Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದ ಚಪ್ಪರಿಕೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೌಶಲ್ಯ ಕೇಂದ್ರ ಉದ್ಘಾಟನೆ ಹಾಗೂ ಶಾಲೆಯನ್ನು ಜ್ಞಾನನಿಧಿ ಎಜುಕೇಷನಲ್ ಟ್ರಸ್ಟ್ ವತಿಯಿಂದ ದತ್ತು ಸ್ವೀಕರಿಸುವ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು. ಸಮೃದ್ಧ ಬೈಂದೂರು ಪರಿಕಲ್ಪನೆಯ 300 ಟ್ರೀಸ್ ಯೋಜನೆಯಡಿ, ಸ್ವಯಂ ಸ್ಫೂರ್ತಿ ಫೌಂಡೇಶನ್ ಸಹಕಾರದೊಂದಿಗೆ ಟೊರೆಂಟೋ ಟೆಕ್ನಾಲಾಜಿಸ್ ಪ್ರೈವೇಟ್ ಲಿಮಿಟೆಡ್ ಅವರ ಸಿಎಸ್‌ಆರ್‌ ನಿಧಿಯಿಂದ ಈ ಕೌಶಲ್ಯ ಕೇಂದ್ರ ಸ್ಥಾಪಿಸಲಾಗಿದೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಶಾಸಕ ಗುರುರಾಜ್ ಗಂಟಿಹೊಳೆ ಹಾಗೂ ಸ್ವಯಂ ಸ್ಪೂರ್ತಿ ಫೌಂಡೇಶನ್ ಅಧ್ಯಕ್ಷ ನಾಗರಾಜ್ ಶೆಟ್ಟಿ ಜಡ್ಕಲ್ ಕೌಶಲ್ಯಾಭಿವೃದ್ಧಿಯ ಮಹತ್ವವನ್ನು ಒತ್ತಿಹೇಳಿದರು. ಈ ಸಂದರ್ಭದಲ್ಲಿ ಜ್ಞಾನನಿಧಿ ಟ್ರಸ್ಟ್ ಶಾಲೆಯನ್ನು ದತ್ತು ಸ್ವೀಕರಿಸಿ, ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವುದಾಗಿ ತಿಳಿಸಿದೆ. ಕಾರ್ಯಕ್ರಮದಲ್ಲಿ ಎಸ್‌ಡಿಎಮ್‌ಸಿ ಅಧ್ಯಕ್ಷರು ಮತ್ತು ಸದಸ್ಯರು, ಶಿಕ್ಷಕರು, ವಿದ್ಯಾರ್ಥಿ ಪೋಷಕರು ಮತ್ತು ವಿದ್ಯಾರ್ಥಿಗಳು ಹಾಗೂ ಸ್ಥಳೀಯರು ಭಾಗವಹಿಸಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಭಾರತೀಯ ಸೇನೆ / ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗಳ ಅರ್ಹ ಅಭ್ಯರ್ಥಿಗಳಿಗೆ ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಉಚಿತವಾಗಿ ನೀಡಲಾಗುತ್ತಿದ್ದು, 2006 ರ ಏಪ್ರಿಲ್ 27 ರಿಂದ 2009 ರ ಏಪ್ರಿಲ್ 27ರ ಅವಧಿಯಲ್ಲಿ ಜನಿಸಿರುವ ಅರ್ಹ ಅಭ್ಯರ್ಥಿಗಳಿಂದ (ಬಾಲಕರು ಮಾತ್ರ) ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.  ಅರ್ಜಿ ಸಲ್ಲಿಸಲು ಏಪ್ರಿಲ್ 27 ಕೊನೆಯ ದಿನವಾಗಿದ್ದು, ತರಬೇತಿಯು ಬ್ರಹ್ಮಾವರ ತಾಲೂಕು ಬಾರ್ಕೂರು ಹನೆಹಳ್ಳಿ ನ್ಯಾಷನಲ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ. ಅರ್ಹ ಅಭ್ಯರ್ಥಿಗಳನ್ನು ನಗರದ ಅಜ್ಜರಕಾಡು ಮಹಾತ್ಮಗಾಂಧಿ ಮೈದಾನದಲ್ಲಿ ಮೇ. 2ರಂದು ನಡೆಯಲಿರುವ ರ‍್ಯಾಲಿಯಲ್ಲಿ ಆಯ್ಕೆ ಮಾಡಲಾಗುವುದು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಕೊಠಡಿ ಸಂಖ್ಯೆ: 304, ಬಿ ಬ್ಲಾಕ್, ಎರಡನೇ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ದೈಹಿಕ ಆರೋಗ್ಯಕ್ಕೆ ಮಾನಸಿಕ ಸ್ವಾಸ್ತ್ಯ ಅಗತ್ಯ. ಒಳ್ಳೆಯ ಆರೋಗ್ಯಕ್ಕೆ ಸಂತೋಲನ ಆಹಾರ, ಪೌಷ್ಟಿಕ ಆಹಾರ, ಸಕ್ಕರೆಯ ಮಿತವಾದ ಬಳಕೆ ಅತ್ಯಂತ ಅವಶ್ಯಕ. ವಿದ್ಯಾರ್ಥಿ ದೆಸೆಯಲ್ಲಿಯೇ ಆರೋಗ್ಯದ ಕುರಿತು ಕಾಳಜಿ ವಹಿಸಬೇಕಾಗಿರುವುದು ವರ್ತಮಾನದ ತುರ್ತು ಎಂದು ಸಮುದಾಯ ಆರೋಗ್ಯ ಕೇಂದ್ರ, ಕೋಟ ಇಲ್ಲಿನ ಆರೋಗ್ಯ ವೈದ್ಯಾಧಿಕಾರಿ ಹಾಗೂ ಶಿಶು ತಜ್ಞರಾದ ಡಾ. ಮಾಧವ ಪೈ ಕೆ. ತಿಳಿಸಿದರು. ಅವರು ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ 1 ಮತ್ತು 2ರ ಆಶ್ರಯದಲ್ಲಿ ನಡೆದ ವಿಶ್ವ ಆರೋಗ್ಯ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆಯನ್ನು ವಹಿಸಿದ್ದರು. ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿಗಳಾದ ರಾಜೇಶ್ ಶೆಟ್ಟಿ ವಕ್ವಾಡಿ ಹಾಗೂ ಪೂಜಾ ಕುಂದರ್ ಉಪಸ್ಥಿತರಿದ್ದರು. ಸುಶ್ಮಿತಾ ಶೆಟ್ಟಿ ಅತಿಥಿಗಳನ್ನು ಪರಿಚಯಿಸಿ, ಪಲ್ಲವಿ ಪ್ರಾರ್ಥಿಸಿ, ನಿಶಾ ಶೆಟ್ಟಿ ಸ್ವಾಗತಿಸಿ, ಎನ್.ಎಸ್.ಎಸ್. ಸ್ವಯಂಸೇವಕರರಾದ ಶ್ರೇಯಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದ, ದೀಪಿಕಾ ಶೆಟ್ಟಿ ವಂದಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸಮೃದ್ಧ ಬೈಂದೂರು 300 ಟ್ರೀಸ್ ಯೋಜನೆಯಲ್ಲಿ ಸ್ವಯಂ ಸ್ಪೂರ್ತಿ ಫೌಂಡೇಶನ್ ಬೆಂಗಳೂರು ಇವರ ಸಹಕಾರದೊಂದಿಗೆ ಬೈಂದೂರು ಕ್ಷೇತ್ರದ ವಿವಿಧ ಸರಕಾರಿ ಶಾಲೆಗಳಲ್ಲಿ ಕೌಶಲ್ಯ ಕೇಂದ್ರವನ್ನು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಉದ್ಘಾಟಿಸಿದರು. ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಚಪ್ಪರಿಕೆ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ರಾಗಿಹಕ್ಲು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕನ್ಯಾನ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹೆಮ್ಮಾಡಿ ಇಲ್ಲಿ ಕಂಪ್ಯೂಟರ್ ಲ್ಯಾಬ್, ಮಿನಿ ಲೈಬ್ರರಿ ಹಾಗೂ ಕ್ರೀಡಾ ಸಾಮಗ್ರಿಗಳನ್ನು ಒಳಗೊಂಡ ಕೌಶಲ್ಯ ಕೇಂದ್ರವನ್ನು ವಿವಿಧ ಕಂಪನಿಗಳ ಸಿಎಸ್ಆರ್ ಸಹಕಾರದಿಂದ ಸ್ವಯಂ ಸ್ಫೂರ್ತಿ ಫೌಂಡೇಶನ್ ಸಂಸ್ಥೆಯು ನಿರ್ಮಿಸಿದೆ. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕರು ಸರಕಾರಿ ಶಾಲೆಯ ಉಳಿವಿಗಾಗಿ ಆರಂಭಿಸಿದ 300 ಟ್ರೀಸ್ ಯೋಜನೆಯಿಂದ ಇಂದು ಸುಮಾರು 150ಕ್ಕೂ ಹೆಚ್ಚು ಶಾಲೆಗಳು ಯಾವುದಾದರೂ ಒಂದು ಸೌಲಭ್ಯವನ್ನು ಪಡೆದುಕೊಂಡು ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ಸಹಕಾರಿಯಾಗಿದೆ. ಈ ಯೋಜನೆಗೆ ಶ್ರಮಿಸುತ್ತಿರುವ ಎಲ್ಲಾ ವಿದ್ಯಾಭಿಮಾನಿಗಳಿಗೂ ಧನ್ಯವಾದವನ್ನು ಸಮರ್ಪಿಸಿದರು. ಕಾಂತಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಸರಿ ಸುಮಾರು 800 ವರ್ಷಗಳ ಇತಿಹಾಸ ಹೊಂದಿರುವ ಹಾಗೂ ಎರಡನೇ ಮಾರಣಕಟ್ಟೆ ಎಂದು ಪ್ರಸಿದ್ಧಿ ಪಡೆದಿರುವ ಕಾರಣಿಕ ಸ್ಥಳ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಬಿಜೂರು ಗ್ರಾಮದ ಮೂರ್ಗೋಳಿಹಕ್ಲು ಶ್ರೀ ನಂದಿಕೇಶ್ವರ ಹಾಗೂ ಸಪರಿವಾರ ದೈವಗಳ ದೈವಸ್ಥಾನ. ಈ ಸನ್ನಿಧಿಯಲ್ಲಿ ಜಾತಿ, ಮತ ಭೇದವಿಲ್ಲದೇ ಭಕ್ತರೇ ಸ್ವತಃ ತಾವೇ ಮುಟ್ಟಿ ಪೂಜೆಯನ್ನು ಮಾಡುವ ಪದ್ಧತಿ ಇರುವುದು ಇನ್ನೊಂದು ವಿಶೇಷವಾಗಿದೆ. ನಿತ್ಯ ಜೀವನದ ಕಷ್ಟಗಳಿಗೆ ಮುಕ್ತಿ ದೊರಕಿಸಿ, ಬಾಳ ದಾರಿಗೆ ಶಕ್ತಿ ನೀಡಿ ಬೆಳಕು ತೋರುತ್ತಿರುವ ವಿಶೇಷ ಸ್ಥಳವಾಗಿ ಗುರುತಿಸಿಕೊಂಡಿದೆ. ಇಲ್ಲಿ ಎ.12ರಿಂದ18ರ ವರೆಗೆ ಶ್ರೀ ನಂದಿಕೇಶ್ವರ ಪರಿವಾರ ದೈವಗಳ ಮತ್ತು ನಾಗ ದೇವರ ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಹಾಗೂ ಸುವರ್ಣಮಹೋತ್ಸವ ಹಾಗೂ ಶ್ರೀ ರಾಮ ನಾಮ ಕೋಟಿ ಜಪ ಯಜ್ಞ ಹಾಗೂ ಪೂರ್ಣಾಹುತಿ ಕಾರ್ಯಕ್ರಮಗಳು ನಡೆಯಲಿದೆ. ಎ.12ರಂದು ಸಂಜೆ ಗಂಟೆ 6ರಿಂದ ರಾಕ್ಷೋಘ್ನ ಹೋಮ, 1008 ಅಷ್ಟೋತ್ತರ ಸಹಸ್ರ ಬ್ರಹ್ಮಕಲಶ, ಕಲಶ ಸ್ಥಾಪನಾ ಪೂಜೆ ನಡೆಯಲಿದೆ.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಪಂಚವರ್ಣ ಯುವಕ ಮಂಡಲ ಕೋಟ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ಸಾರಥ್ಯದಲ್ಲಿ ನಿರಂತರವಾಗಿ ನಡೆಯುತ್ತಿರುವ ಪ್ರತಿ ವಾರದ ಪರಿಸರಸ್ನೇಹಿ ಆಂದೋಲನಕ್ಕೆ 300ನೇ ವಾರದ ಸಂಭ್ರಮ. ಈ ಹಿನ್ನಲ್ಲೆಯಲ್ಲಿ ಜಿಲ್ಲಾಡಳಿತ, ಸ್ಥಳೀಯಾಡಳಿತ ಹಾಗೂ ವಿವಿಧ ಸಂಘಸಂಸ್ಥೆ,ಸ್ಥಳೀಯ ಶಿಕ್ಷಣ ಸಂಸ್ಥೆಗಳ ನೆರವಿನೊಂದಿಗೆ ಸಮಾಜಸೇವಕ ಆನಂದ್ ಸಿ. ಕುಂದರ್ ರವರ 78ನೇ ಹುಟ್ಟುಹಬ್ಬದ ಅಂಗವಾಗಿ ಮೇ.3ರಂದು ಕೋಡಿ ಗ್ರಾಮಪಂಚಾಯತ್ ನಿಂದ ಕೋಟ ಗ್ರಾಮಪಂಚಾಯತ್ ವರೆಗಿನ ಸುಮಾರು 5ವರೆ ಕೀ.ಮೀ ಬೀಚ್ ಕ್ಲಿನಿಂಗ್ ಬೃಹತ್ ದಾಖಲೆಯ ಅಭಿಯಾನಕ್ಕೆ ಮುನ್ನುಡಿ ಬರೆಯಲಿದೆ. ಇದರ ಅಂಗವಾಗಿ ಸೋಮವಾರ ಕೋಟ ಸಹಕಾರಿ ವ್ಯವಸಾಯಕ ಸಂಘದ ಬಿ.ಸಿ ಹೊಳ್ಳ ಸಭಾಂಗಣದಲ್ಲಿ ಆನಂದ್ ಸಿ ಕುಂದರ್ ಅಧ್ಯಕ್ಷತೆಯಲ್ಲಿ ರೂಪುರೇಷೆಗಳನ್ನು ಸಿದ್ಧಪಡಿಸುವ ಪೂರ್ವಭಾವಿ ಸಭೆ ಏರ್ಪಡಿಸಲಾಯಿತು. ಸಭೆಯಲ್ಲಿ ಕಾರ್ಯಕ್ರಮ ಸಂಯೋಜಕ ರವೀಂದ್ರ ಕೋಟ ಬೀಚ್ ಕ್ಲಿನಿಂಗ್ ಅಭಿಯಾನದ ತಯಾರಿಗಳ ಕುರಿತು ಸಭೆಗೆ ಮಾಹಿತಿ ತಿಳಿಸಿದರು. ಇದೇ ವೇಳೆ ವಿವಿಧ ಗಣ್ಯರು ಹಾಗೂ ಸಂಘಸಂಸ್ಥೆಗಳ ಸಲಹೆ ಸೂಚನೆಗಳನ್ನು ಪಡೆಯಲಾಯಿತು. ಗೀತಾನಂದ ಫೌಂಡೇಶನ್ ಪ್ರವರ್ತಕ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಜಾತಿ, ಭೌಗೋಳಿಕ, ವರ್ಣ, ಭಾಷೆ, ಲಿಂಗ ಮುಂತಾದ ಅಸಮಾನತೆಗಳು ಭಾರತದ ಸೌಹಾರ್ದತೆಯನ್ನು ಛಿದ್ರಗೊಳಿಸಿವೆ. ಇಂತಹ ಹಲವು ಅಸಮಾನತೆಗಳನ್ನು ಸೃಷ್ಠಿ ಮಾಡಿಕೊಂಡಿರುವ ನಮ್ಮ ಸಮಾಜದಲ್ಲಿ ಸೌಹಾರ್ದತೆಯ ಸ್ಥಾಪನೆ ಎನ್ನುವುದು ಒಂದು ಸವಾಲೇ ಸರಿ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪುರುಷೋತ್ತಮ ಬಿಳಿಮಲೆ ಹೇಳಿದರು. ಅವರು ಮಂಗಳವಾರ ತಾಲೂಕು ಸದ್ಭಾವನಾ ವೇದಿಕೆ ಹಾಗೂ ಕನ್ಯಾನದ ನಮ್ಮ ಭೂಮಿ ಸಂಸ್ಥೆಯ ಆಶ್ರಯದಲ್ಲಿ ಹಟ್ಟಿಯಂಗಡಿ ಸಮೀಪದ ಕನ್ಯಾನದ ನಮ್ಮ ಭೂಮಿ ಸಂಸ್ಥೆಯಲ್ಲಿ ʼಸಂವಿಧಾನದ ಆಶಯಗಳಿಗೆ ಸೌಹಾರ್ದವೇ ಮೆಟ್ಟಿಲುʼ ಎಂಬ ವಿಚಾರ ಸಂಕಿರಣ – ಸಂವಾದವನ್ನು ಉದ್ಘಾಟಿಸಿ ಮಾತನಾಡಿದರು. ಹಲವಾರು ವರ್ಷಗಳಿಂದ ಕಟ್ಟಿದ ಇದರ ಗೋಡೆಯನ್ನು ಒಮ್ಮೆಲೆ ಹೊಡೆದು ಹಾಕುವುದು ಅಷ್ಟೊಂದು ಸುಲಭವಲ್ಲ. ಆದರೆ ನಾವೆಲ್ಲ ಮನಸ್ಸು ಮಾಡಿದರೆ ಕ್ಷಣಾರ್ಧದಲ್ಲಿ ಕೆಡವಬಹುದು. ಸೌಹಾರ್ದತೆಯನ್ನು ಸಾಧಿಸುವ ಹೆಜ್ಜೆಯನ್ನು ಇಡಬಹುದು ಎಂದರು. ಇದಕ್ಕೆ ಪೂರಕವಾಗಿ ನಮ್ಮೊಂದಿಗೆ ನಮ್ಮ ಸಂವಿಧಾನವಿದೆ. ಎಲ್ಲಾ ರೀತಿಯ ಅಸಮಾನತೆಗಳನ್ನು ತೊಡೆದು ಹಾಕುವ, ಸಮಾನತೆಯನ್ನು ಎತ್ತಿ ಹಿಡಿಯುವ ಎಲ್ಲವನ್ನೂ ಸಂವಿಧಾನ ಒಳಗೊಂಡಿದೆ.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ರೇಡಿಯೋ ಮಾಧ್ಯಮವು ಇಂದಿಗೂ ತನ್ನ ಜೀವಂತಿಕೆಯನ್ನು ಉಳಿಸಿಕೊಂಡಿದೆ ಎಂದು ಉಡುಪಿ ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಬುಧವಾರ ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ರೇಡಿಯೋ ಕುಂದಾಪ್ರ 89.6 ಎಫ್.ಎಮ್ ನ ವಾರ್ಷಿಕೋತ್ಸವ “ಹೌಂದೇರಾಯ್ನ ವಾಲ್ಗವಾ” ಸಮಾರಂಭವನ್ನು ದೀಪ ಬೆಳಗಿಸಿ ಮತ್ತು ಗುರು ಮಾರುತಿ ಹೌಂದೇರಾಯ್ನ ವಾಲ್ಗವಾ ತಂಡ ರಿ, ಪಾರಂಪಳ್ಳಿ ಸಾಲಿಗ್ರಾಮ ಅವರಿಗೆ ಸಿಂಗಾರ ಹೂವನ್ನು ನೀಡುವುದರ ಮೂಲಕ ವಿಭಿನ್ನವಾಗಿ ಉದ್ಘಾಟಿಸಿ ಮಾತನಾಡಿದರು. ಸಮಾಜದಲ್ಲಿ ಎಲ್ಲಾ ಕ್ಷೇತ್ರಗಳಲ್ಲೂ ಆಧುನಿಕತೆ ಎನ್ನುವುದು ಹಾಸುಹೊಕ್ಕಾಗಿದೆ. ಆದರೆ ನಾವು ಎಷ್ಟೇ ಆಧುನಿಕೃತಗೊಂಡರೂ ಮೂಲ ಸಂಸ್ಕೃತಿಯನ್ನು ನಾವು ಉಳಿಸಿಕೊಂಡು ಹೋಗಬೇಕು. ಸಾಮಾಜಿಕವಾಗಿ ಚರ್ಚೆಗಳಾಗಬೇಕು. ಈ ನಿಟ್ಟಿನಲ್ಲಿ ಮಾಧ್ಯಮಗಳ ಪಾತ್ರ ಬಹಳವಿದೆ. ಮಾಧ್ಯಮಗಳು ಸಮಾಜದ ಒಳಿತಿಗಾಗಿ ತಮ್ಮನ್ನು ತಾವು ಸಮರ್ಪಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಕಾಲೇಜಿನ ವಿಶ್ವಸ್ಥ ಮಂಡಳಿಯ ಉಪಾಧ್ಯಕ್ಷರಾದ ಕೆ. ಶಾಂತಾರಾಮ್ ಪ್ರಭು ವಹಿಸಿದ್ದರು. ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮುಖ್ಯ ಅತಿಥಿಗಳಾಗಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಜೇಸಿಐ ಕಟಪಾಡಿ ಆತಿಥ್ಯದಲ್ಲಿ ಮಟ್ಟು ಬೀಚ್‌ನಲ್ಲಿ ಕಡಲೋತ್ಸವ ಅಂಗವಾಗಿ ವಿವಿಧ ಆಟೋಟ ಸ್ಪರ್ಧೆಗಳು ನೆರವೇರಿದ್ದು ಈ ಸಂದರ್ಭದಲ್ಲಿ ಜೇಸಿಐ ಹಾಲಾಡಿ ವಾರಾಹಿ ಘಟಕವು ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ನಗದು ಬಹುಮಾನ ಹಾಗೂ ಟ್ರೋಫಿಯೊಂದಿಗೆ ಪ್ರಥಮ ಬಹುಮಾನ ಪಡೆದುಕೊಂಡಿರುತ್ತದೆ. ವಲಯ 15ರ ವಲಯಧಿಕಾರಿ ಜೆಎಫ್ಎಫ್ ಸಂತೋಷ್ ಶೆಟ್ಟಿ,  ಹಾಲಾಡಿ ವಾರಾಹಿ ಘಟಕದ ಅಧ್ಯಕ್ಷರಾದ ಜೇಸಿ ಪ್ರದೀಪ್ ಹಾಲಾಡಿ ಅವರಿಗೆ ನಗದು ಬಹುಮಾನ ಹಾಗೂ ಟ್ರೋಫಿಯನ್ನು  ಹಸ್ತಾoತರಿಸಿದರು. ಈ ಸಂದರ್ಭದಲ್ಲಿ ಜೇಸಿಐ ಹಾಲಾಡಿ ವಾರಾಹಿ ಘಟಕದ ಉಪಾಧ್ಯಕ್ಷರಾದ ಜೇಸಿ ಗುರುಪ್ರಸಾದ್ ಶೆಟ್ಟಿ, ಕಾರ್ಯದರ್ಶಿ ಜೇಸಿ ಅಶೋಕ್ ಆಚಾರ್ಯ, ಲೇಡಿ ಜೇಸಿ ಅಧ್ಯಕ್ಷೆ ಜೇಸಿ ಅವಶ್ಯ ಶೆಟ್ಟಿ,ಜೇಸಿ ರಾಘವೇಂದ್ರ ಕುದ್ರುಮನೆ, ಜೇಸಿ ನಾಗೇಶ್, ಜೇಸಿ ಕಿರಣ್, ಜೇಸಿ ಪ್ರಶಾಂತ್, ಜೆಸಿ ಶ್ರೀಕಾಂತ್ ಆಚಾರಿ, ಜೇಸಿ ಮಂಜುಳಾ ಶೆಟ್ಟಿ, ಜೇಸಿ ದೀಪ ಶೆಟ್ಟಿ, ಜೇಸಿ ಆಶಾ ರಾಜೀವ ಕುಲಾಲ್, ದೀಪಾ ಪ್ರದೀಪ್, ವಲಯ ಉಪಾಧ್ಯಕ್ಷರು, ವಲಯ ನಿರ್ದೇಶಕರು, ಘಟಕಧ್ಯಕ್ಷರು, ಸದಸ್ಯರು ಮತ್ತಿತರರು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಶಂಕರನಾರಾಯಣ: ಶಂಕರನಾರಾಯಣ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ (NCC) ಘಟಕದ ಸಂಯೋಜನಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಡಾ. ವಸಂತ್ ಅವರು ಪ್ರತಿಷ್ಠಿತ ‘ಲೆಫ್ಟಿನೆಂಟ್’ (Lieutenant) ಪದವಿಗೆ ಭಾಜನರಾಗುವ ಮೂಲಕ ಕಾಲೇಜಿಗೆ ಹಾಗೂ ಊರಿಗೆ ಕೀರ್ತಿ ತಂದಿದ್ದಾರೆ. ಮಹಾರಾಷ್ಟ್ರದ ನಾಗಪುರದಲ್ಲಿರುವ ಸೇನಾ ತರಬೇತಿ ಕೇಂದ್ರದಲ್ಲಿ ಒಟ್ಟು ಮೂರು ತಿಂಗಳ ಕಾಲ ನಡೆದ ‘ಪ್ರಿ-ಕಮಿಷನ್’ (PRCN – Pre-Commission) ಕಠಿಣ ಸೇನಾ ತರಬೇತಿಯಲ್ಲಿ ಅವರು ಪಾಲ್ಗೊಂಡಿದ್ದರು. ಸೇನಾ ಪಡೆಯ ಅತ್ಯುನ್ನತ ಶಿಸ್ತು, ನಾಯಕತ್ವಗುಣಗಳು, ಶಸ್ತ್ರಾಸ್ತ್ರ ಬಳಕೆ ಹಾಗೂ ದೈಹಿಕ-ಮಾನಸಿಕ ಸಾಮರ್ಥ್ಯವನ್ನು ರೂಪಿಸುವ ಈ ತರಬೇತಿಯನ್ನು ಅವರು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ಈ ಅತ್ಯುತ್ತಮ ಸಾಧನೆಯನ್ನು ಪರಿಗಣಿಸಿ ಅವರಿಗೆ ಈ ಲೆಫ್ಟಿನೆಂಟ್ ಶ್ರೇಣಿಯನ್ನು ಪ್ರದಾನ ಮಾಡಲಾಗಿದೆ. ಈ ತರಬೇತಿಯನ್ನು ಪೂರೈಸಿದ ಹಿನ್ನೆಲೆಯಲ್ಲಿ, ಡಾ. ವಸಂತ್ ಅವರು ಇದೀಗ ‘ಅಸೋಸಿಯೇಟ್ ಎನ್‌ಸಿಸಿ ಅಧಿಕಾರಿ’ಯಾಗಿ (Associate NCC Officer -ANO) ಭಡ್ತಿ ಪಡೆದಿದ್ದಾರೆ. ಒಬ್ಬ ಪ್ರಾಧ್ಯಾಪಕರಾಗಿ ಶೈಕ್ಷಣಿಕ ಜವಾಬ್ದಾರಿಯ ಜೊತೆಗೆ ಸೇನಾ ತರಬೇತಿಯ…

Read More