Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಎಂಐಟಿಕೆಯ ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಶನ್ ಇಂಜಿನಿಯರಿಂಗ್ ವಿಭಾಗ, ವಿದ್ಯಾರ್ಥಿಗಳನ್ನು ಕೈಗಾರಿಕಾ ಕ್ಷೇತ್ರಕ್ಕೆ ಸಿದ್ಧಗೊಳಿಸಲು, ಕಾಕುಂಜೆ ಸಾಫ್ಟವೇರ್ ಪ್ರೈವೇಟ್ ಲಿಮಿಟೆಡ್ ಮಂಗಳೂರು ಕಂಪನಿಯೊಂದಿಗೆ ಒಪ್ಪಂದಕ್ಕೆ ಸಹಿ ಮಾಡಿತು . ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಸಿದ್ಧಾರ್ಥ ಜೆ ಶೆಟ್ಟಿ,  ಕಾಕುಂಜೆ ಸಾಫ್ಟವೇರ್ ಸಿಇಒ ಡಾ. ಜಿ ಕೆ ಭಟ್,  ಐ ಎಂ ಜೆ ಸಂಸ್ಥೆಗಳ ಅಕಾಡೆಮಿಕ್ಸ್ ನಿರ್ದೇಶಕ ಡಾ. ಎಸ್.ಎನ್. ಭಟ್, ಪ್ರಿನ್ಸಿಪಲ್ ಡಾ. ರಾಮಕೃಷ್ಣ ಹೆಗ್ಗಡೆ, ಇಸಿಇ ವಿಭಾಗದ ಮುಖ್ಯಸ್ಥ ಡಾ. ವರುಣ್ ಕುಮಾರ್, ಹಾಗೂ  ವಿಭಾಗದ ಪ್ರಾಧ್ಯಾಪಕರು ಹಾಜರಿದ್ದರು.ಕಾಕುಂಜೆ ಸಾಫ್ಟವೇರ್ ಪ್ರೈವೇಟ್ ಲಿಮಿಟೆಡ್ ಮಂಗಳೂರು, ಕರ್ನಾಟಕದ ಪ್ರಮುಖ ಐಟಿ ಸಂಸ್ಥೆಯಾಗಿದ್ದು, ಐಟಿ ಕನ್ಸಲ್ಟಿಂಗ್, ಹಾರ್ಡ್‌ವೇರ್ ಮತ್ತು ಸಾಫ್ಟ್‌ವೇರ್ ಉತ್ಪನ್ನಗಳ ಸಂಶೋಧನೆ ಮತ್ತು ಅಭಿವೃದ್ಧಿ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದೆ. ಸಂಸ್ಥೆಯು ಎಂಟರ್‌ಪ್ರೈಸ್ ಸಾಫ್ಟ್‌ವೇರ್, ಸ್ಥಿರ ಮತ್ತು ಚರ ವೆಬ್‌ಸೈಟ್‌ಗಳು, ಮೊಬೈಲ್ ಅಪ್ಲಿಕೇಶನ್‌ಗಳು, ಇ-ಕಾಮರ್ಸ್ ಪರಿಹಾರಗಳು, ಮತ್ತು ಈ ಆರ್ಪಿ ವ್ಯವಸ್ಥೆಗಳನ್ನು ವಿನ್ಯಾಸಗೊಳಿಸುತ್ತದೆ.ಪ್ರತಿಭಾವಂತ ತಂತ್ರಜ್ಞಾನ ಪರಿಣಿತರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಐಕ್ಯೂಎಸಿ ಮಾನವ ಹಕ್ಕು ಘಟಕ ಮತ್ತು ಮಾನವಿಕ ಸಂಘ ಹಾಗೂ ಮೊಳಹಳ್ಳಿ ದಿನೇಶ ಹೆಗ್ಡೆ ಟ್ರಸ್ಟ್ ಇದರ ಸಂಯುಕ್ತ ಆಶ್ರಯದಲ್ಲಿ ಮಾನಸಿಕ ಆರೋಗ್ಯ ಅರಿವು ಕಾರ್ಯಕ್ರಮವು ಕಾಲೇಜಿನ ಶ್ರೀ ಬಿ. ವೀರರಾಜೇಂದ್ರ ಹೆಗ್ಡೆ ಸಭಾಂಗಣದಲ್ಲಿ ಸೋಮವಾರದಂದು ಜರುಗಿತು. ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಬ್ರಹ್ಮಾವರದ ಮಹೇಶ ಹಾಸ್ಪಿಟಲ್, ಇಲ್ಲಿನ ಮನ:ಶಾಸ್ತ್ರಜ್ಞರಾದ ಗಿರೀಶ ಎಂ.ಎನ್. ಕಾರ್ಯಕ್ರಮ ಉದ್ದೇಶಿಸಿ ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಒತ್ತಡ ಖಿನ್ನತೆ, ದುಶ್ಚಟಗಳಿಗೆ ಒಳಗಾಗುತ್ತಿದ್ದು ಮತ್ತು ಆತ್ಮಹತ್ಯೆಗೆ ಶರಣಾಗುತ್ತಿರುವುದು ತುಂಬಾ ಕಳವಳಕಾರಿ ವಿಷಯವಾಗಿದ್ದರಿಂದ ಜೀವನದಲ್ಲಿ ಎದುರಾಗುವ ಸಮಸ್ಯೆಗಳಿಗೆ ಮಾನಸಿಕ ಆರೋಗ್ಯ ಕಾಯ್ದುಕೊಳ್ಳುವುದು ಅತ್ಯಂತ ಮಹತ್ವವಾದುದು ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಚಂದ್ರಾವತಿ ಶೆಟ್ಟಿ ನಿರ್ವಹಿಸಿದರು. ಕಾರ್ಯಕ್ರಮದಲ್ಲಿ ಐಕ್ಯೂಎಸಿ ಘಟಕದ ಸಂಯೋಜಕರಾದ ಸಂದೀಪ ಕೆ., ಮಾನವಿಕ ಸಂಘದ ಸಂಯೋಜಕ ನಾಗರಾಜ ಶೆಟ್ಟಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಸಂಯೋಜಕರಾದ ಡಾ. ವಿಶ್ವನಾಥ ಆಚಾರ್ಯ ಪ್ರಾಸ್ತಾವಿಕ ಮಾತಿನೊಂದಿಗೆ ಸ್ವಾಗತಿಸಿದರು. ಅಂತಿಮ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಯುವ ಸಮುದಾಯ ಹೆಚ್ಚು ಕ್ರೀಡಾಸಕ್ತಿ ಹೊಂದಬೇಕು ಆ ಮೂಲಕ ಸಾಧನೆಯ ಶಿಖರ ಏರಲು ಸಾಧ್ಯ ಎಂದು ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿ ಶಬನಾ ಅಜುಂ ಹೇಳಿದರು. ಅವರು ಸೋಮವಾರ ಸಾಲಿಗ್ರಾಮದ ಹಳೆಕೋಟೆ ಮೈದಾನದಲ್ಲಿ ಶಾಲಾ ಶಿಕ್ಷಣ ಇಲಾಖೆ, ಉಡುಪಿ ಜಿಲ್ಲಾ ಪಂಚಾಯತ್, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬ್ರಹ್ಮಾವರ ಮತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾರ್ಕಡ ಇವರ ಸಂಯುಕ್ತ ಆಶ್ರಯದಲ್ಲಿ 14ರ ವಯೋಮಿತಿಯ ಬಾಲಕ – ಬಾಲಕಿಯರ ಬ್ರಹ್ಮಾವರ ಹೋಬಳಿ ಮಟ್ಟದ ಕ್ರೀಡಾಕೂಟ ಮುಕುಟ 2025 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಪ್ರಸ್ತುತ ಮೊಬೈಲ್ ಕಾಲಘಟ್ಟದಲ್ಲಿ ಕ್ರೀಡಾಸಕ್ತಿ ಕುಂಠಿತಗೊಳ್ಳುತ್ತಿದ್ದು ಈ ಬಗ್ಗೆ ಯುವಕರು ಭಾಗಿಯಾಗುವ ಮೂಲಕ ಆರೋಗ್ಯವಂತ ಸಮಾಜಕ್ಕೆ ಮುನ್ನುಡಿ ಬರೆಯಲು ಸಾಧ್ಯ, ಕ್ರೀಡೆಯಲ್ಲಿ ಗೆಲುವ ಹುಮ್ಮಸ್ಸಿಗಿಂತ ಭಾಗವಹಿಸುವುದು ಬಹುಮುಖ್ಯ, ಸೋಲು ಗೆಲುವು ಪ್ರತಿ ವ್ಯವಸ್ಥೆಯಲ್ಲಿ ಸಹಜ, ಆದರೆ ಸಮನಾಗಿ ಸ್ವೀಕರಿಸಿ ಮುನ್ನೆಡೆದರೆ ಕ್ರೀಡಾ ಸಾರ್ಥಕ್ಯಕ್ಕೆ ಕೈಗನ್ನಡಿಯಾಗಲಿದೆ ಎಂದರಲ್ಲದೆ ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟ ಆಯೋಜಿಸುವುದರ ಮೂಲಕ ಒಂದಿಷ್ಟು ಪ್ರತಿಭೆಗಳು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಕುಂದಾಪುರ: ಮೂಡಬಿದಿರೆಯ ಆಳ್ವಾಸ್ ಪಿಯು ಕಾಲೇಜಿನ ಕೆ. ಅಮರನಾಥ ಶೆಟ್ಟಿ ವೇದಿಕೆಯಲ್ಲಿ ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ನಡೆದ 20ನೇ ರಾಜ್ಯ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರ್ಥಮೆಟಿಕ್ಸ್ – 2025 ಸ್ಪರ್ಧೆಯಲ್ಲಿ ಗಂಗೊಳ್ಳಿಯ ಕೌಸ್ತುಭ ಕೆ. ಪೂಜಾರಿ ಪ್ರಥಮ ಸ್ಥಾನವನ್ನು ಪಡೆದಿದ್ದಾನೆ. ಗಂಗೊಳ್ಳಿಯ ಎಸ್.ವಿ.ಆಂಗ್ಲ ಮಾಧ್ಯಮ ಶಾಲೆಯ 5ನೇ ತರಗತಿಯ ವಿದ್ಯಾರ್ಥಿಯಾಗಿರುವ ಈತನಿಗೆ ಐಡಿಯಲ್ ಪ್ಲೇ ಅಭಾಕಸ್ ಕುಂದಾಪುರ ಸೆಂಟರ್‌ನ ಮುಖ್ಯಸ್ಥ ಪ್ರಸನ್ನ ಕೆ. ಬಿ. ಹಾಗೂ ಬೋಧಕಿ ಸುನೀತಾ ನೀಡಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕಾಲೇಜು ವಿದ್ಯಾರ್ಥಿಯೊಬ್ಬ ವೈಯಕ್ತಿಕ ಕಾರಣಗಳಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಇತ್ತೀಚಿಗೆ ನಾವುಂದದಲ್ಲಿ ನಡೆದಿದೆ. ನಾವುಂದ ನಿವಾಸಿ ದಯಾನಂದ ಜೋಗಿ ಅವರ ಮಗ ಸ್ಕಂದ (16) ಮೃತಪಟ್ಟ ವಿದ್ಯಾರ್ಥಿ. ಅ. 26ರಂದು ಸಂಜೆ ಸ್ಕಂದ ತಾನು ಮನೆಯ ಮಲಗುವ ಕೋಣೆಯಲ್ಲಿ ಫ್ಯಾನಿಗೆ ಚೂಡಿದಾರದ ಶಾಲನ್ನು ಕಟ್ಟಿ ಕುತ್ತಿಗೆಗೆ ಉರುಳು ಹಾಕಿಕೊಂಡಿದ್ದರು. ಅದನ್ನು ಗಮನಿಸಿದ ಮನೆಯವರು ಚಿಕಿತ್ಸೆಗೆ ಕುಂದಾಪುರದ ಆಸ್ಪತ್ರೆಗೆ ಕರೆದುಕೊಂಡು ಹೋದರು. ಪರೀಕ್ಷಿಸಿದ ವೈದ್ಯರು ಚಿಕಿತ್ಸೆಗೆ ಬರುವ ದಾರಿಮಧ್ಯದಲ್ಲಿಯೇ ಮೃತಪಟ್ಟಿರುವುದಾಗಿ ತಿಳಿಸಿದರು. ಎಸೆಸೆಲ್ಸಿ ವರೆಗೆ ಹುಟ್ಟೂರಿನಲ್ಲಿ ಕಲಿತಿದ್ದ ಸ್ಕಂದ ಅವರನ್ನು ಪಿಯುಸಿ ಶಿಕ್ಷಣಕ್ಕೆ ಬೆಂಗಳೂರಿನ ಕಾಲೇಜಿನಲ್ಲಿ ವಾಣಿಜ್ಯ ವಿಭಾಗಕ್ಕೆ ದಾಖಲಿಸಲಾಗಿತ್ತು.ಚಿಕ್ಕಮ್ಮನ ಮನೆಯಲ್ಲಿ ಇದ್ದುಕೊಂಡು ಕಾಲೇಜಿಗೆ ಹೋಗುತ್ತಿದ್ದರು. ದೀಪಾವಳಿಯ ರಜೆಯಲ್ಲಿ ಮನೆಗೆ ಬಂದಿದ್ದ ಅವರು ರಜೆ ಮುಗಿದ ಬಳಿಕ ಮರಳುವ ಮನಸ್ಸು ಮಾಡಿರಲಿಲ್ಲ. ಬೆಂಗಳೂರಿನಲ್ಲಿ ಕಲಿಯಲು ಇಷ್ಟವಿಲ್ಲದ ಕಾರಣ ಅಲ್ಲಿಗೆ ಹೋಗುವುದಕ್ಕೇ ಮನೆಯವರಲ್ಲಿ ನಿರಾಕರಿಸುತ್ತ ದಿನ ಕಳೆದಿದ್ದರು. ಹಲವು ಬಾರಿ ಬೆಂಗಳೂರಿಗೆ ಹೋಗಲು ಮಾಡಿದ್ದ ಬಸ್‌ ಟಿಕೆಟನ್ನು ಕೂಡ ರದ್ದು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಅಂತರರಾಷ್ಟ್ರೀಯ ಶಿಕ್ಷಕರ ದಿನಾಚರಣೆ ಅಂಗವಾಗಿ ಕರ್ನಾಟಕ ರಾಜ್ಯ ಶಿಕ್ಷಣ ಸಂಸ್ಥೆಗಳ ನೌಕರರ ಸಂಘ, ಬೆಂಗಳೂರು ಇವರು ಶೈಕ್ಷಣಿಕ ಮತ್ತು ಸಾಹಿತ್ಯಿಕ ಕ್ಷೇತ್ರದಲ್ಲಿ ಮಾಡಿದ ಸಾಧನೆಗಾಗಿ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಉಪ-ಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ ಅವರಿಗೆ ರಾಜ್ಯಮಟ್ಟದ ಶಿಕ್ಷಕರ ರತ್ನ ಪ್ರಶಸ್ತಿಯನ್ನು ಬೆಂಗಳೂರಿನ ಸರಕಾರಿ ಕಲಾ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ನೀಡಿ ಗೌರವಿಸಿದರು.     ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಜಸ್ಟಿಸ್ ಸಂತೋಷ ಹೆಗ್ಡೆ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಈ ಸಂದರ್ಭ ವಿಜಯಪುರದ ವನಶ್ರೀ ಸಂಸ್ಥಾನಮಠದ ಪೀಠಾಧಿಪತಿ ಡಾ. ಜಯಬಸವ ಮಹಾಸ್ವಾಮಿ, ಕರ್ನಾಟಕ ರಾಜ್ಯ ಶಿಕ್ಷಣ ಸಂಸ್ಥೆಗಳ ನೌಕರರ ಸಂಘದ ರಾಜ್ಯಾಧ್ಯಕ್ಷ ಶ್ರೀಶೈಲ ಎನ್. ಗಡದಿನ್ನಿ, ಕಾರ್ಯಾಧ್ಯಕ್ಷ ಡಾ. ಜಯಶೀಲ ಶೆಟ್ಟಿ, ಸಂಗನಗೌಡ ಪಾಟೀಲ ಕಲ್ಲೂರ ಮತ್ತಿತರು ಉಪಸ್ಥಿತರಿದ್ದರು.  

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ವಿವಿಧ ಹಂತಗಳಲ್ಲಿ ಶಿಕ್ಷಕರ – ಪಾಲಕರ ಸಭೆಯನ್ನು ಕಾಲೇಜಿನ ಸಪ್ತಸ್ವರ ಸಭಾಂಗಣದಲ್ಲಿ ನಡೆಸಲಾಯಿತು. ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆ, ಜೀವನ ಮೌಲ್ಯಗಳನ್ನು ಕುರಿತು ನಡೆದ ಕಾರ್ಯಕ್ರಮವು ಶಿಕ್ಷಕರು, ಪಾಲಕರು ಹಾಗೂ ವಿದ್ಯಾರ್ಥಿಗಳ ನಡುವಿನ ಬಾಂಧವ್ಯವನ್ನು ಗಟ್ಟಿಗೊಳಿಸುವ ವೇದಿಕೆಯಾಯಿತು. ಸಹಸಂಸ್ಥಾಪಕರುಗಳಾದ ವಿದ್ವಾನ್ ಗಣಪತಿ ಭಟ್ ಅವರು ಮಾತನಾಡಿ, ‘ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಶಿಕ್ಷಣ ಸಂಸ್ಥೆ, ಪೋಷಕರು ಮತ್ತು ಶಿಕ್ಷಕರ ತ್ರಿಕೋನ ಸಹಕಾರ ಅತ್ಯವಶ್ಯಕ’ ಎಂದರು. ಅಶ್ವತ್ ಎಸ್.ಎಲ್ ಅವರು ಮಾತನಾಡಿ, ‘ಶಿಕ್ಷಕರು ಮತ್ತು ಪಾಲಕರು ಇಬ್ಬರು ಒಂದೇ ಹಾದಿಯಲ್ಲಿ ನಡೆದು ವಿದ್ಯಾರ್ಥಿಗೆ ಮಾರ್ಗದರ್ಶನ ನೀಡಿದಾಗ, ಸಮಾಜಕ್ಕೆ ಒಳ್ಳೆಯ ನಾಗರಿಕರನ್ನು ರೂಪಿಸಲು ಸಾಧ್ಯವಾಗುತ್ತದೆ’ ಎನ್ನುತ್ತಾ ಕ್ರಿಯೇಟಿವ್ ನ ಕಾರ್ಯ ಯೋಜನೆಗಳ ಬಗ್ಗೆ ವಿವರಣೆಗಳನ್ನು ನೀಡಿದರು. ಡಾ. ಬಿ. ಗಣನಾಥ ಶೆಟ್ಟಿ ಅವರು ಮಾತನಾಡಿ, ‘ವಿದ್ಯಾರ್ಥಿಗಳು ತಮ್ಮ ಸಮಯವನ್ನು ಸದುಪಯೋಗಪಡಿಸಿಕೊಂಡು, ಶ್ರದ್ಧೆ ಮತ್ತು ಶ್ರಮದಿಂದ ಓದುತ್ತ ಜೀವನದ ಎಲ್ಲಾ ಕ್ಷೇತ್ರಗಳಲ್ಲಿ ಯಶಸ್ವಿಯಾಗಬೇಕು’ ಎಂದು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಶ್ರೀ ಅಘೋರೇಶ್ವರ ಕಲಾ ರಂಗ ಕಾರ್ತಟ್ಟು ಚಿತ್ರಪಾಡಿ, ಪ್ರತಿ ವರ್ಷ ಕೊಡಮಾಡುವ ಶ್ರೀ ಅಘೋರೇಶ್ವರ ರಾಜ್ಯೋತ್ಸವ ಪ್ರಶಸ್ತಿಗೆ ಈ ಬಾರಿ ಹೊಸಬದುಕು ಆಶ್ರಮ, ತೋಡುಕಟ್ಟು, ಪಾರಂಪಳ್ಳಿ ಇದರ ಪ್ರವರ್ತಕರಾದ ವಿನಯಚಂದ್ರ ಸಾಸ್ತಾನ ಅವರು ಆಯ್ಕೆಯಾಗಿದ್ದರು. ವಿನಯಚಂದ್ರ ಸಾಸ್ತಾನ ಹಲವಾರು ವರ್ಷಗಳಿಂದ ಸಾಮಾಜಿಕ ಸೇವೆ ನಿರತರಾಗಿದ್ದು ಪ್ರಸ್ತುತ ಸಾಲಿಗ್ರಾಮ ಪರಿಸರಲ್ಲಿ ಹೊಸಬದುಕು ಆಶ್ರಮ ನಡೆಸುತ್ತಿದ್ದಾರೆ. ಅಲ್ಲದೆ ಹಲವಾರು ಅನಾಥ ವ್ಯಕ್ತಿಗಳಿಗೆ ಆಶ್ರಯದಾತರಾಗಿ, ರಸ್ತೆ ಬದಿಯಲ್ಲಿ ಅದೆಷ್ಟೊ ಗಾಯಗೊಂಡ ಹೈನುಗಳಿಗೆ ಮರುಜೀವ ನೀಡಿದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭವು ನವಂಬರ್ 15ರ ಸಂಜೆ 7.00 ಗಂಟೆಗೆ ಶ್ರೀ ಅಘೋರೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಯಲಿದ್ದು, ಪದಪ್ರದಾನ ಸಮಾರಂಭದ ನಂತರ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ಯಕ್ಷಗಾನ ಕಾರ್ಯಕ್ರಮ ಜರುಗಲಿದೆ ಎಂದು ಶ್ರೀ ಅಘೋರೇಶ್ವರ ಕಲಾರಂಗದ ಅಧ್ಯಕ್ಷರಾದ ನಿತ್ಯಾನಂದ ನಾಯರಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ರೋಟರಿ ಕ್ಲಬ್ ಗಂಗೊಳ್ಳಿ ಇದರ ವತಿಯಿಂದ ಮಹಿಳೆಯರಿಗೆ ಸೈಬರ್ ಕ್ರೈಂ ಮಾಹಿತಿ ಕಾರ್ಯಕ್ರಮ ಗಂಗೊಳ್ಳಿಯ ಶ್ರೀ ವೀರೇಶ ಮಾಂಗಲ್ಯ ಮಂದಿರದಲ್ಲಿ ಇತ್ತೀಚಿಗೆ ನಡೆಯಿತು. ಗಂಗೊಳ್ಳಿ ಪೊಲೀಸ್ ಠಾಣೆಯ ಉಪನಿರೀಕ್ಷಕರಾದ ಪವನ್ ನಾಯಕ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಸ್ವ ಸಹಾಯ ಸಂಘದ ಸದಸ್ಯರಿಗೆ ಹಾಗೂ ಮಹಿಳೆಯರಿಗೆ ಸೈಬರ್ ಕ್ರೈಂ ಬಗ್ಗೆ ಮಾಹಿತಿ ನೀಡಿದರು. ರೋಟರಿ ಕ್ಲಬ್ ಗಂಗೊಳ್ಳಿ ಅಧ್ಯಕ್ಷ ಕೃಷ್ಣ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸೇವಾ ಪ್ರತಿನಿಧಿ ವನಜ, ಪಂಚಗಂಗಾವಳಿ ಒಕ್ಕೂಟದ ಕಾರ್ಯದರ್ಶಿ ಮಾಲಾಶ್ರೀ ಖಾರ್ವಿ, ಜತೆ ಕಾರ್ಯದರ್ಶಿ ಜ್ಯೋತಿ ಪೂಜಾರಿ, ಒಕ್ಕೂಟದ ಪದಾಧಿಕಾರಿಗಳು, ರೋಟರಿ ಸದಸ್ಯರು ಮೊದಲಾದವರು ಉಪಸ್ಥಿತರಿದ್ದರು. ಕೃಷ್ಣ ಪೂಜಾರಿ ಸ್ವಾಗತಿಸಿದರು. ಮಾಲಾಶ್ರೀ ವಂದಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮೂಡಬಿದ್ರೆಯ ಆಳ್ವಾಸ್ ಪಿಯು ಕಾಲೇಜಿನ ಕೆ. ಅಮರನಾಥ ಶೆಟ್ಟಿ ವೇದಿಕೆಯಲ್ಲಿ ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ನಡೆದ 20ನೇ ರಾಜ್ಯ ಮಟ್ಟದ ಅಬಾಕಸ್‌ ಮತ್ತು ಮೆಂಟಲ್‌ ಅರಿಥಮೆಟಿಕ್ – 2025 ಕಾಂಪಿಟೇಷನ್ ಸ್ಪರ್ಧೆಯಲ್ಲಿ ಛಾಯಾ ವಿಆರ್‌ ತೃತೀಯ ಸ್ಥಾನವನ್ನು ಪಡೆದಿದ್ದಾಳೆ. ಕುಂದಾಪುರದ ಎಚ್‍ಎಮ್‍ಎಮ್‍ ಆಂಗ್ಲ ಮಾಧ್ಯಮ ಶಾಲೆಯ 4ನೇ ತರಗತಿ ವಿದ್ಯಾರ್ಥಿನಿಯಾಗಿರುವ ಛಾಯಾ, ಛಾಯಾಗ್ರಾಹಕ ವಿಶ್ವನಾಥ ಮುನ್ನ ಹಾಗೂ ರಜನಿ ದಂಪತಿಯ ಪುತ್ರಿ. ಈಕೆ ಪ್ರಸನ್ನ, ಮಹಾಲಕ್ಷ್ಮೀ ಮತ್ತು ದೀಪಾ ಅವರಿಂದ ತರಬೇತಿ ಪಡೆದಿರುತ್ತಾಳೆ.

Read More