ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕಾಶ್ಮೀರದ ಶ್ರೀನಗರದಲ್ಲಿ ನಡೆದ ಇಂಟರ್ ಯೂನಿವರ್ಸಿಟಿ ಆಲ್ ಇಂಡಿಯಾ ಪವರ್ ಲಿಫ್ಟಿಂಗ್ ಚಾಂಪಿಯನ್ಶಿಪ್ 2024-25ರ ಸ್ಪರ್ಧೆಯಲ್ಲಿ ಜಿಲ್ಲೆಯ ಗುಂಡ್ಮಿ ಗ್ರಾಮದ ಸುಮಂತ್ ಪೂಜಾರಿ ಅವರು ತೃತೀಯ ಸ್ಥಾನದಲ್ಲಿ ಗೆದ್ದು ಕಂಚಿನ ಪದಕವನ್ನು ಪಡೆದು ಕರ್ನಾಟಕ ಹಾಗೂ ಉಡುಪಿ ಜಿಲ್ಲೆಗೆ ಕೀರ್ತಿ ತಂದಿರುತ್ತಾರೆ. ಈತ ಮಿಲಾಗ್ರಿಸ್ ಕಾಲೇಜ್ನಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಭಾರತೀಯ ಸೇನೆ/ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2 (ಎ), 3 (ಎ) ಹಾಗೂ (3ಬಿ) ಗಳ ಅರ್ಹ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನ ಮೊದಲನೇ ತಂಡದ ಆಯ್ಕೆಯ ಪೂರ್ವಸಿದ್ದತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಉಚಿತವಾಗಿ ನೀಡುತ್ತಿದ್ದು, ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ (ಬಾಲಕರಿಗೆ ಮಾತ್ರ) ಅರ್ಜಿ ಸಲ್ಲಿಸುವ ಅವಧಿಯನ್ನು ಏಪ್ರಿಲ್ 30 ರ ವರೆಗೆ ವಿಸ್ತರಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್ಸೈಟ್ https://bcwd.karnataka.gov.in ಅಥವಾ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಕೊಠಡಿ ಸಂಖ್ಯೆ: 304, ಬಿ. ಬ್ಲಾಕ್, ಎರಡನೇ ಮಹಡಿ, ರಜತಾದ್ರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2574881 ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹೊಳೆ ಪಾತ್ರಗಳಲ್ಲಿ ತುಂಬಿರುವ ಹೂಳು ಎತ್ತುವ ಸಂಬಂಧ 9 ತಿಂಗಳ ಹಿಂದೆ ನಡೆಸಿದ ಸಭೆಯ ನಿರ್ಣಯಗಳು ಕಾರ್ಯರೂಪಕ್ಕೆ ಬಂದಿಲ್ಲ. ಇನ್ನಿರುವ ಬೇಸಿಗೆಯ ಒಂದೂವರೆ ತಿಂಗಳಲ್ಲಿ ಹೇಗೆ ಕೆಲಸ ಮಾಡುವುದು. ಸುತ್ತಮುತ್ತಲಿನ ಪ್ರದೇಶಗಳಿಗೆ ಭೇಟಿ ನೀಡಿ ಕ್ರಿಯಾಯೋಜನೆ ತಯಾರಿಸುವಂತಹ ಕೆಲಸವನ್ನೂ ಮಾಡುವುದಿಲ್ಲ, ಸಭೆಯ ನಿರ್ಣಯವನ್ನು ಅನುಷ್ಠಾನ ಮಾಡುವುದಿಲ್ಲ ಎಂದರೆ ಹೇಗೆ? ಈಗ ಹಾಗೆ ಹೀಗೆ ಎಂದು ಕಾರಣಗಳನ್ನು ಹೇಳುತ್ತಿದ್ದೀರಿ. ಮೊದಲೇ ಹೇಳಿದ್ದರೆ ಪರಿಹಾರ ಕಂಡುಕೊಳ್ಳಬಹುದಿತ್ತು. ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಿ ಎಂದು ಶಾಸಕ ಕಿರಣ್ ಕುಮಾರ್ ಕೊಡ್ಗಿ ಹೇಳಿದರು. ಅವರು ಇಲ್ಲಿನ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಪ್ರಾಕೃತಿಕ ವಿಕೋಪದ ಮುಂಜಾಗ್ರತೆ, ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತಂತೆ ಪಂಚಾಯಿತಿ ಅಧಿಕಾರಿಗಳು, ಪ್ರತಿನಿಧಿ ಗಳು ಹಾಗೂ ನಾನಾ ಇಲಾಖಾಧಿಕಾರಿ ಗಳೊಂದಿಗೆ ನಡೆಸಿದ ಸಭೆಯಲ್ಲಿ ಸರಕಾರಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಅಸಮಾಧಾನ ಹೊರಹಾಕಿದರು. ಮಳೆಗಾಲದಲ್ಲಿ ನೆರೆ ಸಮಸ್ಯೆಯಿದ್ದು, ಪರಿಹಾರಕ್ಕಾಗಿ ಹೊಳೆಸಾಲುಗಳಲ್ಲಿ ಹೂಳೆತ್ತಲು ಅನುವಾಗುವಂತೆ 9 ತಿಂಗಳ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಬೈಂದೂರು ಮಂಡಲ ವತಿಯಿಂದ ಕಾಶ್ಮೀರದ ಪಹಲ್ಯಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ಉಗ್ರರು ನಡೆಸಿದ ಧರ್ಮಧಾರಿತ ನರಮೇಧವನ್ನು ಖಂಡಿಸಿ ಬಿಜೆಪಿ ಯುವಮೋರ್ಚಾ ಬೈಂದೂರು ಮಂಡಲ ಅಧ್ಯಕ್ಷರಾದ ಗಜೇಂದ್ರ ಎಸ್. ಬೇಲೆಮನೆ ಅವರ ನೇತೃತ್ವದಲ್ಲಿ ಉಪ್ಪುಂದ ದ ಕಾರ್ಯಕರ್ತ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಯಿತು. ಈ ವಿದ್ವಂಸಕ ಘಟನೆಯನ್ನು ಉದ್ದೇಶಿಸಿ ಬೈಂದೂರಿನ ಶಾಸಕದಾದ ಗುರುರಾಜ ಗಂಟಿಹೊಳೆ ಅವರು ಮಾತನಾಡಿ, ಮತಾಂಧ ಇಸ್ಲಾಮಿಕ್ ಭಯೋತ್ಪಾದಕರಿಗೆ ಖಂಡಿಸಿದರು. ಈ ಸಂದರ್ಭದಲ್ಲಿ , ಒಬಿಸಿ ಮೋರ್ಚಾ ಅಧ್ಯಕ್ಷರಾದ ಶಿವರಾಜ್ ಪೂಜಾರಿ, ಎಸ್ಸಿ ಮೋರ್ಚಾ ಅಧ್ಯಕ್ಷರಾದ ಅಶೋಕ್ ಎನ್ಡಿ, ಬಿಜೆಪಿ ಜಿಲ್ಲಾ ಯುವ ಮೋರ್ಚ ಕಾರ್ಯದರ್ಶಿ ಸುಧಾಕರ್ ಶೆಟ್ಟಿ ನೆಲ್ಯಾಡಿ, ಶಾಂತಿ ಖಾರ್ವಿ ಗಂಗೊಳ್ಳಿ, ಅಶೋಕ್ ದೇವಾಡಿಗ ಕಂಚಿಕಾನ್, ಕೃಷ್ಣ ಖಾರ್ವಿ ಕೊಡಿರಿ, ಅಶೋಕ್ ನಾಡ, ರವಿಚಂದ್ರ ವಿ. ಕೆ., ಗೋಪಾಲ್ ಪೂಜಾರಿ ವಸ್ರೆ, ದಿವಾಕರ್ ಶೆಟ್ಟಿ, ಪ್ರದೀಪ್ ಉಪ್ಪುಂದ, ಜಗದೀಶ್ ಆಲಂದೂರ್, ಅನುರ ಮೆಂಡನ್,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಅಮಾಯಕ ಮುಗ್ಧ 27 ಜನರು ಬಲಿಯಾಗಿದ್ದು ತೀವ್ರ ದುಃಖದ ವಿಚಾರವಾಗಿದೆ. ಇಂತಹ ನೀಚ ಕೃತ್ಯದ ಹಿಂದೆ ಇರುವವರ ವಿರುದ್ದ ಕೂಡಲೇ ಕ್ರಮಕೈಗೊಳ್ಳಬೇಕು ಎಂದು ಬೈಂದೂರು ಬ್ಲಾಕ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಶಬ್ಭೀರ್ ಬೈಂದೂರು ಅವರು ಹೇಳಿದರು. ಈ ವಿಷಯದಲ್ಲಿ ಜಾತಿ, ಧರ್ಮ ಮತ್ತು ಪಕ್ಷ ನೋಡದೆ ಎಲ್ಲರೂ ಒಂದಾಗಿ ಸರಕಾರಕ್ಕೆ ಬೆಂಬಲ ನೀಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಇಂತಹ ನೀಚ ಉಗ್ರವಾದವನ್ನು ಯಾವುದೇ ಧರ್ಮ ಒಪ್ಪಿಕೊಳ್ಳುವುದಿಲ್ಲ ಇದೊಂದು ಅಧರ್ಮದ ಕೆಲಸವಾಗಿದೆ. ದೇಶದ ಸಾಮರಸ್ಯವನ್ನು ಹತ್ತಿಕ್ಕುವ ಉಗ್ರ ಕಿಡಿಗೇಡಿಗಳ ಹೇಡಿತನದ ವಿರುದ್ಧ ಕೇಂದ್ರ ಸರಕಾರ ಕೂಡಲೇ ಕ್ರಮಗೊಳ್ಳಬೇಕು. ಈ ರೀತಿಯ ಭದ್ರತಾ ವೈಪಲ್ಯದಿಂದಾಗಿ ಮತ್ತೆ ಉಗ್ರರರ ಅಟ್ಟಹಾಸ ಮರುಕಳಿಸಿದಂತೆ ನೋಡಿಕೊಳ್ಳುವ ಜವಾಬ್ದಾರಿ ಸರಕಾರದ ಮೇಲಿದೆ. ಈ ಕೂಡಲೇ ಪ್ರವಾಸಿಗರು ಮತ್ತು ನಾಗರೀಕರ ರಕ್ಷಣೆಗೆ ಸರಕಾರ ಮುಂದೆ ಬರಬೇಕು ಹಾಗಾಗಿ ಕೇಂದ್ರ ಸರಕಾರ ಭಯೋತ್ಪಾದನೆ ನಿರ್ಮೂಲನೆ ಮಾಡುತ್ತೇವೆ ಸುಳ್ಳು ಹೇಳುವ ಬದಲು ಕೂಡಲೇ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ತೆಕ್ಕಟ್ಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೆದೂರು ವ್ಯಾಪ್ತಿಯಿಂದ ಕೋಟ ಗ್ರಾ.ಪಂ, ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯ ಸೂಲ್ಪಡು ಮಡಿವಾಳಸಾಲು ಹೊಳೆ ಹೂಳು ಸಮಸ್ಯೆಗೆ ಶೀಘ್ರದಲ್ಲಿ ಟೆಂಡರ್ ಪ್ರಕ್ರೀಯೆ ಪೂರ್ಣಗೊಳಿಸಿ ಈ ವರ್ಷದ ಮಳೆಗಾಲದ ಆರಂಭಕ್ಕೂ ಮೊದಲು ಹೂಳೆ ಹೂಳು ತೆಗೆಯಬೇಕೆಂದು ರೈತಧ್ವನಿ ಸಂಘದ ಪ್ರಮುಖರಾದ ಟಿ. ಮಂಜುನಾಥ್ ಗಿಳಿಯಾರ್ ಆಗ್ರಹಿಸಿದರು. ಅವರು ಕೋಟದ ಅಮೃತೇಶ್ವರಿ ದೇಗುಲದಲ್ಲಿ ಕೋಟದ ರೈತಧ್ವನಿ ಸಂಘಟನೆ ಸಭೆಯಲ್ಲಿ ಮಾತನಾಡಿದರು. ಕಳೆದ ಹಲವಾರು ವರ್ಷಗಳಿಂದ ತೆಕ್ಕಟ್ಟೆ ಉಳ್ಳೂರು, ಬೇಳೂರು, ಗಿಳಿಯಾರು, ಕಾರ್ತಟ್ಟು, ಚಿತ್ರಪಾಡಿ, ಬನ್ನಾಡಿ, ಉಪ್ಪಾಡಿ, ಸಾಲಿಗ್ರಾಮ ವ್ಯಾಪ್ತಿಯ ರೈತರು ಕೃತಕ ನೆರೆ ಹಾವಳಿಗೆ ತುತ್ತಾಗುತ್ತಿರುವ ಹಿನ್ನಲ್ಲೆಯಲ್ಲಿ ಕಳೆದ ಸಾಕಷ್ಟು ವರ್ಷಗಳಿಂದ ರೈತಧ್ವನಿ ಹೋರಾಟ ನಡೆಸಿದ್ದು ಪ್ರಸ್ತುತ ರಾಜ್ಯ ಸರಕಾರ ವಾರಾಹಿ ಯೋಜನೆಯಡಿ ಹೊಳೆ ಹೂಳೆ ತೆಗೆಯುವ ಸಂಬಂಧಿಸಿದ ಈಗಾಗಲೇ 4.5ವರೆ ಕೋಟಿ ಮಿಸಲಿರಿಸಿ ಟೆಂಡರ್ ಪ್ರಕೀಯೆ ಬಾಕಿ ಇರಿಸಿದೆ ಈ ಬಗ್ಗೆ ರೈತರು ಈ ವರ್ಷದ ಮಳೆಗಾಲದೊಳಗೆ ಹೊಳೆ ಹೂಳಿನಿಂದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ತೋಟಗಾರಿಕಾ ಇಲಾಖೆಯ ವತಿಯಿಂದ ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ ಕಾರ್ಯಕ್ರಮವನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ಆಯೋಜಿಸಲಾಗುತ್ತಿದ್ದು, ಆಸಕ್ತ ಅರ್ಹ ರೈತರ ಮಕ್ಕಳಿಂದ ತರಬೇತಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಏಪ್ರಿಲ್ 26 ರ ಸಂಜೆ 5 ಗಂಟೆಯವರೆಗೆ ವರೆಗೆ ವಿಸ್ತರಿಸಲಾಗಿದೆ. ಅಭ್ಯರ್ಥಿಗಳು ಕನಿಷ್ಟ ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಯ ಪೋಷಕರು ಕೃಷಿ ಜಮೀನು ಹೊಂದಿರಬೇಕು. ಜೊತೆಗೆ ಪಹಣಿ ನೀಡುವುದು ಕಡ್ಡಾಯವಾಗಿರುತ್ತದೆ. ಕನಿಷ್ಠ 18 ವರ್ಷ ಮೇಲ್ಪಟ್ಟ ಮತ್ತು ಗರಿಷ್ಠ ವಯಸ್ಸು ಸಾಮಾನ್ಯ ಅಭ್ಯರ್ಥಿಗಳಿಗೆ 30 ವರ್ಷ ಹಾಗೂ ಪ.ಜಾತಿ ಮತ್ತು ಪ.ಪಂಗಡದ ಅಭ್ಯರ್ಥಿಗಳಿಗೆ 33 ವರ್ಷ, ಮಾಜಿ ಸೈನಿಕರು ಪ್ರವೇಶ ಪಡೆಯಲು ಇಚ್ಚಿಸಿದಲ್ಲಿ ವಯಸ್ಸಿನ ಮಿತಿ 33 ರಿಂದ 65 ವರ್ಷ ದೊಳಗಿನವರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್ಸೈಟ್ https://horticulturedir.karnataka.gov.in ಅಥವಾ ತೋಟಗಾರಿಕೆ ಉಪನಿರ್ದೇಶಕರು, ಉಡುಪಿ ಅಥವಾ ಉಡುಪಿ, ಕುಂದಾಪುರ ಹಾಗೂ ಕಾರ್ಕಳ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪ್ರತಿಭೆ ನಿಮ್ಮದು ವೇದಿಕೆ ನಮ್ಮದು 2025ರ ಕಾರ್ಯಕ್ರಮದಡಿ ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಸತತ 106ನೇ ತಿಂಗಳ ಕಾರ್ಯಕ್ರಮವು ಇತ್ತೀಚಿಗೆ ದೇವಕಿ ಸುರೇಶ್ ಪ್ರಭು ಅವರ ಪ್ರಾರ್ಥನೆಯೊಂದಿಗೆ ಆರಂಭವಾಯಿತು. ನಿವೃತ್ತ ಪ್ರಾಂಶುಪಾಲ ಎಮ್. ರತ್ನಾಕರ ಪೈ ಅಧ್ಯಕ್ಷತೆ ವಹಿಸಿ ಮಾತನಾಡಿ, ಉಪ್ಪಿನಕುದ್ರಿನಂತಹ ಸಣ್ಣ ಹಳ್ಳಿಯಲ್ಲಿ ಇಂತಹ ಭವ್ಯ ವೇದಿಕೆಯನ್ನು ಡಾ. ಸುಧಾ ಮೂರ್ತಿ ಹಾಗೂ ಡಾ. ಪಿ, ದಯಾನಂದ ಪೈ ಅವರ ಪ್ರಾಯೋಜಕತ್ವದಲ್ಲಿ ನಿರ್ಮಿಸಲಾಗಿದೆ. ಪ್ರತಿಯೊಂದು ಕಲೆಯ ಕಲಾವಿದನಿಗೆ ಇಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಗೊಂಬೆಯಾಟ ಅಕಾಡೆಮಿ ಅವಕಾಶ ನೀಡುತ್ತಿದೆ. ಆ ಅವಕಾಶವನ್ನು ಎಲ್ಲರೂ ಸದುಪಯೋಗಪಡಿಸಿಕೊಳ್ಳಬೇಕು ಎಂದು ಮಕ್ಕಳಿಗೆ ತಿಳುವಳಿಕೆ ನೀಡಿದರು. ವೇದಿಕೆಯಲ್ಲಿ ಗೊಂಬೆಯಾಟದ ಹಿರಿಯ ಸೂತ್ರಧಾರಿ ವೆಂಕಟರಮಣ ಬಿಡುವಾಳ್, ಅನಸೂಯಾ ವಿ. ಬಿಡುವಾಳ್, ಯಶೋದಾ ಜೆ. ಪೂಜಾರಿ, ನರಸಿಂಹ ಪೂಜಾರಿ ಹಾಗೂ ಅಕಾಡೆಮಿ ಅಧ್ಯಕ್ಷ ಭಾಸ್ಕರ್ ಕೊಗ್ಗ ಕಾಮತ್ ಅವರು ಉಪಸ್ಥಿತರಿದ್ದರು. ಬಿಡುವಾಳ್ ಪ್ರತಿಷ್ಠಾನ, ಹೇರೂರು ಇದರ ಅಧ್ಯಕ್ಷರಾದ ವೆಂಕಟರಮಣ ಬಿಡುವಾಳ್ ದಂಪತಿಗಳನ್ನು ಹಾಗೂ ಅತ್ಯಂತ…
ಕುಂದಾಪ್ರ ಡಾಟ್ ಕಾಂ ಸುದ್ದಿಕುಂದಾಪುರ: ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಾನವ ಹಕ್ಕುಗಳ ಘಟಕ ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕ 1 ಮತ್ತು 2ರ ಆಶ್ರಯದಲ್ಲಿ ಮಾನವ ಹಕ್ಕುಗಳು ಮತ್ತು ಮೂಲಭೂತ ಹಕ್ಕುಗಳ ಕುರಿತು ವಿಶೇಷ ಉಪನ್ಯಾಸವನ್ನು ವಿದ್ಯಾರ್ಥಿಗಳಿಗಾಗಿ ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ಆಯೋಜಿಸಲಾಯಿತು. ಸಂಪನ್ಮೂಲ ವ್ಯಕ್ತಿ ಕುಂದಾಪುರದ ವಕೀಲರಾದ ಪ್ರದೀಪ್ ಕುಮಾರ್ ಶೆಟ್ಟಿ ಕಾಳಾವರ ಅವರು ಮಾತನಾಡಿ, ಮಾನವ ಹಕ್ಕುಗಳು ಮತ್ತು ಮೂಲಭೂತ ಹಕ್ಕುಗಳು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಎರಡನೇ ಮಹಾಯುದ್ಧದ ನಂತರ ಹತ್ಯೆ ಮತ್ತು ದೌರ್ಜನ್ಯಗಳಿಗೆ ಪ್ರತಿಕ್ರಿಯೆಯಾಗಿ ಆಧುನಿಕ ಪ್ರಪಂಚದಲ್ಲಿ ಮಾನವ ಹಕ್ಕುಗಳು ಹೊಸ ರೂಪುರೇಷೆ ಪಡೆದುಕೊಂಡವು. ಸಾರ್ವತ್ರಿಕವಾಗಿ ಜಾಗತಿಕ ಮನ್ನಣೆ ಪಡೆದ ಈ ಹಕ್ಕುಗಳು ಎಲ್ಲಾ ಮಾನವರ ಘನತೆಯನ್ನು ಗುರುತಿಸುವ ಮತ್ತು ರಕ್ಷಿಸುವ ಮಾನದಂಡಗಳಾಗಿವೆ. ಸಮಾನತೆಯ ಬದುಕುವ ಹಕ್ಕಿನ ಸಂದರ್ಭದಲ್ಲಿ ಸಂವಿಧಾನಾತ್ಮಕವಾಗಿ ಬಂದ ಮೂಲಭೂತ ಹಕ್ಕುಗಳು ಅಷ್ಟೇ ಪ್ರಾಮುಖ್ಯತೆ ಪಡೆಯುತ್ತವೆ. ಹಕ್ಕುಗಳೊಂದಿಗೆ ಕರ್ತವ್ಯಗಳ ಕುರಿತು ಸಹ ವಿದ್ಯಾರ್ಥಿಗಳು ಚಿಂತಿಸಬೇಕು ಎಂದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಯಳಜಿತ್ ಗ್ರಾಮದ ಹುಲ್ಕಡಕಿ ನಿವಾಸಿ ಬಸವ (38) ಎಂಬ ವ್ಯಕ್ತಿಯು ಏಪ್ರಿಲ್ 17 ರಂದು ಮನೆಯಿಂದ ಹೋದವರು ಇದೂವರೆಗೂ ವಾಪಾಸು ಬಾರದೇ ನಾಪತ್ತಯಾಗಿರುತ್ತಾರೆ. 5 ಅಡಿ ಎತ್ತರ, ಸಾಧಾರಣ ಶರೀರ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ಮರಾಠಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬೈಂದೂರು ಪೊಲೀಸ್ ಠಾಣೆ ದೂ.ಸಂಖ್ಯೆ: 08254-251033, ಮೊ.ನಂ: 9480805459, ಬೈಂದೂರು ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 08254-251031, ಮೊ.ನಂ: 9480805434 ಹಾಗೂ ಕಂಟ್ರೋಲ್ ರೂಂ 100 (0820-2526444) ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೈಂದೂರು ಪೊಲೀಸ್ ಠಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
