Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಬಾಳೆಬರೇ ರಾಜ್ಯ ಹೆದ್ದಾರಿ 52ರ ಬಾಳೆಬರೆ ಘಾಟಿಯಲ್ಲಿ ಏಪ್ರಿಲ್ 9 ರಂದು ತಡೆಗೋಡೆಯೊಂದಿಗೆ ರಸ್ತೆ ಅಗಲೀಕರಣ ಕಾಮಗಾರಿಯ ಇನ್ನುಳಿದ ಭಾಗದ ತಳಪಾಯದ ಕಾಮಗಾರಿಯನ್ನು ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಸುಮಾರು 12 ಮೀಟರ್ ಎತ್ತರದಲ್ಲಿ ಹಾಲಿ ಇರುವ ಕಾಂಕ್ರೀಟ್ ರಸ್ತೆಯ ಕೆಳಭಾಗದಲ್ಲಿ  ಸುಮಾರು 5 ಅಡಿ ಅಗಲದವರೆಗೆ ಮತ್ತೊಮ್ಮೆ ಭೂ ಕುಸಿತ ಉಂಟಾಗಿ ಕಾಂಕ್ರೀಟ್ ರಸ್ತೆಯ ಮೇಲ್ಮೆನಲ್ಲಿ ಅಲ್ಲಲ್ಲಿ ಬಿರುಕುಗಳು ಕಂಡುಬಂದಿದೆ. ಸುರಕ್ಷತಾ ದೃಷ್ಟಿಯಿಂದ ಹುಲಿಕಲ್ ಘಾಟ್ ವ್ಯಾಪ್ತಿಯ ಹೇರ್‌ಪಿನ್ ತಿರುವಿನಲ್ಲಿ ಪ್ರಸ್ತುತ ಕೈಗೊಳ್ಳುತ್ತಿರುವ ರಕ್ಷಣಾತ್ಮಕ ಕಾಮಗಾರಿಯ ಪೂರ್ಣಗೊಳ್ಳುವವರೆಗೆ, ಸಾರ್ವಜನಿಕ ಹಿತದೃಷ್ಟಿಯಿಂದ ಕೇಂದ್ರ ಮೋಟಾರು ವಾಹನ ಕಾಯ್ದೆ 1988 ರ ನಿಯಮ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮವಾಳಿಗಳು 1989 ರ ನಿಯಮ 221 (ಎ )(2) & (5) ರನ್ವಯ ತೀರ್ಥಹಳ್ಳಿ – ಕುಂದಾಪುರ ರಾಜ್ಯ ಹೆದ್ದಾರಿ 52 ರ ಬಾಳೆಬರೆ ಘಾಟ್‌ನ ಮೂಲಕ ಎಲ್ಲಾ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ರಕ್ಷಣಾತ್ಮಕ ಕಾಮಗಾರಿ ಪೂರ್ಣಗೊಳ್ಳುವವರೆಗೆ ಸದ್ರಿ ರಸ್ತೆಯಲ್ಲಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: 2026 ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗದಲ್ಲಿ 600ರಲ್ಲಿ 600 ಅಂಕಗಳನ್ನು ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ದಿಶಾ ಪೂಜಾರಿಯ ಮುಂದಿನ ವಿದ್ಯಾಭ್ಯಾಸಕ್ಕೆ ಮಹತ್ವದ ಬೆಂಬಲ ಲಭಿಸಿದೆ. ವಿಶ್ವ ಬಂಟರ ಪ್ರತಿಷ್ಠಾನದ ಮಹಾಪೋಷಕರಾದ ಡಾ. ಬಿ. ಆರ್. ಶೆಟ್ಟಿ ಅವರು ದಿಶಾ ಪೂಜಾರಿಯ ಸಂಪೂರ್ಣ ವಿದ್ಯಾಭ್ಯಾಸದ ಖರ್ಚನ್ನು ಭರಿಸುವುದಾಗಿ ಭರವಸೆ ನೀಡಿದ್ದಾರೆ. ಸೋಮವಾರ ಸಂಜೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ. ಮೋಹನ್ ಆಳ್ವರ ಕಚೇರಿಯಲ್ಲಿ ವಿಶ್ವ ಬಂಟರ ಪ್ರತಿಷ್ಠಾನದ ವತಿಯಿಂದ ದಿಶಾ ಅವರನ್ನು ಗೌರವಿಸಲಾಯಿತು. ಅವಳ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ ಡಾ. ಬಿ. ಆರ್. ಶೆಟ್ಟಿ, ದೂರವಾಣಿ ಮೂಲಕ ದಿಶಾಳೊಂದಿಗೆ ಮಾತನಾಡಿ, ಅಭಿನಂದನೆ ಸಲ್ಲಿಸಿದರು. ಜೊತೆಗೆ, ದಿಶಾಳ ಆಯ್ಕೆಯಂತೆ ಆಳ್ವಾಸ್ ಪದವಿ ಕಾಲೇಜಿನಲ್ಲಿ ಬಿ.ಕಾಂ ಶಿಕ್ಷಣ ಹಾಗೂ ನಂತರದ ಕನಸಾದ ಚಾರ್ಟರ್ಡ್ ಅಕೌಂಟೆಂಟ್ ಆಗುವವರೆಗಿನ ಶಿಕ್ಷಣ, ಊಟ ಮತ್ತು ವಸತಿಯ ಸಂಪೂರ್ಣ ವೆಚ್ಚವನ್ನು ಭರಿಸುವುದಾಗಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಭಗವಾನ್ ಬುದ್ಧ ಜಯಂತಿಯನ್ನು ಜಿಲ್ಲಾ ಮಟ್ಟದಲ್ಲಿ ಮೇ 01 ರಂದು ಅರ್ಥಪೂರ್ಣವಾಗಿ ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ತಿಳಿಸಿದರು. ಅವರು ಸೋಮವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ತಮ್ಮ ಕಚೇರಿಯಲ್ಲಿ ನಡೆದ ಭಗವಾನ್ ಬುದ್ಧ ಜಯಂತಿ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿವಿಧ ಜಯಂತಿ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ ಹಾಗೂ ಸಮಾಜಕ್ಕೆ ಕೊಡುಗೆ ನೀಡಿದ ಮಹನೀಯರ ಸಂದೇಶಗಳನ್ನು ಸಮಾಜಕ್ಕೆ ತಿಳಿಸಲು, ಅವರ ಜೀವನ ಮೌಲ್ಯಗಳನ್ನು ಸಮಾಜಕ್ಕೆ ನೀಡಲು ಹಾಗೂ ದಾರ್ಶನಿಕರ ಆಶಯಗಳನ್ನು ಈಡೇರಿಸುವ ನಿಟ್ಟಿನಲ್ಲಿ ಸರ್ಕಾರದ ವತಿಯಿಂದ ಜಯಂತಿ ಕಾರ್ಯಕ್ರಮಗಳನ್ನು ಆಚರಣೆ ಮಾಡಲಾಗುತ್ತಿದೆ ಎಂದರು. ಜಿಲ್ಲಾಡಳಿತ ಹಾಗೂ ಬುದ್ಧಿಸ್ಟ್ ಸೊಸೈಟಿ ಆಫ್ ಇಂಡಿಯಾ ಉಡುಪಿ ಇವರ ಸಹಯೋಗದಲ್ಲಿ ಮೇ.01ರಂದು ಭಗವಾನ್ ಬುದ್ಧ ಜಯಂತಿ ಕಾರ್ಯಕ್ರಮವನ್ನು ಉಡುಪಿಯ ಬೋರ್ಡ್ ಹೈಸ್ಕೂಲ್ ನಲ್ಲಿ ಬೆಳಗ್ಗೆ 10 ಗಂಟೆಗೆ ಆಚರಿಸಲಾಗುವುದು ಎಂದ ಅವರು, ಕಾರ್ಯಕ್ರಮದ ಯಶಸ್ಸಿಗೆ ರೂಪುರೇಷೆಗಳನ್ನು ಸಿದ್ಧಪಡಿಸಿಕೊಳ್ಳುವಂತೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟೇಶ್ವರ: ಕರ್ನಾಟಕ ಪಬ್ಲಿಕ್ ಸ್ಕೂಲ್, ಪ್ರೌಢಶಾಲಾ ವಿಭಾಗ, ಕೋಟೇಶ್ವರ ಇಲ್ಲಿನ ಪ್ರತಿಭಾವಂತ ವಿದ್ಯಾರ್ಥಿನಿ ಮಹಾಲಕ್ಷ್ಮಿ ಸಿ.ಜೆ. ಅವರು ದೆಹಲಿಯ ಮಹತ್ವದ ಸಂಸತ್ ಭವನದಲ್ಲಿ ನಡೆಯಲಿರುವ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಯ್ಕೆಯಾಗಿರುವುದು ಶಾಲೆಗೆ ಹಾಗೂ ರಾಜ್ಯಕ್ಕೆ ಹೆಮ್ಮೆಯ ವಿಷಯವಾಗಿದೆ. ದೇಶದ ವಿವಿಧ ಭಾಗಗಳಿಂದ ಆಯ್ಕೆಯಾದ ಕೇವಲ 11 ವಿದ್ಯಾರ್ಥಿಗಳಲ್ಲಿ, ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸುವ ಏಕೈಕ ವಿದ್ಯಾರ್ಥಿನಿಯಾಗಿ ಮಹಾಲಕ್ಷ್ಮಿ ಆಯ್ಕೆಯಾಗಿರುವುದು ವಿಶೇಷ ಸಾಧನೆಯಾಗಿದೆ. ಇವಳು ಎ.13ರಂದು ವಿಮಾನದ ಮೂಲಕ ದೆಹಲಿಗೆ ಪ್ರಯಾಣಿಸಲಿದ್ದಾರೆ. ಇವರ ಈ ಸಾಧನೆಗೆ ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ, ಪೋಷಕರು ಹಾಗೂ ಸಹಪಾಠಿಗಳು ಹರ್ಷ ವ್ಯಕ್ತಪಡಿಸಿ, ಮುಂದಿನ ದಿನಗಳಲ್ಲಿ ಇನ್ನಷ್ಟು ಉನ್ನತ ಸಾಧನೆಗಳನ್ನು ಸಾಧಿಸಲಿ ಎಂದು ಹಾರೈಸಿದ್ದಾರೆ. ಸಮಾಜ ಸೇವಕ ಡಾ. ಬಿ.ಆರ್. ಅಂಬೇಡ್ಕರ್ ಅವರ ಆದರ್ಶಗಳನ್ನು ಅಳವಡಿಸಿಕೊಂಡು, ದೇಶದ ಅಭಿವೃದ್ಧಿಗೆ ಕೊಡುಗೆ ನೀಡುವ ಪ್ರೇರಣೆಯಾಗಿ ಈ ಅವಕಾಶ ಪರಿಣಮಿಸಲಿ ಎಂದು ಆಶಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಸಮಾಜದ ಋಣ ತಿರಿಸಲು ಜೈ ಕುಂದಾಪ್ರ ಎಂಬ ಸಂಘಟನೆಗಳು ರಕ್ತದಾನದಂತಹ ಕಾರ್ಯಕ್ರಮಗಳ ಮೂಲಕ ಮನೆ ಮಾತಾಗಿ ಬೆಳೆದು ನಿಂತಿವೆ ಎಂದು ಕೋಟದ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ. ಕುಂದರ್ ಅಭಿಪ್ರಾಯಪಟ್ಟರು. ಅವರು ಭಾನುವಾರ ಕೋಟದಲ್ಲಿ ಕುಂದಾಪುರದ ಜೈ ಕುಂದಾಪ್ರ ಸೇವಾ ಟ್ರಸ್ಟ್ ದಶಮಾನೋತ್ಸವ ಕಾರ್ಯಕ್ರಮ ʼಜೈ ಕುಂದಾಪ್ರ ಸಂಭ್ರಮ-2026’ಎಂಬ ಶೀರ್ಷಿಕೆಯಡಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಸಮಾಜಕ್ಕೆ ಸದಾ ಸ್ಪಂದಿಸುವ ಸಂಘಟನೆಗಳಿಗೆ ಪ್ರೋತ್ಸಾಹ ನೀಡುವ ಕಾರ್ಯ ಮಾಡಬೇಕಿದೆ,ದಶಮಾನೋತ್ಸವಕ್ಕೆ ಅರ್ಥಗರ್ಭಿತವಾಗಿ ಕಾರ್ಯಕ್ರಮ ಆಯೋಜಿಸಿ ಪಂಚವರ್ಣದಂತಹ ಸಂಘಟನೆಗಳನ್ನು ಗುರುತಿಸುವ ಕಾಯಕ ಶ್ರೇಷ್ಠತೆಯನ್ನು ಪಡೆದುಕೊಂಡಿದೆ ಎಂದರು. ಇದೇ ವೇಳೆ ಕೋಟದ ಪಂಚವರ್ಣ ಸಂಘಟನೆಗೆ ಜೈ ಕುಂದಾಪ್ರ ಸೇವಾ ಪುರಸ್ಕಾರ ನೀಡಿ ಗೌರವಿಸಲಾಯಿತು. ವೇದಿಕೆಯಲ್ಲಿದ್ದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಸಾಮಾಜಿಕ ಕಾರ್ಯಕರ್ತ ಕೋಟ ಶ್ರೀಕಾಂತ್ ಶೆಣೈ, ಪ್ರಗತಿಪರ ಕೃಷಿಕ ರವೀಂದ್ರ ಐತಾಳ್, ಧಾರ್ಮಿಕ ಕ್ಷೇತ್ರದ ಭಾಸ್ಕರ ಸ್ವಾಮೀ ಅವರಿಗೆ ವಿಶೇಷ ಅಭಿನಂದನೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಅಶಕ್ತರಿಗೆ ನೆರವು,ವಿ ಲ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕರಾವಳಿಯ ವಿಶಿಷ್ಟ ಭಕ್ತಿ ಪರಂಪರೆಯಾದ ಕುಣಿತ ಭಜನೆಯನ್ನು ಯುವ ಪೀಳಿಗೆಗೆ ಪರಿಚಯಿಸುವ ಮತ್ತು ಕಲೆಯನ್ನು ಉಳಿಸುವ ಉದ್ದೇಶದಿಂದ  ಇದೇ ಏಪ್ರಿಲ್ 26 ರಂದು ಟೀಮ್ ಸಂಕೀರ್ತನಾ ಸಾಲಿಗ್ರಾಮ ಇವರ ನೇತೃತ್ವದಲ್ಲಿ ಶ್ರೀ ಗುರು ನರಸಿಂಹ ದೇವಸ್ಥಾನ ಸಾಲಿಗ್ರಾಮ ಆಡಳಿತ ಮಂಡಳಿ ಇವರ ಸಹಕಾರದೊಂದಿಗೆ ಸಾಲಿಗ್ರಾಮದ ಶ್ರೀ ಗುರು ನರಸಿಂಹ ದೇವಸ್ಥಾನದ ಆವರಣದಲ್ಲಿ ಅದ್ದೂರಿ ಕುಣಿತ ಭಜನಾ ಸ್ಪರ್ಧೆಯನ್ನು ಏರ್ಪಡಿಸಿದೆ. ಈ ಕಾರ್ಯಕ್ರಮದಲ್ಲಿ ಗುರುವಂದನೆ, ಭಜನಾ ಕ್ಷೇತ್ರದಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಇರ್ವರು ಹಿರಿಯ ಭಜನಾ ಗುರುಗಳನ್ನು ಗುರುತಿಸಿ ಅವರಿಗೆ ನಗದು ಪುರಸ್ಕಾರದೊಂದಿಗೆ ಸನ್ಮಾನ, ಸೇವೆಯ ಸಂಕಲ್ಪ ಈ ಕಾರ್ಯಕ್ರಮದ ಮೂಲಕ ಸಂಗ್ರಹವಾಗುವ ನಿಧಿಯ ಒಂದು ಭಾಗವನ್ನು ಸ್ಥಳೀಯ ನಿರಾಶ್ರಿತರ ಆಶ್ರಮಕ್ಕೆ ಸಹಾಯ ಹಸ್ತವಾಗಿ ನೀಡಲಿದೆ. ಪೋಸ್ಟರ್ ಬಿಡುಗಡೆ ತೆಕ್ಕಟ್ಟೆ ಶ್ರೀ ಗುರುರಾಘವೇಂದ್ರ ಮಂದಿರದಲ್ಲಿ ಜರಗಿತು. ಈ ಸಂದರ್ಭದಲ್ಲಿ ಮಂದಿರದ ಅರ್ಚಕರು, ಸಂಘಟಕರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಂತ್ರಿಕ ಶಿಕ್ಷಣ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಲು ಸಜ್ಜಾಗಿರುವ ಮೂಡ್ಲಕಟ್ಟೆಯ ಐಎಂಜೆ ಶಿಕ್ಷಣ ಸಂಸ್ಥೆಗಳ (IMJ Institutions) ಆವರಣದಲ್ಲಿ ಐಎಂಜೆ ಇನ್‌ಸ್ಟಿಟ್ಯೂಟ್ ಆಫ್ ರಿಸರ್ಚ್ (IMJIR) ನ ಉದ್ಘಾಟನಾ ಸಮಾರಂಭವು  ಯಶಸ್ವಿಯಾಗಿ ಜರುಗಿತು. ಈ ಐತಿಹಾಸಿಕ ಸಂದರ್ಭದ ಅಂಗವಾಗಿ “ಕ್ವಾಂಟಮ್ ಕಂಪ್ಯೂಟೇಶನ್, ಪ್ರಿಸಿಶನ್ ಇನ್ಸ್ಟ್ರುಮೆಂಟೇಶನ್ ಮತ್ತು ಎಮರ್ಜಿಂಗ್ ರಿಸರ್ಚ್ ಇನ್ಫ್ರಾಸ್ಟ್ರಕ್ಚರ್ಸ್” (Q-PIER 2026) ಎಂಬ ವಿಷಯದ ಕುರಿತು ಎರಡು ದಿನಗಳ ರಾಷ್ಟ್ರೀಯ ಮಟ್ಟದ ಶೃಂಗಸಭೆಯನ್ನು ಏರ್ಪಡಿಸಲಾಗಿದೆ. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಟಿಐಎಫ್‌ಆರ್ (TIFR) ಹೈದರಾಬಾದ್ ಇದರ ನಿರ್ದೇಶಕರಾದ ಎಂ. ಕೃಷ್ಣಮೂರ್ತಿ ಅವರು ಕ್ವಾಂಟಮ್ ಕಂಪ್ಯೂಟೇಶನ್ ಈ‌ ಒಂದು ಕ್ಷೇತ್ರದ ಪ್ರಾಮುಖ್ಯತೆಯನ್ನು ತಿಳಿಸಿದಲ್ಲದೆ ಪ್ರಸಕ್ತ ಅನ್ವೇಷಣಾ ವಲಯದಲ್ಲಿ ಇದರ ಕ್ರಾಂತಿಯ ಬಗ್ಗೆ ಒತ್ತಿ ಹೇಳಿದರು ಮತ್ತು ಮೂಡ್ಲಕಟ್ಟೆಯಲ್ಲಿ ಈ ಸಂಶೋಧನಾ ಕ್ಷೇತ್ರ ಸ್ಥಾಪಿಸಿರುವುದು ನಿಜವಾಗಿಯೂ ಶ್ಲಾಘನೀಯ ಎಂದು ಅಬಿನಂದಿಸಿದರು. ದಿಕ್ಸೂಚಿ ಭಾಷಣಕಾರರಾಗಿ ಆಗಮಿಸಿದ ಪ್ರೊಪೆಸರ್ ಸಪ್ತರ್ಷಿ ಚೌಧರಿ ಅವರು ಮಾತನಾಡಿ, ನ್ಯಾಷನಲ್ ಕ್ವಾಂಟಮ್ ಮಿಶನ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: 2025-26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ 9ನೇ ರ‍್ಯಾಂಕ್‌ ಪಡೆದ ಸಿಂಧು ಖಾರ್ವಿ ಮತ್ತು ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ 9ನೇ ರ‍್ಯಾಂಕ್‌ ಪಡೆದ ಪ್ರತೀಕ್ ಕೊಠಾರಿ ಅವರನ್ನು ಜಿ.ಎಸ್.ವಿ.ಎಸ್.ಅಸೋಸಿಯೇಶನ್ ಗಂಗೊಳ್ಳಿ ಮತ್ತು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜು ವತಿಯಿಂದ ಅವರ ಸ್ವಗೃಹದಲ್ಲಿ ಪ್ರತ್ಯೇಕವಾಗಿ ಶನಿವಾರ ಸನ್ಮಾನಿಸಿ ಗೌರವಿಸಲಾಯಿತು. ಜಿ.ಎಸ್.ವಿ.ಎಸ್.ಅಸೋಸಿಯೇಶನ್ ಅಧ್ಯಕ್ಷ ಡಾ. ಕಾಶೀನಾಥ ಪೈ, ಕಾರ್ಯದರ್ಶಿ ಎಚ್. ಗಣೇಶ ಕಾಮತ್, ಖಜಾಂಚಿ ಎನ್. ಅಶ್ವಿನ್ ನಾಯಕ್, ಕಾಲೇಜಿನ ಸಂಚಾಲಕ ಎನ್. ಸದಾಶಿವ ನಾಯಕ್ ಮತ್ತು ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ.ಸಿ. ಅವರು ರ‍್ಯಾಂಕ್‌ ವಿಜೇತ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳನ್ನು ಗೌರವಿಸಿ ಅಭಿನಂದಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಾಗೂ ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ಆಯೋಜಿಸಲಾದ ರಾಜ್ಯಮಟ್ಟದ ಅಭಿನಯ ಪ್ರಧಾನ ಚಿಣ್ಣರ ಮೇಳದ ಉದ್ಘಾಟನೆ ಭಾನುವಾರ ಕನ್ನಡ ಭವನದಲ್ಲಿ ಜರುಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅವರು, ಜೀವನದಲ್ಲಿ ಲವಲವಿಕೆ ಮತ್ತು ಸಮಯಪ್ರಜ್ಞೆ ಅತ್ಯಂತ ಮುಖ್ಯವೆಂದು ತಿಳಿಸಿದರು. ಡಾ. ಜೀವನ್ ರಾಂ ಸುಳ್ಯ ಅವರ ನಿರ್ದೇಶನದಲ್ಲಿ ನಡೆಯುತ್ತಿರುವ ಈ ರೀತಿಯ ಶಿಬಿರಗಳು ಮಕ್ಕಳ ಸಮಗ್ರ ಅಭಿವೃದ್ಧಿಗೆ ಬಹಳ ಉಪಯೋಗಕಾರಿಯಾಗಿವೆ ಎಂದು ಹೇಳಿದರು. ತಮ್ಮ ಬಾಲ್ಯದ ಅನುಭವವನ್ನು ಹಂಚಿಕೊಂಡ ಅವರು, “ನಾನು ಚಿಕ್ಕವನಾಗಿದ್ದಾಗ ನನ್ನ ತಂದೆ-ತಾಯಿಗೆ ಇಂತಹ ಚಟುವಟಿಕೆಗಳಲ್ಲಿ ಹೆಚ್ಚಿನ ಆಸಕ್ತಿ ಇರಲಿಲ್ಲ. ನಾಲ್ಕನೇ ತರಗತಿಯಿಂದಲೇ ಹಾಸ್ಟೆಲ್ ಜೀವನ ಆರಂಭಿಸಿ ಸ್ವತಂತ್ರವಾಗಿ ಬೆಳೆಯುವ ಅವಕಾಶ ನನಗೆ ದೊರಕಿತು. ಸಾಂಸ್ಕೃತಿಕ ವೇದಿಕೆಗಳ ಮೂಲಕ ಫಿಲಿಫೈನ್ಸ್, ಜಪಾನ್, ಇಂಗ್ಲೆಂಡ್ ಸೇರಿದಂತೆ ಹಲವು ದೇಶಗಳಿಗೆ ತೆರಳಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದೇನೆ. ಆದರೆ ನನ್ನ ತಂದೆ-ತಾಯಂದಿರು ನನ್ನ ಕಾರ್ಯಕ್ರಮಗಳನ್ನು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸಂಜಯ ಗಾಂಧಿ ಚಾರಿಟೇಬಲ್ ಟ್ರಸ್ಟ್ ಹಾಗೂ ಸಂಜಯ ಗಾಂಧಿ ಇಂಗ್ಲಿಷ್ ಮೀಡಿಯಂ ಶಾಲೆ ಅಂಪಾರು ಇವುಗಳು ಅಪೂರ್ವ ಪುಣ್ಯಕ್ಷಣಕ್ಕೆ ಸಾಕ್ಷಿಯಾದವು. ಜಗದ್ಗುರುಗಳಾದ ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು ತಮ್ಮ ಪವಿತ್ರ ಪಾದಾರವಿಂದಗಳಿಂದ ಶಾಲೆಯನ್ನು ಪಾವನಗೊಳಿಸಿ, ಸಂಪೂರ್ಣ ಸಂಸ್ಥೆಗೆ ದೈವಿಕ ಆಶೀರ್ವಾದವನ್ನು ನೀಡಿದರು. ಈ ಮಹತ್ವದ ಕಾರ್ಯಕ್ರಮವನ್ನು ವೇದಮೂರ್ತಿ ವಿದ್ವಾನ್ ವಾಸುದೇವ ಜೋಯಿಸರು ತಟ್ಟುವಟ್ಟು ಹಾಲಾಡಿ ಅವರ ಮಾರ್ಗದರ್ಶನದಲ್ಲಿ ಅತ್ಯಂತ ಭಕ್ತಿಭಾವದಿಂದ ಆಯೋಜಿಸಲಾಯಿತು. ಶ್ರೀ ಗುರುಗಳನ್ನು ಸಂಜಯ ಗಾಂಧಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಸಂತೋಷ್ ಕುಮಾರ್ ಶೆಟ್ಟಿ ಬಲಾಡಿ, ಕಾರ್ಯದರ್ಶಿ ನವೀನ್ ಶೆಟ್ಟಿ, ಖಜಾಂಚಿ ಕೊಡ್ಲಾಡಿ ಸುಭಾಷ್‌ಚಂದ್ರ ಶೆಟ್ಟಿ, ಟ್ರಸ್ಟ್ ನ ನಿರ್ದೇಶಕರಾದ ಅಂಪಾರು ಕಿರಣ್ ಹೆಗ್ಡೆ ಹಾಗೂ ಉಮೇಶ್ ಕೊಠಾರಿ ಅವರು ಭಕ್ತಿಪೂರ್ವಕವಾಗಿ ಸ್ವಾಗತಿಸಿದರು. ಕೊಡ್ಲಾಡಿ ಕೃಷ್ಣ ಮೂರ್ತಿ ಅಡಿಗ ಬಳಗದವರಿಂದ ವೇಧಘೋಷದೊಂದಿಗೆ ಪೂರ್ಣ ಕುಂಭ ಸ್ವಾಗತ ನೀಡಲಾಯಿತು. ಕಾರ್ಯಕ್ರಮದ ಸಂದರ್ಭದಲ್ಲಿ ವಿದ್ಯಾರ್ಥಿಗಳು ಶ್ರೀಗಳ ಸಮ್ಮುಖದಲ್ಲಿ ಭಗವದ್ಗೀತೆಯ ಶ್ಲೋಕಗಳನ್ನು ಪಠಿಸಿ ಎಲ್ಲರ…

Read More