ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಕೋಟತಟ್ಟು ಗ್ರಾಮಪಂಚಾಯತ್, ಎಸ್ ಎಲ್ ಆರ್ ಎಂ ಘಟಕ ಇವರ ಸಹಯೋಗದೊಂದಿಗೆ ಸತತ 297ನೇ ಭಾನುವಾರ ಪರಿಸರಸ್ನೇಹಿ ಅಭಿಯಾನ ಕೋಟತಟ್ಟು ಪಡುಕರೆ ಬೀಚ್ ಕ್ಲಿನಿಂಗ್ ಕಾರ್ಯಕ್ರಮ ಆಯೋಜಿಸಿತು. ಬೀಚ್ ತಟದಲ್ಲಿದ್ದ ಸಾಕಷ್ಟು ಪ್ರಮಾಣದ ತ್ಯಾಜ್ಯಗಳನ್ನು ತೆರವುಗೊಳಿಸಲಾಯಿತು. ಕೋಟತಟ್ಟು ಗ್ರಾಮಪಂಚಾಯತ್ ಎಸ್ ಎಲ್ ಆರ್ ಎಂ ಘಟಕದ ರಂಜನಿ ಮೊಗವೀರ, ಪಂಚವರ್ಣ ಯುವಕ ಮಡಲದ ನಿಕಟಪೂರ್ವ ಅಧ್ಯಕ್ಷ ಅಜಿತ್ ಆಚಾರ್, ಉಪಾಧ್ಯಕ್ಷ ದಿನೇಶ್ ಆಚಾರ್, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಉಪಾಧ್ಯಕ್ಷೆ ಪುಷ್ಭ ಹಂದಟ್ಟು ಮತ್ತಿತರರು ಉಪಸ್ಥಿತರಿದ್ದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಕೃತಿದತ್ತ ಸಹಜ ಸೌಂದರ್ಯ ಹೊದಿರುವ ಉಡುಪಿ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಕ್ಷೇತ್ರ ಭವಿಷ್ಯದಲ್ಲಿ ಇನ್ನಷ್ಟು ಅಭಿವೃದ್ಧಿ ಹೊಂದಬೇಕು. ಈ ನಿಟ್ಟಿನಲ್ಲಿ ಎಲ್ಲಾ ಸಕ್ರೀಯ ಪಾಲುದಾರರು ಪರಿಸರ ಸ್ನೇಹಿ ಪ್ರವಾಸೋದ್ಯಮದ ಸಮಗ್ರ ಅಭಿವೃದ್ಧಿಗೆ ಪೂರಕವಾದ ನೀಲನಕಾಶೆಯನ್ನು ಸಿದ್ಧಪಡಿಸಿ, ಶೀಘ್ರವಾಗಿ ಪ್ರಸ್ತುತಪಡಿಸುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ತಿಳಿಸಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಉತ್ತೇಜಿಸುವ ಕುರಿತಾಗಿ ಜಿಲ್ಲೆಯ ಪ್ರವಾಸೋದ್ಯಮ ಪಾಲುದಾರರೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಕಡಲ ಕಿನಾರೆಗಳು, ರಮಣೀಯ ಪಶ್ಚಿಮ ಘಟ್ಟಗಳ ಶ್ರೇಣಿಗಳು, ಕಾನನಗಳು, ಝರಿಗಳು ಹಾಗೂ ಧಾರ್ಮಿಕ ಕ್ಷೇತ್ರಗಳು ಪ್ರಮುಖವಾಗಿದ್ದು, ಸಾವಿರಾರು ಪ್ರವಾಸಿಗರು ಆಗಮಿಸಿ ಜಿಲ್ಲೆಯ ಸೌಂದರ್ಯ ಕಣ್ತುಂಬಿಕೊಳ್ಳುತ್ತಿದ್ದಾರೆ. ಯಾವುದೇ ಪ್ರವಾಸೋದ್ಯಮ ಅಭಿವೃದ್ಧಿ ಚಟುವಟಿಕೆ ಕೈಗೊಳ್ಳುವ ಮುನ್ನ ಪ್ರವಾಸಿ ತಾಣಗಳಲ್ಲಿ ಕುಡಿಯುವ ನೀರು, ಶೌಚಾಲಯ, ಪಾರ್ಕಿಂಗ್, ವಸತಿ ಸೇರಿದಂತೆ ಮತ್ತಿತರ ಮೂಲಭೂತ ಸೌಕರ್ಯ ಕಲ್ಪಿಸಲು ಒತ್ತು ನೀಡುವ ರೀತಿಯಲ್ಲಿ ಯೋಜನೆ ರೂಪಿಸಿ ಪ್ರಸ್ತುತ ಪಡಿಸಲು ಮೊದಲ ಆದ್ಯತೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಮಣೂರು ಗ್ರಾಮದ ಬಾಳೆಬೆಟ್ಟು ಬಸ್ಸು ನಿಲ್ದಾಣದ ಬಳಿ ಸಮೀಪದಲ್ಲಿ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಓರ್ವ ಆರೋಪಿಯನ್ನು ಕೋಟ ಪೊಲೀಸರು ಬಂಧಿಸಿದ್ದಾರೆ ಬಂಧಿತನನ್ನು ಬೇಳೂರು ಗ್ರಾಮದ ಆದಿತ್ಯ ಶೆಟ್ಟಿ (28) ಎಂದು ಗುರುತಿಸಲಾಗಿದೆ. ಇನ್ನೋರ್ವ ಸಂದೀಪ ಗಾಣಿಗ ನೂಜಿ ಎಂಬಾತ ಪರಾರಿಯಾಗಿ ತಲೆಮರೆಸಿಕೊಂಡಿದ್ದಾನೆ. ಐಪಿಎಲ್ ಕ್ರಿಕೆಟ್ ಪಂದ್ಯಾಟ ಸಂಬಂಧಪಟ್ಟು ಸಾರ್ವಜನಿಕರಿಂದ ಹಣ ಸಂಗ್ರಹ ಮಾಡಿ ಬೆಟ್ಟಿಂಗ್ ಅಕ್ರಮ ದಂಧೆ ಯಲ್ಲಿ ತೊಡಗಿರುವ ಕುರಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು, ಓರ್ವನನ್ನು ವಶಕ್ಕೆ ಪಡೆದುಕೊಂಡರು. ಈ ಬಗ್ಗೆ ಕೋಟ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ತೆಕ್ಕಟ್ಟೆಯ ವಿಶ್ವ ವಿನಾಯಕ ಸಿ.ಬಿ.ಎಸ್‌ಇ ಸ್ಕೂಲ್‌ನಲ್ಲಿ ಯು.ಕೆ.ಜಿ. ಮಕ್ಕಳ ಗ್ರಾಜುಯೇಷನ್ ಡೇ ಕಾರ್ಯಕ್ರಮವನ್ನು ಇತ್ತೀಚಿಗೆ ಆಯೋಜಿಸಲಾಗಿತ್ತು. ಅತಿಥಿಗಳಾಗಿ ಆಗಮಿಸಿದ ವರ್ಷಿಣಿ ಪೈ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಮಕ್ಕಳ ಬಾಲ್ಯದಲ್ಲಿ ಹೆತ್ತವರು ಬಹಳಷ್ಟು ಮುತುವರ್ಜಿ ವಹಿಸಿ. ಮಾನಸಿಕ ಹಾಗೂ ದೈಹಿಕ ಬೆಳವಣಿಗೆಗೆ ಪೂರಕವಾಗಬೇಕು. ಮಕ್ಕಳ ಪ್ರಾರಂಭಿಕ ಬೆಳವಣಿಗೆ ಹಾಗೂ ಕಲಿಕೆಯಲ್ಲಿ ಹೆತ್ತವರ ಪಾತ್ರ ಮಹತ್ತರವಾಗಿರುತ್ತದೆ. ಮಕ್ಕಳ ಸೂಕ್ಷ್ಮ ಮನಸ್ಸಿನ ಬೆಳವಣಿಗೆಗೆ ಉತ್ತಮ ವಾತಾವರಣ ಕಲ್ಪಿಸಿ ಕೊಡುವುದು ಪೋಷಕರ ಕರ್ತವ್ಯವಾಗಿದೆ ಎಂದು ತಿಳಿಸಿದರು. ಪ್ರಾಂಶುಪಾಲ ನಿತಿನ್ ಡಿ’ ಆಲ್ಮೇಡಾ ಪ್ರಾಸ್ತಾವಿಕ ಮಾತುಗಳನ್ನಾಡಿ, ಶಾಲಾ ಶೈಕ್ಷಣಿಕ ಚಟುವಟಿಕೆಗಳ ಕುರಿತು ವಿವರಿಸಿದರು. ಪೋಷಕರು ಮಕ್ಕಳೊಂದಿಗೆ ಸಮಯವನ್ನು ವ್ಯಯಿಸಿ ಅವರ ಸಂತೋಷದಲ್ಲಿ ಭಾಗವಹಿಸಿ ಪ್ರೋತ್ಸಾಹಿಸಬೇಕು ಎಂದು ತಿಳಿಸಿದರು. ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್ ಎಮ್. ಪ್ರಭಾಕರ ಶೆಟ್ಟಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪದವಿ ಸ್ವೀಕರಿಸಿದ ವಿದ್ಯಾರ್ಥಿಗಳಿಗೆ ಶುಭ ಕೋರಿ ಪೋಷಕರ ಸಹಕಾರವನ್ನು ಸ್ಮರಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು ಹಾಗೂ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಮಣೂರು ಮಹಾಲಿಂಗೇಶ್ವರ ಜಾತ್ರೋತ್ಸವದ ಅಂಗವಾಗಿ ಗೀತಾನಂದ ವೇದಿಕೆಯಲ್ಲಿ ಮಣೂರು ಫ್ರೆಂಡ್ಸ್ ಮಣೂರು ಇದರ ರಜತ ಸಂಭ್ರಮ ಕಾರ್ಯಕ್ರಮದಲ್ಲಿ ಕೋಟದ ಪಂಚವರ್ಣ ಸಂಘಟನೆಗೆ ಅತ್ಯುತ್ತಮ ಸಂಘಟನಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಈ ಪುರಸ್ಕಾರವನ್ನು ಸಂಘದ ಅಧ್ಯಕ್ಷರಾದ ಮನೋಹರ್ ಪೂಜಾರಿ, ಮಹಿಳಾಧ್ಯಕ್ಷೆ ಲಲಿತಾ ಪೂಜಾರಿ ಸ್ವೀಕರಿಸಿದರು. ಗಣ್ಯರಾದ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ. ಕುಂದರ್, ಮಣೂರು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸತೀಶ್ ಹೆಚ್. ಕುಂದರ್, ಮಣೂರು ಫ್ರೆಂಡ್ಸ್‌ನ ಗೌರವ ಸಲಹೆಗಾರ ಸುಬ್ರಾಯ ಆಚಾರ್, ಸಮಾಜಸೇವಕ ಮಲ್ಯಾಡಿ ಶಿವರಾಮ ಶೆಟ್ಟಿ, ಉದ್ಯಮಿ ಗಣೇಶ್ ಸೀಲ್ಕ್ಸ್ ಅನಂತ್ ನಾಯಕ್, ಮಣೂರು ಫ್ರೆಂಡ್ಸ್ ಅಧ್ಯಕ್ಷ ರಾಘವೇಂದ್ರ ಆಚಾರ್ ಇದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ಸಾಹಿತ್ಯ ಅಕಾಡೆಮಿಯು 2025ನೇ ವರ್ಷದಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡಿರುವ ಸಾಹಿತ್ಯದ ವಿವಿಧ ಪ್ರಕಾರಗಳ ಕೃತಿಗಳನ್ನು ಬಹುಮಾನಕ್ಕಾಗಿ ಆಹ್ವಾನಿಸಲಾಗಿದೆ ಬಹುಮಾನಕ್ಕಾಗಿ ಲೇಖಕರು, ಪ್ರಕಾಶಕರು, ಸಾಹಿತ್ಯಾಸಕ್ತ ಸಾರ್ವಜನಿಕರು ಪುಸ್ತಕದ ನಾಲ್ಕು ಪ್ರತಿಗಳನ್ನು ರಿಜಿಸ್ಟಾçರ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, ಎರಡನೇ ಮಹಡಿ, ಜೆ.ಸಿ ರಸ್ತೆ, ಬೆಂಗಳೂರು ವಿಳಾಸಕ್ಕೆ ಅಂಚೆ / ಕೊರಿಯರ್ ಮೂಲಕ ಅಥವಾ ಖುದ್ದಾಗಿ ಜೂನ್ 30ರ ತಲುಪಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿಯ ವೆಬ್‌ಸೈಟ್ www.sahithyaacademy.karnataka.gov.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಕಾಡೆಮಿಯ ರಿಜಿಸ್ಟಾçರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆಗಲಲ್ಲಿ 2026-27 ನೇ ಸಾಲಿನ 6ನೇ ತರಗತಿ ಪ್ರವೇಶಾತಿಗಾಗಿ, ಈಗಾಗಲೇ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆಯು ಏಪ್ರಿಲ್ 12 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1ರ ವರೆಗೆ ಬೈಂದೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ನಡೆಯಲಿದೆ. ಪ್ರವೇಶ ಪತ್ರಗಳನ್ನು ಆನ್‌ಲೈನ್ https://dom.karnataka.gov.in ಮೂಲಕ ಡೌನ್‌ಲೋಡ್ ಮಾಡಿಕೊಳ್ಳಬಹುದು ಅಥವಾ ಜಿಲ್ಲಾ ಕಚೇರಿ, ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಹಾಗೂ ಸಂಬAಧಪಟ್ಟ ವಸತಿ ಶಾಲೆಗಳ ಪ್ರಾಂಶುಪಾಲರನ್ನು ಸಂಪರ್ಕಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ: 0820-2573596, 2574596, 08258-231101 ಮತ್ತು 08254-230370 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಕ್ಷೇತ್ರಗಳಲ್ಲಿ ಅನನ್ಯ ಸೇವೆ ಸಲ್ಲಿಸುತ್ತಿರುವ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ. ಮೋಹನ್ ಆಳ್ವರಿಗೆ, ಬೆಂಗಳೂರಿನ ನಗರ ವಿಶ್ವವಿದ್ಯಾಲಯ (ಡಾ. ಮನಮೋಹನ್‌ಸಿಂಗ್ ವಿಶ್ವವಿದ್ಯಾಲಯ) ಗೌರವ ಡಾಕ್ಟರೇಟ್ ಪ್ರದಾನ ಮಾಡಲಿದೆ. ಏಪ್ರಿಲ್ 04ರಂದು ಬೆಂಗಳೂರಿನ ಅರಮನೆ ರಸ್ತೆಯಲ್ಲಿರುವ ವಿಶ್ವವಿದ್ಯಾಲಯದ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆಯಲಿರುವ 5ನೇ ವಾರ್ಷಿಕ ಘಟಿಕೋತ್ಸವ ಸಮಾರಂಭದಲ್ಲಿ ಈ ಗೌರವ ಪ್ರದಾನ ನೇರವೇರಲಿದೆ. ಡಾ. ಎಂ. ಮೋಹನ್ ಆಳ್ವರು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸ್ಥಾಪಕ ಅಧ್ಯಕ್ಷರಾಗಿದ್ದು, ಕರಾವಳಿ ಕರ್ನಾಟಕದಲ್ಲಿ ಗುಣಮಟ್ಟದ ಶಿಕ್ಷಣವನ್ನು ಗ್ರಾಮೀಣ ಪ್ರದೇಶಗಳಿಗೆ ತಲುಪಿಸಿದ ಪ್ರಮುಖರಲ್ಲಿ ಅಗ್ರ ಗಣ್ಯರು. ಮೂಡುಬಿದಿರೆ ಕೇಂದ್ರವಾಗಿ ಕಾರ್ಯನಿರ್ವಹಿಸುವ ಆಳ್ವಾಸ್ ಸಂಸ್ಥೆಗಳ ಮೂಲಕ ಪ್ರಾಥಮಿಕದಿಂದ ಉನ್ನತ ಶಿಕ್ಷಣದವರೆಗೆ ನೂರಾರು ಕೋರ್ಸ್ಗಳನ್ನು ಪ್ರಾರಂಭಿಸಿ ಸಾವಿರಾರು ವಿದ್ಯಾರ್ಥಿಗಳ ಬದುಕನ್ನು ರೂಪಿಸಿದ್ದಾರೆ. ಅವರ ನೇತೃತ್ವದಲ್ಲಿ ಶಿಕ್ಷಣ ಮಾತ್ರವಲ್ಲದೆ ಕಲೆ, ಸಂಸ್ಕೃತಿ, ಕ್ರೀಡೆ ಮತ್ತು ವ್ಯಕ್ತಿತ್ವ ವಿಕಸನಕ್ಕೂ ಸಮಾನ ಮಹತ್ವ ನೀಡಲಾಗಿದೆ. “ಆಳ್ವಾಸ್ ನುಡಿಸಿರಿ ವಿರಾಸತ್” ಮೊದಲಾದ ಮಹತ್ವದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕೋಡಿ ಕನ್ಯಾಣದಲ್ಲಿ ಕೊಂಕಣಿ ಖಾರ್ವಿ ಲೋಕವೇದ್ ಕಲಾ ಮಾಂಡ್ ಬ್ರಹ್ಮಾವರ ಇದರ ಪ್ರಸ್ತುತಿಯಲ್ಲಿ ಸಮಾಜಸೇವಕ ನರಸಿಂಹ ಆರ್ಕಾಟಿ ಜೀವನ ಚರಿತ್ರೆ, ಪುಸ್ತಕ ಬಿಡುಗಡೆ ಕಾರ್ಯಕ್ರಮ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ರಂಗಮಂಟಪದಲ್ಲಿ ನೆರವೇರಿತು. ಸಭಾಧ್ಯಕ್ಷತೆಯನ್ನು ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಹಾಗೂ ಗುರುವಂದನಾ ಸಮಿತಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆ ಇದರ ಅಧ್ಯಕ್ಷ ಬಿ. ಮಾಧವ ಖಾರ್ವಿ ವಹಿಸಿದರು. ಕ.ಸಾ.ಪ. ಉಡುಪಿ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ವಿದ್ಯುಕ್ತವಾಗಿ ಚಾಲನೆಯನ್ನು ನೀಡಿದರು. ಅಖಿಲ ಭಾರತ ಕೊಂಕಣಿ ಖಾರ್ವಿ ಮಹಾಜನ ಸಂಘ ಇದರ ಅಧ್ಯಕ್ಷ ರವಿ ಟಿ. ನಾಯಕ್ ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ನೆರವೇರಿಸಿದರು. ಪುಸ್ತಕದ ಸಂಕಲನಕಾರ ಆಲ್ಫೋನ್ಸಸ್ ಡಿಸೋಜಾ ಇವರನ್ನು ಗೌರವಿಸಲಾಯಿತು. ಖಜಾಂಚಿ ಸದಾನಂದ ಖಾರ್ವಿ ಮಾತನಾಡಿ, ಸ್ವಾತಂತ್ರ್ಯ ಪೂರ್ವ ಕಾಂಗ್ರೆಸ್‌ನ ಕರಾವಳಿಯ ಮುತ್ಸದ್ದಿ ಹಾಗೂ ಕರಾವಳಿಯ ಗಾಂಧಿ ಎಂದು ಸಂಭೋದಿಸಲ್ಪಡುವ ಕೀರ್ತಿಶೇಷ್ಠ ನರಸಿಂಹ ಆರ್ಕಾಟಿ ಅವರ ಬಗ್ಗೆ ಸಂಸ್ಥೆ ಉದಯವಾದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಿತ್ರ ಮಂಡಳಿ, ಕೋಟ ಇವರ ವತಿಯಿಂದ ಏಪ್ರಿಲ್ 04ರಂದು ಕೋಟದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರತಿಭಾವಂತ ವಿದ್ಯಾರ್ಥಿನಿ ರಿಷಿಕಾ ದೇವಾಡಿಗ ಅವರಿಗೆ “ಅಣ್ಣಾಜಿ ಬಲ್ಲಾಳ ಬಾಲ ಪುರಸ್ಕಾರ” ಪ್ರದಾನ ಮಾಡಲಾಗುತ್ತಿದೆ. ಕುಂದಾಪುರ ತಾಲೂಕಿನ ಹಟ್ಟಿಅಂಗಡಿಯ ಶ್ರೀ ಸಿದ್ದಿವಿನಾಯಕ ವಸತಿ ಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ರಿಷಿಕಾ ಅವರು ಬೈಂದೂರಿನ ರಾಮ ದೇವಾಡಿಗ ಮತ್ತು ರೂಪಾ ದಂಪತಿಯ ಸುಪುತ್ರಿ. ಅತಿ ಚಿಕ್ಕ ವಯಸ್ಸಿನಲ್ಲಿ ಸಾಹಿತ್ಯ, ಸಂಸ್ಕೃತಿ ಮತ್ತು ಕಲಾ ಕ್ಷೇತ್ರಗಳಲ್ಲಿ ವಿಶಿಷ್ಟ ಸಾಧನೆಗಳನ್ನು ಮಾಡಿರುವ ಅವರು ರಾಜ್ಯಮಟ್ಟದಿಂದ ಶಾಲಾಮಟ್ಟದವರೆಗೆ ಅನೇಕ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. 2025ರ ರಾಜ್ಯಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷೆಯಾಗಿರುವುದು ಅವರ ಸಾಹಿತ್ಯಾಸಕ್ತಿ ಮತ್ತು ನಾಯಕತ್ವವನ್ನು ತೋರಿಸುತ್ತದೆ. ‘ಮೊದಲ ಹೆಜ್ಜೆ’ ಕಥಾಸಂಕಲನ ಪುಸ್ತಕವನ್ನು ಪ್ರಕಟಿಸಿರುವ ಅವರು ಕಾರ್ಕಳ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ‘ಬಾಲ ವಿದ್ಯಾರ್ಥಿ ಸಾಹಿತಿ’ ಪ್ರಶಸ್ತಿಯನ್ನೂ ಪಡೆದಿದ್ದಾರೆ. ಭಾಷಣ, ದೇಶಭಕ್ತಿ ಗೀತಾ ವಾಚನ, ಏಕಪಾತ್ರಾಭಿನಯ ಮತ್ತು ಪುಸ್ತಕ ವಿಮರ್ಶೆ ಸೇರಿದಂತೆ ಹಲವು ಸ್ಪರ್ಧೆಗಳಲ್ಲಿ ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡಿರುವ…
