ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸಮಾಜದ ಬೇರೆ ಬೇರೆ ಸ್ತರಗಳಲ್ಲಿ ತಮ್ಮದೇ ಕೊಡುಗೆಯನ್ನು ನೀಡಿರುವ ಮಹಿಳೆಯರು ದೇಶದ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರವಹಿಸುತ್ತಾರೆ. ಅವರನ್ನು ಗೌರವಿಸಿದರೆ ಸಮಾಜವನ್ನೇ ಗೌರವಿಸಿದಂತೆ. ಆಕೆ ತಾಯಿಯಾಗಿ, ಮಡದಿಯಾಗಿ ಗೆಳತಿಯಾಗಿ ಬೇರೆ ಬೇರೆ ಹುದ್ದೆಗಳನ್ನು ನಿರ್ವಹಿಸಿದಂತ ಕರ್ತವ್ಯ ಶ್ಲಾಘನೀಯವಾದದ್ದು ಎಂದು ಉದ್ಯಮಿ ಆನಂದ ಸಿ. ಕುಂದರ್ ನುಡಿದರು. ಅವರು ಇತ್ತೀಚಿಗೆ ಕೋಟದ ಕಾರಂತ ಥೀಂ ಪಾರ್ಕ್‌ನಲ್ಲಿ ಡಾ. ಶಿವರಾಮ ಕಾರಂತ ಪ್ರತಿಷ್ಠಾನ ಕೋಟ, ಕೋಟತಟ್ಟು ಗ್ರಾಮ ಪಂಚಾಯತ್, ಅಮೃತೇಶ್ವರಿ ಮಹಿಳಾ ಮೀನುಗಾರರ ಸಹಕಾರಿ ಸಂಘ ಕೋಟ, ನೆನಪು ಮೂವೀಸ್ ಮತ್ತು ಉಸಿರು ಕೋಟ ಆಶ್ರಯದಲ್ಲಿ ನಡೆದ ಡಾ. ಶಿವರಾಮ ಕಾರಂತ ಸಾಧಕ ಸ್ತ್ರೀ ಪುರಸ್ಕಾರ ಸಮಾರಂಭದಲ್ಲಿ ಭಾಗವಹಿಸಿ ನುಡಿದರು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಪಂಚಾಯತ್ ಕಾರ್ಯದರ್ಶಿ ಸುಮತಿ ಅಂಚನ್ ಅವರು ಈ ಗುರುತಿಸುವಿಕೆಯ ಮೂಲಕ ಜವಾಬ್ದಾರಿಯನ್ನು ಹೆಚ್ಚಿಸಿಕೊಂಡು ಇನ್ನಷ್ಟು ಕೃತುಶಕ್ತಿಯಿಂದ ಮಹಿಳೆಯರು ಕಾರ್ಯವೆಸಗಲಿ ಎಂದು ಶುಭಹಾರೈಸಿದರು. ಈ ಸಂದರ್ಭದಲ್ಲಿ ಜಿಲ್ಲೆಯ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕ ಮಹಿಳೆಯರಿಗೆ ಡಾ.…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದಿಂದ ಆಯೋಜಿಸಲಾದ ವಿ-ಗ್ರೋ 2026 ಬಿಸಿನೆಸ್ ಡೇ ವಾಣಿಜ್ಯ ಹಬ್ಬವು ಯಶಸ್ವಿಯಾಗಿ ಸಂಪನ್ನಗೊಂಡಿತು. ಅಂತಿಮ ಹಾಗೂ ದ್ವಿತೀಯ ಬಿ.ಕಾಂ. ವಿದ್ಯಾರ್ಥಿಗಳಿಗೆ ಆಯೋಜಿಸಿದ ಈ ಅಂತರ್-ತರಗತಿ ಸ್ಪರ್ಧೆಯನ್ನು ಮೂರು ಹಂತಗಳಲ್ಲಿ ಆಯೋಜಿಸಲಾಯಿತು. ಮೊದಲನೇ ಹಂತದಲ್ಲಿ ವ್ಯವಹಾರ ಯೋಜನೆಯ ಪ್ರಸ್ತುತಿ, ಎರಡನೇ ಹಂತದಲ್ಲಿ ವ್ಯವಹಾರ ಮೇಳದ ಭಾಗವಾಗಿ ವಿದ್ಯಾರ್ಥಿಗಳೇ ತಯಾರಿಸಿದ ಉತ್ಪನ್ನಗಳೊಂದಿಗೆ ಇತರ ವಸ್ತುಗಳ ಮಾರಾಟ, ಹಾಗೂ ಮೂರನೇ ಹಂತದಲ್ಲಿ ಹಣಕಾಸಿನ ಆಯ-ವ್ಯಯ ಪಟ್ಟಿಗಳ ಪ್ರಸ್ತುತಿ ನಡೆಸಲಾಯಿತು. ಮುಖ್ಯ ಅತಿಥಿಗಳಾದ ಶ್ರೀನಿವಾಸ ವಿಶ್ವವಿದ್ಯಾನಿಲಯ ಮಂಗಳೂರು ಇಲ್ಲಿನ ಪ್ರಾಧ್ಯಾಪಕರು ಹಾಗೂ ಸಂಶೋಧನ ಮಾರ್ಗದರ್ಶಕರಾದ ಡಾ| ಗಣೇಶ್ ಭಟ್ ಎಸ್., ಅವರು ಮಾತನಾಡಿ, ವರ್ತಮಾನ ಕಾಲಘಟ್ಟದ ವ್ಯವಹಾರ ಪರಿಸ್ಥಿತಿ ಹಾಗೂ ವಿದ್ಯಾರ್ಥಿಗಳು ಹೊಂದಬೇಕಾದ ವ್ಯವಹಾರಿಕ ಕೌಶಲ್ಯಗಳ ಕುರಿತು ತಿಳಿಸಿದರು. ಇದೇ ಸಂದರ್ಭ ಕರಾವಳಿಯ ವ್ಯವಹಾರಿಕ ಜಗತ್ತಿನಲ್ಲಾದ ಸ್ಥಿತ್ಯಂತರಗಳ ಬಗ್ಗೆ ಮಾಹಿತಿ ನೀಡಿದರು. ಕಾಲೇಜಿನ ಪ್ರಾಂಶುಪಾಲ ಡಾ. ಕೆ. ಉಮೇಶ್ ಶೆಟ್ಟಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಮಕ್ಕಳು ಬೆಳೆಯುತ್ತಿದ್ದ ಹಾಗೆ ಭಾವನಾತ್ಮಕ ಸಂಬಂಧಗಳಿಂದ ದೂರವಾಗುತ್ತಾ ಹೋಗುತ್ತಾರೆ. ಶಾಲೆಗಳಲ್ಲಿ ಸಿಗುವ ಸೌಲಭ್ಯಗಳ ಬಗ್ಗೆ ಅನೇಕ ಶಾಲೆಗಳು ಬಹಳಷ್ಟು ಪ್ರಚಾರ ಮಾಡುತ್ತಿದ್ದು, ಮಕ್ಕಳಿಗೆ ಸಂಸ್ಕೃತಿ, ಸಂಸ್ಕಾರಯುತ ಶಿಕ್ಷಣವನ್ನು ನೀಡುತ್ತೇವೆ. ಮಕ್ಕಳನ್ನು ಸತ್ಪ್ರಜೆಗಳನ್ನಾಗಿ ರೂಪಿಸಿ ಈ ದೇಶಕ್ಕೆ ನೀಡುವ ಶಿಕ್ಷಣ ಶಾಲೆಗಳಲ್ಲಿ ನೀಡುತ್ತೇವೆ ಎಂದು ಯಾವುದೇ ಶಾಲೆಗಳು ಪ್ರಚಾರ ಮಾಡುತ್ತಿಲ್ಲ. ಆದರೆ ಶಿಶು ಮಂದಿರದಲ್ಲಿ ಮಕ್ಕಳಿಗೆ ಬಾಲ್ಯದಲ್ಲಿ ನೀಡಬೇಕಾದ ಸಂಸ್ಕೃತಿ, ಸಂಸ್ಕಾರದ ಶಿಕ್ಷಣವನ್ನು ನೀಡುವ ಮೂಲಕ, ಮಕ್ಕಳನ್ನು ಸತ್ಪ್ರಜೆಗಳನ್ನಾಗಿ ಬೆಳೆಸುತ್ತಿದೆ ಎಂದು ಉಡುಪಿ 2ನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ಸಿಬ್ಬಂದಿ ನಾಗರಾಜ ಖಾರ್ವಿ ಹೇಳಿದರು. ಅವರು ಗಂಗೊಳ್ಳಿಯ ಶ್ರೀ ವೀರ ವಿಠಲ ಸಭಾಭವನದಲ್ಲಿ ಶನಿವಾರ ಜರಗಿದ ಸೇವಾ ಸಂಗಮ ನಿವೇದಿತಾ ಶಿಶು ಮಂದಿರ ಗಂಗೊಳ್ಳಿ ಇದರ 39ನೇ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕುಂದಾಪುರ ಸೇವಾ ಸಂಗಮ ಟ್ರಸ್ಟ್‌ನ ನಿರ್ವಾಹಕ ವಿಶ್ವಸ್ಥ ಸುಬ್ರಹ್ಮಣ್ಯ ಹೊಳ್ಳ ಬೌದ್ಧಿಕ್ ನೀಡಿದರು. ಗಂಗೊಳ್ಳಿ ಸ.ವಿ. ಆಂಗ್ಲ ಮಾಧ್ಯಮ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಷ್ಟದ ಆ ಹಿಂದಿನ ದಿನಗಳಲ್ಲಿ ದೇವರ ಮೇಲಿನ ಪ್ರೀತಿ ಭಕ್ತಿಯಿಂದ ಬೆಣ್ಗೇರೆಯಲ್ಲಿ ಶ್ರೀ ನಾಗ ದೇವಸ್ಥಾನ ಸ್ಥಾಪಿಸಿ, ದೇವಸ್ಥಾನವನ್ನು ಇಷ್ಟು ಎತ್ತರಕ್ಕೆ ತಂದು ಸಂಪೂರ್ಣ ವ್ಯವಸ್ಥೆ ಇರುವ ದೇವಸ್ಥಾನವಾಗಿ ಮೂಡಿರುವುದು ಮೇಸ್ತ ಸಮಾಜದ ಹೆಮ್ಮೆ. ಮೇಸ್ತ ಸಮಾಜ ನಂಬಿಕೊಂಡು ಬಂದಿರುವ ನಾಗರಾಧನೆ, ನಾಗ ದೇವಸ್ಥಾನದ ಮೂಲಕ ಈ ಭಾಗದ ಎಲ್ಲರಿಗೂ ದೇವರ ಅನುಗ್ರಹ ಪ್ರಾಪ್ತಿಯಾಗುತ್ತದೆ. ಇಂತಹ ಧಾರ್ಮಿಕ ದೇವತಾ ಕಾರ್ಯಗಳು ನಿರಂತರವಾಗಿ ನಡೆದುಕೊಂಡು ಬರುವ ಹಾಗೆ ದೇವರು ಅನುಗ್ರಹಿಸಲಿ ಎಂದು ಬೆಣ್ಗೇರೆ ಶ್ರೀ ನಾಗ ದೇವಸ್ಥಾನದ ಅಧ್ಯಕ್ಷ ಉಮೇಶ ಎಲ್. ಮೇಸ್ತ ಹೇಳಿದರು. ಅವರು ಬೆಣ್ಗೇರೆ ಶ್ರೀ ನಾಗ ದೇವಸ್ಥಾನದಲ್ಲಿ 51ನೇ ನಾಗ ಮಂಡಲೋತ್ಸವ ಹಾಗೂ ಅಷ್ಟಬಂಧ ಪ್ರತಿಷ್ಠಾಪನಾ ವರ್ಧಂತ್ಯುತ್ಸವ ಪ್ರಯುಕ್ತ ಶುಕ್ರವಾರ ಸಂಜೆ ಜರಗಿದ ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ದೇವಸ್ಥಾನದ ಪ್ರಧಾನ ಪುರೋಹಿತರಾದ ರಾಘವೇಂದ್ರ ಅಡಿಗ, ಪಾಂಡೇಶ್ವರದ ಅಷ್ಟಾಂಗ ಯೋಗ ಗುರುಕುಲದ ಡಾ.ವಿಜಯ ಮಂಜರು, ಅಖಿಲ ಕರ್ನಾಟಕ ಚಾರೋಡಿ ಮೇಸ್ತ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕುಂದಾಪುರ ಕೋಟೇಶ್ವರ ಇಲ್ಲಿನ ಆಂತರಿಕ ಗುಣಮಟ್ಟ ಭರವಸಾ ಕೋಶ ಮತ್ತು ಮಹಿಳಾ ವೇದಿಕೆಯ ಜಂಟಿ ಸಹಯೋಗದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಸೆಂಟ್ ಮೇರಿಸ್ ಕಾಲೇಜು ಶಿರ್ವ ಇಲ್ಲಿಯ ಸಹಾಯಕ ಪ್ರಾಧ್ಯಾಪಕರಾದ ಡಾ. ಗುಲಾಬಿ ಪೂಜಾರಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಮಹಿಳಾ ದಿನಾಚರಣೆಯ ಮಹತ್ವವನ್ನು ತಿಳಿಸಿ, ಇಂದಿಗೂ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳ ಕುರಿತಾಗಿ ಮಾತನಾಡಿದರು. ಜೊತೆಗೆ ವಿದ್ಯಾರ್ಥಿನಿಯರು ಆಧುನಿಕ ತಂತ್ರಜ್ಞಾನದ ಈ ಕಾಲದಲ್ಲಿ ಎಚ್ಚರಿಕೆಯಿಂದ ನಡೆದುಕೊಳ್ಳುವಂತೆ ಕಿವಿಮಾತು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ವಹಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ನಾಗರಾಜ ವೈದ್ಯ ಎಂ., ಆಂತರಿಕ ಗುಣಮಟ್ಟ ಭರವಸಾ ಕೋಶದ ಸಂಚಾಲಕರಾದ ನಾಗರಾಜ ಯು., ಮಹಿಳಾ ವೇದಿಕೆಯ ಸಂಚಾಲಕರಾದ ರೋಹಿಣಿ, ಕಾಲೇಜಿನ ಉಪನ್ಯಾಸಕರು, ಬೋಧಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಮಣೂರು ಹೇರಂಬ ಮಹಾಗಣಪತಿ ಹಾಗೂ ಮಹಾಲಿಂಗೇಶ್ವರ ಸಾನಿಧ್ಯ ಕಾರಣಿಕ ಕ್ಷೇತ್ರವಾಗಿದ್ದು ಇಲ್ಲಿನ ವಾರ್ಷಿಕ ರಥೋತ್ಸವ ಅರ್ಥಪೂರ್ಣವಾಗಿಸಲು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರ ಭಾಗವಹಿಸುವಿಕೆ ಬಹುಮುಖ್ಯವಾಗಿದೆ ಎಂದು ಮಣೂರು ಮಹಾಲಿಂಗೇಶ್ವರ ದೇಗುಲದ ಅಧ್ಯಕ್ಷ ಸತೀಶ್ ಹೆಚ್. ಕುಂದರ್ ಹೇಳಿದರು. ಅವರು ಭಾನುವಾರ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ 295ನೇ ವಾರದ ಪರಿಸರಸ್ನೇಹಿ ಕಾರ್ಯಕ್ರಮದ ಸಲುವಾಗಿ ಮಣೂರು ದೇಗುಲ ಜಾತ್ರೆಯ ಪ್ರಯುಕ್ತ ಮಣೂರು ಫ್ರೆಂಡ್ಸ್ ಮಣೂರು ಇವರ ಸಂಯೋಜನೆಯೊಂದಿಗೆ ದೇಗುಲ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು. ದೇಗುಲ ಸ್ವಚ್ಛತೆಯಿಂದ ಮನಸ್ಸು ಭಕ್ತಿಭಾವಕ್ಕೆ ಸಾಕ್ಷಿಯಾಗಿದೆ. ಇದಕ್ಕೆ ಇಲ್ಲಿನ ಈ ಸಂಘಟನೆಗಳ ದೇಗುಲ ಸ್ವಚ್ಛತಾ ಕಾರ್ಯಕ್ರಮ ನಿರ್ದಶನವಾಗಿದೆ ಎಂದು ಎಪ್ರಿಲ್ 2 ರಂದು ನಡೆಯುವ ಜಾತ್ರೆಯನ್ನು ಯಶಸ್ವಿಗೊಳಿಸಲು ಕರೆ ನೀಡಿದರು. ಈ ಸಂದರ್ಭದಲ್ಲಿ ಪಂಚವರ್ಣದ ಅಧ್ಯಕ್ಷ ಮನೋಹರ್ ಪೂಜಾರಿ, ಮಣೂರು ಫ್ರೆಂಡ್ಸ್ ಅಧ್ಯಕ್ಷ ರಾಘವೇಂದ್ರ ಪೂಜಾರಿ, ಪಂಚವರ್ಣ ಮಹಿಳಾ ಅಧ್ಯಕ್ಷೆ ಲಲಿತಾ ಪೂಜಾರಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ತಾಲೂಕಿನ ಜಡ್ಕಲ್ ಗ್ರಾಮದ ಹಯ್ಯಂಗಾರು ಕಾನ್ಕಿ ಕನ್ಯಾಸ್ತಿ ಹೊಳೆಗೆ ಈಜಲು ಹೋದ ಗೋಳಿಹೊಳೆ ಗ್ರಾಮದ ಅರೆಶಿರೂರು ನಿವಾಸಿ ರಿಕ್ಷಾ ಚಾಲಕ ಸಂದೀಪ್ ನಾಯ್ಕ (32) ರವಿವಾರ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಗೋಳಿಹೊಳೆಯ ಹೊಟೇಲ್ ಉದ್ಯಮಿ ಬಾಬಣ್ಣ ಅವರ ಪುತ್ರರಾಗಿರುವ ಸಂದೀಪ್ ಸ್ನೇಹಿತರೊಂದಿಗೆ ತೆರಳಿದ್ದರು ಎನ್ನಲಾಗಿದೆ. ಮೃತರು ಅವಿವಾಹಿತರಾಗಿದ್ದು ಬಾಬಣ್ಣ ಅವರ ಮೂವರು ಗಂಡುಮಕ್ಕಳಲ್ಲಿ ಒಬ್ಬರಾಗಿದ್ದಾರೆ. ಸುದ್ದಿ ತಿಳಿದೊಡನೆ ಕೊಲ್ಲೂರು ಎಸ್.ಐ. ವಿನಯ ಅವರ ನೇತೃತ್ವದಲ್ಲಿ ಕೊಲ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಶೈಲೇಶ ಅವರು ಕುಂದಾಪುರ ಸರಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಯ ಅನಂತರ ವಾರಸುದಾರರಿಗೆ ಮೃತ ದೇಹ ಹಸ್ತಾಂತರಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ 2025–26ನೇ ಸಾಲಿನ 10ನೇ ತರಗತಿಯ ವಸತಿ ನಿಲಯದ ವಿದ್ಯಾರ್ಥಿನಿಯರು ಶಿಕ್ಷಣ ಸಂಸ್ಥೆಯ ಮೇಲಿನ ತಮ್ಮ ಬದ್ಧತೆಯನ್ನು ತೋರಿಸುವಂತೆ ಮನಸೂರೆಗೊಳ್ಳುವ ಕಾರ್ಯವನ್ನು ನೆರವೇರಿಸಿದ್ದಾರೆ. ಪ್ರೊಜೆಕ್ಟರ್ ಮೊದಲಾದ ಆಧುನಿಕ ಉಪಕರಣಗಳ ಮೂಲಕ ಶಾಲೆಯಲ್ಲಿ ಬಹಳಷ್ಟು ಬೋಧನೆಗಳನ್ನು ನಡೆಸುತ್ತಾ ಬಂದಿದ್ದು, ಬಹಳಷ್ಟು ಪರಿಣಾಮಕಾರಿಯಾಗಿದ್ದು, ವಿದ್ಯಾರ್ಥಿಗಳ ಕಲಿಕೆಯ ಅನುಭವವನ್ನು ಸಮೃದ್ಧಗೊಳಿಸುತ್ತಿದ್ದವು. ಸಾಮಾನ್ಯ ಯಂತ್ರೋಪಕರಣಗಳಂತೆ ಇವುಗಳಲ್ಲಿ ವರ್ಷಕ್ಕೆ ಒಂದೆರಡು ಯಂತ್ರಗಳು ಹಾಳಾಗುತ್ತಿದ್ದವು. ಇದನ್ನು ನೋಡಿ ಅರಿತ ವಿದ್ಯಾರ್ಥಿನಿಯರ ತಂಡ ತಮ್ಮ ಮುಂದಿನ ವಿದ್ಯಾರ್ಥಿಗಳಿಗೆ ಸಹಾಯವಾಗಲಿ ಎಂಬ ಆಶಯದಂತೆ ಹಿರಿಯರ ಮನವೊಲಿಸಿ, ₹34,000 ಹಣವನ್ನು ಸಂಗ್ರಹಿಸಿ, ಶಾಲೆಗೆ ಪ್ರೊಜೆಕ್ಟರ್ ಖರೀದಿಸಲು ದೇಣಿಗೆಯಾಗಿ ನೀಡಿದ್ದಾರೆ. ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳೂ, ಶಾಲಾ ಪ್ರಾಂಶುಪಾಲರಾದ ಶರಣ ಕುಮಾರರು ಇದನ್ನು ಸ್ವೀಕರಿಸಿ ಮಾತನಾಡಿ, “ಈ ಕೊಡುಗೆ ಕೇವಲ ಹಣಕಾಸಿನ ಸಹಾಯವಲ್ಲ; ಇದು ವಿದ್ಯಾರ್ಥಿನಿಯರ ಏಕತೆ, ಜವಾಬ್ದಾರಿ ಹಾಗೂ ಶಿಕ್ಷಣಸಂಸ್ಥೆಯ ಮೇಲಿನ ಗೌರವವನ್ನು ಪ್ರತಿಬಿಂಬಿಸುತ್ತಿದೆ. ಭವಿಷ್ಯದ ವಿದ್ಯಾರ್ಥಿಗಳಿಗೆ ಪ್ರಯೋಜನವಾಗುವಂತಹ ಈ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸಿದರೆ ಸಮಸ್ಯೆ ಕಟ್ಟಿಟ್ಟ ಬುತ್ತಿ ಅದರ ಬಗ್ಗೆ ಕಾಳಜಿ ಅತ್ಯಗತ್ಯ ಎಂದು ಉಡುಪಿ ಪ್ರಸಿದ್ಧ ವೈದ್ಯ ನರೇಂದ್ರ ಕುಮಾರ್ ಎಚ್. ಎಸ್. ಹೇಳಿದರು. ಅವರು ಭಾನುವಾರ ಕೋಡಿ ಕನ್ಯಾಣದ ಸೇತುವೆ ಬಳಿ ಕೆನರಾ ಬ್ಯಾಂಕ್ ಮಣಿಪಾಲ ವೃತ್ತ ಪ್ರಾಯೋಜಕತ್ವದಲ್ಲಿ ಸೀಎಂಸಿ2 ಮಂಗಳೂರು, ಉಡುಪಿ ಕಿನಾರ ಮೀನುಗಾರ ಉತ್ಪಾದಕ ಕಂಪನಿ, ಅಯೋಧ್ಯಾ ಫ್ರೆಂಡ್ಸ್ ಕೋಡಿ ಕನ್ಯಾಣ ಇವರ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಾತನಾಡಿದರು. ಗ್ರಾಮೀಣ ಕರಾವಳಿ ಭಾಗದಲ್ಲಿ ಮೀನುಗಾರ ವೃತ್ತಿ ನಿರಂತರ ಹೆಚ್ಚಿದ್ದು ಅವರ ಆರೋಗ್ಯದ ಬಗ್ಗೆ ಹೆಚ್ಚು ಆಸಕ್ತಿ ವಹಿಸಬೇಕು. ಮೂಳೆ ಸವೆತ ಸೇರಿದಂತೆ ಅನೇಕ ರೋಗಗಳನ್ನು ಅವರು ಎದುರಿಸುತ್ತಾರೆ. ಅಂತಹ ಸಂದರ್ಭದಲ್ಲಿ ಇಂತಹ ಆರೋಗ್ಯ ಶಿಬಿರಗಳು ಸಹಕಾರಿಯಾಗಿ ಕಾರ್ಯನಿರ್ವಹಿಸುತ್ತವೆ ಎಂದರು. ಕಾರ್ಯಕ್ರಮವನ್ನು ಕೆನರಾ ಬ್ಯಾಂಕ್ ಮಣಿಪಾಲ ಇದರ ಹಿರಿಯ ಪ್ರಭಂಧಕಿ ಅನಿತಾ ಶೆಟ್ಟಿ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೀಎಂಸಿ2 ಮಂಗಳೂರು ಇದರ ಅಧ್ಯಕ್ಷ ರಮೇಶ್ ಎಂ.ಆರ್. ವಹಿಸಿದ್ದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆಯ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯ ಯುವ ರೆಡ್ ಕ್ರಾಸ್ ಸಂಘದ ವಿದ್ಯಾರ್ಥಿಗಳು ಶೈಕ್ಷಣಿಕ ಮುನ್ನುಡಿಯ ಭಾಗವಾಗಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ರಕ್ತ ಬ್ಯಾಂಕ್‌ಗೆ ಭೇಟಿ ನೀಡಿದರು. ಅವರು ರಕ್ತ ಸಂಗ್ರಹಣೆ, ಸುರಕ್ಷತಾ ಕ್ರಮಗಳು ಮತ್ತು ಕೆಂಪು ರಕ್ತ ಕಣಗಳು, ಪ್ಲಾಸ್ಮಾ ಮತ್ತು ಪ್ಲೇಟ್‌ಲೆಟ್‌ಳಂತಹ ಘಟಕಗಳ ಪ್ರತ್ಯೇಕತೆಯ ಬಗ್ಗೆ ತಿಳಿದುಕೊಂಡರು. ಅಧಿವೇಶನವನ್ನು ಹಿರಿಯ ತಾಂತ್ರಿಕ ಶಿಕ್ಷಣ ಮೇಲ್ವಿಚಾರಕರಾದ ಸುಜಯಾ ಮತ್ತು ವೀರೇಂದ್ರ ಅವರ ಮಾರ್ಗದರ್ಶನದಲ್ಲಿ ನಡೆಯಿತು. ಭಾರತಿ ಗಾಣಿಗ ಅವರ ಸಂಯೋಜನೆಯಲ್ಲಿ ನಡೆದ ಈ ಭೇಟಿಯು ರಕ್ತದಾನದ ಮಹತ್ವ ಮತ್ತು ಜೀವಗಳನ್ನು ಉಳಿಸುವಲ್ಲಿ ರಕ್ತ ಬ್ಯಾಂಕುಗಳ ಪಾತ್ರವನ್ನು ಅರ್ಥಮಾಡಿಕೊಳ್ಳಲು ವಿದ್ಯಾರ್ಥಿಗಳಿಗೆ ಸಹಾಯ ಮಾಡಿತು.
