ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮುಳ್ಳಿಕಟ್ಟೆಯಿಂದ ಬಂಟ್ವಾಡಿ ಕಡೆಗೆ ಅತಿ ವೇಗದಿಂದ ಚಲಿಸುತ್ತಿದ್ದ ಟಿಪ್ಪರ್ ಲಾರಿ ಬಂಟ್ವಾಡಿ ಸೇತುವೆ ಸಮೀಪ ಸಿಮೆಂಟ್ ತುಂಬಿದ ಲಾರಿಗೆ ಡಿಕ್ಕಿ ಹೊಡೆದು, ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯಲ್ಲಿನ ಹೊಂಡಕ್ಕೆ ಬಿದ್ದ ಘಟನೆ ನಡೆಯಿತು. ಅಪಘಾತದಲ್ಲಿ ಟಿಪ್ಪರ್ ಚಾಲಕ ಪಾರಾಗಿದ್ದಾರೆ. ಲಾರಿ ನದಿಗೆ ಉರುಳ ಸಂಧರ್ಭದಲ್ಲಿ ಮರದ ಸಹಾಯದಿಂದ ಪೋದೆಯಲ್ಲಿ ಸಿಲುಕಿಕೊಂಡಿದ್ದರಿಂದ ಭಾರಿ ದೊಡ್ಡ ಅನಾಹುತ ತಪ್ಪಿದೆ. ಟಿಪ್ಪರ್ ಲಾರಿಗೆ ಹಾನಿಯಾಗಿದೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಅಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ 3 ದಿನಗಳ ಪಾರಂಪರಿಕ ಯೋಗ ಶಿಬಿರವು ಇತ್ತೀಚಿಗೆ ನಡೆಯಿತು. ಇಶಾ ಫೌಂಡೇಶನ್ ಸದ್ಗುರು ಗುರುಕುಲಂನ ಶಾಸ್ತ್ರೀಯ ಹಠ ಯೋಗದ ಶಿಕ್ಷಕರಾದ ಪ್ರವೀಣ್ ಕುಮಾರ್ ಪತಂಗಾಸನ, ಶಿಶುಪಾಲಾಸನ, ನಾಡಿ ವಿಭಜನಾಸನ, ಓಂಕಾರ ಪಠಣ ಸೂರ್ಯ ಶಕ್ತಿ ಆಸನ ಇತ್ಯಾದಿಗಳ ಕುರಿತಾಗಿ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಇತರೆ ಸಹಾಯಕ ಸಿಬ್ಬಂದಿಗಳಿಗೆ ಪ್ರಾತ್ಯಕ್ಷಿಕೆಗಳ ಮೂಲಕ ತಿಳಿಸಿಕೊಟ್ಟರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಅವರು ಭಾರತೀಯ ಪರಂಪರೆಯಲ್ಲಿ ಯೋಗಾಭ್ಯಾಸಕ್ಕೆ ಮಹತ್ವದ ಸ್ಥಾನ ನೀಡಲಾಗಿದ್ದು, ಯೋಗವು ನಮ್ಮ ಪ್ರಾಚೀನ ಋಷಿ ಮುನಿಗಳಿಂದ – ಸಾಧು ಸಂತರಿಂದ ಆರಂಭಗೊಂಡು ಇಂದು ಬಹುಮುಖಿ ಪ್ರಯೋಜನಗಳೊಂದಿಗೆ ಸರ್ವವ್ಯಾಪಿಯಾಗಿ ಬೆಳೆದು ನಿಂತಿದೆ. ನಿತ್ಯದ ಯೋಗಾಭ್ಯಾಸದಿಂದ ದೇಹ ಮತ್ತು ಮನಸ್ಸು ಪ್ರಫುಲ್ಲಗೊಳ್ಳುತ್ತದೆ. ದೇಹ ಮತ್ತು ಮನಸ್ಸುಗಳ ಮಧ್ಯೆ ಸಮತೋಲನ ಸಾಧಿಸಿದಾಗ ಮಾತ್ರ ಮಾನವ ಆರೋಗ್ಯಪೂರ್ಣ ಜೀವನವನ್ನು ನಡೆಸಲು ಸಾಧ್ಯ. ಇಂದು ಜಗತ್ತು ಸಾಕಷ್ಟು ದೈಹಿಕ ಮತ್ತು ಮಾನಸಿಕ ಸಮಸ್ಯೆಗಳಿಂದ ಪರಿತಪಿಸುತ್ತಿದ್ದು, ನಿರಂತರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಕಾಲ್ತೋಡು ಗ್ರಾಮದ ಸನ್ನಿಧಿ ಎಮ್ ಅವರು ದ್ವೀತಿಯ ಪಿಯುಸಿ ಪರೀಕ್ಷೆಯಲ್ಲಿ 600 ರಲ್ಲಿ 592 ಅಂಕಗಳೊಂದಿಗೆ ರಾಜ್ಯಕ್ಕೆ 8ನೇ ಸ್ಥಾನ ಹಾಗೂ ಜಿಲ್ಲೆಗೆ ಐದನೇ ಸ್ಥಾನ ಪಡೆದಿದ್ದಾರೆ. ಕಾಲ್ತೋಡು ವಿನೋದ ಮತ್ತು ಮಂಜುನಾಥ ಶೆಟ್ಟಿ ದಂಪತಿಯ ಪುತ್ರಿಯಾದ ಈಕೆ ಕುಂದಾಪುರದ ಶ್ರೀ ವೆಂಕಟರಮಣ ಪಿಯು ಕಾಲೇಜಿನಲ್ಲಿ ವ್ಯಾಸಂಗ ಮಾಡಿದ್ದಾರೆ. ಅವರು
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಇಲ್ಲಿನ ಶ್ರೀ ನಿತ್ಯಾನಂದ ಆಶ್ರಮದಲ್ಲಿ ಎ.12 ಮತ್ತು ಎ.13 ರಂದು 65ನೇ ವಾರ್ಷಿಕೋತ್ಸವ ನಡೆಯಲಿದೆ. ಎ. 12ನೇ ಶನಿವಾರ ಬೆಳಿಗ್ಗೆ ಗಣಹೋಮ, ಗುರುಹೋಮ, ಶ್ರೀ ಗುರುದ್ವಯರ ಮಾಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ. ಎ. 13 ನೇ ಆದಿತ್ಯವಾರ ಬೆಳಿಗ್ಗೆ ಶ್ರೀ ನಾಗದೇವರ ಕಲ್ಲೋಕ್ತ ಮಹಾಪೂಜೆ, ಪ್ರಸಾದ ವಿತರಣೆ, ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಲಿದೆ ಎಂದು ಆಶ್ರಮದ ಪ್ರತಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಇಲ್ಲಿನ ಖಾರ್ವಿಕೇರಿಯ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಮೃತ ಮಹೋತ್ಸವ-2025 ಸಮಾರಂಭದ ಬಹುಮಾನ ವಿತರಣಾ ಕಾರ್ಯಕ್ರಮ ಗಂಗೊಳ್ಳಿ ಖಾರ್ವಿಕೇರಿಯ ಶ್ರೀ ಮಹಾಂಕಾಳಿ ಅಮ್ಮನವರ ದೇವಸ್ಥಾನದ ವಠಾರದಲ್ಲಿ ಗುರುವಾರ ನಡೆಯಿತು. ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ ಖಾರ್ವಿ ಧ್ವಜಾರೋಹಣ ನೆರವೇರಿಸಿದರು. ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ರವಿಶಂಕರ ಖಾರ್ವಿ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭ ಶಾಲೆಯ ಕಟ್ಟಡ ನಿರ್ಮಾಣಕ್ಕೆ ಸಹಕರಿಸಿದ ಉದ್ಯಮಿ ಎಚ್. ಗಣೇಶ ಕಾಮತ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಗ್ರಾಪಂ ಉಪಾಧ್ಯಕ್ಷ ತಬ್ರೇಜ್, ಸದಸ್ಯರಾದ ಸುರೇಖಾ ಕಾನೋಜಿ, ಶ್ರೀನಾಥ ಖಾರ್ವಿ, ಗಂಗೊಳ್ಳಿ ವಲಯದ ಸಮೂಹ ಸಂಪನ್ಮೂಲ ವ್ಯಕ್ತಿ ಪ್ರದೀಪ್ ಕುಮಾರ್ ಶೆಟ್ಟಿ ಶುಭ ಹಾರೈಸಿದರು. ಮಡಿ ಲೈಟ್ಹೌಸ್ ಹೋಳಿ ಉತ್ಸವ ಸಮಿತಿ ಅಧ್ಯಕ್ಷ ಲಿಂಗನ ರವಿ ಖಾರ್ವಿ, ಖಾರ್ವಿಕೇರಿ ಮಹಾಂಕಾಳಿ ಮಠ ಗಣೇಶೋತ್ಸವ ಸಮಿತಿ ಉಪಾಧ್ಯಕ್ಷ ತಾರ್ಯ ಕೃಷ್ಣ ಖಾರ್ವಿ, ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ದಿವಾಕರ ಖಾರ್ವಿ, ಹಳೆ ವಿದ್ಯಾರ್ಥಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಗರದ ಚಿಕ್ಕನಸಾಲು ರಸ್ತೆಯಲ್ಲಿರುವ ಚಂದ್ರಶೇಖರ್ ಅವರ ಕಿರಾಣಿ ಅಂಗಡಿಗೆ ಬುಧವಾರ ಬೆಳಗ್ಗೆ ಬೆಂಕಿ ಬಿದ್ದು 4 ಲಕ್ಷ ರೂ.ಗೂ ಹೆಚ್ಚು ನಷ್ಟ ಸಂಭವಿಸಿದೆ. ಮಾಲಿಕರು ಬೆಳಿಗ್ಗೆ ಅಂಗಡಿಯ ಬಾಗಿಲನ್ನು ತೆರೆದು ದೇವರಿಗೆ ದೀಪವನ್ನು ಹಚ್ಚಿ ಹತ್ತಿರದ ಶ್ರೀ ಮೈಲಾರೇಶ್ವರ ದೇವಸ್ಥಾನಕ್ಕೆ ಹೋಗಿ ಕೆಲವೇ ನಿಮಿಷಗಳಲ್ಲಿ ಅಂಗಡಿಗೆ ವಾಪಾಸ್ಸು ಬರುವುದರೊಳಗೆ ಅಂಗಡಿ ಸಂಪೂರ್ಣ ಸುಟ್ಟು ಕರಕಲಾಗಿದೆ. ಅಂಗಡಿಯೊಳಗಿದ್ದ ಫ್ರಿಡ್ಜ್, ಕಪಾಟು, ಶೋಕೇಸ್, ಮುಂತಾದ ಪೀಠೋಪಕರಣಗಳು , ಕಿರಾಣಿ ಸಾಮಗ್ರಿಗಳು ಸಂಪೂರ್ಣ ಸುಟ್ಟು ಹೋಗಿದೆ. ಅಗ್ನಿ ಶಾಮಕದಳದವರು ಆಗಮಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಬಿಲ್ಲವರ ಹಿತರಕ್ಷಣಾ ವೇದಿಕೆ ಗಂಗೊಳ್ಳಿ ಮತ್ತು ಕಲಾಶ್ರೀ ಶಿಕ್ಷಣ ಪ್ರೇಮಿಗಳ ಬಳಗ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮವು ಗಂಗೊಳ್ಳಿಯ ಡಾ. ಅಂಬೇಡ್ಕರ್ ಭವನದಲ್ಲಿ ಮಂಗಳವಾರ ಜರಗಿತು. ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ ಖಾರ್ವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿದ್ದ ಕುಂದಾಪುರ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಉಮೇಶ ಟಿ. ಎಲ್. ಶುಭಾ ಶಂಸನೆಗೈದರು. ಗಂಗೊಳ್ಳಿ ಗ್ರಾಮದ ಅಂಗನವಾಡಿ ಕಾರ್ಯಕರ್ತೆಯರಾದ ಫಿಲೋಮಿನಾ ಫೆರ್ನಾಂಡಿಸ್, ಶೇಷಮ್ಮ, ಶೋಭಾ ಎಸ್., ಕಮಲಾ, ರೇಖಾ ಕೆ., ಸಂಗೀತಾ, ಸಹನಾ ಹಾಗೂ ನಿಖಿತಾ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಗಂಗೊಳ್ಳಿ ಬಿಲ್ಲವರ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಗೋಪಾಲ ಪೂಜಾರಿ, ಅಂಗನವಾಡಿ ಮೇಲ್ವಿಚಾರಕಿ ರೇಖಾ ಕೆ., ಸರಕಾರಿ ಕಿರಿಯ ಪ್ರಾಥಮಿಕ (ಹವೇ) ಶಾಲೆ ಮುಖ್ಯ ಶಿಕ್ಷಕ ಗುರುರಾಜ್ ಆಚಾರ್ಯ, ಸಹಶಿಕ್ಷಕ ಯೋಗೀಶ್, ಜಿ.ವಿ.ಆರ್.ಲಕ್ಷ್ಮಣ ಪೂಜಾರಿ, ಎಸ್ಡಿಎಂಸಿ ಅಧ್ಯಕ್ಷೆ ಸವಿತಾ ಖಾರ್ವಿ, ಅರ್ಚನಾ ಮಹಿಳಾ ಮಂಡಲ ಅಧ್ಯಕ್ಷೆ ಜ್ಯೋತಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಕಾಯ್ದೆ ಅಧಿನಿಮಯ 1997 ರ ಕಲಂ 25 ರನ್ವಯ ಹಾಗೂ ಧಾರ್ಮಿಕ ಪರಿಷತ್ತಿನ ಜಿಲ್ಲಾ ಧಾರ್ಮಿಕ ಪರಿಷತ್ನ ಸಭೆಯ ನಿರ್ಣಯದಂತೆ ಜಿಲ್ಲೆಯಲ್ಲಿರುವ ಪ್ರವರ್ಗ ಸಿ ಗೆ ಸೇರಿದ ಬ್ರಹ್ಮಾವರ ತಾಲೂಕಿನ ಮೂಡಹಡು ಗ್ರಾಮದ ಯಡಬೆಟ್ಟು ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ವ್ಯವಸ್ಥಾಪನ ಸಮಿತಿಯನ್ನು ಮೂರು ವರ್ಷಗಳ ಅವಧಿಗೆ ರಚಿಸಲು ಆಸಕ್ತ ಭಕ್ತಾದಿಗಳು ಹಾಗೂ ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಕನಿಷ್ಠ 25 ವರ್ಷ ಮೇಲ್ಪಟ್ಟ ಆಸಕ್ತ ಭಕ್ತಾದಿಗಳು ಯಾವುದೇ ಒಂದು ಅಧಿಸೂಚಿತ ಸಂಸ್ಥೆಯ/ ದೇವಾಲಯದ ವ್ಯವಸ್ಥಾಪನಾ ಸಮಿತಿಗೆ ಮಾತ್ರ ಸದಸ್ಯತ್ವ ಕೋರಿ ಅರ್ಜಿಯನ್ನು ನಮೂನೆ-1(ಬಿ) (22 ನೇ ನಿಯಮ) ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ಏಪ್ರಿಲ್ 17 ರ ಒಳಗಾಗಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ಆಯುಕ್ತರು, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ, ಕೊಠಡಿ ಸಂಖ್ಯೆ 206, ಬಿ ಬ್ಲಾಕ್,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸಮಾಜಸೇವೆಯೇ ಜೀವಾಳವಾಗಿರಿಸಿಕೊಂಡು ತನ್ನ ಚೌಕಟ್ಟಿನೊಳಗೆ ನಿರಂತರ ಕಾರ್ಯಕ್ರಮಗಳನ್ನು ನೀಡುವ ಪಂಚವರ್ಣದ ಕಾರ್ಯವೈಕರಿ ನಿಜಕ್ಕೂ ಮೆಚ್ಚುವಂತ್ತದ್ದು ಎಂದು ಹಿರಿಯ ಪತ್ರಕರ್ತ ಚಂದ್ರಶೇಖರ್ ಬೀಜಾಡಿ ಹೇಳಿದರು. ಅವರು ಕೋಟದ ಪಂಚವರ್ಣ ಕಛೇರಿಯಲ್ಲಿ ಸದಸ್ಯ ಗಣೇಶ್ ಕಾಸನಗುಂದು ಇವರ ಹುಟ್ಟುಹಬ್ಬದ ಅಂಗವಾಗಿ ಹಮ್ಮಿಕೊಂಡ ಗುರುವಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಪ್ರಸ್ತುತ ಯುವ ಸಮೂಹ ದಿಕ್ಕು ತಪ್ಪಿ ಬದುಕುವ ಕಾಲಘಟ್ಟದಲ್ಲಿ ನಾವುಗಳು ಕಾಣುತ್ತೇವೆ ಆದರೆ ಇಲ್ಲಿನ ಈ ಯುವಕ ಪಡೆ ಹೊಸ ಹೊಸ ಆಲೋಚನೆಗಳ ಮೂಲಕ ಸಮಾಜದ ಒಳಿತಿಗೆ ಶ್ರಮಿಸುತ್ತಿದೆ ಇದು ಅಭಿನಂದನಾರ್ಹ ಕಾರ್ಯವಾಗಿದೆ ಅಂತಯೇ ಪಂಚವರ್ಣದ ಸ್ವಚ್ಛತಾ ಕಾರ್ಯ ಹೊಸ ಅಧ್ಯಾಯಕ್ಕೆ ಮುನ್ನುಡಿ ಬರೆಯಲಿದೆ. ಇಲ್ಲಿನ ಸಂಘಟಕರ ಕ್ರೀಯಾಶೀಲತೆ ಹೊಸ ಮನ್ವಂತರ ಸೃಷ್ಠಿಸುವಂತ್ತಾಗಿದೆ ಎಂದು ತಮ್ಮ ಆಶಯ ವ್ಯಕ್ತಪಡಿಸಿದರು. ಇದೇ ವೇಳೆ ಪಂಚವರ್ಣದ ಸದಸ್ಯ ಗಣೇಶ್ ಹುಟ್ಟುಹಬ್ಬದ ಅಂಗವಾಗಿ ಅವರ ಬಾಲ್ಯದ ಶಿಕ್ಷಕರಾದ ಜೂಲಿಯ ಟೀಚರ್, ಸಹಾಯಕಿ ಜಲಜ ಶೇಖರ್,ಪ್ರಾಥಮಿಕ ಶಾಲಾ ನಿವೃತ್ತ ಶಿಕ್ಷಕ ಕೊಯ್ಕೂರು ಸೀತಾರಾಮ ಶೆಟ್ಟಿ ಇವರುಗಳನ್ನು ನಿವೃತ್ತ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಭಾರತೀಯ ಸೇನೆ/ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2 (ಎ), 3 (ಎ) ಹಾಗೂ (3ಬಿ) ಗಳ ಅರ್ಹ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನ ಮೊದಲನೇ ತಂಡದ ಆಯ್ಕೆಯ ಪೂರ್ವಸಿದ್ದತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಉಚಿತವಾಗಿ ನೀಡುತ್ತಿದ್ದು, ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ (ಬಾಲಕರಿಗೆ ಮಾತ್ರ) ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಏಪ್ರಿಲ್ 21 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಕೊಠಡಿ ಸಂಖ್ಯೆ: 304, ಬಿ ಬ್ಲಾಕ್, ಎರಡನೇ ಮಹಡಿ, ರಜತಾದ್ರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2574881 ಅಥವಾ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
