ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಉಡುಪಿ ಆದರ್ಶ ಚಾರಿಟೇಬಲ್ ಟ್ರಸ್ಟ್, ಆದರ್ಶ ಸಮೂಹ ಸಂಸ್ಥೆಗಳು, ಆದರ್ಶ ಆಸ್ಪತ್ರೆ ಮತ್ತು ಉಡುಪಿ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಡಾ| ಎಸ್. ರಾಧಾಕೃಷ್ಣನ್ ಜನ್ಮ ಜಯಂತಿ ಅಂಗವಾಗಿ ನೀಡುವ ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಕೋಟ ಸುಜಯೀಂದ್ರ ಹಂದೆ ಭಾಜನರಾಗಿದ್ದಾರೆ. ಕಲೆ, ಶಿಕ್ಷಣ, ಸಾಹಿತ್ಯ ಚಟುವಟಿಕೆಗಳಲ್ಲಿ ಸಕ್ರಿಯರಾಗಿರುವ ಹಂದೆಯವರು ಕಳೆದ 29 ವರ್ಷಗಳಿಂದ ಕನ್ನಡ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸೆಪ್ಟೆಂಬರ್ 06ರಂದು ಉಡುಪಿ ಅಲೆವೂರಿನ ಆದರ್ಶ ಸಮೂಹ ವಿದ್ಯಾ ಸಂಸ್ಥೆಗಳ ಸಂಕೀರ್ಣದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಕ್ಷೇತ್ರ ಶಿಕ್ಷಣಧಿಕಾರಿಗಳ ಕಛೇರಿ ಕುಂದಾಪುರ ಮತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ ನಡೆದ ಕುಂದಾಪುರ ವೃತ್ತ ಮಟ್ಟದ 14 ವರ್ಷದ ಬಾಲಕ – ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ ಬಾಲಕಿಯರ ತಂಡವು ದ್ವಿತೀಯ ಸ್ಥಾನವನ್ನು ಪಡೆದಿದೆ. ಬಾಲಕಿಯರ ತಂಡದಲ್ಲಿ ಸನ್ನಿಧಿ, ಮನ್ವಿತಾ, ಧನ್ಯ ಖಾರ್ವಿ, ಆಶಿತಾ ಖಾರ್ವಿ, ಅಪೇಕ್ಷಾ, ಸನ್ನಿಧಿ, ಶ್ರೀಲಕ್ಷ್ಮಿ, ಅನ್ವಿತಾ, ಶ್ರಾವಣಿ, ತನುಶ್ರೀ, ಅದಿತಿ ಪ್ರತಿನಿಧಿಸಿದ್ದರು. ದೈಹಿಕ ಶಿಕ್ಷಣ ಶಿಕ್ಷಕರಾದ ದೀಕ್ಷಿತ್ ಮೇಸ್ತ ಮಾರ್ಗದರ್ಶನ ನೀಡಿದ್ದರು. ಶಾಲೆಯ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಬೋಧಕ ವೃಂದ ಮತ್ತು ಶಿಕ್ಷಕ – ರಕ್ಷಕ ಸಮಿತಿ ವಿದ್ಯಾರ್ಥಿಗಳ ಸಾಧನೆಯನ್ನು ಅಭಿನಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಪಾಂಡೇಶ್ವರ ವಲಯದ ಗುಂಡ್ಮಿ ಕಾರ್ಯಕ್ಷೇತ್ರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ವತಿಯಿಂದ ಮಾಹಿತಿ ತಂತ್ರಜ್ಞಾನ ಆಧಾರಿತ ಕೃಷಿ ಮಾರುಕಟ್ಟೆ ಕುರಿತು ಕೃಷಿ ತರಬೇತಿ ಕಾರ್ಯಕ್ರಮವು ಬುಧವಾರ ಗುಂಡ್ಮಿ ಪಾತಾಳಬೆಟ್ಟು ಪರಿಸರದಲ್ಲಿ ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಕೋಟ ಸಿಎ ಬ್ಯಾಂಕಿನ ಉಪಾಧ್ಯಕ್ಷ ರವೀಂದ್ರ ಕಾಮತ್ ಉದ್ಘಾಟಿಸಿ ಶುಭ ಹಾರೈಸಿದರು. ತರಬೇತಿಯಲ್ಲಿ ಬ್ರಹ್ಮಾವರ ತಾಲೂಕಿನ ಕೃಷಿ ಮೇಲ್ವಿಚಾರಕ ರಾಘವೇಂದ್ರ ಪ್ರಾಸ್ತಾವಿಕ ನುಡಿಯನ್ನಾಡಿದರು. ಸಂಪನ್ಮೂಲ ವ್ಯಕ್ತಿ ರೈತಧ್ವನಿ ಸಂಘ ಕೋಟ ಅಧ್ಯಕ್ಷ ಜಯರಾಮ್ ಶೆಟ್ಟಿ ಮಾತನಾಡಿ ಇಂದಿನ ದಿನಗಳಲ್ಲಿ ರೈತರು ತಾವು ಬೆಳೆದ ಬೆಳೆಗೆ ಸರಿಯಾದ ಮಾರುಕಟ್ಟೆ ವ್ಯವಸ್ಥೆ ಇಲ್ಲದಿರುವುದು ತುಂಬಾ ನೋವಿನ ವಿಷಯವಾಗಿದೆ. ಆದರೆ ನಮ್ಮ ರೈತರಲ್ಲಿ ಪ್ರಸ್ತುತ ದಿನಗಳಲ್ಲಿ ತಾಳ್ಮೆ ಎನ್ನುವುದು ತುಂಬಾ ಕಡಿಮೆಯಾಗಿದೆ. ಬೆಳೆದ ಬೆಳೆಯನ್ನು ರೈತರು ಹೊಲದಿಂದಲೇ ನೇರ ಮಾರುಕಟ್ಟೆಗೆ ಕಳಿಸುವುದರಿಂದ ನಾವು ನಿರೀಕ್ಷೆ ಮಾಡಿದ ಬೆಲೆ ನಮಗೆ ಸಿಗುವುದಿಲ್ಲ ಆದ್ದರಿಂದ ರೈತರು ತಮ್ಮ ಬೆಳೆಯನ್ನ ಉತ್ತಮ ಬೆಲೆಗೆ ಮಾರಾಟ ಮಾಡಬೇಕು ಎಂದರೆ ಬೆಳೆದ ಬೆಳೆಯನ್ನ ಸಂಸ್ಕರಿಸಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಕೈಗಾರಿಕೆ ಇಲಾಖೆಯ ವತಿಯಿಂದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಕೈಗಾರಿಕೋದ್ಯಮಿಗಳಿಗೆ ವಿವಿಧ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಹೊಸದಾಗಿ ಅತೀ ಸಣ್ಣ ಮತ್ತು ಸಣ್ಣ ಕೈಗಾರಿಕಾ ಘಟಕಗಳನ್ನು ಪ್ರಾರಂಭಿಸುವ ಉದ್ಯಮಿಗಳು ಬ್ಯಾಂಕ್‌ಗಳಲ್ಲಿ ಪಡೆದ ಸಾಲವನ್ನು ಹೊರತುಪಡಿಸಿ ತಾವು ತೊಡಗಿಸುವ ಬಂಡವಾಳದ ಅರ್ಧದಷ್ಟು ಹಣವನ್ನು ಬಡ್ಡಿರಹಿತ ಸಾಲದ ರೂಪದಲ್ಲಿ ನೀಡಲಾಗುವುದು, ಘಟಕದ ಸ್ಥಿರ ಬಂಡವಾಳದ ಶೇ.60 ರಷ್ಟು ಸಹಾಯಧನ, ಬ್ಯಾಂಕ್‌ಗಳಲ್ಲಿ ಸಾಲ ಪಡೆಯುವ ಸಂದರ್ಭದಲ್ಲಿ ಬ್ಯಾಂಕ್‌ಗಳಿಂದ ವಿಧಿಸಲಾಗುವ ಸಾಲ ಪ್ರಕ್ರಿಯೆ ಶುಲ್ಕ ಮರುಪಾವತಿ ಹಾಗೂ ವಿದ್ಯುತ್ ಇಲಾಖೆಯಿಂದ ವಿಧಿಸಲಾಗುವ ವಿದ್ಯುತ್ ಶುಲ್ಕದಲ್ಲಿ ರಿಯಾಯಿತಿ ನೀಡಲಾಗುವುದು. ಮೇಲ್ಕಂಡ ಸೌಲಭ್ಯಗಳು ಗುರಿ ಆಧಾರಿತವಾಗಿದ್ದು, ಹೊಸದಾಗಿ ಅತೀಸಣ್ಣ ಮತ್ತು ಸಣ್ಣ ಕೈಗಾರಿಕಾ ಘಟಕಗಳನ್ನು ಪ್ರಾರಂಭಿಸುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಆಸಕ್ತ ಉದ್ಯಮಿಗಳು ಸೆಪ್ಟಂಬರ್ 15ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೈಗಾರಿಕಾ ಕೇಂದ್ರ, ಪ್ಲಾಟ್ ನಂ: 36-ಸಿ, ಶಿವಳ್ಳಿ ಕೈಗಾರಿಕಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ನಾವೀನ್ಯತೆ, ತಾರ್ಕಿಕ ಸಾಧನೆಗಳು, ಕ್ರೀಡೆ, ಕಲೆ, ಸಾಂಸ್ಕೃತಿಕ ಮತ್ತು ಸಂಗೀತ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿದ ಜಿಲ್ಲೆಯ 5 ರಿಂದ 18 ವರ್ಷದೊಳಗಿನ ಮಕ್ಕಳಿಂದ ಜಿಲ್ಲಾ ಮಟ್ಟದ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪ್ರಶಸ್ತಿಗೆ ಆಯ್ಕೆಯಾಗುವ ಮಕ್ಕಳು ಅಪ್ರತಿಮ ಪ್ರತಿಭೆಯುಳ್ಳವರಾಗಿದ್ದು, ಸಾಧನೆ ಅಸಾಧಾರಣವೆಂದು ಸಮರ್ಥಿಸಲು ಪೂರಕ ದಾಖಲೆಗಳೊಂದಿಗೆ ಪ್ರಸ್ತಾವನೆಯನ್ನು ಜಿಲ್ಲಾ ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಠಡಿ ಸಂಖ್ಯೆ 204, ಮೊದಲನೇ ಮಹಡಿ, ರಜತಾದ್ರಿ, ಮಣಿಪಾಲ ಇಲ್ಲಿಗೆ ಸೆಪ್ಟಂಬರ್ 30ರ ಒಳಗಾಗಿ ಸಲ್ಲಿಸಬಹುದಾಗಿದೆ. ಹಿಂದಿನ ವರ್ಷಗಳಲ್ಲಿ ಜಿಲ್ಲಾ ಮಟ್ಟದಲ್ಲಿ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ಪಡೆದ ಮಕ್ಕಳು ಮತ್ತೆ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರ ಕಚೇರಿಯ ದೂ.ಸಂಖ್ಯೆ :0820-2574978 ಅನ್ನು ಕಚೇರಿ ವೇಳೆಯಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕು ಕಚೇರಿಯಲ್ಲಿ ರಾಜ್ಯ ಸರಕಾರದ ನೂತನ ಪ್ರಜಾಸೇವೆ ಆಂದೋಲನದ ಕುರಿತಾದ ಪೂರ್ವಭಾವಿ ಸಭೆ ನಡೆಯಿತು. ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ ಉದ್ದೇಶಿಸಿ ಮಾತನಾಡಿ, ಜನರ ಸಮಸ್ಯೆ ಗಳನ್ನು ಆಲಿಸಲು ಹಾಗೂ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕಳೆದ ಮೂರು ವರ್ಷಗಳಲ್ಲಿ ಜನ ಸ್ಪಂದನ ಕಾರ್ಯಕ್ರಮಗಳನ್ನು ಕೈಗೊಂಡಿದ್ದರೂ ಜನ ಸ್ಪಂದನ ಸಭೆಗಳಲ್ಲಿ ಇತ್ಯರ್ಥವಾದ ಅರ್ಜಿಗಳು ಹಾಗೂ ಬಾಕಿ ಉಳಿದಿರುವ ಅರ್ಜಿಗಳ ಕುರಿತಾದ ಮಾಹಿತಿ ಅಧಿಕಾರಿಗಳಿಗೆ ಇಲ್ಲ. ಈ ಸಭೆಯಲ್ಲೂ ಹಾಜರಾಗಲು ನೋಟಿಸು ಕಳುಹಿಸಿರುವ ಹೆಚ್ಚಿನ ಇಲಾಖೆಗಳು ಗೈರು ಹಾಜರಾಗಿದ್ದು ಹಾಗೂ ಪ್ರಜಾ ಸೇವೆ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಅಧಿಕಾರಿಗಳಲ್ಲಿ ಸ್ಪಷ್ಟತೆ ಇಲ್ಲದಿರುವುದಾಗಿದೆ. ಹಾಗಾಗಿ ಪ್ರಜಾಸೇವೆ ಆಂದೋಲನವೂ ಮತ್ತೊಂದು ಕಾಟಾಚಾರದ ಜನ ಸ್ಪಂದನ ಕಾರ್ಯಕ್ರಮವಾಗದೇ ಕ್ಷೇತ್ರದ ಜನ ಸಾಮಾನ್ಯರ ಬೇಡಿಕೆಗಳಿಗೆ ಹಾಗೂ ಸಮಸ್ಯೆಗಳಿಗೆ ಪರಿಣಾಮಕಾರಿಯಾಗಿ ಸ್ಪಂದಿಸಲು ಎಲ್ಲಾ ಇಲಾಖೆಗಳು ತಮ್ಮ ತಮ್ಮ ಹೊಣೆಯರಿತು,ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದರು. ಸಭೆಯಲ್ಲಿ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ಮೋಹನ್ ಪೂಜಾರಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಬಾಲ ನ್ಯಾಯ ಕಾಯ್ದೆಯನ್ವಯ ನೋಂದಣಿಯಾಗಿರುವ ಸಂಸ್ಥೆ/ವಸತಿ ನಿಲಯಗಳನ್ನು ಹೊರತುಪಡಿಸಿ 6 ರಿಂದ 18 ವರ್ಷದೊಳಗಿನ ಮಕ್ಕಳಿಗಾಗಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸರ್ಕಾರೇತರ ಸಂಸ್ಥೆಗಳು, ನಾಗರಿಕ ಸಮಾಜ ಸಂಸ್ಥೆಗಳು, ಟ್ರಸ್ಟ್, ಧಾರ್ಮಿಕ, ಖಾಸಗಿ, ವೈಯಕ್ತಿಕವಾಗಿ ನಡೆಸಲ್ಪಡುವ ಯಾವುದೇ ಔಪಚಾರಿಕ, ಅನೌಪಚಾರಿಕ ಶೈಕ್ಷಣಿಕ ವಸತಿ ನಿಲಯ, ವಸತಿ ಶಾಲೆ, ಕಾಲೇಜುಗಳನ್ನು ಕಡ್ಡಾಯವಾಗಿ ನೋಂದಾಯಿಸಬೇಕಾಗಿದ್ದು, ಅರ್ಜಿ ನಮೂನೆಗಳನ್ನು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಡುಪಿ ಇವರಿಂದ ಪಡೆದು ಸೆಪ್ಟೆಂಬರ್ 4ರ ಒಳಗಾಗಿ ಭರ್ತಿ ಮಾಡಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಠಡಿ ಸಂಖ್ಯೆ 204, ಮೊದಲನೇ ಮಹಡಿ, ರಜತಾದ್ರಿ, ಮಣಿಪಾಲ ದೂ.ಸಂ: 0820-2574978 ಅನ್ನು ಸಂಪರ್ಕಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಗಂಗೊಳ್ಳಿಯ ಅಳಿವೆ ಬಾಗಿಲಿನಲ್ಲಿ ಮೀನುಗಾರಿಕೆಗೆ ತೆರಳುತ್ತಿದ್ದ ಬೋಟೊಂದು ನೀರಿನ ಸುಳಿಗೆ ಸಿಲುಕಿ ಮುಳುಗಡೆಯಾದ ಘಟನೆ ಬುಧವಾರ ಸಂಭವಿಸಿದೆ. ಬೋಟ್‌ನಲ್ಲಿದ್ದ ಸುಮಾರು ಆರು ಮಂದಿ ಮೀನುಗಾರರನ್ನು ತಕ್ಷಣವೇ ರಕ್ಷಿಸಲಾಗಿದ್ದು, ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ. ಅಪಘಾತಕ್ಕೀಡಾದ ಬೋಟನ್ನು ಸದ್ಯ ಯಶಸ್ವಿಯಾಗಿ ದಡಕ್ಕೆ ತರಲಾಗಿದೆ. ಕಳೆದ ವಾರಷ್ಟೇ ಗಂಗೊಳ್ಳಿ ಅಳಿವೆ ಬಾಗಿಲಿನಲ್ಲಿ ಭಾರಿ ಅಲೆಗಳ ಹೊಡೆತಕ್ಕೆ ಸಿಲುಕಿ ಮೀನುಗಾರಿಕಾ ಬೋಟು ಸಂಪೂರ್ಣವಾಗಿ ಮುಳುಗಡೆಯಾಗಿತ್ತು. ಆ ಸಂದರ್ಭದಲ್ಲೂ ಕ್ಷಿಪ್ರ ಕಾರ್ಯಚರಣೆ ನಡೆಸಿ ಬೋಟ್ ನಲ್ಲಿದ್ದ 27 ಮಂದಿ ಮೀನುಗಾರರನ್ನು ಸುರಕ್ಷಿತವಾಗಿ ರಕ್ಷಿಸಲಾಗಿತ್ತು. ಆ ಘಟನೆ ಮಾಸುವ ಮುನ್ನವೇ ಇಂದು ಮತ್ತೊಂದು ಬೋಟ್ ಅಪಘಾತಕ್ಕೆ ಸಿಲುಕಿರುವುದು ಸ್ಥಳೀಯ ಮೀನುಗಾರರಲ್ಲಿ ಆತಂಕ ಹೆಚ್ಚಿಸಿದೆ. ಇದನ್ನೂ ಓದಿ► ಗಂಗೊಳ್ಳಿ: ಅಲೆಗಳ ಹೊಡೆತಕ್ಕೆ ಸಿಲುಕಿ ಬೋಟ್ ಮುಳುಗಡೆ: 27 ಮಂದಿ ಮೀನುಗಾರರ ರಕ್ಷಣೆ – https://kundapraa.com/?p=101294 .
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಸಾಲಿಗ್ರಾಮದ ಕಾರ್ಕಡ ಗೆಳೆಯರ ಬಳಗ ವತಿಯಿಂದ ಪ್ರತಿವರ್ಷ ನಡೆಸಲ್ಪಡುವ ಕೀರ್ತಿಶೇಷ ಡಾ. ಕೋಟ ಶಿವರಾಮ ಕಾರಂತರ ಹುಟ್ಟು ಹಬ್ಬದ ಪ್ರಯುಕ್ತ ಗೆಳೆಯರ ಬಳಗ ಕಾರಂತ ಪುರಸ್ಕಾರ – 2026 ಪ್ರಶಸ್ತಿಗೆ ಕಾರಂತರ ಓಡನಾಡಿ ಕೋಟತಟ್ಟು ನಿವಾಸಿ ರಾಮ ಮರಕಾಲ ಅವರು ಆಯ್ಕೆಯಾಗಿದ್ದಾರೆ. ಮಾಲಿನಿ ಮಲ್ಯ,ಎಸ್. ನಾರಾಯಣ ರಾವ್, ಪೇತ್ರಿ ಮಾಧವ ನಾಯಕ್, ಶ್ರೀನಿವಾಸ ಸಾಸ್ತಾನ, ಹಿರಿಯಡ್ಕ ಗೋಪಾಲರಾವ್, ಎಚ್. ಇಬ್ರಾಹಿಂ ಸಾಹೇಬ್, ಪಾಂಡೇಶ್ವರ ಚಂದ್ರಶೇಖರ ಚಡಗ, ಬನ್ನಂಜೆ ಸಂಜೀವ ಸುವರ್ಣ, ವೈದೇಹಿ, ಡಾ ನಾ ಮೊಗಸಾಲೆ ಹಾಗೂ ಶಾಕುಂತಲಾ ಭಟ್ ಇವರುಗಳಿಗೆ ಈ ಹಿಂದೆ ಗೆಳೆಯರ ಬಳಗ ಕಾರಂತ ಪುರಸ್ಕಾರ ನೀಡಲಾಗಿದೆ. ಗೆಳೆಯರ ಬಳಗ ಕಾರಂತ ಪುರಸ್ಕಾರ-2026ನ್ನು ಅಕ್ಟೋಬರ್ ತಿಂಗಳ 11ರ ಭಾನುವಾರ ಸಂಜೆ ಸಾಲಿಗ್ರಾಮ ಶ್ರೀ ಗುರುನರಸಿಂಹ ಬಯಲು ರಂಗ ಮಂದಿರದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷರಾದ ಧರ್ಮದರ್ಶಿ ಹರಿಕೃಷ್ಣ ಪುನರೂರು ಇವರ ಅಧ್ಯಕ್ಷತೆಯಲ್ಲಿ ಜರಗಲಿರುವುದು ಗಣ್ಯರ ಉಪಸ್ಥಿತಿಯಲ್ಲಿ ಪ್ರಶಸ್ತಿ ವಿತರಿಸಲಾಗುವುದು ಎಂದು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಮಣೂರು ನಿವಾಸಿ ದಾಕ್ಷಾಯಿಣಿ ರಾವ್ ಅವರು ಮಣೂರು ಮಹಾಲಿಂಗೇಶ್ವರ ಸನ್ನಿಧಾನದಲ್ಲಿರುವ ಶ್ರೀ ಹೇರಂಬ ಮಹಾಗಣಪತಿಯ ಸನ್ನಿಧಿಗೆ ಸುಮಾರು ₹30,000 ಮೌಲ್ಯದ ಸ್ಫಟಿಕ ರುದ್ರಾಕ್ಷಿ ಮಾಲೆಯನ್ನು ಸಮರ್ಪಿಸಿದರು. ಶ್ರೀ ದೇಗುಲದಲ್ಲಿ ಶ್ರೀ ವಿಘ್ನೇಶ್ವರನ ಸನ್ನಿಧಾನದಲ್ಲಿ ಅರ್ಚಕರ ಸಮ್ಮುಖದಲ್ಲಿ ಪವಿತ್ರ ಮಾಲೆಗೆ ವಿಶೇಷ ಪೂಜೆಯನ್ನು ಸಲ್ಲಿಸಿದ ಬಳಿಕ, ಮಣೂರು ದೇಗುಲದ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಸತೀಶ್ ಹೆಚ್. ಕುಂದರ್ ಅವರಿಗೆ ಹಸ್ತಾಂತರಿಸಲಾಯಿತು.
