ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಹಿಂದಿ ವಿಭಾಗದ ಆಶ್ರಯದಲ್ಲಿ ‘ಓಣಂ’ನ್ನು ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ| ಕೆ. ಉಮೇಶ್ ಶೆಟ್ಟಿ ದೀಪ ಬೆಳಗಿಸಿ ಶುಭ ಹಾರೈಸಿದರು. ಈಸಂದರ್ಭ ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ಆಡಳಿತ ನಿಕಾಯಕರಾದ ರಕ್ಷಿತ್ ರಾವ್ ಗುಜ್ಜಾಡಿ, ಕಾಲೇಜಿನ ಹಿಂದಿ ವಿಭಾಗದ ಮುಖ್ಯಸ್ಥೆ ರೇವತಿ ಡಿ., ಸಹಾಯಕ ಪ್ರಾಧ್ಯಾಪಕಿ ಸರೋಜ ಉಪಸ್ಥಿತರಿದ್ದು, ಬೋಧಕ-ಬೋಧಕೇತರ ವೃಂದ, ವಿದ್ಯಾರ್ಥಿಗಳು ಹೂವಿನ ಪೂಕಳಂ ಹಾಕಿ ಸಾಂಪ್ರದಾಯಿಕ ಉಡುಗೆ ತೊಟ್ಟು ಸಂಭ್ರಮಿಸಿದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಭಾರತೀಯ ಜನತಾ ಪಾರ್ಟಿ ಕುಂದಾಪುರ ಮಂಡಲ ವತಿಯಿಂದ ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ BLA-2 ಕಾರ್ಯಕರ್ತರಿಗೆ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಕುರಿತು ಕಾರ್ಯಾಗಾರ ಮತ್ತು ಅಭಿನಂದನಾ ಸಮಾರಂಭವು ಕೋಟೇಶ್ವರ ಶಾರದಾ ಕಲ್ಯಾಣ ಮಂಟಪದಲ್ಲಿ ಜರುಗಿತು. ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಅವರು ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿ, “ಪ್ರಜಾಪ್ರಭುತ್ವದ ಆಧಾರವೇ ಮತದಾರರ ಪಟ್ಟಿ. ಒಬ್ಬ ಅರ್ಹ ಮತದಾರನೂ ಹೊರಗುಳಿಯಬಾರದು. BLA-2 ಕಾರ್ಯಕರ್ತರು ಕೊನೆಯ ಹಂತ ಬಾಕಿ ಇರುವುದರಿಂದ ಮನೆ ಮನೆಗೆ ಭೇಟಿ ನೀಡಿ ಖಚಿತ ಮಾಹಿತಿ ಸಂಗ್ರಹಿಸಬೇಕು” ಎಂದರು. ಕ್ಷೇತ್ರಾಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ಅಧ್ಯಕ್ಷತೆ ವಹಿಸಿ ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಕ್ಷದ BLA -2 ಹಾಗೂ ಘಟನಾಯಕ್ ರ ಕಾರ್ಯ ವೈಖರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ ಉಡುಪಿ ಚಿಕ್ಕಮಗಳೂರು ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಪ್ರಾಸ್ತಾವಿಕ ಮಾತನಾಡಿದರು. ಸಮಗ್ರ ಮತಪಟ್ಟಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ಉಡುಪಿ ಹಾಗೂ ಬಾರಕೂರಿನ ಸುಜ್ಞಾನ ನ್ಯಾಷನಲ್ ಪದವಿ ಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕಬಡ್ಡಿ ಪಂದ್ಯಾವಳಿ-2026 ಗುರುವಾರ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಿತು. ಪಂದ್ಯಾವಳಿಯನ್ನು ಬಾರಕೂರು ಎಜುಕೇಶನಲ್ ಟ್ರಸ್ಟ್ನ ಅಧ್ಯಕ್ಷರಾದ ಶಾಂತಾರಾಮ್ ಶೆಟ್ಟಿ ಉದ್ಘಾಟಿಸಿ ಮಾತನಾಡಿ, “ಶಿಕ್ಷಣದಷ್ಟೇ ಮಹತ್ವವನ್ನು ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೂ ನೀಡಬೇಕು. ವಿದ್ಯಾರ್ಥಿಗಳು ಸಿಗುವ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಸಾಧನೆಯ ಹಾದಿಯಲ್ಲಿ ಮುನ್ನಡೆಯಬೇಕು” ಎಂದು ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸುಜ್ಞಾನ ಎಜುಕೇಷನಲ್ ಟ್ರಸ್ಟ್ನ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ ಮಾತನಾಡಿ, “ವಿದ್ಯಾರ್ಥಿಗಳಲ್ಲಿ ಶಿಸ್ತು, ಆತ್ಮವಿಶ್ವಾಸ, ನಾಯಕತ್ವ ಹಾಗೂ ತಂಡದ ಮನೋಭಾವವನ್ನು ಬೆಳೆಸಲು ಕ್ರೀಡೆ ಅತ್ಯಗತ್ಯ” ಎಂದರು. ಬಾರಕೂರು ಎಜುಕೇಶನಲ್ ಟ್ರಸ್ಟ್ನ ಕಾರ್ಯದರ್ಶಿ ಅಶೋಕ್ ಕುಮಾರ್ ಶೆಟ್ಟಿ ಮಾತನಾಡಿ “ವಿದ್ಯಾರ್ಥಿಗಳು ಓದಿನ ಜೊತೆಗೆ ಕ್ರೀಡಾಸಕ್ತಿ ಹಾಗೂ ಸ್ಪರ್ಧಾತ್ಮಕ ಮನೋಭಾವವನ್ನು ಬೆಳೆಸಿಕೊಳ್ಳಬೇಕು” ಎಂದು ಕರೆ ನೀಡಿದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ, ಆಗಸ್ಟ್ 28: ರಕ್ಷಾ ಬಂಧನದ ಪ್ರಯುಕ್ತ ಬಿಜೆಪಿ ಕುಂದಾಪುರ ಮಹಿಳಾ ಮೋರ್ಚಾ ವತಿಯಿಂದ ಇಂದು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಅವರಿಗೆ ರಾಖಿ ಕಟ್ಟಿ ಶುಭ ಕೋರಲಾಯಿತು. ಮಹಿಳಾ ಮೋರ್ಚಾ ಪದಾಧಿಕಾರಿಗಳು ಶಾಸಕರ ಕಚೇರಿಯಲ್ಲಿ ಶಾಸಕರಿಗೆ ರಾಖಿ ಕಟ್ಟಿ, ಅವರ ದೀರ್ಘಾಯುಷ್ಯ ಮತ್ತು ಜನಸೇವೆಗೆ ಶಕ್ತಿ ನೀಡಲಿ ಎಂದು ಹಾರೈಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು “ರಕ್ಷಾ ಬಂಧನವು ಸಹೋದರ-ಸಹೋದರಿಯರ ಪವಿತ್ರ ಬಂಧದ ಸಂಕೇತ. ಸಹೋದರಿಯರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ” ಎಂದು ಹೇಳಿ ಮಹಿಳಾ ಮೋರ್ಚಾ ಪದಾಧಿಕಾರಿಗಳಿಗೆ ಶುಭಾಶಯ ಕೋರಿದರು. ಕಾರ್ಯಕ್ರಮದಲ್ಲಿ ಮಹಿಳಾ ಮೋರ್ಚಾ ಅಧ್ಯಕ್ಷೆ ಶ್ರೀಮತಿ ಸೌರಭಿ ಪೈ,, ಪ್ರಧಾನ ಕಾರ್ಯದರ್ಶಿಗಳಾದ ಶ್ರೀಮತಿ ಶ್ವೇತಾ ಶ್ರೀನಿಧಿ ಉಪಾಧ್ಯಾಯ, ವಿದ್ಯಾ ಸಾಲಿಯನ್,, ಜಿಲ್ಲಾ ಕಾರ್ಯದರ್ಶಿ ಅನಿತಾ ಶ್ರೀಧರ್, ಮಂಡಲ ಕಾರ್ಯದರ್ಶಿ ನೇತ್ರಾವತಿ ಮಡಿವಾಳ,, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಶ್ರೀಮತಿ ಲತಾ ಸುರೇಶ್ ಶೆಟ್ಟಿ ಗೋಪಾಡಿ ಹಾಗೂ ಪ್ರಮುಖರು, ಮಂಡಲ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇನ್ನೊಬ್ಬರ ಸೇವೆಯಲ್ಲಿ ನಾವು ಸುಖವನ್ನು ಕಾಣಬೇಕು. ವಿದ್ಯಾರ್ಥಿಗಳು ಸೇವಾ ಮನೋಭಾವವನ್ನು ಬೆಳೆಸಿಕೊಂಡು ಮುಂದೆ ಸಮಾಜ ಸೇವೆಯಲ್ಲಿ ತೊಡಗಿಕೊಳ್ಳಬೇಕು. ಅದಕ್ಕಾಗಿ ಇಂಟರ್ಯಾಕ್ಟ್ ಕ್ಲಬ್ ಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ರೋಟರಿ ಕ್ಲಬ್ ಕುಂದಾಪುರ ಮಿಡ್ ಟೌನ್ ಅಧ್ಯಕ್ಷ ಸಚಿನ್ ಕುಮಾರ್ ಶೆಟ್ಟಿ ನುಡಿದರು. ಅವರು ಇಲ್ಲಿನ ಕೆದೂರು ಸರಕಾರಿ ಪ್ರೌಢಶಾಲೆಯಲ್ಲಿ ಇಂಟರ್ಯಾಕ್ಟ್ ಕ್ಲಬ್ ಪದಗ್ರಹಣ ನೆರವೇರಿಸಿ ಮಾತನಾಡಿದರು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಪೋಲಿಯೋ ನಿರ್ಮೂಲನೆಯಲ್ಲಿ ರೋಟರಿ ಸಂಸ್ಥೆಯ ಸಹಕಾರವನ್ನು ಸ್ಮರಿಸಿದರು. ಕಳೆದ ಸಾಲಿನಲ್ಲಿ ಎಸ್ಎಸ್ಎಲ್ಸಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ಸಂಗೀತಾ ಮತ್ತು ಅನುದೀಪ ಇವರನ್ನು ನಗದು ಬಹಮಾನ ನೀಡಿ ಪುರಸ್ಕರಿಸಿದರು. ವಿಜಯ ಕರ್ನಾಟಕ ದಿನ ಪತ್ರಿಕೆಯವರು ಪ್ರಕಟಿಸುವ ಶೈಕ್ಷಣಿಕ ವಿದ್ಯಾರ್ಥಿ ಸಂಚಿಕೆಯನ್ನು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ದಾನಿಗಳ ನೆರವಿನಿಂದ ಉಚಿತವಾಗಿ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಕುಂದಾಪುರ ಮಿಡ್ ಟೌನ್ ಕಾರ್ಯದರ್ಶಿ ಪ್ರವೀಣ್ ಶೆಟ್ಟಿ ಅಂಪಾರು, ಇಂಟರ್ಯಾಕ್ಟ್ ಚೇರ್ ಮನ್ ನಿರಂಜನ ಶೆಟ್ಟಿ, ನಿಕಟ ಪೂರ್ವ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಕನ್ನಡ ವಿಭಾಗ ಸಾಹಿತ್ಯ ಸಂಘ ಮತ್ತು ಐಕ್ಯೂಎಸಿ ಸಹಯೋಗದೊಂದಿಗೆ ವಿಶ್ವ ಕುಂದಾಪುರ ದಿನಾಚರಣೆಯ ಪ್ರಯುಕ್ತ ಚೆನ್ನಿಮಣಿ- 2026 ಅಂತರ್ ತರಗತಿ ಕುಂದಗನ್ನಡ ಸಾಂಸ್ಕೃತಿಕ ಸ್ಪರ್ಧೆ ಕಾಲೇಜಿನ ಸಭಾಂಗಣದಲ್ಲಿ ಗುರುವಾರ ಜರುಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಕಾಲೇಜಿನ ಸಂಚಾಲಕರಾದ ಅನುಪಮಾ ಎಸ್. ಶೆಟ್ಟಿ ಇವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ, ಭಾಷೆ ಸಂಸ್ಕೃತಿ ಮತ್ತು ಸಂಪ್ರದಾಯದ ಪ್ರತಿಬಿಂಬವಾಗಿದ್ದು, ಭಾಷೆಯು ಬೆಳೆಯಬೇಕಾದರೆ ಜನರಲ್ಲಿ ಒಗ್ಗಟ್ಟು ಮುಖ್ಯ ಮತ್ತು ಅದನ್ನು ವಿಶ್ವ ಮಟ್ಟಕ್ಕೆ ಕೊಂಡೊಯ್ಯಬೇಕಾದರೆ ನಾವೆಲ್ಲ ಆ ಭಾಷಯನ್ನು ಬಳಸಿದಾಗ ಮಾತ್ರ ಸಾಧ್ಯ ಹಾಗಾಗಿ ಕುಂದಾಪುರ ಭಾಷೆ ಇತಿಹಾಸ, ಸಂಸ್ಕೃತಿ ಮತ್ತು ಪರಂಪರೆ ವೆಶಿಷ್ಟ್ಯವನ್ನು ಹೊಂದಿದ್ದರಿಂದ ಇಂದು ನಾವು ವಿಶ್ವ ಕುಂದಾಪುರ ದಿನಾಚಣೆಯನ್ನು ಹೆಮ್ಮೆಯಿಂದ ಆಚರಿಸುತ್ತಿದ್ದೇವೆ. ಆದ್ದರಿಂದ ವಿದ್ಯಾರ್ಥಿಗಳು ಕುಂದಾಪುರ ಭಾಷೆಯನ್ನು ಉಳಿಸುವುದರೊಂದಿಗೆ ಮೂಂದಿನ ಪೀಳಿಗೆಗೆ ತಲುಪಿಸುವ ಜವಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಮಥರ್ ತೆರೆಸಾ ಪದವಿ ಪೂರ್ವ ಕಾಲೇಜಿನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಮ್ಮ ಪುರಾತನ ಪರಂಪರೆ, ಸಂಸ್ಕೃತಿಯನ್ನು ನಾವುಗಳು ಸರಿಯಾಗಿ ಅರಿತುಕೊಂಡು ನಮ್ಮ ಬದುಕನ್ನು ರೂಪಿಸಿಕೊಳ್ಳುವ ಮಹತ್ತರ ಜವಾಬ್ದಾರಿ ನಮ್ಮದೆಂದು ಭಂಡಾರ್ಕಾರ್ಸ್ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಕಾಶ್ ಟಿ. ಸೋನ್ಸ್ ಹೇಳಿದರು. ಅವರು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ಆರ್.ಎನ್.ಶೆಟ್ಟಿ ಸಭಾಂಗಣದಲ್ಲಿ “ಸಾಂಪ್ರದಾಯಿಕ ದಿನಾಚರಣೆ” ಯ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ವಿಶ್ವಸ್ಥ ಮಂಡಳಿಯ ಉಪಾಧ್ಯಕ್ಷರಾಗಿರುವ ಕೆ. ಶಾಂತಾರಾಮ್ ಪ್ರಭು ಕಾರ್ಯಕ್ರಮದ ಕುರಿತು ಮೆಚ್ಚುಗೆಯ ಮಾತುಗಳನ್ನಾಡಿದರು. ಮುಖ್ಯ ಅತಿಥಿ ರೂಪ ಶೆಣೈ ಪ್ರಾಂಶುಪಾಲರು, ಗುರುಕುಲ ಪಬ್ಲಿಕ್ ಸ್ಕೂಲ್ ಕೋಟೇಶ್ವರ ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ, “ಮಣ್ಣಿನ ಅಸ್ಮಿತೆಗೆ ನಮ್ಮ ಪರಂಪರೆ ಸಂಪ್ರದಾಯ ದರ್ಪಣವಿದ್ದಂತೆ ಪರಂಪರೆ, ಸಂಸ್ಕೃತಿ, ಸಂಪ್ರದಾಯ ಈ ಮಣ್ಣಿನ ಬೇರು ಮಾನವನ ಪರಿಪೂರ್ಣ ಬದುಕಿನಲ್ಲಿ ವಿದ್ಯೆ ಬುದ್ಧಿ ಜ್ಞಾನ ಸಂಪ್ರದಾಯ ಆಚರಣೆ ಪರಂಪರೆ ಸಂಸ್ಕೃತಿ ಬಹಳ ಮುಖ್ಯ” ಎಂದು ನುಡಿದರು. ಗೌರವ ಅತಿಥಿ ಶೋಭಾ ಶೆಟ್ಟಿ ಕ್ಷೇತ್ರ ಶಿಕ್ಷಣಾಧಿಕಾರಿಗಳು , ಕುಂದಾಪುರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗೋಕರ್ಣ: ನಮ್ಮ ದೇಹಕ್ಕೆ ನಾವು ಪ್ರಭುಗಳಾಗಿದ್ದು, ಗಟ್ಟಿಯಾದ ಸಂಕಲ್ಪವನ್ನು ಮಾಡಿದಾಗ ದೇಹ ನಮ್ಮ ಅವಶ್ಯಕತೆಗೆ ತಕ್ಕಂತೆ ಬದಲಾಗುತ್ತದೆ. ಆಗ ನಾವು ದುರ್ಲಭವನ್ನೂ ಕೂಡ ಸಾಧಿಸಿಕೊಳ್ಳಬಹುದು.ಆದರೆ ಸಂಕಲ್ಪ ಧೃಢವಾಗಿರಬೇಕು ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಅವರು ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಧರ್ಮಸಭೆಯಲ್ಲಿ ‘ಅನ್ನಂ ಬ್ರಹ್ಮ’ ಮಾಲಿಕೆಯಲ್ಲಿ ಪ್ರವಚನ ಅನುಗ್ರಹಿಸಿದ ಶ್ರೀಗಳು, ಅಗ್ನಿ ಹಾಗೂ ಪ್ರಾಣಾಯಾಮಗಳು ಆಹಾರಕ್ಕೆ ಪೂರಕ ವಿಚಾರಗಳಾಗಿದ್ದು, ಪೀಠಿಕೆಯಿಲ್ಲದೇ ಪಾಠವಿಲ್ಲ ಎಂಬಂತೆ ಅಗ್ನಿಯ ಅರಿವಿಲ್ಲದೇ ಆಹಾರವನ್ನು ತಿಳಿದುಕೊಳ್ಳಲಾಗದು. ಹಸಿವು ಗೊತ್ತಾಗದವನಿಗೆ ಊಟದ ಸ್ವಾಧ ಗೊತ್ತಾಗದು. ಹಾಗೆಯೇ ಅಗ್ನಿಯನ್ನು ಸಮರ್ಪಕವಾಗಿ ತಿಳಿದುಕೊಳ್ಳದೇ ಇದ್ದರೆ ಆಹಾರದ ವಿಚಾರವನ್ನು ಸಂಪೂರ್ಣವಾಗಿ ತಿಳಿದುಕೊಂಡಂತಾಗುವುದಿಲ್ಲ. ಈ ಹಿನ್ನೆಲೆಯಲ್ಲಿ ಆಹಾರದ ಪ್ರವಚನ ಸರಣಿಯಲ್ಲಿ ಅಗ್ನಿಯ ಕುರಿತಾದ ವಿಚಾರಗಳನ್ನು ಪ್ರಸ್ತಾಪಿಸಲಾಯಿತು ಎಂದು ಹೇಳಿದರು. ಬಾವಿಯನ್ನು ತೋಡುವಾಗ ಎಲ್ಲಾ ಕಡೆ 5 – 10 ಅಡಿಗಳ ಗುಂಡಿಯನ್ನು ತೋಡಿದರೆ ನೀರು ಸಿಗುವುದಿಲ್ಲ. ಸರಿಯಾದ ಒಂದೇ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಮೀನುಗಾರಿಕೆ ಮುಗಿಸಿ ವಾಪಾಸು ಬರುತ್ತಿದ್ದ ಸಂದರ್ಭ ಆಯತಪ್ಪಿ ದೋಣಿಯಿಂದ ಸಮುದ್ರಕ್ಕೆ ಬಿದ್ದು ಮೀನುಗಾರರೊಬ್ಬರು ಮೃತಪಟ್ಟ ಘಟನೆ ಮರವಂತೆಯಲ್ಲಿ ಗುರುವಾರ ಬೆಳಗ್ಗೆ ಸಂಭವಿಸಿದೆ. ಮರವಂತೆ ಕುಪ್ಪನಮನೆ ನಿವಾಸಿ ಪರಮಜ್ಯೋತಿ (43) ಮೃತಪಟ್ಟ ಮೀನುಗಾರರು. ಮರವಂತೆಯ ಪ್ರದೀಪ್ ಖಾರ್ವಿ ಎಂಬುವರ ಧರ್ಮದೇವತೆ ದೋಣಿಯಲ್ಲಿ ಮೀನುಗಾರಿಕೆಗೆ ಹೋಗಿದ್ದ ಪರಮಜ್ಯೋತಿ ಅವರು ಮೀನುಗಾರಿಕೆ ಮುಗಿಸಿ ವಾಪಸ್ಸು ಮರವಂತೆ ಬಂದರಿಗೆ ಬರುವಾಗ ಅರಬಿ ಸಮುದ್ರದಲ್ಲಿ ಒಮ್ಮೆಲೇ ಜೋರಾಗಿ ಗಾಳಿ ಬೀಸಿದ ಕಾರಣ ದೋಣಿಯು ನೀರಿನಲ್ಲಿ ತೇಲಾಡಿದ ಪರಿಣಾಮ ಪರಮಜ್ಯೋತಿ ಆಯತಪ್ಪಿ ದೋಣಿಯಿಂದ ಸಮುದ್ರಕ್ಕೆ ಬಿದ್ದಿದ್ದಾರೆ. ಕೂಡಲೇ ಅವರನ್ನು ದೋಣಿಯಲ್ಲಿದ್ದ ಕೆಲಸಗಾರರು ನೀರಿನಿಂದ ಮೇಲಕ್ಕೆ ಎತ್ತಿ ಚಿಕಿತ್ಸೆಗೆ ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ, ವೈದ್ಯರು ಪರೀಕ್ಷಿಸಿ ಅದಾಗಲೇ ಪರಮಜ್ಯೋತಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬೈಕಿಗೆ ಹಿಂದಿನಿಂದ ಕಾರು ಢಿಕ್ಕಿಯಾಗಿ, ಬೈಕ್ ಸವಾರ ಗಂಭೀರ ಗಾಯಗೊಂಡು ಸಾವನ್ನಪ್ಪಿದ ಘಟನೆ ಗುರುವಾರ ಮಧ್ಯಾಹ್ನ ರಾ.ಹೆ. 66ರ ತಾಲೂಕಿನ ಹೆಮ್ಮಾಡಿ ಸಮೀಪದ ಕನ್ನಡಕುದ್ರು ಕ್ರಾಸ್ ಬಳಿ ಸಂಭವಿಸಿದೆ. ಹೆಮ್ಮಾಡಿ ಸಂತೋಷನಗರ ನಿವಾಸಿ ನರಸಿಂಹ ಆಚಾರ್ (60) ಸಾವನ್ನಪ್ಪಿದವರು. ಅವರು ತ್ರಾಸಿ ಕಡೆಯಿಂದ ಕುಂದಾಪುರ ಕಡೆಗೆ ಬೈಕ್ ಚಲಾಯಿಸಿಕೊಂಡು ಹೋಗುತ್ತಿದ್ದ ವೇಳೆ ಹಿಂದಿನಿಂದ ವೇಗವಾಗಿ ಹಾಗೂ ಅಜಾಗರೂಕತೆಯಿಂದ ದೀಪಕ್ ಕುಮಾರ್ ಕಾರು ಚಲಾಯಿಸಿಕೊಂಡು ಬಂದು ಢಿಕ್ಕಿ ಹೊಡೆದಿರುವುದಾಗಿದೆ. ಪರಿಣಾಮ ಬೈಕ್ ಸಹಿತ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ನರಸಿಂಹ ಆಚಾರ್ ಅವರನ್ನು ಆಸ್ಪತ್ರೆಗೆ ಕರೆದೊಯ್ದರೂ, ಅಷ್ಟರೊಳಗೆ ಸಾವನ್ನಪ್ಪಿರುವುದಾಗಿದೆ. ಸಂಚಾರ ಠಾಣಾ ಪಿಎಸ್ ಐ ಅನೂಪ್ ನಾಯಕ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಈ ಬಗ್ಗೆ ಕುಂದಾಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
