ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಬೈಂದೂರು ಮಂಡಲ ವತಿಯಿಂದ ಕಾಶ್ಮೀರದ ಪಹಲ್ಯಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ಉಗ್ರರು ನಡೆಸಿದ ಧರ್ಮಧಾರಿತ ನರಮೇಧವನ್ನು ಖಂಡಿಸಿ ಬಿಜೆಪಿ ಯುವಮೋರ್ಚಾ ಬೈಂದೂರು ಮಂಡಲ ಅಧ್ಯಕ್ಷರಾದ ಗಜೇಂದ್ರ ಎಸ್. ಬೇಲೆಮನೆ ಅವರ ನೇತೃತ್ವದಲ್ಲಿ ಉಪ್ಪುಂದ ದ ಕಾರ್ಯಕರ್ತ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಯಿತು. ಈ ವಿದ್ವಂಸಕ ಘಟನೆಯನ್ನು ಉದ್ದೇಶಿಸಿ ಬೈಂದೂರಿನ ಶಾಸಕದಾದ ಗುರುರಾಜ ಗಂಟಿಹೊಳೆ ಅವರು ಮಾತನಾಡಿ, ಮತಾಂಧ ಇಸ್ಲಾಮಿಕ್ ಭಯೋತ್ಪಾದಕರಿಗೆ ಖಂಡಿಸಿದರು. ಈ ಸಂದರ್ಭದಲ್ಲಿ , ಒಬಿಸಿ ಮೋರ್ಚಾ ಅಧ್ಯಕ್ಷರಾದ ಶಿವರಾಜ್ ಪೂಜಾರಿ, ಎಸ್‌ಸಿ ಮೋರ್ಚಾ ಅಧ್ಯಕ್ಷರಾದ ಅಶೋಕ್ ಎನ್‌ಡಿ, ಬಿಜೆಪಿ ಜಿಲ್ಲಾ ಯುವ ಮೋರ್ಚ ಕಾರ್ಯದರ್ಶಿ ಸುಧಾಕರ್ ಶೆಟ್ಟಿ ನೆಲ್ಯಾಡಿ, ಶಾಂತಿ ಖಾರ್ವಿ ಗಂಗೊಳ್ಳಿ, ಅಶೋಕ್ ದೇವಾಡಿಗ ಕಂಚಿಕಾನ್, ಕೃಷ್ಣ ಖಾರ್ವಿ ಕೊಡಿರಿ, ಅಶೋಕ್ ನಾಡ, ರವಿಚಂದ್ರ ವಿ. ಕೆ., ಗೋಪಾಲ್ ಪೂಜಾರಿ ವಸ್ರೆ, ದಿವಾಕರ್ ಶೆಟ್ಟಿ, ಪ್ರದೀಪ್ ಉಪ್ಪುಂದ, ಜಗದೀಶ್ ಆಲಂದೂರ್, ಅನುರ ಮೆಂಡನ್,…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಅಮಾಯಕ ಮುಗ್ಧ 27 ಜನರು ಬಲಿಯಾಗಿದ್ದು ತೀವ್ರ ದುಃಖದ ವಿಚಾರವಾಗಿದೆ. ಇಂತಹ ನೀಚ ಕೃತ್ಯದ ಹಿಂದೆ ಇರುವವರ ವಿರುದ್ದ ಕೂಡಲೇ ಕ್ರಮಕೈಗೊಳ್ಳಬೇಕು ಎಂದು ಬೈಂದೂರು ಬ್ಲಾಕ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಶಬ್ಭೀರ್ ಬೈಂದೂರು ಅವರು ಹೇಳಿದರು. ಈ ವಿಷಯದಲ್ಲಿ ಜಾತಿ, ಧರ್ಮ ಮತ್ತು ಪಕ್ಷ ನೋಡದೆ ಎಲ್ಲರೂ ಒಂದಾಗಿ ಸರಕಾರಕ್ಕೆ ಬೆಂಬಲ ನೀಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಇಂತಹ ನೀಚ ಉಗ್ರವಾದವನ್ನು ಯಾವುದೇ ಧರ್ಮ ಒಪ್ಪಿಕೊಳ್ಳುವುದಿಲ್ಲ ಇದೊಂದು ಅಧರ್ಮದ ಕೆಲಸವಾಗಿದೆ. ದೇಶದ ಸಾಮರಸ್ಯವನ್ನು ಹತ್ತಿಕ್ಕುವ ಉಗ್ರ ಕಿಡಿಗೇಡಿಗಳ ಹೇಡಿತನದ ವಿರುದ್ಧ ಕೇಂದ್ರ ಸರಕಾರ ಕೂಡಲೇ ಕ್ರಮಗೊಳ್ಳಬೇಕು. ಈ ರೀತಿಯ ಭದ್ರತಾ ವೈಪಲ್ಯದಿಂದಾಗಿ ಮತ್ತೆ ಉಗ್ರರರ ಅಟ್ಟಹಾಸ ಮರುಕಳಿಸಿದಂತೆ ನೋಡಿಕೊಳ್ಳುವ ಜವಾಬ್ದಾರಿ ಸರಕಾರದ ಮೇಲಿದೆ. ಈ ಕೂಡಲೇ ಪ್ರವಾಸಿಗರು ಮತ್ತು ನಾಗರೀಕರ ರಕ್ಷಣೆಗೆ ಸರಕಾರ ಮುಂದೆ ಬರಬೇಕು ಹಾಗಾಗಿ ಕೇಂದ್ರ ಸರಕಾರ ಭಯೋತ್ಪಾದನೆ ನಿರ್ಮೂಲನೆ ಮಾಡುತ್ತೇವೆ ಸುಳ್ಳು ಹೇಳುವ ಬದಲು ಕೂಡಲೇ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ತೆಕ್ಕಟ್ಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೆದೂರು ವ್ಯಾಪ್ತಿಯಿಂದ ಕೋಟ ಗ್ರಾ.ಪಂ, ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯ ಸೂಲ್ಪಡು ಮಡಿವಾಳಸಾಲು ಹೊಳೆ ಹೂಳು ಸಮಸ್ಯೆಗೆ ಶೀಘ್ರದಲ್ಲಿ ಟೆಂಡರ್ ಪ್ರಕ್ರೀಯೆ ಪೂರ್ಣಗೊಳಿಸಿ ಈ ವರ್ಷದ ಮಳೆಗಾಲದ ಆರಂಭಕ್ಕೂ ಮೊದಲು ಹೂಳೆ ಹೂಳು ತೆಗೆಯಬೇಕೆಂದು ರೈತಧ್ವನಿ ಸಂಘದ ಪ್ರಮುಖರಾದ ಟಿ. ಮಂಜುನಾಥ್ ಗಿಳಿಯಾರ್ ಆಗ್ರಹಿಸಿದರು. ಅವರು ಕೋಟದ ಅಮೃತೇಶ್ವರಿ ದೇಗುಲದಲ್ಲಿ ಕೋಟದ ರೈತಧ್ವನಿ ಸಂಘಟನೆ ಸಭೆಯಲ್ಲಿ ಮಾತನಾಡಿದರು. ಕಳೆದ ಹಲವಾರು ವರ್ಷಗಳಿಂದ ತೆಕ್ಕಟ್ಟೆ ಉಳ್ಳೂರು, ಬೇಳೂರು, ಗಿಳಿಯಾರು, ಕಾರ್ತಟ್ಟು, ಚಿತ್ರಪಾಡಿ, ಬನ್ನಾಡಿ, ಉಪ್ಪಾಡಿ, ಸಾಲಿಗ್ರಾಮ ವ್ಯಾಪ್ತಿಯ ರೈತರು ಕೃತಕ ನೆರೆ ಹಾವಳಿಗೆ ತುತ್ತಾಗುತ್ತಿರುವ ಹಿನ್ನಲ್ಲೆಯಲ್ಲಿ ಕಳೆದ ಸಾಕಷ್ಟು ವರ್ಷಗಳಿಂದ ರೈತಧ್ವನಿ ಹೋರಾಟ ನಡೆಸಿದ್ದು ಪ್ರಸ್ತುತ ರಾಜ್ಯ ಸರಕಾರ ವಾರಾಹಿ ಯೋಜನೆಯಡಿ ಹೊಳೆ ಹೂಳೆ ತೆಗೆಯುವ ಸಂಬಂಧಿಸಿದ ಈಗಾಗಲೇ 4.5ವರೆ ಕೋಟಿ ಮಿಸಲಿರಿಸಿ ಟೆಂಡರ್ ಪ್ರಕೀಯೆ ಬಾಕಿ ಇರಿಸಿದೆ ಈ ಬಗ್ಗೆ ರೈತರು ಈ ವರ್ಷದ ಮಳೆಗಾಲದೊಳಗೆ ಹೊಳೆ ಹೂಳಿನಿಂದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ತೋಟಗಾರಿಕಾ ಇಲಾಖೆಯ ವತಿಯಿಂದ ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ ಕಾರ್ಯಕ್ರಮವನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ಆಯೋಜಿಸಲಾಗುತ್ತಿದ್ದು, ಆಸಕ್ತ ಅರ್ಹ ರೈತರ ಮಕ್ಕಳಿಂದ ತರಬೇತಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಏಪ್ರಿಲ್ 26 ರ ಸಂಜೆ 5 ಗಂಟೆಯವರೆಗೆ ವರೆಗೆ ವಿಸ್ತರಿಸಲಾಗಿದೆ. ಅಭ್ಯರ್ಥಿಗಳು ಕನಿಷ್ಟ ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಯ ಪೋಷಕರು ಕೃಷಿ ಜಮೀನು ಹೊಂದಿರಬೇಕು. ಜೊತೆಗೆ ಪಹಣಿ ನೀಡುವುದು ಕಡ್ಡಾಯವಾಗಿರುತ್ತದೆ. ಕನಿಷ್ಠ 18 ವರ್ಷ ಮೇಲ್ಪಟ್ಟ ಮತ್ತು ಗರಿಷ್ಠ ವಯಸ್ಸು ಸಾಮಾನ್ಯ ಅಭ್ಯರ್ಥಿಗಳಿಗೆ 30 ವರ್ಷ ಹಾಗೂ ಪ.ಜಾತಿ ಮತ್ತು ಪ.ಪಂಗಡದ ಅಭ್ಯರ್ಥಿಗಳಿಗೆ 33 ವರ್ಷ, ಮಾಜಿ ಸೈನಿಕರು ಪ್ರವೇಶ ಪಡೆಯಲು ಇಚ್ಚಿಸಿದಲ್ಲಿ ವಯಸ್ಸಿನ ಮಿತಿ 33 ರಿಂದ 65 ವರ್ಷ ದೊಳಗಿನವರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‌ಸೈಟ್ https://horticulturedir.karnataka.gov.in ಅಥವಾ ತೋಟಗಾರಿಕೆ ಉಪನಿರ್ದೇಶಕರು, ಉಡುಪಿ ಅಥವಾ ಉಡುಪಿ, ಕುಂದಾಪುರ ಹಾಗೂ ಕಾರ್ಕಳ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪ್ರತಿಭೆ ನಿಮ್ಮದು ವೇದಿಕೆ ನಮ್ಮದು 2025ರ ಕಾರ್ಯಕ್ರಮದಡಿ ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಸತತ 106ನೇ ತಿಂಗಳ ಕಾರ್ಯಕ್ರಮವು ಇತ್ತೀಚಿಗೆ ದೇವಕಿ ಸುರೇಶ್ ಪ್ರಭು ಅವರ ಪ್ರಾರ್ಥನೆಯೊಂದಿಗೆ ಆರಂಭವಾಯಿತು. ನಿವೃತ್ತ ಪ್ರಾಂಶುಪಾಲ ಎಮ್. ರತ್ನಾಕರ ಪೈ ಅಧ್ಯಕ್ಷತೆ ವಹಿಸಿ ಮಾತನಾಡಿ, ಉಪ್ಪಿನಕುದ್ರಿನಂತಹ ಸಣ್ಣ ಹಳ್ಳಿಯಲ್ಲಿ ಇಂತಹ ಭವ್ಯ ವೇದಿಕೆಯನ್ನು ಡಾ. ಸುಧಾ ಮೂರ್ತಿ ಹಾಗೂ ಡಾ. ಪಿ, ದಯಾನಂದ ಪೈ ಅವರ ಪ್ರಾಯೋಜಕತ್ವದಲ್ಲಿ ನಿರ್ಮಿಸಲಾಗಿದೆ. ಪ್ರತಿಯೊಂದು ಕಲೆಯ ಕಲಾವಿದನಿಗೆ ಇಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಗೊಂಬೆಯಾಟ ಅಕಾಡೆಮಿ ಅವಕಾಶ ನೀಡುತ್ತಿದೆ. ಆ ಅವಕಾಶವನ್ನು ಎಲ್ಲರೂ ಸದುಪಯೋಗಪಡಿಸಿಕೊಳ್ಳಬೇಕು ಎಂದು ಮಕ್ಕಳಿಗೆ ತಿಳುವಳಿಕೆ ನೀಡಿದರು. ವೇದಿಕೆಯಲ್ಲಿ ಗೊಂಬೆಯಾಟದ ಹಿರಿಯ ಸೂತ್ರಧಾರಿ ವೆಂಕಟರಮಣ ಬಿಡುವಾಳ್, ಅನಸೂಯಾ ವಿ. ಬಿಡುವಾಳ್, ಯಶೋದಾ ಜೆ. ಪೂಜಾರಿ, ನರಸಿಂಹ ಪೂಜಾರಿ ಹಾಗೂ ಅಕಾಡೆಮಿ ಅಧ್ಯಕ್ಷ ಭಾಸ್ಕರ್ ಕೊಗ್ಗ ಕಾಮತ್ ಅವರು ಉಪಸ್ಥಿತರಿದ್ದರು. ಬಿಡುವಾಳ್ ಪ್ರತಿಷ್ಠಾನ, ಹೇರೂರು ಇದರ ಅಧ್ಯಕ್ಷರಾದ ವೆಂಕಟರಮಣ ಬಿಡುವಾಳ್ ದಂಪತಿಗಳನ್ನು ಹಾಗೂ ಅತ್ಯಂತ…
ಕುಂದಾಪ್ರ ಡಾಟ್ ಕಾಂ ಸುದ್ದಿಕುಂದಾಪುರ: ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಾನವ ಹಕ್ಕುಗಳ ಘಟಕ ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕ 1 ಮತ್ತು 2ರ ಆಶ್ರಯದಲ್ಲಿ ಮಾನವ ಹಕ್ಕುಗಳು ಮತ್ತು ಮೂಲಭೂತ ಹಕ್ಕುಗಳ ಕುರಿತು ವಿಶೇಷ ಉಪನ್ಯಾಸವನ್ನು ವಿದ್ಯಾರ್ಥಿಗಳಿಗಾಗಿ ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ಆಯೋಜಿಸಲಾಯಿತು. ಸಂಪನ್ಮೂಲ ವ್ಯಕ್ತಿ ಕುಂದಾಪುರದ ವಕೀಲರಾದ ಪ್ರದೀಪ್ ಕುಮಾರ್ ಶೆಟ್ಟಿ ಕಾಳಾವರ ಅವರು ಮಾತನಾಡಿ, ಮಾನವ ಹಕ್ಕುಗಳು ಮತ್ತು ಮೂಲಭೂತ ಹಕ್ಕುಗಳು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಎರಡನೇ ಮಹಾಯುದ್ಧದ ನಂತರ ಹತ್ಯೆ ಮತ್ತು ದೌರ್ಜನ್ಯಗಳಿಗೆ ಪ್ರತಿಕ್ರಿಯೆಯಾಗಿ ಆಧುನಿಕ ಪ್ರಪಂಚದಲ್ಲಿ ಮಾನವ ಹಕ್ಕುಗಳು ಹೊಸ ರೂಪುರೇಷೆ ಪಡೆದುಕೊಂಡವು. ಸಾರ್ವತ್ರಿಕವಾಗಿ ಜಾಗತಿಕ ಮನ್ನಣೆ ಪಡೆದ ಈ ಹಕ್ಕುಗಳು ಎಲ್ಲಾ ಮಾನವರ ಘನತೆಯನ್ನು ಗುರುತಿಸುವ ಮತ್ತು ರಕ್ಷಿಸುವ ಮಾನದಂಡಗಳಾಗಿವೆ. ಸಮಾನತೆಯ ಬದುಕುವ ಹಕ್ಕಿನ ಸಂದರ್ಭದಲ್ಲಿ ಸಂವಿಧಾನಾತ್ಮಕವಾಗಿ ಬಂದ ಮೂಲಭೂತ ಹಕ್ಕುಗಳು ಅಷ್ಟೇ ಪ್ರಾಮುಖ್ಯತೆ ಪಡೆಯುತ್ತವೆ. ಹಕ್ಕುಗಳೊಂದಿಗೆ ಕರ್ತವ್ಯಗಳ ಕುರಿತು ಸಹ ವಿದ್ಯಾರ್ಥಿಗಳು ಚಿಂತಿಸಬೇಕು ಎಂದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಯಳಜಿತ್ ಗ್ರಾಮದ ಹುಲ್ಕಡಕಿ ನಿವಾಸಿ ಬಸವ (38) ಎಂಬ ವ್ಯಕ್ತಿಯು ಏಪ್ರಿಲ್ 17 ರಂದು ಮನೆಯಿಂದ ಹೋದವರು ಇದೂವರೆಗೂ ವಾಪಾಸು ಬಾರದೇ ನಾಪತ್ತಯಾಗಿರುತ್ತಾರೆ. 5 ಅಡಿ ಎತ್ತರ, ಸಾಧಾರಣ ಶರೀರ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ಮರಾಠಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬೈಂದೂರು ಪೊಲೀಸ್ ಠಾಣೆ ದೂ.ಸಂಖ್ಯೆ: 08254-251033, ಮೊ.ನಂ: 9480805459, ಬೈಂದೂರು ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 08254-251031, ಮೊ.ನಂ: 9480805434 ಹಾಗೂ ಕಂಟ್ರೋಲ್ ರೂಂ 100 (0820-2526444) ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೈಂದೂರು ಪೊಲೀಸ್ ಠಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಾದೇಶಿಕ ಅಸಮತೋಲನೆಯು ಸ್ಥಳೀಯ ಜನರ ಕಾರ್ಯಚಟುವಟಿಕೆ ಹಾಗೂ ಆರ್ಥಿಕ ಅಭಿವೃದ್ಧಿಯ ಆಧಾರದ ಮೇಲೆ ಅವಲಂಬನೆಯಾಗಿರುತ್ತದೆ. ಉಡುಪಿ ಜಿಲ್ಲೆಯು ಸಾಕಷ್ಟು ಅಭಿವೃದ್ಧಿಯು ಖಾಸಗಿ ಸಹಭಾಗಿತ್ವದಲ್ಲಿ ಆಗಿದೆ. ಇನ್ನಷ್ಟು ಅಭಿವೃದ್ಧಿ ಆಗಬೇಕು ಎಂದು ಅಧ್ಯಕ್ಷ ಪ್ರೊ. ಎಂ. ಗೋವಿಂದರಾವ್ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್‌ನ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ, ಡಾ.ಡಿ.ಎಂ ನಂಜುಂಡಪ್ಪ ವರದಿಯ ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿಯ ಜಿಲ್ಲಾ ಮಟ್ಟದ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಉಡುಪಿ ಜಿಲ್ಲೆಯಲ್ಲಿ ರಾಜ್ಯದಲ್ಲಿಯೇ ಮೊಟ್ಟಮೊದಲ ಬಾರಿಗೆ ವೈದ್ಯಕೀಯ ಶಿಕ್ಷಣ ವ್ಯವಸ್ಥೆ, ಬ್ಯಾಂಕಿAಗ್ ಸೆಕ್ಟರ್‌ಗಳು ಸೇರಿದಂತೆ ಮತ್ತಿತರ ಕಾರ್ಯಚಟುವಟಿಕೆಗಳಿಂದ ಜಿಲ್ಲೆಯು ಶೈಕ್ಷಣಿಕವಾಗಿ ಹಾಗೂ ಆರ್ಥಿಕವಾಗಿ ಅಭಿವೃದ್ಧಿ ಸಾಧಿಸಿದೆ. ಇದಕ್ಕೆ ಪೂರಕವಾಗಿ ಸರಕಾರವೂ ಸಹ ಅಭಿವೃದ್ಧಿ ಕಾರ್ಯಗಳನ್ನು ಮಾಡಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಪಥದಲ್ಲಿ ಜಿಲ್ಲೆಯು ಸಾಗಬೇಕಿದೆ ಎಂದರು. ನಂಜುಂಡಪ್ಪ ಸಮಿತಿ ವರದಿಯು ಅತ್ಯಂತ ಹಿಂದುಳಿದವರು 39, ಹೆಚ್ಚು ಹಿಂದುಳಿದವರು 40,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ವಕ್ವಾಡಿ ಗುರುಕುಲ ಸಂಸ್ಥೆಯಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಮಾತೃ ಪಿತೃ ಪೂಜನ್ ದಿವಸ್ ಎಂಬ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಇತ್ತೀಚಿಗೆ ನಡೆಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಮೈಸೂರು ಅಂತರಾಷ್ಟ್ರೀಯ ಮಟ್ಟದ ವ್ಯಕ್ತಿತ್ವ ವಿಕಸನ ತರಬೇತಿದಾರರಾದ ಸತೀಶ್ ಆರ್. ಅವರು ಸ್ವಸ್ಥ ಸಮಾಜದ ನಿರ್ಮಾಣವಾಗಬೇಕಾದರೆ ಅಲ್ಲಿ ಮುಖ್ಯವಾಗಿ ಕಂಡು ಬರುವುದು ಕುಟುಂಬ ಮತ್ತು ಶಿಕ್ಷಣ ವ್ಯವಸ್ಥೆ. ಅದರಲ್ಲೂ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ನಡುವಿನ ಸಾಮರಸ್ಯ ಹಾಗೂ ಶಿಕ್ಷಣ ಮತ್ತು ಶಿಕ್ಷಕರ ಮಹತ್ವವನ್ನು ತಿಳಿಸಿದರು. ಜೊತೆಗೆ ಇಂದು ಕುಟುಂಬ ತನ್ನ ಹೃದಯವಂತಿಕೆಯನ್ನು ಕಳೆದುಕೊಳ್ಳುತ್ತಿರುವ ಮತ್ತು ಮಕ್ಕಳು ತಮ್ಮ ಪೋಷಕರ ಮಹತ್ವಗಳನ್ನು ಅರ್ಥ ಮಾಡಿಕೊಳ್ಳದೆ ಎಲ್ಲರೂ ತಮ್ಮ ಸ್ವತಂತ್ರ ಬದುಕಿನ ಮೋಹದಿಂದ ಹಿರಿಯರಿಂದ ದೂರವಾದರೆ, ಮಕ್ಕಳು ಕೂಡ ಅವರ ಪ್ರೀತಿಯಿಂದ ದೂರವಾಗುತ್ತಾ ಆಧುನಿಕ ತಂತ್ರಜ್ಞಾನ ಹಿಂದೆ ಓಡುತ್ತಿರುವುದು ಮಾತ್ರ ನಿಜಕ್ಕೂ ವಿಪರ್ಯಾಸ. ಈ ಎಲ್ಲಾ ವಿಷಯಗಳನ್ನು ಒಟ್ಟುಗೂಡಿಸಿ ಮಕ್ಕಳ ಬದುಕಿನಲ್ಲಿ ಪೋಷಕರ ಪಾತ್ರ ಏನು ಎಂಬುದನ್ನು ಜೊತೆ ಜೊತೆಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಯಕ್ಷ ಸೌರಭ ಶ್ರೀ ಹಿರೇಮಹಾಲಿಂಗೇಶ್ಚರ ಕಲಾರಂಗ ಕೋಟ ಇದರ ದಶಮಾನೋತ್ಸವ ಸಂಭ್ರಮ ಕಾರ್ಯಕ್ರಮವು ಇದೇ ಬರುವ ಎ.26ರಂದು ಕೋಟ ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿ ನಡೆಯಲಿದ್ದು ಇದರ ಪೋಸ್ಟರ್ ಬಿಡುಗಡೆಯನ್ನು ಖ್ಯಾತ ಭಾಗವತ ಪಟ್ಲ ಸತೀಶ್ ಶೆಟ್ಟಿ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಯಕ್ಷಸೌರಭ ಶ್ರೀ ಹಿರೇ ಮಹಾಲಿಂಗೇಶ್ವರ ಕಲಾ ರಂಗದ ಅಧ್ಯಕ್ಷ ರಾಘವೇಂದ್ರ ಕರ್ಕೇರ ಕೋಡಿ, ಸಾಲಿಗ್ರಾಮ ಪಟ್ಟಣ ಪಂಚಾಯತ್ ಸದಸ್ಯ ರಾಜು ಪೂಜಾರಿ ಕಾರ್ಕಡ, ಪ್ರಗತಿಪರ ಕೃಷಿಕ ರವೀಂದ್ರ ಐತಾಳ್, ಶಿಕ್ಷಣ ಇಲಾಖೆಯ ನಿವೃತ್ತ ಅಧಿಕಾರಿ ಶಿವಾನಂದ ಮಯ್ಯ, ನಿವೃತ್ತ ಶಿಕ್ಷಕ ಕೆ. ರಾಜಾರಾಮ ಐತಾಳ್, ಯಕ್ಷ ಸೌರಭದ ಕಾರ್ಯದರ್ಶಿ ಶ್ರೀನಾಥ್ ಉರಾಳ, ಸ್ಥಾಪಕಾಧ್ಯಕ್ಷ ಹರೀಷ್ ಭಂಢಾರಿ, ಸದಸ್ಯರಾದ ಗಿರೀಶ್ ಬೆಟ್ಲಕ್ಕಿ, ಪ್ರಶಾಂತ್ ಪಡುಕರೆ, ವಿಘ್ನನೇಶ್ ದೇವಾಡಿಗ, ಕೋಟ ಅಮೃತೇಶ್ವರಿ ಯಕ್ಷಗಾನ ಭಾಗವತ ರಾಘವೇಂದ್ರ ಮಯ್ಯ ಮತ್ತಿತರರು ಇದ್ದರು.
