ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಂದಿನ ಆಧುನಿಕ ಯುಗದಲ್ಲಿ ಮಕ್ಕಳು ಗ್ರಾಮೀಣ ಕ್ರೀಡೆಗಳಿಂದ ದೂರ ಸರಿಯುತ್ತಿದ್ದಾರೆ. ಗ್ರಾಮೀಣ ಕ್ರೀಡೆಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾದ ಅಗತ್ಯತೆ ಇದೆ. ಇತರ ಕ್ರೀಡೆಗಳಿಂದ ಗ್ರಾಮೀಣ ಕ್ರೀಡೆಗಳಿಂದ ದೈಹಿಕವಾಗಿ ಹಾಗೂ ಮಾನಸಿಕವಾಗಿ ಹೆಚ್ಚು ಲಾಭವಿದೆ. ಗ್ರಾಮೀಣ ಕ್ರೀಡೆಗಳನ್ನು ಹೆಚ್ಚೆಚ್ಚು ಪ್ರೋತ್ಸಾಹಿಸಿವುದರ ಜೊತೆಗೆ ಅದರ ಬೆಳವಣಿಗೆಗೂ ನಾವು ಕೈಜೋಡಿಸಬೇಕು ಎಂದು ಗಂಗೊಳ್ಳಿ ಜಿ.ಎಸ್.ವಿ.ಎಸ್. ಅಸೋಸಿಯೇಶನ್ ಅಧ್ಯಕ್ಷ ಡಾ. ಕಾಶೀನಾಥ ಪೈ ಹೇಳಿದರು. ಅವರು ಶ್ರೀ ರಾಘವೇಂದ್ರ ಸ್ಪೋರ್ಟ್ಸ್ ಕ್ಲಬ್ ಗಂಗೊಳ್ಳಿ ಇದರ ಸುವರ್ಣ ಮಹೋತ್ಸವದ ಅಂಗವಾಗಿ ಜಿ.ಎಸ್.ವಿ.ಎಸ್. ಅಸೋಸಿಯೇಶನ್ ಗಂಗೊಳ್ಳಿ, ಎಸ್. ವಿ. ಆಂಗ್ಲ ಮಾಧ್ಯಮ ಶಾಲೆ ಗಂಗೊಳ್ಳಿ ಮತ್ತು ಸರಸ್ವತಿ ವಿದ್ಯಾಲಯ ಪ್ರೌಢಶಾಲೆ ಗಂಗೊಳ್ಳಿ ಇವರ ಸಹಭಾಗಿತ್ವದಲ್ಲಿ ಗಂಗೊಳ್ಳಿಯ ಎಸ್.ವಿ. ಪದವಿಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಶುಕ್ರವಾರ ಆಯೋಜಿಸಲಾದ ಗ್ರಾಮೀಣ ಕ್ರೀಡೆಗಳ ಹಬ್ಬ ’ಆಡುಂಬೋಲ’ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶ್ರೀ ರಾಘವೇಂದ್ರ ಸ್ಪೋರ್ಟ್ಸ್ ಕ್ಲಬ್‌ನ ಹಿರಿಯ ಸದಸ್ಯ ಜಿ.ಉದಯಶಂಕರ ರಾವ್ ಕ್ರೀಡಾ ಹಬ್ಬಕ್ಕೆ ಚಾಲನೆ ನೀಡಿದರು. ಶ್ರೀ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕಾಳಾವರ ವರದರಾಜ ಎಂ. ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ ಕೋಟೇಶ್ವರ ಇಲ್ಲಿ ವ್ಯವಹಾರ ಕ್ಷೇತ್ರದಲ್ಲಿ ಕಾನೂನು ಎಂಬ ವಿಷಯದಲ್ಲಿ ಒಂದು ದಿನದ ಕಾರ್ಯಾಗಾರ ನಡೆಯಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಮಂಜುನಾಥ ಗಿಳಿಯಾರ್ ಮಾತನಾಡಿ, ಪ್ರತಿಯೊಬ್ಬ ನಾಗರಿಕರಿಗೂ ಕಾನೂನಿನ ಅರಿವಿನ ಅಗತ್ಯ ಇದೆ. ಕಾನೂನನ್ನ ಅರಿತುಕೊಂಡು ಅದನ್ನು ಗೌರವಿಸಿ ಜೀವನ ನಡೆಸಿದಾಗ ಚಿಂತೆ ಮುಕ್ತ ಜೀವನ ನಮ್ಮದಾಗುತ್ತದೆ. ಪ್ರತಿಯೊಂದು ಕಾನೂನು ನಮಗೆ ಜವಾಬ್ದಾರಿ ಮತ್ತು ಹಕ್ಕುಗಳನ್ನು ನೀಡುತ್ತದೆ. ಕಾನೂನು ನಮ್ಮ ದೈನಂದಿನ ಜೀವನ ಹಾಗೂ ಸಾಮಾಜಿಕ ವ್ಯವಹಾರಿಕ ಬದುಕಿನಲ್ಲಿ ಮುಖ್ಯ ಪಾತ್ರವನ್ನು ವಹಿಸುತ್ತದೆ. ಆದರೆ ವ್ಯವಹಾರ ಕ್ಷೇತ್ರದಲ್ಲಿ ಕಾನೂನನ್ನು ಸರಿಯಾಗಿ ಪಾಲಿಸಿದಾಗ ಮಾತ್ರ ಉದ್ಯಮವು ನಿರೀಕ್ಷಿತ ಯಶಸ್ಸನ್ನು ಪಡೆಯಲು ಸಾಧ್ಯವಾಗುತ್ತದೆ ಎಂದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ಮಾತನಾಡಿ, ಇಂದು ವಿದ್ಯಾರ್ಥಿಗಳಿಗೆ ಕಾನೂನಿನ ಅರಿವು ನೀಡುವ ಸಲುವಾಗಿ ಇಂತಹ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ವೆಂಕಟರಮಣ ಪದವಿಪೂರ್ವ ಕಾಲೇಜಿನಲ್ಲಿ ವಿಕ್ಟರಿ 2K25 ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಉಡುಪಿ ಜಿಲ್ಲೆಯ ಬಹಳಷ್ಟು ಶಾಲೆಗಳ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವು. ಈ ಕಾರ್ಯಕ್ರಮದಲ್ಲಿ ಸಮೂಹ ಗಾಯನ, ಸಮೂಹ ನೃತ್ಯ, ನಿಧಿ ಅನ್ವೇಷಣೆ, ಚಿತ್ರಕಲೆ, ಏಕಪಾತ್ರಾಭಿನಯ, ಕಂಪ್ಯೂಟರ್ ಟೈಪಿಂಗ್, ವಿಜ್ಞಾನ ಮಾದರಿ ತಯಾರಿಕೆ, ರಸಪ್ರಶ್ನೆ ಸ್ಪರ್ಧೆಗಳನ್ನು ನಡೆಸಿತ್ತು. ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಿಂದ ಸಮೂಹಗಾಯನ ಸ್ಪರ್ಧೆಯಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಗಳಾದ ದಾಕ್ಷಾಯಣಿ ಎಸ್.ಕೆ., ಪೂರ್ವೀ ಜೆ. ಮೊಗೇರ, ಶ್ರೀನಿಧಿ ಕೊಠಾರಿ, 9ನೇ ತರಗತಿಯ ವಿದ್ಯಾರ್ಥಿಗಳಾದ ಕೃಪಾಲಿ ಮತ್ತು ಸಾನ್ವೀ ಎಸ್.ಬಿ. ಭಾಗವಹಿಸಿದ್ದರು. ಸಮೂಹ ನೃತ್ಯದಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಗಳಾದ ಬ್ರಾಹ್ಮೀ ಪಿ. ಶೆಟ್ಟಿ, ಹನಿ ಎಸ್. ಭಂಡಾರಿ, ಪೃಥಾ, 9ನೇ ತರಗತಿಯ ವಿದ್ಯಾರ್ಥಿಗಳಾದ ದಿಶಾ ಶೆಟ್ಟಿ, ಸಾನ್ವೀ, ಸುರಕ್ಷಾ ಭಾಗವಹಿಸಿದ್ದರು. ನಿಧಿ ಅನ್ವೇಷಣೆಯಲ್ಲಿ 9ನೇ ತರಗತಿಯ ವಿದ್ಯಾರ್ಥಿಗಳಾದ ಪಲ್ಲವಿ ಎಮ್.ಎಚ್., ಸಮೃದ್ಧಿ, ಅನುಶ್ರೀ ಎಸ್.ಎಮ್. ಭಾಗವಹಿಸಿದ್ದರು. ಚಿತ್ರಕಲೆಯಲ್ಲಿ 9ನೇ ತರಗತಿಯ ವಿದ್ಯಾರ್ಥಿಯಾದ ಪೂರ್ವಿಕಾ ಎಲ್.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬ್ರಹ್ಮಾವರ: ಗ್ರಾಮಾಭಿವೃದ್ಧಿ ಮತ್ತು ಸ್ವ – ಉದ್ಯೋಗ ತರಬೇತಿ (ರುಡ್ ಸೆಟ್) ಸಂಸ್ಥೆ ಬ್ರಹ್ಮಾವರ ಇವರ ಆಶ್ರಯದಲ್ಲಿ ಹಪ್ಪಳ, ಉಪ್ಪಿನಕಾಯಿ ಹಾಗೂ ವಿವಿಧ ರೀತಿಯ ಮಸಾಲ ಪೌಡರ್ ತಯಾರಿಕೆ ತರಬೇತಿಯ ಉದ್ಘಾಟನಾ ಸಮಾರಂಭವು ಇತ್ತೀಚಿಗೆ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮಂಗಳೂರು ಸಹಾಯಕ ಮಹಾ ಪ್ರಭಂದಕರಾದ ಮಾಲಿನಿ ಸುವರ್ಣ ಅವರು ಮಾತನಾಡಿ, ಬ್ಯಾಂಕಿನ ಹೆಚ್ಚಿನ ಯೋಜನೆಗಳು ಕಿರು ಉದ್ಯಮಗಳಿಗೆ ಸಾಲ ಸೌಲಭ್ಯಗಳನ್ನು ಒದಗಿಸುತ್ತದೆ ಅದನ್ನು ಉತ್ತಮ ರೀತಿಯಲ್ಲಿ ಬಳಸಿಕೊಳ್ಳುವುದರ ಬಗೆಗೆ ಪ್ರಯತ್ನ ಮಾಡಿ, ಹಾಗೂ ಉತ್ಪನ್ನವನ್ನು ತಯಾರಿಸುವಾಗ ಗುಣಮಟ್ಟದೊಂದಿಗೆ ಶುಚಿತ್ವದ ಕಡೆಗೆ ಗಮನ ನೀಡಿ ಎಂದರು. ನಂತರ ನಾವು ತಯಾರಿಸುವ ಉತ್ಪನ್ನಗಳಲ್ಲಿ ಹಿಂದಿನ ಕಾಲದ ಅಡುಗೆಯ ರುಚಿ ಹಾಗು ಉತ್ಪನ್ನದಲ್ಲಿ ವೈವಿಧ್ಯತೆಯ ಜೊತೆಗೆ ಶುಚಿತ್ವದ ಕಡೆಗೆ ಗಮನ ಕೊಟ್ಟರೆ, ಗ್ರಾಹಕರು ತಮ್ಮನ್ನು ಹುಡುಕಿಕೊಂಡು ಬರುವ ಮಟ್ಟಿಗೆ ಬೆಳೆಯಲು ಸಾಧ್ಯವಾಗುತ್ತದೆ. ಜೊತೆಗೆ ಮುಖ್ಯವಾಗಿ ಈಗಿನ ಉದ್ಯಮದಾರರು ತ್ವರಿತ ಯಶಸ್ಸಿಗೆ ಹಾಗೂ ಲಾಭಕ್ಕಾಗಿ ಹಾತೊರೆದು, ಉತ್ಪನ್ನದ ಗುಣಮಟ್ಟವನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಂಗಿಯ ಮನೆಯಲ್ಲಿ ಅಣ್ಣನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ಸಿದ್ದಾಪುರದಲ್ಲಿ ಗುರುವಾರ ನಡೆದಿದೆ. ಸಿದ್ದಾಪುರ ಗ್ರಾಮದ ಐರಬೈಲು ನಿವಾಸಿ ಬಸವ ಕುಲಾಲ (66) ಆತ್ಮಹತ್ಯೆ ಮಾಡಿಕೊಂಡವರು. ಹಲವು ವರ್ಷಗಳಿಂದ ಮಂಡಿ ನೋವಿನಿಂದ ಬಳಲುತ್ತಿದ್ದ ಬಸವ ಕುಲಾಲ್ ನ.13ರಂದು ಸಿದ್ದಾಪುರ ಐರಬೈಲಿನಲ್ಲಿರುವ ತನ್ನ ತಂಗಿಯ ಮನೆಯಲ್ಲಿ ಯಾರೂ ಇಲ್ಲದಿದ್ದಾಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಶಂಕರ ನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕಾಂಗ್ರೆಸ್‌ನ ಹಿರಿಯ ಮುಂದಾಳು, ರೋಟರಿ ಮಾಜಿ ಸಹಾಯಕ ಗವರ್ನರ್ ಚಂದ್ರಶೇಖರ್ ಮೆಂಡನ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಮಾನವ ಹಕ್ಕುಗಳು ಮತ್ತು ಮಾಹಿತಿ ಹಕ್ಕು ವಿಭಾಗಕ್ಕೆ ರಾಜ್ಯ ಸಂಘಟನಾ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ. ಎಐಸಿಸಿ ಕಾನೂನು, ಮಾನವ ಹಕ್ಕುಗಳು ಮತ್ತು ಮಾಹಿತಿ ಹಕ್ಕು ವಿಭಾಗದ ಅಧ್ಯಕ್ಷರಾದ ಡಾ. ಅಭಿಷೇಕ್ ಮನು ಸಿಂಘ್ವಿ ಯವರ ಆದೇಶದ ಮೇರೆಗೆ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಅನುಮೋದನೆಯೊಂದಿಗೆ ಕೋಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಂಕರ್ ಎ. ಕುಂದರ್ ಹಾಗೂ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಅವರ ಶಿಫಾರಸಿನೊಂದಿಗೆ ಕೆಪಿಸಿಸಿ ಕಾನೂನು, ಮಾನವ ಹಕ್ಕುಗಳು ಮತ್ತು ಮಾಹಿತಿ ಹಕ್ಕು ವಿಭಾಗದ ಅಧ್ಯಕ್ಷ ಸಿ. ಎಂ. ಧನಂಜಯ ಅವರು ನೇಮಕಾತಿ ಮಾಡಿ ಆದೇಶ ನೀಡಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಗೌಡ ಸಾರಸ್ವತ ಸಮಾಜ ಬಾಂಧವರು ಆರಾಧಿಸಿಕೊಂಡು ಬರುತ್ತಿರುವ ಶಿರೂರು ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದ ಸುತ್ತುಪೌಳಿ ನವೀಕರಣ ಕಾಮಗಾರಿಗೆ ಚಾಲನೆ ನೀಡಲಾಯಿತು. ದೇವಳದ ಪುನರ್ ಪ್ರತಿಷ್ಠಾ ಸುವರ್ಣ ಮಹೋತ್ಸವದ ಅಂಗವಾಗಿ ನಡೆಯುತ್ತಿರುವ ಸುತ್ತುಪೌಳಿ ನವೀಕರಣ ಕಾಮಗಾರಿಗೆ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ವೇದಮೂರ್ತಿ ಗಣಪತಿ ಭಟ್ ರವರ ನೇತ್ರತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಅಧ್ಯಕ್ಷ ಗಣೇಶ ಪ್ರಭು, ಉಪಾಧ್ಯಕ್ಷ ರವಿಕಾಂತ ಶ್ಯಾನುಭಾಗ, ಕಾರ್ಯದರ್ಶಿ ನಾಗರಾಜ ವೆಂಕಟದಾಸ ಪ್ರಭು, ಕೋಶಾಧಿಕಾರಿ ನಾಗರಾಜ ರತ್ನಾಕರ ಪ್ರಭು, ಮಹಿಳಾ ಮಂಡಳಿ ಅಧ್ಯಕ್ಷೆ ಮೇಘಾ ಪೈ, ಕಾರ್ಯದರ್ಶಿ ಅಶ್ವಿನಿ ಕಾಮತ್, ಹಿರಿಯರಾದ ಬಾಬುರಾಯ ಕಾಮತ್, ಪ್ರಕಾಶ ಪ್ರಭು, ವೆಂಕಟೇಶ ಪ್ರಭು, ಚಂದ್ರಕಾಂತ ನಾಯಕ್ ಜಿ.ಎಸ್.ಬಿ.ಸಮಾಜದ ಪ್ರಮುಖರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಭಾರತೀಯ ಸೇನೆ/ ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಗೆ ಆಯ್ಕೆಯ ಪೂರ್ವ ಸಿದ್ದತೆ ಬಗ್ಗೆ ಉಚಿತ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿ ನೀಡಲಾಗುತ್ತಿದ್ದು ಅರ್ಹ ಅಭ್ಯರ್ಥಿಗಳು ಆಯಾ ಜಿಲ್ಲಾ/ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಅರ್ಜಿ ನಮೂನೆಗಳನ್ನು ಪಡೆದು ಭರ್ತಿ ಮಾಡಿ ನವೆಂಬರ್ 26 ರ ಒಳಗಾಗಿ ಇಲಾಖೆಯ ಕಛೇರಿಗೆ ಖುದ್ದಾಗಿ ಅಥವಾ https://udupi.nic.in ವೆಬ್‌ಸೈಟ್ ನಲ್ಲಿ ಅಥವಾ ಅಂಚೆ ಮೂಲಕ ಸಲ್ಲಿಸಬಹುದಾಗಿದೆ. 10ನೇ ತರಗತಿಯಲ್ಲಿ ಪ್ರತಿ ವಿಷಯದಲ್ಲಿ ಕನಿಷ್ಠ ಶೇ.33 ಮತ್ತು ಸರಾಸರಿ ಕನಿಷ್ಠ ಶೇ.45 ಅಂಕಗಳೊAದಿಗೆ ಉತ್ತೀರ್ಣರಾಗಿರುವ ಪ್ರವರ್ಗ-1 ಕುಟುಂಬದ ವಾರ್ಷಿಕ ಆದಾಯ ರೂ. 2.50 ಲಕ್ಷ ಹಾಗೂ ಪ್ರವರ್ಗ-2ಎ, 3ಎ ಮತ್ತು 3ಬಿ ಕುಟುಂಬದ ವಾರ್ಷಿಕ ಆದಾಯ ರೂ. 1.00 ಲಕ್ಷ ಮೀರದ 26-11-2005 ರಿಂದ 26-11-2008ರ ನಡುವಿನ ಅವಧಿಯಲ್ಲಿ ಜನಿಸಿರುವ ಪುರುಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು ತರಬೇತಿಯನ್ನು ನ್ಯಾಷನಲ್ ಹಿರಿಯ ಪ್ರಾಥಮಿಕ ಶಾಲೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಬಿಜೂರು ಗ್ರಾಮದ ಕಂಚಿಕಾನ ನಿವಾಸಿ ಸುರೇಂದ್ರ (31) ಎನ್ನುವ ವ್ಯಕ್ತಿಯು ಅ.27ರಂದು ಬೆಳಿಗ್ಗೆ 8 ಗಂಟೆಗೆ ಕೆಲಸದ ನಿಮಿತ್ತ ಕುಂದಾಪುರಕ್ಕೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 5 ಇಂಚು ಎತ್ತರ, ಕನ್ನಡ ಮಾತನಾಡ ಬಲ್ಲವರಾಗಿದ್ದು ಅವರ ಬಗ್ಗೆ ಮಾಹಿತಿ ದೊರೆತಲ್ಲಿ ಬೈಂದೂರು ಪೋಲಿಸ್ ಠಾಣೆಯನ್ನು ಸಂಪರ್ಕಿಸುವಂತೆ ಬೈಂದೂರು ಪೋಲಿಸ್ ಠಾಣಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಮೃದ್ಧ ಬೈಂದೂರು ಪರಿಕಲ್ಪನೆಯ 300 ಟ್ರೀಸ್ ಯೋಜನೆಯಲ್ಲಿ ಕ್ಯಾನ್ ಫಿನ್ ಹೋಮ್ಸ್ ಲಿಮಿಟೆಡ್ ಇವರ ಸಿಎಸ್ಆರ್ ನಿಧಿಯಿಂದ ನಾವುಂದ ಸರಕಾರಿ ಪದವಿ ಪೂರ್ವ ಕಾಲೇಜು ಇಲ್ಲಿಗೆ 10 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ ಸೋಲಾರ್ ಆಫ್ ಗ್ರಿಡ್ ಪವರ್ ಬ್ಯಾಕಪ್ ಸಿಸ್ಟಮ್ ಇದರ ಉದ್ಘಾಟನಾ ಕಾರ್ಯಕ್ರಮವು ಇತ್ತೀಚಿಗೆ ನೆರವೇರಿತು. ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ ಹಾಗೂ ಕ್ಯಾನ್ ಫಿನ್ ಹೋಮ್ಸ್ ಲಿಮಿಟೆಡ್ ಇದರ ಉಪಾಧ್ಯಕ್ಷರಾದ ಪ್ರಶಾಂತ್ ಜೋಯಿಶಿ ನೆರವೇರಿಸಿದರು. ಇದರ ಜೊತೆಗೆ ಕಾಲೇಜಿನ ನೂತನ ಕೊಠಡಿಗಳ ಲೋಕಾರ್ಪಣೆಯನ್ನು ಶಾಸಕರು ಗಣ್ಯರ ಜೊತೆಗೂಡಿ ಉದ್ಘಾಟಿಸಿದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಬೈಂದೂರು ಶಾಸಕರು ಮಾತನಾಡಿ, ಕ್ಷೇತ್ರದ ಸರಕಾರಿ ಶಾಲಾ, ಕಾಲೇಜುಗಳಿಗೆ ಕ್ಯಾನ್ ಫಿನ್ ಸಂಸ್ಥೆ ಇದುವರೆಗೆ 1 ಕೋಟಿಗೂ ಅಧಿಕ ಮೊತ್ತದ ವಿವಿಧ ರೀತಿಯ ಅವಶ್ಯಕ ಮೂಲಭೂತ ಸೌಕರ್ಯಗಳನ್ನು ತನ್ನ ಸಿ. ಎಸ್.ಆರ್ ನಿಧಿಯಿಂದ ಒದಗಿಸಿದೆ. ಸಂಸ್ಥೆಯ ಈ ಕೊಡುಗೆ ವಿದ್ಯಾರ್ಥಿಗಳಿಗೆ ವರದಾನವಾಗಿದ್ದು, ಇದು…
