Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಡಾ. ಶಿವರಾಮ ಕಾರಂತರ ಹೆಸರಿನ ಪ್ರಶಸ್ತಿ ಶ್ರೇಷ್ಠವಾದುದು. ಅವರ ಹೆಸರಿನಲ್ಲಿ ಪ್ರಶಸ್ತಿ ಸ್ವೀಕರಿಸಿದ ಎಲ್ಲಾ ಶಿಕ್ಷಕರು ಅಭಿನಂದನಾರ್ಹರು. ಶಿಕ್ಷಕರು ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಿದಾಗ ವಿದ್ಯಾರ್ಥಿಗಳು ಸಾಧನೆ ಮಾಡಲು ಸಾಧ್ಯ ಎಂದು ಉಡುಪಿ ಸರಕಾರಿ ಶಿಕ್ಷಣ ಮತ್ತು ಶಿಕ್ಷಕರ ತರಬೇತಿ ಸಂಸ್ಥೆಯ ಪ್ರಾಂಶುಪಾಲ ಡಾ. ಅಶೋಕ್ ಕಾಮತ್ ಹೇಳಿದರು. ಅವರು ಇತ್ತೀಚಿಗೆ ಕೋಟ ಕಾರಂತ ಥೀಂ ಪಾರ್ಕ್‌ನಲ್ಲಿ ಕಾರಂತ ಪ್ರತಿಷ್ಠಾನ, ಕೋಟತಟ್ಟು ಗ್ರಾಮ ಪಂಚಾಯಿತಿ, ಉಡುಪಿ ಹಾಜಿ ಅಬ್ದುಲ್ಲ ಸಾಹೇಬ್ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ಇನ್ನಿತರ ಸಂಘ ಸಂಸ್ಥೆಯ ಆಶ್ರಯದಲ್ಲಿ ನಡೆದ ಕೋಟ ಶಿವರಾಮ ಕಾರಂತ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು. ಸಮಾರಂಭವನ್ನು ಕೋಟ ಕಾರಂತ ಥೀಂ ಪಾರ್ಕ್‌ನಲ್ಲಿ ಕಾರಂತ ಪ್ರತಿಷ್ಠಾನದ ಕಾರ್ಯಧ್ಯಕ್ಷ ಆನಂದ ಸಿ. ಕುಂದರ್ ಉದ್ಘಾಟಿಸಿ ಮಾತನಾಡಿ, ಡಾ. ಶಿವರಾಮ ಕಾರಂತರು ಕೋಟದ ಹೆಮ್ಮೆಯ ಸುಪುತ್ರರು. ಅವರ ಹೆಸರಿನಲ್ಲಿ ಶಿಕ್ಷಕ ಪ್ರಶಸ್ತಿಯನ್ನು ನೀಡುತ್ತಿರುವುದು ಕಾರಂತ ಪ್ರತಿಷ್ಠಾನಕ್ಕೆ ಹೆಮ್ಮೆ ಎಂದರು. ಕೋಟತಟ್ಟು ಗ್ರಾಮ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಒಬ್ಬರು ಮಾಡುವ ಉತ್ತಮ ಕೆಲಸಗಳನ್ನು ಗುರುತಿಸಿ ಗೌರವಿಸಿದಾಗ ಅದು ಹೆಚ್ಚಿನ ಆತ್ಮ ಸಂತೋಷವನ್ನು ಇಬ್ಬರಿಗೂ ತಂದು ಕೊಡುತ್ತದೆ. ಇಂತಹ ಮೌಲ್ಯಗಳನ್ನು ನಾವು  ನಿರಂತರವಾಗಿ ಕಾಪಾಡಿಕೊಳ್ಳಬೇಕು ಎಂದು ಲೇಖಕ ನರೇಂದ್ರ ಎಸ್. ಗಂಗೊಳ್ಳಿ ಅಭಿಪ್ರಾಯಪಟ್ಟರು. ಅವರು ತ್ರಾಸಿಯ ಮಿಲೆನಿಯಂ ಹಾಲ್‌ನಲ್ಲಿ ನಡೆದ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದಲ್ಲಿ ಇಲ್ಲಿನ ಯೋಜನಾಧಿಕಾರಿಯದ ಸುಗುಣ ಆರ್.ಕೆ ಅವರಿಗೆ ಎನ್ಎಸ್ಎಸ್ ಶಿಬಿರದ ಪ್ರಾಕ್ತನ ವಿದ್ಯಾರ್ಥಿಗಳು ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ರಾಷ್ಟ್ರೀಯ ಸೇವಾ ಯೋಜನಾಧಿಕಾರಿಯಾಗಿ ಹಲವು ವರ್ಷಗಳ ಕಾಲ ವಾರ್ಷಿಕ ವಿಶೇಷ ಶಿಬಿರಗಳನ್ನು ಯಶಸ್ವಿಯಾಗಿ ನಡೆಸಿಕೊಟ್ಟ ಅರ್ಥಶಾಸ್ತ್ರ ಉಪನ್ಯಾಸಕಿಯಾದ ಸುಗುಣ ಆರ್.ಕೆ ಅವರನ್ನು ವಿಶೇಷವಾಗಿ ಅಭಿನಂದಿಸಿ ಸನ್ಮಾನಿಸಲಾಯಿತು.    ವಿಕಾಸ್, ದೇವಿ ಪ್ರಸಾದ್, ಸೃಜನ್, ಪ್ರೀತಂ, ಜಯಶ್ರೀ, ಪ್ರಜ್ಞಾ, ಸುಕ್ಷಿತ, ವಿಜೇತ, ಶಿವಾನಿ, ವೆಲಿಟಾ, ದೀಪ್ತಿ, ಸನ್ನಿಧಿ ಮತ್ತು ಶ್ರೇಯ ಉಪಸ್ಥಿತರಿದ್ದರು. ವಾಣಿಜ್ಯ ಶಾಸ್ತ್ರ ಉಪನ್ಯಾಸಕಿ ಅಕ್ಷಯ ಖಾರ್ವಿ ಶುಭ ಹಾರೈಸಿದರು. ಭಾರತಿ ನಿರೂಪಿಸಿ, ಸುಜನ್ ಖಾರ್ವಿ ಸ್ವಾಗತಿಸಿ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕಾರ್ಕಳದ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕರ ಭಾರ ಎತ್ತುವ ಸ್ಪರ್ಧೆಯಲ್ಲಿ ಕೋಟ ವಿವೇಕ ಪದವಿಪೂರ್ವ ಕಾಲೇಜಿನ 10ನೇ ತರಗತಿಯ ವಿದ್ಯಾರ್ಥಿಗಳಾದ ಮನ್ವಿತ್ 79 KG ವಿಭಾಗದಲ್ಲಿ ಹಾಗೂ  ರೋಶನ್ 56 KG ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು  ಹುಬ್ಬಳ್ಳಿಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಆರ್ಟ್ಸ್ ಅಂಡ್ ಸೈನ್ಸ್ ಕಾಲೇಜಿನಲ್ಲಿ ವರ್ಡ್‌ಪ್ರೆಸ್ ಉಡುಪಿ ಸಮುದಾಯದ ಸಹಯೋಗದಲ್ಲಿ ಎರಡು ದಿನಗಳ ʼವರ್ಡ್‌ಪ್ರೆಸ್ ಕ್ಯಾಂಪಸ್ ಕನೆಕ್ಟ್ʼ ಶಿಬಿರವು ಯಶಸ್ವಿಯಾಗಿ ಜರುಗಿತು. ಕಂಪ್ಯೂಟರ್ ಸೈನ್ಸ್ ವಿಭಾಗದ ಒಟ್ಟು 120 ವಿದ್ಯಾರ್ಥಿಗಳು ಈ ಶಿಬಿರದಲ್ಲಿ ಭಾಗವಹಿಸಿದ್ದು, ವರ್ಡ್‌ಪ್ರೆಸ್ ಬಳಸಿ ವೆಬ್‌ಸೈಟ್ ನಿರ್ಮಾಣದ ಪ್ರಾಯೋಗಿಕ ತರಬೇತಿಯನ್ನು ನೀಡಲಾಯಿತು. ಕಾರ್ಯಕ್ರಮವನ್ನು ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಅವರು ವಿದ್ಯಾರ್ಥಿಗಳು ಮುಕ್ತ ತಂತ್ರಜ್ಞಾನಗಳ ಸಹಾಯದಿಂದ ಹೊಸ ಸೃಜನಾತ್ಮಕ ಪ್ರಯತ್ನಗಳಿಗೆ ಕೈಹಾಕಬೇಕು ಎಂದು ಪ್ರೇರೇಪಿಸಿದರು. ಕಾರ್ಯಕ್ರಮದ ಯಶಸ್ಸಿಗೆ ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥ ಗಣೇಶ್ ಕೆ. ಅವರ ಮಾರ್ಗದರ್ಶನದಲ್ಲಿ ವಿಜಯಲಕ್ಷ್ಮಿ ಎನ್. ಶೆಟ್ಟಿ, ರಾಮಚಂದ್ರ ಆಚಾರಿ, ಹಾಗೂ ಚೇತನಾ (ಕಾರ್ಯಕ್ರಮ ಸಂಯೋಜಕಿ) ಅವರು ಶ್ರಮಿಸಿದರು. ವರ್ಡ್‌ಪ್ರೆಸ್ ಉಡುಪಿ ತಂಡದಿಂದ ಶಶಿಕಾಂತ್ ಶೆಟ್ಟಿ (ಸ್ಥಾಪಕ, SabWeb), ಕೆ. ಕೀರ್ತಿ ಪ್ರಭು (ಸೀನಿಯರ್ ಟೆಸ್ಟರ್, QualityKiosk, ಮುಂಬೈ), ಹಾಗೂ ವಿ. ಗೌತಮ್ ನಾವಡ (ಸ್ಥಾಪಕ ಮತ್ತು ನಿರ್ದೇಶಕ, ForthFocus) ಶಿಬಿರವನ್ನು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕಲೆ, ಸಂಗೀತ, ಭರತನಾಟ್ಯ, ಯಕ್ಷಗಾನದಂತಹ ಕ್ಷೇತ್ರ ಕಲೆಗಳು ಸಂಸ್ಕಾರ ನೀಡುವುದರೊಂದಿಗೆ ನಮ್ಮ ಸಂಸ್ಕ್ರತಿಯನ್ನು ತಿಳಿಸಿಕೊಡುತ್ತದೆ ಎಂದು ಎಡನೀರು ಮಠದ ಮಠಾಧೀಶ ಸಚ್ಚಿದಾನಂದ ಭಾರತೀ ಸ್ವಾಮೀಜಿ ಹೇಳಿದರು. ಅವರು ಗುಂಡ್ಮಿಯ ಸದಾನಂದ ರಂಗ ಮಂಟಪದಲ್ಲಿ ಹಂಗಾರಕಟ್ಟೆ ಐರೋಡಿಯ ಯಕ್ಷಗಾನ ಕಲಾಕೇಂದ್ರದ ವತಿಯಿಂದ ನಡೆಯುತ್ತಿರುವ ನಾಲ್ಕನೇ ವರ್ಷದ ಯಕ್ಷಗಾನ ಸಪ್ತೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದರು. ಪ್ರೇಕ್ಷಕರನ್ನು ಸೆಳೆಯುವ ಪ್ರಯತ್ನ ಮತ್ತು ವಾಣಿಜ್ಯಕರಣದಿಂದ ಯಕ್ಷಗಾನ ಕಲೆಯ ಮೂಲ ಸ್ವರೂಪ ಮರೆಯಾಗುತ್ತಿದೆ. ಯಕ್ಷಗಾನ ಕಲಾಕೇಂದ್ರಗಳ ಮೂಲಕ ಯಕ್ಷಗಾನ ಕಲೆಯ ಮೂಲ ಸ್ವರೂಪ  ಉಳಿದುಕೊಂಡಿರುವುದು ಶ್ಲಾಘನೀಯ ಎಂದರು. ಅನುಸರಣೆ, ಅನುಕರಣೆ ಮಾಡುವ ಎರಡು ಬಗೆಯ ಕಲಾವಿದರನ್ನು ನಾವು ಕಾಣುತ್ತಿದ್ದೇವೆ. ಇದರಲ್ಲಿ ಗುರುವಿನ ಮೂಲಕ ಅನುಕರಣೆ ಮಾಡಿ ಕಲಿತ ಕಲಾವಿದರು ಶಾಶ್ವತರಾಗಿರುತ್ತಾರೆ ಎಂದ ಅವರು ಕರಾವಳಿಯ ಜನತೆ ಯಕ್ಷಗಾನದ ಮೂಲಕ ಸಂಸ್ಕಾರವಂತರಾಗಿದ್ದಾರೆ. ಇಂತಹ ಸಂಸ್ಕಾರ ನೀಡುವ ಕಲೆಯನ್ನು ಉಳಿಸಿ ಪ್ರೋತ್ಸಾಹಿಸಬೇಕು ಅಲ್ಲದೇ ಎಲ್ಲ ಕಡೆ ಇಂತಹ ಕಲಾಕೇಂದ್ರಗಳು ಹುಟ್ಟಿಕೊಳ್ಳಬೇಕು ಎಂದು ಹೇಳಿದರು. ಕಲಾಕೇಂದ್ರದ ಅಧ್ಯಕ್ಷ ಆನಂದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬ್ರಹ್ಮಾವರ: ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ (ರುಡ್ ಸೆಟ್) ಸಂಸ್ಥೆ ಬ್ರಹ್ಮಾವರ ಇವರ ಆಶ್ರಯದಲ್ಲಿ ಉದ್ಯಮ ಶೀಲಾತಬಿವೃದ್ಧಿ ತರಬೇತಿಯ ಉದ್ಘಾಟನಾ ಸಮಾರಂಭವು ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಬ್ರಹ್ಮಾವರ ಕೌಶಲ್ಯ ಬ್ಯೂಟಿ ಪಾರ್ಲರ್ ಮಾಲಕರು ಹಾಗೂ ಬ್ಯೂಟಿ ಪಾರ್ಲರ್ ತರಬೇತಿಯ ಅತಿಥಿ ಉಪನ್ಯಾಸಕಿ ಶಕೀಲಾ ಹೆಗ್ಡೆ ಮಾತನಾಡಿ, ಉದ್ಯಮದಲ್ಲಿ ಯಾವುದೇ ಕ್ಷೇತ್ರವಾದರೂ ಸರಿಯೇ ಮುಖ್ಯವಾಗಿ ಮಾಡುವ ಕೆಲಸದ ಮೇಲೆ ಪ್ರೀತಿಯಿರಬೇಕು. ಮೊಟ್ಟ ಮೊದಲಿಗೆ ನಮ್ಮನ್ನು ನಾವು ಪ್ರೀತಿಸಬೇಕು, ಆಗ ನಮ್ಮ ಕೆಲಸದ ಮೇಲೆ ನಮಗೆ ಆಸಕ್ತಿ, ಖುಷಿರುತ್ತದೆ. ಏನೇ ತೊಂದರೆಗಳು ಬಂದರೂ ಅವುಗಳನ್ನು ನಿಶ್ಚಿಂತೆಯಿಂದ ಹೋಗಲಾಡಿಸಿ, ಗುರಿ ಸಾಧಿಸುವಲ್ಲಿ ನಾವು ಸಫಲತೆಯನ್ನು ಕಂಡುಕೊಳ್ಳಲು  ಸಾಧ್ಯವಾಗುತ್ತದೆ. ಮಹಿಳೆಯರನ್ನು ಅತ್ಯಂತವಾಗಿ ಆಕರ್ಷಿಸುವ ಕ್ಷೇತ್ರವಾಗಿರುವುದು ವಸ್ತ್ರ ವಿನ್ಯಾಸ. ಟೈಲರಿಂಗ್, ಬ್ಯೂಟಿ ಪಾರ್ಲರ್ ಮುಂತಾದ ಅನೇಕ ಕ್ಷೇತ್ರಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಆರ್ಥಿಕವಾಗಿ ಮುಂದೆ ಬರಲು ಸಾಕಷ್ಟು ಅವಕಾಶಗಳು ಇಂದಿನ ಸಾಮಾಜಿಕ ವ್ಯವಸ್ಥೆಯಲ್ಲಿದೆ. ಸರಕಾರದಿಂದ ಹಲವು ಉತ್ತಮ ಸೌಲಭ್ಯಗಳು ಮಹಿಳೆಯರ ಅಭಿವೃದ್ಧಿಗಾಗಿ ಇವೆ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಪತಿ ಮತ್ತು ಪುತ್ರನ ಅಗಲಿಕೆಯ ನೋವಿನಿಂದ ಮನನೊಂದ ಮಹಿಳೆಯೊಬ್ಬರು ವಿಷಪ್ರಾಶನ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳವಾರ ತೆಕ್ಕಟ್ಟೆಯ ಗ್ರಾಮ ಪಂಚಾಯತ್ ಸಮೀಪದಲ್ಲಿ ಸಂಭವಿಸಿದೆ. ತಾರಾ ದೇವಾಡಿಗ (55) ಮೃತಪಟ್ಟವರು. ತೆಕ್ಕಟ್ಟೆಯ ಮಲ್ಯಾಡಿ ರಸ್ತೆಯಲ್ಲಿನ ದೂರವಾಣಿ ಕೇಂದ್ರ ಕಚೇರಿಯ ಸಮೀಪದಲ್ಲಿನ ಬಾಡಿಗೆ ಮನೆಯಲ್ಲಿ ಪತಿ ಹಾಗೂ ಪುತ್ರನೊಂದಿಗೆ ತಾರಾ ವಾಸವಾಗಿದ್ದರು. ಮೇ.15ರಂದು ಮನೆಗೆ ಆಧಾರವಾಗಿದ್ದ ಪತಿ ಮಾಧವ ದೇವಾಡಿಗ (60) ಅವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ರಕ್ಷಣೆಗೆ ಧಾವಿಸಿದ ಮಗ ಪ್ರಸಾದ್ ದೇವಾಡಿಗ (23) ಕೂಡ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಈ ಸಂದರ್ಭದಲ್ಲಿ ಪತಿ ಹಾಗೂ ಮಗನನ್ನು ರಕ್ಷಿಸಲು ಬಾವಿಗೆ ಹಾರಿದ ತಾರಾ ದೇವಾಡಿಗ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದರು. ಆದರೆ ಪತಿ ಹಾಗೂ ಪುತ್ರನ ಅಗಲಿಕೆಯಿಂದ ತೀವ್ರವಾಗಿ ಮನನೊಂದಿದ್ದ ಅವರು ಸುಮಾರು ಐದು ತಿಂಗಳ ಬಳಿಕ ತೆಕ್ಕೆಟ್ಟೆ ಗ್ರಾಮ ಪಂಚಾಯತ್‌ ಕಚೇರಿಯ ಸಮೀಪದಲ್ಲಿ ವಿಷ ಪ್ರಾಶನ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್‌…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮಂಜುನಾಥ ಎಜುಕೇಷನ್ ಟ್ರಸ್ಟ್ ರಿ., ಹೃದಯವಾಹಿನಿ ಕರ್ನಾಟಕ, ಮಂಗಳೂರು ಹಾಗೂ ಎಸ್.ಕೆ. ಮುನ್ಸಿಪಾಲ್ ಎಂಪ್ಲಾಯಿಸ್ ಯೂನಿಯನ್ ರಿ. ಮಂಗಳೂರು ಸಹಯೋಗದಲ್ಲಿ ಮಂಗಳೂರು ಕುದ್ಮುಲ್ ರಂಗರಾವ್ ಪುರಭವನದಲ್ಲಿ 2025 ಅಕ್ಟೋಬರ್ 09 ಗುರುವಾರದಂದು ನಡೆಯುವ ದ್ವಿತೀಯ ಅನಿವಾಸಿ ಕನ್ನಡಿಗರ ಸಮ್ಮೇಳನ ಹಾಗೂ ಹೊರನಾಡ ಕನ್ನಡಿಗರ ಸಮ್ಮೇಳನದಲ್ಲಿ ಕಾಸರಗೋಡಿನ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ರಿ., ಕನ್ನಡ ಗ್ರಾಮ ಕಾಸರಗೋಡು, ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕ, ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ ಕಾಸರಗೋಡು ಕನ್ನಡ ಗ್ರಾಮದ ಸಂಸ್ಥಾಪಕ ಗಡಿನಾಡು ಕಾಸರಗೋಡಿನ ಸಾಹಿತ್ಯ, ಸಾಂಸ್ಕೃತಿಕ ಕನ್ನಡ ಸಂಘಟಕ, ಕನ್ನಡ ಚಿಂತಕ, ಶಿವರಾಮ ಕಾಸರಗೋಡು ಅವರಿಗೆ ಪ್ರತಿಷ್ಠಿತ ಅನಿವಾಸಿ ಕನ್ನಡಿಗರ ಸಮ್ಮೇಳನ ಹಾಗೂ ಹೊರನಾಡ ಕನ್ನಡಿಗರ ಸಮ್ಮೇಳನದ ಗೌರವ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಮದರ್ ತೆರೆಸಾ ಮೆಮೋರಿಯಲ್ ಸ್ಕೂಲ್‌ನಲ್ಲಿ  ಒಂದು ಮತ್ತು ಎರಡನೇ ತರಗತಿ ವಿದ್ಯಾರ್ಥಿಗಳ ಪುಟ್ಟ ಹುಲಿ ಕುಣಿತ ಹಾಗೂ ಮುದ್ದು ಶಾರದೆ ಸ್ಪರ್ಧೆಗಳು ಮಕ್ಕಳ ಕಲೆ, ಶಿಸ್ತು ಮತ್ತು ಭಾವನಾತ್ಮಕತೆಯ ಅದ್ಭುತ ಪ್ರದರ್ಶನವಾಗಿದ್ದವು. ಕಾರ್ಯಕ್ರಮವನ್ನು ಸಂಸ್ಥೆಯ ಆಡಳಿತ ನಿರ್ದೇಶಕರಾದ ಶಮಿತಾ ರಾವ್ ಹಾಗೂ ರೆನಿಟಾ ಲೋಬೋ ಅವರು ತೀರ್ಪುಗಾರರ ಜೊತೆಯಲ್ಲಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ತೀರ್ಪುಗಾರರಾಗಿ ನೃತ್ಯ ಗುರುಗಳಾದ ಜಗದೀಶ್ ಬನ್ನಂಜೆ, ಕಲಾವಿದರು ಮತ್ತು ಚಿತ್ರಕಲಾ ಶಿಕ್ಷಕರಾದ ರಾಘವೇಂದ್ರ ಚಾತ್ರಮಕ್ಕಿ ಹಾಗೂ ಗಣಿತ ಉಪನ್ಯಾಸಕಿ ಮಾತ್ರವಲ್ಲದೆ ಭರತನಾಟ್ಯ ಹಾಗೂ ಯಕ್ಷಗಾನ ಕಲಾವಿದೆ ಸಿಂಧೂರ ರಾವ್ ಉಪಸ್ಥಿತರಿದ್ದರು. ಪ್ರಧಾನ ತೀರ್ಪುಗಾರರಾದ ರಾಘವೇಂದ್ರ ಚಾತ್ರಮಕ್ಕಿ ಅವರು ಮಾತನಾಡಿ, “ಸಂಸ್ಕೃತಿಯ ಬುನಾದಿ ಬೆಳೆಸುವ ಕೆಲಸವನ್ನು ಮದರ್ ತೆರೆಸಾ ಶಿಕ್ಷಣ ಸಂಸ್ಥೆ ಅತ್ಯಂತ ಸುಂದರವಾಗಿ ನಿರ್ವಹಿಸುತ್ತಿದೆ. ಇಂತಹ ವೇದಿಕೆಗಳು ಮಕ್ಕಳಲ್ಲಿ ಸಂಸ್ಕಾರ, ಶಿಸ್ತು ಮತ್ತು ಭಾವನಾತ್ಮಕ ಅರಿವನ್ನು ಬೆಳೆಸುತ್ತವೆ,” ಎಂದು ಪ್ರಶಂಸಿಸಿ ಮಕ್ಕಳಿಗೆ ಶುಭ ಹಾರೈಸಿದರು. ಮುದ್ದು ಶಾರದೆಯರಾಗಿ ಸಜ್ಜಾದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ತನ್ನ ವೈಯಕ್ತಿಕ ಜೀವನಕ್ಕಾಗಿ ಏನನ್ನು ಬಯಸದೆ ಸಮಾಜಕ್ಕಾಗಿಯೇ ಜೀವನವನ್ನು ಸಮರ್ಪಿಸಿಕೊಂಡ ಜೀವನದ ಯಶೋಗಾಧೆ ಅತ್ಯಮೂಲ್ಯವಾದದ್ದು ಎಂದು ಮಾಜಿ ಸಚಿವ ಕೆ. ಜಯಪ್ರಕಾಶ್ ಹೆಗ್ಡೆ ಹೇಳಿದರು. ಅವರು ಸೋಮವಾರ ಕೋಟದ ಸಿಎ ಬ್ಯಾಂಕ್ ಸಭಾಂಗಣದಲ್ಲಿ ಇತ್ತೀಚಿಗೆ ರಸ್ತೆ ಅಪಘಾತದಲ್ಲಿ ಮೃತಪಟ್ಟ ಸಾಂಸ್ಕೃತಿಕ ಚಿಂತಕ, ಶಿಕ್ಷಕ ಸಂತೋಷ್ ಕುಮಾರ್ ಕೋಟ ಸಹಾಯರ್ಥವಾಗಿ ಅವರ ಕುಟುಂಬಕ್ಕೆ ನೆರವಾಗುವ ಯಕ್ಷಗಾನ ಕಾರ್ಯಕ್ರಮದಲ್ಲಿ ನಿಧಿ ಹಸ್ತಾಂತರಿಸಿ ಮಾತನಾಡಿದರು. ಜೀವನದಲ್ಲಿ ಪ್ರತಿಕ್ಷಣ ಪ್ರತಿಜೀವ ಕೂಡಾ ಮಹತ್ವವಾದದ್ದು. ಈ ಹಿನ್ನಲ್ಲೆಯಲ್ಲಿ ಪ್ರತಿಯೊಬ್ಬರು ಸಂಚಾರ ವ್ಯವಸ್ಥೆಯಲ್ಲಿ ರಕ್ಷಣೆ ಬೇಕಾಗುವ ಪರಿಕರವನ್ನು ಕಟ್ಟುನಿಟ್ಟಾಗಿ ಧರಿಸಿಕೊಳ್ಳಿ, ನೀವು ನಿಮ್ಮ ಜೀವದ ಬಗ್ಗೆ ಚಿಂತಿಸದಿದ್ದಾಗ ಮನೆಯವರ ಪಾಡು ಶೋಚನೀಯ ವ್ಯವಸ್ಥೆಗೆ ತಲುಪುತ್ತದೆ. ಈ ದಿಸೆಯಲ್ಲಿ ಅವರ ಕುಟುಂಬಕ್ಕೆ ನೆರವಾಗುವ ಇಂತಹ ಕಾರ್ಯಗಳ ಬಗ್ಗೆ ಮೆಚ್ಚುಗೆ ಸೂಚಿಸಿದರು. ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ. ಕುಂದರ್ ಮಾತನಾಡಿ, ಸಂತೋಷ್ ಕುಮಾರ್ ವ್ಯಕ್ತಿತ್ವ ಹಾಗೂ ಅವರಿಗೆ ಸಮಾಜದ ಬಗ್ಗೆ ಇದ್ದ ಕಾಳಜಿ, ಶಿಕ್ಷಣದ ಬಗ್ಗೆ…

Read More