Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ವತಿಯಿಂದ ಬಿ.ಇ/ಬಿ.ಟೆಕ್ ಪದವೀಧರರಾಗಿದ್ದು, ಐ.ಐ.ಎಸ್.ಸಿ, ಐ.ಐ.ಟಿ ಮತ್ತು ಎನ್.ಐ.ಟಿ ಸಂಸ್ಥೆಗಳ ಮೂಲಕ ಆರ್ಟಿಫಿಶಿಯಲ್ ಇಂಟಲಿಜೆನ್ಸಿ ಅಂಡ್ ಮೆಷಿನ್ ಲರ್ನಿಂಗ್ ವೃತ್ತಿಪರ ಕೋರ್ಸುಗಳಲ್ಲಿ (ತರಬೇತಿ ಅವಧಿ ಕನಿಷ್ಠ 6 ತಿಂಗಳಿನಿಂದ 1 ವರ್ಷ) ಭಾಗವಹಿಸುವ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 15000 ರೂ. ಶಿಷ್ಯ ವೇತನ ಪಡೆಯಲು ಅವಕಾಶವಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಯ ಕುಟುಂಬ ಆದಾಯ 5 ಲಕ್ಷ ರೂ. ಮೀರಿರಬಾರದು. ಮೂಲ ನಿವಾಸಿ ಮತ್ತು ಅಲೆಮಾರಿ/ ಅರೆ ಅಲೆಮಾರಿ, ಸೂಕ್ಷ್ಮ/ ಅತಿ ಸೂಕ್ಷ್ಮ ಸಮುದಾಯಗಳ ಅಭ್ಯರ್ಥಿಗಳಿಗೆ ಪ್ರಥಮ ಆದ್ಯತೆ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಏಪ್ರಿಲ್ 10 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಯೋಜನಾ ಸಮನ್ವಯಾಧಿಕಾರಿ, ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆ, ಉಡುಪಿ ದೂ.ಸಂಖ್ಯೆ: 0820-2574814 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ವಿಧಾನ ಸಭೆಯಲ್ಲಿ ಕರಾವಳಿಯ ಶಾಸಕರುಗಳಿಗೆ ವಿಶೇಷವಾದ ಗೌರವವಿದೆ. ಅತ್ಯಂತ ಮೇಧಾವಿಗಳನ್ನು, ಸದನ ಶೂರರನ್ನು, ನೈತಿಕತೆ, ಸಿದ್ದಾಂತಕ್ಕೆ ಬದ್ಧರಾದ ಜನಪ್ರತಿನಿದಿನಗಳನ್ನು ನೀಡಿದ ಪುಣ್ಯ ಭೂಮಿ ನಮ್ಮ ಕರಾವಳಿ. ಇಂತಾ ಹೆಮ್ಮೆಯ ನಾಡಿನಿಂದ ಶಾಸನ ಸಭೆಗೆ ಆಯ್ಕೆಗೊಂಡು ಶಾಸನ ಸಭೆಯ ಅತ್ಯಂತ ಗೌರವಾನ್ವಿತ ಪೀಠವಾದ ಅಧ್ಯಕ್ಷರ ಪೀಠಕ್ಕೆ ಅಗೌರವ ತೋರಿ ವಿಧಾನ ಸಭೆಯ ಅಧಿವೇಶನ ಪ್ರವೇಶಕ್ಕೆ ಆರು ತಿಂಗಳುಗಳ ಕಾಲ ಅಮಾನತುಗೊಂಡ ಕರಾವಳಿಯ ಶಾಸಕರುಗಳಾದ ಉಮಾನಾಥ್ ಕೋಟ್ಯಾನ್, ಡಾ. ಭರತ್ ಶೆಟ್ಟಿ ಹಾಗೂ ಯಶ್‌ಪಾಲ್‌ ಸುವರ್ಣ ವರ್ತನೆಯು ಸುಶಿಕ್ಷಿತರ ನಾಡಾದ ಕರಾವಳಿ ಜನರಿಗೆ ಮಾಡಿದ ಅವಮಾನವಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಹೇಳಿದರು.   ಶಾಸನ ಸಭೆಯ ಘನತೆ ಏತ್ತಿ ಹಿಡಿಯ ಬೇಕಾದ ಸದಸ್ಯರುಗಳು ಅಧ್ಯಕ್ಷರ ಪೀಠಕ್ಕೆ ತೆರಳಿ ಅಧ್ಯಕ್ಷರ ಮೇಲೆ ಕಾಗದವನ್ನು ಹರಿದು ಎಸೆದದ್ದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾಡಿದ ಅಪಚಾರವಾಗಿದೆ. ವಿಧಾನ ಮಂಡಲದ ಅಧಿವೇಶನದ ಆಳ ಅಗಲ ತಿಳಿಯದ ಜನಪ್ರತಿನಿದಿನಗಳು ಮಾತ್ರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ  ಸಭಾಂಗಣದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ  ವಿದ್ಯಾರ್ಥಿಗಳಿಗೆ  ಉತ್ಕರ್ಷ ಎನ್ನುವ ಶೀರ್ಷಿಕೆ ಅಡಿಯಲ್ಲಿ ಶುಭ ವಿದಾಯ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ವಿಜಯ ಮಕ್ಕಳ ಕೂಟ ಆತ್ರಾಡಿ ಇಲ್ಲಿನ ಸಂಚಾಲಕರಾದ ಸುಭಾಸ್ ಚಂದ್ರ ಶೆಟ್ಟಿ ಅವರು ಮಾತನಾಡಿ, ಸರಳ ಬದುಕಿನೊಂದಿಗೆ ಮಾನವೀಯ ಮೌಲ್ಯ ಗಳನ್ನು ಅಳವಡಿಸಿ ಕೊಂಡು, ಸಮಾಜಮುಖಿ ಕಾರ್ಯಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸುವಂತಾಗಲಿ ಎಂದು ಹಾರೈಸಿದರು. ಅಧ್ಯಕ್ಷತೆಯನ್ನು ವಹಿಸಿದ್ದ ಶ್ರೀ ವೆಂಕಟರಮಣ ದೇವ್ ಎಜುಕೇಶನಲ್ & ಕಲ್ಚರಲ್ ಟ್ರಸ್ಟ್ ನ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ ಅವರು ಮಾತನಾಡಿ, ತಂದೆ, ತಾಯಿ, ಗುರುಗಳಿಗೆ ಗೌರವ ನೀಡಿ. ಸತ್ಪಜೆಯಾಗಿ ಯಶಸ್ವಿ ಬದುಕನ್ನು ಸಾಗಿಸಿ ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪ ಪ್ರಾಂಶುಪಾಲರಾದ ಸುಜಯ್ ಕೋಟೆಗಾರ್,  ಶ್ರೀ ವೆಂಕಟರಮಣ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಕೃಷ್ಣ ಅಡಿಗ, ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ರೇಷ್ಮಾ ಡಿಸೋಜಾ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಪ್ರಮೀಳಾ ಡಿಸೋಜಾ, ಹಿರಿಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಯೋಗ ಕ್ರೀಡೆಗೆ ಅತ್ಯುನ್ನತವಾದ ಕೊಡುಗೆಯನ್ನು ನೀಡಿರುವಂತಹ ಕ್ರೀಡಾಪಟುಗಳಿಗೆ ಅಥವಾ ಯೋಗ ಸಂಸ್ಥೆಗಳಿಗೆ ಪ್ರಧಾನ ಮಂತ್ರಿಗಳು ರಾಷ್ಟ್ರ ಮಟ್ಟದ ಅಥವಾ ಅಂತರಾಷ್ಟ್ರೀಯ ಮಟ್ಟದ ಅತ್ಯುನ್ನತ ಯೋಗ ಪ್ರಶಸ್ತಿಯನ್ನು ಘೋಷಿಸಿದ್ದು, ಅದರಂತೆ ಅತ್ಯುನ್ನತ ಯೋಗ ಪ್ರಶಸ್ತಿಗಾಗಿ ಯೋಗ ಪಟುಗಳು ಹಾಗೂ ಯೋಗ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು https://innovateindia.mygov.in/pm-yoga-awards-2025/ ವೆಬ್‌ಸೈಟ್ ನಲ್ಲಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮಾರ್ಚ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಅಜ್ಜರಕಾಡು, ಉಡುಪಿ ದೂ.ಸಂಖ್ಯೆ:0820-2521324, ಮೊ.ನಂ: 9845432303 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ನಮ್ಮ ನಾಡು, ನುಡಿ, ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಅರಿತುಕೊಂಡು ಜೀವನ ನಡೆಸಬೇಕು. ವೈವಿಧ್ಯಮಯ ಸಂಸ್ಕೃತಿಗೆ ಹೆಸರುವಾಸಿಯಾಗಿರುವ ನಮ್ಮ ನಾಡಿನ ಹಿರಿಮೆಯನ್ನು ತಿಳಿದುಕೊಂಡು ಅದನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಅಭಿಪ್ರಾಯಪಟ್ಟರು. ಅವರು ಅಂದು ನಗರದ ಅಜ್ಜರಕಾಡು ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ, ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಇಲ್ಲಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ, ಐ.ಕ್ಯೂ.ಎ.ಸಿ ಮತ್ತು ಸಾಂಸ್ಕೃತಿಕ ವೇದಿಕೆ ಇದರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ನಮ್ಮ ಸಂಸ್ಕೃತಿ ನಮ್ಮ ಹೆಮ್ಮೆ ಜನಪದ ಉತ್ಸವ “ಜನ ಜಲ್ಸಾ 2025” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಮಹಿಳೆಯರು ನಾಡಿನ ಸಾಂಸ್ಕೃತಿಕ ರಾಯಭಾರಿಗಳಾಗಬೇಕು. ಸಂಸ್ಕೃತಿಯನ್ನು ಉಳಿಸಿ ಬೆಳೆಸುವುದರಲ್ಲಿ ಮಹಿಳೆಯರ ಪಾತ್ರ ಬಹಳ ಪ್ರಮುಖವಾಗಿದೆ ಎಂದ ಅವರು, ನಮ್ಮ ಸಂಸ್ಕೃತಿ ನಮ್ಮ ಹೆಮ್ಮೆ ಅದನ್ನು ಗೌರವಿಸಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಪ್ರಕೃತಿಯ ಅಧ್ಯಯನವೇ ಈ ಕ್ಯಾಂಪಿನ ಮುಖ್ಯ ಉದ್ದೇಶವಾಗಿದೆ. ನಿರಂತರವಾಗಿ ಪರಿಸರ ಪ್ರಜ್ಞೆಯನ್ನು ಮೂಡಿಸುವೆಡೆಗೆ ಶಿಕ್ಷಣ ನೀಡುತ್ತಿರುವ ಈ ಪರಿಸರದಲ್ಲಿ ಅಧ್ಯಯನ ಮಾಡುವ ಸದಾವಕಾಶ ಸಿಕ್ಕಿದೆ. ಕರ್ನಾಟಕವನ್ನು ಚಿನ್ನದ ನಾಡನ್ನಾಗಿ, ಗಂಧದ ಬೀಡನ್ನಾಗಿ ಮತ್ತು ಸದಾ ಕಾಲ ನೀರಿರುವ ನಾಡನ್ನಾಗಿ ಕಟ್ಟುತ್ತೇವೆ ಎಂಬ ಆಶಯವಿದೆ ಎಂದು ಕರ್ನಾಟಕದ ಮುಖ್ಯ ಆಯುಕ್ತರು ಭಾರತ್ ಸ್ಕೌಟ್ ಎಂಡ್ ಗೈಡ್ಸ್ ಹಾಗೂ ಮಾಜಿ ಕರ್ನಾಟಕ ವಿಧಾನಸಭೆಯ ಸಚಿವರಾದ ಪಿಜಿಆರ್ ಸಿಂಧ್ಯಾ ಹೇಳಿದರು. ಅವರು ಇಲ್ಲಿನ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ರೋವರ್ಸ್ ರೇಂಜರ್ಸ್ ಘಟಕವನ್ನು ಉದ್ಘಾಟಿಸಿ ಮಾತನಾಡಿದರು. ಈ ಸುಂದರ ಕಡಲ ತೀರ ಪರಿಸರದಲ್ಲಿ ಪರಿಸರ ಪ್ರಜ್ಞೆಯನ್ನು ಮುಖ್ಯ ಧ್ಯೇಯವಾಗಿಟ್ಟುಕೊಂಡು ಶಿಕ್ಷಣ ನೀಡುತ್ತಿರುವ ಬ್ಯಾರೀಸ್ ಸಂಸ್ಥೆ 38 ತಿಂಗಳುಗಳಿಂದ ಸ್ವಚ್ಚ ಕಡಲ ತೀರ – ಹಸಿರು ಕೋಡಿ ಅಭಿಯಾನದ ಅಡಿ ಪ್ಲಾಸ್ಟಿಕ್ ಮುಕ್ತ ಕಡಲ ತೀರವನ್ನಾಗಿ ಮಾರ್ಪಡಿಸುವಲ್ಲಿ ನಿರಂತರವಾಗಿ ಶ್ರಮಿಸುವುದರ ಮೂಲಕ ಎಲ್ಲರಿಗೂ ಮಾದರಿಯಾಗಿದೆ ಎಂದು ಶುಭಹಾರೈಸಿದರು. ಸಭೆಯ ಅಧ್ಯಕ್ಷತೆ ವಹಿಸಿದ್ದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ:  ಕುಂದಾಪುರ ಪುರಸಭೆಯ ಸಾಮಾನ್ಯ ಸಭೆ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ಗುರುವಾರ ಮಧ್ಯಾಹ್ನ ಜರುಗಿತು. ಈ ವೇಳೆ ಸಮಗ್ರ ಒಳಚರಂಡಿ ಯೋಜನೆ ಕುರಿತಂತೆ ಗಂಭೀರ ಚರ್ಚೆ ನಡೆಯಿತು. ಪುರಸಭಾ ಸದಸ್ಯ ರಾಘವೇಂದ್ರ ಖಾರ್ವಿ ವಿಷಯ ಪ್ರಸ್ತಾಪಿಸಿ ಖಾರ್ವಿಕೇರಿ, ಮದ್ದುಗುಡ್ಡೆ ಪ್ರದೇಶಗಳು ಪುರಸಭೆಯ 23 ವಾರ್ಡ್‌ಗಳ ಕೊಳಚೆ ನೀರಿನೊಂದಿಗೆ ಬದುಕುವಂತಾಗಿದೆ. ಯೋಜನೆ ಪೂರ್ಣತೆಗೆ ಸರಕಾರ ಈಗ ಅವಕಾಶ ನೀಡಿದ್ದರು ಭೂಸ್ವಾಧೀನತೆ ಗುಮ್ಮ ಮುಂದಿಟ್ಟುಕೊಂಡು ವಿಳಂಬಗೊಳಿಸುವ ಯತ್ನ ಸಲ್ಲ. ಮತ್ತೆ ವಿಳಂಬಗೊಳಿಸಿದ್ದೇ ಆದಲ್ಲಿ ಪುರಸಭೆ ಎದುರು ಕುಳಿತುಕೊಳ್ಳುತ್ತೇವೆ ಎಂದು ಆಕ್ರೋಶ ಹೊರಗೆಡಹಿದರು. ಪುರಸಭಾ ಸದಸ್ಯ ಗಿರೀಶ್ ಜಿ.ಕೆ. ಮಾತನಾಡಿ ನಗರದಲ್ಲಿ ಸಮಗ್ರ ಒಳಚರಂಡಿ ಯೋಜನೆ ಜಾರಿಗೊಂಡು ದಶಕ ಸಂದರೂ ಯೋಜನೆ ಪೂರ್ಣಗೊಂಡಿಲ್ಲ. ಸಮಯ ವಿಳಂಬಗೊಳಿಸದೆ ಯೋಜನೆ ಪೂರ್ಣ ಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ನಾಮನಿರ್ದೇಶಿತ ಸದಸ್ಯ ಗಣೇಶ್ ಶೇರುಗಾರ್ ಮಾತನಾಡಿ, ಸಿದ್ದರಾಮಯ್ಯ ಈ ಅವರ ಮೊದಲ ಅವಧಿಯ ಸರಕಾರದಲ್ಲಿ ಯೋಜನೆ ಮಂಜೂರುಗೊಂಡು, ಯಡಿಯೂರಪ್ಪ ಅವರ ಅವಧಿಯಲ್ಲಿ ಅನುಷ್ಠಾನಗೊಂಡು ಮತ್ತೆ ಸಿದ್ದರಾಮಯ್ಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಯಂಗಡಿಯ ಶ್ರೀ ಸಿದ್ಧಿ ವಿನಾಯಕ ವಸತಿ ಶಾಲೆಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಯುಕೆಜಿ ವಿದ್ಯಾರ್ಥಿಗಳ ಪದವಿ ಪ್ರಧಾನ ಸಮಾರಂಭವು ಸಡಗರದಿಂದ ಸಂಪನ್ನಗೊಂಡಿತ್ತು. ಮುಖ್ಯ ಅತಿಥಿಯಾಗಿ ಆಗಮಿಸಿದ ಕುಂದಾಪುರದ ಚಿನ್ಮಯಿ ಆಸ್ಪತ್ರೆಯ ಸ್ತ್ರೀ ರೋಗ ತಜ್ಞೆ ಡಾ. ಶ್ರೀದೇವಿ ಕಟ್ಟೆ ಅವರು ಮಕ್ಕಳಿಗೆ ಪದವಿ ಪ್ರಮಾಣಪತ್ರ ವಿತರಿಸಿ, ಮಾತನಾಡಿ, “ಮಕ್ಕಳು ದೇವರ ಉಡುಗೊರೆ, ಅವರಿಗೆ ಚಿಕ್ಕಂದಿನಿಂದಲೇ ಸಣ್ಣ-ಪುಟ್ಟ ಜವಾಬ್ದಾರಿಗಳನ್ನು ನೀಡಬೇಕು, ಆಗ ಮಾತ್ರ ತಮ್ಮ ಮುಂದಿನ ಜೀವನದಲ್ಲಿ ಎದುರಾಗುವ ಎಲ್ಲಾ ಸವಾಲುಗಳನ್ನು ಎದೆಗುಂದದೆ ಎದುರಿಸಲು ಸಮರ್ಥರಾಗುತ್ತಾರೆ. ಮಕ್ಕಳಿಗೆ ಸ್ವನಿಯಂತ್ರಣದ ಮಹತ್ವವನ್ನು ಮನವರಿಕೆ ಮಾಡಿಕೊಡಬೇಕು. ಪರೀಕ್ಷೆಯ ಅಂಕಕ್ಕಿಂತ ಮೌಲ್ಯಯುತ ಜೀವನ ಬಹಳ ಮುಖ್ಯ, ಪೋಷಕರು ಮಕ್ಕಳಿಗೆ ಆಧ್ಯಾತ್ಮಿಕತೆಯ ಮಹತ್ವವನ್ನು ಸಾರುವ ಕಥೆಗಳನ್ನು ಹೇಳಿ, ಅವರಲ್ಲಿ ಆಧ್ಯಾತ್ಮಿಕತೆ ಬೆಳೆಸಬೇಕು” ಎಂದರು. ಅವರು ತಮ್ಮ ಮಾತನ್ನು ಮುಂದುವರಿಸುತ್ತಾ , “ಮಕ್ಕಳನ್ನು ಶಾಲೆಗೆ ಕಳುಹಿಸಿದ ಮೇಲೆ ಪೋಷಕರ ಜವಾಬ್ದಾರಿ ಮುಗಿಯುತ್ತದೆ ಎಂದು ಭಾವಿಸದೆ, ಆ ಕ್ಷಣದಿಂದಲೇ ಪೋಷಕರ ಜವಾಬ್ದಾರಿ ಇಮ್ಮಡಿಯಾಗುತ್ತದೆಂದು ತಿಳಿಯಬೇಕು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಒಂದೂವರೆ ವರ್ಷದ ಅವಕಾಶವಿತ್ತರೂ ಕೇವಲ 188 ಹೋಮ್‌ಸ್ಟೇಗಳು ಮಾತ್ರ ನೋಂದಣಿಯಾಗಿದ್ದು, ಇನ್ನೊಂದು ತಿಂಗಳೊಳಗೆ ನೋಂದಣಿಯಾಗದ, ಸರಕಾರಿ ಜಾಗ/ಸಿಆರ್ ಝಡ್ ವ್ಯಾಪ್ತಿಯಲ್ಲಿರುವ ಹೋಂ ಸ್ಟೇ /ರೆಸಾರ್ಟ್‌ಗಳನ್ನು ಮುಚ್ಚಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ತಿಳಿಸಿದ್ದಾರೆ. ಅವರು ಅಂದು ಮಣಿಪಾಲ ರಜತಾದ್ರಿಯ ಜಿಲ್ಲಾ ಇಲಾಖೆಗಳ ಸಂಕೀರ್ಣದಲ್ಲಿರುವ ಆಟಲ್‌ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಪ್ರವಾಸಿಗರ ಭದ್ರತೆ ನಿಟ್ಟಿನಲ್ಲಿ ನಡೆದ ಹೋಮ್‌ಸ್ಟೇ ಹಾಗೂ ರೆಸಾರ್ಟ್‌ಗಳ ಮಾಲೀಕರ ಸಭೆಯಲ್ಲಿ ಮಾತನಾಡಿ, ಈಗಾಗಲೇ ನೋಂದಣಿಯಾದವರು ಮುನ್ನೆಚ್ಚರಿಕೆ ಕ್ರಮದ ಕುರಿತು 10 ದಿನಗಳೊಳಗೆ ಮುಚ್ಚಳಿಕೆ ಬರೆದು ಆನ್‌ಲೈನ್ ಮೂಲಕ ಸಲ್ಲಿಸಬೇಕು ಎಂದರು. ನಿರ್ಜನ ಪ್ರದೇಶಕ್ಕೆ ಪ್ರವಾಸಿಗರನ್ನು ಕರೆದೊಯ್ಯುವ ಮೊದಲು ಪೊಲೀಸರಿಗೆ ಮಾಹಿತಿ ನೀಡಬೇಕು. ಪ್ರವಾಸಿಗರು ಈಜುವ ಸಂದರ್ಭ ತಜ್ಞ ಈಜುಗಾರರು ರಕ್ಷಣೆಗಿರಬೇಕು. 24×7 ಹಾಗೂ ರಾತ್ರಿ ದೃಷ್ಟಿಯ ಸಿಸಿಟಿವಿ ಅಳವಡಿಸಬೇಕು ಎಂದರು. ಎಸ್ಪಿ ಡಾ.ಅರುಣ್ ಕೆ. ಮಾತನಾಡಿ, ನೋಂದಾಯಿತ ಹೋಮ್‌ಸ್ಟೇಗಳಿಗೆ ಬರುವವರಲ್ಲಿ ಪಾನ್, ಆಧಾರ್‌ ಅಥವಾ ಚಾಲನಾ ಪರವಾನಗಿಯ ದಾಖಲೆ ಪ್ರತಿ ಪಡೆದುಕೊಳ್ಳಲು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೊಲ್ಲೂರು: ಟಿಪ್ಪರ್ ಲಾರಿಗೆ ಬೈಕ್ ಢಿಕ್ಕಿ ಹೊಡೆದು ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ವಂಡ್ರೆ ಸಮೀಪದ ನೂಜಾಡಿ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಟಿಪ್ಪರ್ ಲಾರಿಯು ಬೈಕನ್ನು ಓವ‌ಟೇಕ್ ಮಾಡಿಕೊಂಡು ಹೋಗಿದ್ದು, ಆಗ ಅದಕ್ಕೆ ನಾಯಿ ಅಡ್ಡಬಂತು. ನಾಯಿಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಟಿಪ್ಪರ್ ಚಾಲಕನು ಏಕಾಏಕಿ ಬ್ರೇಕ್ ಹಾಕಿದ ಕಾರಣ ಹಿಂದಿನಿಂದ ಬರುತ್ತಿದ್ದ ಬೈಕ್ ಟಿಪ್ಪರ್‌ಗೆ ಢಿಕ್ಕಿ ಹೊಡೆಯಿತು. ಪರಿಣಾಮ ಗಂಭೀರವಾಗಿ ಗಾಯಗೊಂಡ ಬೈಕ್ ಸವಾರನಿಗೆ ಕುಂದಾಪುರ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಆತನನ್ನು ಮಣಿಪಾಲದ ದಾಖಲಿಸಲಾಗಿದೆ. ಟಿಪ್ಪರ್‌ ಚಾಲಕನ ಅತಿವೇಗ ಹಾಗೂ ನಿರ್ಲಕ್ಷತನ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಆರೋಪಿಸಲಾಗಿದೆ.

Read More