ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸಮೃದ್ಧ ಬೈಂದೂರು ಪರಿಕಲ್ಪನೆಯ ಕ್ಲೀನ್ ಕಿನಾರ ಯೋಜನೆಯಲ್ಲಿ ಭೂಮಿ ಟ್ರಸ್ಟ್ ಸಹಕಾರದೊಂದಿಗೆ 170 ವಾರ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಂಡ ಕ್ಲೀನ್ ಕಿನಾರ ತಂಡಕ್ಕೆ ಸ್ವಚ್ಛತಾ ಪರಿಕರಗಳ ಹಸ್ತಾಂತರ ಕಾರ್ಯಕ್ರಮವನ್ನು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ನೆರವೇರಿಸಿದರು. ಗಿಡ ನೆಡುವ ಹಾಗೂ ಸ್ವಚ್ಛತಾ ಕಾರ್ಯಗಳಿಗೆ ಅಗತ್ಯವಿರುವ ಉಪಕರಣಗಳನ್ನು ಹಸ್ತಾಂತರಿಸಿ ಮಾತನಾಡಿದ ಶಾಸಕರು ಸತತ 170 ವಾರಗಳ ಕಾಲ ಸಮುದ್ರ ಕಿನಾರ ಮತ್ತು ಊರಿನ ಸ್ವಚ್ಛತೆ ಮಾಡಿಕೊಂಡು ಬರುತ್ತಿರುವುದು ನಿಜವಾಗಲೂ ಒಂದು ತಪ್ಪಸ್ಸು, ದೃಢ ಇಚ್ಚಾ ಶಕ್ತಿ ಇದ್ದಲ್ಲಿ ಮಾತ್ರ ಇದು ಸಾಧ್ಯ ಎಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮದ ನಂತರ ಕ್ಲೀನ್ ಕಿನಾರ ತಂಡ ಹಿಂದೂ ರುದ್ರ ಭೂಮಿ ಆವರಣದ ಸುತ್ತ ಗಿಡ ನೆಟ್ಟು ಸ್ವಚ್ಛತಾ ಕಾರ್ಯ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಸ್ವಚ್ಛತಾ ಪರಿಕರಗಳನ್ನು ಕೊಡಿಸುವಲ್ಲಿ ಸಹಕರಿಸಿದ ಚರಣ್ ಬೈಂದೂರು, ಭೂಮಿ ಟ್ರಸ್ಟ್ ಪದಾಧಿಕಾರಿಗಳು, ಮುಕ್ತಿಧಾಮ ಟ್ರಸ್ಟ್‌ನ ಸರ್ವಸದಸ್ಯರು, NECF ಹಾಗೂ ಕ್ಲೀನ್ ಕಿನಾರಾ ಸದಸ್ಯರು, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಸುರೇಶ್ ಬಟ್ವಾಡಿ,…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪ್ರತಿಭೆ ಎನ್ನುವುದು ಎಲ್ಲ ವಿದ್ಯಾರ್ಥಿಗಳಲ್ಲೂ ಇರುತ್ತದೆ ಆದರೆ ಪ್ರತಿಭೆಗೆ ಸರಿಯಾದ ವೇದಿಕೆ ಸಿಕ್ಕಾಗ ಮಾತ್ರ ವಿದ್ಯಾರ್ಥಿಗಳ ಪ್ರತಿಭಾ ಶಕ್ತಿಗೆ ದೊಡ್ಡ ಶಕ್ತಿ ಸಿಗುತ್ತದೆ. ಈ ಶಕ್ತಿ ಜನತಾ ಪಿಯು ಕಾಲೇಜಿನಲ್ಲಿ ಸಿಗುತ್ತದೆ ಅದನ್ನು ಸರಿಯಾಗಿ ಬಳಸಿಕೊಂಡು ಉತ್ತಮ ವ್ಯಕ್ತಿಗಳಾಗಿ ಎಂದು ವಿವಿವಿ ಮಂಡಳಿ ರಿ. ಹೆಮ್ಮಾಡಿ ಇದರ ಅಧ್ಯಕ್ಷರು ಹಾಗೂ ಮಾಜಿ ಶಾಸಕರಾದ ಗೋಪಾಲ ಪೂಜಾರಿ ಹೇಳಿದರು. ಹೆಮ್ಮಾಡಿ ಜನತಾ ಪಿಯು ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನ ಜನತಾ ದಿಬ್ಬಣ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದ ಅವರು ವಿದ್ಯಾರ್ಥಿಗಳ ಶ್ರಮ, ಉಪನ್ಯಾಸಕರು ಪ್ರಾಂಶುಪಾಲರ ಪ್ರೋತ್ಸಾಹದಿಂದ ಇಂದು ಜನತಾ ಪಿಯು ಕಾಲೇಜ್ ರಾಜ್ಯ ಮಟ್ಟದಲ್ಲಿ ಶೈಕ್ಷಣಿಕವಾಗಿ ಗುರುತಿಸಿಕೊಂಡಿದೆ ಎಂದು ಹೇಳಿದರು. ಚಿತ್ರ ನಟ ಪ್ರಕಾಶ್ ತುಮಿನಾಡು ಮಾತನಾಡಿ, ಪ್ರತಿಭೆಗೆ ಇರುವ ಸೌಂದರ್ಯ ಎಲ್ಲೂ ಇರುವುದಿಲ್ಲ. ಪ್ರತಿಭೆಗೆ ಅಂತ ಶಕ್ತಿ ಇದೆ. ವಿದ್ಯೆಯ ಜೊತೆಗೆ ವಿನಯವನ್ನು ರೂಪಿಸಿಕೊಂಡು ಹೆತ್ತವರನ್ನು ಗೌರವಿಸಿ. ಇಂದು ಕಲೆಯಿಂದ ಹಲವು ಕಡೆ ಜೀವನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜು (IMJISC) ಮೂಡ್ಲಕಟ್ಟೆಯಲ್ಲಿ ಲಲಿತಕಲಾ ಸಂಘದ ವತಿಯಿಂದ “ಆಘೋಷಂ” ಎಂಬ ಹೆಸರಿನಲ್ಲಿ ಓಣಂ ಹಬ್ಬವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರತಿಭಾ ಎಂ. ಪಟೇಲ್ ಅವರು ವಿಭಾಗ ಮುಖ್ಯಸ್ಥರು ಹಾಗೂ ಲಲಿತಕಲಾ ಸಂಯೋಜಕರೊಂದಿಗೆ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವಿದ್ಯಾರ್ಥಿಗಳು ಓಣಂ ಹಬ್ಬದ ಕಥೆ ಮತ್ತು ಅದರ ಸಾಂಸ್ಕೃತಿಕ ಮಹತ್ವವನ್ನು ಸಾರುವ ಕಿರು ನಾಟಕವನ್ನು ಪ್ರಸ್ತುತಪಡಿಸಿದರು. ಇದರೊಂದಿಗೆ ಹಬ್ಬದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯ ಬಗ್ಗೆ ಅರಿವು ಮೂಡಿಸಿದರು.ಸಂಭ್ರಮದ ಅಂಗವಾಗಿ ವಿದ್ಯಾರ್ಥಿನಿಯರು ದೀಪದ ಸುತ್ತ ನೃತ್ಯ ಮಾಡುವ ಮೂಲಕ ಸಾಂಪ್ರದಾಯಿಕ ತಿರುವಾತಿರ ನೃತ್ಯವನ್ನು ಪ್ರದರ್ಶಿಸಿ ಹಬ್ಬಕ್ಕೆ ಮೆರಗು ನೀಡಿದರು. ಐಕ್ಯಮ್ ತಂಡಗಳ ನಡುವೆ ಆಯೋಜಿಸಲಾದ ಹೂವಿನ ರಂಗೋಲಿ (ಪೂಕಳಂ) ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದರು. ಜೊತೆಗೆ ವಿವಿಧ ಸಾಂಪ್ರದಾಯಿಕ ಕಲಾ ಪ್ರಕಾರಗಳು ಮತ್ತು ಸಾಂಸ್ಕೃತಿಕ ಆಚರಣೆಗಳನ್ನು ಬಿಂಬಿಸುವ ಸಾಂಸ್ಕೃತಿಕ ಪ್ರದರ್ಶನವನ್ನೂ ಆಯೋಜಿಸಲಾಗಿತ್ತು.ಈ ಆಚರಣೆಯು ಏಕತೆ, ತಂಡದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಒರ್ವ ವ್ಯಕ್ತಿ ಈ ಸಮಾಜವನ್ನು ಅಗಲಿದ ನಂತರ ಆತನ ಹೆಸರು ಕೆಲವೇ ಸಂದರ್ಭದಲ್ಲಿ ಅಳಿದು ಹೋಗುತ್ತದೆ ಆದರೆ ಸಮಾಜಸೇವೆಯೇ ಉಸಿರಾಗಿರಿಸಿಕೊಂಡ ಸಂತೋಷ್ ಮೇಷ್ಟ್ರು ಹೆಸರು ವರ್ಷವಿಡೀ ಪ್ರಚಲಿತಗೊಂಡಿರುವುದು ಆತ ಮಾಡಿದ ನೈಜ ಕಾರ್ಯವೇ ಸಾಕ್ಷಿ ಎಂದು ಕೋಟದ ಮಣೂರು ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ ಕುಂದರ್ ಅಭಿಪ್ರಾಯಪಟ್ಟರು. ಅವರು ಭಾನುವಾರ ಕೋಟ ಪಡುಕರೆ ಕೆ.ಸಿ ಕುಂದರ್ ಸಭಾಂಗಣದಲ್ಲಿ ಜೈಹಿಂದ್ ಕ್ರಿಕೆಟಸ್೯ ಪಡುಕರೆ ನೇತೃತ್ವದಲ್ಲಿ ಇಂಡಿಕಾ ಕಲಾ ಬಳಗ ಪಡುಕರೆ,ಪಂಚವರ್ಣ ಸಂಘಟನೆ ಕೋಟ,ಗೀತಾನಂದ ಫೌಂಡೇಶನ್ ಮಣೂರು, ಕೆಎಂಸಿ ಮಣಿಪಾಲ ಇವರ ಸಹಯೋಗದೊಂದಿಗೆ ಸಂತೋಷ್ ಮೇಷ್ಟ್ರು ಸಂಸ್ಮರಣೆಯ ಅಂಗವಾಗಿ ಬೃಹತ್ ರಕ್ತದಾನ ಹಾಗೂ ಆರೋಗ್ಯ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಜೀವನ ಪರ್ಯಂತ ಈ ಸಮಾಜಕ್ಕಾಗಿ ತನ್ನನ್ನು ತಾನು ಸಮರ್ಪಿಸಿಕೊಂಡ ಸಂತೋಷ್ ಶೈಕ್ಷಣಿಕ,ಸಾಹಿತ್ಯಿಕ, ಸಾಮಾಜಿಕ ಕ್ಷೇತ್ರಕ್ಕೆ ಬಹುದೊಡ್ಡ ಕೊಡುಗೆಯನ್ನು ನೀಡಿದ್ದಾರೆ ಇಂತಹ ವ್ಯಕ್ತಿಗಳ ಹೆಸರಿನಲ್ಲಿ ಈ ಮಹತ್ಕಾರ್ಯ ನಿಜಕ್ಕೂ ಪ್ರಶಂಸನೀಯ ಎಂದರು. ಕಾರ್ಯಕ್ರಮದಲ್ಲಿ ಕುಂದಾಪುರ ಯಡಾಡಿ ಮತ್ಯಾಡಿಯ ಸುಜ್ಞಾನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ:ಭಾಷೆಯೊಂದು ಕೇವಲ ಸಂವಹನದ ಮಾಧ್ಯಮವಲ್ಲ. ಅದು ಸಮುದಾಯವೊಂದರ ಇತಿಹಾಸ, ಅನುಭವ, ಭಾವನೆ, ಸಂಸ್ಕೃತಿ ಹಾಗೂ ಅಸ್ಮಿತೆಯನ್ನು ಪ್ರತಿಬಿಂಬಿಸುತ್ತದೆ. ಯಾವುದೇ ಭಾಷೆ ಮತ್ತೊಂದು ಭಾಷೆಗಿಂತ ಶ್ರೇಷ್ಠವಲ್ಲ. ಎಲ್ಲಾ ಭಾಷೆಗಳಿಗೂ ತನ್ನದೇ ಆದ ಮಹತ್ವ ಹಾಗೂ ವೈಶಿಷ್ಟ್ಯವಿದೆ ಎಂದು ಆಳ್ವಾಸ್ ಪಿಸಿಯೋಥೆರಪಿ ಕಾಲೇಜಿನ ನರವಿಜ್ಞಾನ ವಿಭಾಗದ ಮುಖ್ಯಸ್ಥೆ ಡಾ. ಲೋಯಂಗನ್ಬಿ ಚಾನು ನುಡಿದರು. ಆಳ್ವಾಸ್ ಕಾಲೇಜಿನ ಮಣಿಪುರಿ ವಿಭಾಗದವತಿಯಿಂದ ಕಾಲೇಜಿನ ಸಭಾಂಗಣದಲ್ಲಿ ಶನಿವಾರ ಮಣಿಪುರಿ ಭಾಷಾ ದಿನವನ್ನು ಆಚರಿಸಲಾಯಿತು.ವಿದ್ಯಾರ್ಥಿಗಳು ವಿವಿಧ ಭಾಷೆಗಳನ್ನು ಕಲಿಯುವ ಮೂಲಕ ವಿಭಿನ್ನ ಸಮುದಾಯಗಳ ಸಂಸ್ಕೃತಿ ಮತ್ತು ಜೀವನಾನುಭವಗಳನ್ನು ಅರ್ಥಮಾಡಿಕೊಳ್ಳಬೇಕು. ಬಹುಭಾಷಾ ಜ್ಞಾನವು ಪರಸ್ಪರ ತಿಳುವಳಿಕೆಯನ್ನು ವಿಸ್ತರಿಸುವುದರೊಂದಿಗೆ ವಿವಿಧ ಸಮುದಾಯಗಳ ನಡುವೆ ಉತ್ತಮ ಬಾಂಧವ್ಯ ಬೆಳೆಸಲು ಸಹಕಾರಿಯಾಗುತ್ತದೆ. ವ್ಯಕ್ತಿಯ ಭಾಷೆ, ಸಂಸ್ಕೃತಿ, ಧರ್ಮ ಅಥವಾ ಮೂಲಸ್ಥಳದ ಆಧಾರದ ಮೇಲೆ ಭೇದಭಾವ ಮಾಡದೆ ಎಲ್ಲರನ್ನೂ ಗೌರವಿಸಬೇಕು. ದ್ವೇಷ ಮತ್ತು ಸಂಘರ್ಷಕ್ಕಿಂತ ಸಹಕಾರ ಹಾಗೂ ಸೌಹಾರ್ದತೆಗೆ ಆದ್ಯತೆ ನೀಡಬೇಕು ಎಂದರು. ಕರ‍್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದ ಆಳ್ವಾಸ್ ಕಾಲೇಜಿನ ಪ್ರಾಚರ‍್ಯ ಡಾ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯ ಜನಸಾಮಾನ್ಯರ ಅಹವಾಲುಗಳನ್ನು ಆಲಿಸಿ, ಅವರ ಸಮಸ್ಯೆಗಳಿಗೆ ಸ್ಥಳೀಯ ಮಟ್ಟದಲ್ಲಿಯೇ ಪರಿಹಾರ ಒದಗಿಸುವ ಉದ್ದೇಶದಿಂದ ಸೆ.5 ರಿಂದ ಪ್ರತೀ ಶನಿವಾರ ತಾಲೂಕು ಹಾಗೂ ಹೋಬಳಿ ಮಟ್ಟದಲ್ಲಿ ಪ್ರಜಾಸೇವಾ ಆಂದೋಲನ ಸಭೆ ಆಯೋಜಿಸಲಾಗುತ್ತಿದ್ದು, ಸಭೆಗಳನ್ನು ಯಶಸ್ವಿಗೊಳಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಸೂಚನೆ ನೀಡಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಪ್ರಜಾಸೇವೆ ಆಂದೋಲನ ಸಭೆಗಳನ್ನು ಆಯೋಜಿಸುವ ಕುರಿತು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲು ಆಯೊಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಲು ಪ್ರಜಾಸೇವಾ ಇಲಾಖೆಯ ವತಿಯಿಂದ ಪ್ರಜಾಸೇವಾ ಆಂದೋಲನ ಸಭೆಗಳನ್ನು ಆಯೋಜಿಸಲು ರಾಜ್ಯ ಸರ್ಕಾರವು ನಿರ್ಧರಿಸಿದ್ದು, ಸೆಪ್ಟಂಬರ್ 5 ರಿಂದ 1 ನೇ ಮತ್ತು 3ನೇ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಹಾಗೂ ಸ್ಥಳೀಯ ಶಾಸಕರ ಉಪಸ್ಥಿತಿಯಲ್ಲಿ ತಾಲ್ಲೂಕು ಮಟ್ಟದ ಸಭೆಗಳು ಜರುಗಲಿವೆ. 2 ನೇ ಮತ್ತು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಂದಿನ ವಿದ್ಯಾರ್ಥಿಗಳು ರಾಷ್ಟ್ರದ ಉಜ್ವಲ ಭವಿಷ್ಯದ ಶಿಲ್ಪಿಗಳು ಎಂದು ಭಂಡಾರ್ಕಾರ್ಸ್ ಕಾಲೇಜಿನ ವಿಶ್ವಸ್ಥ ಮಂಡಳಿಯ ಸದಸ್ಯರಾದ ಹೋಟೆಲ್ ಉದ್ಯಮಿ ನೇರಂಬಳ್ಳಿ ರಾಘವೇಂದ್ರ ರಾವ್ ಹೇಳಿದರು. ಅವರು ಇಲ್ಲಿನ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಆರ್ ಎನ್ ಶೆಟ್ಟಿ ಸಭಾಭವನದಲ್ಲಿ ನಡೆದ “ಕುಂದಗನ್ನಡದ ಮಾಳಿ-ಗುಡ್ಗ್ -ಮಿಂಚ್’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಭವಿಷ್ಯದಲ್ಲಿ ಸಾಂಸ್ಕೃತಿಕ ಪರಂಪರೆಯನ್ನು ಉಳಿಸಿ ಬೆಳೆಸಬೇಕಾಗಿದೆ. ಈ ನಿಟ್ಟಿನಲ್ಲಿ ವಿಶಿಷ್ಟವಾದ ಕುಂದಾಪುರ ಕನ್ನಡ ಭಾಷೆಯ ಕುರಿತು ಹಮ್ಮಿಕೊಂಡ ಈ ಕಾರ್ಯಕ್ರಮ ಮುನ್ನುಡಿಯಾಗಲಿ ಎಂದು ಶುಭಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಕಾಲೇಜಿನ ಆಡಳಿತ ಮಂಡಳಿಯ ಕಾರ್ಯದರ್ಶಿ ಯು . ಎಸ್. ಶೆಣೈ ವಹಿಸಿದ್ದರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಯೋಗಗುರು ಹವ್ಯಾಸಿ ರಂಗಭೂಮಿ ಕಲಾವಿದ ಆಟ್ಕೆರೆ ಆನಂದ ಪೈ ಮಾತನಾಡಿ, ಭಾಷೆಯನ್ನು ಸರ್ವರೂ ಸೇರಿ ಉಳಿಸಿ ಬೆಳೆಸಬೇಕು. ಮುಂದಿನ ಪೀಳಿಗೆಗೆ ಹಂಚಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಕ್ಷೇತ್ರದಲ್ಲಿ ಯುವಜನರಿಗೆ, ಅದರಲ್ಲೂ ವಿಜ್ಞಾನ ಪದವೀಧರರಿಗೆ, ಉತ್ತಮ ಉದ್ಯೋಗಾವಕಾಶಗಳಿದ್ದು, ಸ್ಥಳೀಯ ಯುವಕರು ಈ ಕ್ಷೇತ್ರವನ್ನು ವೃತ್ತಿಯಾಗಿ ಆಯ್ಕೆ ಮಾಡಿಕೊಳ್ಳಬೇಕು ಎಂದು ಮಂಗಳೂರು ವಲಯದ ಪ್ರಾದೇಶಿಕ ಅಗ್ನಿಶಾಮಕ ಅಧಿಕಾರಿ ಹಾಗೂ ಮಂಗಳೂರು ವಲಯದ ಮುಖ್ಯ ಅಗ್ನಿಶಾಮಕ ಅಧಿಕಾರಿ (ಪ್ರಭಾರ) ಶಂಕರ್ ಎಂ. ಹೇಳಿದರು. ಅವರು ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ವಿಜ್ಞಾನ ವಿಭಾಗದ ವತಿಯಿಂದ ಶನಿವಾರ ಕುವೆಂಪು ಸಭಾಂಗಣದಲ್ಲಿ ಆಯೋಜಿಸಿದ್ದ ಅಗ್ನಿ ಸುರಕ್ಷತಾ ವ್ಯವಸ್ಥೆ ಹಾಗೂ ಅಗ್ನಿಶಾಮಕ ಇಲಾಖೆಯ ಕಾರ್ಯವೈಖರಿ ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಅಗ್ನಿಶಾಮಕ ಇಲಾಖೆಯ ಇತಿಹಾಸ, ಇಲಾಖೆಯ ಶ್ರೇಣೀಕೃತ ವ್ಯವಸ್ಥೆ, ವಿವಿಧ ಹಂತಗಳಲ್ಲಿನ ಅಧಿಕಾರಿಗಳ ಜವಾಬ್ದಾರಿಗಳು ಹಾಗೂ ಅಗ್ನಿಶಾಮಕ ಸಿಬ್ಬಂದಿಯ ಕರ್ತವ್ಯಗಳ ಕುರಿತು ಮಾಹಿತಿ ನೀಡಿದರು. ಅಗ್ನಿ ಅವಘಡಗಳನ್ನು ನಿಯಂತ್ರಿಸುವುದಷ್ಟೇ ಅಲ್ಲದೆ, ವಿವಿಧ ತುರ್ತು ಪರಿಸ್ಥಿತಿಗಳಲ್ಲಿ ಜನರ ಪ್ರಾಣ ಹಾಗೂ ಆಸ್ತಿಪಾಸ್ತಿಯನ್ನು ರಕ್ಷಿಸುವಲ್ಲಿ ಅಗ್ನಿಶಾಮಕ ಇಲಾಖೆಯ ಪಾತ್ರ ಮಹತ್ವದ್ದಾಗಿದೆ ಎಂದು ತಿಳಿಸಿದರು. ಅಗ್ನಿಶಾಮಕ ಕ್ಷೇತ್ರದಲ್ಲಿ ಉದ್ಯೋಗಾವಕಾಶಗಳು ಸಾಕಷ್ಟಿದ್ದರೂ ಸ್ಥಳೀಯ ಯುವಕರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಕುಂದಾಪುರ ತಾಲೂಕು ಪಶು ವೈದ್ಯಕೀಯ ಶಿಬಿರ ಕಚೇರಿಯಲ್ಲಿ ಪಶು ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದ ಡಾ. ಪೂಜಿತಾ ಅವರಿಗೆ, ಕುಂದಾಪುರ ತಾಲೂಕು ಶಿಬಿರ ಕಚೇರಿ ವ್ಯಾಪ್ತಿಯ ಹಾಲು ಉತ್ಪಾದಕರ ಸಹಕಾರಿ ಸಂಘಗಳ ಕೃತಕ ಗರ್ಭಧಾರಣಾ ಕಾರ್ಯಕರ್ತರು ಹಾಗೂ ಮುಖ್ಯ ಕಾರ್ಯನಿರ್ವಾಹಕರ ವತಿಯಿಂದ ಆತ್ಮೀಯ ಬೀಳ್ಕೊಡುಗೆ ಸಮಾರಂಭವನ್ನು ಹಮ್ಮಿಕೊಳ್ಳಲಾಯಿತು. ಕುಂದಾಪುರ ತಾಲೂಕು ಹಾಲು ಉತ್ಪಾದಕರ ಸಹಕಾರಿ ಸಂಘಗಳ ನೌಕರರ ಕ್ಷೇಮಾಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ರಾಘವೇಂದ್ರ ಕೊಮೆ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೌರವಾಧ್ಯಕ್ಷ ಎಸ್. ದಯಾನಂದ ರಾವ್, ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಸಹಾಯಕ ವ್ಯವಸ್ಥಾಪಕ ಪಶುವೈದ್ಯೆ ಡಾ. ಶ್ರದ್ಧಾ, ಕಾರ್ಯದರ್ಶಿ ಯೋಗೇಶ್ ಬಳ್ಕೂರು ಹಾಗೂ ಕೋಶಾಧಿಕಾರಿ ರವಿರಾಜ್ ಬಸ್ರೂರು ಉಪಸ್ಥಿತರಿದ್ದರು. 2024ರಿಂದ ಕುಂದಾಪುರ ಪಶುವೈದ್ಯಕೀಯ ಶಿಬಿರ ಕಚೇರಿಯಲ್ಲಿ ಸೇವೆ ಸಲ್ಲಿಸಿದ ಡಾ. ಪೂಜಿತಾ ಅವರು ಮೂಲತಃ ಆಂಧ್ರಪ್ರದೇಶದವರಾಗಿದ್ದು, ಕುಂದಾಪುರಕ್ಕೆ ಆಗಮಿಸಿದ ಅಲ್ಪಾವಧಿಯಲ್ಲಿಯೇ ಸ್ಥಳೀಯ ಕುಂದಾಪ್ರ ಭಾಷೆಯನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬಂಧುತ್ವದ ಚಿಗುರೊಡೆಯಲು ಕಾರಣವಾದ ಬಹುಮುಖ್ಯವಾದ ಪವಿತ್ರವಾದ ಸಾಂಸ್ಕೃತಿಕ ಹಬ್ಬ ರಕ್ಷಾ ಬಂಧನ. ಪರಸ್ಪರ ಆಶ್ವಾಸನೆ, ವಿಶ್ವಾಸವನ್ನು ನೀಡುವ ಹಬ್ಬವೇ ರಕ್ಷಾಬಂಧನ. ರಕ್ಷಾ ಬಂಧನ ಕೇವಲ ಸಹೋದರ ಸಹೋದರಿಯರ ನಡುವೆ ಮಾತ್ರ ನಡೆಯುವ ಹಬ್ಬ ಅಲ್ಲ. ಜಾತಿ, ಮತ, ಧರ್ಮಗಳ ನಡುವೆ ಸ್ನೇಹಪೂರ್ವಕ ಸಂಕೇತವಾಗಿಯೂ ರಕ್ಷಾ ಬಂಧನ ಮಹತ್ವವನ್ನು ಪಡೆದುಕೊಂಡಿದೆ ಎಂದು ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ ಸಹಶಿಕ್ಷಕಿ ದಿವ್ಯಶ್ರೀ ರಾಘವೇಂದ್ರ ಹೇಳಿದರು. ಅವರು ಗಂಗೊಳ್ಳಿ ಸೇವಾ ಸಂಗಮ ನಿವೇದಿತಾ ಶಿಶು ಮಂದಿರ ಇದರ ಆಶ್ರಯದಲ್ಲಿ ರೋಟರಿ ಕ್ಲಬ್ ಗಂಗೊಳ್ಳಿ ಹಾಗೂ ಎಸ್.ವಿ. ಹಿರಿಯ ಪ್ರಾಥಮಿಕ ಶಾಲೆ ಗಂಗೊಳ್ಳಿ ಇದರ ಸಹಯೋಗದೊಂದಿಗೆ ಗಂಗೊಳ್ಳಿಯ ಎಸ್.ವಿ. ಹಿರಿಯ ಪ್ರಾಥಮಿಕ ಶಾಲೆಯ ಟಿ.ವಿಮಲಾ ವಿ.ಪೈ ಸಭಾಂಗಣದಲ್ಲಿ ಶನಿವಾರ ಜರಗಿದ ರಕ್ಷಾ ಬಂಧನ ಕಾರ್ಯಕ್ರಮದಲ್ಲಿ ಬೌದ್ಧಿಕ್ ನೀಡಿ ಮಾತನಾಡಿದರು. ಎಲ್ಲರಲ್ಲಿಯೂ ಸಹೋದರತೆಯ ಬಂಧವನ್ನು ಬೆಸೆಯಲು, ಏಕತೆಯನ್ನು ಕಾಣಲು, ರಾಷ್ಟ್ರ ರಕ್ಷಣೆ ಮಾಡಲು ರಕ್ಷಾ ಬಂಧನವನ್ನು ಕಟ್ಟುತ್ತಾರೆ. ರಕ್ಷೆಯನ್ನು ಮನ:ಪೂರ್ವಕವಾಗಿ ಪ್ರೀತಿಯಿಂದ ಕಟ್ಟಿದರೆ…
