ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಬಿಜೂರು ಗ್ರಾಮದ ಕಂಚಿಕಾನ ನಿವಾಸಿ ಸುರೇಂದ್ರ (31) ಎನ್ನುವ ವ್ಯಕ್ತಿಯು ಅ.27ರಂದು ಬೆಳಿಗ್ಗೆ 8 ಗಂಟೆಗೆ ಕೆಲಸದ ನಿಮಿತ್ತ ಕುಂದಾಪುರಕ್ಕೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 5 ಇಂಚು ಎತ್ತರ, ಕನ್ನಡ ಮಾತನಾಡ ಬಲ್ಲವರಾಗಿದ್ದು ಅವರ ಬಗ್ಗೆ ಮಾಹಿತಿ ದೊರೆತಲ್ಲಿ ಬೈಂದೂರು ಪೋಲಿಸ್ ಠಾಣೆಯನ್ನು ಸಂಪರ್ಕಿಸುವಂತೆ ಬೈಂದೂರು ಪೋಲಿಸ್ ಠಾಣಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಮೃದ್ಧ ಬೈಂದೂರು ಪರಿಕಲ್ಪನೆಯ 300 ಟ್ರೀಸ್ ಯೋಜನೆಯಲ್ಲಿ ಕ್ಯಾನ್ ಫಿನ್ ಹೋಮ್ಸ್ ಲಿಮಿಟೆಡ್ ಇವರ ಸಿಎಸ್ಆರ್ ನಿಧಿಯಿಂದ ನಾವುಂದ ಸರಕಾರಿ ಪದವಿ ಪೂರ್ವ ಕಾಲೇಜು ಇಲ್ಲಿಗೆ 10 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ ಸೋಲಾರ್ ಆಫ್ ಗ್ರಿಡ್ ಪವರ್ ಬ್ಯಾಕಪ್ ಸಿಸ್ಟಮ್ ಇದರ ಉದ್ಘಾಟನಾ ಕಾರ್ಯಕ್ರಮವು ಇತ್ತೀಚಿಗೆ ನೆರವೇರಿತು. ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ ಹಾಗೂ ಕ್ಯಾನ್ ಫಿನ್ ಹೋಮ್ಸ್ ಲಿಮಿಟೆಡ್ ಇದರ ಉಪಾಧ್ಯಕ್ಷರಾದ ಪ್ರಶಾಂತ್ ಜೋಯಿಶಿ ನೆರವೇರಿಸಿದರು. ಇದರ ಜೊತೆಗೆ ಕಾಲೇಜಿನ ನೂತನ ಕೊಠಡಿಗಳ ಲೋಕಾರ್ಪಣೆಯನ್ನು ಶಾಸಕರು ಗಣ್ಯರ ಜೊತೆಗೂಡಿ ಉದ್ಘಾಟಿಸಿದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಬೈಂದೂರು ಶಾಸಕರು ಮಾತನಾಡಿ, ಕ್ಷೇತ್ರದ ಸರಕಾರಿ ಶಾಲಾ, ಕಾಲೇಜುಗಳಿಗೆ ಕ್ಯಾನ್ ಫಿನ್ ಸಂಸ್ಥೆ ಇದುವರೆಗೆ 1 ಕೋಟಿಗೂ ಅಧಿಕ ಮೊತ್ತದ ವಿವಿಧ ರೀತಿಯ ಅವಶ್ಯಕ ಮೂಲಭೂತ ಸೌಕರ್ಯಗಳನ್ನು ತನ್ನ ಸಿ. ಎಸ್.ಆರ್ ನಿಧಿಯಿಂದ ಒದಗಿಸಿದೆ. ಸಂಸ್ಥೆಯ ಈ ಕೊಡುಗೆ ವಿದ್ಯಾರ್ಥಿಗಳಿಗೆ ವರದಾನವಾಗಿದ್ದು, ಇದು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ರಾಜಾಜಿನಗರದಲ್ಲಿ ಡಿಸೆಂಬರ್ 19,20,21ರಂದು ಸೇವಾ ಸಂಕಲ್ಪ ಕಾರ್ಯಕ್ರಮ ಹಮ್ಮಿಕೊಂಡಿದ್ದೆವೆ ಎಂದು ಅಭಯಸೇವಾ ಫೌಂಡೇಶನ್ ಅಧ್ಯಕ್ಷ ಯುಬಿ ಉಮೇಶ್ ಶೆಟ್ಟಿ ಹೇಳಿದ್ದಾರೆ. ಅವರು ಬೆಂಗಳೂರಿನ ಬಂಟರ ಸಂಘದಲ್ಲಿ ನಡೆದ ಸೇವಾ ಸಂಕಲ್ಪ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆಗೊಳಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಉದ್ಯಮಿ ಜಯಪ್ರಸಾದ್ ಶೆಟ್ಟಿ, ಬಂಟರ ಸಂಘದ ನಿಕಟಪೂರ್ವ ಅಧ್ಯಕ್ಷರಾದ ಬಿ.ಎಲ್.ಎನ್.ಹೆಗಡೆ, ಅಭಯ ಸೇವಾ ಫೌಂಡೇಷನ್ ಸಂಸ್ಥಾಪಕ ಅಧ್ಯಕ್ಷರಾದ ಎಂ.ಬಿ.ಉಮೇಶ್ ಶೆಟ್ಟಿ, ನಿಕಟಪೂರ್ವ ಬಿಬಿಎಂಪಿ ಸದಸ್ಯರಾದ ಕೆ.ಉಮೇಶ್ ಶೆಟ್ಟಿರವರು, ಬಿಜೆಪಿ ಮುಖಂಡರಾದ ಬೇಳೂರು ರಾಘವೇಂದ್ರ ಶೆಟ್ಟಿ, ಬಿಜೆಪಿ ಮಹಿಳಾ ಮುಖಂಡರಾದ ಕಾಂತಿ ಶೆಟ್ಟಿ, ಕನ್ನಡ ಪರ ಹೋರಾಟಗಾರ ಶಿವಾನಂದ್ ಶೆಟ್ಟಿ, ಆರ್.ಎಸ್.ಎಸ್.ಮುಖಂಡರಾದ ಸುರೇಶ್, ಸ್ಥಳೀಯ ಮುಖಂಡರಾದ ಸಂತೋಷ್ ಶೆಟ್ಟಿ ಅವರು ಭಾಗಿಯಾಗಿ ಸೇವಾ ಸಂಕಲ್ಪ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ ಮಾಡಿದ್ದರು. ಈ ವೇಳೆ ವರಸಿದ್ದಿ ವಿನಾಯಕನಿಗೆ ರಂಗಪೂಜೆ, ಭಜನೆ ಕುಣಿತ, ಬೀದಿ ನಾಟಕ ಸೇರಿ ವಿವಿಧ ಕಾರ್ಯಕ್ರಮ ನಡೆಯಿತು.ಕಾರ್ಯಕ್ರದಲ್ಲಿ ಎಂ.ಬಿ.ಉಮೇಶ್ ಶೆಟ್ಟಿ ಮಾತನಾಡಿ ಅಭಯ ಸೇವಾ ಫೌಂಡೇಷನ್…
ನಾಗರಾಜ್ ಕೋಡಿ | ಕುಂದಾಪ್ರ ಡಾಟ್ ಕಾಂ ಲೇಖನಮೀನುಗಾರರ ಕುಟುಂಬದಲ್ಲಿ ಜನಿಸಿದ ಗೋಪಾಲ ಖಾರ್ವಿ ಎಂಬ ವ್ಯಕ್ತಿ, ತನ್ನ ವೃತ್ತಿ ಹಾಗೂ ಬದುಕಿನ ಮಧ್ಯೆ ವಿಶಿಷ್ಟವಾದದ್ದನ್ನು ಸಾಧಿಸಬೇಕೆಂಬ ಛಲದಿಂದ ಸಾಗಿ ಗೆದ್ದ ಕಡಲವೀರ. ಉಡುಪಿ ಜಿಲ್ಲೆಯ ಕೋಡಿಕನ್ಯಾನ ಗ್ರಾಮದ ನಾಗೇಶ್ ಖಾರ್ವಿ ಮತ್ತು ರಾಧ ಖಾರ್ವಿ ದಂಪತಿಗಳ ಪುತ್ರರಾದ ಗೋಪಾಲ ಖಾರ್ವಿ ಅವರು, ಈಜಿನಲ್ಲಿ ಅನೇಕ ಸಾಧನೆಗಳನ್ನು ಮಾಡಿ ಹೆಸರು ಗಳಿಸಿದ್ದಾರೆ. ಮೀನುಗಾರರ ಕುಟುಂಬದಲ್ಲಿ ಜನಿಸಿದ ಗೋಪಾಲ ಖಾರ್ವಿಯ ಜೀವನ ಸುಲಭದ ಹಾದಿಯಲ್ಲ. ತಂದೆಯವರು ಆರೋಗ್ಯ ಸಮಸ್ಯೆಯಿಂದ ಮೀನುಗಾರಿಕೆ ನಿಲ್ಲಿಸಿದಾಗ, ಬಾಲ್ಯದಲ್ಲಿಯೇ ಕುಟುಂಬದ ಹೊಣೆಗಾರಿಕೆ ಗೋಪಾಲ ಅವರ ಹೆಗಲೇರಿತು. ಏಳನೇ ತರಗತಿವರೆಗೂ ಓದಿ, ನಂತರ ಕುಟುಂಬದ ಬಾಧ್ಯತೆಗಾಗಿ ವಿದ್ಯಾಭ್ಯಾಸವನ್ನು ಬಿಟ್ಟು ಜೀವನಯಾನಕ್ಕೆ ಕಾಲಿಟ್ಟರು. ಅಕ್ಕ-ತಂಗಿಯರ ವಿವಾಹವನ್ನೂ ನೆರವೇರಿಸಿ, ಎಲ್ಲರಿಗೂ ಸುಖ ಜೀವನ ಕಟ್ಟಿಕೊಟ್ಟವರು ಇವರೇ. ಬಡತನದ ನಡುವೆ ಬೆಳೆದರೂ, ಎದುರಾದ ಸಂಕಷ್ಟಗಳಿಗೆ ಮಣಿಯದೆ, ಸಾಧನೆ ಮಾಡಬೇಕೆಂಬ ಛಲದಿಂದ ಇಂದಿಗೂ ಮುಂದುವರಿಯುತ್ತಿದ್ದಾರೆ. ಬಾಲ್ಯದಲ್ಲಿ ಊರಿನ ಕೆರೆಯಲ್ಲೇ ಈಜು ಪ್ರಾರಂಭಿಸಿದ ಗೋಪಾಲ ಖಾರ್ವಿ, ಮೊದಲ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ನವೆಂಬರ್ ಇತ್ತೀಚಿಗೆ ಮಂಡ್ಯ ಜಿಲ್ಲೆಯಲ್ಲಿ ನಡೆದ ರಾಜ್ಯ ಮಟ್ಟದ ಚೆಸ್ ಪಂದ್ಯಾವಳಿಯಲ್ಲಿ U14 ವಯೋಮಿತಿಯ ಹುಡುಗರ ವಿಭಾಗದಲ್ಲಿ ಕಶ್ವಿ ಚೆಸ್ ಸ್ಕೂಲ್ ವಿದ್ಯಾರ್ಥಿಯಾದ ಅವನೀಷ್ ಪ್ರಸಾದ್ ಕೆ. ನಾಲ್ಕನೇ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಜಾರ್ಖಂಡ್ ನಲ್ಲಿ ನಡೆಯುವ ರಾಷ್ಟ್ರ ಮಟ್ಟದ ಚೆಸ್ ಚಾಂಪಿಯನ್ಶಿಪ್ನಲ್ಲಿ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಲಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಸಂಶೋಧನಾ ಘಟಕದ ವತಿಯಿಂದ, ಸೈಬರ್ ಇಮ್ಯುನಿಟಿ ಮತ್ತು ಡಿಜಿಟಲ್ ಫರೆನ್ಸಿಕ್ಸ್ ಶ್ರೇಷ್ಠತಾ ಕೇಂದ್ರದ ಉದ್ಘಾಟನಾ ಸಮಾರಂಭವು ಬುಧವಾರ ಕಾಲೇಜು ಆವರಣದಲ್ಲಿ ನೆರವೇರಿತು. ಮುಖ್ಯ ಅತಿಥಿಗಳಾಗಿ ದೆಹಲಿ ಸೈಬರ್ ಸೆಕ್ಯುರಿಟಿ ಅಸೋಸಿಯೇಷನ್ ಆಫ್ ಇಂಡಿಯಾ ಡೈರೆಕ್ಟರ್ ಜನರಲ್ ವಿಜಯಂತ್ ಗೌರ್ ಅವರು ಸೆಂಟರ್ ಆಫ್ ಎಕ್ಸಲೆನ್ಸ್ ಅನ್ನು ಉದ್ಘಾಟಿಸಿ, ಸೈಬರ್ ಜಾಗೃತಿ, ಡಿಜಿಟಲ್ ರಕ್ಷಣಾ ವ್ಯವಸ್ಥೆ ಹಾಗೂ ಡಿಜಿಟಲ್ ಫರೆನ್ಸಿಕ್ಸ್ನ ನೈಜ ಜಗತ್ತಿನ ಲ್ಲಿ ಆಗುಹೋಗುಗಳ ಕುರಿತಂತೆ ಮಾರ್ಮಿಕವಾಗಿ ಮಾತನಾಡಿದರು. ಡಾ. ಇಂದ್ರ ವಿಜಯ್ ಸಿಂಗ್ (ಸಂಶೋಧನೆ ವಿಭಾಗದ ಡೀನ್) ತಮ್ಮ ಪ್ರಾಸ್ತಾವಿಕ ಭಾಷಣದಲ್ಲಿ, ಹೊಸ ಸೆಂಟರ್ ನ ಮಹತ್ವವನ್ನು ತಿಳಿಸಿದರು. ಇಂದಿನ ಡಿಜಿಟಲ್ ಯುಗದಲ್ಲಿ ಸೈಬರ್ ಸುರಕ್ಷತೆ ಮತ್ತು ಡಿಜಿಟಲ್ ಫರೆನ್ಸಿಕ್ಸ್ನ ಮಹತ್ವವನ್ನು ಒತ್ತಿ ಹೇಳಿದರು. ಐಎಂಜೆ ಇನ್ಸ್ಟಿಟ್ಯೂಶನ್ ಅಕಾಡೆಮಿಕ್ ಡೈರೆಕ್ಟರ್ ಡಾ. ಎಸ್.ಎನ್.ಭಟ್, ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ, ತಮ್ಮ ಅಭಿನಂದನೆ ತಿಳಿಸಿದರಲ್ಲದೆ ಈ ಸೈಬರ್ ಸೆಂಟರ್, ಸೈಬರ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಮೂರ್ತೆದಾರದ ಹೋರಾಟದ ಮೂಲಕ ಸಹಕಾರಿ ಕ್ಷೇತ್ರದಲ್ಲಿ ಹೊಸ ಅಧ್ಯಾಯಕ್ಕೆ ಮುನ್ನುಡಿ ಬರೆದ ಕೋಡಿ ಕೊರಗ ಪೂಜಾರಿ ಅವರಿಗೆ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ ಬೆಂಗಳೂರು ಇದರ ಸಹಕಾರ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಸಹಕಾರ ಚಳುವಳಿ ಸೇರಿದಂತೆ ಹಲವಾರು ಸಂಘಟನೆಗಳಲ್ಲಿ ನಿರಂತರ ಸೇವೆಯ ಮೂಲಕ ಜನಜನಿತರಾದ ಕೊರಗ ಪೂಜಾರಿಯವರನ್ನು ವಿಶೇಷವಾಗಿ ಗುರುತಿಸಿ ಬೆಂಗಳೂರಿನಲ್ಲಿ ನ.14ರಂದು ನಡೆಯುವ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ನೀಡಿ ಗೌರವಿಸಲಿದೆ ಎಂದು ಸಹಕಾರ ಮಹಾಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ನಿ. ಉಪ್ಪುಂದ ಇವರುಗಳ ಸಂಯುಕ್ತ ಆಶ್ರಯದಲ್ಲಿ 72ನೇ ಅಖಿಲ ಭಾರತ ಸಹಕಾರಿ ಸಪ್ತಾಹ ಹಾಗೂ ಪ್ರತಿಭಾ ಪುರಸ್ಕಾರ, ಸನ್ಮಾನ, ಗೌರವ ಧನ ವಿತರಣಾ ಸಮಾರಂಭವು ನ.15ರ ಶನಿವಾರ ಪೂರ್ವಾಹ್ನ 10.30ಕ್ಕೆ ನಾಗೂರು ಶ್ರೀ ಕೃಷ್ಣ ಲಲಿತ ಕಲಾಮಂದಿರದಲ್ಲಿ ಜರುಗಲಿದೆ. ಸಮಾರಂಭದ ಉದ್ಘಾಟನೆಯನ್ನು ಮಾಜಿ ಸಂಸದರಾದ ಕೆ. ಜಯಪ್ರಕಾಶ್ ಹೆಗ್ಡೆ ಅವರು ನೆರವೇರಿಸಲಿದ್ದಾರೆ. ಖಂಬದಕೋಣೆ ರೈ.ಸೇ.ಸ.ಸಂಘದ ಅಧ್ಯಕ್ಷರಾದ ಎಸ್. ಪ್ರಕಾಶ್ವಂದ್ರ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಈ ವೇಳೆ ವಿವಿಧ ಅತಿಥಿ ಗಣ್ಯರು ಉಪಸ್ಥಿರರಿರಲಿದ್ದಾರೆ. ಪ್ರತಿಭಾ ಪುರಸ್ಕಾರ, ಸನ್ಮಾನ, ಗೌರವ ಧನ ವಿತರಣೆ, ಸಹಕಾರ ಶಿಕ್ಷಣ ನಿಧಿ ವಿತರಣೆ, ನಿವೃತ್ತರಿಗೆ ಸನ್ಮಾನ ಕಾರ್ಯಕ್ರಮಗಳು ನಡೆಯಲಿದೆ. “ಆತ್ಮನಿರ್ಭರ ಭಾರತ ಸಾಧನೆಗೆ ವಾಹಕಗಳಾಗಿ ಸಹಕಾರ ಸಂಸ್ಥೆಗಳು” ವಿಷಯವಾಗಿ ತರಬೇತುದಾರ ರಾಜೇಂದ್ರ ಭಟ್ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಿಇಓ ವಿಷ್ಣು ಪೈ ಎನ್.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಉಪ ನಿರ್ದೇಶಕರ ಕಾರ್ಯಾಲಯ, ಶಾಲಾ ಶಿಕ್ಷಣ ಇಲಾಖೆ ಗದಗ, ಕೆ.ಹೆಚ್ ಪಾಟೇಲ್ ಜಿಲ್ಲಾ ಕ್ರೀಡಾಂಗಣ ಕೆಸಿ ರಾಣಿ ರಸ್ತೆ ಗದಗ, ಇವುಗಳ ಸಂಯುಕ್ತ ಆಶ್ರಯದಲ್ಲಿ ನಡೆದ 14 ವರ್ಷ ಮತ್ತು 17 ವರ್ಷ ವಯೋಮಿತಿಯ ಪ್ರಾಥಮಿಕ, ಪ್ರೌಢಶಾಲಾ ಬಾಲಕ ಮತ್ತು ಬಾಲಕಿಯರ ರಾಜ್ಯ ಮಟ್ಟದ ಮಲ್ಲಕಂಬ ಕ್ರೀಡಾಕೂಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಆಳ್ವಾಸ್ ಮಲ್ಲಕಂಬ ತಂಡವು 14 ವರ್ಷ ವಯೋಮಿತಿಯ ಬಾಲಕರ ವಿಭಾಗದಲ್ಲಿ ಮತ್ತು 17 ವರ್ಷ ವಯೋಮಿತಿಯ ಬಾಲಕರ ವಿಭಾಗದಲ್ಲಿ ಚಾಂಪಿಯನ್ ಮತ್ತು 14 ವರ್ಷ ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ ಮತ್ತು 17 ವರ್ಷ ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿತು. ಮುಂದಿನ ತಿಂಗಳು ನಡೆಯುವ ರಾಷ್ಟ್ರೀಯ ಮಲ್ಲಕಂಬ ಸ್ಪರ್ಧೆಗೆ ಆಳ್ವಾಸ್ ಶಾಲೆಯಿಂದ ಒಟ್ಟು 09 ಕ್ರೀಡಾಪಟುಗಳು ಆಯ್ಕೆಯಾಗಿದ್ದಾರೆ. ಫಲಿತಾಂಶ:14 ವರ್ಷದ ವಯೋಮಿತಿಯ ಬಾಲಕರ ವಿಭಾಗದಲ್ಲಿ: ಗೌರೀಶ್ ಎಂ.ಕೆ. – ದ್ವಿತೀಯ ಸ್ಥಾನ, ಭೀಮಪ್ಪ ಎಂ ಜಿ ತೃತೀಯ ಸ್ಥಾನ, ಪ್ರೀತಮ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬಿಸಿಸಿಐ ಆಯೋಜಿಸಿದ ಅಂಡರ್ -19 ವನಿತಾ ದೇಶೀಯ ಟಿ20 ಟೂರ್ನಿಯಲ್ಲಿ ವಿಕೆಟ್ ಕೀಪರ್ ಹಾಗೂ ಆರಂಭಿಕ ಆಟಗಾರ್ತಿಯಾಗಿರುವ ಕುಂದಾಪುರದ 16ರ ಹರೆಯದ ರಚಿತಾ ಹತ್ವಾರ್ ಪಂದ್ಯಾವಳಿ ಯುದ್ದಕ್ಕೂ ಉತ್ತಮ ಪ್ರದರ್ಶನ ನೀಡಿ, ಕರ್ನಾಟಕದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ರಚಿತಾ ಆಡಿದ 7 ಪಂದ್ಯಗಳಲ್ಲಿ 2 ಅರ್ಧ ಶತಕದೊಂದಿಗೆ ಕೂಟದಲ್ಲೇ ಗರಿಷ್ಠ 234 ರನ್ (38 ಫೋರ್, 1 ಸಿಕ್ಸರ್) ಬಾರಿಸಿದರು. ಈ ಸಾಧನೆಗಾಗಿ ಸರಣಿಶ್ರೇಷ್ಠ ಪ್ರಶಸ್ತಿಯೊಂದಿಗೆ 75 ಸಾವಿರ ರೂ. ನಗದನ್ನು ಪಡೆದರು. ಟೂರ್ನಿಯಲ್ಲಿ ಅಜೇಯ ಗೆಲುವಿನ ಆಟವನ್ನು ಮುಂದುವರಿಸಿದ ಕರ್ನಾಟಕದ ವನಿತೆಯರ ತಂಡ ಚಾಂಪಿಯನ್ ಆಗಿ ಮೂಡಿಬಂದಿದೆ. ಬುಧವಾರ ಕೋಲ್ಕತಾದಲ್ಲಿ ನಡೆದ ಫೈನಲ್ ಹಣಾಹಣಿಯಲ್ಲಿ ಆಂಧ್ರಪ್ರದೇಶವನ್ನು ಸೋಲಿಸಿ ಪ್ರಶಸ್ತಿ ಜಯಿಸಿತು. ಲೀಗ್ ಪಂದ್ಯಗಳನ್ನು ಗೆದ್ದು ಅಗ್ರಸ್ಥಾನ ಪಡೆದ ಕರ್ನಾಟಕ ಕ್ವಾರ್ಟರ್ ಫೈನಲ್ ಪ್ರವೇಶಿಸಿತು. ಅಲ್ಲಿ ದಿಲ್ಲಿಯನ್ನು ಹಾಗೂ ಸೆಮಿಫೈನಲ್ನಲ್ಲಿ ಬರೋಡಾ ತಂಡವನ್ನು ಸೋಲಿಸಿ ಫೈನಲ್ ಗೆ ಲಗ್ಗೆಯಿಟ್ಟಿತು. ಫೈನಲ್ ಪಂದ್ಯದಲ್ಲಿ ಮೊದಲು…
