ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಯಕ್ಷಗಾನ ಎಂಬುದು ಮನೋಲ್ಲಾಸವನ್ನು ಹೆಚ್ಚಿಸುವ ಕಲೆ. ಜೀವನದಲ್ಲಿ ಮಾನಸಿಕವಾಗಿ ಕುಗ್ಗಿದ ಮನಸ್ಸುಗಳಿಗೆ ಯಕ್ಷಗಾನವು ಔಷಧೋಪಚಾರದಂತೆ. ಪರಂಪರೆಯ ಯಕ್ಷಗಾನದ ಶಾಸ್ತ್ರೀಯತೆಯನ್ನು ಉಳಿಸಿ ಬೆಳೆಸುವಲ್ಲಿ ಮಕ್ಕಳ ಯಕ್ಷಗಾನದ ಪ್ರದರ್ಶನಗಳು ಹೆಚ್ಚು ಫಲಪ್ರದ. ಮಕ್ಕಳ ಮನಸ್ಸು ಕಲ್ಮಶವಿರದ ಶುದ್ಧ ಮನಸ್ಸು. ಹಾಗಾಗಿ ಮಕ್ಕಳ ಪ್ರದರ್ಶನಗಳಲ್ಲಿ ಯಾವುದೇ ಅಪಸವ್ಯಗಳು ಕಾಣಿಸಿಕೊಳ್ಳುವುದಿಲ್ಲ ಎಂದು ಎಡನೀರು ಮಠಾಧೀಶರಾದ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ಆಶೀರ್ವದಿಸಿದರು. ಅವರು ಕೋಟದ ವಿವೇಕ ವಿದ್ಯಾ ಸಂಸ್ಥೆಯ ಆವರಣದಲ್ಲಿ ನಡೆದ ಮಕ್ಕಳ ಮೇಳದ 50ರ ಸಂಭ್ರಮದ ಸುವರ್ಣ ಪರ್ವ ಸಮಾರೋಪ ಸಮಾರಂಭವನ್ನು ಚಂಡೆ ನುಡಿಸಿ, ಉದ್ಘಾಟಿಸಿ ಮಾತನಾಡಿದರು. ಇತ್ತೀಚೆಗೆ ಯಕ್ಷಗಾನವು ವಾಣಿಜ್ಯೀಕರಣವಾದಾಗ ಅದರ ಮೂಲ ಸ್ವರೂಪಕ್ಕೆ ಧಕ್ಕೆ ಬಂದಿದೆ. ಕಲಾವಿದರ ವೈಯಕ್ತಿಕ ಮಾತುಕತೆಗಳೇ ರಂಗದ ಸಂಭಾಷಣೆಗಳಾಗಿ ಮೂಡಿಬರುತ್ತಿವೆ. ಇಂಥವುಗಳಿಗೆ ಕಡಿವಾಣ ಹಾಕಬೇಕು. ಯುವಜನತೆ ಸಮಾಜ ಬಾಹಿರ ಕೆಲಸದಲ್ಲಿ ತೊಡಗಿ ಕೊಳ್ಳುತ್ತಿರುವ ಈ ಹೊತ್ತಿನಲ್ಲಿ ಮಕ್ಕಳು ಯಕ್ಷಗಾನದಲ್ಲಿ ತೊಡಗಿಸಿ ಕೊಂಡಾಗ ಅವರಲ್ಲಿ ಉತ್ತಮ ಸಂಸ್ಕಾರ ಮೂಡುವುದಕ್ಕೆ ಸಾಧ್ಯ. ಉಡುಪ ಮತ್ತು ಹಂದೆಯವರಿಂದ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇತ್ತೀಚಿನ ದಿನಗಳಲ್ಲಿ ಬ್ಯಾಂಕಿಂಗ್ ವ್ಯವಹಾರಗಳು ಡಿಜಿಟಲ್ ವ್ಯವಸ್ಥೆಯ ಅಡಿಯಲ್ಲಿ ನಡೆಯುತ್ತಿದ್ದು ಗ್ರಾಹಕನು ಅತ್ಯಂತ ಜಾಗರೂಕನಾಗಿ ಬ್ಯಾಂಕಿಂಗ್ ವ್ಯವಹಾರ ನಡೆಸದೇ ಇದ್ದ ಪಕ್ಷದಲ್ಲಿ ಆರ್ಥಿಕ ಸಂಕಷ್ಟಕ್ಕೆ ಗುರಿಯಾಗುತ್ತಾನೆ. ಹಾಗಾಗಿ ಎಚ್ಚೆತ್ತ ಗ್ರಾಹಕ ಗುರಿಯತ್ತ ಸಾಗುವನೆಂದು ನಿವೃತ್ತ ಬ್ಯಾಂಕ್ ಅಧಿಕಾರಿ ವಿ. ಮೊಹನ್ ರಾವ್ ವಿದ್ಯಾರ್ಥಿಗಳನ್ನುದ್ದೇಶಿಸಿ ನುಡಿದರು. ಅವರು ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ, ಅಂಚೆ ಕೋಟೇಶ್ವರ ಇಲ್ಲಿ ನಡೆದ ಬ್ಯಾಂಕ್ ವ್ಯವಹಾರದಲ್ಲಿ ಜಾಗೃತೆ ಕಾರ್ಯಾಗಾರವನ್ನು ಉದ್ದೇಶಿಸಿ ಮಾತನ್ನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಬ್ಯಾಂಕಿಂಗ್ ವ್ಯವಹಾರದಲ್ಲಿ ಗ್ರಾಹಕನು ನೈಪುಣ್ಯತೆಯೊಂದಿಗೆ ವ್ಯವಹರಿಸದಿಲ್ಲಿ ಮೋಸದ ಬಲೆಗೆ ಬೀಳದೆ ಇರಲು ಸಾಧ್ಯ ಎಂದು ನುಡಿದರು. ಐಕ್ಯೂಎಸಿ ಸಂಚಾಲಕರಾದ ನಾಗರಾಜ ಯು., ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ನಾಗರಾಜ ವೈದ್ಯ ಎಂ., ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ವಾಣಿಜ್ಯಶಾಸ್ತ್ರ ಮುಖ್ಯಸ್ಥರಾದ ಡಾ. ಶೇಖರ ಬಿ. ಅವರು ಪ್ರಾಸ್ತಾವಿಕ ಮಾತನಾಡಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಭಾರತ ರತ್ನ ಸರ್. ಎಂ.ವಿಶ್ವೇಶ್ವರಯ್ಯ ಇಂಜಿನೀಯರಿಂಗ್ ಪ್ರತಿಷ್ಠಾನ ಟ್ರಸ್ಟ್ ಹಾಗೂ ಅಂತರಾಷ್ಟ್ರೀಯ ಪ್ರತಿಷ್ಠಾನದ ವೇದಿಕೆ ಕೊಡಲ್ಪಡುವ ಭಾರತ ರತ್ನ ಸರ್. ಎಂ. ವಿಶ್ವೇಶ್ವರಯ್ಯ ಅಂತಾರಾಷ್ಟ್ರೀಯ ಪ್ರಶಸ್ತಿಯನ್ನು ಮಾಜಿ ಲೋಕಾಯುಕ್ತ, ಸುಪ್ರೀಂ ಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿಗಳಾದ ಡಾ. ಎಂ. ಸಂತೋಷ್ ಹೆಗ್ಡೆ ಅವರು ವಾಸ್ತುತಜ್ಞ, ಪ್ರಸಂಗಕರ್ತ ಡಾ. ಬಸವರಾಜ್ ಶೆಟ್ಟಿಗಾರ್ ಅವರಿಗೆ ಪ್ರದಾನ ಮಾಡಿದರು. ಮಾಜಿ ಲೋಕಾಯುಕ್ತರಾದ ಡಾ. ಎಂ. ಸಂತೋಷ್ ಹೆಗ್ಡೆ ಅವರು ಇತ್ತೀಚಿಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ, ಪ್ರಶಸ್ತಿ ಪುರಸ್ಕಾರಗಳನ್ನು ಪಡೆದವರಿಗೆ ಮತ್ತಷ್ಟು ಜವಾಬ್ದಾರಿ ಹೆಚ್ಚುತ್ತದೆ ಅಲ್ಲದೇ 42 ವರ್ಷಗಳಿಂದ ವಿವಿಧ 16 ಕ್ಷೇತ್ರಗಳಲ್ಲಿ ಸಾಧನೆ ಮಾಡಿ 50 ಕ್ಷೇತ್ರಗಳ ಅಧ್ಯಯನ ಮಾಡಿ 50 ಕ್ಷೇತ್ರ ಮಹಾತ್ಮೆ ಪ್ರಸಂಗವನ್ನು ರಚಿಸಿ ಜಾಗತಿಕ ದಾಖಲೆ ನಿರ್ಮಿಸಿದ ವಾಸ್ತುತಜ್ಞ ಡಾ. ಬಸವರಾಜ್ ಶೆಟ್ಟಿಗಾರ್‌ರವರಿಗೆ ಪ್ರಶಸ್ತಿಯನ್ನು ನೀಡಿರುವುದರಿಂದ ಸಂಸ್ಥೆಯ ಗೌರವ ಮತ್ತಷ್ಟು ಹೆಚ್ಚಿದಂತಾಗಿದೆ ಎಂದು ಶುಭ ಹಾರೈಸಿದರು. ಸಮಾರಂಭವ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: 2025-26ನೇ ಶೈಕ್ಷಣಿಕ ಸಾಲಿನ ಪ್ರಾಕ್ತನ ವಿದ್ಯಾರ್ಥಿ ಸಂಘದ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮವು ಕಾಲೇಜಿನ ಮುಕಾಂಬಿಕಾ ಸಭಾಂಗಣದಲ್ಲಿ ನಡೆಯಿತು. ಕೋಟ ವಿವೇಕ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಜಗದೀಶ್ ನಾವಡ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕಾಲೇಜು ಅಭಿವೃದ್ಧಿಗೆ ಪ್ರಾಕ್ತನ ವಿದ್ಯಾರ್ಥಿಗಳ ಪಾತ್ರ ಬಹುಮುಖ್ಯ. ಪ್ರಾಕ್ತನ ವಿದ್ಯಾರ್ಥಿಗಳು ಸಂಸ್ಥೆಯ ಜೊತೆ ನಿರಂತರ ಒಡನಾಟ ಇಟ್ಟುಕೊಂಡಾಗ ಸಂಸ್ಥೆಯ ಬೆಳವಣಿಗೆ ಸಾಧ್ಯ ಎಂದರು. ಕಾಲೇಜಿನ ಪ್ರಾಂಶುಪಾಲ ಡಾ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿ, ನೂತನ ಪ್ರಾಕ್ತನ ವಿದ್ಯಾರ್ಥಿ ಸಂಘದ ಪರಿಕಲ್ಪನೆಯಲ್ಲಿ ಮೂಡಿ ಬರಲಿರುವ ಪ್ರಾಕ್ತನಯಾನ ಹಾಗೂ ಯಶೋದೀಪ ಯೋಜನೆಗೆ ಚಾಲನೆ ನೀಡಿದರು. ಉಪ-ಪ್ರಾಂಶುಪಾಲ ಡಾ. ಚೇತನ ಶೆಟ್ಟಿ ಕೋವಾಡಿ ಆಶಯದ ನುಡಿಗಳನ್ನಾಡಿದರು ಮತ್ತು ಆಡಳಿತ ನಿಕಾಯಕ ರಕ್ಷಿತ್ ರಾವ್ ಗುಜ್ಜಾಡಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ವಿಭಿನ್ನ ಕ್ಷೇತ್ರದಲ್ಲಿ ಸಾಧನೆ ಮಾಡಿದ ಪ್ರಾಕ್ತನ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ. ಕೊತ್ತಾಡಿ ಉಮೇಶ್ ಶೆಟ್ಟಿ ಅವರು ಕೊಯಮತ್ತೂರಿನ ಭಾರತೀಯಾರ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಮಕ್ಕಳು ಮತ್ತು ಯುವಜನರಲ್ಲಿರುವ ಕಲಾ ಪ್ರತಿಭೆಯನ್ನು ಗುರುತಿಸಿ ಅವರಿಗೆ ಉತ್ತೇಜನ ನೀಡುವ ಮತ್ತು ಅವರು ತಮ್ಮ ಕಲಾ ನೈಪುಣ್ಯವನ್ನು ವೃದ್ಧಿಗೊಳಿಸುವಂತೆ ಪ್ರೊತ್ಸಾಹಿಸಲು ಬಾಲ ಪ್ರತಿಭೆ (8 ವರ್ಷ ದಿಂದ 14 ವರ್ಷದ ಒಳಗಿರುವ), ಕಿಶೋರ ಪ್ರತಿಭೆ (14 ವರ್ಷದಿಂದ 18 ವರ್ಷದೊಳಗಿರುವ) ಹಾಗೂ ಯುವಪ್ರತಿಭೆ (18 ವರ್ಷದಿಂದ 30 ವರ್ಷದ ಒಳಗಿರುವ) ಗಳಿಗೆ ಕಲಾಪ್ರತಿಭೋತ್ಸವವನ್ನು ಆಯೋಜಿಸಲಾಗಿದೆ. ಜಿಲ್ಲಾ ಮಟ್ಟದ ಸ್ಪರ್ಧೆಯು ನಡೆಯುವ ದಿನಾಂಕವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು. ಜಿಲ್ಲಾ ಮಟ್ಟದಲ್ಲಿ ಭಾಗವಹಿಸುವ ಎಲ್ಲಾ ಸ್ಪರ್ಧಿಗಳಿಗೂ ಪ್ರಮಾಣ ಪತ್ರ ನೀಡುವುದರೊಂದಿಗೆ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದವರನ್ನು ವಲಯಮಟ್ಟಕ್ಕೆ, ವಲಯಮಟ್ಟದಿಂದ ರಾಜ್ಯಮಟ್ಟಕ್ಕೆ ಆಯ್ಕೆ ಮಾಡಲಾಗುವುದು. ಸ್ಪರ್ಧೆಯಲ್ಲಿ ಭಾಗವಹಿಸುವ ಸ್ಪರ್ಧಿಗಳು ವಯಸ್ಸಿನ ದೃಢೀಕರಣಕ್ಕಾಗಿ ದಾಖಲೆಗಳನ್ನು ತಾವು ವ್ಯಾಸಂಗ ಮಾಡುತ್ತಿರುವ ವಿದ್ಯಾ ಸಂಸ್ಥೆಯಿಂದ ಪಡೆದು ಅರ್ಜಿಯ ಜೊತೆಗೆ (ಅರ್ಜಿಗೆ ನಿಗದಿತ ನಮೂನೆ ಇರುವುದಿಲ್ಲ: ಬಿಳಿ ಹಾಳೆಯಲ್ಲಿ ಸ್ವವಿವರಗಳನ್ನು ಬರೆದಿರಬೇಕು.) ಲಗತ್ತಿಸಬೇಕು. ಚಿತ್ರಕಲಾ ಸ್ಪರ್ಧಿಗಳು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕರಾವಳಿಯ ಜೀವನಾಡಿ ಮೀನುಗಾರಿಕೆ ಅದೆಷ್ಟೊ ಕುಟುಂಬಗಳು ಅದರ ಆಯಾಮದ ಮೇಲೆ ಜೀವನ ಕಂಡುಕೊಂಡಿದ್ದಾರೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಪಚ್ಚಿಲೆ ಸೇರಿದಂತೆ ಮುತ್ತು ಕೃಷಿಯ ಮೂಲಕ ಯುವ ಸಮೂಹ ಹೊಸ ಭಾಷ್ಯ ಬರೆಯುತ್ತಿರುವುದು ಶ್ಲಾಘನೀಯ ಎಂದು ಉಡುಪಿ ಮತ್ತು ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದರು. ಅವರು ಸಾಸ್ತಾನದಲ್ಲಿ ಕರಾವಳಿ ಕೃಷಿ ಸಂಶೋಧನಾ ಸಂಸ್ಥೆ (ICAR –CCARI) ಗೋವಾ, ಜಲಾನಯನ ಅಭಿವೃದ್ಧಿ ಇಲಾಖೆ-ಬೆಂಗಳೂರು, ಜಿಲ್ಲಾ ಪಂಚಾಯತ್-ಉಡುಪಿ, ಕೃಷಿ ಇಲಾಖೆ-ಉಡುಪಿ, ಮೀನುಗಾರಿಕೆ ಇಲಾಖೆ ಉಡುಪಿ, ಭಾ.ಕೃ.ಅ.ಪ. ಕೃಷಿ ವಿಜ್ಞಾನ ಕೇಂದ್ರ-ಬ್ರಹ್ಮಾವರ, ಗೀತಾನಂದ ಫೌಂಡೇಶನ್ ಮಣೂರು, ಅರಬ್ಬೀ ಸಮುದ್ರ ಮೀನುಗಾರಿಕೆ ನಿರ್ವಹಣೆ ಸಮನ್ವಯ ಸಮಿತಿ, ಸ್ಕೋಡವೆಸ್ ಸಂಸ್ಥೆ, ಆಯುಶ್ಮಾನ್ ಭವ ಸಂಸ್ಥೆ, ಉಡುಪಿ ಕಿನಾರ ಮೀನುಗಾರರ ಉತ್ಪಾದಕ ಕಂಪನಿ ನಿಯಮಿತ ಮತ್ತು ಅಮೃತೇಶ್ವರಿ ರೈತ ಉತ್ಪಾದಕ ಕಂಪನಿ ನಿಯಮಿತ ಜಂಟಿಯಾಗಿ ಆಯೋಜಿಸಿರುವ ಮುತ್ತು ಕೃಷಿ ಮಾಹಿತಿ ಕಾರ್ಯಾಗಾರ ಮನೆ ಮನೆಯಲ್ಲೂ ಮುತ್ತು ಕೃಷಿ ಹಾಗೂ ಯುಕೆ ಪರ್ಲ್ ಮಾರ್ಟ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಬೋರ್ಡ್ ಹೈಸ್ಕೂಲ್ ವಠಾರದ ರೋಟರಿ ಕಲಾಮಂದಿರದಲ್ಲಿ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕುಂದಾಪುರ ತಾಲೂಕು ಘಟಕ ವತಿಯಿಂದ ಸಾಮಾಜಿಕ ಹೋರಾಟಗಾರ, ಹಿರಿಯ ನೇತಾರ ಮಾಣಿ ಗೋಪಾಲ್ ಅವರ ಆತ್ಮಕಥನ ‘ನಾನು ಮಾಣಿಗೋಪಾಲ’ ಪುಸ್ತಕವನ್ನು ಬಿಡುಗಡೆಗೊಂಡಿತು. ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ| ಎಂ. ಮೋಹನ್ ಆಳ್ವ ಅವರು ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿ, ಮಾಣಿಗೋಪಾಲರು ಶ್ರೀ ಸಾಮಾನ್ಯರ ಜತೆಯಲ್ಲಿದ್ದುಕೊಂಡು, ಬಡವರ ಪರ, ಮೂರ್ತೆದಾರರ ಪರ ಹೋರಾಟ ಮಾಡಿದವರು. ಆ ಕಾಲದಲ್ಲಿ ಅಂತಹ ಹೋರಾಟ ಮಾಡಲು ಗಟ್ಟಿತನ ಇರಬೇಕು. ಬದುಕಿಗೊಂದು ಸ್ಪಷ್ಟ ನಿಲುವು ಬೇಕಿತ್ತು. ಅದೆರಡು ಅವರಲ್ಲಿತ್ತು. ಇಡೀ ಬದುಕಿನುದ್ದಕ್ಕೂ ಸತ್ಯ, ನ್ಯಾಯ, ಧರ್ಮದ ಪರ ಹೋರಾಡಿ, ರಾಜಕೀಯದಲ್ಲೂ ಶುದ್ಧ ಚಾರಿತ್ರ್ಯವನ್ನು ಉಳಿಸಿಕೊಂಡು, ಶುದ್ಧ ಹಸ್ತದ ರಾಜಕಾರಣಕ್ಕೆ ಹೆಸರಾದ ಕುಂದಾಪುರದ ಸಾಕ್ಷಿ ಪ್ರಜ್ನೆಯಂತಿದ್ದರು ಎಂದು ಹೇಳಿದರು. ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ, ಅವರೊಂದಿಗೆ ನಮ್ಮ ಕುಟುಂಬಕ್ಕೆ ದೀರ್ಘಕಾಲದ ಒಡನಾಟವಿದೆ. ಬೇರೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕಾರಂತರು ತಮ್ಮ ಜೀವಿತ ಅವಧಿಯಲ್ಲಿ ನಡೆನುಡಿ ಬಲು ವಿಶಿಷ್ಟವಾದದ್ದು ಅವರ ಸಾಹಿತ್ಯಿಕ ಬದುಕು ಯುವ ಸಮುದಾಯಕ್ಕೆ ಪ್ರೇರಣೆದಾಯಕ ಎಂದು ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಹೇಳಿದರು. ಅವರು ಶನಿವಾರ ಗಿರಿಜಾ ಕಲ್ಯಾಣಮಂಟಪ ದಲ್ಲಿ ಗೆಳೆಯರ ಬಳಗ ಕಾರ್ಕಡ ಇವರ ಆಶ್ರಯದಲ್ಲಿ ಡಾ. ಕೋಟ ಶಿವರಾಮ ಕಾರಂತ ಜನ್ಮದಿನಾಚರಣೆ ಅಂಗವಾಗಿ ಗೆಳೆಯರ ಬಳಗ ಕಾರಂತ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಕಾರಂತರು ವಿಶ್ವಮಟ್ಟದಲ್ಲಿ ತಮ್ಮ ಸಾಹಿತ್ಯ, ವಿವಿಧ ರಂಗವನ್ನು ಪರಿಚಯಿಸಿಕೊಂಡವರು ಅಂತಹ ಮಹಾನ್ ಚೇತನ ಹೆಸರಿನಲ್ಲಿ ಪುರಸ್ಕಾರ ಏರ್ಪಡಿಸಿದ ಗೆಳೆಯರ ಬಳಗಕ್ಕೆ ಕೃತಜ್ಞತೆ ಸಲ್ಲಿಸಬೇಕು ಎಂದರು. ಇದೇ ವೇಳೆ ಸಾಹಿತಿ ಎಚ್. ಶಕುಂತಲ ಭಟ್ ಹಳೆಯಂಗಡಿ ಅವರಿಗೆ ಗೆಳೆಯರ ಬಳಗ ಕಾರಂತ ಪುರಸ್ಕಾರ ನೀಡಲಾಯಿತು. ಕಲ್ಕೂರ ಪ್ರತಿಷ್ಠಾನ ಮಂಗಳೂರು ಇದರ ಅಧ್ಯಕ್ಷ ಎಸ್. ಪ್ರದೀಪ್ ಕುಮಾರ್ ಕಲ್ಕೂರ ಕಾರಂತರ ಭಾವ ಚಿತ್ರಕ್ಕೆ ಪುಷ್ಭನಮನ ಸಲ್ಲಿಸಿದರು. ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಶಿರೂರು ಕೆಳಪೇಟೆಯಲ್ಲಿ ಆಟೋ ರಿಕ್ಷಾಕ್ಕೆ ಬೊಲೆರೋ ಪಿಕಪ್ ವಾಹನವೊಂದು ಡಿಕ್ಕಿ ಹೊಡೆದು ರಿಒ್ಷಾ ಚಾಲಕ ಮೃತಪಟ್ಟ ಘಟನೆ ನಡೆದಿದೆ. ಹಡವಿನಕೋಣೆ ನ್ಯೂ ಕಾಲೋನಿ ನಿವಾಸಿ ಕರಾ ಇಲಿಯಾಸ್(49) ಮೃತ ರಿಕ್ಷಾ ಚಾಲಕ ಮಲ್ಪೆಯಿಂದ ಭಟ್ಕಳಕ್ಕೆ ತೆರಳುತ್ತಿದ್ದ ಮೀನಿನ ವಾಹನ ಶಿರೂರು ಮಾರ್ಕೆಟ್ ಕಡೆಗೆ ತೆರಳುತ್ತಿದ್ದ ಆಟೋ ರಿಕ್ಷಾಕ್ಕೆ ಹಿಂದಿನಿಂದ ಡಿಕ್ಕಿ ಹೊಡೆದಿದೆ.ರಿಕ್ಷಾ ಡಿಕ್ಕಿಯಾದ ರಭಸಕ್ಕೆ ರಿಕ್ಷಾ ನಜ್ಜುನುಜ್ಜಾಗಿದ್ದು ರಿಕ್ಷಾ ಚಾಲಕ ಸ್ಥಳದಲ್ಲೆ ಮೃತಪಟ್ಟಿದ್ದಾನೆ. ಬೈಂದೂರು ಆರಕ್ಷಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಬಿ.ಇಡಿ ವ್ಯಾಸಾಂಗಕ್ಕಾಗಿ ಸರ್ಕಾರದಿಂದ ಮಾನ್ಯತೆ ಪಡೆದ ರಾಜ್ಯದ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಬಿ.ಇಡಿ ಕಾಲೇಜುಗಳಲ್ಲಿನ ಸರ್ಕಾರಿ ಕೋಟಾದಡಿ ಸೀಟುಗಳ ದಾಖಲಾತಿಗಾಗಿ ಇಲಾಖಾ ವೆಬ್‌ಸೈಟ್ www.schooledecation.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್ 3 ಕೊನೆಯ ದಿನ. ಜಿಲ್ಲಾ ನೋಡೆಲ್ ಕೇಂದ್ರವಾಗಿ ಡಯಟ್ ಉಡುಪಿ ಕಾರ್ಯನಿರ್ವಹಿಸಲಿದ್ದು, ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ ಏಳು ದಿನಗಳ ಒಳಗಾಗಿ ಕಡ್ಡಾಯವಾಗಿ ಮೂಲ ದಾಖಲೆಗಳೊಂದಿಗೆ ಸಂಸ್ಥೆಯಲ್ಲಿ ಪರಿಶೀಲನೆಗಾಗಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸೋನಿಕ್ ಟಿ ಮೊ.ನಂ: 9901236348 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಂಶುಪಾಲರ ಕಚೇರಿ ಪ್ರಕಟಣೆ ತಿಳಿಸಿದೆ.
