Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ಮಣೂರು ಶ್ರೀ ಹೇರಂಬ ಮಹಾಗಣಪತಿ ಹಾಗೂ  ಮಹಾಲಿಂಗೇಶ್ವರ ದೇವಸ್ಥಾನ ಇದರ ವಾರ್ಷಿಕ ರಥೋತ್ಸವದ ಹಿನ್ನಲ್ಲೆಯಲ್ಲಿ ಮಣೂರು ಫ್ರೆಂಡ್ಸ್ ಮಣೂರು ಹಮ್ಮಿಕೊಂಡು ಬರುತ್ತಿರುವ ವಾರ್ಷಿಕೋತ್ಸವಕ್ಕೆ ಇದೀಗ ರಜತ ಮಹೋತ್ಸವ ಸಂಭ್ರಮ. ಈ ದಿಸೆಯಲ್ಲಿ ಇದೇ ಬರುವ ಎಪ್ರಿಲ್ 1ರಂದು ಮಣೂರು ದೇಗುಲದ ವಠಾರದಲ್ಲಿ  ರಜತ ಸಂಭ್ರಮ ಎಂಬ ಶೀರ್ಷಿಕೆಯಡಿ ಸಾಂಸ್ಕೃತಿಕ , ಸಂಗೀತಗಾಯನ, ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಿದ್ದು ಇದರ ಫೋಸ್ಟರ್ ಅನ್ನು ಶುಕ್ರವಾರ ಕೋಟ ಅಮೃತೇಶ್ವರೀ ದೇಗುಲದಲ್ಲಿ ಗೀತಾನಂದ ಟ್ರಸ್ಟ್ ಪ್ರವರ್ತಕ‌ ಆನಂದ್  ಸಿ. ಕುಂದರ್ ಬಿಡುಗಡೆಗೊಳಿಸಿ ಕಾರ್ಯಕ್ರಮದ ಯಶಸ್ಸಿಗೆ ಶುಭಹಾರೈಸಿದರು. ಈ ಸಂದರ್ಭದಲ್ಲಿ ಮಣೂರು ಮಹಾಲಿಂಗೇಶ್ವರ ದೇಗುಲದ ಅಧ್ಯಕ್ಷ ಸತೀಶ್ ಹೆಚ್ ಕುಂದರ್ ,ಮಣೂರು ಫ್ರೆಂಡ್ಸ್ ಗೌರವ ಸಲಹೆಗಾರ ಎಂ. ಸುಬ್ರಾಯ ಆಚಾರ್, ಮಣೂರು ಫ್ರೆಂಡ್ಸ್ ಅಧ್ಯಕ್ಷ ರಾಘವೇಂದ್ರ ಆಚಾರ್, ಗೌರವಾಧ್ಯಕ್ಷ ಸುರೇಶ್ ಆಚಾರ್, ಮಾಜಿ ಅಧ್ಯಕ್ಷರಾದ ಸುಧಾಕರ್ ಆಚಾರ್, ದಿನೇಶ್ ಆಚಾರ್ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಪೋಸ್ಟರ್ ಬಿಡುಗಡೆ ಕಾರ್ಯಕ್ರಮವನ್ನು ಸುಜಾತ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕಿರಿಮಂಜೇಶ್ವರದ ಜನತಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯುಕೆಜಿ ವಿದ್ಯಾರ್ಥಿಗಳ ಪದವಿ ಪ್ರದಾನ ಕಾರ್ಯಕ್ರಮವು ಅತ್ಯಂತ  ಅದ್ದೂರಿಯಾಗಿ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಅಂತಾರಾಷ್ಟ್ರೀಯ ಮಟ್ಟದ ಜಾದೂಗಾರರಾದ ಸತೀಶ ಹೆಮ್ಮಾಡಿ ಅವರು ದೀಪವನ್ನು ಬೆಳಗುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಪ್ರತಿಯೊಬ್ಬ ವಿದ್ಯಾರ್ಥಿಯ ಭವಿಷ್ಯ ಉಜ್ವಲವಾಗಲು ಶಿಕ್ಷಕರ ಜೊತೆಗೆ ಪೋಷಕರು ಕೈಜೋಡಿಸಬೇಕು.  ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ವಿಪುಲ ಅವಕಾಶಗಳನ್ನು ಒದಗಿಸುತ್ತಿರುವ  ಈ ಸಂಸ್ಥೆಯ ಬಗ್ಗೆ ಹೆಮ್ಮೆಯೆನಿಸುತ್ತದೆ ಎಂದರು. ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು ಹಾಗೂ ಜನತಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿರುವ ಗಣೇಶ ಮೊಗವೀರ ಅವರು ತಮ್ಮ ಅಧ್ಯಕ್ಷೀಯ ನುಡಿಗಳಲ್ಲಿ ಕರಾವಳಿ ಭಾಗದಲ್ಲಿ ಗುಣಮಟ್ಟದ ಶಿಕ್ಷಣವನ್ನು ತಳಮಟ್ಟದಿಂದಲೇ ವಿದ್ಯಾರ್ಥಿಗಳಿಗೆ ನೀಡುವ ಉದ್ದೇಶದಿಂದಾಗಿ ಈ ವಿದ್ಯಾಸಂಸ್ಥೆಯನ್ನು ಸ್ಥಾಪಿಸಿದ್ದು, ವಿದ್ಯಾರ್ಥಿಗಳ ಕಲಿಕೆಯಲ್ಲಿ ಅಪಾರವಾದ ಬದಲಾವಣೆಯನ್ನು ಕಂಡುಕೊಂಡಿದ್ದೇವೆ.ಚಿಕ್ಕ ವಯಸ್ಸಿನಲ್ಲಿರುವ ವಿದ್ಯಾರ್ಥಿಗಳ ಪ್ರತಿಭೆಗೆ ಸೂಕ್ತ ಪುರಸ್ಕಾರಗಳನ್ನು ನೀಡಿದಾಗ ಅವರಲ್ಲಿ ಇನ್ನೂ ಹೆಚ್ಚಿನ ಸಾಧನೆಯನ್ನು ಮಾಡುವ ಹಂಬಲ ಮೂಡುತ್ತದೆ ಎಂದರು. ಸಮರ್ಪಣಾ ಎಜ್ಯುಕೇಶನ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬಸ್ ಹಾಗೂ ಕಾರಿನ ನಡುವೆ ನಡೆದ ಅಪಘಾತದಲ್ಲಿ ವೆಬ್ ಡೆವಲಪರ್, ನೆಂಪು ಮೂಲದ ಮುಕೇಶ್ ಕೃಷ್ಣ ಶೆಟ್ಟಿ (39) ಮುಕೇಶ್ ಕೃಷ್ಣ ಎಂಬವರು ಮೃತಪಟ್ಟಿದ್ದಾರೆ. ಅವರು ಮಾರ್ಚ್ 5ರಂದು ಕುಂದಾಪುರದಿಂದ ಯಲ್ಲಾಪುರ ಮಾರ್ಗವಾಗಿ ಹುಬ್ಬಳಿಗೆ ತೆರಳುತ್ತಿದ್ದರು. ಯಲ್ಲಾಪುರ ತಾಲೂಕಿನ ಮಳಲಗಾಂವ ಬಳಿಯಲ್ಲಿ ಪ್ರಯಾಣಿಸುತ್ತಿದ್ದ ವೇಳೆಯಲ್ಲಿ ಎದುರಿನಿಂದ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಹಾಗೂ ಕಾರು ಮುಖಾಮುಖಿ ಢಿಕ್ಕಿಯಾಗಿದೆ. ಅಪಘಾತ ಸಂಭವಿಸುತ್ತಿದ್ದಂತೆಯೇ 108 ವಾಹನದ ಮೂಲಕ ಮುಕೇಶ್ ಕೃಷ್ಣ ಶೆಟ್ಟಿ ಅವರನ್ನು ಯಲ್ಲಾಪುರದ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಯ್ತು. ಆದರೂ ಮುಕೇಶ್ ಶೆಟ್ಟಿ ಅವರು ಬದುಕಿ ಉಳಿಯಲಿಲ್ಲ ಎಂದು ತಿಳಿದು ಬಂದಿದೆ. ಬಸ್ ಹಾಗೂ ಕಾರಿನ ನಡುವೆ ನಡೆದ ಅಪಘಾತದಲ್ಲಿ ಕಾರಿನ ಏರ್ ಬ್ಯಾಗ್ ಬ್ಲಾಸ್ಟ್ ಆಗಿ ಸಾವು ಸಂಭವಿಸಿದೆ ಎಂದು ಮಾತುಗಳು ಕೇಳಿಬಂದಿದೆ. ಮಂಗಳೂರು ಬೆಂದೂರ್ ವೆಲ್ ನಲ್ಲಿ ಮ್ಯಾಕ್ಸ್ ಇನ್ಪೋಟೆಕ್ ಸಂಸ್ಥೆಯನ್ನು ಕಟ್ಟಿ ಡಿಜಿಟಲ್ ಮೀಡಿಯಾದಲ್ಲಿ ವೆಬ್ಡೆವಲಪರ್ ಆಗಿ ಕೆಲಸ ಮಾಡ್ತಿದ್ರು. ನಾಡಿನ ಹೆಸರಾಂತ ನೂರಾರು ಡಿಜಿಟಲ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಸರ್ಕಾರ ಗರ್ಭಕಂಠದ ಕ್ಯಾನ್ಸರ್ ಅನ್ನು (cervical cancer) ತಡೆಗಟ್ಟಲು 14 ವರ್ಷ ಪೂರ್ಣಗೊಂಡ ಬಾಲಕಿಯರಿಗೆ ರಾಷ್ಟ್ರೀಯ ಹೆಚ್.ಪಿ.ವಿ ಲಸಿಕಾ ಅಭಿಯಾನವನ್ನು ಆರಂಭಿಸಿದ್ದು,  ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ಉಚಿತವಾಗಿ ನೀಡಲಾಗುವುದು. ಈ ಲಸಿಕೆಯು ಗರ್ಭಕಂಠದ ಕ್ಯಾನ್ಸರ್‌ನಿಂದ ರಕ್ಷಣೆ ನೀಡಲಿದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಹೇಳಿದರು. ಅವರು ನಗರದ ಜಿಲ್ಲಾಧಿಕಾರಿ ಕಚೇರಿಯ ವಿಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ನಡೆದ ಹೆಚ್.ಪಿ.ವಿ ಚುಚ್ಚುಮದ್ದು ಲಸಿಕಾ ಕಾರ್ಯಕ್ರಮದ ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 14 ವರ್ಷ ಪೂರ್ಣಗೊಂಡ ಆದರೆ 15 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ಈ ಲಸಿಕೆಯನ್ನು ಉಚಿತವಾಗಿ ನೀಡಲಾಗುವುದು. ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಬಹುದಾದ ರೋಗವಾಗಿದ್ದು, ಹೆಚ್.ಪಿ.ವಿ ಚುಚ್ಚುಮದ್ದು ಪಡೆದುಕೊಳ್ಳುವುದರಿಂದ ಮಹಿಳೆಯರಲ್ಲಿ ಕ್ಯಾನ್ಸರ್ ಅನ್ನು ತಡೆಗಟ್ಟಬಹುದು ಎಂದರು. ಜಿಲ್ಲೆಯಲ್ಲಿ 11,274 ಮಕ್ಕಳಿಗೆ ಲಸಿಕೆ ನೀಡುವ ಗುರಿಯನ್ನು ಹೊಂದಲಾಗಿದೆ. ಲಸಿಕೆಯ 0.5mಟ ನ ಒಂದು ಡೋಸ್ ಅನ್ನು ನೀಡಲಾಗುವುದು. ಇದು ಸ್ವಯಂ ಪ್ರೇರಿತವಾಗಿದ್ದು, ಪೋಷಕರು ಅಥವಾ ಪಾಲಕರ ಒಪ್ಪಿಗೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ದೇಶದಲ್ಲಿ ಮೊದಲ ಬಾರಿಗೆ ಸಂಪೂರ್ಣ ಡಿಜಿಟಲ್ ರೂಪದಲ್ಲಿ ಜನಗಣತಿ ನಡೆಯಲಿದ್ದು, ಸ್ವಯಂ-ಗಣತಿ ಆಯ್ಕೆಯೂ ಲಭ್ಯವಿದೆ. ಮೊದಲ  ಹಂತದಲ್ಲಿ ಏಪ್ರಿಲ್ 16 ರಿಂದ 30 ದಿನಗಳ ಕಾಲ ಮನೆ ಪಟ್ಟಿ  ಕಾರ್ಯ ನಡೆಯಲಿದೆ. ಎರಡನೇ ಹಂತದಲ್ಲಿ ಜನಸಂಖ್ಯಾ ಎಣಿಕೆ ಕಾರ್ಯ 2027 ಫೆಬ್ರವರಿಯಿಂದ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಹೇಳಿದರು. ಅವರು ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ 2027 ಜನಗಣತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಸರ್ಕಾರದ ಮಾರ್ಗಸೂಚಿಯನ್ವಯ ಗಣತಿ ಕಾರ್ಯಗಳನ್ನು ಕೈಗೊಳ್ಳಲು ಅವಶ್ಯಕವಾಗಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ನೇಮಕ ಕಾರ್ಯಗಳನ್ನು ಮಾಡಿಕೊಳ್ಳಬೇಕು, ಮನೆಗಳ ಪಟ್ಟಿ, ದತ್ತಾಂಶ ಸಂಗ್ರಹಣೆ, ಪರಿಶೀಲನೆ ಮತ್ತು ಮೇಲ್ವಿಚಾರಣೆಗಾಗಿ ಮೊಬೈಲ್ ಅಪ್ಲಿಕೇಶನ್ ಮತ್ತು ಕೇಂದ್ರ ಪೋರ್ಟಲ್ ಬಳಸಲಾಗುವುದು. ಮನೆ ಗಣತಿಗೆ ಅಗತ್ಯವಿರುವ ಸಿಬ್ಬಂದಿಗಳನ್ನು ನೇಮಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಗಣತಿಗಾಗಿ ತರಬೇತುದಾರರ ಅಂತಿಮಗೊಳಿಸುವಿಕೆ, ಜಿಲ್ಲಾ ಜನಗಣತಿ ಅಧಿಕಾರಿಗಳಿಗೆ ತರಬೇತಿ ಮತ್ತು ಕ್ಷೇತ್ರ ಕಾರ್ಯಕರ್ತರ ನೇಮಕಾತಿ ಕುರಿತು ಚರ್ಚಿಸಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ದೇಶದ ಪ್ರತಿಷ್ಠಿತ ತಾಂತ್ರಿಕ ಶಿಕ್ಷಣ ಸಂಸ್ಥೆಯಾದ ಐಐಟಿ ಬಾಂಬೆ ನಡೆಸುವ ಬ್ಯಾಚುಲರ್ ಆಫ್ ಡಿಸೈನ್ ಕೋರ್ಸ್‌ ಪ್ರವೇಶ ಪಡೆಯಲು ನಡೆಯುವ ಯುಸೀಡ್‌ 2026 ಪ್ರವೇಶ ಪರೀಕ್ಷೆಯಲ್ಲಿ ಹೆಮ್ಮಾಡಿ ಜನತಾ ಪಿಯು ಕಾಲೇಜಿನ ವಿದ್ಯಾರ್ಥಿ ಸುಜಲ್ ತೋಳಾರ್ ಅಮೋಘ ಸಾಧನೆ ಮಾಡಿದ್ದಾರೆ. ಜನವರಿ 2026ರಲ್ಲಿ ನಡೆದ ಈ ರಾಷ್ಟ್ರಮಟ್ಟದ ಪರೀಕ್ಷೆಯಲ್ಲಿ ಸುಜಲ್ ತೋಳಾರ್ ಪ್ರಥಮ ಪ್ರಯತ್ನದಲ್ಲೇ ರಾಷ್ಟ್ರಮಟ್ಟದಲ್ಲಿ ಕೆಟಗರಿ ವಿಭಾಗದಲ್ಲಿ 179ನೇ ರ‍್ಯಾಂಕ್‌ ಪಡೆದು ಮುಂದಿನ ಹಂತದ ಕೌನ್ಸೆಲಿಂಗ್‌ಗೆ ಅರ್ಹತೆ ಪಡೆದಿದ್ದಾರೆ. ಜನತಾ ಪದವಿಪೂರ್ವ ಕಾಲೇಜಿನಲ್ಲಿ ನುರಿತ ಉಪನ್ಯಾಸಕರಿಂದ ತರಬೇತಿ ಪಡೆದ ಅವರು ಈ ಸಾಧನೆ ಮಾಡಿರುವುದು ಸಂಸ್ಥೆಗೆ ಗೌರವ ತಂದಿದೆ. ಪ್ರಸ್ತುತ ಬಹುಬೇಡಿಕೆಯುಳ್ಳ ಈ ರಾಷ್ಟ್ರಮಟ್ಟದ ಪ್ರವೇಶ ಪರೀಕ್ಷೆಗಳಿಗೆ ಜನತಾ ಪದವಿಪೂರ್ವ ಕಾಲೇಜು ಉತ್ತಮ ತರಬೇತಿ ನೀಡುತ್ತಿದ್ದು, ಆರ್ಕಿಟೆಕ್ಟರ್ ಕ್ಷೇತ್ರದ ನಾಟಾ, ಜೆಇಇ ಬಿ.ಆರ್ಕ್, ನಿಫ್ಟ್, ಜೆಇಇ ಮೈನ್ಸ್ ಹಾಗೂ ಅಡ್ವಾನ್ಸ್ ಪರೀಕ್ಷೆಗಳಿಗೂ ವಿದ್ಯಾರ್ಥಿಗಳನ್ನು ಸಿದ್ಧಗೊಳಿಸುತ್ತಿದ್ದು. ವಿಶೇಷವಾಗಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸಹಜ ಯೋಗದಿಂದ ಮಾನಸಿಕ ಒತ್ತಡವನ್ನು ನಿಯಂತ್ರಿಸಲು ಸಾಧ್ಯ. ಅತ್ಯಂತ ಸರಳವಾದ ಯೋಗ ಕ್ರಿಯೆಗಳು ಮತ್ತು ಕ್ರಮಬದ್ಧವಾದ ಆಹಾರ ಸೇವನೆಯಿಂದ ಒತ್ತಡವನ್ನು ನಿರ್ವಹಿಸಬಹುದು ಎಂದು ಚಂದ್ರಕಾಂತ ಡಿಯೋಡ ಹೇಳಿದರು. ಅವರು ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಆಯೋಜಿಸಿದ ಸಹಜ ಯೋಗ ಕುರಿತ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. 5 ಗೋಷ್ಠಿಯಲ್ಲಿ ನಡೆದ ಈ ಶಿಬಿರದಲ್ಲಿ ಡಾ| ಆಶಿಶ್, ಕಲ್ಪನಾ, ಕೋಪಾಲ್, ಪ್ರಣಮ್, ತಿಮ್ಮಪ್ಪ, ನೀತು, ಡಾ. ವೀರೇಶ್ ಸಂಪನ್ಮೂಲ ವ್ಯಕ್ತಿಗಳಾಗಿ ಮಾಹಿತಿ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ಆಡಳಿತ ನಿಕಾಯಕರು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ರಕ್ಷಿತ್ ರಾವ್ ಗುಜ್ಜಾಡಿ ಮತ್ತು ರೇಷ್ಮಾ ಶೆಟ್ಟಿ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕೌಶಲ್ಯ ಪ್ರೇರಣ ಅಭಿಯಾನದ ಅಂಗವಾಗಿ ಕುಂದಾಪುರ ತಲ್ಲೂರಿನ ಉಪ್ಪಿನಕುದ್ರು ಸರಕಾರಿ ಪ್ರೌಢಶಾಲೆ ಹಾಗೂ ಕೈಗಾರಿಕಾ ತರಬೇತಿ ಸಂಸ್ಥೆ ಬಿದ್ಕಲ್‌ಕಟ್ಟೆಯ ಪ್ರಾಚಾರ್ಯ ಹರೀಶ್ ಮಾರ್ಗದರ್ಶನದಂತೆ ಹಾಗೂ ಕೋಟದ ಪಂಚವರ್ಣ ಸಂಘಟನೆಯ ಸಹಯೋಗದೊಂದಿಗೆ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ಇತ್ತೀಚಿಗೆ ನಡೆಯಿತು. ಬಿದ್ಕಲ್ ಕಟ್ಟೆ ಸರಕಾರಿ ಐಟಿಐ ಮೆಕಾನಿಕ್ ಮೋಟಾರ್ ವೆಹಿಕಲ್ ವಿಭಾಗದ ಕಿರಿಯ ತರಬೇತಿ ಅಧಿಕಾರಿ ಬಿ.ಟಿ.ನಾಯ್ಕ್ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿ ಆಧುನಿಕ ಸ್ಪರ್ಧಾತ್ಮಕ ಯುಗದಲ್ಲಿ ಕೇವಲ ಶೈಕ್ಷಣಿಕ ಪದವಿ ಸಾಕಾಗುವುದಿಲ್ಲ, ಉದ್ಯೋಗವಕಾಶ ಪಡೆಯಲು ಮತ್ತು ವೃತ್ತಿ ಜೀವನದಲ್ಲಿ ಪ್ರಾಯೋಗಿಕ, ತಾಂತ್ರಿಕ ಅಧ್ಯಯನ, ಅತ್ಯಗತ್ಯ. ಕೈಗಾರಿಕಾ ತರಬೇತಿ ಸಂಸ್ಥೆಯು ಇಂತಹ ತರಬೇತಿಯನ್ನು ನೀಡುತ್ತಿದ್ದು ಯುವಜನರಲ್ಲಿ ಆತ್ಮವಿಶ್ವಾಸ, ಉದ್ಯಮಶೀಲತೆ, ಜಾಗತಿಕ ಬೇಡಿಕೆಗೆ ತಕ್ಕಂತೆ ಕೌಶಲ್ಯಗಳನ್ನು ಆಯ್ಕೆಮಾಡಿಕೊಂಡು ತರಬೇತಿ ಪಡೆಯುವುದು ಸೂಕ್ತ ಎಂದು ಅಭಿಪ್ರಾಯಪಟ್ಟರು. ಫಿಟ್ಟರ್ ವಿಭಾಗದ ಹಾಗೂ ಕೌಶಲ್ಯ ಪ್ರೇರಣಾ ಸಂಸ್ಥೆಯ ಕೋಟ ಅಜಿತ್ ಆಚಾರ್ 10ನೇ ತರಗತಿಯ ನಂತರದ ಕೌಶಲ್ಯ ಕೋರ್ಸುಗಳು ಹಾಗೂ ವಿದ್ಯಾರ್ಥಿನಿಯರಿಗೆ ಸರಕಾರಿ ಉದ್ಯೋಗದಲ್ಲಿ 33%…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಕರ್ನಾಟಕದ ಕಾಂಗ್ರೆಸ್ ಸರ್ಕಾರ ಮಂಡಿಸಿದ 17ನೇ ರಾಜ್ಯ ಬಜೆಟ್ ಕರಾವಳಿ ಭಾಗದ ಜನರಲ್ಲಿ ಭಾರೀ ನಿರಾಸೆ ಮತ್ತು ಆಕ್ರೋಶವನ್ನು ಉಂಟುಮಾಡಿದೆ ಎಂದು ಬೈಂದೂರು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಗಜೇಂದ್ರ ಎಸ್.‌ ಬೇಲೆಮನೆ ಟೀಕಿಸಿದ್ದಾರೆ. ರಾಜ್ಯದ ಆರ್ಥಿಕತೆಗೆ ಮಹತ್ವದ ಕೊಡುಗೆ ನೀಡುವ ದಕ್ಷಿಣ ಕನ್ನಡ, ಉಡುಪಿ ಹಾಗೂ ಕರಾವಳಿ ಭಾಗ ಬಜೆಟ್‌ನಲ್ಲಿ ಮತ್ತೆ ನಿರ್ಲಕ್ಷ್ಯಕ್ಕೆ ಗುರಿಯಾಗಿರುವುದು ಸ್ಪಷ್ಟವಾಗಿದೆ ಎಂದಿದ್ದಾರೆ. ಕರಾವಳಿ ಭಾಗದ ಜನರು ರಾಜ್ಯಕ್ಕೆ ಅಪಾರ ತೆರಿಗೆ ಕೊಡುಗೆ ನೀಡುತ್ತಾರೆ. ಶಿಕ್ಷಣ, ಬ್ಯಾಂಕಿಂಗ್, ಮೀನುಗಾರಿಕೆ, ಪ್ರವಾಸೋದ್ಯಮ ಹಾಗೂ ಉದ್ಯಮ ಕ್ಷೇತ್ರಗಳಲ್ಲಿ ಈ ಭಾಗವು ಕರ್ನಾಟಕದ ಹೆಮ್ಮೆಯಾಗಿದೆ. ಆದರೆ ಸರ್ಕಾರ ಬಜೆಟ್ ಮಂಡಿಸುವಾಗ ಮಾತ್ರ ಈ ಭಾಗವನ್ನು ಸಂಪೂರ್ಣವಾಗಿ ಮರೆತುಬಿಡುತ್ತಿರುವುದು ದುಃಖಕರ ಸಂಗತಿ ಎಂದರು. ಮೀನುಗಾರರ ಬದುಕು ಸುಧಾರಣೆ, ಕಡಲ್ಕೊರೆತ ತಡೆ ಯೋಜನೆಗಳು, ಕರಾವಳಿ ರಕ್ಷಣಾ ಕಾಮಗಾರಿಗಳು, ಪ್ರವಾಸೋದ್ಯಮ ಅಭಿವೃದ್ಧಿ, ಬಂದರುಗಳ ವಿಸ್ತರಣೆ, ಯುವಕರಿಗೆ ಉದ್ಯೋಗ ಸೃಷ್ಟಿ – ಇಂತಹ ಪ್ರಮುಖ ವಿಷಯಗಳಿಗೆ ಈ ಬಜೆಟ್‌ನಲ್ಲಿ ಯಾವುದೇ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಆಯುರ್ವೇದದಲ್ಲಿ ನಡೆಯುತ್ತಿರುವ ಸಂಶೋಧನೆಗಳು ಕೇವಲ ಪುಸ್ತಕಗಳಿಗೆ ಸೀಮಿತವಾಗದೆ, ಸಮಾಜಕ್ಕೆ ಉಪಯೋಗವಾಗುವ ಹಾಗೂ ಆರ್ಥಿಕ ಬೆಳವಣಿಗೆಗೆ ದಾರಿ ಮಾಡಿಕೊಡಬಲ್ಲ ಸಂಶೋಧನೆಯಾಗಬೇಕು ಎಂದು ಮೈಸೂರಿನ ಸರಕಾರಿ ಆಯುರ್ವೇದ ಸಂಶೋಧನಾ ಕೇಂದ್ರದ ಸಹಾಯಕ ನಿರ್ದೇಶಕ ಡಾ. ಲಕ್ಷ್ಮೀ ನಾರಾಯಣ ಶೆಣೈ ಹೇಳಿದರು. ಅವರು ಆಳ್ವಾಸ್ ಆಯುರ್ವೇದ ಕಾಲೇಜಿನ ಆತ್ಮ ಸಂಶೋಧನಾ ಕೇಂದ್ರ ಮೈಸೂರಿನ ಸರಕಾರಿ ಆಯುರ್ವೇದ ಸಂಶೋಧನಾ ಕೇಂದ್ರದ ಸಹಯೋಗದಲ್ಲಿ  ಆಯೋಜಿಸಿದ್ದ ಒಂದು ದಿನದ  ರಾಷ್ಟ್ರ ಮಟ್ಟದ ವಿಚಾರ ಸಂಕಿರಣ ಅಲೋಕ 2026ನ್ನು  ಉದ್ಘಾಟಿಸಿ ಮಾತನಾಡಿದರು. ಆಯುರ್ವೇದದಲ್ಲಿ ನಡೆಯುತ್ತಿರುವ ಸಂಶೋಧನೆಗಳು ಹೆಚ್ಚು ಉಪಯುಕ್ತವಾಗುವಂತೆ ಮಾಡಬೇಕು. ಕೇವಲ ಸಿದ್ಧಾಂತದ ಹಂತದಲ್ಲಿ ಉಳಿಯದೆ, ಅವು ಜನರ ಆರೋಗ್ಯಕ್ಕೆ ನೇರವಾಗಿ ಪ್ರಯೋಜನವಾಗಬೇಕು. ಸಂಶೋಧನೆಯಿಂದ ಹೊಸ ಔಷಧಿಗಳು, ಆರೋಗ್ಯ ಉತ್ಪನ್ನಗಳು ಮತ್ತು ಚಿಕಿತ್ಸಾ ವಿಧಾನಗಳು ಅಭಿವೃದ್ಧಿಯಾಗಬೇಕು. ಇವುಗಳು ಮಾರುಕಟ್ಟೆಯಲ್ಲಿ ಉತ್ತಮ ಸ್ಥಾನ ಪಡೆಯುವಂತಾದರೆ ಆಯುರ್ವೇದ ಕ್ಷೇತ್ರಕ್ಕೆ ಆರ್ಥಿಕ ಲಾಭವೂ ಹೆಚ್ಚುತ್ತದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಡಾ. ಎಂ. ಮೋಹನ ಆಳ್ವ, ಹಿಂದೆ ಆಯುರ್ವೇದದಲ್ಲಿ…

Read More