ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಸುವಿಧಾ ಸೌಹರ್ಧ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್ ಇದರ ನಿರ್ದೇಶಕರಾಗಿರುವ ವಂಡ್ಸೆ ಕಟ್ಟೆಮನೆ ಹೇಮಂತ್ ಕುಮಾರ್ ಶೆಟ್ಟಿ (59) ಅವರು ಶುಕ್ರವಾರ ಬೆಂಗಳೂರಿನಲ್ಲಿ ನಿಧನ ಹೊಂದಿದ್ದಾರೆ. ಅವರು ಜ್ಯೋತಿ ಲ್ಯಾಬೋರಟರಿ ಲಿಮಿಟೆಡ್ ಕಂಪೆನಿಯಲ್ಲಿ ಜೋನಲ್ ಕಮರ್ಸಿಯಲ್ ಮೇನೇಜರ್ ಆಗಿ ಸೇವೆ ಸಲ್ಲಿಸುತಿದ್ದರು. ಮೃತರು ಪತ್ನಿ ಮತ್ತು ಪುತ್ರಿಯನ್ನು ಅಗಲಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಶನಿವಾರಕನ್ನಡ ವಿಭಾಗ ಮತ್ತು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಕುಂದಾಪುರ ಹಾಗೂ ಸುವ್ವಿ ಪಬ್ಲಿಕೇಷನ್ಸ್ ಶಿಕಾರಿಪುರ ಇದರ ಸಂಯುಕ್ತ ಆಶ್ರಯದಲ್ಲಿ ವೈದೇಹಿಯವರ ಸಾಹಿತ್ಯ ಮರುಚಿಂತನೆ ಕುರಿತು ಒಂದು ದಿನದ ರಾಷ್ಟ್ರಮಟ್ಟದ ವೆಬಿನಾರ್ ಮತ್ತು ಕೃತಿ ಲೋಕಾರ್ಪಣೆ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮಕ್ಕೆ ಉದ್ಘಾಟಕರಾಗಿ ಆಗಮಿಸಿದ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ಅನುಪಮ ಎಸ್. ಶೆಟ್ಟಿ ಮಾತನಾಡಿ, ವೈದೇಹಿಯವರು ಕುಂದಾಪುರ ಮಹಿಳೆಯರ ಕಷ್ಟಗಳನ್ನು ತಮ್ಮದೇ ಆದ ಭಾಷೆಗಳಲ್ಲಿ ಬರೆಯುತ್ತಿದ್ದರು ಮತ್ತು ಮಹಿಳಾ ಜೀವನದ ಎಲ್ಲಾ ಮಜಲುಗಳನ್ನು ಅವರ ಕೃತಿಗಳಲ್ಲಿ ಕಾಣಬಹುದಾಗಿದೆ ಎಂದರು. ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಕೇರಳ ಕೇಂದ್ರೀಯ ವಿಶ್ವ ವಿದ್ಯಾನಿಲಯದ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಸೌಮ್ಯ ಹೇರಿಕುದ್ರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ, ವೈದೇಹಿಯವರ ಕಥೆಗಳಲ್ಲಿ ಸ್ತ್ರೀ ಸಾಮಾನ್ಯರನ್ನು ಕೇಂದ್ರೀಕರಿಸಿ ಸುಮಾರು 70 ಮತ್ತು 80ರ ದಶಕದ ಮಹಿಳೆಯ ಕಷ್ಟ ಮತ್ತು ಬದುಕಿನಲ್ಲಿ ಎದುರಾಗುವ ಸವಾಲುಗಳ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ತಂತ್ರಜ್ಞಾನ, ವೈದ್ಯಕೀಯ, ಮೆಕ್ಯಾನಿಕ್, ಬೋಧನೆ ಸೇರಿದಂತೆ ಹತ್ತಾರು ರೀತಿಯ ಉದ್ಯೋಗದ ಅವಕಾಶಗಳು ಸೇನೆಯಲ್ಲಿ ಇವೆ. ಅದನ್ನು ಅರಿತುಕೊಂಡು ಸದ್ಬಳಕೆ ಮಾಡಿಕೊಳ್ಳುವಲ್ಲಿ ಇಂದಿನ ಯುವ ಪೀಳಿಗೆ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಮಾಜಿ ಸೈನಿಕರು, ಲೇಖಕರು ಆಗಿರುವ ಬೈಂದೂರು ಚಂದ್ರಶೇಖರ ನಾವುಡ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ, ಎಸ್.ವಿ ಕಾಮರ್ಸ್ ಕ್ಲಬ್ ಗಂಗೊಳ್ಳಿ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಶ್ರೀ ನಾರಾಯಣ ಗುರು ಜನ ಸೇವಾ ಬಳಗದ ಸಂಯುಕ್ತ ಆಶ್ರಯದಲ್ಲಿ ಇಲ್ಲಿನ ರೋಟರಿ ಸಭಾಂಗಣದಲ್ಲಿ ನಡೆದ ಭಾರತೀಯ ಸೇನೆಯಲ್ಲಿ ಉದ್ಯೋಗಾವಕಾಶಗಳ ಕುರಿತಾದ ಮಾಹಿತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಸೈನ್ಯ ಸೇರುವುದೆಂದರೆ ಕೇವಲ ಯುದ್ಧ ಮಾಡುವುದು ಎಂದು ಅರ್ಥವಲ್ಲ. ದೇಶಪ್ರೇಮದ ಮನೋಭಾವನೆಯೊಂದಿಗೆ ಅಲ್ಲಿರುವ ವಿವಿಧ ಉದ್ಯೋಗಗಳಲ್ಲಿ ನಮ್ಮನ್ನು ತೊಡಗಿಸಿಕೊಳ್ಳುವ ಮೂಲಕ ಉತ್ತಮವಾದ ಬದುಕನ್ನು ಕಟ್ಟಿಕೊಳ್ಳಲು ಕೂಡ ಸಾಧ್ಯವಿದೆ ಎಂದರು. ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ. ಸಿ. ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಬೈಂದೂರು ಚಂದ್ರಶೇಖರ ನಾವುಡ ಅವರನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ ವಿಭಾಗ ವತಿಯಿಂದ ರೆಸ್ಟ್ ಕೊಡರ್ ಅಕಾಡೆಮಿಯ ಸಹಯೋಗದಲ್ಲಿ “ಎಂ.ಇ.ಆರ್.ಎನ್. ಸ್ಟಾಕ್ ” ವಿಷಯದ ಬಗ್ಗೆ ಎರಡು ದಿನದ ಕಾರ್ಯಾಗಾರ ಜರುಗಿತು. ಸಂಪನ್ಮೂಲ ವ್ಯಕ್ತಿಯಾಗಿ ರೆಸ್ಟ್ ಕೊಡರ್ ಅಕಾಡೆಮಿ, ಸೀನಿಯರ್ ಸಾಫ್ಟ್ ವೇರ್ ಡೆವೆಲಪರ್ ಸಯ್ಯದ್ ಇಮ್ರಾನ್ ಆಗಮಿಸಿದ್ದರು. ಸಂಸ್ಥೆಯ ಅಧ್ಯಕ್ಷರಾದ ಸಿದ್ದಾರ್ಥ ಜೆ. ಶೆಟ್ಟಿ , ಪ್ರಾಚಾರ್ಯರಾದ ಡಾ. ರಾಮಕೃಷ್ಣ ಹೆಗಡೆ, ವಿಭಾಗದ ಮುಖ್ಯಸ್ಥರಾದ ಮುರಳೀಧರ ಬಿ.ಕೆ., ಕಾರ್ಯಕ್ರಮದ ಸಂಚಾಲಕರಾದ ಡಾ. ಮಂಜುನಾಥ ಲಮಾಣಿ, ಪ್ಲೇಸ್ಮೆಂಟ್ ಡೀನ್ ಡಾ. ಅಣ್ಣಾಮಲೈ ಹಾಗು ಪ್ಲೇಸ್ಮೆಂಟ್ ಆಫೀಸರ್ ಪ್ರಸಾದ್ ಸಮ್ಮುಖದಲ್ಲಿ ಎಂಐಟಿಕೆ ರೆಸ್ಟ್ ಕೊಡರ್ ಅಕಾಡೆಮಿಯ ಜೊತೆಗೆ ಒಡಂಬಡಿಕೆ ಮಾಡಿಕೊಂಡಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸನಾತನ ಧರ್ಮವನ್ನು ಹೊಂದಿದ ಭಾರತೀಯರಿಗೆ ಸಂಸ್ಕೃತಿಯ ಬೇರು ಗಟ್ಟಿಯಾಗಿದೆ. ಈ ಸಾಂಸ್ಕೃತಿಕ ಪರಂಪರೆಯನ್ನು, ಮಾನವ ಧರ್ಮವನ್ನು ಅರ್ಥೈಸಿಕೊಳ್ಳುವ ಮೂಲಕ ಜೀವನದ ಅರ್ಥವನ್ನು ತಿಳಿಯಬಹುದು ಎಂದು ಉಡುಪಿಯ ಉಜ್ವಲ್ ಗ್ರೂಪ್ಸ್ ನ ಆಡಳಿತ ನಿರ್ದೇಶಕರಾದ ಅಜಯ್ ಪಿ. ಶೆಟ್ಟಿ ಹೇಳಿದರು. ಅವರು ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಆಯೋಜಿಸಿದ ಜೀವನ ಮೌಲ್ಯ ಉಪನ್ಯಾಸ ಮಾಲಿಕೆಯನ್ನು ಉದ್ಘಾಟಿಸಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ, ಕಾಲೇಜಿನ ಆಡಳಿತ ನಿಕಾಯಕರು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ರಕ್ಷಿತ್ ರಾವ್, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ರೇಷ್ಮಾ ಶೆಟ್ಟಿ ಉಪಸ್ಥಿತರಿದ್ದರು. ಶಯನ ಅತಿಥಿಗಳನ್ನು ಪರಿಚಯಿಸಿದರು. ಅಭಿಷೇಕ್ ಪ್ರಾರ್ಥಿಸಿ, ವಿದ್ಯಾರ್ಥಿಗಳಾದ ಮಿಥಿಲೇಶ್ ನಿರೂಪಿಸಿ, ರೇಷ್ಮಾ ಸ್ವಾಗತಿಸಿ, ಮೇಘನಾ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರಿನ ಹೆಸರಾಂತ ಮೊಬೈಲ್ ಮಾರಾಟ ಮಳಿಗೆ ‘ಪ್ರೀತಿ ಮೊಬೈಲ್ಸ್’ನಲ್ಲಿ ‘ದೀಪಾವಳಿ’ ಹಬ್ಬದ ಅಂಗವಾಗಿ ಗ್ರಾಹಕರಿಗೆ ವಿವಿಧ ಕೊಡುಗೆಗಳನ್ನು ನೀಡಲಾಗುತ್ತಿದೆ. ಪ್ರತಿ ಸ್ಮಾರ್ಟ್ ಪೋನ್ ಖರೀದಿಯ ಮೇಲೆಯೂ ಖಚಿತ ಕೊಡುಗೆಗಳು, ಇಎಂಐ ಸೌಲಭ್ಯ, ಜೊತೆಗೆ ಲಕ್ಕಿ ಕೂಪನ್, ಮೆಗಾ ಎಕ್ಸ್’ಚೆಂಚ್ ಆಫರ್, ಉಚಿತ ಸ್ಕ್ರೀನ್ ಬದಲಾವಣೆ ಸೇರಿದಂತೆ ಹಲವು ಕೊಡುಗೆಗಳನ್ನು ಒಳಗೊಂಡಿದೆ. ಲಕ್ಕಿ ಕೂಪನ್‌ನಲ್ಲಿ ಕಾರು, ಬೈಕ್, ಸ್ಮಾರ್ಟ್ ಟಿವಿ ಸಹಿತ ಹಲವು ಕೊಡುಗೆಗಳನ್ನು ಗೆಲ್ಲುವ ಅವಕಾಶವಿದೆ. ಐಫೋನ್, ಮೋಟೋರೊಲ, ವಿವೋ, ರೆಡ್ಮಿ, ಒಪ್ಪೋ, ರೀಯಲ ಮೀ, ಸಾಮಸಾಂಗ್, ಐಟೇಲ್, ಲಾವಾ, ಗೂಗಲ್ ಪಿಕ್ಸೆಲ್, ನಥಿಂಗ್ ನೋಕಿಯಾ, ಸೇರಿದಂತೆ ಎಲ್ಲಾ ಸ್ಮಾರ್ಟ್ ಮತ್ತು ನಾರ್ಮಲ್ ಮೊಬೈಲ್ ಸಹಿತ ಎಸ್ಸರೀಸ್ ಐಟಂಗಳೂ,ಬಜಾಜ್,ಎಚ್ ಡಿ ಬಿ,ಐಡಿಎಫ್‌ಸಿ,ಹೋಮ್ ಕ್ರೆಡಿಟ್, ಸಾಮಸಾಂಗ್ ಫೈನಾನ್ಸ್, ವಹನರೆಡ್ಮಿ ಫೈನಾನ್ಸ್ ಟಿವಿಎಸ್ ಫೈನಾನ್ಸ್ ಸೇರಿದಂತೆ ಎಲ್ಲಾ ಕಂಪನಿಗಳಿಂದ ಇಐಎಂಐ ಸೌಲಭ್ಯ ಕೂಡ ಇದೆ. ವಿಶೇಷವಾಗಿ ಎಲ್ಲಾ ಬ್ಯಾಂಕಿನ ಕ್ರೆಡಿಟ್ ಕಾರ್ಡ್ ನ ಮೇಲೇ 10% ಡಿಸ್ಕೌಂಟ್ ಆಫರ್.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕ ಮತ್ತು ಅಬಕಾರಿ ಸೇವಾ ಇಲಾಖೆಯ ವತಿಯಿಂದ ಮಾದಕ ವ್ಯಸನದ ಕುರಿತು ಜಾಗೃತಿ ಕಾರ್ಯಕ್ರಮವು ಶುಕ್ರವಾರ ನಡೆಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಕುಂದಾಪುರ ಅಬಕಾರಿ ಉಪ ಅಧೀಕ್ಷಕರಾಗಿದ್ದ ಪ್ರಭುಗೌಡ ಪಾಟೀಲ್ ಅವರು ಮಾದಕ ವ್ಯಸನದ ದುಷ್ಪರಿಣಾಮಗಳ ಕುರಿತು ತಿಳಿಸಿ ಅದರಿಂದ ದೂರ ಇರಬೇಕು ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ವಹಿಸಿದ್ದರು. ಈ ಸಂದರ್ಭದಲ್ಲಿ ಅಬಕಾರಿ ನಿರೀಕ್ಷಕರಾದ ರವಿ ನಾರಾಯಣ, ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರು ಹಾಗೂ ಎನ್ಎಸ್ಎಸ್ ನ ಸಂಯೋಜನಾಧಿಕಾರಿ ಅರುಣ್ ಎ.ಎಸ್. ಉಪಸ್ಥಿತರಿದ್ದರು. ವಾಣಿಜ್ಯಶಾಸ್ತ್ರ ವಿಭಾಗದ ಉಪನ್ಯಾಸಕಿ ಪುಷ್ಪಲತಾ ಸ್ವಾಗತಿಸಿ, ರಾಜ್ಯಶಾಸ್ತ್ರ ವಿಭಾಗದಉಪನ್ಯಾಸಕಿ ಅಕ್ಷತಾ ನಿರೂಪಿಸಿ, ವಾಣಿಜ್ಯಶಾಸ್ತ್ರ ವಿಭಾಗದ ಉಪನ್ಯಾಸಕಿ ಸುಮಾ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಂದಿನ ಕಲುಷಿತ ವಾತಾವರಣದಲ್ಲಿ ಜೀವನವನ್ನು ಸುಂದರವಾಗಿಸಬಲ್ಲ. ಪ್ರೀತಿಗೆ, ಬದಲಾಗಿ ಮನುಷ್ಯ-ಮನುಷ್ಯರ ನಡುವೆ ದ್ವೇಷದ ಬೆಂಕಿ ಹಬ್ಬುತ್ತಿದೆ. ಜಾತಿ-ಧರ್ಮಗಳ ಹೆಸರಿನಲ್ಲಿ ಕಲಹಗಳು ಮತ್ತು ಹಿಂಸೆ-ರಕ್ತಪಾತಗಳು ಹೆಚ್ಚುತ್ತಿವೆ. ಈ ಸಮಸ್ಯೆಗೆ ಪರಿಹಾರ ನೀಡಲು ಸಾಹಿತ್ಯದಿಂದ ಮಾತ್ರ ಸಾಧ್ಯ ಎಂದು ಕೋಟ-ಪಡುಕೆರೆಯ ಲಕ್ಷ್ಮಿ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ರಾಜೇಂದ್ರ ಎಸ್. ನಾಯಕ್ ಹೇಳಿದರು. ಅವರು ಕೋಟ-ಪಡುಕೆರೆಯ ಲಕ್ಷ್ಮಿ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸಂಘ ಮತ್ತು ಐಕ್ಯೂಎಸಿ ಆಶ್ರಯದಲ್ಲಿ ನಡೆದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಕುಂದಾಪುರದ ಜೆಸ್ಸಿ ಎಲಿಜಬೆತ್ ಜೋಸೆಫ್ ಮಲೆಯಾಳದಿಂದ ಅನುವಾದಿಸಿದ ಹೆಂಡತಿ ಕಾದಂಬರಿಯ ಬಿಡುಗಡೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇಂದಿನ ಯುವಜನರು ಹೆಚ್ಚು ಹೆಚ್ಚು ಸಾಹಿತ್ಯ ಅಧ್ಯಯನದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು. ಬಾವಿಯೊಳಗಿನ ಕಪ್ಪೆಗಳ ಹಾಗಿರದೆ ವಿಶಾಲವಾದ ಪ್ರಪಂಚದ ಬಗ್ಗೆ ತಿಳಿದುಕೊಳ್ಳಲು ಕನ್ನಡ ಸಾಹಿತ್ಯ ಮಾತ್ರವಲ್ಲದೆ ಬೇರೆ ಬೇರೆ ಭಾಷೆಗಳಿಂದ ಅನುವಾದವಾದ ಸಾಹಿತ್ಯವನ್ನೂ ಓದಿಕೊಳ್ಳುವುದು ಹೆಚ್ಚು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು ಅಲ್ಪಸಂಖ್ಯಾತ ಮುಸ್ಲಿಂ, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಜನಾಂಗದವರಿಂದ ರೇಷ್ಮೆ ನೂಲು ಬಿಚ್ಚಣಿಕೆ ಉದ್ಯಮ ಪ್ರೋತ್ಸಾಹ ಯೋಜನೆ, ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಸಹಾಯಧನ ಯೋಜನೆ, ವಿದೇಶಿ ವಿದ್ಯಾಭ್ಯಾಸ ಸಾಲ ಯೋಜನೆ, ಶ್ರಮಶಕ್ತಿ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ವೃತ್ತಿ ಪ್ರೋತ್ಸಾಹ ಯೋಜನೆ, ನೇರ ಸಾಲ ಯೋಜನೆ ಹಾಗೂ ಸಾಂತ್ವನ ಯೋಜನೆಗಳಿಗೆ ಸಾಲ ಸಹಾಯಧನ ಸೌಲಭ್ಯ ಪಡೆಯಲು ವೆಬ್‌ಸೈಟ್ https://kmdconline.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಅಕ್ಟೋಬರ್ 21 ರವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪ ಸಂಖ್ಯಾತರ ಅಭಿವೃದ್ಧಿ ನಿಗಮ, ಮೌಲಾನಾ ಆಜಾದ್ ಭವನ, ಒಂದನೇ ಮಹಡಿ, ಪಶು ಚಿಕಿತ್ಸಾಲಯ ಹತ್ತಿರ, ಶಿವಳ್ಳಿ, ಮಣಿಪಾಲ ದೂ.ಸಂಖ್ಯೆ: 0820-2574990, ಸಹಾಯವಾಣಿ ಸಂಖ್ಯೆ: 8277799990 ಅಥವಾ ಉಡುಪಿ ತಾಲೂಕು ದೂ.ಸಂಖ್ಯೆ: 0820-2574596, ಕಾರ್ಕಳ ತಾಲೂಕು ದೂ.ಸಂಖ್ಯೆ: 08258-231101 ಹಾಗೂ ಕುಂದಾಪುರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಫಿಸಿಯೋಥೆರಪಿ ಕಾಲೇಜಿನ ಆಶ್ರಯದಲ್ಲಿ ನಡೆದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಮಂಗಳೂರು ವಲಯ ವಾಲಿಬಾಲ್ ಟೂರ್ನಮೆಂಟ್‌ನ ಪುರುಷರ ವಿಭಾಗದಲ್ಲಿ ಆಳ್ವಾಸ್ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಚಾಂಪಿಯನ್ಸ್ ಆದರೆ, ಮಹಿಳೆಯರ ವಿಭಾಗದಲ್ಲಿ ಮಂಗಳೂರಿನ ಫಾದರ್ ಮುಲ್ರ‍್ಸ್ ನರ್ಸಿಂಗ್ ಕಾಲೇಜು ಚಾಂಪಿಯನ್ಸ್ ಪಟ್ಟ ಅಲಂಕರಿಸಿತು. ಪುರುಷ ವಿಭಾಗ ವಿಜೇತರು:ಆಳ್ವಾಸ್ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್, ಮೂಡುಬಿದಿರೆರನ್ನರ್: ಆಳ್ವಾಸ್ ಫಿಸಿಯೋಥೆರಪಿ ಕಾಲೇಜು, ಮೂಡುಬಿದಿರೆಮೊದಲ ರನ್ನರ್-ಅಪ್: ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು, ಮೂಡುಬಿದಿರೆಎರಡನೇ ರನ್ನರ್-ಅಪ್: ಕೆ.ವಿ.ಜಿ ಮೆಡಿಕಲ್ ಕಾಲೇಜು, ಸುಳ್ಯಮಹಿಳಾ ವಿಭಾಗ ವಿಜೇತರು:ಫಾದರ್ ಮುಲ್ರ‍್ಸ್ ನರ್ಸಿಂಗ್ ಕಾಲೇಜು, ಮಂಗಳೂರುರನ್ನರ್: ಆಳ್ವಾಸ್ ನ್ಯಾಚುರೋಪತಿ ಮತ್ತು ಯೋಗಿಕ್ ಸೈನ್ಸ್ ಕಾಲೇಜು, ಮೂಡುಬಿದಿರೆಮೊದಲ ರನ್ನರ್-ಅಪ್: ಎಂ.ವಿ ಶೆಟ್ಟಿ ಫಿಸಿಯೋಥೆರಪಿ ಕಾಲೇಜು, ಮಂಗಳೂರುಎರಡನೇ ರನ್ನರ್-ಅಪ್: ಕೊಡಗು ಮೆಡಿಕಲ್ ಕಾಲೇಜು, ಮಡಿಕೇರಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ಡಾ. ವಿನಯ್ ಆಳ್ವ, ಆಳ್ವಾಸ್ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲ ಡಾ. ಯತಿಕುಮಾರ್‌ಸ್ವಾಮಿ…
