್ರೀಡಾ ಜ್ಯೋತಿ ಸ್ತಂಭಕ್ಕೆ ಜ್ಯೋತಿ ಬೆಳಗುವುದರ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ದೈಹಿಕ ಶಿಕ್ಷಣ ನಿರ್ದೇಶಕ ಶಂಕರನಾರಾಯಣ ಸ್ವಾಗತಿಸಿ, ದೈಹಿಕ ಶಿಕ್ಷಣ ನಿರ್ದೇಶಕಿ ವನಿತಾ ವಂದಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ ನಡೆಸುವ UCEED (ವಿನ್ಯಾಸಕ್ಕಾಗಿ ಪದವಿಪೂರ್ವ ಸಾಮಾನ್ಯ ಪ್ರವೇಶ ಪರೀಕ್ಷೆ) ಪ್ರವೇಶ ಪರೀಕ್ಷೆ ಬರೆದ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಅಮೂಲ್ಯ ಅಖಿಲ ಭಾರತ ಮಟ್ಟದಲ್ಲಿ 3827‌ನೇ ರ್‍ಯಾಂಕ್ ಪಡೆದಿದ್ದಾರೆ. ಪದವಿಪೂರ್ವ ಶಿಕ್ಷಣಕ್ಕೆ ಸಂಬಂಧಿಸಿದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ತರಬೇತಿ ನೀಡುವುದರ ಮೂಲಕ ಕಾಲೇಜು ವಿಶೇಷವಾಗಿ ಗುರುತಿಸಿಕೊಂಡಿದೆ. ಸಾಧಕ ವಿದ್ಯಾರ್ಥಿನಿಗೆ ಕಾಲೇಜಿನ‌ ಆಡಳಿತ ಮಂಡಳಿ,ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಬಾಲ್ಯದಲ್ಲಿ ಮಕ್ಕಳಿಗೆ ದೊರೆಯಬೇಕಾಗಿರುವ ಸನಾತನ ಸಂಸ್ಕೃತಿ, ಸಂಸ್ಕಾರಯುತ ಶಿಕ್ಷಣವನ್ನು ನೀಡುವ ಉದ್ದೇಶದಿಂದ ಶಿಶು ಮಂದಿರ ಸ್ಥಾಪನೆಗೊಂಡು ಕಾರ್ಯನಿರ್ವಹಿಸುತ್ತಿದೆ. ಶಿಶು ಮಂದಿರದಲ್ಲಿ ಮಕ್ಕಳಿಗೆ ನೀಡುವ ಶಿಕ್ಷಣದ ಪ್ರಯೋಜನ ಮಕ್ಕಳ ಪೋಷಕರಿಗೂ ದೊರೆಯುತ್ತಿದೆ. ಶಿಶು ಮಂದಿರದ ಚಟುವಟಿಕೆ ಹಾಗೂ ಶಿಕ್ಷಣ ಮಕ್ಕಳ ಜೀವನದ ಮೇಲೆ ಬಹಳ ಪ್ರಭಾವ ಬೀರುತ್ತಿದೆ ಎಂದು ಕುಂದಾಪುರ ಸೇವಾ ಸಂಗಮ ಟ್ರಸ್ಟ್‌ನ ಅಧ್ಯಕ್ಷ ಸುಬ್ರಹ್ಮಣ್ಯ ಹೊಳ್ಳ ಹೇಳಿದರು. ಅವರು ಗಂಗೊಳ್ಳಿಯ ಸೇವಾ ಸಂಗಮ ನಿವೇದಿತಾ ಶಿಶು ಮಂದಿರದ ನಗರ ಜಯವಂತ ನಾಯಕ್ ಸಭಾಭವನದಲ್ಲಿ ನಡೆದ ಪಾಲಕರ ಮಿಲನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಸೇವಾ ಸಂಗಮ ನಿವೇದಿತಾ ಶಿಶು ಮಂದಿರ ಅಧ್ಯಕ್ಷ ಬಿ. ರಾಘವೇಂದ್ರ ಪೈ ಅಧ್ಯಕ್ಷತೆ ವಹಿಸಿದ್ದರು. ಸೇವಾ ಸಂಗಮ ಟ್ರಸ್ಟ್‌ನ ವಿಶ್ವಸ್ಥೆ ಚಂದ್ರಿಕಾ ಧನ್ಯ, ಮಕ್ಕಳ ವಿಚಾರದಲ್ಲಿ ಪೋಷಕರು ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳು ಹಾಗೂ ಅವರ ಶಿಕ್ಷಣದ ಬಗ್ಗೆ ಮಾಹಿತಿ ನೀಡಿದರು. ಶಿಶು ಮಂದಿರದ ಸದಸ್ಯರಾದ ಸವಿತಾ ಯು. ದೇವಾಡಿಗ, ಬಿ.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಪ್ರಥಮ ಮತ್ತು ದ್ವಿತೀಯ ಎಂ.ಬಿ.ಎ. ಪದವಿ ವಿದ್ಯಾರ್ಥಿಗಳು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಕುಂದಾಪುರದ ಶಾಸ್ತ್ರಿ ಸರ್ಕಲ್ ನಲ್ಲಿ ಬೀದಿ ನಾಟಕವನ್ನು ಪ್ರದರ್ಶಿಸುವ ಮೂಲಕ ಜನರ ಗಮನಸೆಳೆದರು. ಕುಂದಾಪುರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಪುಷ್ಪಾ ಅವರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಹಿಳಾ ದಿನಾಚರಣೆ ಕುರಿತು ಮಾತನಾಡಿದರು ಹಾಗೂ ಸಮಾಜದಲ್ಲಿ ಹೆಣ್ಣು ಮಕ್ಕಳಿಗೆ ಗಂಡು ಮಕ್ಕಳಷ್ಟೇ ಸಮಾನತೆ ಕೊಟ್ಟರೆ ಏನನ್ನಾದರೂ ಸಾಧಿಸಬಲ್ಲಳು. ಹೆಣ್ಣು ಮಕ್ಕಳು ಕೇವಲ ನಾಲ್ಕು ಗೋಡೆಯ ಒಳಗೆ ಮಾತ್ರ ಸೀಮಿತವಲ್ಲಾ ಎಂದು ತಿಳಿ ಹೇಳಿ ಹೆಣ್ಣು ಮಕ್ಕಳಲ್ಲಿ ಆತ್ಮಸ್ಥೈರ್ಯ ತುಂಬಿದರು. ಈ ಸಂದರ್ಭದಲ್ಲಿ ಎಂ.ಬಿ.ಎ. ವಿಭಾಗದ ಮುಖ್ಯಸ್ಥೆ ಡಾ. ಸುಚಿತ್ರ ಪೂಜಾರಿ, ಕಾವ್ಯ ಮತ್ತು ಪೂರ್ಣಿಮಾ ಶೆಟ್ಟಿ ಉಪಸ್ಥಿತರಿದ್ದರು. ದ್ವಿತೀಯ ವರ್ಷದ ಎಂ.ಬಿ.ಎ. ವಿದ್ಯಾರ್ಥಿನಿ ಸಹರಾ ನಿರೂಪಣೆ ಮಾಡಿ, ವಂದನಾರ್ಪಣೆ ಗೈದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶಂಕರನಾರಾಯಣ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಇಬ್ಬರು ವಿದ್ಯಾರ್ಥಿಗಳು ಮಂಗಳೂರು ವಿಶ್ವವಿದ್ಯಾನಿಲಯ 2023-24 ನೇ ಸಾಲಿನಲ್ಲಿ ನಡೆಸಿದ ಪದವಿ ಪರೀಕ್ಷೆಗಳಲ್ಲಿ ರ್‍ಯಾಂಕ್ ಪಡೆದು ದಾಖಲೆ ನಿರ್ಮಿಸಿರುತ್ತಾರೆ. ಕಲಾ ವಿಭಾಗದಲ್ಲಿ ಅಕ್ಷತಾ ಶೆಟ್ಟಿ 2ನೇ ರ್‍ಯಾಂಕ್ ಪಡೆದು ದಾಖಲೆ ನಿರ್ಮಿಸಿದರೆ, ನಿರ್ವಹಣಾ ವಿಭಾಗದಲ್ಲಿ ಸ್ನೇಹ ದಾಸ್ 6ನೇ ರ್‍ಯಾಂಕ್ ಪಡೆದಿರುತ್ತಾರೆ. ಹಾಲಾಡಿ ಸಮೀಪದ ಕಕ್ಕುಂಜೆಯ ಕರುಣಾಕರ್ ಶೆಟ್ಟಿ ಮತ್ತು ಮುಕಾಂಬಿಕಾ ಶೆಟ್ಟಿ ದಂಪತಿಗಳ ಪುತ್ರಿ ಅಕ್ಷತಾ ಶೆಟ್ಟಿ ತನ್ನ ಸತತವಾದ ಪ್ರಯತ್ನ ಶ್ರಮಗಳಿಂದ ಈ ಶೈಕ್ಷಣಿಕ ಸಾಧನೆಯನ್ನು ಮಾಡಿರುತ್ತಾರೆ. ಕುಟುಂಬ ನಿರ್ವಹಣೆಗೆ ತಾಯಿ ಗೇರು ಬೀಜ ಸುಲಿಯುವ ಕೆಲಸ ಮಾಡುತ್ತಾರೆ. ಸಾಯಿಬ್ರಕಟ್ಟೆಯ ರಿಕ್ಷಾ ಚಾಲಕ ಮಂಜುನಾಥ್ ದಾಸ್ ಮತ್ತು ಅಂಗನವಾಡಿ ಕಾರ್ಯಕರ್ತೆ ವತ್ಸಲಾ ದಾಸ್ ಅವರ ಪುತ್ರಿ ಸ್ನೇಹದಾಸ್ ಬಿಬಿಎ ಪದವಿಯಲ್ಲಿ 6ನೇ ರ್‍ಯಾಂಕ್ ಪಡೆದು ಕಾಲೇಜಿಗೆ ಮತ್ತು ಊರಿಗೆ ಗೌರವವನ್ನು ತಂದಿರುತ್ತಾರೆ. 20 ವರ್ಷಗಳ ನಂತರ ಪದವಿಯಲ್ಲಿ ಎರಡು ರ್‍ಯಾಂಕ್ ಪಡೆದು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸ್ಪೇಸ್ ಮೀಡಿಯಾ ಡಿಸಿಎಕ್ಸ್‌ ಸಿಸ್ಟಮ್ಸ್ ಲಿಮಿಟೆಡ್ ಅರ್ಷಿಸುವ, ಜಗದ್ಗುರು ಶ್ರೀ ಮನ್ಮಧ್ವಾಚಾರ್ಯರ ಮೂಲ ಮಹಾಸಂಸ್ದಾನ‌ ಶ್ರೀ ರಾಘವೇಂದ್ರ ಸ್ವಾಮೀಜಿಗಳ ಮಂತ್ರಾಲಯ, ಪರಮಪೂಜ್ಯ  ಶ್ರೀ 1008  ಶ್ರೀ ಮತ್ಸುಬುಧೇಂದ್ರ ತೀರ್ಥ ಶ್ರೀ ಪಾದಂಗಳವರ ದಿವ್ಯ ಸಾನಿಧ್ಯದಲ್ಲಿ ಕೊಡ ಮಾಡುವ ಪ್ರತಿಷ್ಠಿತ  ಶ್ರೀ ಮಂತ್ರಾಲಯ ಪರಿಮಳ‌ ಪ್ರಶಸ್ತಿ 2025ನ್ನು ಪ್ರಶಸ್ತಿಗೆ ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜು ಹಾಗೂ ಕಿರಿಮಂಜೇಶ್ವರ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ಕ್‌ನ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಾದ ಗಣೇಶ‌ ಮೊಗವೀರ ಅವರನ್ನು ಆಯ್ಕೆ ಮಾಡಲಾಗಿತ್ತು. ಅವರು ಶಿಕ್ಷಣ ಕ್ಷೇತ್ರದಲ್ಲಿ ಇದುವರೆಗೆ ಸಲ್ಲಿಸಿದ ಸೇವೆ ಹಾಗೂ ಕೊಡುಗೆಗಳನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಿದ್ದರು. ಇತ್ತೀಚಿಗೆ ಮಂತ್ರಾಲಯದಲ್ಲಿ ನಡೆದ ವೈಭವದ ಸಮಾರಂಭದಲ್ಲಿ ಮಂತ್ರಾಲಯ ಸ್ವಾಮೀಜಿ ಅವರು ಪ್ರಶಸ್ತಿಯನ್ನು ನೀಡಿ ಗೌರವಿಸಿದರು.

Read More