Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ  ಭಂಡಾರ್ಕಾರ್ಸ್ ಕಾಲೇಜು ಹಳೆ ವಿದ್ಯಾರ್ಥಿಗಳ ಕುಸ್ತಿ ಸಂಘದ ಪ್ರಾಯೋಜಕತ್ವದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಸಹಯೋಗದೊಂದಿಗೆ ನಡೆದ ವಿಶ್ವವಿದ್ಯಾನಿಲಯ ಮಟ್ಟದ ಪುರುಷರ ಅಂತರ್ ಕಾಲೇಜು ಕಬ್ಬಡಿ (ಉಡುಪಿ ವಲಯ) ಪಂದ್ಯಾವಳಿಯ ಅಂತಿಮ ಪಂದ್ಯದ ಹಣಾಹಣಿಯಲ್ಲಿ ಮೂಡುಬಿದಿರೆಯ ಆಳ್ವಾಸ್ ಕಾಲೇಜು ಚಾಂಪಿಯನ್ ಪ್ರಶಸ್ತಿ ಪಡೆಯಿತು. ರನ್ನರ್ ಆಫ್ ಪ್ರಶಸ್ತಿಯನ್ನು ಜಿ.ಎಫ್.ಜಿ.ಸಿ ತೆಂಕನಿಡಿಯೂರು ಪಡೆಯಿತು. ತೃತೀಯ ಸ್ಥಾನವನ್ನು ಮಹಾವೀರ ಕಾಲೇಜು ಮೂಡುಬಿದರೆ ಪಡೆಯಿತು. ಚತುರ್ಥ ಸ್ಥಾನವನ್ನು ಆಥಿತೇಯ ಭಂಡಾರ್ಕಾರ್ಸ್ ಕಾಲೇಜು ಕುಂದಾಪುರ ಪಡೆಯಿತು. ಅತ್ತ್ಯುತ್ತಮ ರೈಡರ್ ಪ್ರಶಸ್ತಿಯನ್ನು ಆತಿಥೇಯ ಭಂಡಾರ್ಕಾರ್ಸ್ ಕಾಲೇಜಿನ ನಿತಿನ್, ಅತ್ಯುತ್ತಮ ಡಿಫೆಂಡರ್ ಪ್ರಶಸ್ತಿಯನ್ನು ಜಿ.ಎಫ್.ಜಿ.ಸಿ ತೆಂಕನಿಡಿಯೂರು ಇಲ್ಲಿನ ಅನಿಶ್, ಮತ್ತು ಅತ್ಯುತ್ತಮ ಅಲ್ ರೌಂಡರ್ ಪ್ರಶಸ್ತಿಯನ್ನು ಆಳ್ವಾಸ್ ಕಾಲೇಜಿನ ವರುಣ್ ಪಡೆದರು. ಬಹುಮಾನ ವಿತರಣೆ ಮತ್ತು ಸಮಾರೋಪ ಸಮಾರಂಭದ ಅತಿಥಿಗಳಾಗಿ ಆಗಮಿಸಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಕಬಡ್ಡಿ ತಂಡದ ಮಾಜಿ ನಾಯಕ ರಾಜೇಂದ್ರ ಸುವರ್ಣ ಮಾತನಾಡಿ ಗ್ರಾಮೀಣ ಪ್ರತಿಭೆಗಳು ಕಬಡ್ಡಿ ಕ್ರೀಡೆಯಲ್ಲಿ ತಮ್ಮನ್ನು ತಾವು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಹೆನ್ನಾಬೈಲ್ ಈದ್ಗಾ ಮೈದಾನದಲ್ಲಿ ಈದ್ ಉಲ್ ಫಿತ್ರ್ ಪ್ರಾರ್ಥನೆಯು ಧರ್ಮಗುರು ಮೌಲಾನಾ ಅಬ್ದುಲ್ ಹಫೀಜ್ ರಜ್ವಿ ಅವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಪ್ರಾರ್ಥನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು “ರಂಜಾನ್ ತಿಂಗಳ ಉಪವಾಸ, ದಾನ, ಆರಾಧನೆಗಳೆಲ್ಲವೂ ಆರಾಧಕನನ್ನು ಆರಾಧ್ಯನ ಸಂಪರ್ಕಕ್ಕೆ ತಂದು ಸಂತುಷ್ಟಗೊಳಿಸುವ ಪ್ರಕ್ರಿಯೆಗಳು. ಆಧ್ಯಾತ್ಮದಲ್ಲಿ ದೇವನ ಸಂತೋಷ- ಸಂಪ್ರೀತಿಗಳು, ಆತನು ಸೃಷ್ಟಿಸಿದ ಸೃಷ್ಟಿಗೆ ನಾವು ಹೇಗೆ ಸ್ಪಂದಿಸುತ್ತೇವೆ ಮತ್ತು ಸೃಷ್ಟಿಯ ಭಾಗವಾಗಿ ನಮ್ಮನ್ನು ಸೃಷ್ಟಿಸಿ ಸಲಹಿದ್ದಕ್ಕಾಗಿ ಕೃತಜ್ಞತೆಯನ್ನು ಹೇಗೆ ಅರ್ಪಿಸುತ್ತೇವೆ ಎಂಬುದರ ಮೇಲಿದೆ. ದೇವನೊಂದಿಗಿನ ಅನುಸಂಧಾನವು ಅನುಸರಣೆಯ ಪಕ್ವತೆಯನ್ನು ಅವಲಂಬಿಸಿದೆ. ದಾನದಿಂದ ಸಂಪತ್ತು ಬರಿದಾಗುವುದಿಲ್ಲ, ಅದು ಅವಘಡಗಳಿಂದಲೂ ಮನುಷ್ಯನನ್ನು ರಕ್ಷಿಸುತ್ತದೆ ಎನ್ನುವುದು ದೇವವಾಣಿ. ದಾನವನ್ನು ಇಸ್ಲಾಮ್ ಧರ್ಮ ಬೋಧಿಸಿದ ರೀತಿಯಲ್ಲಿ ಗಂಭೀರವಾಗಿ ಪರಿಗಣಿಸಿ ನೀಡಿದರೆ ಅದರ ಪ್ರತಿಫಲ ಪ್ರತ್ಯಕ್ಷವಾಗಿ ಕಾಣಬಹುದು. ದೇವನ ಅಸ್ತಿತ್ವ ಮತ್ತು ಪ್ರಭಾವವನ್ನು ಪ್ರಾಯೋಗಿಕವಾಗಿ ಅರಿಯಬೇಕಿದ್ದರೆ, ದೇವ ನಿಯಮಗಳನ್ನು ಸುಸೂತ್ರವಾಗಿ ಪಾಲಿಸುವುದು ಅಗತ್ಯವಾಗಿರುತ್ತದೆ. ಉಪವಾಸ ಕೇವಲ ದೇಹದ ಬಳಲಿಕೆಗೆ ಇರುವುದಲ್ಲ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಎಷ್ಟೇ ಶ್ರೀಮಂತರಾಗಿದ್ದರೂ, ಎಷ್ಟೇ ಅಹಂಕಾರ ಇದ್ದರೂ, ಸಮಾಜದಲ್ಲಿ ಅತ್ಯುನ್ನತ ಸ್ಥಾನದಲ್ಲಿದ್ದರೂ ಕೊನೆಗೆ ಬರಬೇಕಾದುದು ಸ್ಮಶಾನಕ್ಕೆ. ಸ್ಮಶಾನದ ಬಗ್ಗೆ ಕೆಲವರಿಗೆ ಬೇರೆ ರೀತಿಯ ಭಾವನೆ ಇದ್ದು, ಸ್ಮಶಾನವನ್ನು ಯಾವ ರೀತಿ ಕಾಣಬೇಕೋ ಆ ರೀತಿಯಲ್ಲೇ ಕಾಣಬೇಕು. ಶಿವನ ಆಲಯ ಇರುವ ಸ್ಮಶಾನವನ್ನು ಅಭಿವೃದ್ಧಿಗೊಳಿಸಿ, ಸಂಪ್ರದಾಯದಂತೆ ಆ ಪವಿತ್ರ ಸ್ಥಳದಲ್ಲಿ ಶಿವನ ಮೂರ್ತಿಯನ್ನು ಪ್ರತಿಷ್ಠಾಪಿಸಿರುವುದು ಉತ್ತಮ ಕಾರ್ಯ ಎಂದು ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಹೇಳಿದರು. ಅವರು ಗ್ರಾಮ ಪಂಚಾಯತ್ ಗಂಗೊಳ್ಳಿ, ಶಾಸಕರ ಪ್ರದೇಶಾಭಿವೃದ್ಧಿ ನಿಧಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ದಾನಿಗಳ ಸಹಕಾರದಿಂದ ಪುನರ್ ನಿರ್ಮಾಗೊಂಡ ಗಂಗೊಳ್ಳಿಯ ಮಲ್ಯರಬೆಟ್ಟು ಸಾರ್ವಜನಿಕ ಹಿಂದು ರುದ್ರಭೂಮಿ ’ಮುಕ್ತಿ ಧಾಮವನ್ನು ಗುರುವಾರ ಲೋಕಾರ್ಪಣೆಗೊಳಿಸಿ, ನೂತನವಾಗಿ ನಿರ್ಮಿಸಿದ ಶಿವನ ಮೂರ್ತಿಯನ್ನು ಅನಾವರಣಗೊಳಿಸಿ ಮಾತನಾಡಿದರು. ಪುರೋಹಿತರಾದ ಜಿ. ರವೀಶ್ ಭಟ್ ಧಾರ್ಮಿಕ ವಿಧಿವಿಧಾನ ನೆರವೇರಿಸಿ ಆಶೀರ್ವದಿಸಿದರು. ಜಿ. ರಾಮಪ್ಪ ಖಾರ್ವಿ ದಂಪತಿ ಧಾರ್ಮಿಕ ವಿಧಿವಿಧಾನಗಳಲ್ಲಿ ಪಾಲ್ಗೊಂಡಿದ್ದರು. ಗಂಗೊಳ್ಳಿ ಗ್ರಾಪಂ. ಅಧ್ಯಕ್ಷೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಭಾರತ ಸರ್ಕಾರದ ಆಯುಷ್ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುವ ರಾಷ್ಟ್ರೀಯ ಆಯುರ್ವೇದ ವಿದ್ಯಾಪೀಠದ  29ನೇ ಪದವಿ ಪ್ರದಾನ ಸಮಾರಂಭವು ಉತ್ತರ ಪ್ರದೇಶದ ವಾರಾಣಸಿಯ ಬನಾರಸ್ ಹಿಂದೂ ವಿವಿಯಲ್ಲಿ ಇತ್ತೀಚೆಗೆ ನಡೆಯಿತು.ಈ ಸಂದರ್ಭದಲ್ಲಿ ಖ್ಯಾತ ಆಯುರ್ವೇದ ಹಾಗೂ ಶಿಕ್ಷಣ ತಜ್ಞ ಡಾ. ಎಮ್. ಮೋಹನ್ ಆಳ್ವಾರಿಗೆ “ಫೆಲೋ ಆಫ್ ರಾಷ್ಟ್ರೀಯ ಆಯುರ್ವೇದ ವಿದ್ಯಾಪೀಠ (FRAV)” ಎಂಬ ಪ್ರತಿಷ್ಠಿತ ಗೌರವ ಪ್ರದಾನಿಸಲಾಯಿತು. ಈ ಗೌರವವನ್ನು ಆಯುರ್ವೇದ ಕ್ಷೇತ್ರದಲ್ಲಿ ದೀರ್ಘಕಾಲ ಸೇವೆ, ಸಂಶೋಧನೆ, ಶಿಕ್ಷಣ ಹಾಗೂ ಪರಂಪರೆಯ ಸಂರಕ್ಷಣೆಯಲ್ಲಿ ವಿಶೇಷ ಸಾಧನೆ ಮಾಡಿದ ಗಣ್ಯರಿಗೆ ನೀಡಲಾಗುತ್ತದೆ. ಡಾ. ಆಳ್ವರು ಈ ಎಲ್ಲಾ ಕ್ಷೇತ್ರಗಳಲ್ಲಿ ಸಲ್ಲಿಸಿದ ಮಹತ್ವದ ಕೊಡುಗೆಯನ್ನು ಪರಿಗಣಿಸಿ ಈ ಗೌರವಕ್ಕೆ ಆಯ್ಕೆ ಮಾಡಲಾಗಿದೆ. ಡಾ. ಆಳ್ವರು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮೂಲಕ ಆಯುರ್ವೇದ ವೈದ್ಯಕೀಯ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರಗಳನ್ನು ಸ್ಥಾಪಿಸಿ, ಅನೇಕ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಮತ್ತು ತರಬೇತಿ ನೀಡುತ್ತಿದ್ದಾರೆ. ಆಯುರ್ವೇದ ಆರೋಗ್ಯ ಸೇವೆಯನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಪ್ರಮುಖ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರದಂದು ಯುಕೆಜಿ ವಿದ್ಯಾರ್ಥಿಗಳ ಪದವಿ ಪ್ರದಾನ ಸಮಾರಂಭವು ಸಡಗರದಿಂದ ಸಂಪನ್ನಗೊಂಡಿತು. ಮಕ್ಕಳ ಪ್ರಾರಂಭಿಕ ವಿದ್ಯಾಭ್ಯಾಸದ ಪಯಣವನ್ನು ಸಂಭ್ರಮಿಸುವ ಈ ಸಮಾರಂಭದಲ್ಲಿ ಪುಟಾಣಿ ವಿದ್ಯಾರ್ಥಿಗಳು ಅಭಿನಂದನೆಗೆ ಪಾತ್ರರಾದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಆತ್ರಾಡಿಯ ವಿಜಯ ಮಕ್ಕಳ ಕೂಟ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲರಾದ ದೀಪಿಕಾ ಸುಭಾಷ್ ಶೆಟ್ಟಿ, ಅವರು ಮಕ್ಕಳಿಗೆ ಪದವಿ ಪ್ರಮಾಣಪತ್ರ ವಿತರಿಸಿ, ಅವರ ಶೈಕ್ಷಣಿಕ ಪ್ರಗತಿಯು ಸುಗಮವಾಗಲೆಂದು ಶುಭ ಹಾರೈಸಿದರು. ತಮ್ಮ ಅತಿಥಿ ಭಾಷಣದಲ್ಲಿ, “ಮನೆಯೇ ಮೊದಲ ಪಾಠಶಾಲೆ, ಮಕ್ಕಳಿಗೆ ಸಂಸ್ಕಾರ ಕಲಿಸುವುದರಲ್ಲಿ ಪೋಷಕರ ಪಾತ್ರ ಮಹತ್ವದ್ದಾಗಿದೆ. ಶಿಸ್ತು, ಸಂಯಮ, ಭಕ್ತಿ-ಭಾವ, ಗುರು ಹಿರಿಯರನ್ನು ಗೌರವಿಸುವುದು ಮುಂತಾದ ಮೌಲ್ಯಗಳನ್ನು ಬೆಳೆಸುವಲ್ಲಿ ಶಿಕ್ಷಕರೊಂದಿಗೆ ಎಲ್ಲಾ ಪಾಲಕ/ಪೋಷಕರು ಕೈ ಜೋಡಿಸಿದರೆ ಮಾತ್ರ ಸಂಸ್ಕಾರಭರಿತ ಮಗುವೊಂದು ಬೆಳೆಯಲು ಸಾಧ್ಯವಾಗುತ್ತದೆ ಎಂದರು. ಮಕ್ಕಳನ್ನು ಶಾಲೆಗೆ ಕಳುಹಿಸಿದ ಮೇಲೆ ಪೋಷಕರ ಜವಾಬ್ದಾರಿ ಮುಗಿಯಿತೆಂದು ಭಾವಿಸದೇ, ಆ ಕ್ಷಣದಿಂದಲೇ ಪೋಷಕರ ಜವಾಬ್ದಾರಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲೆಯ ಬ್ಯಾಂಕುಗಳು ಆರ್ಥಿಕ ವರ್ಷದಲ್ಲಿ ಆರ್.ಬಿ.ಐ ಮಾರ್ಗಸೂಚಿ ಅನ್ವಯ ನೀಡಿರುವ ಗುರಿಗಳನ್ನು ಸಾಧಿಸುವ ಕಾರ್ಯವನ್ನು ಆದ್ಯತೆಯ ಮೇಲೆ ಕೈಗೊಳ್ಳಬೇಕೆಂದು ಆರ್.ಬಿ.ಐ ಎ.ಜಿ.ಎಂ ನಿಶಾ ಠಾಕೂರ್ ಬ್ಯಾಂಕಿನ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಲೀಡ್ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ಹೆಬ್ರಿ ತಾಲೂಕಿಗೆ ಸಂಬಂಧಿಸಿದಂತೆ ಬ್ಯಾಂಕಿಂಗ್ ವ್ಯವಹಾರದಲ್ಲಿ ಹಾಗೂ ಬ್ಯಾಂಕ್‌ಗಳ ಶಾಖೆಗಳ ಸಂಖ್ಯೆ ಕಡಿಮೆ ಇದೆ. ಈ ವ್ಯಾಪ್ತಿಯ ಬ್ಯಾಂಕ್‌ನ ಅಧಿಕಾರಿಗಳು ವ್ಯವಹಾರವನ್ನು ಹೆಚ್ಚಿಸಲು ಗಮನಹರಿಸಬೇಕು. ಬ್ಯಾಂಕಿನಿಂದ ದೊರೆಯುವ ಸಾಲ, ಸಹಾಯಧನ ಸೌಲಭ್ಯಗಳ ಬಗ್ಗೆ ಗ್ರಾಹಕರಿಗೆ ಮಾಹಿತಿ ನೀಡುವ ಕಾರ್ಯಕ್ರಮಗಳನ್ನು ಆಯೋಜಿಸುವುದರೊಂದಿಗೆ ಬ್ಯಾಂಕಿಂಗ್ ವ್ಯವಹಾರದ ವಿಸ್ತರಣೆಗೆ ಮುಂದಾಗಬೇಕು ಎಂದರು. ಬ್ಯಾಂಕಿಂಗ್ ಠೇವಣಿ ಅನುಪಾತವು ಕಳೆದ ಬಾರಿ ಶೇ.48.47 ಇದ್ದು, ಪ್ರಸಕ್ತ ಸಾಲಿನಲ್ಲಿ ಶೇ.49.54 ರಷ್ಟು ಹೆಚ್ಚಾಳವಾಗುದರೊಂದಿಗೆ ಶೇ. 1.07 ರಷ್ಟು ಏರಿಕೆ ಕಂಡಿದೆ ಎಂದ ಅವರು, ಮುಂದಿನ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಶಾಲಾ ಮಕ್ಕಳಲ್ಲಿ ವೈಜ್ಞಾನಿಕ ಸೃಜನಶೀಲತೆ ಮತ್ತು ನವೀನ ಆಲೋಚನೆಗಳನ್ನು ಉತ್ತೇಜಿಸುವ ಗುರಿಯನ್ನು ಹೊಂದಿರುವ  ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ (DST) ಮತ್ತು ನ್ಯಾಷನಲ್ ಇನ್ನೋವೇಶನ್ ಫೌಂಡೇಶನ್ (NIF) ಜಂಟಿಯಾಗಿ ಆಯೋಜಿಸುವ  ಇನ್‌ಸ್ಪಾಯರ್‌ ಅವಾರ್ಡ್ ಸ್ಪರ್ಧೆಗೆ ಗಂಗೊಳ್ಳಿಯ ಕೊಂಚಾಡಿ ರಾಧಾ ಶೆಣೈ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿಯ ವಿದ್ಯಾರ್ಥಿ ಸಂಜಿತ್ ಎಂ. ದೇವಾಡಿಗ ಆಯ್ಕೆಯಾಗಿದ್ದಾನೆ. ಸಂಜಿತ್ ರಸ್ತೆ ಅಪಘಾತ ತಡೆ ಮತ್ತು ಸುರಕ್ಷತಾ ಕ್ರಮಗಳ ಮಾಡೆಲ್ ಪ್ರದರ್ಶಿಸಿದ್ದ. ಈತ ಗಂಗೊಳ್ಳಿಯ ಸ್ಯಾಕ್ಸೋಫೋನ್ ಕಲಾವಿದ ಮಾಧವ ದೇವಾಡಿಗ ಹಾಗೂ ಉಪನ್ಯಾಸಕಿ ಸಾವಿತ್ರಿ ಎಸ್. ದಂಪತಿ ಅವರ ಪುತ್ರ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ತಾಂತ್ರಿಕ ಕಾಲೇಜು ಮತ್ತು ಲಯನ್ಸ್ ಕ್ಲಬ್ ಹಂಗಳೂರು ಇವರ ಸಹಭಾಗಿತ್ವದಲ್ಲಿದಲ್ಲಿ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ, ಇವರ ಸಹಕಾರದೊಂದಿಗೆ ಸ್ವಯಂ ಪ್ರೇರಿತ “ಬೃಹತ್ ರಕ್ತದಾನ ಶಿಬಿರ” ಜರುಗಿತು. ರಕ್ತದಾನವು ಮಾನವೀಯತೆಯ ಅತ್ತ್ಯುತ್ತಮ ಸೇವೆಯಾಗಿದೆ. ಅನೇಕರ ಜೀವನಗಳಿಗೆ ಆಶಯಗಳನ್ನು ಒದಗಿಸುವಂತದ್ದು. ಜ್ಯೋತಿ ಬೆಳಗಿಸಿ, ಪ್ರಾರ್ಥನಾ ಗೀತೆ ಹಾಡುವ ಮುಖಾಂತರ ಚಾಲನೆ ನೀಡಲಾಯಿತು. ಕಾರ್ಯಕ್ರಮದ ಮುಖ್ಯ ಅಥಿತಿಯಾಗಿ ಆಗಮಿಸಿದ್ದ ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷರಾದ ಎಸ್. ಜಯಶಂಕರ್ ಶೆಟ್ಟಿ ಅವರು ವಿದ್ಯರ್ಥಿಗಳಿಗೆ ರಕ್ತದಾನದ ಮಹತ್ವ ಮತ್ತು ಅದರಿಂದ ಆರೋಗ್ಯಕ್ಕಾಗುವ ಉಪಯೋಗಗಳನ್ನು ತಿಳಿಸಿದರು. ಜೊತೆಗೆ ನಾವು ಈ ಕಾಲೇಜಿನಲ್ಲಿ ಸತತ 10 ವರ್ಷ ಗಳಿಂದ ರಕ್ತದಾನ ಶಿಬಿರವನ್ನು ನಡೆಸುತ್ತ ಬಂದಿದ್ದೇವೆ ಎಂದು ಸಂತಸಪಟ್ಟರು. ನೀವು ನೀಡುವ ರಕ್ತವು ಎಷ್ಟೋ ರೋಗಿಗಳಿಗೆ ಹಾಗೂ ಸೈನಿಕರಿಗೆ ಸಹಾಯವಾಗುತ್ತದೆ ಎಂದು ತಿಳಿಸಿದರು. ಕಾರ್ಯಕ್ರಮದ ಮತ್ತೊರ್ವ ಅತಿಥಿಯಾಗಿದ್ದ ಲಯನ್ಸ್ ಕ್ಲಬ್ ನ ಅಧ್ಯಕ್ಷರಾದ ಸಂದೀಪ್ ಶೆಟ್ಟಿ ಅವರು ರಕ್ತದಾನ ಶ್ರೇಷ್ಠದಾನ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತಾಲೂಕಿನ ಪ್ರಥಮ ದರ್ಜೆ ಕಾಲೇಜಿನಲ್ಲಿ ಯುವನಿಧಿ ಮಾಹಿತಿ ಶಿಬಿರ ಕಾರ್ಯಕ್ರಮವನ್ನು ಬೈಂದೂರು ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷರ ಸಮ್ಮುಖದಲ್ಲಿ ಬುಧವಾರ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಗ್ಯಾರಂಟಿ ಸಮಿತಿ ಅಧ್ಯಕ್ಷರು ಮೋಹನ್ ಪೂಜಾರಿ ಅವರು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಯುವನಿದಿ ಬಗ್ಗೆ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಯೋಜನೆಯ ಮಾಹಿತಿ ಹಾಗು ಅದರ ಸದುಪಯೋಗವನ್ನು ವಿಸ್ತಾರವಾಗಿ ತಿಳಿಸಿದರು. ಪದವಿ ನಂತರ ಯೋಜನೆಯಲ್ಲಿ ಅಹ೯ ಅಭ್ಯರ್ಥಿಗಳು ನೋಂದಣಿಯಾಗುವಂತೆ ತಿಳಿಸಿದರು. ಕಾರ್ಯಕ್ರಮದಲ್ಲಿ ತಾಲೂಕು ಗ್ಯಾರಂಟಿ ಅಧ್ಯಕ್ಷರು ಮೋಹನ್ ಪೂಜಾರಿ ಸದಸ್ಯರು ಕಾಲೇಜಿನ ಪ್ರಾಂಶುಪಾಲರು ನಾಗರಾಜ್ ಶೆಟ್ಟಿ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಿಬ್ಬಂಧಿ ಪೃಥ್ವಿರಾಜ್ ಹಾಜರಿದ್ದರು. ಕಾರ್ಯಕ್ರಮದಲ್ಲಿ ಬೈಂದೂರು ಗ್ಯಾರಂಟಿ ಸಮಿತಿ ಸದಸ್ಯರಾದ ಮಾಲತಿ, ಸೂರ್ಯಕಾಂತಿ ನಾಗೇಶ್, ರಾಮಚಂದ್ರ ಖಾರ್ವಿ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಸಿಬ್ಬಂದಿ, ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು. ಉಪನ್ಯಾಸಕಿ ಸುಚಿತ್ರ ಸ್ವಾಗತಿಸಿ, ವಂದಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಬೆಂಗಳೂರಿನಲ್ಲಿ ನಡೆಯುತ್ತಿರುವ ರಾಜ್ಯ ವಿಧಾನ ಮಂಡಲದ ಬಜೆಟ್ಅಧಿವೇಶನನದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರು ಉಡುಪಿ ಜಿಲ್ಲೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಯ ಬಗ್ಗೆ ಹಲವಾರು ದಶಕಗಳಿಂದ ಸಾರ್ವಜನಿಕರಿಂದ ಬೇಡಿಕೆ ಇರುವ ವಿಚಾರ  ಸರಕಾರದ ಗಮನಕ್ಕೆ ಬಂದಿದೆಯೇ, ಬಂದಿದ್ದಲ್ಲಿ  ಉಡುಪಿ ಜಿಲ್ಲೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆ ಬಗ್ಗೆ ಸರಕಾರದ ನಿಲುವೇನು ಎಂದು ಚುಕ್ಕೆ ಗುರುತಿಲ್ಲದ ಪ್ರಶ್ನೆ ಕೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ  ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣ ಪ್ರಕಾಶ್  ಆರ್. ಪಾಟೀಲ್ ಅವರು ಉಡುಪಿ ಜಿಲ್ಲೆಯಲ್ಲಿ ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪನೆ ಬಗ್ಗೆ ಬೇಡಿಕೆ ಇರುವ ವಿಚಾರ ಗಮನಕ್ಕೆ ಬಂದಿದೆ. ರಾಜ್ಯದಲ್ಲಿ ಪ್ರತಿ ಜಿಲ್ಲೆಗೊಂದು ಸರ್ಕಾರಿ ವೈದ್ಯಕೀಯ ಕಾಲೇಜನ್ನು ಪ್ರಾರಂಭಿಸಬೇಕೆಂಬುದು ಸರ್ಕಾರದ ನೀತಿಯಾಗಿರುತ್ತದೆ. ಉಡುಪಿ ಜಿಲ್ಲೆಯೂ ಸೇರಿದಂತೆ ವೈದ್ಯಕೀಯ ಕಾಲೇಜುಗಳು ಇಲ್ಲದ ಜಿಲ್ಲೆಗಳಲ್ಲಿ ಪಿಪಿಪಿ ಮಾದರಿಯಲ್ಲಿ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸುವ ಬಗ್ಗೆ ಪೂರ್ವ ಭಾವಿ ಸಭೆಯನ್ನು  ನಡೆಸಲಾಗಿದ್ದು, iDECK ಸಂಸ್ಥೆಯನ್ನು Transaction Advisor…

Read More