Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಕೋಟ: ತಲಾಂತರಗಳಿಂದ ಬಳುವಳಿಯಾಗಿ ಬಂದ ರೈತ ಕಾಯಕ ಮುಂದೊಂದು ದಿನ ದೊಡ್ಡ ಆಸ್ತಿಯಾಗಿ ಹೊರಹೊಮ್ಮಲ್ಲಿದೆ ಎಂದು ಕೆ.ಎಂ ಎಫ್ ನಿರ್ದೇಶಕ ಕೆ. ಶಿವಮೂರ್ತಿ ಉಪಾಧ್ಯಾ ಹೇಳಿದರು. ಅವರು ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ , ಪಂಚವರ್ಣ ಮಹಿಳಾ ಮಂಡಲ ಇದರ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಗೆಳೆಯರ ಬಳಗ ಕಾರ್ಕಡ, ಸ್ನೇಹಕೂಟ ಮಣೂರು, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ, ರೈತಧ್ವನಿ ಸಂಘ ಕೋಟ ಇವರ ಸಹಯೋಗದೊಂದಿಗೆ 49ನೇ ರೈತರೆಡೆಗೆ ನಮ್ಮ ನಡಿಗೆ ಸರಣಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಯುವ ಸಮುದಾಯ ಕೃಷಿ ಕಾಯಕದಲ್ಲಿ ಮಂಚೂಣಿಗೆ ನಿಲ್ಲಬೇಕು, ಸರಕಾರ ಕೃಷಿ ಕಾರ್ಯ ಉಳಿಯಲು ವಿವಿಧ ಯೋಜನೆಗಳನ್ನು ರೂಪಿಸಬೇಕು. ಪ್ರಸ್ತುತ ಭತ್ತದ ಬೆಳೆಗೆ ನೈಜ ಬೆಲೆ‌ ನೀಡಬೇಕು ಎಂದು ಸಭೆಯಲ್ಲಿ ಆಗ್ರಹಿಸಿದರಲ್ಲದೆ ಕೃಷಿಕರನ್ನು ಗುರುತಿಸುವ ಪಂಚವರ್ಣದ ಕಾರ್ಯ ಅತ್ಯಂತ ಶ್ರೇಷ್ಠತೆಯನ್ನು ಪಡೆದುಕೊಂಡಿದೆ ಎಂದರು. ರೈತಧ್ವನಿ ಸಂಘ ಕೋಟ ಅಧ್ಯಕ್ಷ ಎಂ. ಜಯರಾಮ ಶೆಟ್ಟಿ ಮಾತನಾಡಿ, ಕೃಷಿ ಕಾರ್ಯದಲ್ಲಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಬೈಂದೂರು: ತಾಲೂಕು ಕಚೇರಿಯಲ್ಲಿ ತಾಲೂಕಿನ ಜನ ಸಾಮಾನ್ಯರು ವಿವಿಧ ಸಮಸ್ಯೆಗಳ ಪರಿಹಾರಕ್ಕಾಗಿ ನೀಡಿರುವ ಅರ್ಜಿಗಳನ್ನು ವಿಲೇವಾರಿ ಮಾಡದೇ ವಿನಾಕಾರಣ ವಿಳಂಬ ಮಾಡುತ್ತಿರುವ ಬಗ್ಗೆ ಇತ್ತೀಚಿಗೆ ಹಲವು ದೂರುಗಳು ಬಂದ ಹಿನ್ನಲೆಯಲ್ಲಿ ತಾಲೂಕು ಕಚೇರಿಗೆ ಬರುವ ಜನ ಸಾಮಾನ್ಯರ ಕೆಲಸವನ್ನು ಮಾಡಿಕೊಡಲು ವಿಳಂಬ ಮಾಡಿದರೆ ಹಾಗೂ ಸತಾಯಿಸಿದರೆ ಸಹಿಸಲು ಸಾಧ್ಯವಿಲ್ಲ ಎಂದು ಬೈಂದೂರು ಶಾಸಕ ಗುರುರಾಜ್‌ ಗಂಟಿಹೊಳೆ ಎಚ್ಚರಿಕೆ ನೀಡಿದರು. ಅವರು ತಾಲೂಕು ಕಚೇರಿ ಪ್ರಜಾ ಸೌಧದ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸಿಬ್ಬಂದಿಗಳ ಕಾರ್ಯ ವೈಖರಿ ಬಗ್ಗೆ ವಿವಿಧ ವಿಷಯ ನಿರ್ವಾಹಕ ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡು ಮಾತನಾಡಿದರು. ಕಚೇರಿಗೆ ಸಿಬ್ಬಂದಿಗಳು ತಮ್ಮ ಸ್ವಭಾವ ಹಾಗೂ ಕಾರ್ಯ ವೈಖರಿಯನ್ನು ಜನ ಸಾಮಾನ್ಯರಿಗೆ ಅನುಕೂಲವಾಗುವಂತೆ ಬದಲಾಯಿಸಿಕೊಳ್ಳಬೇಕು ಎಂದು ತಾಕೀತು ಮಾಡಿದರು. ಕಚೇರಿಗೆ ಬರುವ ಸಾರ್ವಜನಿಕರಿಗೆ ಸರಿಯಾದ ಮಾಹಿತಿ ನೀಡದೇ ಕಚೇರಿಯೊಳಗೆ ಅಲೆದಾಡಿಸದೇ ಸರಿಯಾದ ಮಾಹಿತಿ ನೀಡಲು ಮಾಹಿತಿ ಕೇಂದ್ರದ ವ್ಯವಸ್ಥೆ ಮಾಡಬೇಕು. ಆರ್.ಆರ್.ಟಿ, 11 ಇ, ಸಾಕಷ್ಟು ಅರ್ಜಿಗಳು ಬಾಕಿ ಇದ್ದು ಅದನ್ನು ತ್ವರಿತವಾಗಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಬ್ರಹ್ಮಾವರ ತಾಲೂಕಿನ ಹೇರಾಡಿ ಗ್ರಾಮದ ಕೂಡ್ಲಿ ಸಮೀಪ ಸರಕಾರಿ ಜಾಗದಲ್ಲಿ ಅಕ್ರಮವಾಗಿ ಕೋಳಿಗಳ ಕಾಲಿಗೆ ಕತ್ತಿ ಕಟ್ಟಿ ಮನೋರಂಜನೆ ಹಾಗೂ ಹಣ ಪಣವಾಗಿ ಕಟ್ಟಿ ಜೂಜಾಟ ನಡೆಯುತ್ತಿದೆ ಎಂಬ ಮಾಹಿತಿ ಮೇರೆಗೆ ಬ್ರಹ್ಮಾವರ ಠಾಣಾ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಾದ ಪ್ರಶಾಂತ್ ಮತ್ತು ರಾಘವೇಂದ್ರ. ಇತರ ಮಂದಿ ಓಡಿ ಹೋಗಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. ಆರೋಪಿಗಳಿಂದ ₹2,120 ನಗದು, ಎರಡು ಕೋಳಿಗಳು, ಕೋಳಿಯ ಕಾಲಿಗೆ ಕಟ್ಟಿದ್ದ ಬಾಲ್‌ಗಳು ಹಾಗೂ ನೈಲಾನ್ ಹಗ್ಗಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ‌ ಸುದ್ದಿ. ಬೈಂದೂರು: ಕಾಲೇಜು ಪದವಿ ಜೊತೆಗೆ ಕ್ರೀಯಾತ್ಮಕ ಚಟುವಟಿಕೆಗಳು‌ ಎಷ್ಟು ನಡೆಯುತ್ತದೆ ಎಂಬುದು ಮುಖ್ಯ. ಗುಣಾತ್ಮಕ ಚಟುವಟಿಕೆಗಳು ವಿದ್ಯಾರ್ಥಿಗಳನ್ನು ಮಾನಸಿಕ‌ ಹಾಗೂ ಬೌದ್ಧಿಕವಾಗಿ ಗಟ್ಟಿಗೊಳಿಸುತ್ತವೆ ಎಂದು ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು. ಅವರು ಶುಕ್ರವಾರ ಬೈಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶ ಮತ್ತು ವಿದ್ಯಾರ್ಥಿ ಕ್ಷೇಮ ಪಾಲನಾ ಸಮಿತಿ ಇದರ 2025-26ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಪರಿಷತ್ತು ಹಾಗೂ ವಿವಿಧ ಚಟುವಟಿಕೆಗಳು‌ ಮತ್ತು ಸುರಭಿ ರಿ. ಸಹಯೋಗದೊಂದಿಗೆ ನಡೆಯುವ ರಂಗ ತರಬೇತಿ ಶಿಬಿರದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು. ಬೈಂದೂರು ಸರಕಾರಿ ಪದವಿ ಕಾಲೇಜು ಗುಣಮಟ್ಟದ ಶಿಕ್ಷಣ ಹಾಗೂ ಪಠ್ಯೇತರ ಚಟುವಟಿಕೆಗಳ ಪಾಲ್ಗೊಳ್ಳುವಿಕೆಯಲ್ಲಿ ಮಾದರಿಯಾಗಿ ರೂಪುಗೊಳ್ಳುತ್ತಿದೆ. ಪ್ರಾಂಶುಪಾಲರು‌ ಮತ್ತು ಉಪನ್ಯಾಸಕರ ತಂಡವೂ ಅದಕ್ಕೆ ಪೂರಕವಾಗಿ ತೊಡಗಿಸಿಕೊಂಡಿದೆ. ಸಂಸ್ಥೆಯ ಮೂಲಭೂತ ಸೌಕರ್ಯವನ್ನು ಸರಕಾರ ಅಥವಾ ಸರಕಾರೇತರ ಸಂಸ್ಥೆಗಳ ಮೂಲಕ ಒದಗಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು. ಜಿ.ಪಂ ಮಾಜಿ ಅಧ್ಯಕ್ಷ ಎಸ್. ರಾಜು ಪೂಜಾರಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಘಟಕ ಹಾಗೂ ಪ್ರಾಕ್ತನ ವಿದ್ಯಾರ್ಥಿ ಸಂಘದ ಜಂಟಿ ಆಶ್ರಯದಲ್ಲಿ ರೋವರ್ಸ್ & ರೇಂಜರ್ಸ್ ಸ್ವಯಂ ಸೇವಕರಿಗೆ ಓರಿಯಂಟೇಶನ್ ಕಾರ್ಯಕ್ರಮವನ್ನು ಕಾಲೇಜಿನ ಎ.ವಿ. ಹಾಲ್ ನಲ್ಲಿ ಇತ್ತೀಚಿಗೆ ನಡೆಯಿತು. ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ, ರೇಂಜರ್ ರಾಜ್ಯ ಪುರಸ್ಕಾರ ಪದವಿ ಪುರಸ್ಕೃತ ಸಮೃದ್ಧಿ ಕಿಣಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ, ಸ್ಕೌಟ್ & ಗೈಡ್ಸ್ ನ ಹಿನ್ನೆಲೆ ಹಾಗೂ ಯುವ ಸಮುದಾಯ ಸ್ಕೌಟ್ ಚಟುವಟಿಕೆಯಲ್ಲಿ ಭಾಗವಹಿಸುವುದರಿಂದ ಸಿಗುವ ಪ್ರಯೋಜನಗಳ ಕುರಿತು ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ರೇಂಜರ್ ಲೀಡರ್ ಜೋಸ್ಲಿನ್ ಡಿ. ಅಲ್ಮೇಡಾ, ಕಾಲೇಜಿನ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕರು ಹಾಗೂ ಪ್ರಾಕ್ತನ ವಿದ್ಯಾರ್ಥಿ ಸಂಘದ ನೂತನ ಕಾರ್ಯದರ್ಶಿಯಾದ ದೀಪಾ ಪೂಜಾರಿ ಉಪಸ್ಥಿತರಿದ್ದರು. ಕಾಲೇಜಿನ ರೋವರ್ ಸ್ಕೌಟ್ ಲೀಡರ್ ಪ್ರವೀಣ್ ಮೊಗವೀರ ಗಂಗೊಳ್ಳಿ ಕಾರ್ಯಕ್ರಮ ನಿರೂಪಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ನಡೆದ ಮಂಗಳೂರು ವಿ.ವಿ. ಅಂತರ್ ಕಾಲೇಜು ಅಂತರ್ ವಲಯ ಪುರುಷರ ವಾಲಿಬಾಲ್ ಪಂದ್ಯಾಟದಲ್ಲಿ ಆಳ್ವಾಸ್ ಕಾಲೇಜಿನ ಪುರುಷರ ವಾಲಿಬಾಲ್ ತಂಡವು 17ನೇ ಬಾರಿ ಪ್ರಶಸ್ತಿಯನ್ನು ಪಡೆದು, ಶ್ರೀ ಪಾಟೀಲ್ ಸಾಹುಕಾರ್ ಅಂತಯ್ಯ ಶೆಟ್ಟಿ ಮೆಮೋರಿಯಲ್ ರೋಲಿಂಗ್ ಟ್ರೋಫಿಯನ್ನು ಪಡೆದುಕೊಂಡಿದೆ. ಫೈನಲ್ ಪಂದ್ಯಾಟದಲ್ಲಿ ಪುರುಷರ ತಂಡವು ಎಸ್.ಡಿ.ಎಂ. ತಂಡವನ್ನು 3-1 ಸೆಟ್‌ಗಳ ಅಂತರದಿಂದ ಗೆದ್ದು ಚಾಂಪಿಯನ್ ಪಟ್ಟವನ್ನು ಪಡೆಯಿತು. ವೈಯಕ್ತಿಕ ವಿಭಾಗದಲ್ಲಿ ಬೆಸ್ಟ್ ಆಲ್ ರೌಂಡರ್ ಪ್ರಶಸ್ತಿಯನ್ನು ಆಳ್ವಾಸ್‌ನ ರಾಹುಲ್, ಬೆಸ್ಟ್ ಸೆಟ್ಟರ್ ಪ್ರಶಸ್ತಿಯನ್ನು ಆಳ್ವಾಸ್‌ನ ಪುನೀತ್ ಹಾಗೂ ಬೆಸ್ಟ್ ಲಿಬ್ರೊ ಪ್ರಶಸ್ತಿಯನ್ನು ಆಳ್ವಾಸ್‌ನ ಮಂಜುನಾಥ್ ಪಡೆದರು. ವಿಜೇತ ಕ್ರೀಡಾಪಟುಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ವತಿಯಿಂದ ವಿಜ್ಞಾನ ವಿಷಯಗಳ ಬರವಣಿಗೆಯನ್ನು ಪ್ರೋತ್ಸಾಹಿಸುವ ಸಲುವಾಗಿ ಕೃಷಿ, ವಿಜ್ಞಾನ, ತಂತ್ರಜ್ಞಾನ ಮತ್ತು ವೈದ್ಯಕೀಯ ವಿಷಯಗಳ ಮೇಲೆ ಕನ್ನಡದಲ್ಲಿ ಜನವರಿ – 2023 ರಿಂದ ಡಿಸೆಂಬರ್-2025 ರ ಒಳಗೆ ಪ್ರಕಟವಾಗುವ ಪುಸ್ತಕಗಳ ಲೇಖಕರಿಂದ ಶ್ರೇಷ್ಠ ಪುಸ್ತಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜನವರಿ 5, 2026 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿಯ ವೆಬ್‌ಸೈಟ್ https://kstcademy.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಕಾಡೆಮಿಯ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ಕೋಟ, ಕೋಟತಟ್ಟು ಗ್ರಾಮ ಪಂಚಾಯತ್, ಕೈಂಡ್ ಹಾರ್ಟ್ಸ್ ಬಾಳ್ಕುದ್ರು, ಶ್ರೀ ವೇಣುಗೋಪಾಲ ಎಜ್ಯುಕೇಶನಲ್ ಸೊಸೈಟಿ ಮೂಡುಕೇರಿ ಬಾರ್ಕೂರು, ಉಸಿರು ಕೋಟ ಇವರ ಆಸರೆಯಲ್ಲಿ ಕೊಡಮಾಡುವ 2025ನೇ ಸಾಲಿನ ಕಾರಂತ ಬಾಲ ಪುರಸ್ಕಾರಕ್ಕೆ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆಯನ್ನು ಕೋಟದ ಕಾರಂತ ಥೀಮ್ ಪಾರ್ಕ್‌ನಲ್ಲಿ ಪಡೆಯುವುದು ಅಥವಾ ಗ್ರಂಥಾಲಯ ಮೇಲ್ವಿಚಾರಕಿ ಶೈಲಜ ಕೆ. ಎನ್. (9663750499) ಅವರನ್ನು ಕಛೇರಿ ಸಮಯದಲ್ಲಿ ಸಂಪರ್ಕಿಸಿ ಪಡೆಯುವುದು. ಭರ್ತಿ ಮಾಡಿದ ಅರ್ಜಿಯನ್ನು ನವೆಂಬರ್ 12ರ ಸಂಜೆ 5 ಗಂಟೆ ಒಳಗೆ ಕೋಟದ ಕಾರಂತ ಥೀಮ್ ಪಾರ್ಕ್ ಕಛೇರಿಗೆ ತಲುಪಿಸುವುದು ಅಥವಾ ಕಾರ್ಯದರ್ಶಿ, ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ಕೋಟ ಬ್ರಹ್ಮಾವರ ತಾಲೂಕು ಉಡುಪಿ ಜಿಲ್ಲೆ  – 576221 ಅವರಿಗೆ ಅಂಚೆ ಮೂಲಕ ತಲುಪಿಸುವಂತೆ ಕಾರಂತ ಪ್ರತಿಷ್ಠಾನದ ಕಾರ್ಯಾಧ್ಯಕ್ಷ  ಆನಂದ ಸಿ. ಕುಂದರ್, ಅಧ್ಯಕ್ಷರಾದ ಸತೀಶ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಪರಿಸರ ಸ್ನೇಹಿ ಕಾರ್ಯಕ್ರಮಗಳೊಂದಿಗೆ ಗುಣಮಟ್ಟದ ಶಿಕ್ಷಣಕ್ಕೆ ಹೆಸರು ವಾಸಿಯಾಗಿರುವ ಹಟ್ಟಿಅಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯು 2025-26ನೇ ಶೈಕ್ಷಣಿಕ ವರ್ಷದ ‘ಡೈನಾಮಿಕ್ ಸ್ಕೂಲ್ ಅವಾರ್ಡ್ಸ್ – 2025’ ಪ್ರಶಸ್ತಿಗೆ ಪಾತ್ರವಾಗಿದೆ.  ಅ.14 ರಂದು, ಎಜುಕೇಶನ್ ಟುಡೇ ಸಂಸ್ಥೆಯು ಇಂಟರ್ನ್ಯಾಷನಲ್ ಬ್ಯಾಕಲೋರಿಯೇಟ್ ಸಹಯೋಗದಲ್ಲಿ ಹಾಗೂ ಎಜುಕೇಶನ್ ನ್ಯೂಸ್ ನೆಟ್ವರ್ಕ್ ಸಹಭಾಗಿತ್ವದಲ್ಲಿ ಡೈನಾಮಿಕ್ ಸ್ಕೂಲ್ ಅವಾರ್ಡ್ಸ್ 2025 ಕಾರ್ಯಕ್ರಮವನ್ನು ಮೈಸೂರಿನ ರಾಡಿಸನ್ ಬ್ಲೂ ಹೋಟೆಲ್‌ನಲ್ಲಿ ಆಯೋಜಿಸಲಾಗಿತ್ತು. ಸಂಸ್ಥೆಯ ಪರವಾಗಿ ಪ್ರಶಸ್ತಿಯನ್ನು ಪ್ರಾಥಮಿಕ ಶಾಲೆಯ ಸಂಯೋಜಕಿಯಾದ ದೀಪಿಕಾ ದೇವಾಡಿಗ ಮತ್ತು ರೇಖಾ ಆರ್. ಅವರು ಕಾರ್ಯಕ್ರಮದಲ್ಲಿ ಪ್ರಮುಖ ಅತಿಥಿಗಳಾದ ನಾಡೋಜ ಡಾ. ವೂಡೇ ಪಿ. ಕೃಷ್ಣ, ಮಿಸ್ ಬ್ರಿಂದಾ ಶ್ರೀನಿವಾಸ್ ಮತ್ತು ಶ್ರೀ ತನ್ವೀರ್ ಅಹ್ಮದ್ ಅವರಿಂದ ಪ್ರಶಸ್ತಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ತನ್ನ ವಿಶಿಷ್ಟ ಶೈಕ್ಷಣಿಕ ಸಾಧನೆಗಳು, ಹಸಿರು ಆವರಣ ಯೋಜನೆಗಳು ಮತ್ತು ವಿದ್ಯಾರ್ಥಿ ಕೇಂದ್ರಿತ ಚಟುವಟಿಕೆಗಳ ಮೂಲಕ ಗುರುತಿಸಿಕೊಂಡು ವಿಶೇಷ ಗೌರವವನ್ನು ಗಳಿಸಿತು. ಸಂಸ್ಥೆಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ಪಂಚವರ್ಣ ಯುವಕ ಮಂಡಲ ಹಾಗೂ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಪ್ರತಿವರ್ಷ ನಡೆಯುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ – ಸದ್ಭಾವನಾ 2025 ಈ ಬಾರಿ ನವೆಂಬರ್ 16 ರಂದು ಉಡುಪಿ ಜಿಲ್ಲೆಯ ಕೋಟದ ಗಾಂಧಿ ಮೈದಾನದಲ್ಲಿ ಆಯೋಜಿಸಲಾಗಿದೆ. ಪ್ರತಿವರ್ಷ ರಾಜ್ಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈದ ಸಾಧಕರಿಗೆ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡುತ್ತಾ ಬಂದಿದ್ದು ಈ ಬಾರಿ ಕನ್ನಡ ನಾಡು ಕಂಡ ಶ್ರೇಷ್ಠ ಪತ್ರಕರ್ತೆ ರಾಜ್ಯ ಪರಿಸರ ಪತ್ರಿಕೋದ್ಯಮ ಪ್ರಶಸ್ತಿ ಪುರಸ್ಕೃತೆ ವಿಜಯಲಕ್ಷ್ಮಿ ಶಿಬರೂರು ಅವರಿಗೆ ಗಣ್ಯರ ಸಮ್ಮುಖದಲ್ಲಿ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಪ್ರಶಸ್ತಿ 25 ಸಾವಿರ ಮೌಲ್ಯದ ಬೆಳ್ಳಿ ಫಲಕ ಒಳಗೊಂಡಿದೆ. ಇದೇ ವೇಳೆ  ವಿಶೇಷ ಪುರಸ್ಕಾರವನ್ನು ವಿಶ್ವವಿಖ್ಯಾತ ರಥಶಿಲ್ಪಿ ಕೋಟೇಶ್ವರ ರಾಜಗೋಪಾಲ ಆಚಾರ್ಯ ಅವರಿಗೆ ನೀಡಲಾಗುತ್ತಿದೆ. ಅಶಕ್ತರಿಗೆ, ಅನಾರೋಗ್ಯ ಪೀಡಿತರಿಗೆ, ವಿದ್ಯಾರ್ಥಿವೇತನ, ಸ್ಥಳೀಯ ಅಂಗನವಾಡಿಗೆ ಸಮವಸ್ತ್ರ, ಕನ್ನಡ ಮಾಧ್ಯಮ ಸರಕಾರಿ ಶಾಲೆಗಳಿಗೆ ದತ್ತಿನಿಧಿ ಸೇರಿದಂತೆ ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು…

Read More