ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಗುಂಡ್ಮಿ ಪೆಟ್ರೋಲ್ ಬಂಕ್ ಎದುರುಗಡೆ ಸಾಸ್ತಾನ ಟೋಲ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಟಿಟಿ ವಾಹನ ಅಜಾಗರೂಕತೆಯಿಂದ ಸ್ಕೂಟರ್ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟಿದ್ದಾರೆ. ಸ್ಕೂಟರ್ ಸವಾರ ರವೀಂದ್ರ ಎಂದು ಗುರುತಿಸಲಾಗಿದೆ. ಉಡುಪಿಯಿಂದ ಕುಂದಾಪುರದ ಕಡೆಗೆ ಸಾಗುತ್ತಿದ್ದ ಟಿಟಿ ವಾಹನ ಅತಿ ವೇಗ ಮತ್ತು ಅಜಾಗರೂಕತೆಯಿಂದ ಸ್ಕೂಟರ್ಗೆ ಡಿಕ್ಕಿ ಹೊಡೆದ ಪರಿಣಾಮ ರವೀಂದ್ರ ಗಂಭೀರವಾಗಿ ಗಾಯಗೊಂಡಿದ್ದರು. ಚಿಕಿತ್ಸೆ ಬಗ್ಗೆ ಅವರನ್ನು ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಈ ಬಗ್ಗೆ ಕೋಟ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ವಿಶ್ವ ಜೇನುನೊಣ ದಿನಾಚರಣೆಯ ಅಂಗವಾಗಿ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ (ಸ್ವಾಯತ್ತ) ಸ್ನಾತಕೋತ್ತರ ಪ್ರಾಣಿಶಾಸ್ತ್ರ ವಿಭಾಗದ ‘ಜೇನುನೊಣ ಕೃಷಿ’ ಸರ್ಟಿಫಿಕೇಟ್ ಕೋರ್ಸ್ನ ವಿದ್ಯಾರ್ಥಿಗಳು ಜೇನುಸಾಕಣೆಯ ಪ್ರಾಯೋಗಿಕ ತರಬೇತಿಗಾಗಿ ಸಂಪಿಗೆ ಬಳಿಯ ಜೇನುಸಾಕಣೆ ಘಟಕಕ್ಕೆ ಭೇಟಿ ನೀಡಿದರು. ಸಂಪಿಗೆಯ ರೋಶು’ಸ್ ಹನಿ ಫಾರ್ಮ್ನ, ಅನುಭವಿ ಜೇನುಸಾಕಣೆದಾರ ಮತ್ತು ತರಬೇತುದಾರ ರೋಶನ್ ಲಾರೆನ್ಸ್ ಫೆರ್ನಾಂಡಿಸ್ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಪ್ರಕೃತಿಯಲ್ಲಿ ಮನುಷ್ಯನಿಲ್ಲವಾದರೂ ಭೂಮಿ ಉಳಿದಿತು ಆದರೆ ಜೇನುನೊಣಗಳಿಲ್ಲದೆ ಭೂಮಿಯನ್ನು ಊಹಿಸಲು ಸಾಧ್ಯವಿಲ್ಲ. ಪ್ರಕೃತಿಯಲ್ಲಾಗುವ ಶೇಕಡಾ 80 ಪರಾಗಸ್ಪರ್ಶ ಜೇನುನೊಣಗಳಿಂದ ನಡೆಯುತ್ತದೆ. ಆದ್ದರಿಂದ ಭೂಮಿಯ ಮೇಲೆ ಜೇನು ಜಾತಿಯೇ ಶ್ರೇಷ್ಠ ಜಾತಿ ಎಂದರು.ಅವರು ಜೇನುನೊಣಗಳ ಸಾಕಣೆ, ಜೇನುನೊಣ ಘಟಕದ ಸ್ಥಾಪನೆ, ಗಂಡು ಮತ್ತು ಹೆಣ್ಣು ಜೇನುನೊಣಗಳ ನಡುವಿನ ವ್ಯತ್ಯಾಸ, ಅವುಗಳ ಜೀವಿತಾವಧಿ ಮತ್ತು ಜೇನುಸಾಕಣೆಯ ಅಗತ್ಯ ಅಂಶಗಳಾದ ಜೇನುಸಾಕಣೆ ಪೆಟ್ಟಿಗೆ, ಪ್ರವೇಶ ದ್ವಾರ ಕಡಿತಗೊಳಿಸುವ ಸಾಧನ ಇತ್ಯಾದಿಗಳ ಬಗ್ಗೆ ಆಳವಾದ ಒಳನೋಟಗಳನ್ನು ಒದಗಿಸಿದರು. ವಿದ್ಯಾರ್ಥಿಗಳು ಜೇನು ತೆಗೆಯುವ ಪ್ರಕ್ರಿಯೆಯನ್ನು ಕೈಯಿಂದ ತಯಾರಿಸಿದ ಜೇನುತುಪ್ಪ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಓರ್ವ ಕಲಾವಿದನ ಬದುಕು ರಂಗಸ್ಥಳದಲ್ಲಿಯೇ ಗುರುತಿಸುವಂತಾಗಬೇಕು. ಕಲೆಯ ಮೇಲಿನ ಶೃದ್ಧೆ ಅವರ ಬದುಕಿಗೆ ದಾರಿಯಾಗಲಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಕೋಟ ಕಾರಂತ ಥೀಂ ಪಾರ್ಕ್ನಲ್ಲಿ ಯಕ್ಷಗಾನ ಕಲಾವಿದ ಮಾಧವ ನಾಗೂರು ಅಭಿನಂದನಾ ಸಮಿತಿ ವತಿಯಿಂದ ಮಾಧವ ನಾಗೂರು ಅವರ ಯಕ್ಷಯಾನದ ರಜತ ಸಂಭ್ರಮದ ಬೆಳ್ಳಿಪಥ ಅಭಿನಂದನೆ, ಗುರುವಂದನೆ, ನಿಧಿ ಸಮಪರ್ಣಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಯಕ್ಷಗಾನದಲ್ಲಿಬೆಳೆದು ಬರಲು, ಶಕ್ತಿ ತುಂಬಲು ಪ್ರೇರಣೆ, ಪ್ರೋತ್ಸಾಹಿಸುವುದರ ಜತೆಗೆ ಗುರುತಿಸುವ ಕೆಲಸ ಮಾಡುವುದು ಒಳ್ಳೆಯ ಕೆಲಸ. ಯಕ್ಷಗಾನ ಕಲಾವಿದರ ಬದುಕು ರೂಪಿಸುವ ಕೆಲಸವಾಗಬೇಕು. ಈ ಬಗ್ಗೆ ಸರ್ಕಾರದ ನೆಲೆಯಲ್ಲಿ ಹೆಚ್ಚಿನ ಕೆಲಸವಾಗಬೇಕು. ಓರ್ವ ಕಲಾವಿದನಿಗೆ ಸರ್ಕಾರ ನೀಡುವ ಪ್ರಶಸ್ತಿಗಳಿಗಿಂತಲೂ ಅಭಿಮಾನಿಗಳು ನೀಡುವ ಪ್ರಶಸ್ತಿಯೇ ದೊಡ್ಡದು ಎಂದು ಹೇಳಿದರು. ಇದಕ್ಕೂ ಮುನ್ನ ಹಿರಿಯ ಯಕ್ಷಗಾನ ಕಲಾವಿದ ದಯಾನಂದ ಬಳೆಗಾರ ನಾಗೂರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮಾಧವ ನಾಗೂರು ಅಭಿನಂದನಾ ಸಮಿತಿಯ ಅಧ್ಯಕ್ಷ ಆನಂದ ಸಿ. ಕುಂದರ್ ಅಧ್ಯಕ್ಷತೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಹಳೆಯ ಸೋಲುಗಳ ಬಗ್ಗೆ ಚಿಂತಿಸುತ್ತ ಕೂರುವುದರ ಬದಲು ಮುಂದಿನ ಗೆಲುವುಗಳ ಬಗ್ಗೆ ಯೋಜನೆಯನ್ನು ಹಾಕಿಕೊಳ್ಳಬೇಕು. ಛಲ ಬದ್ಧತೆ ಮತ್ತು ಪರಿಶ್ರಮದಿಂದ ಹೊಸ ಚರಿತ್ರೆ ಸೃಷ್ಟಿಸಲು ಸಾಧ್ಯ ಎಂದು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ನರೇಂದ್ರ ಎಸ್. ಗಂಗೊಳ್ಳಿ ಅಭಿಪ್ರಾಯಪಟ್ಟರು. ಅವರು ಕಲಾಶ್ರೀ ಶಿಕ್ಷಣ ಪ್ರೇಮಿಗಳ ಬಳಗದ ವತಿಯಿಂದ ಮೇಲ್ ಗಂಗೊಳ್ಳಿಯ ಅಂಬೇಡ್ಕರ್ ಭವನದಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ ಮತ್ತು ಪುಸ್ತಕ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಈ ಸಂದರ್ಭದಲ್ಲಿ ರಾಜ್ಯಮಟ್ಟದಲ್ಲಿ ಎರಡನೇ ರಾಂಕ್ ಗಳಿಸಿದ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಎಸ್ಎಸ್ಎಲ್ ಸಿ ವಿದ್ಯಾರ್ಥಿನಿ ಸುಶ್ಮಿತಾ ಎಸ್. ಗಾಣಿಗ, ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಅಗ್ರಸ್ಥಾನಿ ಕ್ಷಮಾ ಆರ್ ಆಚಾರ್ಯ, ಪಿಯುಸಿ ಯಲ್ಲಿ ಉತ್ತಮ ಸಾಧನೆ ಮಾಡಿದ ಜಯಶ್ರೀ ಮತ್ತು ಜ್ಯೋತಿಕಾ ಹಾಗೂ ಎಸ್ ಎಸ್ ಎಲ್ ಸಿ ಯಲ್ಲಿ ಉತ್ತಮ ಅಂಕಗಳನ್ನು ಗಳಿಸಿದ ರಿಷಿಕೇಶ, ಜ್ಯೋತಿಕಾ, ಸಂಜನಾ ಖಾರ್ವಿ ಮತ್ತು ಭಾಸ್ಕರ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ನಗರದ ಮಣಿಪಾಲದ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಐ.ಟಿ.ಐ) ಯಲ್ಲಿ ವಿವಿಧ ತಾಂತ್ರಿಕ ವೃತ್ತಿಪರ ಕೋರ್ಸುಗಳ ಪ್ರವೇಶಾತಿಗಾಗಿ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಹಾಗೂ ಪಿ.ಯು.ಸಿ ಅನುತ್ತೀರ್ಣರಾದ ಅರ್ಹ ವಿದ್ಯಾರ್ಥಿಗಳಿಂದ ಇಲಾಖೆಯ ವೆಬ್ಸೈಟ್ www.cite.karnataka.gov.in ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮೇ 28 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಪ್ರಗತಿನಗರ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2986145, ಮೊ.ನಂ: 9964247101, 9902001790, 9535270498 ಹಾಗೂ 9738439619 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಪ್ರಾಚಾರ್ಯರ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಮೂಡ್ಲಕಟ್ಟೆ ಕಾಲೇಜ್ ಆಫ್ ನರ್ಸಿಂಗ್ ನಲ್ಲಿ ಫ್ಲೋರೆನ್ಸ್ ನೈಟಿಂಗೇಲ್ ಅವರ ಜನ್ಮ ದಿನದ ಅಂಗವಾಗಿ ವಿಶ್ವ ದಾದಿಯರ ದಿನಾಚರಣೆಯನ್ನು ಕಾಲೇಜಿನ ಸಭಾಂಗಣದಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು. ದಾದಿಯರ ದಿನದ ಪ್ರಯುಕ್ತ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳಿಗೆ ಬೇಸಿಕ್ ಲೈಫ್ ಸಪ್ಪೋರ್ಟ್ ಮತ್ತು ಪ್ರಥಮ ಚಿಕಿತ್ಸಾ ತರಬೇತಿಯನ್ನು ಆಯೋಜಿಸಲಾಗಿತ್ತು. ಮುಖ್ಯ ಅತಿಥಿ ಮೆಡಿಷುರ್ ಹೆಲ್ತ್ ಕೇರ್ ಅಕಾಡೆಮಿಯ ಡೈರೆಕ್ಟರ್ ಹಾಗೂ ಪ್ರಮಾಣಿತ ತರಬೇತುದಾರರಾದ ಡಾ. ಆಸಿಫ್ ಅಶ್ರಫ್ ಕಾರ್ಯಕ್ರಮವನ್ನು ಉದ್ಘಾಟಿಸಿ ದಾದಿಯರ ದಿನಾಚರಣೆಯಂದು ದಾದಿಯರಿಗೆ ಪ್ರಾಮಾಣಿಕತೆ ಮತ್ತು ವಿನಮ್ರತೆಯು ಮುಖ್ಯ ಎಂದರು. ಉಪನ್ಯಾಸಕ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮ ಸಲಹೆಗಾರರಾದ ಚಂದ್ರಶೇಖರ್ ಅವರು ದಾದಿಯರ ದಿನದ ಮಹತ್ವವನ್ನು ಸಾರಿದರು. ವಿದ್ಯಾರ್ಥಿನಿಯಾದ ಆಯೇಷಾ ರಫೀದ ಕಾರ್ಯಕ್ರಮ ನಿರೂಪಿಸಿ, ಪ್ರಾಂಶುಪಾಲರಾದ ಜೆನಿಫರ್ ಫ್ರೀಡಾ ಮನೆಜಸ್ ಸ್ವಾಗತಿಸಿ, ಉಪ ಪ್ರಾಂಶುಪಾಲರಾದ ರೂಪಶ್ರೀ ಕೆ.ಎಸ್. ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಮುಂಬರುವ ಮಳೆಗಾಲದಲ್ಲಿ ಹೆಚ್ಚು ಮಳೆಯಿಂದಾಗಿ ಉಂಟಾಗುವ ಪ್ರಕೃತಿ ವಿಕೋಪ ವಿಪತ್ತುಗಳ ಪರಿಹಾರ ಕಾರ್ಯಗಳನ್ನು ತುರ್ತಾಗಿ ಕೈಗೊಳ್ಳಲು ಅಗತ್ಯವಿರುವ ಎಲ್ಲಾ ರೀತಿಯ ತಯಾರಿಯೊಂದಿಗೆ ಮುಂಚಿತವಾಗಿಯೇ ಯೋಜನೆಗಳನ್ನು ರೂಪಿಸಿಕೊಂಡು, ಕೂಡಲೇ ಸ್ಪಂದಿಸಲು ಸನ್ನದ್ಧರಾಗಿರಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮುಂಗಾರು ಮಳೆಗಾಲದಲ್ಲಿ ಮಳೆಯ ನೀರು ಹೆಚ್ಚಾಗಿ ಕೃತಕ ನೆರೆಗಳು ಉಂಟಾಗಿ ಮನೆಗಳಿಗೆ ಹಾಗೂ ಕೃಷಿ ಜಮೀನುಗಳಿಗೆ ನೀರು ನುಗ್ಗಿ ಹಾನಿ ಉಂಟಾಗುತ್ತದೆ. ಕಳೆದ ಮಳೆಗಾಲದಲ್ಲಿ ಇಂತಹ ಪ್ರಕರಣಗಳು ಉಂಟಾಗಿ ಸಾರ್ವಜನಿಕರು ತೊಂದರೆಯನ್ನು ಅನುಭವಿಸಿದ್ದಾರೆ. ಈ ಬಾರಿ ಹೀಗಾಗದಂತೆ ಅಗತ್ಯವಿರುವ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ರಾಜ ಕಾಲುವೆ, ತೋಡುಗಳಲ್ಲಿ ನೀರು ಸರಾಗವಾಗಿ ಹರಿದು ಹೋಗುವಂತೆ ಕ್ರಮವಹಿಸಲು ಈಗಾಗಲೇ ಕಳೆದ ಎರಡು ಮೂರು ತಿಂಗಳಿನ ಹಿಂದೆ ಸೂಚಿಸಲಾಗಿದೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಛಾಯಾ ತರಂಗಿಣಿ ಸಂಗೀತ ಶಾಲೆ ಕೋಟ ಹರ್ತಟ್ಟು ಇದರ ದಶಮಾನೋತ್ಸವ ಸಂಭ್ರಮವು ಮೇ.15 ರಂದು ಕೋಟದ ಕಾರಂತ ಥೀಂ ಪಾರ್ಕ್ನಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಸಂಸದ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಲಿದ್ದು, ಗುರುವಂದನಾ ಕಾರ್ಯಕ್ರಮದ ಅಂಗವಾಗಿ ವಿದ್ವಾನ್ ಮಧೂರು ಪಿ. ಬಾಲ ಸುಬ್ರಹ್ಮಣ್ಯಂ, ವಿದುಷಿ ಶರ್ಮಿಳ ರಾವ್ ಅವರುಗಳು ಗುರವಂದನಾ ಗೌರವ ಸ್ವೀಕರಿಸಲಿದ್ದಾರೆ. ಅಧ್ಯಕ್ಷತೆಯನ್ನು ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ. ಕುಂದರ್ ವಹಿಸಲಿದ್ದಾರೆ. ಸಾಂಸ್ಕೃತಿಕ ಕಾರ್ಯಕ್ರಮದ ಭಾಗವಾಗಿ ಛಾಯಾ ತರಂಗಣಿ ವಿವಿಧ ಶಾಖೆಯ ವಿದ್ಯಾರ್ಥಿಗಳಿಂದ ಗಾನ ನಮನ, ಅನಘಾ ಆರ್ ವಿ., ತನ್ಮಯ್ ಬಿಜೂರು, ವಿದ್ವಾನ್ ಮಧೂರು ಪಿ ಬಾಲಸುಬ್ರಹ್ಮಣ್ಯಂ ,ವಿದುಷಿ ಶರ್ಮಿಳ ರಾವ್ ಅವರಿಂದ ಕರ್ನಾಟ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ಜರಗಲಿದೆ ಎಂದು ಸಂಸ್ಥೆಯ ಮುಖ್ಯಸ್ಥೆ ಭಾಗೇಶ್ವರಿ ಜಿ. ಮಯ್ಯ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರೈತರು ಹೊಸ ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಕೃಷಿಯಲ್ಲಿ ಹೆಚ್ಚು ಆದಾಯ ಗಳಿಸುವಂತಾಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಉಡುಪಿ ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ವತಿಯಿಂದ ನೂತನವಾಗಿ ಕೋಟೇಶ್ವರದಲ್ಲಿ ನಿರ್ಮಿಸಲಾಗಿರುವ ಕುಂದಾಪುರ ರೈತ ಸಂಪರ್ಕ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ರೈತರು ಕೃಷಿಯಲ್ಲಿ ಆಧುನಿಕರಣ ಕಂಡುಕೊಳ್ಳಬೇಕು, ರೈತರು ಸುಖಿಯಾಗಿದ್ದಾಗ ಮಾತ್ರ ದೇಶ ಅಭಿವೃದ್ಧಿಯಾದಂತೆ ಎಂದು ಹೇಳಿದರು. ರೈತ ಸಂಪರ್ಕ ಕೇಂದ್ರಗಳು ರೈತರಿಗೆ ಅನುಕೂಲವಾಗಿದೆ. ಕೃಷಿಯ ಬಗ್ಗೆ ಅಧಿಕಾರಿಗಳು ರೈತರಿಗೆ ಸೂಕ್ತ ಮಾರ್ಗದರ್ಶನ ಹಾಗೂ ಸಲಹೆ ನೀಡಬೇಕು. ಸರ್ಕಾರದ ಯೋಜನೆಗಳನ್ನು ರೈತರ ಮನೆ ಬಾಗಿಲಿಗೆ ತಲುಪಿಸಬೇಕು, ಅಧಿಕಾರಿಗಳು ರೈತರು ಹಾಗೂ ಸರ್ಕಾರದ ಮಧ್ಯೆ ಕೊಂಡಿಯಾಗಿ ಕೆಲಸ ಮಾಡಬೇಕು, ರೈತರ ಮಿತ್ರರಾಗಿ ಕೆಲಸ ಮಾಡಬೇಕು ಎಂದು ಸಚಿವರು ಕರೆ ನೀಡಿದರು. ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಸರ್ಕಾರ ರೈತರ ಪರ ಸರ್ಕಾರ, ರೈತರ ಪರ ಕಾಳಜಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ, ಕಸ್ತೂರಬಾ ಆಸ್ಪತ್ರೆ ಮಣಿಪಾಲ ಲಯನ್ಸ್ ಕ್ರೌನ್ ಕುಂದಾಪುರ, ರಾಷ್ಟ್ರೀಯ ಸೇವಾ ಯೋಜನೆ, ರೋವರ್ಸ್ ಮತ್ತು ರೇಂಜರ್ಸ್, ರೆಡ್ ರಿಬ್ಬನ್ ಕ್ಲಬ್ , ಎನ್.ಸಿ.ಸಿ ಇವರು ಸಹಯೋಗದೊಂದಿಗೆ “ಸ್ವಯಂಪ್ರೇರಿತ ಬ್ರಹತ್ ರಕ್ತದಾನ ಶಿಬಿರ” ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಮಾತನಾಡಿದ ಮಣಿಪಾಲ ಕಸ್ತೂರಬಾ ಆಸ್ಪತ್ರೆ ಇದರ ಸಂಯೋಜಿತ ಆರೋಗ್ಯ ಮತ್ತು ಜೈವಿಕ ವೈದ್ಯಕೀಯ ಕಾರ್ಯಕ್ರಮ ಇಲ್ಲಿನ ದೀಪ್ ಮಡ್ಕಂಕರ್ ಅವರು ರಕ್ತದಾನದ ಮಹತ್ವವನ್ನು ವಿವರಿಸಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕುಂದಾಪುರ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಇದರ ಸಭಾಪತಿ ಜಯಕರ್ ಶೆಟ್ಟಿ ಮಾತನಾಡಿ, ತಂತ್ರಜ್ಞಾನ ಮುಂದುವರೂ ರಕ್ತ ತಯಾರಿಸಲು ಅಥವಾ ದೇಹದ ಅಂಗಾಂಗಗಳು ತಯಾರಿ ತಂತ್ರಜ್ಞಾನ ಬಂದಿಲ್ಲ. ಒಂದೊಮ್ಮೆ ತೀವ್ರ ರಕ್ತಸ್ರಾವವಾದರೆ ರಕ್ತ ನೀಡುವುದರಿಂದ ಮಾತ್ರ ರಕ್ತಸ್ರಾವ ನಿಲ್ಲಿಸಬಹುದು. ರಕ್ತನಿಧಿಗಳಲ್ಲಿ ರಕ್ತದ ಕೊರತೆ ಇದೆ. ಹಾಗಾಗಿ ರಕ್ತದಾನ ಮಾಡಿ…
