Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಇಲ್ಲಿನ ಸೈಂಟ್ ಥಾಮಸ್ ಶಾಲೆಯಲ್ಲಿ ಹಿಂದಿ ದಿವಸ್ ಕಾರ್ಯಕ್ರಮವನ್ನು ಅತ್ಯಂತ ಸಂಭ್ರಮ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು. ಹಿಂದಿ ಭಾಷೆಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವುದರ ಜೊತೆಗೆ, ರಾಷ್ಟ್ರಾಭಿಮಾನ, ರಾಷ್ಟ್ರೀಯ ಏಕತೆ ಮತ್ತು ದೇಶಪ್ರೇಮದ ಭಾವನೆಗಳನ್ನು ಬೆಳೆಸುವ ಉದ್ದೇಶದಿಂದ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಪ್ರಾಂಶುಪಾಲರಾದ ವಂದನೀಯ ಫಾದರ್ ಫಿಲಿಪ್ ನೆಲ್ಲಿವಿಳಾ ಅವರು ವಹಿಸಿದ್ದರು. ಉಪ ಪ್ರಾಂಶುಪಾಲರು ಸಿಸ್ಟರ್ ಕಾರ್ಮೆಲ್ ಅವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು. ಹಿಂದಿ ದಿವಸದ ಅಂಗವಾಗಿ ವಿದ್ಯಾರ್ಥಿಗಳಿಗಾಗಿ ವಿವಿಧ ಹಿಂದಿ ಭಾಷಾ ಚಟುವಟಿಕೆಗಳು, ಭಾಷಣ, ಕವನ ವಾಚನ, ದೇಶಭಕ್ತಿಗೀತೆಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು. ವಿಶೇಷವಾಗಿ ದೇಶದ ಏಕತೆ, ವೈವಿಧ್ಯತೆಯಲ್ಲಿ ಏಕತೆ ಮತ್ತು ದೇಶದ ಮೇಲಿನ ಪ್ರೀತಿಯನ್ನು ಸಾರುವ ಸಾಂಸ್ಕೃತಿಕ ಕಾರ್ಯಕ್ರಮಗಳು ಎಲ್ಲರ ಗಮನ ಸೆಳೆದವು. ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಪ್ರಶಸ್ತಿ ವಿತರಣೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ಬೆಳಿಗ್ಗೆ ವಕ್ವಾಡಿ ಗ್ರಾಮದ ತೆಂಕಬೆಟ್ಟು ಎಂಬಲ್ಲಿ ಸಂಭವಿಸಿದೆ. ಮೃತಪಟ್ಟ ಮಹಿಳೆ ಸವಿತಾ (36) ಎಂದು ಗುರುತಿಸಲಾಗಿದೆ. ಅವರು ಸುಮಾರು 10 ವರ್ಷಗಳಿಂದ ಬೆನ್ನುನೋವು ಹಾಗೂ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಚಿಕಿತ್ಸೆ ಪಡೆಯುತ್ತಿದ್ದರೂ ಗುಣಮುಖರಾಗಿರಲಿಲ್ಲ. ಸೆ. 15ರ ರಾತ್ರಿ 12 ಗಂಟೆಗೆ ಮನೆಯಲ್ಲಿ ಮಲಗಿದ್ದ ಅವರು, ಬೆಳಗ್ಗೆ ಮನೆಯಲ್ಲಿ ಕಾಣಿಸಿರಲಿಲ್ಲ ಕುಟುಂಬಸ್ಥರು ಹುಡುಕಾಡಿದಾಗ ಮನೆಯ ಮಹಡಿಯ ಕೋಣೆಯಲ್ಲಿ ಮಲಗಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಬಾಯಿ ಮತ್ತು ಮೂಗಿನಿಂದ ನೊರೆ ಮಿಶ್ರಿತ ದ್ರವ ಹೊರಬರುತ್ತಿದ್ದು ಪಕ್ಕದಲ್ಲಿ ವಿಷದ ಬಾಟಲಿ ಪತ್ತೆಯಾಗಿತ್ತು. ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ ನಿ. ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅನುಷ್ಠಾನಗೊಳಿಸಲಾದ ಶ್ರೀ ಶಹಜೀರಾಜೇ ಸಮೃದ್ಧಿ ಯೋಜನೆ, ಜೀಜಾವು ಜಲಭಾಗ್ಯ ಯೋಜನೆ, ಹೊಸದು ಹಾಗೂ ನವೀಕರಣ ಅರಿವು – ಶೈಕ್ಷಣಿಕ ನೇರ ಸಾಲ ಯೋಜನೆ, ಮರಾಠ ಮಿಲ್ಟ್ರಿ ಹೋಟೆಲ್, ಸ್ವಾವಲಂಬಿ ಸಾರಥಿ ಯೋಜನೆ, ರಾಜಶ್ರೀ ಶಾಹುಮಹಾರಾಜ ವಿದೇಶಿ ಸಾಲ ಯೋಜನೆ ಹಾಗೂ ಹೊಲಿಗೆ ಯಂತ್ರ ವಿತರಣಾ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಬೆಂಗಳೂರು ಒನ್, ಕರ್ನಾಟಕ ಒನ್, ಅಟಲ್ ಜಿ ಜನಸ್ನೇಹಿ ಕೇಂದ್ರ ಮತ್ತು ನಾಗರೀಕ ಸೇವಾ ಕೇಂದ್ರಗಳಲ್ಲಿ ಸೇವಾಸಿಂಧು ಪೋರ್ಟಲ್ ನಲ್ಲಿ ಮತ್ತು ಸ್ವಾತಂತ್ರ್ಯ ಅಮೃತ ಮುನ್ನಡೆ ಯೋಜನೆಯ ಸೌಲಭ್ಯ ಪಡೆಯಲು ವೆಬ್‌ಸೈಟ್ www.kaushalkar.com ನಲ್ಲಿ ಆನ್‌ಲೈನ್ ಮೂಲಕ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 3 ಕೊನೆಯ ದಿನ. ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆಯ ದಿನಾಂಕ ಇರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ https://kmcdc.karnataka.gov.in ಅಥವಾ ನಿಗಮದ ಕೇಂದ್ರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಹಾಗೂ ಭಂಡಾರ್‌ಕಾರ್ಸ್ ಪದವಿ ಪೂರ್ವ ಕಾಲೇಜು, ಕುಂದಾಪುರ ಇವರ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ  ಪದವಿ ಪೂರ್ವ ವಿಭಾಗದ ಕುಸ್ತಿ ಪಂದ್ಯಾಟದಲ್ಲಿ  ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿ ನಿತಿನ್ ಕುಸ್ತಿ ಅಖಾಡದಲ್ಲಿ ಅಮೋಘ ಪ್ರದರ್ಶನ ನೀಡಿ ರಾಜ್ಯ ಮಟ್ಟಕ್ಕೆ ಆಯ್ಕೆ ಯಾಗಿದ್ದಾನೆ.    ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರು ಹಾಗೂ ಕುಸ್ತಿ ಪಟು ಆಗಿರುವ ಕೃಷ್ಣ ವಿದ್ಯಾರ್ಥಿಗೆ ತರಬೇತಿ ನೀಡಿದ್ದಾರೆ. ಜಿಲ್ಲಾ ಮಟ್ಟದಲ್ಲಿ ಸಾಧನೆಗೈದ ವಿದ್ಯಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿ ಸಾಧನೆಯನ್ನು ಪ್ರಶಂಸಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಡಾ. ಶಿವರಾಮ ಕಾರಂತ ಪ್ರತಿಷ್ಠಾನ ಕೋಟ, ಕೋಟತಟ್ಟು ಗ್ರಾಮ ಪಂಚಾಯತ್‌, ಉಡುಪಿಯ ಹಾಜಿ ಅಬ್ದುಲ್ಲ ಸಾಹೇಬ್‌ ಮೆಮೋರಿಯಲ್‌ ಚಾರಿಟೇಬಲ್‌ ಟ್ರಸ್ಟ್‌, ಸಂದೀಪ್‌ ಶೆಟ್ಟಿ ಸಾರಥ್ಯದ ಏಸ್‌ ಕ್ರೀಟ್‌ ಅಡೆಷನ್ಸ್‌ ಹಾಗೂ ‘ಉಸಿರು ಕೋಟ’ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ನೀಡಲಾಗುವ 2026ನೇ ಸಾಲಿನ ಪ್ರತಿಷ್ಠಿತ  ಕಾರಂತ ಶಿಕ್ಷಕ ಪುರಸ್ಕಾರಕ್ಕೆ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರು ಆಯ್ಕೆಯಾಗಿದ್ದಾರೆ. ಪ್ರಾಥಮಿಕ ಶಾಲಾ ವಿಭಾಗ:ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೋಣಿಹರ ಶಿಕ್ಷಕ ಯಶವಂತ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಗ್ಗೇರಿ ಸಬಿತ. ಕೆ., ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ ಹಿರಿಯ ಪ್ರಾಥಮಿಕ ಶಾಲೆ ಕಾಮಜಲು ಸುಧಾ ಸಂದೇಶ್‌, ದ. ಕ. ಜಿ. ಪಂ. ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕಾರ್ನಾಡು ಶ್ರೀದೇವಿ ಸತ್ಯನಾರಾಯಣ ಮುಲ್ಕಿ, ​ಬಿಎಂ ಆಂಗ್ಲ ಮಾಧ್ಯಮ ಶಾಲೆ ಪರ್ಕಳ ವಿನಯ ನಾಗರಾಜ ಬಾಯರಿ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹೆಸ್ಕುತ್ತೂರು ವಿಜಯ ಆರ್‌, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹೊಸ ಕಾರ್ಕಡ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ದಕ್ಷಿಣ ಕನ್ನಡ ಮತ್ತು ಮಂಗಳೂರಿನ ಬದ್ರಿಯಾ ಪದವಿಪೂರ್ವ ಕಾಲೇಜಿನ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ವೇಯ್ಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಹುಡುಗರ ವಿಭಾಗದಲ್ಲಿ 05 ಚಿನ್ನ ಪದಕದೊಂದಿಗೆ ಸಮಗ್ರ ಪ್ರಶಸ್ತಿ ಪಡೆದುಕೊಂಡರು. ಹುಡುಗಿಯರ ವಿಭಾಗದಲ್ಲಿ 05 ಚಿನ್ನ, 01 ಬೆಳ್ಳಿ ಹಾಗೂ 01 ಕಂಚು ಒಟ್ಟು 07 ಪದಕದೊಂದಿಗೆ ಸಮಗ್ರ ಪ್ರಶಸ್ತಿ ತನ್ನದಾಗಿಸಿಕೊಂಡರು. ಆ ಮೂಲಕ ಎರಡು ವಿಭಾಗದಲ್ಲಿ ಅವಳಿ ಸಮಗ್ರ ಪ್ರಶಸ್ತಿ ಲಭಿಸಿತು. ಹುಡುಗರ ವಿಭಾಗದಲ್ಲಿ: 60 ಕೆಜಿ – ಸಂತೋಷ್ (ಪ್ರಥಮ), 71 ಕೆಜಿ – ಪ್ರಫುಲ್ (ಪ್ರಥಮ), 79 ಕೆಜಿ – ಪ್ರಜ್ವಲ್ (ಪ್ರಥಮ), 88 ಕೆಜಿ – ಶ್ರೇಯಸ್ (ಪ್ರಥಮ), 110 ಕೆಜಿ – ಜೇಷ್ಠ (ಪ್ರಥಮ) ಹುಡುಗಿಯರ ವಿಭಾಗದಲ್ಲಿ: 48 ಕೆಜಿ – ಸಂಜನಾ (ಪ್ರಥಮ), 53 ಕೆಜಿ – ಸೌಮ್ಯ (ಪ್ರಥಮ),  58 ಕೆಜಿ – ಮೈತ್ರಿ (ಪ್ರಥಮ), 63 ಕೆಜಿ – ಅಪೂರ್ವ (ಪ್ರಥಮ),…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಸರ್ವಋತು ಮಲ್ಪೆ ಬಂದರಿನ ಸರ್ವಾಂಗೀಣ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡುವುದರೊಂದಿಗೆ ಮೀನುಗಾರರ ಮೀನುಗಾರಿಕಾ ಚಟುವಟಿಕೆಗೆ ಅನುಕೂಲ ಮಾಡಿಕೊಡಲಾಗುವುದು ಎಂದು ಮುಜರಾಯಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಸಚಿವರಾದ ಕೆ.ಎಸ್. ಬಸವಂತಪ್ಪ ಹೇಳಿದರು. ಅವರು ಮಲ್ಪೆಯ ಮೀನುಗಾರರ ಸಂಘದಲ್ಲಿ ಸಂಘದ ಪಧಾಧಿಕಾರಿಗಳನ್ನು ಭೇಟಿ ಮಾಡಿ, ಮೀನುಗಾರರ ಕುಂದು ಕೊರತೆಗಳನ್ನು ವಿಚಾರಿಸಿ ಮಾತನಾಡಿದರು. ಮಲ್ಪೆ ಮೀನುಗಾರಿಕಾ ಬಂದರು ಏಷ್ಯಾದಲ್ಲಿಯೇ ಎರಡನೇ ಮೀನುಗಾರಿಕಾ ಚಟುವಟಿಕೆಯ ಬಂದರು ಎಂಬ ಹೆಸರು ಪಡೆದಿದೆ. ಇದರ ಆಧುನೀಕರಣಕ್ಕೆ ಮೊದಲ ಆದ್ಯತೆ ನೀಡುವುದರೊಂದಿಗೆ ಕರಾವಳಿ ಭಾಗದ ಮೂರು ಜಿಲ್ಲೆಗಳ ಮೀನುಗಾರಿಕಾ ಉದ್ಯಮ ಉನ್ನತೀಕರಣಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು. ಮಾನ್ಯ ಮುಖ್ಯಮಂತ್ರಿಗಳು ಕರಾವಳಿ ಭಾಗದ ಅಭಿವೃದ್ಧಿಗೆ ವಿಶೇಷ ಮುತುವರ್ಜಿ ವಹಿಸಿದ್ದು, ಈ ನಿಟ್ಟಿನಲ್ಲಿ ಸೆ. 18 ರಂದು ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ಕರೆದು, ಸಭೆಯಲ್ಲಿ ಕರಾವಳಿ ಭಾಗದ ಸಮಗ್ರ ಮಾಹಿತಿ ಪಡೆದು ಕರಾವಳಿ ಭಾಗದ ಮೀನುಗಾರಿಕಾ ಚಟುವಟಿಕೆ ಹಾಗೂ ಪ್ರವಾಸೋದ್ಯಮ ಅಭಿವೃದ್ಧಿಗೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ:  ಹೊನ್ನಾರಿ ಯುವಕ ಮಂಡಲದ ನೇತೃತ್ವದಲ್ಲಿ ಹೊನ್ನಾರಿ ಶ್ರೀ ಬೊಬ್ಬರ್ಯ ದೈವಸ್ಥಾನದಲ್ಲಿ ಗಿಳಿಯಾರು ಮೈನಾಡಿ ಮನೆ ದಿ. ಭರತ್ ಕುಮಾರ್ ಶೆಟ್ಟಿ ಅವರ ಸ್ಮರಣಾರ್ಥವಾಗಿ ಬೃಹತ್ ರಕ್ತದಾನ ಹಾಗೂ ಉಚಿತ ಆರೋಗ್ಯ ಮತ್ತು ನೇತ್ರ ತಪಾಸಣಾ ಶಿಬಿರ ಕಾರ್ಯಕ್ರಮ ಭಾನುವಾರ ಏರ್ಪಡಿಸಲಾಯಿತು. ಕಾರ್ಯಕ್ರಮವನ್ನು ಉಡುಪಿ ಚಿಕ್ಕಮಗಳೂರು ಕ್ಷೇತ್ರ ಸಂಸದರಾದ ಕೋಟ ಶ್ರೀನಿವಾಸ್ ಪೂಜಾರಿ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಕುಂದಾಪುರದ ಶಾಸಕ ಕಿರಣ ಕುಮಾರ್ ಕೊಡ್ಗಿ, ಜನಸೇವಾ ಟ್ರಸ್ಟ್ ಅಧ್ಯಕ್ಷ ವಸಂತ್ ಗಿಳಿಯಾರು, ಇಂಡಿಯನ್ ರೆಡ್ ಕ್ರಾಸ್ ಕುಂದಾಪುರ ಅಧ್ಯಕ್ಷ ಜಯಕರ ಶೆಟ್ಟಿ, ಪಾರ್ವತಿ ಮಹಾಬಲ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಮುದ್ದುಮನೆ ಇದರ ಶಂಕರ ಶೆಟ್ಟಿ, ಸಮಾಜಸೇವಕ ಕೇಶವ ಕೋಟೇಶ್ವರ, ನಿವೃತ್ತ ಮುಖ್ಯ ಶಿಕ್ಷಕ ಭೋಜ ಶೆಟ್ಟಿ,ಕೋಟ ಪಂಚಾಯತ್ ಮಾಜಿ ಅಧ್ಯಕ್ಷೆ ಜ್ಯೋತಿ ಭರತ್ ಕುಮಾರ್ ಶೆಟ್ಟಿ ಮತ್ತು ಹೊನ್ನಾರಿ ಯುವಕಮಂಡಲದ ಅಧ್ಯಕ್ಷ ಪ್ರವೀಣ್ ಕುಮಾರ್ ಜೋಗಿ ಉಪಸ್ಥಿತರಿದ್ದರು. ಆರೋಗ್ಯ ಶಿಬಿರದಲ್ಲಿ ರಕ್ತಪರೀಕ್ಷೆ ಸೇರಿದಂತೆ ಅನೇಕ ತಪಾಸಣೆಯಲ್ಲಿ ಸ್ಥಳೀಯರು ಭಾಗಿಯಾದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇದೇ ಮೊದಲ ಬಾರಿಗೆ ಕರಾವಳಿ ಭಾಗದಲ್ಲಿ ರಾಜ್ಯದ ಸಚಿವ ಸಂಪುಟ ಸಭೆ ನಡೆಯಲಿದ್ದು ರಾಜ್ಯದ ಮುಖ್ಯಮಂತ್ರಿ ಅಭಿವೃದ್ಧಿ ಬೇಕಾದ ನಿರ್ಧಾರಗಳನ್ನು ಕೈಗೊಳ್ಳಲಿದ್ದಾರೆ ಎಂದು ರಾಜ್ಯದ ಬಂದರು ಮತ್ತು ಮೀನುಗಾರಿಕಾ, ಮುಜರಾಯಿ ಸಚಿವ ಕೆ.ಎಸ್. ಬಸವಂತಪ್ಪ ಹೇಳಿದರು. ಅವರು ಬುಧವಾರ ಕೋಟದ ಅಮೃತೇಶ್ವರೀ ದೇಗುಲಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಕರಾವಳಿ ಭಾಗದ ಮೂಲ ವೃತ್ತಿ ಮೀನುಗಾರಿಕೆಯ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಲಿದ್ದಾರೆ ಅಲ್ಲದೆ ಪ್ರವಾಸೋದ್ಯಮ ಉತ್ತೇಜನ ದೇಗುಲಗಳ ಅಭಿವೃದ್ಧಿ ಕುರಿತಂತೆ ಕಾರ್ಯತಂತ್ರ ರೂಪಿಸಲಿದ್ದೇವೆ ಎಂದರು. ಈ ಸಂದರ್ಭದಲ್ಲಿ ದೇಗುಲದಲ್ಲಿ  ಪೂಜೆ ಸಲ್ಲಿಸಿದ ಸಚಿವರಿಗೆ ದೇಗುಲದ ಆಡಳಿತ ಮಂಡಳಿ ಅಧ್ಯಕ್ಷ ಆನಂದ್ ಸಿ. ಕುಂದರ್ ಶಾಲು ಹೋದಿಸಿ ಗೌರವಿಸಿ ಪ್ರಸಾದ ವಿತರಿಸಿದರು. ದೇಗುಲ ಟ್ರಸ್ಟಿಗಳಾದ ಶಿವ ಪೂಜಾರಿ, ಗಣೇಶ್ ನೆಲ್ಲಿಬೆಟ್ಟು, ಸುಭಾಷ್ ಶೆಟ್ಟಿ, ಚಂದ್ರ ಆಚಾರ್, ಸುಬ್ರಾಯ ಜೋಗಿ, ರತನ್ ಐತಾಳ್, ಸುಧಾ ಪೂಜಾರಿ, ಜ್ಯೋತಿ ಕಾಂಚನ್, ಕೋಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಿ. ತಿಮ್ಮಪೂಜಾರಿ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಸರ್ಕಾರದ ಆಯುಷ್ ಇಲಾಖೆಯ ಸಹಯೋಗದಲ್ಲಿ ಆಲೂರಿನ ಖ್ಯಾತ ಚಿತ್ರಕೂಟ ಆಯುರ್ವೇದ ಚಿಕಿತ್ಸಾಲಯವು  ಚಿತ್ರಕೂಟ ಆಯುರ್ವೇದ ಹಬ್ಬ ಮತ್ತು ಜೆನ್ ಜೀ ಆಯುರ್ವೇದ ಜಾಗೃತಿ ಅಭಿಯಾನ ಆಯೋಜಿಸುತ್ತಿದ್ದು, ಅದರ ಅಂಗವಾಗಿ ಉಡುಪಿ ಜಿಲ್ಲಾ ಶಾಲಾ ಮಟ್ಟದ ವಿದ್ಯಾರ್ಥಿಗಳಿಗೆ ವೈವಿಧ್ಯಮಯ ಭಾಷಣ, ಪ್ರಬಂಧ ಮತ್ತು ಚಿತ್ರಕಲೆ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಈ ಸ್ಪರ್ಧೆಗಳು 2026ರ ಅಕ್ಟೋಬರ್ 4ರ ಭಾನುವಾರ ಬೆಳಿಗ್ಗೆ 9:00 ಗಂಟೆಯಿಂದ ಆಲೂರಿನ ಚಿತ್ರಕೂಟ ಆಯುರ್ವೇದ ಚಿಕಿತ್ಸಾಲಯದ ಆವರಣದಲ್ಲಿ ನಡೆಯಲಿವೆ. ಈ ಸ್ಪರ್ಧೆಗಳು ಪ್ರಾಥಮಿಕ ಹಾಗೂ ಪ್ರೌಢಶಾಲಾ ಹಂತದ ವಿದ್ಯಾರ್ಥಿಗಳಿಗಾಗಿ ನಡೆಯಲಿದ್ದು, ಒಂದರಿಂದ ನಾಲ್ಕನೇ ತರಗತಿಯ ಪುಟಾಣಿ ಮಕ್ಕಳಿಗಾಗಿ ಪ್ರಕೃತಿ ಮತ್ತು ಆಯುರ್ವೇದ ಎಂಬ ವಿಷಯದ ಮೇಲೆ ಒಂದು ಗಂಟೆಯ ಕಾಲಾವಕಾಶದ ಚಿತ್ರಕಲೆ ಸ್ಪರ್ಧೆ ನಡೆಯಲಿದೆ. ಐದರಿಂದ ಏಳನೇ ತರಗತಿ ಹಾಗೂ ಎಂಟರಿಂದ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಪ್ರತ್ಯೇಕ ವಿಭಾಗಗಳಲ್ಲಿ ಭಾಷಣ ಮತ್ತು ಪ್ರಬಂಧ ಸ್ಪರ್ಧೆಗಳನ್ನು ನಿಗದಿಪಡಿಸಲಾಗಿದೆ. ಭಾಷಣ ಸ್ಪರ್ಧೆಗೆ ಪ್ರಸ್ತುತ ಕಾಲಘಟ್ಟದಲ್ಲಿ ಆಯುರ್ವೇದದ ಮಹತ್ವ ಎಂಬ…

Read More