Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಧರ್ಮಸ್ಥಳ ಡಾ. ವಿರೇಂದ್ರ ಹೆಗಡೆ ಅವರ ಮಹತ್ವಾಕಾಂಕ್ಷೆಯ ಕೆರೆ ನವೀಕರಣ ಯೋಜನೆಯ ಮೂಲಕ ಗ್ರಾಮಗಳಲ್ಲಿ ಕುಡಿಯುವ ನೀರಿನ ಭರವನ್ನು ನಿಗಿಸಲಿದೆ ಎಂದು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಹೇಳಿದರು. ಅವರು ಗುರುವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಬ್ರಹ್ಮಾವರ ತಾಲೂಕು, ಗ್ರಾಮ ಪಂಚಾಯತ್ ಕೋಟ ಹಾಗೂ ಮಣೂರು ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನ ಕೆರೆ ಅಭಿವೃದ್ಧಿ ಸಮಿತಿ ಇವುಗಳ ಜಂಟಿ ಆಶ್ರಯದಲ್ಲಿ ಪರಮಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಹಾಗೂ ಮಾತೃಶ್ರೀ ಡಾ. ಹೇಮಾವತಿ ವಿ. ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ ’ನಮ್ಮೂರು ನಮ್ಮ ಕೆರೆ ಕಾರ್ಯಕ್ರಮದಡಿ ಪುನಶ್ಚೇತನಗೊಳಿಸಲಾದ ಮಣೂರು ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆಯ ಹಸ್ತಾಂತರ ಕಾರ್ಯಕ್ರಮದಲ್ಲಿ ಲೋಕಾರ್ಪಣೆಗೊಳಿಸಿ ಮಾತನಾಡಿ\ದರು. ಹಿಂದಿನ ಕಾಲಘಟ್ಟದಲ್ಲಿ ನಮ್ಮ ಹಿರಿಯರು ಕೆರೆಗಳನ್ನು ಸುಸ್ಥಿತಿಯಲ್ಲಿಟ್ಟಿದ್ದರು ಆದರೆ ಇಂದು ಹೆಚ್ಚಿನ ಕೆರೆಗಳು ಅವನತಿಗೆ ತಳ್ಳಲ್ಲಪಟ್ಟಿದೆ ಇಂತಹ ಸಂದರ್ಭಗಳಲ್ಲಿ ಗ್ರಾಮಾಭಿವೃದ್ಧಿ ಯೋಜನೆ ಕೆರೆಗಳ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆಯ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ (IMJISC) ತರಬೇತಿ ಮತ್ತು ಉದ್ಯೋಗ ಕೋಶವು ಬುಧವಾರ ಆಯೋಜಿಸಿದ್ದ ಕ್ಯಾಂಪಸ್ ನೇಮಕಾತಿ ಅಭಿಯಾನದಲ್ಲಿ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು ಇಂಟರ್ನ್‌ಶಿಪ್ ಸಹಿತ ಉದ್ಯೋಗಾವಕಾಶಗಳಿಗೆ ಆಯ್ಕೆಯಾಗಿದ್ದಾರೆ. ಕ್ಯೂಸ್ಪೈಡರ್ಸ್, ಪ್ರೋಸ್ಪೈಡರ್ಸ್ ಮತ್ತು ಜಿಕ್ಯೂಟಿ ಸಂಸ್ಥೆಗಳ ಸಹಯೋಗದೊಂದಿಗೆ ನಡೆದ ಈ ಅಭಿಯಾನದಲ್ಲಿ ಬಿಸಿಎ, ಬಿಬಿಎ ಮತ್ತು ಬಿ.ಕಾಂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಆಪ್ಟಿಟ್ಯೂಡ್ ಪರೀಕ್ಷೆ, ಗುಂಪು ಚರ್ಚೆ ಮತ್ತು ಮುಖಾಮುಖಿ ಸಂದರ್ಶನ ಸೇರಿದಂತೆ ಮೂರು ಹಂತದ ನೇಮಕಾತಿ ಪ್ರಕ್ರಿಯೆಯ ಮೂಲಕ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಯಿತು.ಶೈಕ್ಷಣಿಕ ಹಂತದ ಆರಂಭದಲ್ಲೇ ವಿದ್ಯಾರ್ಥಿಗಳಿಗೆ ಉದ್ಯಮ ಪರಿಚಯ ಮತ್ತು ಪ್ರಾಯೋಗಿಕ ಅನುಭವ ದೊರಕಿಸುವ ಉದ್ದೇಶದಿಂದ ಈ ಅಭಿಯಾನವನ್ನು ಆಯೋಜಿಸಲಾಗಿತ್ತು. ಇದು ವಿದ್ಯಾರ್ಥಿಗಳ ಅಂತಿಮ ವರ್ಷದ ಉದ್ಯೋಗಾವಕಾಶಗಳಿಗೆ ಪೂರಕವಾಗಲಿದೆ ಎಂದು ತರಬೇತಿ ಮತ್ತು ಉದ್ಯೋಗ ಕೋಶದ ಸಂಯೋಜಕರು ತಿಳಿಸಿದ್ದಾರೆ. ಆಯ್ಕೆಯಾದ ವಿದ್ಯಾರ್ಥಿಗಳನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ಅಧ್ಯಾಪಕ ವೃಂದ ಅಭಿನಂದಿಸಿದೆ. ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ತರಬೇತಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹಾಲಾಡಿ ಜಮದಗ್ನಿ  ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಥಮ ವರ್ಷದ ವರ್ಧಂತಿ ಉತ್ಸವವು ಸೋಮವಾರದಂದು  ವಿಜೃಂಭಣೆಯಿಂದ ಸಂಪನ್ನಗೊಂಡಿತು. ಬೆಳಿಗ್ಗೆ 9.00 ರಿಂದ ಜ್ಯೋತಿಷ್ಯ ವಿದ್ವಾನ್  ತಟ್ಟುವಟ್ಟು ವಾಸುದೇವ ಜೋಯಿಸರ ನೇತೃತ್ವದಲ್ಲಿ 24 ಪರಿಕಲಸ ಸಹಿತ ಪ್ರಧಾನ ಬ್ರಹ್ಮ ಕುಂಭಾಭಿಷೇಕ, ಕಲಾತತ್ವಪೂರ್ವಕ ಪ್ರಧಾನ ಅಧಿವಾಸ ಹೋಮ, ಶ್ರೀ ನಾಗದೇವರಿಗೆ ನವಕ ಪ್ರಧಾನ ಹೋಮ ನಡೆಯಿತು. ಮಧ್ಯಾಹ್ನ 12.00 ರಿಂದ ಮಹಾಪೂಜೆ, ತೀರ್ಥ ಪ್ರಸಾದ ವಿತರಣೆ, 12.30 ರಿಂದ ಸಾರ್ವಜನಿಕ ಅನ್ನಸಂತರ್ಪಣೆ, ಸಂಜೆ 6.00 ರಿಂದ ರಂಗಪೂಜೆ ಮತ್ತು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿ ಹಾಲಾಡಿ ಮತ್ತು ಶ್ರೀ ಮಹಾ ವಿಷ್ಣುಮೂರ್ತಿ ಭಜನಾ ಮಂಡಳಿ ಗೋರಾಜೆ ಇವರಿಂದ ಭಜನಾ ಕಾರ್ಯಕ್ರಮ ಹಾಗೂ ಶ್ರೀ ಸ್ವಾಮಿ ಚಂಡೆ ಬಳಗ ಹಾಲಾಡಿ ಇವರಿಂದ ಚಂಡೆ ವಾದನ ನಡೆಯಿತು. ನಂತರ ಮಹಾ ಮಂಗಳಾರತಿ, ತೀರ್ಥಪ್ರಸಾದ ವಿತರಣೆ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ಭಾಸ್ಕರ ಅಡಿಗ, ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರು ಸೇರಿದಂತೆ ಸಮಿತಿಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಮಂಗಳೂರು ವಿವಿ ಕ್ಯಾಂಪಸ್‌ನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾಲಯದ ಅಂತರ ಕಾಲೇಜು ಮಹಿಳೆಯರ ತ್ರೋಬಾಲ್ ಪಂದ್ಯಾಟದಲ್ಲಿ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿಯರು ಅದ್ಭುತ ಪ್ರದರ್ಶನ ನೀಡಿ 21ನೇ ಬಾರಿ ಚಾಂಪಿಯನ್ ಕಿರೀಟವನ್ನು ಮುಡಿಗೇರಿಸಿಕೊಂಡು, ಪೂರ್ಣಪ್ರಜ್ಞಾ ರೋಲಿಂಗ್ ಟ್ರೋಪಿಯನ್ನು ತನ್ನದಾಗಿಸಿಕೊಂಡರು.     ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಮಡಂತ್ಯಾರ್‌ನ ಸೇಕ್ರೆಡ್ ಹಾರ್ಟ್ ಕಾಲೇಜಿನ ತಂಡವನ್ನು ಆಳ್ವಾಸ್ ತಂಡವು 25-10 ಹಾಗೂ 25-12 ಅಂಕಗಳ ನೇರ ಸೆಟ್‌ನಲ್ಲಿ ಮಣಿಸಿತು. ಸೆಮಿಫೈನಲ್‌ನಲ್ಲಿ ಹಂಪನಕಟ್ಟೆಯ ವಿಶ್ವವಿದ್ಯಾಲಯ ಕಾಲೇಜಿನ ವಿರುದ್ಧ 25-18 ಹಾಗೂ 25-12 ಅಂಕಗಳ ಅಂತರದಲ್ಲಿ ಭರ್ಜರಿ ಜಯ ಸಾಧಿಸಿತು. ಅಂತಿಮ ಫೈನಲ್ ಹಣಾಹಣಿಯಲ್ಲಿ ಮಂಗಳೂರು ವಿಶ್ವವಿದ್ಯಾಲಯ ಕ್ಯಾಂಪಸ್ ತಂಡವನ್ನು 25-18 ಮತ್ತು 25-16 ಅಂಕಗಳ ನೇರ ಸೆಟ್‌ನಿಂದ ಸೋಲಿಸಿ ಆಳ್ವಾಸ್ ಚಾಂಪಿಯನ್‌ಶಿಫ್ ಕಿರೀಟವನ್ನು 18ನೇ ಬಾರಿ ತನ್ನದಾಗಿಸಿಕೊಂಡಿತು. ವಿಜೇತ ತಂಡವನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಅಂಪಾರು ಗ್ರಾಮದ ಬಲಾಡಿ ಕಲ್‌ತ್ತೋಡ್ಮಿ ಮನೆ ಕುಟುಂಬಸ್ಥರು ವರ್ತೆ ಪಂಜುರ್ಲಿ ಹಾಗೂ ಸಪರಿವಾರ ದೈವಸ್ಥಾನಗಳಿಗೆ ಮೂರನೇ ವರ್ಷದ ವರ್ಧಂತ್ಯೋತ್ಸವ ಪ್ರಯುಕ್ತ ಶ್ರೀ ಪಂಜುರ್ಲಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಶ್ರೀ ಕ್ಷೇತ್ರ ಗೋಳಿಗರಡಿ ಇವರಿಂದ ಯಕ್ಷಗಾನ ಪ್ರದರ್ಶನವನ್ನು ಆಯೋಜಿಸಿದರು. ಈ ಸಂದರ್ಭ ಯಕ್ಷರಂಗದಲ್ಲಿ ಸುದೀರ್ಘ 50 ವರ್ಷಕ್ಕೂ ಮೇಲ್ಪಟ್ಟು ಕಲಾ ಸೇವೆಗೈದ ಹಿರಿಯ ಯಕ್ಷಗಾನ ಕಲಾವಿದರಾದ ಜಮದಗ್ನಿ ಶೀನ ನಾಯ್ಕ ಹಾಗೂ ಬೇಲ್ತೂರು ರಮೇಶ್ ಅವರನ್ನು ಸನ್ಮಾನಿಸಲಾಯಿತು. ಬಲಾಡಿಯ ಶ್ರೀ ಸ್ವಾಮಿಲಿಂಗೇಶ್ವರ ದೇವಸ್ಥಾನದ ಆಡಳಿತ ಮುಕ್ತೇಸರರಾದ ಪ್ರಭಾಕರ ಶೆಟ್ಟಿ, ಮೇಳದ ಯಜಮಾನರಾದ ವಿಠಲ ಪೂಜಾರಿ, ವರ್ತೆ ಪಂಜುರ್ಲಿ ದೈವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ಶಂಕರ ಎಸ್ ಕಾಂಚನ್, ಸದಸ್ಯರಾದ ಕೇಶವ ಕಾಂಚನ್, ಮಂಜುನಾಥ ಗುಡ್ರಿ, ವಿಜಯ್ ಕಾಂಚನ್, ರಾಘವೇಂದ್ರ ನೆಂಪು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ಉಪ-ಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ ಸನ್ಮಾನಿತರನ್ನು ಪರಿಚಯಿಸಿ, ಕಾರ್ಯಕ್ರಮ ನಿರ್ವಹಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದ ನೂತನ ಶಿಲಾದೇಗುಲ ಲೋಕಾರ್ಪಣೆ, ಪುನರ್ ಪ್ರತಿಷ್ಠೆ ಮತ್ತು ಬ್ರಹ್ಮ ಕುಂಭಾಭಿಷೇಕ ಕಾರ್ಯಕ್ರಮವು ಇತೀಚಿಗೆ ನಡೆಯಿತು. ಮೇ.13ರ ಸಂಜೆ ಪರಿವಾರ ದೈವಗಳ ಪ್ರತಿಷ್ಠಾಪನೆ, 6.00 ರಿಂದ ಭಜನಾ ಕಾರ್ಯಕ್ರಮ, ರಾತ್ರಿ 8.00 ರಿಂದ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು  ವಹಿಸಿಕೊಂಡ ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷರಾದ ದಿನಕರ ತೋಳಾರ್  ಮಾತನಾಡಿ, ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನವು ಅತಿ ಪುರಾತನ ದೇವಸ್ಥಾನವಾಗಿದ್ದು, ರಸ್ತೆಯ ವಿಸ್ತರಣೆಯಿಂದ ರಸ್ತೆಯ ಪಕ್ಕಕ್ಕೆ ಬಂದಿರುವುದರಿಂದ ದಾನಿಗಳ ನೆರವಿನಿಂದ ನೂತನ ಶಿಲಾ ದೇಗುಲ ನಿರ್ಮಾಣ ಮಾಡಲಾಗಿದೆ. ಈ ಕಾರ್ಯಕ್ಕೆ ಭಕ್ತಾಧಿಗಳು ಕೈ ಜೋಡಿಸಿದ ಕಾರಣ ಆಕರ್ಷಕ ದೇವಸ್ಥಾನ ನಿರ್ಮಾಣವಾಗಿದೆ ಎಂದರು. ಅವಧಾನಿ ಗುಂಡಿಬೈಲು ಸುಬ್ರಮಣ್ಯ ಭಟ್ ಧಾರ್ಮಿಕ ಉಪನ್ಯಾಸಗೈದರು. ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದ ಕಮಲಶಿಲೆ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಧರ್ಮದರ್ಶಿ ಸಚ್ಚಿದಾನಂದ ಚಾತ್ರರು ಹಿಂದೆ ದೇವಸ್ಥಾನದಲ್ಲಿ ಪೂಜೆ ಪುನಸ್ಕಾರಗಳು, ಅನ್ನದಾನ ನಡೆಸುವುದು ಕಷ್ಟಕರವಾಗಿದ್ದು, ಇಂದು ಭಕ್ತಾದಿಗಳ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2025-26ನೇ ಶೈಕ್ಷಣಿಕ ಸಾಲಿನಲ್ಲಿ ನಡೆದ ಪಿ.ಯು.ಸಿ, ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿ, ಮೆಡಿಕಲ್ ಇಂಜಿನಿಯರಿಂಗ್ ಮುಂತಾದ ವೃತ್ತಿಪರ ಕೋರ್ಸುಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಬಹುಮಾನ ಹಣವನ್ನು ಮಂಜೂರು ಮಾಡುವ ಸಲುವಾಗಿ ಅರ್ಹ ವಿದ್ಯಾರ್ಥಿಗಳಿಂದ ಇಲಾಖೆಯ ವೆಬ್‌ಸೈಟ್ www.sw.kar.nic.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ ನಂತರ ಒಂದು ವಾರದ ಒಳಗೆ ಅರ್ಜಿಯನ್ನು ಹಾಗೂ ಸಂಬಂಧಿಸಿದ ಎಲ್ಲಾ ದಾಖಲಾತಿಗಳನ್ನು ಕಾಲೇಜಿನ ಪ್ರಾಂಶುಪಾಲರಿಂದ ದೃಢೀಕರಿಸಿ, ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ ಇವರಿಗೆ ನೀಡಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ: 0820-2574892 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕರ್ನಾಟಕ ಕಡಲ ಮೀನುಗಾರಿಕೆ ನಿಯಂತ್ರಣ ಕಾಯ್ದೆ 1986 ರನ್ವಯ ರಾಜ್ಯ  ಸರಕಾರದ ಅಧಿಸೂಚನೆಯಂತೆ ಉಡುಪಿ ಜಿಲ್ಲೆಯೂ ಸೇರಿದಂತೆ ಕರ್ನಾಟಕ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು / ಸಾಧನಗಳನ್ನು ಉಪಯೋಗಿಸಿ ಮೀನುಗಾರಿಕೆಗಾಗಿ ಯಾಂತ್ರೀಕೃತ ದೋಣಿಗಳ ಮತ್ತು 10 ಅಶ್ವಶಕ್ತಿ (ಹೆಚ್.ಪಿ) ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್ಬೋರ್ಡ್ ಅಥವಾ ಔಟ್ಬೋರ್ಡ್ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮುಖಾಂತರ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು 2026 ರ ಜೂನ್ 1 ನೇ ತಾರೀಕಿನಿಂದ ಜುಲೈ 31 ನೇ ತಾರೀಕಿನವರೆಗೆ (ಉಭಯ ದಿನಗಳು ಸೇರಿದಂತೆ) ಅಂದರೆ ಒಟ್ಟು 61 ದಿನಗಳ ನಿಷೇಧ ಹೇರಿ ಜಿಲ್ಲಾಧಿಕಾರಿಗಳು ಆದೇಶಿಸಿರುತ್ತಾರೆ. ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿ 10 ಅಶ್ವಶಕ್ತಿಯ ವರೆಗಿನ ಸಾಮರ್ಥ್ಯದ ಮೋಟರೀಕೃತ ದೋಣಿ ಹಾಗೂ ಸಾಂಪ್ರದಾಯಕ ನಾಡದೋಣಿಗಳು ಕರಾವಳಿ ಮೀನುಗಾರಿಕೆಯನ್ನು ಕೈಗೊಳ್ಳಲು ಅನುಮತಿಸಿದೆ ಹಾಗೂ ಹವಾಮಾನದ ವೈಪರೀತ್ಯದ ಮುನ್ಸೂಚನೆ ನೀಡಿದಾಗ ಕಡ್ಡಾಯವಾಗಿ ಪಾಲಿಸಬೇಕು. ಮೀನುಗಾರಿಕೆ ನಿಷೇಧವಿರುವುದರಿಂದ ಕಡ್ಡಾಯವಾಗಿ ಎಲ್ಲಾ ದೋಣಿಗಳು ಮೇ 31 ರ ಒಳಗೆ ಬಂದರು ಪ್ರವೇಶ ಮಾಡಬೇಕು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮೆದುಳಿಗೆ ನೀಡುವ ಶಿಕ್ಷಣಕ್ಕಿಂತ ಹೃದಯಕ್ಕೆ ನೀಡುವ ಶಿಕ್ಷಣ ಬಹಳ ಮುಖ್ಯವಾಗಿದ್ದು. ಹೃದಯವಂತಿಕೆ ಇರುವ ಮನುಷ್ಯ ಒಳ್ಳೆಯ ವಿದ್ಯಾರ್ಥಿ, ವಿಜ್ಞಾನಿ ಎನ್ನುವ ಯಾವ ಪದವಿಯನ್ನು ಬೇಕಾದರೂ ಪಡೆಯಬಹುದು. ಅಸೂಯೆಯಿಂದ ದೂರವಾಗಿ ದಯಾಗುಣಗಳನ್ನು ಬೆಳಸಿಕೊಳ್ಳುವ ಮೂಲಕ ಉತ್ತಮ ಬದುಕು ರೂಪಿಸಿಕೊಳ್ಳಿ ಎಂದು ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರಭಾಕರ್ ಶೆಟ್ಟಿ ಕೊಂಡಳ್ಳಿ ಹೇಳಿದರು. ಅವರು ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಆಯೋಜಿಸಿದ ಜೀವನ ಮೌಲ್ಯ ಉಪನ್ಯಾಸ ಮಾಲಿಕೆ 9ರ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ, ಆಡಳಿತ ನಿಕಾಯಕರು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ರಕ್ಷಿತ್ ರಾವ್ ಗುಜ್ಜಾಡಿ ಮತ್ತು ರೇಷ್ಮಾ ಶೆಟ್ಟಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ದೀಕ್ಷಾ ಅತಿಥಿಗಳನ್ನು ಪರಿಚಯಿಸಿ, ಪ್ರಥ್ವಿ ಸ್ವಾಗತಿಸಿ, ಪ್ರಥ್ವಿನಿ ವಂದಿಸಿ, ಅಭಿಷೇಕ್ ಪ್ರಾರ್ಥಿಸಿ, ನಿಶ್ಮಿತಾ ನಿರೂಪಿಸಿದರು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಗ್ರಾಮೀಣ ಭಾಗದ ಮಕ್ಕಳ ರಜಾ ದಿನಗಳ ಸದ್ಬಳಕೆಗಾಗಿ ಮತ್ತು ಸುಪ್ತ ಪ್ರತಿಭೆಯನ್ನು ಹೊರತರಲು  ಹಮ್ಮಿಕೊಳ್ಳಲಾಗಿದ್ದ  ಒಂದು ವಾರಗಳ ಕಾಲ ನಡೆದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರವು ಅತ್ಯಂತ ಯಶಸ್ವಿಯಾಗಿ ಜರುಗಿತು. ಹಾಲಾಡಿ ಗ್ರಾಮ ಪಂಚಾಯತ್, ಅರಿವು ಕೇಂದ್ರ ಹಾಗೂ ಜೆಸಿಐ ಹಾಲಾಡಿ ವಾರಾಹಿ ಇವರ ಜಂಟಿ ಸಹಭಾಗಿತ್ವದಲ್ಲಿ ನಡೆದ ಈ ವಿಶೇಷ ಶಿಬಿರದಲ್ಲಿ ಜೆಸಿಐ ಹಾಲಾಡಿ ವಾರಾಹಿ ಘಟಕದ ಅಧ್ಯಕ್ಷರಾದ ಜೆಸಿ ಪ್ರದೀಪ್ ಹಾಲಾಡಿ, ಕಾರ್ಯದರ್ಶಿಗಳಾದ ಅಶೋಕ್ ಆಚಾರಿ, ಜೆಸಿ ಸಂಯೋಜಕಿ ದೀಪಾ ಶೆಟ್ಟಿ, ನಿಕಟ ಪೂರ್ವ ಅಧ್ಯಕ್ಷರಾದ ಪ್ರವೀಣ್ ಬಾಳೆಕೋಡ್ಲು, ಉಪಾಧಕ್ಷ್ಯರಾದ ನಾಗೇಶ್ ಕಿಣಿ, ಸಹ ಕಾರ್ಯದರ್ಶಿ ಮಂಜುಳ ಶೆಟ್ಟಿ, ಪ್ರಶಾಂತ್ ಪೂಜಾರಿ, ಉಪಸ್ಥಿತರಿದ್ದರು. ಶಿಬಿರದಲ್ಲಿ ಮಕ್ಕಳಿಗೆ ವೈವಿಧ್ಯಮಯ ಮತ್ತು ಉಪಯುಕ್ತ ವಿಷಯಗಳ ಕುರಿತು ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಅತ್ಯುತ್ತಮವಾಗಿ ತರಬೇತಿ ನೀಡಿದ ಹೆಮ್ಮೆಯ ತರಬೇತುದಾರರಾದ: ಜೆಸಿ ಯೋಗೀಶ್ ದೇವಾಡಿಗ ಹಂಚಿನಮನೆ, ಜೆಸಿ ಪಲ್ಲವಿ ಪ್ರವೀಣ್ ಬಾಳೆಕೋಡ್ಲು ಅವರುಗಳು ಉಪಸ್ಥಿತರಿದ್ದರು. ಇವರ ನಿರಂತರ…

Read More